< ಧರ್ಮೋಪದೇಶಕಾಂಡ 1 >
1 ೧ ಯೊರ್ದನ್ ನದಿಯ ಆಚೆ, ಪಾರಾನ್, ತೋಫೆಲ್, ಲಾಬಾನ್, ಹಚೇರೋತ್ ಮತ್ತು ದೀಜಾಹಾಬ್ ಎಂಬ ಸ್ಥಳಗಳ ನಡುವೆ, ಅರಣ್ಯದಲ್ಲಿ ಆರಾಬಾ ಎಂಬ ತಗ್ಗಾದ ಪ್ರದೇಶದಲ್ಲಿ ಸೂಫಿಗೆ ಎದುರಾಗಿ ಮೋಶೆಯು ಇಸ್ರಾಯೇಲರೆಲ್ಲರಿಗೆ ಮಾಡಿದ ಉಪದೇಶ ಮತ್ತು ಉಪನ್ಯಾಸಗಳು.
이는 모세가 요단 저편 숩 맞은편의 아라바 광야 곧 바란과 도벨과 라반과 하세롯과 디사합 사이에서 이스라엘 무리에게 선포한 말씀이니라
2 ೨ ಹೋರೇಬಿನಿಂದ ಸೇಯೀರ್ ಬೆಟ್ಟಗಳ ಮಾರ್ಗವಾಗಿ ಕಾದೇಶ್‌ಬರ್ನೇಯದ ತನಕ ಹನ್ನೊಂದು ದಿನದ ಪ್ರಯಾಣ.
호렙 산에서 세일 산을 지나 가데스 바네아에까지 열하룻 길이었더라
3 ೩ ಇಸ್ರಾಯೇಲರು ಐಗುಪ್ತದೇಶವನ್ನು ಬಿಟ್ಟ ನಲ್ವತ್ತನೆಯ ವರ್ಷದ, ಹನ್ನೊಂದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ತನಗೆ ಆಜ್ಞಾಪಿಸಿದ್ದನ್ನೆಲ್ಲಾ ಮೋಶೆಯು ಇಸ್ರಾಯೇಲರಿಗೆ ತಿಳಿಸಿದನು.
제사십년 십일월 그 달 초일일에 모세가 이스라엘 자손에게 여호와께서 그들을 위하여 자기에게 주신 명령을 다 고하였으니
4 ೪ ಯೆಹೋವನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾದ ಸೀಹೋನನನ್ನೂ, ಅಷ್ಟಾರೋತ್, ಎದ್ರೈ ಎಂಬ ಪಟ್ಟಣಗಳಲ್ಲಿದ್ದ ಬಾಷಾನಿನ ಅರಸನಾದ ಓಗನನ್ನೂ ಜಯಿಸಿದ ತರುವಾಯವೇ ಮೋಶೆಯು ಇದನ್ನೆಲ್ಲಾ ತಿಳಿಸಿದನು.
때는 모세가 헤스본에 거하는 아모리 왕 시혼을 쳐 죽이고 에드레이에서 아스다롯에 거하는 바산 왕 옥을 쳐 죽인 후라
5 ೫ ಯೊರ್ದನ್ ನದಿಯ ಆಚೆ ಮೋವಾಬ್ಯರ ದೇಶದಲ್ಲಿ ಮೋಶೆಯು ಈ ಮುಂದಣ ಧರ್ಮಶಾಸ್ತ್ರವನ್ನು ವಿವರಿಸುವುದಕ್ಕೆ ಪ್ರಾರಂಭಿಸಿ ಹೀಗೆ ಹೇಳಿದನು:
모세가 요단 저편 모압 땅에서 이 율법 설명하기를 시작하였더라 일렀으되
6 ೬ “ಹೋರೇಬಿನಲ್ಲಿ ನಮ್ಮ ದೇವರಾದ ಯೆಹೋವನು ನಮಗೆ, ‘ನೀವು ಈ ಬೆಟ್ಟದ ಬಳಿಯಲ್ಲಿ ವಾಸಿಸಿದ್ದು ಸಾಕು.
우리 하나님 여호와께서 호렙 산에서 우리에게 말씀하여 이르시기를 너희가 이 산에서 거한지 오래니
7 ೭ ಈಗ ಹಿಂದಿರುಗಿ ಅಮೋರಿಯರು ಇರುವ ಬೆಟ್ಟದ ಸೀಮೆಗೂ ಮತ್ತು ಅದಕ್ಕೆ ಸೇರಿದ ಪ್ರದೇಶದ ಕಡೆಗೆ ಪ್ರಯಾಣಮಾಡಿರಿ. ಅವು ಯಾವುವೆಂದರೆ: ತಗ್ಗಾದ ಪ್ರದೇಶ, ಬೆಟ್ಟದ ಮೇಲಿನ ಪ್ರದೇಶ, ಇಳಕಲಿನ ಪ್ರದೇಶ, ದಕ್ಷಿಣಸೀಮೆ ಮತ್ತು ಸಮುದ್ರತೀರ ಎಂಬ ನಾಡುಗಳನ್ನು ಒಳಗೊಂಡಿರುವ ಕಾನಾನ್ಯರ ದೇಶ, ಲೆಬನೋನ್ ಪರ್ವತ ಮತ್ತು ಯೂಫ್ರೆಟಿಸ್ ಎಂಬ ಮಹಾನದಿಯ ವರೆಗೆ ವಿಸ್ತರಿಸಿಕೊಂಡಿರುವ ಪ್ರದೇಶಗಳಿಗೆ ಹೋಗಿರಿ.
방향을 돌려 진행하여 아모리 족속의 산지로 가고 그 근지 곳곳으로 가고 아라바와 산지와 평지와 남방과 해변과 가나안 족속의 땅과 레바논과 큰 강 유브라데까지 가라 하셨나니
8 ೮ ಆ ದೇಶವನ್ನು ನಿಮಗೇ ಕೊಟ್ಟಿದ್ದೇನೆ. ಯೆಹೋವನೆಂಬ ನಾನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್, ಯಾಕೋಬರಿಗೂ ಮತ್ತು ಅವರ ಸಂತತಿಯವರಿಗೂ ಆ ದೇಶವನ್ನು ಕೊಡುತ್ತೇನೆಂದು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದೆನಲ್ಲಾ. ಅದರಲ್ಲಿ ಪ್ರವೇಶಮಾಡಿ ಸ್ವಾಧೀನಮಾಡಿಕೊಳ್ಳಿರಿ’” ಎಂದು ಅಜ್ಞಾಪಿಸಿದನು.
여호와께서 너희의 열조 아브라함과 이삭과 야곱에게 맹세하사 그들과 그 후손에게 주리라 하신 땅이 너희 앞에 있으니 들어가서 얻을지니라
9 ೯ ಆ ಕಾಲದಲ್ಲಿ ನಾನು ನಿಮ್ಮ ಸಂಗಡ ಮಾತನಾಡಿ, “ನಿಮ್ಮ ಹೊಣೆಯನ್ನು ನಾನೊಬ್ಬನೇ ಹೊರುವುದು ಅಸಾಧ್ಯ.
그 때에 내가 너희에게 말하여 이르기를 나는 홀로 너희 짐을 질 수 없도다
10 ೧೦ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಅಧಿಕ ಸಂಖ್ಯೆಯಲ್ಲಿ ಹೆಚ್ಚಿಸಿದ್ದರಿಂದ ನೀವು ಈಗ ಆಕಾಶದ ನಕ್ಷತ್ರಗಳಷ್ಟು ಅಸಂಖ್ಯರಾಗಿದ್ದೀರಿ.
너희 하나님 여호와께서 너희를 번성케 하셨으므로 너희가 오늘날 하늘의 별 같이 많거니와
11 ೧೧ ನೀವು ಈಗ ಇರುವುದಕ್ಕಿಂತಲೂ ಇನ್ನು ಸಾವಿರದಷ್ಟಾಗುವಂತೆ ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮ್ಮನ್ನು ಹೆಚ್ಚಿಸಿ, ತಾನು ವಾಗ್ದಾನಮಾಡಿದ ಪ್ರಕಾರವೇ ನಿಮಗೆ ಶುಭಗಳನ್ನು ಅನುಗ್ರಹಿಸಲಿ.
너희 열조의 하나님 여호와께서 너희를 현재보다 천 배나 많게 하시며 너희에게 허락하신 것과 같이 너희에게 복 주시기를 원하노라
12 ೧೨ ಆದರೆ ನಿಮ್ಮಿಂದಾಗುವ ತೊಂದರೆಗಳನ್ನೂ, ಹೊಣೆಯನ್ನು ಮತ್ತು ವ್ಯಾಜ್ಯಗಳನ್ನೂ ನಾನೊಬ್ಬನೇ ನಿಭಾಯಿಸುವುದು ಹೇಗೆ?
그런즉 나 홀로 어찌 능히 너희의 괴로운 것과 너희의 무거운 짐과 너희의 다툼을 담당할 수 있으랴
13 ೧೩ ಆದುದರಿಂದ ನೀವು ಪ್ರತಿಯೊಂದು ಕುಲದಿಂದ ಬುದ್ಧಿವಿವೇಕಗಳಿಂದ ಪ್ರಸಿದ್ಧರಾದ ಪುರುಷರನ್ನು ಆರಿಸಿಕೊಳ್ಳಿರಿ. ನಾನು ಅವರನ್ನು ನಿಮಗೆ ಅಧಿಪತಿಗಳನ್ನಾಗಿ ನೇಮಿಸುವೆನು” ಎಂದು ಹೇಳಿದೆನು.
너희의 각 지파에서 지혜와 지식이 있는 유명한 자를 택하라 내가 그들을 세워 너희 두령을 삼으리라 한즉
14 ೧೪ ಅದಕ್ಕೆ ನೀವು, “ನಿನ್ನ ಆಲೋಚನೆಯಂತೆ ನಡೆಯುವುದು ಹಿತವಾದದ್ದೇ” ಎಂದು ಉತ್ತರಕೊಟ್ಟಿರಿ.
너희가 대답하여 이르기를 당신의 말씀대로 하는 것이 좋다 하기에
15 ೧೫ ಆಗ ನಾನು ನಿಮ್ಮಲ್ಲಿ ಪ್ರಸಿದ್ಧರಾದ, ಬುದ್ಧಿವಂತರನ್ನು ಆರಿಸಿಕೊಂಡು ಒಂದೊಂದು ಕುಲದಲ್ಲಿ ಸಾವಿರ ಜನರಿಗೆ ಒಬ್ಬರಂತೆ, ನೂರು ಜನರಿಗೆ ಒಬ್ಬರಂತೆ, ಐವತ್ತು ಜನರಿಗೆ ಒಬ್ಬರಂತೆ ಮತ್ತು ಹತ್ತು ಜನರಿಗೆ ಒಬ್ಬರಂತೆ ಅಧಿಕಾರಿಗಳನ್ನಾಗಿಯೂ ಮತ್ತು ಉಪ ಅಧಿಕಾರಿಗಳನ್ನಾಗಿಯೂ ನೇಮಿಸಿದೆನು.
내가 너희 지파의 두령으로 지혜가 있는 유명한 자를 취하여 너희의 어른을 삼되 곧 각 지파를 따라 천부장과 백부장과 오십부장과 십부장과 패장을 삼고
16 ೧೬ ಆ ನ್ಯಾಯಾಧಿಪತಿಗಳಿಗೆ ನಾನು ಆ ಕಾಲದಲ್ಲಿ ಅಪ್ಪಣೆಮಾಡಿ, “ನೀವು ಸ್ವಕುಲದವರ ವ್ಯಾಜ್ಯಗಳನ್ನು ವಿಚಾರಿಸಬೇಕು. ಅವರು ಇಸ್ರಾಯೇಲರೊಡನೆ ವ್ಯಾಜ್ಯವಾಡಿದರೂ, ಅನ್ಯರೊಡನೆ ವ್ಯಾಜ್ಯವಾಡಿದರೂ ನೀವು ನ್ಯಾಯದ ಪ್ರಕಾರವೇ ತೀರ್ಪುಮಾಡಬೇಕು.
내가 그 때에 너희 재판장들에게 명하여 이르기를 너희가 너희 형제 중에 송사를 들을 때에 양방간에 공정히 판결할 것이며 그들 중의 타국인에게도 그리 할것이라
17 ೧೭ ನ್ಯಾಯವಿಚಾರಣೆ ಮಾಡುವಾಗ ಮುಖದಾಕ್ಷಿಣ್ಯಮಾಡದೆ, ಪ್ರಮುಖರನ್ನೂ ಹಾಗು ಅಲ್ಪರನ್ನೂ ಸಮಾನವಾಗಿ ಕಾಣಬೇಕು. ನೀವು ದೇವರ ಹೆಸರಿನಲ್ಲಿ ನ್ಯಾಯತೀರಿಸುವವರಾದ ಕಾರಣ ಮನುಷ್ಯರ ಮುಖವನ್ನು ನೋಡಿ ಹೆದರಬೇಡಿರಿ. ನೀವು ತೀರಿಸಲಿಕ್ಕೆ ಆಗದ ವ್ಯಾಜ್ಯಗಳನ್ನು ನನ್ನ ಬಳಿಗೆ ತರಬೇಕು; ನಾನೇ ಅವುಗಳನ್ನು ತೀರಿಸುವೆನು” ಎಂದು ಹೇಳಿದೆನು.
재판은 하나님께 속한 것인즉 너희는 재판에 외모를 보지 말고 귀천을 일반으로 듣고 사람의 낯을 두려워 말것이며 스스로 결단하기 어려운 일이거든 내게로 돌리라 내가 들으리라 하였고
18 ೧೮ ಅದಲ್ಲದೆ ನೀವು ಮಾಡಬೇಕಾದ ಎಲ್ಲಾ ಕಾರ್ಯಗಳ ವಿಷಯದಲ್ಲಿಯೂ ನಾನು ಆ ಕಾಲದಲ್ಲಿ ನಿಮಗೆ ಆಜ್ಞೆಕೊಟ್ಟೆನು.
내가 너희의 행할 모든 일을 그 때에 너희에게 다 명하였느니라
19 ೧೯ ನಾವು ಹೋರೇಬಿನಿಂದ ಹೊರಟು ನಮ್ಮ ದೇವರಾದ ಯೆಹೋವನು ಆಜ್ಞಾಪಿಸಿದಂತೆ ಅಮೋರಿಯರ ಬೆಟ್ಟದ ಸೀಮೆಯ ಮಾರ್ಗವನ್ನು ಹಿಡಿದು ನೀವು ನೋಡಿದ ಆ ಘೋರವಾದ ಮಹಾ ಅರಣ್ಯದಲ್ಲಿ ನಡೆದು ಕಾದೇಶ್‌ಬರ್ನೇಯಕ್ಕೆ ಸೇರಿದೆವು.
우리 하나님 여호와께서 우리에게 명하신 대로 우리가 호렙 산에서 발행하여 너희의 본바 크고 두려운 광야를 지나 아모리 족속 산지 길로 가데스 바네아에 이른 때에
20 ೨೦ ಆಗ ನಾನು, “ನಮ್ಮ ದೇವರಾದ ಯೆಹೋವನು ನಮಗೆ ಕೊಡುವ ಅಮೋರಿಯರ ಬೆಟ್ಟದ ಸೀಮೆಯ ಹತ್ತಿರಕ್ಕೆ ಬಂದಿದ್ದೀರಿ.
내가 너희에게 이르기를 우리 하나님 여호와께서 우리에게 주신 아모리 족속의 산지에 너희가 이르렀나니
21 ೨೧ ನಿಮ್ಮ ದೇವರಾದ ಯೆಹೋವನು ಆ ದೇಶವನ್ನು ನಿಮಗೇ ಕೊಟ್ಟಿದ್ದಾನೆ; ನಿಮ್ಮ ಪೂರ್ವಿಕರ ದೇವರಾದ ಯೆಹೋವನು ಹೇಳಿದಂತೆ ಆ ಬೆಟ್ಟವನ್ನು ಹತ್ತಿ ಸ್ವಾಧೀನಮಾಡಿಕೊಳ್ಳಿರಿ; ನೀವು ಭಯಪಡದೆ ಧೈರ್ಯವಾಗಿಯೇ ಇರಬೇಕು” ಎಂದು ಹೇಳಿದೆನು.
너희 하나님 여호와께서 이 땅을 너희 앞에 두셨은즉 너희 열조의 하나님 여호와께서 너희에게 이르신 대로 올라가서 얻으라 두려워 말라 주저하지 말라 한즉
22 ೨೨ ಆಗ ನೀವೆಲ್ಲರೂ ನನ್ನ ಬಳಿಗೆ ಬಂದು, “ನಮಗಿಂತ ಮುಂದಾಗಿ ಜನರನ್ನು ಕಳುಹಿಸುವೆವು. ಅವರು ನಮಗೋಸ್ಕರ ಆ ದೇಶವನ್ನು ಪರೀಕ್ಷಿಸಿ ನೋಡಿ, ನಾವು ಹತ್ತಿ ಹೋಗಬೇಕಾದ ದಾರಿಯ ವಿಷಯದಲ್ಲೂ ಮತ್ತು ಸೇರಬೇಕಾದ ಊರುಗಳ ವಿಷಯದಲ್ಲೂ ನಮಗೆ ವರ್ತಮಾನ ತಿಳಿಸಲಿ” ಎಂದು ಹೇಳಿದಿರಿ.
너희가 다 내 앞으로 나아와 말하기를 우리가 사람을 우리 앞서 보내어 우리를 위하여 그 땅을 정탐하고 어느 길로 올라가야 할 것과 어느 성읍으로 들어가야 할 것을 우리에게 회보케 하자 하기에
23 ೨೩ ಅದು ಒಳ್ಳೆಯ ಆಲೋಚನೆಯೆಂದು ನಾನು ತಿಳಿದುಕೊಂಡು ನಿಮ್ಮಲ್ಲಿ ಕುಲಕ್ಕೆ ಒಬ್ಬೊಬ್ಬನಂತೆ ಹನ್ನೆರಡು ಜನರನ್ನು ಆರಿಸಿಕೊಂಡೆನು.
내가 그 말을 선히 여겨 너희 중에서 매 지파에 한 사람씩 열둘을 택하매
24 ೨೪ ಅವರು ಹೋಗಿ ಆ ಬೆಟ್ಟದ ಸೀಮೆಯನ್ನು ಹತ್ತಿ, ಎಷ್ಕೋಲ್ ಎಂಬ ತಗ್ಗಿನ ಬಳಿಗೆ ಬಂದು ಆ ಪ್ರದೇಶದಲ್ಲಿ ಸಂಚರಿಸಿ ನೋಡಿದರು.
그들이 앞으로 가서 산지에 올라 에스골 골짜기에 이르러 그곳을 정탐하고
25 ೨೫ ಅವರು ಅಲ್ಲಿನ ಹಣ್ಣುಗಳಲ್ಲಿ ಕೆಲವನ್ನು ತಂದು ತೋರಿಸಿ, “ನಮ್ಮ ದೇವರಾದ ಯೆಹೋವನು ನಮಗೆ ಕೊಡುವ ಆ ದೇಶವು ಒಳ್ಳೆಯ ದೇಶ” ಎಂದು ನಮಗೆ ತಿಳಿಸಿದರು.
그 땅의 과실을 손에 가지고 우리에게로 돌아와서 우리에게 회보하여 이르되 우리의 하나님 여호와께서 우리에게 주시는 땅이 좋더라 하였느니라
26 ೨೬ ಆದರೂ ನೀವು ಬೆಟ್ಟವನ್ನು ಹತ್ತಿ ನೋಡಲು ಇಷ್ಟಪಡದೆ ನಿಮ್ಮ ದೇವರಾದ ಯೆಹೋವನ ಆಜ್ಞೆಯನ್ನು ಉಲ್ಲಂಘಿಸಿದಿರಿ.
그러나 너희가 올라가기를 즐겨 아니하고 너희 하나님 여호와의 명을 거역하여
27 ೨೭ ನೀವು ನಿಮ್ಮ ಡೇರೆಗಳಲ್ಲಿ ಗುಣುಗುಟ್ಟುತ್ತಾ, “ಯೆಹೋವನು ನಮ್ಮನ್ನು ಐಗುಪ್ತದೇಶದಿಂದ ಬರಮಾಡಿದ್ದು ಹಗೆತನದಿಂದಲೇ; ಆತನು ನಮ್ಮನ್ನು ಸಂಹರಿಸಬೇಕೆಂದು ಅಮೋರಿಯರ ಕೈಗೆ ಒಪ್ಪಿಸುತ್ತಾನೆ.
장막 중에서 원망하여 이르기를 여호와께서 우리를 미워하시는 고로 아모리 족속의 손에 붙여 멸하시려고 우리를 애굽 땅에서 인도하여 내셨도다
28 ೨೮ ನಾವು ಹೋಗಬೇಕಾದ ಆ ಸೀಮೆ ಎಂಥದೆಂದು ಆಲೋಚಿಸಿರಿ; ಅಲ್ಲಿ ಹೋಗಿದ್ದ ನಮ್ಮ ಸಹೋದರರು ನಮಗೆ, ‘ಆ ದೇಶದ ಜನರು ನಮಗಿಂತ ಬಲಿಷ್ಠರಾಗಿಯೂ ಮತ್ತು ಎತ್ತರವಾಗಿಯೂ ಇದ್ದಾರೆ. ಅವರಿರುವ ಪಟ್ಟಣಗಳು ದೊಡ್ಡದಾಗಿಯೂ ಮತ್ತು ಆಕಾಶವನ್ನು ಮುಟ್ಟುವ ಕೋಟೆಕೊತ್ತಲುಗಳಿಂದ ಇವೆ. ಅಲ್ಲಿ ನಾವು ಎತ್ತರವಾದ ಪುರುಷರನ್ನು ಅಂದರೆ ಅನಾಕೀಮ್ ವಂಶಸ್ಥರ ಮಕ್ಕಳನ್ನು ನೋಡಿದ್ದೇವೆ’ ಎಂದು ಹೇಳಿ ನಮ್ಮ ಧೈರ್ಯವನ್ನು ಕೆಡಿಸಿದ್ದಾರೆ” ಅಂದುಕೊಳ್ಳುತ್ತಿದ್ದಿರಿ.
우리가 어디로 갈꼬 우리의 형제들이 우리로 낙심케 하여 말하기를 그 백성은 우리보다 장대하며 그 성읍은 크고 성곽은 하늘에 닿았으며 우리가 또 거기서 아낙 자손을 보았노라 하는도다 하기로
29 ೨೯ ಅದಕ್ಕೆ ನಾನು, “ಕಳವಳಪಡಬೇಡಿರಿ, ಅವರಿಗೆ ಭಯಪಡಬೇಡಿರಿ.
내가 너희에게 말하기를 그들을 무서워 말라 두려워하지 말라
30 ೩೦ ನಿಮ್ಮ ಮುಂದೆ ಮಾರ್ಗದರ್ಶಕನಾಗಿ ಹೋಗುವ ನಿಮ್ಮ ದೇವರಾದ ಯೆಹೋವನು ಐಗುಪ್ತ ದೇಶದಲ್ಲಿಯೂ, ನೀವು ನೋಡಿದ ಅರಣ್ಯದಲ್ಲಿಯೂ ಪ್ರತ್ಯಕ್ಷನಾಗಿ ನಿಮಗೋಸ್ಕರ ಯುದ್ಧಮಾಡಿದಂತೆಯೇ ಈಗಲೂ ನಿಮ್ಮವನಾಗಿ ಯುದ್ಧಮಾಡುವನು.
너희 앞서 행하시는 너희 하나님 여호와께서 애굽에서 너희를 위하여 너희 목전에서 모든 일을 행하신 것 같이 이제도 너희를 위하여 싸우실 것이며
31 ೩೧ ನೀವು ಈ ಸ್ಥಳಕ್ಕೆ ಸೇರುವ ತನಕ ನಿಮ್ಮ ಪ್ರಯಾಣದಲ್ಲೆಲ್ಲಾ ಒಬ್ಬ ತಂದೆ ತನ್ನ ಮಗನನ್ನು ಹೇಗೆ ಮುನ್ನಡೆಸುತ್ತಾನೋ ಹಾಗೆಯೇ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಹೊತ್ತನಲ್ಲವೇ?” ಎಂದು ನಿಮಗೆ ಹೇಳಿದೆನು.
광야에서도 너희가 당하였거니와 사람이 자기 아들을 안음 같이 너희 하나님 여호와께서 너희의 행로 중에 너희를 안으사 이곳까지 이르게 하셨느니라 하나
32 ೩೨ ಆದರೂ ನೀವು ನಿಮ್ಮ ದೇವರಾದ ಯೆಹೋವನನ್ನು ನಂಬಲೇ ಇಲ್ಲ.
이 일에 너희가 너희 하나님 여호와를 믿지 아니하였도다
33 ೩೩ ನೀವು ಹೋಗಬೇಕಾದ ದಾರಿಯನ್ನು ತೋರಿಸುವುದಕ್ಕೂ, ದಂಡು ಇಳಿಯಬೇಕಾದ ಸ್ಥಳಗಳನ್ನು ಗೊತ್ತುಮಾಡುವುದಕ್ಕೂ ರಾತ್ರಿಯಲ್ಲಿ ಬೆಂಕಿಯೋಪಾದಿಯಲ್ಲಿಯೂ ಮತ್ತು ಹಗಲಿನಲ್ಲಿ ಮೇಘದೋಪಾದಿಯಲ್ಲಿಯೂ ನಿಮ್ಮ ಮಾರ್ಗದಲ್ಲಿ ನಿಮ್ಮನ್ನು ಮುನ್ನಡೆಸಿದ ದೇವರನ್ನು ನೀವು ನಂಬಲಿಲ್ಲ.
그는 너희 앞서 행하시며 장막 칠 곳을 찾으시고 밤에는 불로, 낮에는 구름으로 너희의 행할 길을 지시하신 자니라
34 ೩೪ ಯೆಹೋವನು ನಿಮ್ಮ ಮಾತುಗಳನ್ನು ಕೇಳಿ ಕೋಪಗೊಂಡನು.
여호와께서 너희의 말소리를 들으시고 노하사 맹세하여 가라사대
35 ೩೫ ಆತನು, “ನಿಮ್ಮ ಪೂರ್ವಿಕರಿಗೆ ವಾಗ್ದಾನಮಾಡಿದ ಆ ಒಳ್ಳೇ ದೇಶವನ್ನು ಈ ದುಷ್ಟ ಸಂತತಿಯವರಲ್ಲಿ ಯಾರೂ ನೋಡುವುದಿಲ್ಲ” ಎಂದು ಪ್ರಮಾಣಮಾಡಿದನು.
이 악한 세대 사람들 중에는 내가 그들의 열조에게 주기로 맹세한 좋은 땅을 볼 자가 하나도 없으리라
36 ೩೬ ಮತ್ತು ಯೆಹೋವನು “ಯೆಫುನ್ನೆಯ ಮಗನಾದ ಕಾಲೇಬನೊಬ್ಬನೇ ಯೆಹೋವನನ್ನು ಮನಃಪೂರ್ವಕವಾಗಿ ಅನುಸರಿಸಿದ್ದರಿಂದ, ಅವನೇ ಅದನ್ನು ನೋಡುವನು. ಅವನು ಸಂಚರಿಸಿದ ಪ್ರದೇಶವನ್ನು ಅವನಿಗೂ ಮತ್ತು ಅವನ ಸಂತತಿಯವರಿಗೂ ಕೊಡುವೆನು” ಎಂದು ಹೇಳಿದನು.
오직 여분네의 아들 갈렙은 온전히 여호와를 순종하였은즉 그는 그것을 볼 것이요 그가 밟은 땅을 내가 그와 그의 자손에게 주리라 하시고
37 ೩೭ ಅದು ಮಾತ್ರವಲ್ಲದೆ ಯೆಹೋವನು ನಿಮ್ಮಿಂದ ನನ್ನ ಮೇಲೆಯೂ ಕೋಪಗೊಂಡು, “ನೀನೂ ಆ ದೇಶಕ್ಕೆ ಸೇರುವುದಿಲ್ಲ;
여호와께서 너희의 연고로 내게도 진노하사 가라사대 너도 그리로 들어가지 못하리라
38 ೩೮ ಆದರೆ ನಿನ್ನ ಮುಂದೆ ನಿಂತಿರುವ ನಿನ್ನ ಸೇವಕನು, ನೂನನ ಮಗನೂ ಆದ ಯೆಹೋಶುವನು ಅಲ್ಲಿಗೆ ಸೇರುವನು. ಅವನೇ ಇಸ್ರಾಯೇಲರಿಗೆ ಆ ದೇಶವನ್ನು ಸ್ವಾಧೀನಪಡಿಸುವನು. ಆದುದರಿಂದ ಅವನನ್ನು ಧೈರ್ಯಗೊಳಿಸು.
너의 종자 눈의 아들 여호수아는 그리로 들어갈 것이니 너는 그를 담대케 하라 그가 이스라엘에게 그 땅을 기업으로 얻게 하리라
39 ೩೯ ಆದರೆ ಪರರ ಪಾಲಾಗುವರೆಂದು ನೀವು ಹೇಳಿದ ನಿಮ್ಮ ಮನೆಯವರೂ ಹಾಗು ಒಳ್ಳೆಯದನ್ನು ಮತ್ತು ಕೆಟ್ಟದ್ದನ್ನು ಅರಿಯದ ನಿಮ್ಮ ಮಕ್ಕಳೂ ಅಲ್ಲಿಗೆ ಸೇರುವರು. ಅವರಿಗೇ ಆ ದೇಶವನ್ನು ಕೊಡುವೆನು; ಅವರು ಅದನ್ನು ಸ್ವಾಧೀನಮಾಡಿಕೊಳ್ಳುವರು.
또 너희가 사로잡히리라 하던 너희의 아이들과 당일에 선악을 분변치 못하던 너희 자녀들 그들은 그리로 들어갈 것이라 내가 그 땅을 그들에게 주어 산업이 되게 하리라
40 ೪೦ ನೀವಾದರೋ ಹಿಂದಿರುಗಿ ಕೆಂಪು ಸಮುದ್ರದ ಮಾರ್ಗವನ್ನು ಹಿಡಿದು ಅರಣ್ಯಕ್ಕೆ ಹೊರಟುಹೋಗಿರಿ” ಎಂದು ಆಜ್ಞಾಪಿಸಿದನು.
너희는 회정하여 홍해 길로 하여 광야로 들어갈지니라 하시매
41 ೪೧ ಅದಕ್ಕೆ ನೀವು, “ನಾವು ಯೆಹೋವನಿಗೆ ದ್ರೋಹಿಗಳಾದೆವು. ಆದರೂ ನಮ್ಮ ದೇವರಾದ ಯೆಹೋವನು ಆಜ್ಞಾಪಿಸಿದಂತೆ ನಾವೇ ಈಗ ಆ ಬೆಟ್ಟದ ಸೀಮೆಯನ್ನು ಹತ್ತಿ ಯುದ್ಧಮಾಡುವೆವು” ಎಂದು ಉತ್ತರಕೊಟ್ಟಿರಿ. ಮತ್ತು ನೀವೆಲ್ಲರೂ ನಿಮ್ಮ ನಿಮ್ಮ ಆಯುಧಗಳನ್ನು ತೆಗೆದುಕೊಂಡು, ಆ ಬೆಟ್ಟದ ಸೀಮೆಯನ್ನು ಹತ್ತಿ ಜಯಿಸುವುದು ಅಲ್ಪಕಾರ್ಯವೆಂದು ಭಾವಿಸಿ ಹೊರಡುವುದಕ್ಕಿದ್ದಿರಿ.
너희가 대답하여 내게 이르기를 우리가 여호와께 범죄하였사오니 우리 하나님께서 우리에게 명하신 대로 우리가 올라가서 싸우리이다 하고 너희가 각각 병기를 띠고 경솔히 산지로 올라가려 할 때에
42 ೪೨ ಆದರೆ ಯೆಹೋವನು ನನಗೆ, “ನಾನು ಇವರ ಮಧ್ಯದಲ್ಲಿ ಇರುವುದಿಲ್ಲವಾದುದರಿಂದ ಇವರು ಸೋತುಹೋಗುವರು. ಇವರು ಯುದ್ಧಮಾಡಲೂ ಬಾರದು, ಆ ಬೆಟ್ಟದ ಸೀಮೆಗೆ ಹೋಗಲೂ ಬಾರದು ಎಂದು ಇವರಿಗೆ ಆಜ್ಞಾಪಿಸು” ಎಂದು ಹೇಳಿದನು.
여호와께서 내게 이르시되 너는 그들에게 이르기를 너희는 올라가지 말라 싸우지도 말라 내가 너희 중에 있지 아니하니 너희가 대적에게 패할까 하노라 하셨다 하라 하시기로
43 ೪೩ ನಾನು ಆ ಮಾತನ್ನು ನಿಮಗೆ ತಿಳಿಸಿದರೂ, ನೀವು ಕಿವಿಗೊಡದೆ ಯೆಹೋವನ ಆಜ್ಞೆಯನ್ನು ತಾತ್ಸಾರಮಾಡಿ ಸೊಕ್ಕಿನಿಂದ ಆ ಬೆಟ್ಟವನ್ನು ಹತ್ತಿದಿರಿ.
내가 너희에게 고하였으나 너희가 듣지 아니하고 여호와의 명을 거역하고 천자히 산지로 올라가매
44 ೪೪ ಆಗ ಬೆಟ್ಟದಲ್ಲಿದ್ದ ಅಮೋರಿಯರು ನಿಮಗೆ ವಿರುದ್ಧವಾಗಿ ಹೊರಟು ಜೇನುಹುಳಗಳಂತೆ ನಿಮ್ಮನ್ನು ಮುತ್ತಿ ಸೇಯೀರಿನಲ್ಲಿ ಹೊರ್ಮದ ವರೆಗೂ ಬೆನ್ನಟ್ಟಿ ಸಂಹರಿಸಿದರು.
그 산지에 거하는 아모리 족속이 너희를 마주 나와서 벌떼 같이 너희를 쫓아 세일 산에서 쳐서 호르마까지 미친지라
45 ೪೫ ನೀವು ಹಿಂದಿರುಗಿ ಬಂದು ಯೆಹೋವನ ಮುಂದೆ ಗೋಳಾಡಿದಾಗ ಆತನು ನಿಮ್ಮ ಮೊರೆಯನ್ನು ಕೇಳಲೂ ಇಲ್ಲ ಮತ್ತು ರಕ್ಷಿಸಲೂ ಇಲ್ಲ.
너희가 돌아와서 여호와 앞에서 통곡하나 여호와께서 너희의 소리를 듣지 아니하시며 너희에게 귀를 기울이지 아니하셨으므로
46 ೪೬ ಆ ಮೇಲೆ ನೀವು ಕಾದೇಶಿನಲ್ಲಿ ಬಹುಕಾಲ ವಾಸವಾಗಿದ್ದಿರಿ ಎಂದು ಹೇಳಿದನು.
너희가 가데스에 여러날 동안 거하였었나니 곧 너희가 그 곳에 거하던 날 수대로니라