< ಪ್ರಸಂಗಿ 8 >

1 ಜ್ಞಾನಿಯ ಹಾಗೆ ಇರುವವನು ಯಾರು? ವಿಷಯವನ್ನು ವಿವರಿಸಬಲ್ಲವರು ಯಾರು? ಜ್ಞಾನದಿಂದ ಒಬ್ಬನ ಮುಖವು ಪ್ರಕಾಶಗೊಳ್ಳುವುದು, ಒರಟು ಮುಖವು ಬದಲಾಗುವುದು.
מִ֚י כְּהֶ֣חָכָ֔ם וּמִ֥י יֹודֵ֖עַ פֵּ֣שֶׁר דָּבָ֑ר חָכְמַ֤ת אָדָם֙ תָּאִ֣יר פָּנָ֔יו וְעֹ֥ז פָּנָ֖יו יְשֻׁנֶּֽא׃
2 ದೇವರ ಮೇಲೆ ಇಟ್ಟ ಆಣೆಯ ನಿಮಿತ್ತ ರಾಜನ ಆಜ್ಞೆಯನ್ನು ಕೈಕೊಳ್ಳಬೇಕೆಂಬುದು ನನ್ನ ಬೋಧನೆ.
אֲנִי֙ פִּי־מֶ֣לֶךְ שְׁמֹ֔ור וְעַ֕ל דִּבְרַ֖ת שְׁבוּעַ֥ת אֱלֹהִֽים׃
3 ಅರಸನ ಸನ್ನಿಧಿಯಿಂದ ತೊಲಗಿಬಿಡಲು ಆತುರಪಡಬೇಡ. ದ್ರೋಹಕ್ಕೆ ಸೇರದಿರು. ಅವನು ಇಷ್ಟಬಂದಂತೆ ಮಾಡಬಲ್ಲನು.
אַל־תִּבָּהֵ֤ל מִפָּנָיו֙ תֵּלֵ֔ךְ אַֽל־תַּעֲמֹ֖ד בְּדָבָ֣ר רָ֑ע כִּ֛י כָּל־אֲשֶׁ֥ר יַחְפֹּ֖ץ יַעֲשֶֽׂה׃
4 ಅರಸನ ಮಾತಿಗೆ ಅಧಿಕಾರವುಂಟು “ನೀನು ಏನು ಮಾಡುತ್ತಿರುವೆ?” ಎಂದು ಅವನನ್ನು ಯಾರು ತಾನೇ ಕೇಳಬಹುದು.
בַּאֲשֶׁ֥ר דְּבַר־מֶ֖לֶךְ שִׁלְטֹ֑ון וּמִ֥י יֹֽאמַר־לֹ֖ו מַֽה־תַּעֲשֶֽׂה׃
5 ಅರಸನ ಆಜ್ಞೆಗಳನ್ನು ಕೈಕೊಳ್ಳುವವನು ಕೇಡನ್ನು ಅನುಭವಿಸುವುದಿಲ್ಲ. ಜ್ಞಾನಿಯ ಹೃದಯವು ಕಾಲ ಮತ್ತು ನ್ಯಾಯ ಎರಡನ್ನು ತಿಳಿದುಕೊಳ್ಳುತ್ತದೆ.
שֹׁומֵ֣ר מִצְוָ֔ה לֹ֥א יֵדַ֖ע דָּבָ֣ר רָ֑ע וְעֵ֣ת וּמִשְׁפָּ֔ט יֵדַ֖ע לֵ֥ב חָכָֽם׃
6 ಪ್ರತಿಯೊಂದು ಕಾರ್ಯಕ್ಕೂ ಒಂದು ಕಾಲ ಮತ್ತು ಒಂದು ಕ್ರಮ ಇರುತ್ತದೆಯಲ್ಲವೇ, ಮನುಷ್ಯನು ಪಡುವ ಕಷ್ಟವು ಅವನಿಗೆ ಘೋರವಾಗಿದೆ.
כִּ֣י לְכָל־חֵ֔פֶץ יֵ֖שׁ עֵ֣ת וּמִשְׁפָּ֑ט כִּֽי־רָעַ֥ת הָאָדָ֖ם רַבָּ֥ה עָלָֽיו׃
7 ಮುಂದೆ ಏನಾಗುವುದು ಯಾರಿಗೂ ಗೊತ್ತಿಲ್ಲ. ಮುಂದೆ ಆಗುವುದನ್ನು ಅವನಿಗೆ ವಿವರಿಸಬಲ್ಲವರು ಯಾರು?
כִּֽי־אֵינֶ֥נּוּ יֹדֵ֖עַ מַה־שֶּׁיִּֽהְיֶ֑ה כִּ֚י כַּאֲשֶׁ֣ר יִֽהְיֶ֔ה מִ֖י יַגִּ֥יד לֹֽו׃
8 ಗಾಳಿಯನ್ನು ತಡೆಯುವ ಶಕ್ತಿಯು ಹೇಗೆ ಯಾರಿಗೂ ಇಲ್ಲವೋ, ಹಾಗೆಯೇ ತಮ್ಮ ಮರಣ ದಿನವನ್ನು ತಡೆಯುವ ಶಕ್ತಿಯು ಯಾರಿಗೂ ಇಲ್ಲ. ಯುದ್ಧ ಕಾಲದಲ್ಲಿ ಹೇಗೆ ವಿರಾಮ ದೊರೆಯುವುದಿಲ್ಲವೋ, ಹಾಗೆಯೇ ದುಷ್ಟನಿಗೆ ದುಷ್ಟತನದಿಂದ ಬಿಡುಗಡೆಯೇ ಇಲ್ಲ.
אֵ֣ין אָדָ֞ם שַׁלִּ֤יט בָּר֙וּחַ֙ לִכְלֹ֣וא אֶת־הָר֔וּחַ וְאֵ֤ין שִׁלְטֹון֙ בְּיֹ֣ום הַמָּ֔וֶת וְאֵ֥ין מִשְׁלַ֖חַת בַּמִּלְחָמָ֑ה וְלֹֽא־יְמַלֵּ֥ט רֶ֖שַׁע אֶת־בְּעָלָֽיו׃
9 ನಾನು ಇದನ್ನೆಲ್ಲಾ ನೋಡಿ, ಈ ಲೋಕದೊಳಗೆ ನಡೆಯುವ ಸಕಲ ಕಾರ್ಯಗಳನ್ನೂ ಪರಿಶೀಲಿಸಿದ್ದೇನೆ. ಒಬ್ಬ ಮನುಷ್ಯನು ಇನ್ನೊಬ್ಬನ ಮೇಲೆ ಅಧಿಕಾರ ನಡೆಸಿ ಅವನಿಗೆ ಹಾನಿಯನ್ನು ಉಂಟುಮಾಡುವ ಕಾಲವೂ ಇದೆ.
אֶת־כָּל־זֶ֤ה רָאִ֙יתִי֙ וְנָתֹ֣ון אֶת־לִבִּ֔י לְכָֽל־מַעֲשֶׂ֔ה אֲשֶׁ֥ר נַעֲשָׂ֖ה תַּ֣חַת הַשָּׁ֑מֶשׁ עֵ֗ת אֲשֶׁ֨ר שָׁלַ֧ט הָאָדָ֛ם בְּאָדָ֖ם לְרַ֥ע לֹֽו׃
10 ೧೦ ಇದಲ್ಲದೆ ದುಷ್ಟರಿಗೆ ಸಮಾಧಿಯಾಗುವುದನ್ನು ಕಂಡೆನು. ಅವರು ಸುಖವಾಗಿ ಗತಿಸುವರು. ಧಾರ್ಮಿಕರೋ ಪರಿಶುದ್ಧ ಸ್ಥಾನದಿಂದ ತೊಲಗಬೇಕಾಯಿತು. ಪಟ್ಟಣದಲ್ಲಿ ಅವರ ಜ್ಞಾಪಕವೇ ಇಲ್ಲವಾಯಿತು. ಇದೂ ವ್ಯರ್ಥವೇ.
וּבְכֵ֡ן רָאִיתִי֩ רְשָׁעִ֨ים קְבֻרִ֜ים וָבָ֗אוּ וּמִמְּקֹ֤ום קָדֹושׁ֙ יְהַלֵּ֔כוּ וְיִֽשְׁתַּכְּח֥וּ בָעִ֖יר אֲשֶׁ֣ר כֵּן־עָשׂ֑וּ גַּם־זֶ֖ה הָֽבֶל׃
11 ೧೧ ಅಪರಾಧಕ್ಕೆ ವಿಧಿಸಿದ ದಂಡನೆಯು ಕೂಡಲೇ ನಡೆಯದಿರುವ ಕಾರಣ ಅಪರಾಧ ಮಾಡಬೇಕೆಂಬ ಯೋಚನೆಯು ಮನುಷ್ಯರ ಹೃದಯದಲ್ಲಿ ತುಂಬಿ ತುಳುಕುವುದು.
אֲשֶׁר֙ אֵין־נַעֲשָׂ֣ה פִתְגָ֔ם מַעֲשֵׂ֥ה הָרָעָ֖ה מְהֵרָ֑ה עַל־כֵּ֡ן מָלֵ֞א לֵ֧ב בְּֽנֵי־הָאָדָ֛ם בָּהֶ֖ם לַעֲשֹׂ֥ות רָֽע׃
12 ೧೨ ಪಾಪಿಯು ನೂರು ಸಲ ಅಧರ್ಮ ಮಾಡಿ ಬಹು ಕಾಲ ಬದುಕಿದರೂ, ದೇವರ ಮುಂದೆ ಹೆದರಿ, ಆತನಲ್ಲಿ ಭಯಭಕ್ತಿಯುಳ್ಳವರಿಗೆ ಒಳ್ಳೆಯದೇ ಆಗುವುದೆಂದು ಬಲ್ಲೆನು.
אֲשֶׁ֣ר חֹטֶ֗א עֹשֶׂ֥ה רָ֛ע מְאַ֖ת וּמַאֲרִ֣יךְ לֹ֑ו כִּ֚י גַּם־יֹודֵ֣עַ אָ֔נִי אֲשֶׁ֤ר יִהְיֶה־טֹּוב֙ לְיִרְאֵ֣י הָאֱלֹהִ֔ים אֲשֶׁ֥ר יִֽירְא֖וּ מִלְּפָנָֽיו׃
13 ೧೩ ಆದರೆ ದುಷ್ಟನಿಗೆ ಒಳ್ಳೆಯದಾಗುವುದಿಲ್ಲ. ನೆರಳಿನಂತಿರುವ ಅವನ ದಿನಗಳು ಹೆಚ್ಚುವುದಿಲ್ಲ. ಏಕೆಂದರೆ ಅವನು ದೇವರಿಗೆ ಭಯಪಡುವುದಿಲ್ಲ.
וְטֹוב֙ לֹֽא־יִהְיֶ֣ה לָֽרָשָׁ֔ע וְלֹֽא־יַאֲרִ֥יךְ יָמִ֖ים כַּצֵּ֑ל אֲשֶׁ֛ר אֵינֶ֥נּוּ יָרֵ֖א מִלִּפְנֵ֥י אֱלֹהִֽים׃
14 ೧೪ ಲೋಕದಲ್ಲಿ ನಡೆಯುವ ವ್ಯರ್ಥಕಾರ್ಯವು ಒಂದುಂಟು. ದುಷ್ಟರ ನಡತೆಗೆ ತಕ್ಕ ಗತಿಯು ಶಿಷ್ಟನಿಗೆ ಆಗುವುದು. ಶಿಷ್ಟರ ನಡತೆಗೆ ತಕ್ಕ ಗತಿಯು ದುಷ್ಟರಿಗೆ ಆಗುವುದು. ಇದು ವ್ಯರ್ಥವೆಂದು ನಾನು ಹೇಳಿದೆನು.
יֶשׁ־הֶבֶל֮ אֲשֶׁ֣ר נַעֲשָׂ֣ה עַל־הָאָרֶץ֒ אֲשֶׁ֣ר ׀ יֵ֣שׁ צַדִּיקִ֗ים אֲשֶׁ֨ר מַגִּ֤יעַ אֲלֵהֶם֙ כְּמַעֲשֵׂ֣ה הָרְשָׁעִ֔ים וְיֵ֣שׁ רְשָׁעִ֔ים שֶׁמַּגִּ֥יעַ אֲלֵהֶ֖ם כְּמַעֲשֵׂ֣ה הַצַּדִּיקִ֑ים אָמַ֕רְתִּי שֶׁגַּם־זֶ֖ה הָֽבֶל׃
15 ೧೫ ಆದುದರಿಂದಲೇ ನಾನು ಸಂತೋಷವನ್ನು ಹೊಗಳಿದೆನು. ಏಕೆಂದರೆ ಮನುಷ್ಯನಿಗೆ ಲೋಕದಲ್ಲಿ ಕುಡಿಯುವುದೂ, ತಿನ್ನುವುದೂ, ಸಂತೋಷಪಡುವುದೇ ಹೊರತು ಬೇರೇನೂ ಒಳ್ಳೆಯದು ಇಲ್ಲ. ಲೋಕದಲ್ಲಿ ದೇವರು ಅವನಿಗೆ ಅನುಗ್ರಹಿಸುವ ದಿನಗಳಲ್ಲಿ ಅವನು ಪಡುವ ಪ್ರಯಾಸದಲ್ಲಿ ಸಂತೋಷವೇ ಸೇರಿರುವುದು.
וְשִׁבַּ֤חְתִּֽי אֲנִי֙ אֶת־הַשִּׂמְחָ֔ה אֲשֶׁ֨ר אֵֽין־טֹ֤וב לָֽאָדָם֙ תַּ֣חַת הַשֶּׁ֔מֶשׁ כִּ֛י אִם־לֶאֱכֹ֥ול וְלִשְׁתֹּ֖ות וְלִשְׂמֹ֑וחַ וְה֞וּא יִלְוֶ֣נּוּ בַעֲמָלֹ֗ו יְמֵ֥י חַיָּ֛יו אֲשֶׁר־נָֽתַן־לֹ֥ו הָאֱלֹהִ֖ים תַּ֥חַת הַשָּֽׁמֶשׁ׃
16 ೧೬ ನಾನು ನನ್ನ ಹೃದಯದಲ್ಲಿ ಜ್ಞಾನವನ್ನು ಪಡೆಯಲು, ಲೋಕದಲ್ಲಿ ನಡೆಯುವುದನ್ನು ಅರಿತುಕೊಳ್ಳಲು ಪ್ರಯತ್ನಿಸಿದಾಗ, ನಾನು ಕಂಡುಕೊಂಡ ಸಂಗತಿಯೇನೆಂದರೆ, “ಒಬ್ಬನು ರಾತ್ರಿಹಗಲು ಕಣ್ಣುಗಳಿಗೆ ನಿದ್ರೆಕೊಡದೆ ಕೆಲಸ ಮಾಡಿದರೂ,
כַּאֲשֶׁ֨ר נָתַ֤תִּי אֶת־לִבִּי֙ לָדַ֣עַת חָכְמָ֔ה וְלִרְאֹות֙ אֶת־הָ֣עִנְיָ֔ן אֲשֶׁ֥ר נַעֲשָׂ֖ה עַל־הָאָ֑רֶץ כִּ֣י גַ֤ם בַּיֹּום֙ וּבַלַּ֔יְלָה שֵׁנָ֕ה בְּעֵינָ֖יו אֵינֶ֥נּוּ רֹאֶֽה׃
17 ೧೭ ದೇವರ ಎಲ್ಲಾ ಕಾರ್ಯಗಳನ್ನೂ ಮತ್ತು ಲೋಕದಲ್ಲಿ ಮಾಡುವ ಕೆಲಸಗಳನ್ನೂ ಮನುಷ್ಯನು ಗ್ರಹಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಮನುಷ್ಯನು ಅದನ್ನು ಹುಡುಕುವುದಕ್ಕೆ ಎಷ್ಟು ಪ್ರಯಾಸಪಟ್ಟರೂ ಅದನ್ನು ಕಂಡುಕೊಳ್ಳಲಾರನು. ಹೌದು, ಜ್ಞಾನಿಯು ಅದನ್ನು ಗ್ರಹಿಸಿಕೊಳ್ಳಲು ಯೋಚಿಸಿದರೂ ಅವನು ಅದನ್ನು ಗ್ರಹಿಸಲಾರನು.”
וְרָאִיתִי֮ אֶת־כָּל־מַעֲשֵׂ֣ה הָאֱלֹהִים֒ כִּי֩ לֹ֨א יוּכַ֜ל הָאָדָ֗ם לִמְצֹוא֙ אֶת־הַֽמַּעֲשֶׂה֙ אֲשֶׁ֣ר נַעֲשָׂ֣ה תַֽחַת־הַשֶּׁ֔מֶשׁ בְּ֠שֶׁל אֲשֶׁ֨ר יַעֲמֹ֧ל הָאָדָ֛ם לְבַקֵּ֖שׁ וְלֹ֣א יִמְצָ֑א וְגַ֨ם אִם־יֹאמַ֤ר הֶֽחָכָם֙ לָדַ֔עַת לֹ֥א יוּכַ֖ל לִמְצֹֽא׃

< ಪ್ರಸಂಗಿ 8 >