< ಎಫೆಸದವರಿಗೆ ಬರೆದ ಪತ್ರಿಕೆ 5 >

1 ಆದುದರಿಂದ ದೇವರ ಪ್ರಿಯರಾದ ಮಕ್ಕಳಿಗೆ ತಕ್ಕ ಹಾಗೆ ಆತನನ್ನು ಅನುಸರಿಸುವವರಾಗಿರಿ.
Bodite torej posnemalci Bogá, kakor otroci ljubljeni,
2 ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮ್ಮೆಲ್ಲರಿಗೋಸ್ಕರ ತನ್ನನ್ನೇ ದೇವರಿಗೆ ಸುವಾಸನೆಯಾದ ಕಾಣಿಕೆಯಾಗಿಯೂ, ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.
In živite v ljubezni, kakor je tudi Kristus ljubil nas, in se je dal za nas kakor daritev in žrtev Bogu v prijetno dišavo.
3 ಜಾರತ್ವ ಮತ್ತು ಯಾವ ವಿಧವಾದ ಅಶುದ್ಧತ್ವ ಅಥವಾ ದ್ರವ್ಯಾಶೆ ಇವುಗಳ ಸುದ್ದಿಯಾದರೂ ನಿಮ್ಮಲ್ಲಿ ಇರಬಾರದು, ಇವುಗಳಿಗೆ ದೂರವಾಗಿರುವುದೇ ದೇವಜನರಿಗೆ ಯೋಗ್ಯವಾದದ್ದು.
Kurbarija pa in sleherna nečistost ali lakomnost naj se še imenuje ne med vami, kakor se spodobi svetim;
4 ಹೊಲಸು ಮಾತು, ಹುಚ್ಚು ಮಾತು, ಕುಚೋದ್ಯ ಇವು ಬೇಡ. ಇವು ಅಯುಕ್ತವಾಗಿವೆ. ಆದರೆ ಇವುಗಳಿಗೆ ಪ್ರತಿಯಾಗಿ ದೇವರಿಗೆ ಕೃತಜ್ಞತಾಸ್ತುತಿಮಾಡಿರಿ.
In nesramnost in blebetanje ali norčevanje, kar je nespodobno, temveč zahvaljevanje.
5 ಜಾರನಿಗಾಗಲಿ, ದುರಾಚಾರಿಗಾಗಲಿ, ವಿಗ್ರಹಾರಾಧಕನಾಗಿರುವ ಲೋಭಿಗಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯತೆ ಇಲ್ಲವೆಂದು ನಿಮಗೆ ನಿಶ್ಚಯವಾಗಿ ತಿಳಿದಿರಲಿ.
To namreč veste, da nobeden kurbir, ali nečistnik, ali lakomnik, kateri je malikovalec, nima dedščine v kraljestvu Kristusovem in Božjem;
6 ಹುರುಳಿಲ್ಲದ ಮಾತುಗಳಿಂದ ಯಾರು ನಿಮ್ಮನ್ನು ವಂಚಿಸದಿರಲಿ, ಇಂಥ ಕೃತ್ಯಗಳ ನಿಮಿತ್ತ ದೇವರ ಕೋಪವು ಆತನಿಗೆ ಅವಿಧೇಯರಾಗಿರುವವರ ಮೇಲೆ ಬರುತ್ತದೆ.
Nihče vas ne varaj s praznimi besedami; kajti za to prihaja jeza Božja na nepokorščine sinove.
7 ಆದುದರಿಂದ ನೀವು ಅವರೊಂದಿಗೆ ಪಾಲುಗಾರರಾಗಿರಬೇಡಿರಿ.
Ne bodite torej deležniki njih!
8 ಏಕೆಂದರೆ ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕರ್ತನಲ್ಲಿದ್ದು ಬೆಳಕಾಗಿದ್ದೀರಿ. ಬೆಳಕಿನವರಂತೆ ನಡೆದುಕೊಳ್ಳಿರಿ.
Bili ste namreč nekdaj temà, zdaj pa svetloba Gospodu: kakor svetlobe otroci živite;
9 ಬೆಳಕಿನ ಫಲವು ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯದಲ್ಲಿಯೂ ಕಾಣಿಸಿಕೊಳ್ಳುತ್ತದೆ.
(Kajti sad Duha je v sleherni dobroti in pravičnosti in resnici);
10 ೧೦ ಕರ್ತನಿಗೆ ಮೆಚ್ಚಿಕೆಯಾದದ್ದು ಏನೆಂಬುದನ್ನು ಪರಿಶೋಧಿಸಿ ತಿಳಿದುಕೊಳ್ಳಿರಿ.
In presojajte, kaj je po volji Gospodu.
11 ೧೧ ನಿಷ್ಪ್ರಯೋಜಕವಾದ ಕತ್ತಲೆಯ ಕೃತ್ಯಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಬಯಲಿಗೆಳೆದು ಖಂಡಿಸಿರಿ.
In ne udeležujte se nerodovitnih del temé; temveč še grajajte jih;
12 ೧೨ ಆ ಜನರು ರಹಸ್ಯವಾಗಿ ನಡಿಸುವ ಕೆಲಸಗಳನ್ನು ಕುರಿತು ಹೇಳುವುದಕ್ಕೂ ಅವಮಾನಕರವಾಗಿದೆ.
Kar namreč skrivàj počenjajo, grdó je praviti samo.
13 ೧೩ ಬೆಳಕಿನಿಂದ ಎಲ್ಲಾ ಕೃತ್ಯಗಳ ನಿಜಗುಣ ಬಹಿರಂಗವಾಗುತ್ತದೆ. ಯಾಕೆಂದರೆ ಎಲ್ಲಾವನ್ನೂ ಬಹಿರಂಗಪಡಿಸುವಂಥದ್ದು ಬೆಳಕೇ.
Vse to pa, kar graja svetloba, razodene se; kajti vse razodeto je svetloba;
14 ೧೪ ಆದ್ದರಿಂದ, “ನಿದ್ರೆ ಮಾಡುವವನೇ, ಎಚ್ಚರವಾಗು! ಸತ್ತವರನ್ನು ಬಿಟ್ಟು ಏಳು! ಆಗ ಕ್ರಿಸ್ತನು ನಿನ್ನಲ್ಲಿ ಪ್ರಕಾಶಿಸುವನು” ಎಂದು ಹೇಳಿಯದೆಯಲ್ಲಾ.
Za to pravi: "Zbúdi se, ki spiš, in vstani izmed mrtvih, in prisvetil ti bode Kristus."
15 ೧೫ ಆದಕಾರಣ ನೀವು ನಡೆದುಕೊಳ್ಳುವ ರೀತಿಯನ್ನು ಕುರಿತು ಚೆನ್ನಾಗಿ ನೋಡಿಕೊಳ್ಳಿರಿ. ಅಜ್ಞಾನಿಗಳಾಗಿರದೆ ಜ್ಞಾನವಂತರಾಗಿರಿ.
Glejte torej, da živite skrbno, ne kakor ne modri, nego kakor modri;
16 ೧೬ ಈ ದಿನಗಳು ಕೆಡುಕಿನಿಂದ ಕೂಡಿದವುಗಳಾಗಿರುವುದ್ದರಿಂದ ಕಾಲವನ್ನು ಸದುಪಯೋಗಪಡಿಸಿಕೊಳ್ಳಿರಿ.
In skrbno rabite čas, ker dnevi so hudi.
17 ೧೭ ಮತ್ತು ಬುದ್ಧಿಹೀನರಾಗಿ ನಡೆಯದೆ ಕರ್ತನ ಚಿತ್ತವೇನೆಂಬುದನ್ನು ತಿಳಿದುಕೊಳ್ಳಿರಿ.
Zatorej ne bodite nespametni, nego umeči, kaj je volja Gospodova.
18 ೧೮ ಮದ್ಯಪಾನ ಮಾಡಿ ಮತ್ತರಾಗಬೇಡಿರಿ. ಅದರಿಂದ ಪಟಿಂಗತನವು ಹುಟ್ಟುತ್ತದೆ. ಆದರೆ ಪವಿತ್ರಾತ್ಮಭರಿತರಾಗಿದ್ದು,
In ne upijanjajte se z vinom, v katerem je zapravljivost, temuč napolnjujte se v Duhu,
19 ೧೯ ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ, ಆತ್ಮೀಕ ಹಾಡುಗಳಿಂದಲೂ ಒಬ್ಬರಿಗೊಬ್ಬರು ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯಗಳಲ್ಲಿ ಕರ್ತನನ್ನು ಹಾಡಿ ಕೊಂಡಾಡಿರಿ.
Govoreč med seboj v psalmih, slavospevih in pesmah duhovnih, pojóč in prepevajoč v srcu svojem Gospodu,
20 ೨೦ ಯಾವಾಗಲೂ ಎಲ್ಲಾ ಕಾರ್ಯಗಳಿಗಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ತಂದೆಯಾದ ದೇವರಿಗೆ ಸ್ತೋತ್ರವನ್ನು ಮಾಡಿರಿ.
Zahvaljujoč se vedno za vse v imenu Gospoda našega Jezusa Kristusa Bogu in očetu,
21 ೨೧ ಕ್ರಿಸ್ತನಿಗೆ ಭಯಪಡುವವರಾಗಿದ್ದು, ಒಬ್ಬರಿಗೊಬ್ಬರು ವಿನಯವುಳ್ಳವರಾಗಿ ನಡೆದುಕೊಳ್ಳಿರಿ.
Pokorni si med seboj v strahu Božjem.
22 ೨೨ ಸತಿಯರೇ, ನೀವು ಕರ್ತನಿಗೆ ಹೇಗೋ ಹಾಗೆಯೇ ನಿಮ್ಮ ಗಂಡಂದಿರಿಗೆ ಅಧೀನರಾಗಿರಿ.
Žene, svojim možém bodite pokorne, kakor Gospodu;
23 ೨೩ ಕ್ರಿಸ್ತನು ಸಭೆಗೆ ತಲೆಯಾಗಿರುವ ಪ್ರಕಾರವೇ ಗಂಡನು ಹೆಂಡತಿಗೆ ತಲೆಯಾಗಿದ್ದಾನೆ. ಕ್ರಿಸ್ತನು ತಾನೇ ಸಭೆಯೆಂಬ ದೇಹಕ್ಕೆ ರಕ್ಷಕನಾಗಿದ್ದಾನೆ.
Kajti mož je glava ženi, kakor tudi Kristus glava občini, in on je rešenik telesa.
24 ೨೪ ಸಭೆಯು ಕ್ರಿಸ್ತನಿಗೆ ಹೇಗೆ ಅಧೀನವಾಗಿದೆಯೋ ಹಾಗೆಯೇ ಸ್ತ್ರೀಯರು ತಮ್ಮ ಗಂಡಂದಿರಿಗೆ ಎಲ್ಲಾ ವಿಷಯಗಳಲ್ಲಿ ಅಧೀನರಾಗಿರಬೇಕು.
Ali kakor je občina pokorna Kristusu, tako tudi žene svojim možém v vsem.
25 ೨೫ ಪತಿಯರೇ, ಕ್ರಿಸ್ತನು ಸಭೆಯನ್ನು ಪ್ರೀತಿಸಿದ ಪ್ರಕಾರವೇ ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ.
Možje, ljubite žene svoje, kakor je tudi Kristus ljubil občino, in je sebe dal zanjo,
26 ೨೬ ಆತನು ಅದನ್ನು ಪಾವನಗೊಳಿಸುವುದಕ್ಕಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು.
Da jo posveti, očistivši v kopelji vode v besedi,
27 ೨೭ ಅದನ್ನು ಕಳಂಕ ಸುಕ್ಕು ಮುಂತಾದದ್ದೊಂದೂ ಇಲ್ಲದಂತೆ ಪರಿಶುದ್ಧವೂ, ನಿರ್ದೋಷವೂ, ಮಹಿಮೆಯುಳ್ಳದ್ದೂ ಆಗಿರುವ ಸಭೆಯನ್ನಾಗಿ ತನ್ನೆದುರಿನಲ್ಲಿ ನಿಲ್ಲಿಸಿಕೊಳ್ಳಬೇಕೆಂದು ವಾಕ್ಯೋಪದೇಶ ಸಹಿತವಾದ ಜಲಸ್ನಾನವನ್ನು ಮಾಡಿಸಿ ಶುದ್ಧಿಮಾಡಿದನು.
Da si jo pripravi slavno občino, brez madeža ali gube ali kaj enakega, nego da bode sveta in brezmadežna.
28 ೨೮ ಹಾಗೆಯೇ ಗಂಡದಿರು ಸಹ ತಮ್ಮ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವ ಪ್ರಕಾರವೇ ತಮ್ಮ ಹೆಂಡತಿಯರನ್ನು ಪ್ರೀತಿಸುವ ಹಂಗಿನವರಾಗಿದ್ದಾರೆ. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೇ ಪ್ರೀತಿಸಿಕೊಳ್ಳುವವನಾಗಿದ್ದಾನೆ.
Tako so možjé dolžni ljubiti žene, kakor telesa svoja. Kdor ljubi ženo svojo, ljubi sebe;
29 ೨೯ ಯಾರೂ ಎಂದೂ ಸ್ವಂತ ಶರೀರವನ್ನು ಹಗೆಮಾಡಿದ್ದಿಲ್ಲವಲ್ಲ, ಎಲ್ಲರೂ ತಮ್ಮ ಶರೀರಗಳನ್ನು ಪೋಷಿಸಿ ಪಾಲನೆ ಮಾಡುತ್ತಾರಷ್ಟೇ.
Kajti nihče ni nikoli sovražil svojega mesa, nego hrani in goji ga, kakor tudi Gospod občino;
30 ೩೦ ಸಭೆಯೆಂಬ ದೇಹಕ್ಕೆ ನಾವು ಅಂಗಗಳಾಗಿದ್ದೇವೆ ಸಭೆಯೆಂಬ ಈ ದೇಹವನ್ನು ಕ್ರಿಸ್ತನು ಹಾಗೆಯೇ ಪೋಷಿಸಿ ಪಾಲನೆ ಮಾಡುತ್ತಾ ಬಂದಿದ್ದಾನೆ.
Ker udje smo telesa njegovega, iz mesa njegovega in iz kosti njegovih.
31 ೩೧ “ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು, ಅವರಿಬ್ಬರೂ ಒಂದೇ ಶರೀರವಾಗಿರುವರು.” ಎಂದು ಬರೆದದೆಯಲ್ಲಾ.
"Za to bode človek zapustil očeta svojega in mater in držal se žene svoje, in oba bodeta v eno meso."
32 ೩೨ ನಾನು ಕ್ರಿಸ್ತನಿಗೂ ಸಭೆಗೂ ಇರುವ ಸಂಬಂಧವನ್ನು ಕುರಿತು ಮಾತನಾಡುತ್ತಿದ್ದೇನೆ, ಇದುವರೆಗೆ ಗುಪ್ತವಾಗಿದ್ದ ಈ ಮರ್ಮವು ಬಹು ಗಂಭೀರವಾದದ್ದು.
Ta skrivnost je velika; jaz pa pravim za Kristusa in za občino.
33 ೩೩ ಆದರೆ ನಿಮ್ಮಲ್ಲಿ ಪ್ರತಿ ಪುರುಷನು ತನ್ನನ್ನು ಪ್ರೀತಿಸಿಕೊಳ್ಳುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು. ಪ್ರತಿ ಹೆಂಡತಿಯೂ ತನ್ನ ಗಂಡನಿಗೆ ಗೌರವದಿಂದ ನಡೆದುಕೊಳ್ಳಬೇಕು.
Ali tudi vi posamezni, vsak naj ljubi ženo svojo tako kakor sebe; žena pa bój se moža.

< ಎಫೆಸದವರಿಗೆ ಬರೆದ ಪತ್ರಿಕೆ 5 >