< ವಿಮೋಚನಕಾಂಡ 12 >

1 ಐಗುಪ್ತ ದೇಶದಲ್ಲಿ ಯೆಹೋವನು ಮೋಶೆ ಮತ್ತು ಆರೋನರ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
Bwana akamwambia Mose na Aroni katika nchi ya Misri,
2 “ಎಲ್ಲಾ ತಿಂಗಳುಗಳಲ್ಲಿ ಇದೇ ನಿಮಗೆ ಮೊದಲ ತಿಂಗಳಾಗಿರಬೇಕು. ಇದೇ ನಿಮಗೆ ಪ್ರತಿ ವರ್ಷದ ಮೊದಲನೆಯ ತಿಂಗಳಾಗಿರುವುದು.
“Mwezi huu utakuwa mwanzo wa miezi kwenu, yaani mwezi wa kwanza wa mwaka wenu.
3 ಇದರ ವಿಷಯದಲ್ಲಿ ನೀವು ಇಸ್ರಾಯೇಲರ ಸಮೂಹಕ್ಕೆಲ್ಲಾ ಹೀಗೆ ಅಪ್ಪಣೆಮಾಡಬೇಕು, ‘ಈ ತಿಂಗಳಿನ ಹತ್ತನೆಯ ದಿನದಲ್ಲಿ ನಿಮ್ಮ ನಿಮ್ಮ ಗೋತ್ರಗಳ ಪ್ರತಿಯೊಂದು ಮನೆಯವರು ಒಂದೊಂದು ಕುರಿಮರಿಯನ್ನಾಗಲಿ, ಆಡುಮರಿಯನ್ನಾಗಲಿ ತೆಗೆದುಕೊಳ್ಳಬೇಕು.
Iambie jumuiya yote ya Israeli kwamba katika siku ya kumi ya mwezi huu, kila mtu atatwaa mwana-kondoo mmoja kwa ajili ya familia yake, mmoja kwa kila nyumba.
4 ಕುಟುಂಬವು ಚಿಕ್ಕದಾಗಿದ್ದರೆ, ಒಂದು ಕುರಿಮರಿಯನ್ನು ಪೂರ್ಣವಾಗಿ ತಿನ್ನುವುದಕ್ಕೆ ಆಗದೆ ಹೋದ ಪಕ್ಷಕ್ಕೆ ನೆರೆಮನೆಯ ಕುಟುಂಬದವರೊಂದಿಗೆ ಸೇರಿ, ಒಬ್ಬೊಬ್ಬನು ಎಷ್ಟೆಷ್ಟು ತಿನ್ನುವನೆಂದು ಗೊತ್ತುಮಾಡಿಕೊಂಡು ಜನಗಳ ಸಂಖ್ಯಾನುಸಾರ ಮರಿಗಳನ್ನು ತೆಗೆದುಕೊಳ್ಳಲಿ.
Ikiwa nyumba yoyote ina watu wachache wasioweza kumaliza huyo mwana-kondoo mzima, nyumba hiyo itabidi ishirikiane na nyumba ya jirani wa karibu, baada ya kuzingatia idadi ya watu waliomo. Mtaangalia ni kiasi gani cha nyama kitahitajika kulingana na mahitaji ya kila mtu.
5 ಆ ಮರಿಯು ಊನವಿಲ್ಲದ ಒಂದು ವರ್ಷದ ಗಂಡುಮರಿಯಾಗಿರಬೇಕು. ನೀವು ಕುರಿಗಳಿಂದಾಗಲಿ ಅಥವಾ ಆಡುಗಳಿಂದಾಗಲಿ ಅದನ್ನು ತೆಗೆದುಕೊಳ್ಳಬಹುದು.
Wanyama mtakaowachagua, lazima wawe wa kiume wa umri wa mwaka mmoja wasiokuwa na dosari, mwaweza kuwachukua kati ya kondoo au mbuzi.
6 ಈ ತಿಂಗಳಿನ ಹದಿನಾಲ್ಕನೆಯ ದಿನದವರೆಗೆ ಅವುಗಳನ್ನು ಇಟ್ಟುಕೊಂಡಿದ್ದು, ಆ ದಿನದ ಸಂಜೆ ವೇಳೆಯಲ್ಲಿ ಇಸ್ರಾಯೇಲರ ಸಮೂಹದವರೆಲ್ಲರೂ ಒಟ್ಟಿಗೆ ಸೇರಿ ಅವುಗಳನ್ನು ವಧಿಸಬೇಕು.
Tunzeni wanyama hao mpaka siku ya kumi na nne ya mwezi, ambapo lazima watu wa jumuiya yote ya Israeli wachinje wanyama hao wakati wa jioni.
7 ಅವರು ಅವುಗಳ ರಕ್ತದಲ್ಲಿ ಸ್ವಲ್ಪವನ್ನು ತೆಗೆದು ತಾವು ಆ ಭೋಜನವನ್ನು ಮಾಡುವ ಮನೆಬಾಗಿಲಿನ ಎರಡು ನಿಲುವುಪಟ್ಟಿಗಳಿಗೂ, ಮೇಲಿನ ಪಟ್ಟಿಗೂ ಹಚ್ಚಬೇಕು.
Ndipo watakapochukua baadhi ya hiyo damu na kuipaka kwenye vizingiti vya juu na miimo ya milango ya nyumba ambamo watakula wana-kondoo hao.
8 ಆ ರಾತ್ರಿಯಲ್ಲಿಯೇ ಆ ಮಾಂಸವನ್ನು ಭೋಜನಮಾಡಬೇಕು. ಅದನ್ನು ಬೆಂಕಿಯಲ್ಲಿ ಸುಟ್ಟು ಹುಳಿಯಿಲ್ಲದ ರೊಟ್ಟಿಗಳ ಮತ್ತು ಕಹಿಯಾದ ಸೊಪ್ಪಿನ ಪಲ್ಯಗಳ ಸಂಗಡ ಊಟಮಾಡಬೇಕು.
Usiku huo huo watakula nyama iliyookwa kwenye moto, pamoja na mboga chungu za majani na mikate isiyotiwa chachu.
9 ಅದನ್ನು ಹಸಿಯಾಗಿಯೂ ನೀರಿನಲ್ಲಿ ಬೇಯಿಸಿಯೂ ತಿನ್ನಕೂಡದು. ಅದರ ತಲೆ, ತೊಡೆ, ಹೊಟ್ಟೆ, ಇವುಗಳ ಸಹಿತವಾಗಿ ಬೆಂಕಿಯಲ್ಲೇ ಸುಟ್ಟು ತಿನ್ನಬೇಕು.
Msile nyama mbichi wala iliyochemshwa, lakini iwe imeokwa kwenye moto, kichwa, miguu na nyama zake za ndani.
10 ೧೦ ಮರುದಿನದ ಬೆಳಗಿನವರೆಗೆ ಅದರಲ್ಲಿ ಸ್ವಲ್ಪವನ್ನಾದರೂ ಉಳಿಸಕೂಡದು, ಬೆಳಗಿನವರೆಗೆ ಉಳಿದದ್ದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.
Msibakize nyama yoyote mpaka asubuhi; nazo kama zitabakia mpaka asubuhi, lazima mziteketeze kwa moto.
11 ೧೧ ಆ ಭೋಜನವನ್ನು ಮಾಡಬೇಕಾದ ಕ್ರಮ ಹೇಗೆಂದರೆ: ನೀವು ನಡುವನ್ನು ಕಟ್ಟಿಕೊಂಡು, ಕೆರವನ್ನು ಮೆಟ್ಟಿಕೊಂಡು, ಕೋಲುಹಿಡಿದು, ತ್ವರೆಯಾಗಿ ಮಾಡಬೇಕು. ಇದು ಯೆಹೋವನಿಗೆ ಆಚರಿಸತಕ್ಕ ಪಸ್ಕಹಬ್ಬವು.
Hivi ndivyo mtakavyokula: Mtajifunga mikanda viunoni, mtakuwa mmevaa viatu vyenu miguuni na kushika fimbo zenu mkononi mwenu. Mle kwa haraka; hii ni Pasaka ya Bwana.
12 ೧೨ ಆ ರಾತ್ರಿ ನಾನು ಐಗುಪ್ತದೇಶದ ಮೇಲೆ ಹಾದುಹೋಗಿ ಮನುಷ್ಯರಲ್ಲಾಗಲಿ, ಪಶುಗಳಲ್ಲಾಗಲಿ, ಚೊಚ್ಚಲಾಗಿರುವುದನ್ನೆಲ್ಲಾ ಸಂಹರಿಸುವೆನು. ಐಗುಪ್ತ ದೇಶದ ಸಮಸ್ತ ದೇವತೆಗಳಿಗೂ ನ್ಯಾಯತೀರಿಸುವೆನು. ನಾನೇ ಯೆಹೋವನು.
“Usiku huo huo nitapita katika nchi yote ya Misri na kumuua kila mzaliwa wa kwanza, wa wanadamu na wa wanyama, nami nitaihukumu miungu yote ya Misri. Mimi ndimi Bwana.
13 ೧೩ ಆದರೆ ನೀವು ಇರುವ ಎಲ್ಲಾ ಮನೆಗಳ ಬಾಗಿಲಿಗೆ ಹಚ್ಚಿರುವ ರಕ್ತವು ನಿಮಗೆ ಗುರುತಾಗಿರುವುದು. ಆ ರಕ್ತವನ್ನು ನಾನು ನೋಡುವಾಗ ನಿಮಗೆ ಯಾವ ನಷ್ಟವನ್ನೂ ಮಾಡದೇ ಮುಂದಕ್ಕೆ ದಾಟಿಹೋಗುವೆನು. ನಾನು ಐಗುಪ್ತ್ಯದವರನ್ನು ಸಂಹರಿಸುವಾಗ ನಿಮಗೆ ಯಾವ ಹಾನಿಯೂ ಉಂಟಾಗುವುದಿಲ್ಲ.
Damu itakuwa ishara kwa ajili yenu ya kuonyesha nyumba ambazo mtakuwamo; nami nitakapoiona damu, nitapita juu yenu. Hakuna pigo la uharibifu litakalowagusa ninyi nitakapoipiga Misri.
14 ೧೪ ಈ ದಿನವು ನಿಮಗೆ ಜ್ಞಾಪಕಾರ್ಥವಾಗಿರುವುದು. ಯೆಹೋವನ ಘನಕ್ಕಾಗಿ ಆ ಹಬ್ಬವನ್ನು ತಲತಲಾಂತರಕ್ಕೂ ಆಚರಿಸಬೇಕು. ಅದನ್ನು ಶಾಶ್ವತನಿಯಮವೆಂದು ಎಂದೆಂದಿಗೂ ಆಚರಿಸಬೇಕು.
“Siku hii itakuwa kumbukumbu kwenu, mtaiadhimisha kuwa sikukuu kwa Bwana, katika vizazi vyenu vyote: mtaishika kuwa amri ya kudumu.
15 ೧೫ “‘ಏಳು ದಿನಗಳವರೆಗೆ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಬಿಡಬೇಕು. ಏಕೆಂದರೆ ಮೊದಲನೆಯ ದಿನದಿಂದ ಏಳನೆಯ ದಿನದವರೆಗೆ ಹುಳಿರೊಟ್ಟಿಯನ್ನು ತಿನ್ನುವವನು ಇಸ್ರಾಯೇಲಿನೊಳಗಿಂದ ತೆಗೆದುಹಾಕಲ್ಪಡಬೇಕು.
Kwa siku saba mtakula mikate isiyotiwa chachu. Katika siku ya kwanza mtaondoa chachu yote ndani ya nyumba zenu, kwa maana yeyote atakayekula chochote chenye chachu kuanzia siku ya kwanza hadi ya saba lazima akatiliwe mbali kutoka Israeli.
16 ೧೬ ಮೊದಲನೆಯ ದಿನದಲ್ಲಿ ಪರಿಶುದ್ಧ ದೇವಾರಾಧನೆಗಾಗಿ ಸಭೆ ಸೇರಬೇಕು. ಏಳನೆಯ ದಿನದಲ್ಲಿಯೂ ದೇವಾರಾಧನೆಗಾಗಿ ಸಭೆ ಸೇರಬೇಕು. ಈ ಎರಡು ದಿನಗಳಲ್ಲಿ ಯಾವ ಕೆಲಸವನ್ನು ಮಾಡಕೂಡದು. ಊಟಕ್ಕೆ ಬೇಕಾದದ್ದನ್ನು ಮಾತ್ರ ಮಾಡಬಹುದೇ ಹೊರತು ಬೇರೆ ಯಾವ ಕೆಲಸವನ್ನು ಮಾಡಬಾರದು.
Katika siku ya kwanza mtakuwa na kusanyiko takatifu, na kusanyiko jingine katika siku ya saba. Katika siku hizo msifanye kazi kamwe isipokuwa kutayarisha chakula cha kila mmoja; hilo ndilo tu mtakalofanya.
17 ೧೭ ನೀವು ಹುಳಿಯಿಲ್ಲದ ರೊಟ್ಟಿಯ ಹಬ್ಬವನ್ನು ಆಚರಿಸಬೇಕು. ಏಕೆಂದರೆ ಈ ದಿನದಲ್ಲಿಯೇ ನಾನು ನಿಮ್ಮ ಸೈನ್ಯಗಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದ್ದರಿಂದ ನೀವೂ, ನಿಮ್ಮ ಸಂತತಿಯವರೂ ಈ ದಿನವನ್ನು ಆಚರಣೆಗೆ ತರಬೇಕು. ಇದು ಶಾಶ್ವತವಾದ ನಿಯಮವಾಗಿದೆ.
“Mtaadhimisha Sikukuu ya Mikate Isiyotiwa Chachu, kwa sababu hiyo ndiyo siku ile niliyovitoa vikosi vyenu kutoka Misri. Mtaiadhimisha siku hii kwa vizazi vyenu vyote kuwa amri ya kudumu.
18 ೧೮ ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲ ಮೊದಲುಗೊಂಡು ಅದೇ ತಿಂಗಳಿನ ಇಪ್ಪತ್ತೊಂದನೆಯ ದಿನದ ಸಾಯಂಕಾಲದವರೆಗೆ ನೀವು ಹುಳಿಯಿಲ್ಲದ ರೊಟ್ಟಿಗಳನ್ನೇ ತಿನ್ನಬೇಕು.
Katika mwezi wa kwanza mtakula mikate isiyotiwa chachu, kuanzia jioni ya siku ya kumi na nne hadi jioni ya siku ya ishirini na moja.
19 ೧೯ ಆ ಏಳು ದಿನಗಳವರೆಗೆ ನಿಮ್ಮ ಮನೆಗಳಲ್ಲಿ ಹುಳಿಹಿಟ್ಟು ಇರಬಾರದು. ಹುಳಿ ಬೆರಸಿದ್ದನ್ನು ಯಾರು ತಿನ್ನುವರೋ ಅವನು ಪರದೇಶದವನಾಗಲಿ, ಸ್ವದೇಶದವನಾಗಲಿ ಇಸ್ರಾಯೇಲ ಸಮೂಹದೊಳಗಿಂದ ತೆಗೆದುಹಾಕಲ್ಪಡಬೇಕು.
Kwa muda wa siku saba isionekane chachu yoyote katika nyumba zenu. Yeyote alaye chochote chenye chachu ndani yake, lazima akatiliwe mbali kutoka jumuiya ya Israeli, akiwa ni mgeni au mzawa.
20 ೨೦ ನೀವು ನಿಮ್ಮ ಮನೆಗಳಲ್ಲಿ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕೇ ಹೊರತು, ಹುಳಿಕಲಸಿದ ಯಾವುದನ್ನೂ ತಿನ್ನಕೂಡದು’” ಎಂದು ಆಜ್ಞಾಪಿಸಿದನು.
Msile chochote kilichotiwa chachu. Popote muishipo, ni lazima mle mikate isiyotiwa chachu.”
21 ೨೧ ಆಗ ಮೋಶೆಯು ಇಸ್ರಾಯೇಲರ ಹಿರಿಯರೆಲ್ಲರನ್ನೂ ಕರೆಯಿಸಿ ಅವರಿಗೆ, “ನೀವು, ನಿಮ್ಮ ನಿಮ್ಮ ಕುಟುಂಬಗಳಿಗೋಸ್ಕರ ಮಂದೆಯಿಂದ ಮರಿಗಳನ್ನು ಆರಿಸಿಕೊಂಡು ಪಸ್ಕಹಬ್ಬಕ್ಕೆ ಕೊಯ್ಯಿರಿ.
Ndipo Mose akawaita wazee wote wa Israeli na kuwaambia, “Nendeni mara moja mkachague wanyama kwa ajili ya jamaa zenu, mkachinje mwana-kondoo wa Pasaka.
22 ೨೨ ಹಿಸ್ಸೋಪ್ ಗಿಡದ ಕಟ್ಟನ್ನು ತೆಗೆದುಕೊಂಡು ಬೋಗುಣಿಯಲ್ಲಿರುವ ರಕ್ತದಲ್ಲಿ ಅದನ್ನು ಅದ್ದಿ ಬಾಗಿಲಿನ ಮೇಲಿನ ಅಡ್ಡಪಟ್ಟಿಗೂ, ಅದರ ಪಕ್ಕದಲ್ಲಿರುವ ಎರಡು ನಿಲುವುಪಟ್ಟಿಗಳಿಗೂ ಹಚ್ಚಬೇಕು. ತರುವಾಯ ನಿಮ್ಮಲ್ಲಿ ಒಬ್ಬರೂ ಬೆಳಗಾಗುವವರೆಗೆ ಮನೆಯ ಬಾಗಿಲನ್ನು ಬಿಟ್ಟು ಹೊರಗೆ ಹೋಗಬಾರದು.
Chukueni kitawi cha hisopo, kichovyeni kwenye damu iliyopo kwenye sinia na kuipaka baadhi ya hiyo damu kwenye vizingiti na kwenye miimo yote miwili ya milango. Mtu yeyote asitoke nje ya mlango wa nyumba yake mpaka asubuhi.
23 ೨೩ ಯೆಹೋವನು ಐಗುಪ್ತ್ಯರನ್ನು ಹತಮಾಡುವುದಕ್ಕೆ ದೇಶದ ನಡುವೆ ಹಾದುಹೋಗುವನು. ಆಗ ನಿಮ್ಮ ನಿಮ್ಮ ಮನೆಬಾಗಿಲಿನ ಮೇಲಣ ಪಟ್ಟಿಯಲ್ಲಿಯೂ, ಎರಡು ನಿಲುವು ಪಟ್ಟಿಗಳಲ್ಲಿಯೂ ಆ ರಕ್ತವನ್ನು ಕಂಡು ಮುಂದಕ್ಕೆ ದಾಟಿ ಹೋಗುವನು. ನಿಮ್ಮ ಪ್ರಾಣ ತೆಗೆಯುವುದಕ್ಕೆ ಸಂಹಾರಕನು ನಿಮ್ಮ ಮನೆಗಳಲ್ಲಿ ಬರುವುದೇ ಇಲ್ಲ.
Bwana apitapo katika nchi yote kuwapiga Wamisri, ataiona damu juu ya vizingiti na kwenye miimo ya milango, naye atapita juu, wala hatamruhusu mwangamizi kuingia katika nyumba zenu na kuwapiga ninyi.
24 ೨೪ ಇದು ನಿಮಗೂ, ನಿಮ್ಮ ಸಂತತಿಯವರಿಗೂ ಶಾಶ್ವತವಾದ ನಿಯಮವೆಂದು ಆಚರಿಸಬೇಕು.
“Shikeni maagizo haya yawe kanuni ya kudumu kwenu na kwa ajili ya wazao wenu.
25 ೨೫ ಯೆಹೋವನು ತನ್ನ ಮಾತಿನ ಮೇರೆಗೆ ನಿಮಗೆ ಕೊಡುವ ದೇಶಕ್ಕೆ ನೀವು ಬಂದಾಗ, ಈ ಆಚರಣೆಯನ್ನು ಕೈಕೊಳ್ಳಬೇಕು.
Mtakapoingia katika nchi Bwana atakayowapa kama alivyoahidi, shikeni desturi hii.
26 ೨೬ ಮುಂದೆ ನಿಮ್ಮ ಮಕ್ಕಳು, ‘ನೀವು ನಡೆಸುವ ಈ ಆಚರಣೆ ಏನು?’ ಎಂದು ನಿಮ್ಮನ್ನು ಕೇಳುವಾಗ,
Watoto wenu watakapowauliza, ‘Sikukuu hii ina maana gani kwenu?’
27 ೨೭ ನೀವು ಅವರಿಗೆ, ‘ಯೆಹೋವನು ಐಗುಪ್ತ್ಯರನ್ನು ಸಂಹರಿಸಿದಾಗ ಐಗುಪ್ತ ದೇಶದಲ್ಲಿದ್ದ ಇಸ್ರಾಯೇಲರ ಮನೆಗಳಲ್ಲಿ ಪ್ರವೇಶಿಸದೆ ಮುಂದಕ್ಕೆ ದಾಟಿ ನಮ್ಮ ಮನೆಯವರನ್ನು ಉಳಿಸಿದ್ದರಿಂದ ನಾವು ಯೆಹೋವನ ಪಸ್ಕವೆಂಬ ಈ ಆಚರಣೆಯನ್ನು ನಡೆಸಲೇಬೇಕು ಎಂದು ಹೇಳಬೇಕು’” ಎಂದನು. ಆಗ ಜನರು ತಲೆಬಾಗಿ ಯೆಹೋವನಿಗೆ ನಮಸ್ಕರಿಸಿದರು.
Basi waambieni, ‘Hii ni dhabihu ya Pasaka kwa Bwana, ambaye alipita juu ya nyumba za Waisraeli katika nchi ya Misri na hakudhuru nyumba zetu alipowapiga Wamisri.’” Ndipo watu wa Israeli waliposujudu na kuabudu.
28 ೨೮ ಇಸ್ರಾಯೇಲರು ಅಲ್ಲಿಂದ ಹೊರಟು ಯೆಹೋವನು ಮೋಶೆ ಆರೋನರಿಗೆ ಆಜ್ಞಾಪಿಸಿದ ಪ್ರಕಾರವೇ ಮಾಡಿದರು.
Waisraeli wakafanya kama vile Bwana alivyomwagiza Mose na Aroni.
29 ೨೯ ಮಧ್ಯರಾತ್ರಿಯಲ್ಲಿ ಯೆಹೋವನು ಸಿಂಹಾಸನದಲ್ಲಿರುವ ಫರೋಹನ ಚೊಚ್ಚಲು ಮಗನು ಮೊದಲುಗೊಂಡು ಸೆರೆಯಲ್ಲಿದ್ದ ಸೆರೆಯವನ ಚೊಚ್ಚಲು ಮಗನವರೆಗೂ, ಐಗುಪ್ತ ದೇಶದಲ್ಲಿದ್ದ ಎಲ್ಲಾ ಚೊಚ್ಚಲು ಮಕ್ಕಳನ್ನೂ ಸಂಹಾರ ಮಾಡಿದನು. ಪಶುಗಳ ಚೊಚ್ಚಲು ಮರಿಗಳನ್ನೂ ಸಂಹಾರಮಾಡಿದನು.
Ilipofika usiku wa manane, Bwana akawapiga wazaliwa wa kwanza wote katika Misri, kuanzia mzaliwa wa kwanza wa Farao, mrithi wa kiti cha ufalme, hadi mzaliwa wa kwanza wa mfungwa, aliyekuwa gerezani, na wazaliwa wa kwanza wa mifugo yote pia.
30 ೩೦ ಆ ರಾತ್ರಿಯಲ್ಲಿ ಫರೋಹನೂ, ಅವನ ಪರಿವಾರದವರೂ, ಐಗುಪ್ತ್ಯರೆಲ್ಲರೂ ಎದ್ದು ನೋಡಲಾಗಿ ಸಾವಿಲ್ಲದ ಮನೆ ಒಂದೂ ಇರಲಿಲ್ಲ. ಐಗುಪ್ತ ದೇಶದಲ್ಲಿ ದೊಡ್ಡ ಗೋಳಾಟವಾಯಿತು.
Farao, na maafisa wake wote, na Wamisri wote wakaamka usiku, na kulikuwa na kilio kikubwa katika nchi ya Misri, kwa kuwa haikuwepo nyumba ambayo hakufa mtu.
31 ೩೧ ಫರೋಹನು ಆ ರಾತ್ರಿಯಲ್ಲೇ ಮೋಶೆ ಮತ್ತು ಆರೋನರನ್ನು ಕರೆಯಿಸಿ ಅವರಿಗೆ, “ನೀವು ಎದ್ದು ನನ್ನ ಜನರ ಮಧ್ಯದಿಂದ ಹೊರಟುಹೋಗಿರಿ. ನೀವು ಕೇಳಿಕೊಂಡ ಮೇರೆಗೆ ಯೆಹೋವನನ್ನು ಆರಾಧಿಸುವುದಕ್ಕೆ ನೀವು ಮತ್ತು ಇಸ್ರಾಯೇಲರು ಹೊರಟುಹೋಗಿರಿ.
Wakati huo Farao akawaita Mose na Aroni na kuwaambia, “Ondokeni! Tokeni kwa watu wangu, ninyi pamoja na Waisraeli! Nendeni mkamwabudu Bwana kama mlivyoomba.
32 ೩೨ ನೀವು ಕೇಳಿಕೊಂಡಂತೆ ನಿಮ್ಮ ಕುರಿದನಗಳ ಹಿಂಡುಗಳನ್ನು ತೆಗೆದುಕೊಂಡು ಹೋಗಿರಿ. ಅದಲ್ಲದೆ ನನ್ನನ್ನೂ ಸಹ ಆಶೀರ್ವದಿಸಿರಿ” ಎಂದನು.
Chukueni makundi yenu ya kondoo na mbuzi pamoja na ngʼombe, kama mlivyosema, nanyi mwende zenu. Nanyi pia mnibariki.”
33 ೩೩ ಐಗುಪ್ತರು, “ನಾವೆಲ್ಲರು ಸಾಯುತ್ತೇವೆ” ಎಂದುಕೊಂಡು ಇಸ್ರಾಯೇಲರನ್ನು ತಮ್ಮ ದೇಶದಿಂದ ಬೇಗನೇ ಕಳುಹಿಸಿಬಿಡುವುದಕ್ಕೆ ಅಪೇಕ್ಷೆಪಟ್ಟು ಅವರನ್ನು ಬಲವಂತಮಾಡಿದರು.
Wamisri wakawahimiza Waisraeli waondoke kwa haraka na kuacha nchi yao. Kwa kuwa walisema, “La sivyo, tutakufa wote!”
34 ೩೪ ಆದುದರಿಂದ ಜನರು ಹಿಟ್ಟಿಗೆ ಹುಳಿಹಾಕುವುದಕ್ಕಿಂತ ಮೊದಲೇ ನಾದುವ ಪಾತ್ರೆಗಳ ಸಂಗಡ ಕಣಕದ ಮುದ್ದೆಯನ್ನು ಬಟ್ಟೆಯಲ್ಲಿ ಗಂಟುಕಟ್ಟಿ ಹೆಗಲಿನ ಮೇಲೆ ಹಾಕಿಕೊಂಡು ಹೊರಟುಹೋದರು.
Hivyo watu wakachukua donge lao la unga kabla ya kutiwa chachu, wakaweka ndani ya mabakuli ya kukandia, wakayaviringisha katika vitambaa na kuyabeba mabegani mwao.
35 ೩೫ ಇಸ್ರಾಯೇಲರು ಮೋಶೆಯ ಮಾತಿನ ಮೇರೆಗೆ ಐಗುಪ್ತ್ಯರಿಂದ ಬೆಳ್ಳಿ ಬಂಗಾರದ ಒಡವೆಗಳನ್ನು, ಬಟ್ಟೆಗಳನ್ನು ಕೇಳಿ ಪಡೆದುಕೊಂಡರು.
Waisraeli wakafanya kama Mose alivyowaelekeza, nao wakawaomba Wamisri wawapatie vitu vya fedha, dhahabu na nguo.
36 ೩೬ ಯೆಹೋವನು ಅವರ ಮೇಲೆ ಐಗುಪ್ತ್ಯರಲ್ಲಿ ದಯೆಯನ್ನು ಹುಟ್ಟಿಸಿದ್ದರಿಂದ ಅವರು ಕೇಳಿಕೊಂಡದ್ದೆಲ್ಲವನ್ನು ಐಗುಪ್ತರು ಕೊಟ್ಟರು. ಹೀಗೆ ಇಸ್ರಾಯೇಲರು ಐಗುಪ್ತ್ಯರ ಸೊತ್ತನ್ನು ಸುಲಿದುಕೊಂಡರು.
Basi Bwana alikuwa amewafanya Wamisri kuwa wakarimu kwa hawa watu, wakawapatia Waisraeli vile walivyotaka kwao; kwa hiyo wakawateka nyara Wamisri.
37 ೩೭ ಇಸ್ರಾಯೇಲರು ರಾಮ್ಸೇಸ್ ಪಟ್ಟಣದಿಂದ ಹೊರಟು ಸುಕ್ಕೋತಿಗೆ ಬಂದರು. ಹೆಂಗಸರು ಮಕ್ಕಳು ಅಲ್ಲದೆ ಗಂಡಸರು ಮಾತ್ರ ಸುಮಾರು ಆರುಲಕ್ಷ ಮಂದಿ ಇದ್ದರು.
Waisraeli wakasafiri kutoka Ramesesi mpaka Sukothi. Walikuwepo wanaume wapatao 600,000 waendao kwa miguu bila kuhesabu wanawake na watoto.
38 ೩೮ ಅವರೊಂದಿಗೆ ಬಹು ಮಂದಿ ಅನ್ಯರೂ ಹೊರಟುಬಂದಿದ್ದರು. ಕುರಿದನಗಳ ಹಿಂಡೂ ಪಶುಗಳೂ ಅವರ ಸಂಗಡ ಹೊರಟುಹೋದವು.
Watu wengine wengi wakafuatana nao, pamoja na makundi makubwa ya mifugo wakiwemo kondoo, mbuzi na ngʼombe.
39 ೩೯ ಅವರು ಐಗುಪ್ತ ದೇಶದಿಂದ ತಂದ ನಾದಿದ ಹಿಟ್ಟಿನಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿಕೊಂಡರು. ಅವರು ಐಗುಪ್ತ ದೇಶದಿಂದ ಹೊರಡಿಸಲ್ಪಟ್ಟು ಸ್ವಲ್ಪವಾದರೂ ಸಮಯ ಸಿಕ್ಕದೆ ಹೋದದರಿಂದ ಕಣಕದಲ್ಲಿ ಹುಳಿಯನ್ನು ಕಲಸಿರಲಿಲ್ಲ ಮತ್ತು ಬೇರೆ ಯಾವ ಆಹಾರವನ್ನೂ ಸಿದ್ಧಪಡಿಸಿಕೊಂಡಿರಲಿಲ್ಲ.
Wakatengeneza maandazi yasiyotiwa chachu kwa ule unga uliokandwa waliokuwa wameutoa Misri, donge hilo la unga halikuwa limetiwa chachu, kwa kuwa walikuwa wameondolewa Misri kwa haraka nao hawakuwa na muda wa kuandaa chakula chao.
40 ೪೦ ಇಸ್ರಾಯೇಲರು ಐಗುಪ್ತ ದೇಶದಲ್ಲಿ ಸುಮಾರು ನಾನೂರಮೂವತ್ತು ವರ್ಷ ವಾಸವಾಗಿದ್ದರು.
Waisraeli walikuwa wameishi Misri kwa muda wa miaka 430.
41 ೪೧ ನಾನೂರಮೂವತ್ತು ವರ್ಷಗಳು ಕಳೆದನಂತರ ಅದೇ ದಿನದಲ್ಲಿಯೇ ಯೆಹೋವನ ಸೈನ್ಯಗಳೆಲ್ಲಾ ಐಗುಪ್ತ ದೇಶವನ್ನು ಬಿಟ್ಟು ಹೊರಟುಹೋದವು.
Ilikuwa ni siku ya mwisho ya hiyo miaka 430, vikosi vyote vya Bwana vilipokuwa vimeondoka Misri.
42 ೪೨ ಯೆಹೋವನು ಆ ರಾತ್ರಿಯಲ್ಲಿಯೇ ಅವರನ್ನು ಐಗುಪ್ತ ದೇಶದಿಂದ ಹೊರಗೆ ಬರಮಾಡಿದ್ದರಿಂದ ಅವರು ಈ ರಾತ್ರಿಯಲ್ಲಿ ಆತನ ಘನಕ್ಕಾಗಿ ಜಾಗರಣೆಯನ್ನು ಮಾಡಿದರು. ಇಸ್ರಾಯೇಲರೆಲ್ಲರೂ ತಲತಲಾಂತರಕ್ಕೂ ಯೆಹೋವನಿಗೆ ಜಾಗರಣೆಯನ್ನು ಆಚರಿಸಬೇಕಾದ ರಾತ್ರಿಯು ಇದೇ ಆಗಿದೆ.
Kwa sababu Bwana aliutenga usiku ule ili kuwatoa Waisraeli katika nchi ya Misri, katika usiku huu Waisraeli wote wanapaswa kuadhimisha kwa kukesha ili kumheshimu Bwana katika vizazi vijavyo.
43 ೪೩ ಯೆಹೋವನು ಮೋಶೆ ಮತ್ತು ಆರೋನರಿಗೆ ಹೇಳಿದ್ದೇನೆಂದರೆ, “ಪಸ್ಕವನ್ನು ಆಚರಿಸಬೇಕಾದ ಕ್ರಮ ಹೇಗೆಂದರೆ, ಅನ್ಯನೊಬ್ಬನೂ ಅದರಲ್ಲಿ ಭೋಜನ ಮಾಡಬಾರದು.
Bwana akamwambia Mose na Aroni, “Haya ndiyo masharti kwa ajili ya Pasaka: “Mgeni hataruhusiwa kula Pasaka.
44 ೪೪ ಆದರೆ ನೀವು ಕ್ರಯಕ್ಕೆ ತೆಗೆದುಕೊಂಡ ಪ್ರತಿಯೊಬ್ಬ ಗುಲಾಮನು ಸುನ್ನತಿ ಮಾಡಿಸಿಕೊಂಡ ನಂತರ ಅದನ್ನು ತಿನ್ನಬಹುದು.
Mtumwa yeyote ambaye mmemnunua aweza kuila kama mmemtahiri,
45 ೪೫ ಪರದೇಶದವರೂ, ಕೂಲಿಯವರೂ ಅದನ್ನು ತಿನ್ನಬಾರದು.
lakini kibarua yeyote au msafiri haruhusiwi kula.
46 ೪೬ ಅವರವರ ಮನೆಯಲ್ಲಿಯೇ ಅದನ್ನು ಊಟಮಾಡಬೇಕು. ಅದರಲ್ಲಿ ಸ್ವಲ್ಪ ಮಾಂಸವನ್ನಾದರೂ ಮನೆಯಿಂದ ಹೊರಗೆ ತೆಗೆದುಕೊಂಡು ಹೋಗಬಾರದು. ಆ ಪಶುವಿನ ಒಂದು ಎಲುಬನ್ನಾದರೂ ಮುರಿಯಬಾರದು.
“Sharti iliwe ndani ya nyumba; msichukue nyama yoyote nje ya nyumba hiyo. Msiuvunje mfupa wowote.
47 ೪೭ ಇಸ್ರಾಯೇಲರ ಸಮೂಹದವರೆಲ್ಲರೂ ಈ ಹಬ್ಬವನ್ನು ಆಚರಿಸಬೇಕು.
Jumuiya yote ya Israeli ni lazima waiadhimishe Pasaka hiyo.
48 ೪೮ ನಿಮ್ಮ ಬಳಿಯಲ್ಲಿ ವಾಸವಾಗಿರುವ ಪರದೇಶದವನು ಯೆಹೋವನಿಗೆ ಈ ಪಸ್ಕಹಬ್ಬವನ್ನು ಆಚರಿಸಬೇಕೆಂದು ಅಪೇಕ್ಷಿಸಿದರೆ ಅವನೂ, ಅವನಿಗೆ ಸೇರಿರುವ ಗಂಡಸರೆಲ್ಲರೂ ಸುನ್ನತಿಮಾಡಿಸಿಕೊಳ್ಳಬೇಕು. ತರುವಾಯ ಅವನು ಈ ಹಬ್ಬವನ್ನು ಆಚರಿಸುವುದಕ್ಕೆ ಸಮೀಪ ಬರಲಿ. ಅಂಥವನು ಸ್ವದೇಶದವನಂತೆಯೇ ಇರುವನು. ಆದರೆ ಸುನ್ನತಿಮಾಡಿಸಿಕೊಳ್ಳದವನು ಆ ಭೋಜನವನ್ನು ತಿನ್ನಬಾರದು.
“Mgeni aishiye miongoni mwenu ambaye anataka kuadhimisha Pasaka ya Bwana ni lazima wanaume wote waliomo nyumbani mwake wawe wametahiriwa, ndipo aweze kushiriki kama mzawa. Mwanaume yeyote asiyetahiriwa haruhusiwi kuila.
49 ೪೯ ಸ್ವದೇಶದವನಿಗೂ, ನಿಮ್ಮಲ್ಲಿ ವಾಸವಾಗಿರುವ ಪರದೇಶದವನಿಗೂ ಒಂದೇ ನಿಯಮವಿರಬೇಕು” ಎಂದನು.
Sheria iyo hiyo itamuhusu mzawa na mgeni anayeishi miongoni mwenu.”
50 ೫೦ ಯೆಹೋವನು ಮೋಶೆ ಮತ್ತು ಆರೋನರಿಗೆ ಆಜ್ಞಾಪಿಸಿದ ಪ್ರಕಾರ ಇಸ್ರಾಯೇಲರೆಲ್ಲರೂ ಮಾಡಿದರು.
Waisraeli wote walifanya kama vile Bwana alivyomwagiza Mose na Aroni.
51 ೫೧ ಅದೇ ದಿನದಲ್ಲಿ ಯೆಹೋವನು ಇಸ್ರಾಯೇಲರನ್ನು ಅವರವರ ಸೈನ್ಯಗಳ ಪ್ರಕಾರವಾಗಿ ಐಗುಪ್ತ ದೇಶದಿಂದ ಹೊರಗೆ ತಂದನು.
Siku ile ile Bwana akawatoa Waisraeli katika nchi ya Misri kwa vikosi vyao.

< ವಿಮೋಚನಕಾಂಡ 12 >