< ಎಸ್ತೇರಳು 7 >

1 ಅರಸನು ಹಾಮಾನನೊಡನೆ ಎಸ್ತೇರಳ ಮನೆಗೆ ಔತಣಕ್ಕಾಗಿ ಬಂದನು.
I tako doðe car i Aman na objed carici Jestiri.
2 ಅವನು ಈ ಎರಡನೆಯ ದಿನದಲ್ಲಿಯೂ ದ್ರಾಕ್ಷಾರಸ ಪಾನಮಾಡುತ್ತಿರುವಾಗ ಅರಸನು ಎಸ್ತೇರಳಿಗೆ, “ಎಸ್ತೇರ್ ರಾಣಿಯೇ, ನಿನ್ನ ವಿಜ್ಞಾಪನೆ ಯಾವುದು ಹೇಳು; ಅದನ್ನು ನೆರವೇರಿಸುವೆನು. ನೀನು ನನ್ನ ಅರ್ಧರಾಜ್ಯವನ್ನು ಕೇಳಿಕೊಂಡರೂ ಸರಿಯೇ, ಅದನ್ನು ನಿನಗೆ ಕೊಡುವೆನು” ಎಂದು ಹೇಳಿದನು.
I reèe car Jestiri opet drugi dan napivši se vina: šta želiš, carice Jestiro? daæe ti se; i šta moliš? ako je i do polovine carstva, biæe.
3 ಆಗ ಎಸ್ತೇರ್ ರಾಣಿಯು, “ಅರಸನು ನನ್ನ ಮೇಲೆ ಕಟಾಕ್ಷವಿಟ್ಟು ಸಮ್ಮತಿಸುವುದಾದರೆ ನನ್ನ ವಿಜ್ಞಾಪನೆಯನ್ನೂ, ಪ್ರಾರ್ಥನೆಯನ್ನೂ ಲಾಲಿಸಿ ನನ್ನ ಜೀವವನ್ನೂ ಮತ್ತು ನನ್ನ ಜನಾಂಗವನ್ನೂ ಉಳಿಸಬೇಕು.
Tada odgovori carica Jestira i reèe: ako sam našla milost pred tobom, care, i ako je caru ugodno, neka mi se pokloni život moj na moju želju i narod moj na moju molbu.
4 ಜನರು ನಮ್ಮನ್ನು ಕೊಂದು ಸಂಹರಿಸಿ, ನಮ್ಮನ್ನು ನಿರ್ನಾಮಗೊಳಿಸುವ ಹಾಗೆ ನಾವು ಮಾರಲ್ಪಟ್ಟೆವು. ನಾವು ಸೇವಕ ಸೇವಕಿಯರಾಗುವುದಕ್ಕೆ ಗುಲಾಮರಂತೆ ಮಾರಲ್ಪಟ್ಟಿದ್ದರೆ ಆ ಕಷ್ಟದ ವಿಷಯದಲ್ಲಿ ರಾಜನನ್ನು ತೊಂದರೆಪಡಿಸುವುದು ಯೋಗ್ಯವಲ್ಲವೆಂದು ಸುಮ್ಮನಿರುತ್ತಿದ್ದೆನು” ಎಂದು ಉತ್ತರಕೊಟ್ಟಳು.
Jer smo prodani ja i moj narod da nas potru, pobiju i istrijebe. Da smo prodani da budemo sluge i sluškinje, muèala bih, premda neprijatelj ne bi mogao naknaditi štete caru.
5 ಅಹಷ್ವೇರೋಷ್ ರಾಜನು ಎಸ್ತೇರ್ ರಾಣಿಯನ್ನು, “ಇಂಥ ದುಷ್ಕೃತ್ಯದ ಮೇಲೆ ಮನಸ್ಸಿಟ್ಟವನು ಯಾವನು? ಅವನೆಲ್ಲಿ?” ಎಂದು ಕೇಳಿದನು.
A car Asvir progovori i reèe carici Jestiri: ko je taj? i gdje je taj koji se usudio tako èiniti?
6 ಆಗ ಆಕೆಯು, “ನಮ್ಮನ್ನು ಬಾಧಿಸಬೇಕೆಂದಿರುವ ಹಗೆಗಾರನು ಮತ್ತು ಶತ್ರುವು ಈ ದುಷ್ಟ ಹಾಮಾನನೇ” ಎಂದಳು. ಇದನ್ನು ಕೇಳಿ ಹಾಮಾನನು ರಾಣಿಯ ಮುಂದೆ ಭಯಭೀತನಾದನು.
A Jestira reèe: protivnik i neprijatelj ovaj je zlikovac Aman. A Aman se uplaši od cara i od carice.
7 ಅರಸನು ರೌದ್ರಾವೇಶನಾಗಿ ದ್ರಾಕ್ಷಾರಸ ಪಾನಮಾಡುವುದನ್ನು ಬಿಟ್ಟೆದ್ದು ಅರಮನೆಯ ತೋಟಕ್ಕೆ ಹೋದನು. ಹಾಮಾನನಾದರೋ ಅರಸನಿಂದ ತನಗೆ ಕೇಡು ಸಿದ್ಧವಾಯಿತೆಂದು ತಿಳಿದು ಎಸ್ತೇರಳ ಹತ್ತಿರ ತನ್ನ ಪ್ರಾಣರಕ್ಷಣೆಯ ನಿಮಿತ್ತವಾಗಿ ಬಿನ್ನಹಮಾಡಿಕೊಳ್ಳಲು ನಿಂತುಕೊಂಡಿದ್ದನು.
Tada car gnjevan usta od vina i otide u vrt kod dvora, a Aman osta da moli za život svoj caricu Jestiru, jer vidje da je car naumio zlo po nj.
8 ಅರಸನು ಅರಮನೆಯ ತೋಟದಿಂದ ತಾನು ದ್ರಾಕ್ಷಾರಸ ಪಾನಮಾಡಿದ ಗೃಹಕ್ಕೆ ಹಿಂತಿರುಗಿ ಬಂದು ಎಸ್ತೇರಳು ಒರಗಿಕೊಳ್ಳುವ ಸುಖಾಸನದ ಮೇಲೆ ಹಾಮಾನನು ಬಿದ್ದುಕೊಂಡಿರುವುದನ್ನು ಕಂಡು, “ಇವನು ರಾಣಿಯನ್ನು ನನ್ನ ಮುಂದೆಯೇ ಅರಮನೆಯಲ್ಲಿ ಭಂಗಪಡಿಸಬೇಕೆಂದಿರುತ್ತಾನೋ?” ಅಂದನು. ಅರಸನ ಬಾಯಿಂದ ಈ ಮಾತು ಹೊರಬಂದ ಕೂಡಲೆ ಸೇವಕರು ಹಾಮಾನನ ಮುಖಕ್ಕೆ ಮುಸುಕು ಹಾಕಿ ಎಳೆದುಕೊಂಡು ಹೋದರು.
Potom se car vrati iz vrta dvorskoga u kuæu gdje bješe pio vino; a Aman bješe pao na odar gdje sjeðaše Jestira. I car reèe: eda li æe i caricu osramotiti kod mene u kuæi? Èim ta rijeè izide iz usta carevijeh, pokriše lice Amanu.
9 ಆಗ ಅರಸನ ಸೇವೆಮಾಡುತ್ತಿದ್ದ ಕಂಚುಕಿಗಳಲ್ಲಿ ಒಬ್ಬನಾದ ಹರ್ಬೋನನು, “ಅರಸನ ಪ್ರಾಣರಕ್ಷಣೆಗಾಗಿ ಸಮಾಚಾರವನ್ನು ತಿಳಿಸಿದ ಮೊರ್ದೆಕೈಯನ್ನು ನೇತುಹಾಕಿಸುವುದಕ್ಕೆ ಇವನು ಐವತ್ತು ಮೊಳ ಎತ್ತರವಾದ ಗಲ್ಲು ಕಂಬವನ್ನು ಸಿದ್ಧಮಾಡಿಸಿದ್ದಾನೆ” ಎಂದನು. ಅದಕ್ಕೆ ಅರಸನು, “ಹಾಗಾದರೆ ಹಾಮಾನನ್ನು ಅದಕ್ಕೇ ನೇತುಹಾಕಿರಿ” ಎಂದು ಆಜ್ಞಾಪಿಸಿದನು.
I Arvona, jedan od dvorana carevijeh, reèe: evo i vješala što je naèinio Aman za Mardoheja koji je govorio dobro po cara stoje kod kuæe Amanove, visoka pedeset lakata. I reèe car: objesite ga na njih.
10 ೧೦ ಹಾಮಾನನನ್ನು ಮೊರ್ದೆಕೈಗಾಗಿ ಸಿದ್ಧಮಾಡಿಸಿದ್ದ ಗಲ್ಲುಗಂಬಕ್ಕೆ ಏರಿಸಿದರು. ಹೀಗೆ ಅರಸನ ಕೋಪವೂ ಶಮನವಾಯಿತು.
I tako objesiše Amana na vješala koja bješe pripravio Mardoheju. I gnjev carev utiša se.

< ಎಸ್ತೇರಳು 7 >