< ಎಸ್ತೇರಳು 5 >

1 ಮೂರನೆಯ ದಿನದಲ್ಲಿ ಎಸ್ತೇರಳು ರಾಜವಸ್ತ್ರಭೂಷಿತಳಾಗಿ ಅರಮನೆಯ ಒಳಗಣ ಪ್ರಾಕಾರವನ್ನು ಪ್ರವೇಶಿಸಿ, ರಾಜಮಂದಿರದ ಎದುರಿನಲ್ಲಿ ನಿಂತಳು. ಅರಸನು ಆ ಮಂದಿರದಲ್ಲಿ ರಾಜಸಿಂಹಾಸನದ ಮೇಲೆ ಬಾಗಿಲಿಗೆ ಎದುರಾಗಿ ಕುಳಿತುಕೊಂಡಿದ್ದನು.
Stalo se potom dne třetího, oblékši se Ester v roucho královské, postavila se v síni vnitřní domu královského, naproti pokoji královskému. Král pak seděl na stolici své královské, v pokoji královském naproti dveřím domu.
2 ಅವನು ಪ್ರಾಕಾರದಲ್ಲಿ ನಿಂತಿರುವ ಎಸ್ತೇರ್ ರಾಣಿಯನ್ನು ಕಂಡ ಕೂಡಲೆ ಆಕೆಯ ಮೇಲೆ ದಯವಿಟ್ಟು ತನ್ನ ಕೈಯಲ್ಲಿದ್ದ ಸುವರ್ಣದಂಡವನ್ನು ಆಕೆಯ ಕಡೆಗೆ ಚಾಚಿದನು.
Stalo se, pravím, když uzřel král Ester královnu, ana stojí v síni, že milostí jsa k ní nakloněn, vztáhl král k Ester berlu zlatou, kterouž držel v ruce své. Tedy přistoupivši Ester, dotkla se konce berly.
3 ಎಸ್ತೇರಳು ಅರಸನ ಸಮೀಪಕ್ಕೆ ಹೋಗಿ ದಂಡದ ತುದಿಯನ್ನು ಮುಟ್ಟಿದಳು. ಆಗ ಅರಸನು ಆಕೆಗೆ, “ಎಸ್ತೇರ್ ರಾಣಿಯೇ, ನಿನಗೇನು ಬೇಕು? ನಿನ್ನ ವಿಜ್ಞಾಪನೆ ಯಾವುದು? ನನ್ನ ಅರ್ಧರಾಜ್ಯವನ್ನು ಕೇಳಿದರೂ ನಿನಗೆ ಕೊಡುತ್ತೇನೆ” ಅಂದನು.
I řekl jí král: Co jest tobě, královno Ester? A jaká jest prosba tvá? Až do polovice království dáno bude tobě.
4 ಅದಕ್ಕೆ ಎಸ್ತೇರಳು, “ಅರಸನು ಒಪ್ಪುವುದಾದರೆ ನಾನು ಈಹೊತ್ತು ತಮಗೋಸ್ಕರ ಸಿದ್ಧಮಾಡಿಸಿರುವ ಔತಣಕ್ಕೆ ಹಾಮಾನನೊಡನೆ ಬರೋಣವಾಗಲಿ” ಎಂದು ಅರಿಕೆಮಾಡಿದಳು.
Odpověděla Ester: Jestliže se králi za dobré vidí, nechať přijde král s Amanem dnes na hody, kteréž jsem jemu připravila.
5 ಕೂಡಲೆ ಅರಸನು, “ಎಸ್ತೇರಳ ವಿಜ್ಞಾಪನೆಯನ್ನು ನೆರವೇರಿಸುವುದಕ್ಕೆ ಹಾಮಾನನನ್ನು ಕರೆದುಕೊಂಡು ಬನ್ನಿರಿ” ಎಂದು ಅಪ್ಪಣೆಮಾಡಿ ಎಸ್ತೇರಳು ಮಾಡಿಸಿದ್ದ ಔತಣಕ್ಕೆ ಹಾಮಾನನ ಜೊತೆಯಲ್ಲಿ ಹೋದನು.
I řekl král: Zavolejte rychle Amana, ať naplní žádost Estery. A tak přišel král s Amanem na hody, kteréž byla připravila Ester.
6 ದ್ರಾಕ್ಷಾರಸ ಪಾನಮಾಡುವಾಗ ಅರಸನು ತಿರುಗಿ ಎಸ್ತೇರಳಿಗೆ, “ನಿನ್ನ ವಿಜ್ಞಾಪನೆ ಯಾವುದು ಹೇಳು; ಅದನ್ನು ನೆರವೇರಿಸುವೆನು. ನೀನು ನನ್ನ ಅರ್ಧರಾಜ್ಯವನ್ನು ಕೇಳಿಕೊಂಡರೂ ಸರಿಯೇ, ಅದನ್ನು ನಿನಗೆ ಕೊಡುವೆನು” ಅಂದನು.
Potom řekl král k Ester, napiv se vína. Jaká jest žádost tvá? A budeť dáno. Aneb jaká jest prosba tvá? Bys pak žádala až do polovice království, staneť se.
7 ಅದಕ್ಕೆ ಎಸ್ತೇರಳು, “ಅರಸನು ನನ್ನ ಮೇಲೆ ಕಟಾಕ್ಷವಿಟ್ಟು ನಾನು ಕೇಳುವುದನ್ನು ಕೊಡುವುದಕ್ಕೂ ನನ್ನ ವಿಜ್ಞಾಪನೆಯನ್ನು ನೆರವೇರಿಸುವುದಕ್ಕೂ ಮನಸ್ಸುಳ್ಳವರಾಗಿದ್ದರೆ
I odpověděla Ester: Žádost má a prosba má jest:
8 ನಾನು ತಮಗೋಸ್ಕರ ಸಿದ್ಧಮಾಡಿಸುವ ಔತಣಕ್ಕೆ ನಾಳೆಯೂ ಹಾಮಾನನ ಜೊತೆಯಲ್ಲಿ ಬರೋಣವಾಗಲಿ; ಆಗ ಅರಸರು ಹೇಳಿದಂತೆ ಮಾಡುವೆನು. ಇದೇ ನನ್ನ ಮನವಿ” ಎಂದು ಉತ್ತರಕೊಟ್ಟಳು.
Nalezla-li jsem milost u krále, a jestliže se králi za dobré vidí povoliti žádosti mé, a naplniti prosbu mou, aby ještě přišel král i Aman na hody, kteréž jim připravím, a zítra učiním podlé slova královského.
9 ಆ ದಿನ ಹಾಮಾನನು ಆನಂದಲಹರಿಯಲ್ಲಿ ಮನೆಗೆ ಹೋಗುತ್ತಿರುವಾಗ ಮೊರ್ದೆಕೈಯು ತನಗೆ ಭಯಪಡದೆ, ತನ್ನ ಮುಂದೆ ಏಳದೆ ಅರಮನೆಯ ಹೆಬ್ಬಾಗಿಲಿನಲ್ಲಿ ಕುಳಿತಿರುವುದನ್ನು ಕಂಡು ಅವನ ಮೇಲೆ ಕೋಪಭರಿತನಾದನು.
A tak vyšel Aman dne toho, vesel jsa a dobré mysli. Ale když viděl Aman Mardochea v bráně královské, že ani nepovstal, ani se nehnul před ním, naplněn jest Aman hněvem proti Mardocheovi.
10 ೧೦ ಆದರೂ ತನ್ನ ಕೋಪವನ್ನು ಬಿಗಿಹಿಡಿದುಕೊಂಡು ಮನೆಗೆ ಹೋಗಿ ತನ್ನ ಆಪ್ತರನ್ನೂ, ಪತ್ನಿಯಾದ ಜೆರೆಷಳನ್ನೂ ಕರೆದನು.
A však zdržel se Aman, až přišel do domu svého, a poslav, povolal přátel svých a Zeres ženy své.
11 ೧೧ ಅವರ ಮುಂದೆ ತನ್ನ ಘನೈಶ್ವರ್ಯಗಳನ್ನೂ, ಪುತ್ರಲಾಭಾತಿಶಯವನ್ನೂ, ಅರಸನು ತನ್ನನ್ನು ಸನ್ಮಾನಿಸಿ ಎಲ್ಲಾ ಸರದಾರರಿಗಿಂತ, ರಾಜಸೇವಕರಿಗಿಂತ ತನಗೇ ಶ್ರೇಷ್ಠಸ್ಥಾನವನ್ನು ಅನುಗ್ರಹಿಸಿದ್ದನ್ನೂ ವರ್ಣಿಸಿ,
I vypravoval jim Aman o slávě bohatství svého, i o množství synů svých, i o všem, čímž ho zvelebil král, a jak ho vyvýšil nad knížata i služebníky královské.
12 ೧೨ “ಇದಲ್ಲದೆ ಎಸ್ತೇರ್ ರಾಣಿಯು ತಾನು ಸಿದ್ಧಮಾಡಿಸಿದ ಔತಣಕ್ಕೆ ಅರಸನ ಜೊತೆಯಲ್ಲಿ ನನ್ನ ಹೊರತಾಗಿ ಇನ್ನಾರನ್ನೂ ಆಹ್ವಾನಿಸಲಿಲ್ಲ. ನಾಳೆಯೂ ಅರಸನ ಜೊತೆಯಲ್ಲಿ ಬರಬೇಕೆಂದು ನನಗೆ ಹೇಳಿದ್ದಾಳೆ.
A doložil Aman: Nadto nepozvala Ester královna s králem na hody, kteréž byla připravila jen mne, a ještě i k zejtří pozván jsem od ní s králem.
13 ೧೩ ಆದರೂ ಮೊರ್ದೆಕೈ ಎಂಬ ಯೆಹೂದ್ಯನು ಅರಮನೆಯ ಬಾಗಿಲಿನಲ್ಲಿ ನನ್ನ ಕಣ್ಣ ಮುಂದೆ ಕುಳಿತಿರುವವರೆಗೂ ಇದೆಲ್ಲದರಿಂದ ನನಗೆ ತೃಪ್ತಿಯಾಗುವುದಿಲ್ಲ” ಅಂದನು.
Ale všecko to nic mi neprospívá, pokudžkoli vídám Mardochea, toho Žida, sedati u brány královské.
14 ೧೪ ಅದಕ್ಕೆ ಅವನ ಪತ್ನಿಯಾದ ಜೆರೆಷಳೂ ಅವನ ಎಲ್ಲಾ ಆಪ್ತರೂ, “ಐವತ್ತು ಮೊಳ ಎತ್ತರವಾದ ಒಂದು ಗಲ್ಲುಗಂಬವನ್ನು ಸಿದ್ಧಮಾಡಿಸಿ ನಾಳೆ ಅರಸನ ಅಪ್ಪಣೆಯನ್ನು ಪಡೆದುಕೊಂಡು ಮೊರ್ದೆಕೈಯನ್ನು ಅದಕ್ಕೆ ನೇತುಹಾಕಿಸಬೇಕು; ಆ ಮೇಲೆ ನೀನು ಸಂತೋಷದಿಂದ ಅರಸನ ಜೊತೆಯಲ್ಲಿ ಔತಣಕ್ಕೆ ಹೋಗಬಹುದು” ಎಂದು ಹೇಳಿದರು. ಹಾಮಾನನು ಈ ಮಾತಿಗೆ ಮೆಚ್ಚಿ ಗಲ್ಲುಗಂಬವನ್ನು ಸಿದ್ಧಮಾಡಿಸಿದನು.
Řekla jemu Zeres žena jeho, i všickni přátelé jeho: Nechť udělají šibenici zvýši padesáti loket, a ráno rci králi, aby na ní oběsili Mardochea, a vejdi s králem na hody vesele. I líbila se ta rada Amanovi, a rozkázal postaviti šibenici.

< ಎಸ್ತೇರಳು 5 >