< ಧರ್ಮೋಪದೇಶಕಾಂಡ 9 >

1 ಇಸ್ರಾಯೇಲರೇ ಕೇಳಿರಿ, ನಿಮಗಿಂತ ಮಹಾ ಬಲಿಷ್ಠ ಜನಾಂಗಗಳನ್ನೂ ಮತ್ತು ಆಕಾಶವನ್ನು ಮುಟ್ಟುವ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನೂ ಸ್ವಾಧೀನ ಮಾಡಿಕೊಳ್ಳುವುದಕ್ಕೆ ನೀವು ಈ ಯೊರ್ದನ್ ನದಿಯನ್ನು ಇಂದು ದಾಟಲಿದ್ದೀರಿ.
Sikiliza, Israeli; umekaribia kuvuka ng'ambo ya pili ya Yordani leo, kuyafukuza mataifa yenye nguvu na ushujaa kuliko ninyi, na miji ambayo ni mikuu na yenye boma iliyoenda juu,
2 ಆ ದೇಶದ ಅನಾಕ್ಯರು ಬಲಿಷ್ಠರು ಮತ್ತು ಎತ್ತರವಾದ ಪುರುಷರು ಆಗಿದ್ದಾರೆ. ಅವರ ವಿಷಯ ನಿಮಗೆ ತಿಳಿದೇ ಇದೆ, “ಅನಾಕ್ಯರ ಮುಂದೆ ನಿಲ್ಲಬಲ್ಲವರು ಯಾರಿದ್ದಾರೆ?” ಎಂಬ ಮಾತನ್ನು ಕೇಳಿದ್ದೀರಿ.
watu wakuu na warefu, wana wa Anakimu, ambaye mnamjua, na yule mliomsikia watu wakisema, 'Nani atasimama mbele ya wana wa Anak?
3 ಆದುದರಿಂದ ನಿಮ್ಮ ದೇವರಾದ ಯೆಹೋವನು ತಾನೇ ವಿರೋಧಿಗಳನ್ನು ದಹಿಸುವ ಬೆಂಕಿಯೋಪಾದಿಯಲ್ಲಿ ನಿಮ್ಮ ಮುಂದೆ ಹೋಗುತ್ತಾನೆಂದು ಈಗ ತಿಳಿದುಕೊಳ್ಳಿರಿ. ಆತನೇ ಅವರನ್ನು ನಾಶಮಾಡುವನು; ಆತನೇ ಅವರನ್ನು ನಿಮ್ಮ ಮುಂದೆ ಸೋತುಹೋಗುವಂತೆ ಮಾಡುವನು. ಯೆಹೋವನು ನಿಮಗೆ ಹೇಳಿದಂತೆ ನೀವು ಅವರನ್ನು ಹೊರಡಿಸಿ, ಬೇಗನೆ ನಾಶಮಾಡುವಿರಿ.
Kwa hiyo tambua leo kwamba, Yahwe Mungu wenu ni yeye ambaye huenda mbele yenu kama moto uwalao; atawaharibu na kuwaangamiza mbele yenu, kwa hiyo mtawaondosha na kuwafanya kuwapoteza kwa haraka, kama Yahwe alivyosema kwenu.
4 ನಿಮ್ಮ ದೇವರಾದ ಯೆಹೋವನು ಅವರನ್ನು ನಿಮ್ಮ ಎದುರಿನಿಂದ ಹೊರಡಿಸಿದ ನಂತರ ನೀವು ನಿಮ್ಮ ಮನಸ್ಸಿನಲ್ಲಿ, “ಯೆಹೋವನು ನಮ್ಮನ್ನು ಈ ದೇಶಕ್ಕೆ ಕರೆತಂದು ಅದನ್ನು ನಮಗೆ ಸ್ವಾಧೀನಪಡಿಸಿದ್ದಕ್ಕೆ ಕಾರಣ ನಮ್ಮ ಸದಾಚಾರವೇ” ಅಂದುಕೊಳ್ಳಬಾರದು. ಆ ಜನಾಂಗಗಳ ದುರ್ನಡತೆಯ ದೆಸೆಯಿಂದಲೇ ಯೆಹೋವನು ನಿಮ್ಮ ಎದುರಿನಿಂದ ಅವರನ್ನು ಹೊರಡಿಸುತ್ತಾನೆ.
Msiseme kwenye mioyo yenu, baada ya Yahwe Mungu wenu kuwatupilia toka mbele yenu, “ilikuwa kwa sababu ya haki yangu kwamba Yahwe amenileta mimi kuimiliki nchi hii; kwa kuwa ilikuwa kwa sababu ya maovu ya mataifa haya kwamba Yahwe anawaondowa toka mbele yenu.
5 ನೀವು ಅವರ ದೇಶಕ್ಕೆ ಬಂದು ಅದನ್ನು ಸ್ವಾಧೀನ ಮಾಡಿಕೊಳ್ಳುವುದಕ್ಕೆ ನಿಮ್ಮ ಸದಾಚಾರವಾಗಲಿ, ನಿಮ್ಮ ಒಳ್ಳೆಯ ಸ್ವಭಾವವೇ ಆಗಲಿ ಕಾರಣವಲ್ಲ. ಆ ಜನಾಂಗಗಳ ದುರ್ನಡತೆಯ ದೆಸೆಯಿಂದಲೂ ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂದಿದ್ದರಿಂದಲೂ ಅವರನ್ನು ನಿಮ್ಮ ಎದುರಿನಿಂದ ಹೊರಡಿಸಿಬಿಡುತ್ತಾನೆ.
Si kwa sababu ya uadilifu wenu au unyofu wa mioyo yenu ambayo mnaenda kuingia kumiliki nchi yao, lakini ni kwa sababu ya maovu ya mataifa haya ambayo Mungu anawaondowa kutoka mbele zenu, na kusudi alifanye kuwa kweli neno ambalo aliapa kwa mababu zenu, Ibrahimu, Isaka na Yakabo.
6 ನಿಮ್ಮ ದೇವರಾದ ಯೆಹೋವನು ಆ ಉತ್ತಮ ದೇಶವನ್ನು ನಿಮಗೆ ಸ್ವದೇಶವಾಗಿ ಕೊಡುವುದು ನಿಮ್ಮ ಸದಾಚಾರದ ಫಲವಲ್ಲವೆಂದು ಚೆನ್ನಾಗಿ ತಿಳಿದುಕೊಳ್ಳಿರಿ. ನೀವು ಆತನ ಆಜ್ಞೆಯನ್ನು ಪಾಲಿಸದ ಮೊಂಡ ಜನರೇ ಆಗಿದ್ದೀರಿ.
Kwa hiyo tambua, kwamba Yahwe Mungu wenu awapi ninyi nchi hii nzuri kuimiliki kwa sababu ya uadilifu wenu kwa kuwa ni watu wakaidi.
7 ನೀವು ಅರಣ್ಯದಲ್ಲಿ ನಿಮ್ಮ ದೇವರಾದ ಯೆಹೋವನಿಗೆ ಕೋಪಹುಟ್ಟಿಸಿದ್ದನ್ನು ನೆನಪುಮಾಡಿಕೊಳ್ಳಿರಿ; ಅದನ್ನು ಮರೆಯಬೇಡಿರಿ. ನೀವು ಐಗುಪ್ತದೇಶವನ್ನು ಬಿಟ್ಟಂದಿನಿಂದ ಈ ಸ್ಥಳಕ್ಕೆ ಬಂದ ದಿನದವರೆಗೂ ಯೆಹೋವನ ಆಜ್ಞೆಗಳನ್ನು ಧಿಕ್ಕರಿಸುವವರಾಗಿದ್ದೀರಿ.
Kumbuka na msisahau jinsi mlivyomchochea Yahwe Mungu wenu katika hasira huko jangwani; kutoka siku hiyo ambayo mliacha nchi ya Misri mpaka mlipokuja kwenye eneo hili, mmekuwa waasi dhidi ya Yahwe.
8 ಉದಾಹರಣೆಗೆ, ಹೋರೇಬಿನಲ್ಲಿ ನೀವು ಯೆಹೋವನಿಗೆ ಕೋಪವನ್ನು ಹುಟ್ಟಿಸಿದಿರಿ. ಆಗ ಆತನು ಬಲು ಸಿಟ್ಟುಗೊಂಡು ನಿಮ್ಮನ್ನು ಧ್ವಂಸ ಮಾಡಬೇಕೆಂದಿದ್ದನು.
Pia huko Horebu mlimchochea Yahwe katika hasira, na Yahwe alikasirika vya kutosha kwenu kuwaangamiza.
9 ಯೆಹೋವನು ನಿಮ್ಮ ಸಂಗಡ ಮಾಡಿದ ನಿಬಂಧನೆಯನ್ನು ಬರೆದ ಆ ಕಲ್ಲಿನ ಹಲಿಗೆಗಳನ್ನು ತೆಗೆದುಕೊಳ್ಳುವುದಕ್ಕೆ ನಾನು ಬೆಟ್ಟವನ್ನು ಹತ್ತಿದ್ದಾಗ ನಾನು ಅನ್ನ ಪಾನಗಳನ್ನು ಬಿಟ್ಟು ಹಗಲಿರುಳು ನಲ್ವತ್ತು ದಿನ ಆ ಬೆಟ್ಟದಲ್ಲಿದ್ದೆನು.
Wakati nilipoenda juu ya mlima kupokea mbao za mawe, mbao za agano ambalo Yahwe alifanya nanyi, Nilibaki kwenye mlima kwa siku arobaini na usiku arobaini; Wala sikula mkate wala kunywa maji.
10 ೧೦ ಆಗ ಯೆಹೋವನು ತನ್ನ ಕೈಯಿಂದಲೇ ಬರೆದ ಆ ಎರಡು ಕಲ್ಲಿನ ಹಲಿಗೆಗಳನ್ನು ನನ್ನ ವಶಕ್ಕೆ ಕೊಟ್ಟನು. ನೀವು ಸಭೆ ಕೂಡಿದ ದಿನದಲ್ಲಿ ಯೆಹೋವನು ಆ ಬೆಟ್ಟದ ಮೇಲೆ ಅಗ್ನಿಜ್ವಾಲೆಯೊಳಗಿಂದ ನಿಮ್ಮ ಸಂಗಡ ಹೇಳಿದ ಮಾತುಗಳು ಆ ಹಲಿಗೆಗಳಲ್ಲಿದ್ದವು.
Yahwe alinipa mbao mbili za mawe zilizoandikwa kwa kidole chake; juu yake kuliandikwa kila kitu kama tu maneno yote ambayo Yahwe alitangaza kwenu juu ya mlima toka katikati mwa moto siku hiyo ya kusanyiko.
11 ೧೧ ಆ ನಲ್ವತ್ತು ದಿನಗಳು ಕಳೆದ ಮೇಲೆ ಯೆಹೋವನು ತನ್ನ ಆಜ್ಞೆಗಳಿರುವ ಆ ಎರಡು ಕಲ್ಲಿನ ಹಲಿಗೆಗಳನ್ನು ನನಗೆ ಕೊಟ್ಟು, “ನೀನು ಬೇಗ ಇಲ್ಲಿಂದ ಹೋಗು;
Ilitokea mwishoni mwa siku hizo arobaini na usiku arobaini ya kwamba Yahwe alinipa mimi mbao mbili za mawe, mbao za agano.
12 ೧೨ ನೀನು ಐಗುಪ್ತ ದೇಶದಿಂದ ಕರೆದುಕೊಂಡು ಬಂದ ನಿನ್ನ ಜನರು ಕೆಟ್ಟುಹೋದರು. ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಅವರು ಬೇಗನೆ ಬಿಟ್ಟುಹೋಗಿ ತಮಗೆ ಬೇಕಾದ ಲೋಹದ ವಿಗ್ರಹವನ್ನು ಮಾಡಿಸಿಕೊಂಡಿದ್ದಾರೆ” ಎಂದು ಹೇಳಿದನು.
Yahwe alisema nami, 'Inuka, nenda chini haraka kutokea hapa, kwa kuwa watu wako, ambao uliwaleta toka Misri, wamekuwa wafisadi wenyewe. Kwa haraka wamegeuka toka kwenye njia ambayo niliwaamuru. Wamejifanyia wenyewe umbo la kutupwa.
13 ೧೩ ಅದಲ್ಲದೆ ಆತನು ನನಗೆ, “ಈ ಜನರ ಸ್ವಭಾವವನ್ನು ನಾನು ನೋಡುತ್ತಾ ಬಂದಿದ್ದೇನೆ; ಇವರು ನನ್ನ ಆಜ್ಞೆಗೆ ಅವಿಧೇಯರಾದವರು.
Zaidi ya hayo, Yahwe alizungumza na mimi na kusema, “Nimewaona watu hawa; ni watu wakaidi.
14 ೧೪ ಬಿಡು, ನಾನು ಅವರನ್ನು ನಾಶಮಾಡಿ, ಅವರ ಹೆಸರನ್ನು ಭೂಮಿಯ ಮೇಲೆ ಉಳಿಯದಂತೆ ಮಾಡುವೆನು. ತರುವಾಯ ಅವರಿಗಿಂತಲೂ ಮಹಾ ಬಲಿಷ್ಠ ಜನಾಂಗವು ನಿನ್ನಿಂದುಂಟಾಗುವಂತೆ ಮಾಡುವೆನು” ಎಂದು ಹೇಳಿದನು.
Acha mimi peke yangu, ili kwamba niweze kuwaangamiza na kulifuta jina lao kutoka chini ya mbingu, na nitawafanya ninyi taifa lenye nguvu na kuu kuliko wao.”
15 ೧೫ ಆಗ ನಾನು ಆ ಎರಡು ಆಜ್ಞಾಶಾಸನಗಳನ್ನು ನನ್ನ ಎರಡು ಕೈಗಳಲ್ಲಿ ಹಿಡಿದುಕೊಂಡು ಬೆಂಕಿಯಿಂದ ಉರಿಯುವ ಆ ಬೆಟ್ಟದಿಂದ ಇಳಿದು ಬಂದು ನೋಡಲಾಗಿ
Kwa hiyo niligeuka nyuma na kushuka chini ya mlima, na mlima ulikuwa ukiwaka moto. Mbao mbili za agano zilikuwa kwenye mikono yangu.
16 ೧೬ ನೀವು ನಿಮ್ಮ ದೇವರಾದ ಯೆಹೋವನಿಗೆ ದ್ರೋಹಿಗಳಾಗಿ ಲೋಹದ ಬಸವನನ್ನು ಮಾಡಿಸಿಕೊಂಡು, ಯೆಹೋವನು ನಿಮಗೆ ಆಜ್ಞಾಪಿಸಿದ್ದ ಮಾರ್ಗವನ್ನು ಬೇಗನೆ ಬಿಟ್ಟು ಹೋದದ್ದು ನನಗೆ ಕಂಡುಬಂತು.
Nilitazama, na tazama, mlikuwa mmefanya dhambi dhidi ya Yahwe Mungu wenu. Mmejitengenezea wenyewe ndama. Kwa haraka mmegeuka toka njia ambayo Yahwe alikuwa amewaamuru.
17 ೧೭ ಅದನ್ನು ನೋಡಿ ನಾನು ಕೈಯಲ್ಲಿದ್ದ ಆ ಎರಡು ಶಿಲಾಶಾಸನಗಳನ್ನು ನಿಮಗೆದುರಾಗಿಯೇ ನೆಲಕ್ಕೆ ಹಾಕಿ ಒಡೆದುಬಿಟ್ಟೆನು.
Nilizichukua mbao mbili na kuzitupa toka mikononi mwangu. Nilizivunja mbele ya macho yenu.
18 ೧೮ ನೀವು ಹೀಗೆ ಅಪರಾಧಮಾಡಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡಿಸಿ ಆತನನ್ನು ಕೋಪಗೊಳಿಸಿದ ಕಾರಣ ನಾನು ಮೊದಲಿನಂತೆ ಅನ್ನ ಪಾನಗಳನ್ನು ಬಿಟ್ಟು ನಲ್ವತ್ತು ದಿನಗಳು ಹಗಲಿರುಳು ಯೆಹೋವನ ಸನ್ನಿಧಿಯಲ್ಲೇ ಬಿದ್ದಿದ್ದೆನು.
Tena nilala kifudifudi mbele ya Yahwe kwa siku arobaini na usiku arobaini; wala sikula mkate wala kunywa maji, kwa sababu dhambi zenu zote ambazo mlikuwa mmefanya, kwa kufanya hivyo ambavyo ilikuwa ni mbaya machoni pa Yahwe, ili kwamba kumchochea yeye katika hasira.
19 ೧೯ ಯೆಹೋವನು ನಿಮ್ಮ ಮೇಲೆ ಬಹುಕೋಪಗೊಂಡು ನಿಮ್ಮನ್ನು ನಾಶಮಾಡಬೇಕೆಂದು ಆಲೋಚಿಸಿದ್ದರಿಂದ ನಾನು ಹೆದರಿಕೊಂಡೆನು. ಆದರೆ ಆ ಸಮಯದಲ್ಲಿಯೂ ಆತನು ನನ್ನ ಮನವಿಯನ್ನು ಕೇಳಿದನು.
Kwa kuwa nilikuwa nimeogopa hasira na gadhabu kali ambayo Yahwe alikuwa amekasirika vya kutosha dhidi yenu kuwaangamiza. Lakini Yahwe alinisikiliza mimi kwa wakati huo pia.
20 ೨೦ ಅದಲ್ಲದೆ ಯೆಹೋವನು ಆರೋನನ ಮೇಲೆ ಬಹಳ ಸಿಟ್ಟುಗೊಂಡು ಅವನನ್ನೂ ನಾಶಮಾಡಬೇಕೆಂದಿದ್ದರಿಂದ ನಾನು ಅವನಿಗೋಸ್ಕರವಾಗಿಯೂ ಆ ಸಮಯದದಲ್ಲಿ ಪ್ರಾರ್ಥಿಸಿದೆನು.
Yahwe alikuwa na hasira nyingi na Aaroni kwa kusudi la kumuangamiza; pia niliomba kwa ajili ya Aaroni kwa wakati huohuo.
21 ೨೧ ಮತ್ತು ನೀವು ಯಾವುದರ ಮೂಲಕ ಪಾಪವನ್ನು ಮಾಡಿದ್ದಿರೋ ಆ ಬಸವನನ್ನು ನಾನು ತೆಗೆದುಕೊಂಡು ಬೆಂಕಿಯಿಂದ ಸುಟ್ಟು, ಒಡೆದು, ಅರೆದು ಧೂಳುಮಾಡಿ, ಬೆಟ್ಟದಿಂದ ಹರಿಯುವ ಹಳ್ಳದಲ್ಲಿ ಬೀಸಾಡಿಬಿಟ್ಟೆ.
Nilichukua dhambi zenu, ndama mliyekuwa mmentengeza, na kumchoma, kumpiga, kumweka chini kuwa mdogo, mpaka ilipokuwa laini kama vumbi. Nilirusha vumbi lake katika mkondo ambao ulitiririka chini kutoka mlimani.
22 ೨೨ ತಬೇರಾ, ಮಸ್ಸಾ, ಕಿಬ್ರೋತ್ ಹತಾವಾ ಎಂಬ ಸ್ಥಳಗಳಲ್ಲಿಯೂ ನೀವು ಯೆಹೋವನಿಗೆ ಕೋಪವನ್ನು ಹುಟ್ಟಿಸಿದ್ದಿರಿ.
Huko Taberah, Massah, na huko Kibrothi Hattaavah, mlimchochea Yahwe kwenye adhabu.
23 ೨೩ ಅದಲ್ಲದೆ ಕಾದೇಶ್ ಬರ್ನೇಯದಲ್ಲಿ ಯೆಹೋವನು ನಿಮಗೆ, “ಬೆಟ್ಟದ ಸೀಮೆಯನ್ನು ಹತ್ತಿ ನಾನು ನಿಮಗೆ ಕೊಟ್ಟಿರುವ ದೇಶವನ್ನು ಸ್ವಾಧೀನಮಾಡಿಕೊಳ್ಳಿರಿ” ಎಂದು ಅಪ್ಪಣೆಕೊಟ್ಟಾಗಲೂ ನೀವು ನಿಮ್ಮ ದೇವರಾದ ಯೆಹೋವನ ಆ ಆಜ್ಞೆಯನ್ನು ಧಿಕ್ಕರಿಸಿ, ಆತನನ್ನು ನಂಬದೆ, ಆತನ ಮಾತನ್ನು ಅಲಕ್ಷ್ಯ ಮಾಡಿದಿರಿ.
Wakati Yahwe aliwatoa kutoka Kadeshi ya Barnea na kusema, 'Nenda juu na umiliki nchi ambayo nimekupa, 'ndipo mliasi dhidi ya agizo la Yahwe Mungu wenu, na hamkumwamini na kumsikiliza sauti yake.
24 ೨೪ ನನಗೆ ನಿಮ್ಮ ಪರಿಚಯವಾದಂದಿನಿಂದಲೂ ನೀವು ಯೆಹೋವನಿಗೆ ದ್ರೋಹಿಗಳಾಗಿ ನಡೆದುಕೊಂಡಿದ್ದೀರಿ.
Mmekuwa waasi dhidi ya Yahwe toka siku ile nilipowajua.
25 ೨೫ ಯೆಹೋವನು ನಿಮ್ಮನ್ನು ನಾಶಮಾಡಬೇಕೆಂದಿದ್ದರಿಂದ ನಾನು ಆ ನಲ್ವತ್ತು ದಿನವೂ ಹಗಲಿರುಳು ಆತನ ಸನ್ನಿಧಿಯಲ್ಲಿ ಬಿದ್ದಿದ್ದೆನು.
Kwa hiyo nilala kifudifudi mbele ya Yahwe siku zile arobaini na usiku arobaini, kwa sababu alikuwa amesema kwamba angewaangamiza.
26 ೨೬ ನಾನು ಆತನನ್ನು ಬೇಡಿಕೊಳ್ಳುತ್ತಾ, “ಕರ್ತನಾದ ಯೆಹೋವನೇ, ನೀನು ನಿನ್ನ ಮಹಿಮೆಯಿಂದ ರಕ್ಷಿಸಿ ನಿನ್ನ ಭುಜಬಲದಿಂದ ಐಗುಪ್ತ್ಯರಿಂದ ಬಿಡುಗಡೆಮಾಡಿದ ನಿನ್ನ ಸ್ವಕೀಯ ಜನರನ್ನು ನಾಶಮಾಡಬೇಡ.
Niliomba kwa Yahwe na kusema, 'Oh Bwana Yahwe, usiwaangamize watu wako au warithi wako ambao uliwaokoa kwa ukuu wako, ambapo uwatoa toka Misri kwa mkono wa uweza.
27 ೨೭ ಇವರ ಮೊಂಡುತನ, ದುಷ್ಟತ್ವ, ಪಾಪ ಇವುಗಳನ್ನು ಮನಸ್ಸಿಗೆ ತೆಗೆದುಕೊಳ್ಳದೆ ನಿನ್ನ ಸೇವಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರನ್ನು ನೆನಪಿಗೆ ತಂದುಕೋ.
Akilini waite watumishi wenu Ibrahimu, Isaka, na Yakobo; msiangalie ukaidi wa watu hawa, wala maovu yao, dhambi zao,
28 ೨೮ ನೀನು ಯಾವ ದೇಶದಿಂದ ನಮ್ಮನ್ನು ಬರಮಾಡಿದಿಯೋ ಆ ದೇಶದವರು, ‘ಯೆಹೋವನು ಇಸ್ರಾಯೇಲರಿಗೆ ವಾಗ್ದಾನಮಾಡಿದ ದೇಶಕ್ಕೆ ಅವರನ್ನು ಸೇರಿಸಲಾರದೆ ಹಗೆಮಾಡಿ ಅರಣ್ಯದಲ್ಲಿ ಕೊಲ್ಲುವುದಕ್ಕೆ ಕರೆದುಕೊಂಡು ಹೋದನು’ ಎಂದು ಹೇಳುವುದಕ್ಕೆ ಆಸ್ಪದವಾದೀತು.
ili kwamba nchi ambayo ulitutoa iseme, “Kwa sababu Yahwe hakuweza kuwaleta katika nchi aliyowaahadia, na kwa sababu aliwachukia, amewaleta nje kuwauwa katika jangwa.
29 ೨೯ ಇವರು ಮಹಾಶಕ್ತಿಯಿಂದಲೂ ಮತ್ತು ಭುಜಬಲದಿಂದಲೂ ನೀನು ಬಿಡಿಸಿದ ನಿನ್ನ ಸ್ವಕೀಯ ಜನರಲ್ಲವೇ” ಎಂದು ಬಿನ್ನೈಸಿದೆನು.
Bado ni watu wa kwenu na urithi wenu, ambao uliwatoa kwa nguvu zako kuu na kwa kuonesha mamlaka yako,

< ಧರ್ಮೋಪದೇಶಕಾಂಡ 9 >