< ಧರ್ಮೋಪದೇಶಕಾಂಡ 7 >

1 ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಸೇರಿಸಿ ಅಧಿಕ ಸಂಖ್ಯೆಯಲ್ಲಿಯೂ ಮತ್ತು ಅಧಿಕ ಬಲದಲ್ಲಿಯೂ ನಿಮಗೆ ಮೀರುವ ಹಿತ್ತಿಯರು, ಗಿರ್ಗಾಷಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ಎಂಬ ಏಳು ಜನಾಂಗಗಳನ್ನು ನಿಮ್ಮ ಮುಂದೆಯೇ ಹೊರಡಿಸುವನು.
כִּ֤י יְבִֽיאֲךָ֙ יְהוָ֣ה אֱלֹהֶ֔יךָ אֶל־הָאָ֕רֶץ אֲשֶׁר־אַתָּ֥ה בָא־שָׁ֖מָּה לְרִשְׁתָּ֑הּ וְנָשַׁ֣ל גֹּֽויִם־רַבִּ֣ים ׀ מִפָּנֶ֡יךָ הַֽחִתִּי֩ וְהַגִּרְגָּשִׁ֨י וְהָאֱמֹרִ֜י וְהַכְּנַעֲנִ֣י וְהַפְּרִזִּ֗י וְהַֽחִוִּי֙ וְהַיְבוּסִ֔י שִׁבְעָ֣ה גֹויִ֔ם רַבִּ֥ים וַעֲצוּמִ֖ים מִמֶּֽךָּ׃
2 ಯೆಹೋವನು ಅವರನ್ನು ನಿಮಗೆ ಒಪ್ಪಿಸಲು ನೀವು ಅವರನ್ನು ಸಂಪೂರ್ಣವಾಗಿ ಸಂಹರಿಸಬೇಕು. ಅವರ ಸಂಗಡ ಒಡಂಬಡಿಕೆ ಮಾಡಿಕೊಳ್ಳಬಾರದು ಹಾಗು ಅವರಿಗೆ ಕನಿಕರ ತೋರಬಾರದು.
וּנְתָנָ֞ם יְהוָ֧ה אֱלֹהֶ֛יךָ לְפָנֶ֖יךָ וְהִכִּיתָ֑ם הַחֲרֵ֤ם תַּחֲרִים֙ אֹתָ֔ם לֹא־תִכְרֹ֥ת לָהֶ֛ם בְּרִ֖ית וְלֹ֥א תְחָנֵּֽם׃
3 ಅವರೊಡನೆ ಬೀಗತನಮಾಡಬಾರದು; ಅವರ ಗಂಡು ಮಕ್ಕಳಿಗೆ ನಿಮ್ಮ ಹೆಣ್ಣುಮಕ್ಕಳನ್ನು ಕೊಡಲೂಬಾರದು ಮತ್ತು ಅವರ ಹೆಣ್ಣುಮಕ್ಕಳನ್ನು ನಿಮ್ಮ ಗಂಡುಮಕ್ಕಳಿಗೆ ತರಲೂಬಾರದು.
וְלֹ֥א תִתְחַתֵּ֖ן בָּ֑ם בִּתְּךָ֙ לֹא־תִתֵּ֣ן לִבְנֹ֔ו וּבִתֹּ֖ו לֹא־תִקַּ֥ח לִבְנֶֽךָ׃
4 ಹಾಗೆ ಮಾಡಿದರೆ ಅವರು ನಿಮ್ಮ ಗಂಡು ಮಕ್ಕಳನ್ನು ಯೆಹೋವನ ಸೇವೆ ಮಾಡದಂತೆ ತಪ್ಪಿಸಿ, ಅನ್ಯ ದೇವರುಗಳನ್ನು ಪೂಜಿಸುವ ಹಾಗೆ ಮಾಡುವರು. ಆಗ ಯೆಹೋವನು ನಿಮ್ಮ ಮೇಲೆ ಕೋಪಗೊಂಡು ಬೇಗನೆ ನಿಮ್ಮನ್ನು ನಾಶಮಾಡುವನು.
כִּֽי־יָסִ֤יר אֶת־בִּנְךָ֙ מֵֽאַחֲרַ֔י וְעָבְד֖וּ אֱלֹהִ֣ים אֲחֵרִ֑ים וְחָרָ֤ה אַף־יְהוָה֙ בָּכֶ֔ם וְהִשְׁמִידְךָ֖ מַהֵֽר׃
5 ಆದುದರಿಂದ ನೀವು ಹೀಗೆ ಮಾಡಬೇಕು, ಅವರ ಬಲಿಪೀಠಗಳನ್ನು ಕೆಡವಬೇಕು; ಅವರ ಪವಿತ್ರವಾದ ಕಲ್ಲಿನ ಕಂಬಗಳನ್ನು ಒಡೆದು, ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದು, ಅವರ ದೇವತಾಪ್ರತಿಮೆಗಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು.
כִּֽי־אִם־כֹּ֤ה תַעֲשׂוּ֙ לָהֶ֔ם מִזְבְּחֹתֵיהֶ֣ם תִּתֹּ֔צוּ וּמַצֵּבֹתָ֖ם תְּשַׁבֵּ֑רוּ וַאֲשֵֽׁירֵהֶם֙ תְּגַדֵּע֔וּן וּפְסִילֵיהֶ֖ם תִּשְׂרְפ֥וּן בָּאֵֽשׁ׃
6 ಯಾಕೆಂದರೆ ನೀವು ನಿಮ್ಮ ದೇವರಾದ ಯೆಹೋವನಿಗೆ ಮೀಸಲಾದ ಪರಿಶುದ್ಧ ಜನರಾಗಿದ್ದೀರಲ್ಲವೇ; ಆತನು ಭೂಲೋಕದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯಜನವಾಗುವುದಕ್ಕೆ ಆರಿಸಿಕೊಂಡನು.
כִּ֣י עַ֤ם קָדֹושׁ֙ אַתָּ֔ה לַיהוָ֖ה אֱלֹהֶ֑יךָ בְּךָ֞ בָּחַ֣ר ׀ יְהוָ֣ה אֱלֹהֶ֗יךָ לִהְיֹ֥ות לֹו֙ לְעַ֣ם סְגֻלָּ֔ה מִכֹּל֙ הָֽעַמִּ֔ים אֲשֶׁ֖ר עַל־פְּנֵ֥י הָאֲדָמָֽה׃ ס
7 ನಿಮ್ಮನ್ನು ಎಲ್ಲಾ ಜನಾಂಗಗಳಲ್ಲಿ ಹೆಚ್ಚು ಜನರು ಎಂದು ಇಷ್ಟಪಟ್ಟು ಆರಿಸಿಕೊಳ್ಳಲಿಲ್ಲ; ನೀವು ಎಲ್ಲಾ ಜನಾಂಗಗಳಿಗಿಂತಲೂ ಅಲ್ಪಸಂಖ್ಯಾತರು.
לֹ֣א מֵֽרֻבְּכֶ֞ם מִכָּל־הָֽעַמִּ֗ים חָשַׁ֧ק יְהוָ֛ה בָּכֶ֖ם וַיִּבְחַ֣ר בָּכֶ֑ם כִּֽי־אַתֶּ֥ם הַמְעַ֖ט מִכָּל־הָעַמִּֽים׃
8 ಯೆಹೋವನು ನಿಮ್ಮನ್ನು ಪ್ರೀತಿಸಿ, ತಾನು ನಿಮ್ಮ ಪೂರ್ವಿಕರಿಗೆ ಮಾಡಿದ ಪ್ರಮಾಣವನ್ನು ನೆರವೇರಿಸಬೇಕೆಂದು ಐಗುಪ್ತ್ಯರ ಅರಸನಾದ ಫರೋಹನ ಕೈಕೆಳಗೆ ದಾಸರಾಗಿದ್ದ ನಿಮ್ಮನ್ನು ಬಿಡುಗಡೆಮಾಡಿ, ತನ್ನ ಭುಜಬಲವನ್ನು ಪ್ರಯೋಗಿಸಿ ಆ ದೇಶದೊಳಗಿಂದ ಬರಮಾಡಿದನು.
כִּי֩ מֵֽאַהֲבַ֨ת יְהוָ֜ה אֶתְכֶ֗ם וּמִשָּׁמְרֹ֤ו אֶת־הַשְּׁבֻעָה֙ אֲשֶׁ֤ר נִשְׁבַּע֙ לַאֲבֹ֣תֵיכֶ֔ם הֹוצִ֧יא יְהוָ֛ה אֶתְכֶ֖ם בְּיָ֣ד חֲזָקָ֑ה וַֽיִּפְדְּךָ֙ מִבֵּ֣ית עֲבָדִ֔ים מִיַּ֖ד פַּרְעֹ֥ה מֶֽלֶךְ־מִצְרָֽיִם׃
9 ಆದುದರಿಂದ ನಿಮ್ಮ ದೇವರಾದ ಯೆಹೋವನೊಬ್ಬನೇ ದೇವರೆಂದು ತಿಳಿದುಕೊಳ್ಳಬೇಕು. ಆತನು ನಂಬಿಗಸ್ತನಾದ ದೇವರು; ತನ್ನನ್ನು ಪ್ರೀತಿಸಿ ತನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ತಾನು ಮಾಡಿದ ವಾಗ್ದಾನವನ್ನೂ ಮತ್ತು ಕೃಪೆಯನ್ನೂ ಅವರ ಸಂತತಿಯವರಲ್ಲಿ ಸಾವಿರ ತಲೆಗಳವರೆಗೂ ನೆರವೇರಿಸುವವನಾಗಿಯೂ ಮತ್ತು
וְיָ֣דַעְתָּ֔ כִּֽי־יְהוָ֥ה אֱלֹהֶ֖יךָ ה֣וּא הֽ͏ָאֱלֹהִ֑ים הָאֵל֙ הַֽנֶּאֱמָ֔ן שֹׁמֵ֧ר הַבְּרִ֣ית וְהַחֶ֗סֶד לְאֹהֲבָ֛יו וּלְשֹׁמְרֵ֥י מִצְוֹתֹו (מִצְוֹתָ֖יו) לְאֶ֥לֶף דֹּֽור׃
10 ೧೦ ತನ್ನನ್ನು ತಿರಸ್ಕರಿಸಿದವರಿಗೆ ಪ್ರತಿಯಾಗಿ ನಾಶವನ್ನು ಉಂಟುಮಾಡುವವನಾಗಿಯೂ ಇದ್ದಾನೆಂದು ತಿಳಿದುಕೊಳ್ಳಿರಿ. ಹಗೆ ಮಾಡುವವರ ವಿಷಯದಲ್ಲಿ ತಡಮಾಡದೆ ಆಗಲೇ ಮುಯ್ಯಿತೀರಿಸುವನು.
וּמְשַׁלֵּ֧ם לְשֹׂנְאָ֛יו אֶל־פָּנָ֖יו לְהַאֲבִידֹ֑ו לֹ֤א יְאַחֵר֙ לְשֹׂ֣נְאֹ֔ו אֶל־פָּנָ֖יו יְשַׁלֶּם־לֹֽו׃
11 ೧೧ ಆದಕಾರಣ ನಾನು ಈಗ ನಿಮಗೆ ಬೋಧಿಸುವ ಧರ್ಮೋಪದೇಶವನ್ನೂ ಆಜ್ಞಾವಿಧಿಗಳನ್ನೂ ನೀವು ಅನುಸರಿಸಿ ನಡೆಯಬೇಕು.
וְשָׁמַרְתָּ֨ אֶת־הַמִּצְוָ֜ה וְאֶת־הֽ͏ַחֻקִּ֣ים וְאֶת־הַמִּשְׁפָּטִ֗ים אֲשֶׁ֨ר אָנֹכִ֧י מְצַוְּךָ֛ הַיֹּ֖ום לַעֲשֹׂותָֽם׃ פ
12 ೧೨ ನೀವು ಈ ವಿಧಿಗಳನ್ನು ಲಕ್ಷ್ಯವಿಟ್ಟು ಅನುಸರಿಸಿದರೆ, ಅದಕ್ಕೆ ಪ್ರತಿಯಾಗಿ ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ಒಡಂಬಡಿಕೆಯನ್ನು ನಂಬಿಗಸ್ತಿಕೆಯಿಂದ ನೆರವೇರಿಸುವವನಾಗಿದ್ದಾನೆ.
וְהָיָ֣ה ׀ עֵ֣קֶב תִּשְׁמְע֗וּן אֵ֤ת הַמִּשְׁפָּטִים֙ הָאֵ֔לֶּה וּשְׁמַרְתֶּ֥ם וַעֲשִׂיתֶ֖ם אֹתָ֑ם וְשָׁמַר֩ יְהוָ֨ה אֱלֹהֶ֜יךָ לְךָ֗ אֶֽת־הַבְּרִית֙ וְאֶת־הַחֶ֔סֶד אֲשֶׁ֥ר נִשְׁבַּ֖ע לַאֲבֹתֶֽיךָ׃
13 ೧೩ ಆತನು ನಿಮ್ಮನ್ನು ಪ್ರೀತಿಸಿ, ಅಭಿವೃದ್ಧಿಪಡಿಸಿ ಹೆಚ್ಚಿಸುವನು. ಆತನು ನಿಮ್ಮ ಪೂರ್ವಿಕರಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನಿಮ್ಮ ಸಂತಾನವನ್ನೂ, ವ್ಯವಸಾಯವನ್ನೂ, ನಿಮಗಿರುವ ದವಸ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನೂ, ನಿಮ್ಮ ದನ ಮತ್ತು ಕುರಿಗಳಲ್ಲಿ ಹುಟ್ಟಿದ್ದನ್ನೂ ಅಭಿವೃದ್ಧಿಪಡಿಸುವನು.
וַאֲהֵ֣בְךָ֔ וּבֵרַכְךָ֖ וְהִרְבֶּ֑ךָ וּבֵרַ֣ךְ פְּרִֽי־בִטְנְךָ֣ וּפְרִֽי־אַ֠דְמָתֶךָ דְּגָ֨נְךָ֜ וְתִֽירֹשְׁךָ֣ וְיִצְהָרֶ֗ךָ שְׁגַר־אֲלָפֶ֙יךָ֙ וְעַשְׁתְּרֹ֣ת צֹאנֶ֔ךָ עַ֚ל הֽ͏ָאֲדָמָ֔ה אֲשֶׁר־נִשְׁבַּ֥ע לַאֲבֹתֶ֖יךָ לָ֥תֶת לָֽךְ׃
14 ೧೪ ನೀವು ಎಲ್ಲಾ ಜನಗಳಿಗಿಂತಲೂ ಹೆಚ್ಚಾಗಿ ದೇವರ ಅನುಗ್ರಹವನ್ನು ಹೊಂದಿದವರಾಗಿರುವಿರಿ. ನಿಮ್ಮೊಳಗೆ ಸ್ತ್ರೀಪುರುಷರಲ್ಲಿಯಾಗಲಿ, ಹೆಣ್ಣುಗಂಡು ಪಶುಗಳಲ್ಲಿಯಾಗಲಿ ಬಂಜೆತನವು ಇರುವುದಿಲ್ಲ.
בָּר֥וּךְ תִּֽהְיֶ֖ה מִכָּל־הָעַמִּ֑ים לֹא־יִהְיֶ֥ה בְךָ֛ עָקָ֥ר וֽ͏ַעֲקָרָ֖ה וּבִבְהֶמְתֶּֽךָ׃
15 ೧೫ ನಿಮ್ಮಲ್ಲಿ ಯಾವ ವ್ಯಾಧಿಯೂ ಉಂಟಾಗದಂತೆ ಯೆಹೋವನು ಮಾಡುವನು. ನಿಮ್ಮ ಅನುಭವಕ್ಕೆ ಬಂದ ಪ್ರಕಾರ ಐಗುಪ್ತದೇಶದಲ್ಲಿ ಪ್ರಬಲವಾಗಿರುವ ಕ್ರೂರವ್ಯಾಧಿಗಳನ್ನು ನಿಮಗೆ ಬರಗೊಡಿಸದೆ, ಅವುಗಳನ್ನು ನಿಮ್ಮ ಶತ್ರುಗಳ ಮೇಲೆಯೇ ಬರಮಾಡುವನು.
וְהֵסִ֧יר יְהוָ֛ה מִמְּךָ֖ כָּל־חֹ֑לִי וְכָל־מַדְוֵי֩ מִצְרַ֨יִם הָרָעִ֜ים אֲשֶׁ֣ר יָדַ֗עְתָּ לֹ֤א יְשִׂימָם֙ בָּ֔ךְ וּנְתָנָ֖ם בְּכָל־שֹׂנְאֶֽיךָ׃
16 ೧೬ ನಿಮ್ಮ ದೇವರಾದ ಯೆಹೋವನು ನಿಮ್ಮಿಂದ ಪರಾಜಯ ಹೊಂದುವ ಜನಾಂಗಗಳನ್ನೆಲ್ಲಾ ನೀವು ಕನಿಕರಿಸದೆ ನಾಶಮಾಡಬೇಕು. ಅವರ ದೇವರುಗಳನ್ನು ಪೂಜಿಸಲೇಬಾರದು; ಪೂಜಿಸಿದರೆ ಅವು ನಿಮ್ಮ ಜೀವಕ್ಕೆ ಉರುಲಾಗುವವು.
וְאָכַלְתָּ֣ אֶת־כָּל־הָֽעַמִּ֗ים אֲשֶׁ֨ר יְהוָ֤ה אֱלֹהֶ֙יךָ֙ נֹתֵ֣ן לָ֔ךְ לֹא־תָחֹ֥ס עֵֽינְךָ֖ עֲלֵיהֶ֑ם וְלֹ֤א תַעֲבֹד֙ אֶת־אֱלֹ֣הֵיהֶ֔ם כִּֽי־מֹוקֵ֥שׁ ה֖וּא לָֽךְ׃ ס
17 ೧೭ ಆ ಜನಗಳು ನಮಗಿಂತ ಹೆಚ್ಚಾಗಿದ್ದಾರೆ; ಅವರನ್ನು ಹೊರಡಿಸುವುದು ನಮ್ಮಿಂದ ಹೇಗಾದೀತು ಅಂದುಕೊಳ್ಳುತ್ತೀರೋ? ಅವರಿಗೆ ಹೆದರಬೇಡಿರಿ.
כִּ֤י תֹאמַר֙ בִּלְבָ֣בְךָ֔ רַבִּ֛ים הַגֹּויִ֥ם הָאֵ֖לֶּה מִמֶּ֑נִּי אֵיכָ֥ה אוּכַ֖ל לְהֹורִישָֽׁם׃
18 ೧೮ ನಿಮ್ಮ ದೇವರಾದ ಯೆಹೋವನು ಫರೋಹನಿಗೂ ಮತ್ತು ಐಗುಪ್ತ್ಯರೆಲ್ಲರಿಗೂ ಮಾಡಿದ್ದನ್ನು ನೆನಪಿಗೆ ತಂದುಕೊಳ್ಳಿರಿ.
לֹ֥א תִירָ֖א מֵהֶ֑ם זָכֹ֣ר תִּזְכֹּ֗ר אֵ֤ת אֲשֶׁר־עָשָׂה֙ יְהוָ֣ה אֱלֹהֶ֔יךָ לְפַרְעֹ֖ה וּלְכָל־מִצְרָֽיִם׃
19 ೧೯ ಆಗ ನೀವು ಕಣ್ಣಾರೆ ನೋಡಿದ ಪ್ರಕಾರ ಆತನು ವಿಶೇಷ ಪರಿಶೋಧನೆ, ಮಹತ್ಕಾರ್ಯ, ಉತ್ಪಾತ, ಭುಜಪರಾಕ್ರಮ, ಶಿಕ್ಷೆ ಇವುಗಳನ್ನು ಪ್ರಯೋಗಿಸಿ ನಿಮ್ಮನ್ನು ಬಿಡುಗಡೆಮಾಡಿದನಲ್ಲಾ. ನೀವು ಹೆದರಿಕೊಳ್ಳುವ ಆ ಎಲ್ಲಾ ಜನಾಂಗಗಳಿಗೂ ಆತನು ಹಾಗೆಯೇ ಮಾಡುವನು.
הַמַּסֹּ֨ת הַגְּדֹלֹ֜ת אֲשֶׁר־רָא֣וּ עֵינֶ֗יךָ וְהָאֹתֹ֤ת וְהַמֹּֽפְתִים֙ וְהַיָּ֤ד הַחֲזָקָה֙ וְהַזְּרֹ֣עַ הַנְּטוּיָ֔ה אֲשֶׁ֥ר הֹוצִֽאֲךָ֖ יְהוָ֣ה אֱלֹהֶ֑יךָ כֵּֽן־יַעֲשֶׂ֞ה יְהוָ֤ה אֱלֹהֶ֙יךָ֙ לְכָל־הָ֣עַמִּ֔ים אֲשֶׁר־אַתָּ֥ה יָרֵ֖א מִפְּנֵיהֶֽם׃
20 ೨೦ ಅದು ಮಾತ್ರವಲ್ಲದೆ ನಿಮ್ಮ ದೇವರಾದ ಯೆಹೋವನು ಕಣಜದ ಹುಳಗಳನ್ನು ಅವರ ನಡುವೆ ಕಳುಹಿಸುವನು. ಮರೆಯಾಗಿದ್ದು ಉಳಿದವರು ಆ ಹುಳಗಳ ದೆಸೆಯಿಂದ ನಾಶವಾಗಿ ನಿಮಗೆ ಕಾಣದೆ ಹೋಗುವರು.
וְגַם֙ אֶת־הַצִּרְעָ֔ה יְשַׁלַּ֛ח יְהוָ֥ה אֱלֹהֶ֖יךָ בָּ֑ם עַד־אֲבֹ֗ד הַנִּשְׁאָרִ֛ים וְהַנִּסְתָּרִ֖ים מִפָּנֶֽיךָ׃
21 ೨೧ ನೀವು ಅವರಿಗೆ ಹೆದರಿಕೊಳ್ಳಬೇಡಿರಿ; ನಿಮ್ಮ ದೇವರಾದ ಯೆಹೋವನು ನಿಮ್ಮ ಮಧ್ಯದಲ್ಲಿದ್ದಾನೆ; ಆತನು ನಮ್ಮ ಭಕ್ತಿಗೆ ಪ್ರತಿಕಾರವಾಗಿ ವಿಸ್ಮಯ ಹುಟ್ಟಿಸುವ ದೇವರಾಗಿದ್ದಾನೆ.
לֹ֥א תַעֲרֹ֖ץ מִפְּנֵיהֶ֑ם כִּֽי־יְהוָ֤ה אֱלֹהֶ֙יךָ֙ בְּקִרְבֶּ֔ךָ אֵ֥ל גָּדֹ֖ול וְנֹורָֽא׃
22 ೨೨ ನಿಮ್ಮ ದೇವರಾದ ಯೆಹೋವನು ಆ ಜನಾಂಗಗಳನ್ನು ನಿಮ್ಮ ಮುಂದೆಯೇ ಸ್ವಲ್ಪಸ್ವಲ್ಪವಾಗಿ ಹೊರಟು ಹೋಗುವಂತೆ ಮಾಡುವನು. ನೀವು ಅವರನ್ನು ಒಂದೇ ಬಾರಿಗೆ ನಿರ್ಮೂಲಮಾಡಬಾರದು. ಹಾಗೆ ಮಾಡಿದರೆ ಕಾಡುಮೃಗಗಳು ಹೆಚ್ಚಿ ಅವು ನಿಮಗೆ ತೊಂದರೆಯನ್ನು ಉಂಟುಮಾಡುತ್ತವೆ.
וְנָשַׁל֩ יְהוָ֨ה אֱלֹהֶ֜יךָ אֶת־הַגֹּויִ֥ם הָאֵ֛ל מִפָּנֶ֖יךָ מְעַ֣ט מְעָ֑ט לֹ֤א תוּכַל֙ כַּלֹּתָ֣ם מַהֵ֔ר פֶּן־תִּרְבֶּ֥ה עָלֶ֖יךָ חַיַּ֥ת הַשָּׂדֶֽה׃
23 ೨೩ ನಿಮ್ಮ ದೇವರಾದ ಯೆಹೋವನು ಅವರನ್ನು ನಿಮ್ಮಿಂದ ಸೋಲಿಸಿ, ಬಹಳವಾಗಿ ಗಲಿಬಿಲಿಮಾಡಿ ಕಡೆಗೆ ಅವರನ್ನು ಇಲ್ಲದಂತೆ ಮಾಡುವನು.
וּנְתָנָ֛ם יְהוָ֥ה אֱלֹהֶ֖יךָ לְפָנֶ֑יךָ וְהָמָם֙ מְהוּמָ֣ה גְדֹלָ֔ה עַ֖ד הִשָּׁמְדָֽם׃
24 ೨೪ ಆತನು ಅವರ ಅರಸರನ್ನು ನಿಮ್ಮ ಕೈಗೆ ಸಿಗುವಂತೆ ಮಾಡಿ, ನೀವು ಅವರ ಹೆಸರುಗಳೇ ಭೂಮಿಯ ಮೇಲೆ ಉಳಿಯದಂತೆ ಮಾಡಬೇಕು. ಯಾರೂ ನಿಮ್ಮ ಮುಂದೆ ನಿಲ್ಲುವುದಿಲ್ಲ; ನೀವು ಎಲ್ಲರನ್ನೂ ನಾಶಮಾಡುವಿರಿ.
וְנָתַ֤ן מַלְכֵיהֶם֙ בְּיָדֶ֔ךָ וְהַאֲבַדְתָּ֣ אֶת־שְׁמָ֔ם מִתַּ֖חַת הַשָּׁמָ֑יִם לֹֽא־יִתְיַצֵּ֥ב אִישׁ֙ בְּפָנֶ֔יךָ עַ֥ד הִשְׁמִֽדְךָ֖ אֹתָֽם׃
25 ೨೫ ಅವರು ದೇವರೆಂದು ಮಾಡಿಕೊಂಡ ಮರದ ವಿಗ್ರಹಗಳನ್ನು ನೀವು ಬೆಂಕಿಯಿಂದ ಸುಟ್ಟುಬಿಡಬೇಕು. ಆ ವಿಗ್ರಹಗಳ ಮೇಲಿರುವ ಬೆಳ್ಳಿಬಂಗಾರವನ್ನು ನೀವು ಆಶಿಸಬಾರದು; ಅದನ್ನು ತೆಗೆದುಕೊಂಡರೆ ಅದು ನಿಮಗೆ ಉರುಲಾಗುವುದು. ಅದು ನಿಮ್ಮ ದೇವರಾದ ಯೆಹೋವನಿಗೆ ಅಸಹ್ಯವಾದುದು.
פְּסִילֵ֥י אֱלֹהֵיהֶ֖ם תִּשְׂרְפ֣וּן בָּאֵ֑שׁ לֹֽא־תַחְמֹד֩ כֶּ֨סֶף וְזָהָ֤ב עֲלֵיהֶם֙ וְלָקַחְתָּ֣ לָ֔ךְ פֶּ֚ן תִּוָּקֵ֣שׁ בֹּ֔ו כִּ֧י תֹועֲבַ֛ת יְהוָ֥ה אֱלֹהֶ֖יךָ הֽוּא׃
26 ೨೬ ಅದು ಕೇವಲ ಯೆಹೋವನಿಂದ ನಾಶವಾಗತಕ್ಕದ್ದು. ಆದುದರಿಂದ ನೀವು ಅಂತಹ ವಸ್ತುವನ್ನು ಮನೆಯೊಳಕ್ಕೆ ತಂದು ಅದರಂತೆಯೇ ನಾಶಕ್ಕೆ ಗುರಿಯಾಗಬಾರದು. ನೀವು ಅದನ್ನು ಅಸಹ್ಯಪಟ್ಟು ಮುಟ್ಟಲೂ ಬಾರದು.
וְלֹא־תָבִ֤יא תֹֽועֵבָה֙ אֶל־בֵּיתֶ֔ךָ וְהָיִ֥יתָ חֵ֖רֶם כָּמֹ֑הוּ שַׁקֵּ֧ץ ׀ תְּשַׁקְּצֶ֛נּוּ וְתַעֵ֥ב ׀ תְּֽתַעֲבֶ֖נּוּ כִּי־חֵ֥רֶם הֽוּא׃ פ

< ಧರ್ಮೋಪದೇಶಕಾಂಡ 7 >