< ಪ್ರಸಂಗಿ 7 >

1 ಸುಗಂಧತೈಲಕ್ಕಿಂತ ಒಳ್ಳೆಯ ಹೆಸರು ಉತ್ತಮ, ಮತ್ತು ಜನನ ದಿನಕ್ಕಿಂತ ಮರಣ ದಿನವೇ ಮೇಲು.
نیک نامی از روغن معطر بهتر است و روزممات از روز ولادت.۱
2 ಔತಣದ ಮನೆಗಿಂತ ಮರಣದುಃಖದ ಮನೆಗೆ ಹೋಗುವುದು ಲೇಸು. ಎಲ್ಲಾ ಮನುಷ್ಯರಿಗೂ ಕೊನೆಗೆ ಇದೇ ಗತಿ, ಜೀವಂತನು ಇದನ್ನು ನೋಡಿ ತನ್ನ ಹೃದಯದಲ್ಲಿ ಸ್ಮರಿಸುವನು.
رفتن به خانه ماتم از رفتن به خانه ضیافت بهتر است زیرا که این آخرت همه مردمان است و زندگان این را در دل خود می‌نهند.۲
3 ನಗೆಗಿಂತ ದುಃಖವು ವಾಸಿ, ಮುಖವು ಸಪ್ಪಗಿರುವಲ್ಲಿ ಹೃದಯಕ್ಕೆ ಮೇಲು.
حزن از خنده بهتر است زیرا که ازغمگینی صورت دل اصلاح می‌شود.۳
4 ದುಃಖದ ಮನೆಯು ಜ್ಞಾನಿಗಳ ಮನಸ್ಸಿಗೆ ನೆಲೆ, ಉಲ್ಲಾಸದ ಮನೆಯು ಮೂಢರ ಮನಸ್ಸಿಗೆ ನಿವಾಸ.
دل حکیمان در خانه ماتم است و دل احمقان در خانه شادمانی.۴
5 ಮೂಢರ ಗಾನಕ್ಕಿಂತ ಜ್ಞಾನಿಗಳ ಗದರಿಕೆಯನ್ನು ಕೇಳುವುದು ಲೇಸು.
شنیدن عتاب حکیمان بهتر است از شنیدن سرود احمقان،۵
6 ಮೂಢರ ನಗುವು ಮಡಿಕೆಯ ಕೆಳಗೆ ಉರಿಯುವ ಮುಳ್ಳಿನ ಚಟಪಟ ಶಬ್ದದ ಹಾಗೆಯೇ. ಇದೂ ಕೂಡ ವ್ಯರ್ಥ.
زیرا خنده احمقان مثل صدای خارها در زیر دیگ است و این نیز بطالت است.۶
7 ದಬ್ಬಾಳಿಕೆಯು ಜ್ಞಾನಿಯನ್ನು ಮೂರ್ಖನನ್ನಾಗಿಸುತ್ತದೆ, ಲಂಚವು ಹೃದಯವನ್ನು ಕೆಡಿಸುತ್ತದೆ.
به درستی که ظلم، مرد حکیم را جاهل می‌گرداند و رشوه، دل را فاسد می‌سازد.۷
8 ಆದಿಗಿಂತ ಅಂತ್ಯವು ಲೇಸು; ಅಹಂಕಾರಿಗಿಂತ ತಾಳ್ಮೆಯುಳ್ಳವನು ಉತ್ತಮ.
انتهای امر از ابتدایش بهتر است و دل حلیم از دل مغرور نیکوتر.۸
9 ನಿನ್ನ ಮನಸ್ಸು ಕೋಪಕ್ಕೆ ಆತುರಪಡದಿರಲಿ, ಕೋಪಕ್ಕೆ ಮೂಢರ ಎದೆಯೇ ಲೇಸು.
در دل خود به زودی خشمناک مشو زیرا خشم در سینه احمقان مستقرمی شود.۹
10 ೧೦ ಹಿಂದಿನ ಕಾಲವು ಈ ಕಾಲಕ್ಕಿಂತ ಮೇಲಾದದ್ದಕ್ಕೆ ಕಾರಣವೇನು ಅನ್ನಬೇಡ. ನೀನು ಈ ವಿಷಯದಲ್ಲಿ ವಿಚಾರಿಸುವುದು ಜ್ಞಾನಕಾರ್ಯವಲ್ಲ.
مگو چرا روزهای قدیم از این زمان بهتربود زیرا که در این خصوص از روی حکمت سوال نمی کنی.۱۰
11 ೧೧ ಜ್ಞಾನವು ಸ್ವತ್ತಿನಂತೆ ಪ್ರಯೋಜನಕರ. ಇದು ಲೋಕದಲ್ಲಿ ಜೀವಿಸುವವರಿಗೆ ಸ್ವತ್ತಿಗಿಂತ ಉತ್ತಮೋತ್ತಮವಾಗಿದೆ.
حکمت مثل میراث نیکو است بلکه به جهت بینندگان آفتاب نیکوتر.۱۱
12 ೧೨ ಧನವು ಹೇಗೊ ಹಾಗೆ ಜ್ಞಾನವು ಆಶ್ರಯ. ಜ್ಞಾನಕ್ಕೆ ವಿಶೇಷವೇನೆಂದರೆ ತನ್ನನ್ನು ಹೊಂದಿದವನಿಗೆ ಅದು ಜೀವದಾಯಕವೆಂಬುದೇ.
زیرا که حکمت ملجایی است و نقره ملجایی؛ اما فضیلت معرفت این است که حکمت صاحبانش را زندگی می‌بخشد.۱۲
13 ೧೩ ದೇವರ ಕಾರ್ಯವನ್ನು ನೋಡು; ಆತನು ಸೊಟ್ಟಗೆ ಮಾಡಿದ್ದನ್ನು ನೆಟ್ಟಗೆ ಮಾಡುವುದಕ್ಕೆ ಯಾರಿಂದಾದೀತು?
اعمال خدا را ملاحظه نما زیرا کیست که بتواند آنچه را که او کج ساخته است راست نماید؟۱۳
14 ೧೪ ಸುಖದ ದಿನದಲ್ಲಿ ಸುಖದಿಂದಿರು, ದುಃಖದ ದಿನದಲ್ಲಿ ಯೋಚಿಸು; ಮನುಷ್ಯನು ತನ್ನ ಕಾಲವಾದ ಮೇಲೆ ಸಂಭವಿಸುವ ಯಾವುದನ್ನೂ ಗ್ರಹಿಸಲಾರದಂತೆ, ದೇವರು ಇವುಗಳನ್ನು ಒಂದರ ಮೇಲೊಂದು ಬರಮಾಡಿದ್ದಾನೆ.
در روز سعادتمندی شادمان باش و درروز شقاوت تامل نما زیرا خدا این را به ازاء آن قرار داد که انسان هیچ‌چیز را که بعد از او خواهدشد دریافت نتواند کرد.۱۴
15 ೧೫ ನೀತಿವಂತನು ತನ್ನ ನೀತಿಯಲ್ಲಿಯೇ ನಶಿಸುವುದುಂಟು. ದುಷ್ಟನು ತನ್ನ ದುಷ್ಟತನದಲ್ಲಿಯೇ ಬಹಳ ದಿನ ಬದುಕುವುದುಂಟು. ಇದನ್ನೆಲ್ಲಾ ನನ್ನ ವ್ಯರ್ಥವಾದ ಜೀವಮಾನದಲ್ಲಿ ನೋಡಿದ್ದೇನೆ.
این همه را در روزهای بطالت خود دیدم. مرد عادل هست که در عدالتش هلاک می‌شود و مرد شریر هست که در شرارتش عمر دراز دارد.۱۵
16 ೧೬ ನೀನು ಅತಿಯಾಗಿ ನೀತಿವಂತನಾಗಿರಬೇಡ, ನಿನ್ನ ದೃಷ್ಟಿಯಲ್ಲಿ ನೀನು ಜ್ಞಾನಿಯಾಗಿರಬೇಡ. ನಿನ್ನನ್ನು ನೀನೇ ನಾಶನಕ್ಕೆ ಏಕೆ ಗುರಿಮಾಡಿಕೊಳ್ಳುವಿ?
پس گفتم به افراط عادل مباش و خود را زیاده حکیم مپندار مبادا خویشتن را هلاک کنی.۱۶
17 ೧೭ ನೀನು ಅತಿಯಾಗಿ ದುಷ್ಟನಾಗಿರಬೇಡ ಇಲ್ಲವೇ ಮೂರ್ಖನಾಗಿರಬೇಡ, ಏಕೆ ಅಕಾಲ ಮರಣವನ್ನು ಹೊಂದುವಿ?
و به افراط شریر مباش و احمق مشو مبادا پیش ازاجلت بمیری.۱۷
18 ೧೮ ನೀನು ಇದನ್ನು ಹಿಡಿದುಕೊಳ್ಳುವುದು ಒಳ್ಳೆಯದು, ಅದರಿಂದ ಕೈಯನ್ನು ಹಿಂತೆಗೆಯಬೇಡ. ದೇವರಿಗೆ ಭಯಪಡುವವನು ಅವೆಲ್ಲವುಗಳಿಂದ ಪಾರಾಗುವನು.
نیکو است که به این متمسک شوی و از آن نیز دست خود را برنداری زیرا هرکه از خدا بترسد، از این هر دو بیرون خواهد آمد.۱۸
19 ೧೯ ಹತ್ತು ಮಂದಿ ಅಧಿಕಾರಿಗಳಿಂದ ಪಟ್ಟಣಕ್ಕೆ ಉಂಟಾಗುವ ಬಲಕ್ಕಿಂತಲೂ ಜ್ಞಾನಿಗೆ ಜ್ಞಾನದಿಂದ ಉಂಟಾಗುವ ಬಲವು ಹೆಚ್ಚು.
حکمت مرد حکیم را توانایی می‌بخشدبیشتر از ده حاکم که در یک شهر باشند.۱۹
20 ೨೦ ಪಾಪಮಾಡದೇ ಧರ್ಮವನ್ನೇ ಆಚರಿಸುತ್ತಿರುವ ಸತ್ಪುರುಷರು ಲೋಕದಲ್ಲಿ ಇಲ್ಲವೇ ಇಲ್ಲ.
زیرامرد عادلی در دنیا نیست که نیکویی ورزد و هیچ خطا ننماید.۲۰
21 ೨೧ ಆಡುವ ಮಾತುಗಳನ್ನೆಲ್ಲಾ ಲಕ್ಷ್ಯಕ್ಕೆ ತಾರದಿರು, ನಿನ್ನ ಆಳು ನಿನ್ನನ್ನು ಶಪಿಸುವುದು ಕಿವಿಗೆ ಬಿದ್ದೀತು.
و نیز به همه سخنانی که گفته شود دل خودرا منه، مبادا بنده خود را که تو را لعنت می‌کندبشنوی.۲۱
22 ೨೨ ನೀನು ಕೂಡ ಅನೇಕ ವೇಳೆ ಇತರರನ್ನು ಶಪಿಸಿದ್ದಿ ಎಂಬುದಕ್ಕೆ ನಿನ್ನ ಮನಸ್ಸೇ ಸಾಕ್ಷಿ.
زیرا دلت می‌داند که تو نیز بسیار بارهادیگران را لعنت نموده‌ای.۲۲
23 ೨೩ ಇದನ್ನೆಲ್ಲಾ ಜ್ಞಾನದಿಂದ ಪರೀಕ್ಷಿಸಿದೆನು. “ನಾನು ಜ್ಞಾನಿಯಾಗುವೆನು” ಎಂದುಕೊಂಡೆನು. ಆದರೆ ಅದು ನನ್ನಿಂದ ದೂರವಾಯಿತು.
این همه را با حکمت آزمودم و گفتم به حکمت خواهم پرداخت اما آن از من دور بود.۲۳
24 ೨೪ ಜ್ಞಾನವು ಬಹಳ ದೂರದಲ್ಲಿಯೂ, ಅಗಾಧದಲ್ಲಿಯೂ ಇದೆ. ಅದನ್ನು ಯಾರು ಕಂಡುಕೊಂಡಾರು?
آنچه هست دور و بسیار عمیق است. پس کیست که آن را دریافت نماید؟۲۴
25 ೨೫ ನಾನು ತಿರುಗಿಕೊಂಡು, ಜ್ಞಾನವನ್ನು ಮತ್ತು ಮೂಲತತ್ವವನ್ನು ಹುಡುಕಿ, ವಿಚಾರಿಸಿ ಗ್ರಹಿಸುವುದಕ್ಕೂ ಅಧರ್ಮವು ಮೂರ್ಖತನ, ಅಜ್ಞಾನವು ಹುಚ್ಚುತನ ಎಂದು ತಿಳಿದುಕೊಳ್ಳುವುದಕ್ಕೂ ಮನಸ್ಸಿಟ್ಟೆನು.
پس برگشته دل خود را بر معرفت و بحث و طلب حکمت وعقل مشغول ساختم تا بدانم که شرارت حماقت است و حماقت دیوانگی است.۲۵
26 ೨೬ ಆಗ ಮರಣಕ್ಕಿಂತ ಹೆಚ್ಚು ವಿಷವೊಂದು ಕಂಡುಬಂತು. ಯಾವುದೆಂದರೆ ಕೆಟ್ಟ ಹೆಂಗಸೇ. ಅವಳ ಹೃದಯವು ಉರುಲುಗಳೂ, ಬಲೆಗಳೂ, ಅವಳ ತೋಳುಗಳು ಸಂಕೋಲೆಗಳು. ದೇವರು ಒಲಿದವನು ಅವಳಿಂದ ತಪ್ಪಿಸಿಕೊಳ್ಳುವನು. ಆದರೆ ಪಾಪಿಯು ಅವಳ ಕೈಗೆ ಸಿಕ್ಕಿಬೀಳುವನು.
و دریافتم که زنی که دلش دامها و تله‌ها است و دستهایش کمندها می‌باشد، چیز تلختر از موت است. هر‌که مقبول خدا است، از وی رستگار خواهد شد اماخطاکار گرفتار وی خواهد گردید.۲۶
27 ೨೭ ಪ್ರಸಂಗಿಯು ಹೀಗೆ ಹೇಳುತ್ತಾನೆ, “ನೋಡು, ನಾನು ಇದನ್ನು ಹುಡುಕಿ ಕಂಡುಕೊಂಡಿದ್ದೇನೆ” ಮತ್ತೊಂದು ಸಂಶೋಧನೆಯನ್ನು ಎಷ್ಟು ನಡೆಸಿದರೂ ಉತ್ತರ ಸಿಕ್ಕಲಿಲ್ಲ.
جامعه می‌گوید که اینک چون این را با آن مقابله کردم تا نتیجه را دریابم این را دریافتم،۲۷
28 ೨೮ ಸಹಸ್ರ ಪುರುಷರಲ್ಲಿ ಯೋಗ್ಯನೊಬ್ಬನನ್ನು ಕಂಡಿದ್ದರೂ ಕಂಡಿರಬಹುದು, ಆದರೆ ಸಹಸ್ರ ಸ್ತ್ರೀಯರಲ್ಲಿ ಯೋಗ್ಯಳೊಬ್ಬಳನ್ನೂ ಕಂಡಿಲ್ಲ.
که جان من تا به حال آن را جستجو می‌کند ونیافتم. یک مرد از هزار یافتم اما از جمیع آنها زنی نیافتم.۲۸
29 ೨೯ ದೇವರು ಮನುಷ್ಯರನ್ನು ಸತ್ಯವಂತನನ್ನಾಗಿ ಸೃಷ್ಟಿಸಿದನು. ಅವರಾದರೋ ಬಹು ಯುಕ್ತಿಗಳನ್ನು ಕಲ್ಪಿಸಿಕೊಂಡಿದ್ದಾರೆ. ಇದನ್ನು ಮಾತ್ರ ನಾನು ಕಂಡುಕೊಂಡಿದ್ದೇನೆ.
همانا این را فقط دریافتم که خدا آدمی را راست آفرید، اما ایشان مخترعات بسیار طلبیدند.۲۹

< ಪ್ರಸಂಗಿ 7 >