< ವಿಮೋಚನಕಾಂಡ 14 >

1 ಯೆಹೋವನು ಮೋಶೆಯ ಸಂಗಡ ಮಾತನಾಡಿ
וַיְדַבֵּ֥ר יְהֹוָ֖ה אֶל־מֹשֶׁ֥ה לֵּאמֹֽר׃
2 “ಇಸ್ರಾಯೇಲರು ಹಿಂದಿರುಗಿ ಹೋಗಿ ಪೀಹಹೀರೋತಿನ ಪೂರ್ವಕಡೆಯಲ್ಲಿ ಮಿಗ್ದೋಲಿಗೂ ಕೆಂಪು ಸಮುದ್ರಕ್ಕೂ ನಡುವೆ ಬಾಳ್ಚೆಫೋನಿಗೆ ಎದುರಾಗಿ ಇಳಿದುಕೊಳ್ಳಬೇಕೆಂದು ಅವರಿಗೆ ಹೇಳು. ಅದರ ಎದುರಾಗಿಯೇ ಸಮುದ್ರದ ಬಳಿಯಲ್ಲೇ ಅವರು ಇಳಿದುಕೊಳ್ಳಬೇಕು.
דַּבֵּר֮ אֶל־בְּנֵ֣י יִשְׂרָאֵל֒ וְיָשֻׁ֗בוּ וְיַחֲנוּ֙ לִפְנֵי֙ פִּ֣י הַחִירֹ֔ת בֵּ֥ין מִגְדֹּ֖ל וּבֵ֣ין הַיָּ֑ם לִפְנֵי֙ בַּ֣עַל צְפֹ֔ן נִכְחֹ֥ו תַחֲנ֖וּ עַל־הַיָּֽם׃
3 ಫರೋಹನು ಅದನ್ನು ಕಂಡು ಇಸ್ರಾಯೇಲರನ್ನು ಕುರಿತು, ‘ಅವರಿಗೆ ದಾರಿತಪ್ಪಿದೆ, ಎಲ್ಲಾ ಕಡೆಯಲ್ಲಿಯೂ ಮರುಭೂಮಿ ಅವರನ್ನು ಸುತ್ತುವರಿದಿದೆ’ ಎಂದು ಅಂದುಕೊಳ್ಳುವನು.
וְאָמַ֤ר פַּרְעֹה֙ לִבְנֵ֣י יִשְׂרָאֵ֔ל נְבֻכִ֥ים הֵ֖ם בָּאָ֑רֶץ סָגַ֥ר עֲלֵיהֶ֖ם הַמִּדְבָּֽר׃
4 ನಾನು ಫರೋಹನ ಹೃದಯವನ್ನು ಕಠಿಣಪಡಿಸುವೆನು. ಆದುದರಿಂದ ಅವನು ಅವರನ್ನು ಬೆನ್ನಟ್ಟಿ ಬರುವನು. ಆಗ ನಾನು ಫರೋಹನಲ್ಲಿಯೂ, ಅವನ ಸೈನ್ಯದಲ್ಲಿಯೂ ಮಹಿಮೆಗೊಳ್ಳುವೆನು. ‘ನಾನೇ ಯೆಹೋವನು’ ಎಂದು ಐಗುಪ್ತ್ಯರಿಗೆ ತಿಳಿದು ಬರುವುದು” ಎಂದು ಹೇಳಿದನು. ಯೆಹೋವನು ಆಜ್ಞಾಪಿಸಿದಂತೆಯೇ ಇಸ್ರಾಯೇಲರು ನಡೆದುಕೊಂಡರು.
וְחִזַּקְתִּ֣י אֶת־לֵב־פַּרְעֹה֮ וְרָדַ֣ף אַחֲרֵיהֶם֒ וְאִכָּבְדָ֤ה בְּפַרְעֹה֙ וּבְכָל־חֵילֹ֔ו וְיָדְע֥וּ מִצְרַ֖יִם כִּֽי־אֲנִ֣י יְהוָ֑ה וַיּֽ͏ַעֲשׂוּ־כֵֽן׃
5 ಇಸ್ರಾಯೇಲರು ಓಡಿಹೋದರೆಂಬ ವರ್ತಮಾನವು ಐಗುಪ್ತದ ಅರಸನಾದ ಫರೋಹನಿಗೆ ತಿಳಿದುಬಂದಾಗ, ಅವರ ವಿಷಯದಲ್ಲಿ ಫರೋಹನ ಮತ್ತು ಅವನ ಪರಿವಾರದವರ ಹೃದಯವು ಅವರಿಗೆ ವಿರುದ್ಧವಾಗಿ ಕಠಿಣಗೊಂಡಿತು. ಅವರು, “ಇದೇನು ನಾವು ಮಾಡಿದ್ದು? ನಮಗೆ ದಾಸರಾಗಿದ್ದ ಇಸ್ರಾಯೇಲರನ್ನು ಹೊರಟು ಹೋಗುವುದಕ್ಕೆ ಬಿಟ್ಟೆವಲ್ಲಾ” ಎಂದುಕೊಂಡರು.
וַיֻּגַּד֙ לְמֶ֣לֶךְ מִצְרַ֔יִם כִּ֥י בָרַ֖ח הָעָ֑ם וַ֠יֵּהָפֵךְ לְבַ֨ב פַּרְעֹ֤ה וַעֲבָדָיו֙ אֶל־הָעָ֔ם וַיֹּֽאמרוּ֙ מַה־זֹּ֣את עָשִׂ֔ינוּ כִּֽי־שִׁלַּ֥חְנוּ אֶת־יִשְׂרָאֵ֖ל מֵעָבְדֵֽנוּ׃
6 ಆಗ ಫರೋಹನು ತನ್ನ ರಥಬಲವನ್ನು ಸಿದ್ಧಪಡಿಸಿಕೊಂಡು ತನ್ನ ಭಟರೊಡನೆ ಹೊರಟನು.
וַיֶּאְסֹ֖ר אֶת־רִכְבֹּ֑ו וְאֶת־עַמֹּ֖ו לָקַ֥ח עִמֹּֽו׃
7 ಶ್ರೇಷ್ಠವಾದ ಆರುನೂರು ರಥಗಳನ್ನೂ, ಐಗುಪ್ತ ದೇಶದ ಎಲ್ಲಾ ರಥಗಳನ್ನೂ ತೆಗೆದುಕೊಂಡು ಬೆನ್ನಟ್ಟಿ ಹೋದನು. ಆ ಎಲ್ಲಾ ರಥಗಳಲ್ಲಿ ಅಧಿಪತಿಗಳನ್ನೂ ಕರೆಸಿ ಕೊಂಡನು.
וַיִּקַּ֗ח שֵׁשׁ־מֵאֹ֥ות רֶ֙כֶב֙ בָּח֔וּר וְכֹ֖ל רֶ֣כֶב מִצְרָ֑יִם וְשָׁלִשִׁ֖ם עַל־כֻּלֹּֽו׃
8 ಯೆಹೋವನು ಐಗುಪ್ತ ದೇಶದ ಅರಸನಾದ ಫರೋಹನ ಹೃದಯವನ್ನು ಕಠಿಣಪಡಿಸಿದ್ದರಿಂದ ಅವನು ಇಸ್ರಾಯೇಲರನ್ನು ಬೆನ್ನಟ್ಟಿಹೋದನು. ಆದರೆ ಇಸ್ರಾಯೇಲರು ಯುದ್ಧಸನ್ನದ್ಧರಾಗಿ ಹೊರಟು ಬಂದಿದ್ದರು.
וַיְחַזֵּ֣ק יְהֹוָ֗ה אֶת־לֵ֤ב פַּרְעֹה֙ מֶ֣לֶךְ מִצְרַ֔יִם וַיִּרְדֹּ֕ף אַחֲרֵ֖י בְּנֵ֣י יִשְׂרָאֵ֑ל וּבְנֵ֣י יִשְׂרָאֵ֔ל יֹצְאִ֖ים בְּיָ֥ד רָמָֽה׃
9 ಐಗುಪ್ತ್ಯರು ಅಂದರೆ ಫರೋಹನ ಕುದುರೆಗಳೂ, ರಥಗಳೂ, ಅವನ ರಾಹುತರೂ, ಸೈನ್ಯದವರೆಲ್ಲರೂ ಅವರ ಹಿಂದೆ ಹೊರಟು ಇಸ್ರಾಯೇಲರು ಪೀಹಹೀರೋತಿನ ಹತ್ತಿರ ಬಾಳ್ಚೆಫೋನಿನ ಎದುರಾಗಿ ಸಮುದ್ರ ತೀರದಲ್ಲಿ ಇಳಿದುಕೊಳ್ಳುತ್ತಿರುವಾಗಲೇ ಅವರ ಸಮೀಪಕ್ಕೆ ಬಂದರು.
וַיִּרְדְּפ֨וּ מִצְרַ֜יִם אַחֲרֵיהֶ֗ם וַיַּשִּׂ֤יגוּ אֹותָם֙ חֹנִ֣ים עַל־הַיָּ֔ם כָּל־סוּס֙ רֶ֣כֶב פַּרְעֹ֔ה וּפָרָשָׁ֖יו וְחֵילֹ֑ו עַל־פִּי֙ הַֽחִירֹ֔ת לִפְנֵ֖י בַּ֥עַל צְפֹֽן׃
10 ೧೦ ಫರೋಹನು ಸಮೀಪಿಸುತ್ತಿರುವಾಗ ಇಸ್ರಾಯೇಲರು ಕಣ್ಣೆತ್ತಿ ತಮ್ಮ ಹಿಂದೆ ಹೊರಟು ಬಂದಿದ್ದ ಐಗುಪ್ತ್ಯರನ್ನು ಕಂಡು, ಬಹಳ ಭಯಪಟ್ಟವರಾಗಿ ಯೆಹೋವನಿಗೆ ಮೊರೆಯಿಟ್ಟರು.
וּפַרְעֹ֖ה הִקְרִ֑יב וַיִּשְׂאוּ֩ בְנֵֽי־יִשְׂרָאֵ֨ל אֶת־עֵינֵיהֶ֜ם וְהִנֵּ֥ה מִצְרַ֣יִם ׀ נֹסֵ֣עַ אַחֲרֵיהֶ֗ם וַיִּֽירְאוּ֙ מְאֹ֔ד וַיִּצְעֲק֥וּ בְנֵֽי־יִשְׂרָאֵ֖ל אֶל־יְהוָֽה׃
11 ೧೧ ಅವರು ಮೋಶೆಗೆ, “ಐಗುಪ್ತ ದೇಶದಲ್ಲಿ ಸಮಾಧಿಗಳಿರಲಿಲ್ಲವೆಂದು ಮರುಭೂಮಿಯಲ್ಲಿ ಸಾಯಲಿ ಎಂದು ನಮ್ಮನ್ನು ಇಲ್ಲಿಗೆ ಕರೆದುಕೊಂಡು ಬಂದೆಯೋ? ಯಾಕೆ ನೀನು ನಮಗೆ ಈ ರೀತಿಮಾಡಿ ಐಗುಪ್ತ ದೇಶದಿಂದ ಕರೆದುಕೊಂಡು ಬಂದೆ?
וַיֹּאמְרוּ֮ אֶל־מֹשֶׁה֒ הַֽמִבְּלִ֤י אֵין־קְבָרִים֙ בְּמִצְרַ֔יִם לְקַחְתָּ֖נוּ לָמ֣וּת בַּמִּדְבָּ֑ר מַה־זֹּאת֙ עָשִׂ֣יתָ לָּ֔נוּ לְהֹוצִיאָ֖נוּ מִמִּצְרָֽיִם׃
12 ೧೨ ನಾವು ಐಗುಪ್ತ ದೇಶದಲ್ಲಿರುವಾಗಲೇ, ‘ನೀನು ನಮ್ಮ ಗೊಡವೆಗೆ ಬರಬೇಡ. ನಾವು ಐಗುಪ್ತ್ಯರಿಗೆ ದಾಸರಾಗಿಯೇ ಇರುವೆವು’ ಎಂಬುದಾಗಿ ನಿನಗೆ ಹೇಳಲಿಲ್ಲವೇ. ನಾವು ಈ ಮರುಭೂಮಿಯಲ್ಲಿ ಸಾಯುವುದಕ್ಕಿಂತ ಐಗುಪ್ತ್ಯರಿಗೆ ದಾಸರಾಗಿರುವುದೇ ಮೇಲಲ್ಲವೇ” ಎಂದು ಹೇಳಿದರು.
הֲלֹא־זֶ֣ה הַדָּבָ֗ר אֲשֶׁר֩ דִּבַּ֨רְנוּ אֵלֶ֤יךָ בְמִצְרַ֙יִם֙ לֵאמֹ֔ר חֲדַ֥ל מִמֶּ֖נּוּ וְנַֽעַבְדָ֣ה אֶת־מִצְרָ֑יִם כִּ֣י טֹ֥וב לָ֙נוּ֙ עֲבֹ֣ד אֶת־מִצְרַ֔יִם מִמֻּתֵ֖נוּ בַּמִּדְבָּֽר׃
13 ೧೩ ಆದರೆ ಮೋಶೆ ಆ ಜನರಿಗೆ, “ನೀವು ಅಂಜಬೇಡಿರಿ. ಸುಮ್ಮನೆ ನಿಂತುಕೊಂಡಿದ್ದು ಯೆಹೋವನು ಈ ಹೊತ್ತು ನಿಮ್ಮನ್ನು ರಕ್ಷಿಸುವ ರೀತಿಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದಿಗೂ ನೋಡುವುದಿಲ್ಲ.
וַיֹּ֨אמֶר מֹשֶׁ֣ה אֶל־הָעָם֮ אַל־תִּירָאוּ֒ הִֽתְיַצְב֗וּ וּרְאוּ֙ אֶת־יְשׁוּעַ֣ת יְהוָ֔ה אֲשֶׁר־יַעֲשֶׂ֥ה לָכֶ֖ם הַיֹּ֑ום כִּ֗י אֲשֶׁ֨ר רְאִיתֶ֤ם אֶת־מִצְרַ֙יִם֙ הַיֹּ֔ום לֹ֥א תֹסִ֛יפוּ לִרְאֹתָ֥ם עֹ֖וד עַד־עֹולָֽם׃
14 ೧೪ ಯೆಹೋವನೇ ನಿಮಗಾಗಿ ಯುದ್ಧಮಾಡುವನು. ನೀವಂತು ಸುಮ್ಮನೇ ನಿಂತುಕೊಂಡಿರಿ” ಎಂದು ಹೇಳಿದನು.
יְהוָ֖ה יִלָּחֵ֣ם לָכֶ֑ם וְאַתֶּ֖ם תַּחֲרִישֽׁוּן׃ פ
15 ೧೫ ಆಗ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ನೀನು ನನಗೆ ಮೊರೆಯಿಡುವುದೇನು? ಮುಂದಕ್ಕೆ ಹೊರಡಬೇಕೆಂದು ಇಸ್ರಾಯೇಲರಿಗೆ ಹೇಳು.
וַיֹּ֤אמֶר יְהוָה֙ אֶל־מֹשֶׁ֔ה מַה־תִּצְעַ֖ק אֵלָ֑י דַּבֵּ֥ר אֶל־בְּנֵי־יִשְׂרָאֵ֖ל וְיִסָּֽעוּ׃
16 ೧೬ ನೀನು ನಿನ್ನ ಕೋಲನ್ನು ಎತ್ತಿ ಸಮುದ್ರದ ಮೇಲೆ ಕೈಚಾಚಿ ಅದನ್ನು ವಿಭಾಗಿಸು, ಆಗ ಇಸ್ರಾಯೇಲರು ಸಮುದ್ರದ ಮಧ್ಯದಲ್ಲಿ ಒಣಗಿದ ನೆಲದ ಮೇಲೆ ನಡೆದುಕೊಂಡು ಹೋಗುವರು.
וְאַתָּ֞ה הָרֵ֣ם אֶֽת־מַטְּךָ֗ וּנְטֵ֧ה אֶת־יָדְךָ֛ עַל־הַיָּ֖ם וּבְקָעֵ֑הוּ וְיָבֹ֧אוּ בְנֵֽי־יִשְׂרָאֵ֛ל בְּתֹ֥וךְ הַיָּ֖ם בַּיַּבָּשָֽׁה׃
17 ೧೭ ನಾನಂತೂ ಐಗುಪ್ತ್ಯರ ಹೃದಯಗಳನ್ನು ಕಠಿಣಪಡಿಸುವೆನು. ಅವರು ಇವರನ್ನು ಹಿಂದಟ್ಟುವರು. ಆಗ ನಾನು ಫರೋಹನ ಮೇಲೆಯೂ, ಅವನ ಸಮಸ್ತ ಸೈನ್ಯದವರ ಮೇಲೆಯೂ, ರಥಗಳ ಮೇಲೆಯೂ ಮತ್ತು ಕುದುರೆಗಳ ಮೇಲೆಯೂ ಪ್ರಖ್ಯಾತಿಗೊಳ್ಳುವೆನು.
וַאֲנִ֗י הִנְנִ֤י מְחַזֵּק֙ אֶת־לֵ֣ב מִצְרַ֔יִם וְיָבֹ֖אוּ אַחֲרֵיהֶ֑ם וְאִכָּבְדָ֤ה בְּפַרְעֹה֙ וּבְכָל־חֵילֹ֔ו בְּרִכְבֹּ֖ו וּבְפָרָשָֽׁיו׃
18 ೧೮ ನಾನು ಫರೋಹನನಲ್ಲಿಯೂ ಅವನ ರಥಗಳಲ್ಲಿಯೂ, ಕುದುರೆಗಳಲ್ಲಿಯೂ ಪ್ರಖ್ಯಾತಿ ಹೊಂದಿದ ನಂತರ ನಾನೇ ಯೆಹೋವನು ಎಂಬುದನ್ನು ಐಗುಪ್ತ್ಯರು ತಿಳಿದುಕೊಳ್ಳುವರು” ಎಂದನು.
וְיָדְע֥וּ מִצְרַ֖יִם כִּי־אֲנִ֣י יְהוָ֑ה בְּהִכָּבְדִ֣י בְּפַרְעֹ֔ה בְּרִכְבֹּ֖ו וּבְפָרָשָֽׁיו׃
19 ೧೯ ಆಗ ಇಸ್ರಾಯೇಲರ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದಕ್ಕೆ ಬಂದನು. ಅವರ ಮುಂದಾಗಿ ಹೋಗುತ್ತಿದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು.
וַיִּסַּ֞ע מַלְאַ֣ךְ הָאֱלֹהִ֗ים הַהֹלֵךְ֙ לִפְנֵי֙ מַחֲנֵ֣ה יִשְׂרָאֵ֔ל וַיֵּ֖לֶךְ מֵאַחֲרֵיהֶ֑ם וַיִּסַּ֞ע עַמּ֤וּד הֶֽעָנָן֙ מִפְּנֵיהֶ֔ם וַיּֽ͏ַעֲמֹ֖ד מֵאַחֲרֵיהֶֽם׃
20 ೨೦ ಆ ಮೇಘಸ್ತಂಭವು ಐಗುಪ್ತ್ಯರ ಪಾಳೆಯಕ್ಕೂ, ಇಸ್ರಾಯೇಲರ ಪಾಳೆಯಕ್ಕೂ ನಡುವೆ ಬಂದಿತು. ಅದು ಐಗುಪ್ತ್ಯರಿಗೆ ಕತ್ತಲನ್ನೂ, ಇಸ್ರಾಯೇಲರಿಗೆ ರಾತ್ರಿಯಲ್ಲಿ ಬೆಳಕನ್ನು ಕೊಟ್ಟಿದ್ದರಿಂದ ಆ ರಾತ್ರಿಯೆಲ್ಲಾ ಒಬ್ಬರ ಹತ್ತಿರಕ್ಕೆ ಒಬ್ಬರು ಬರಲಾಗಲಿಲ್ಲ.
וַיָּבֹ֞א בֵּ֣ין ׀ מַחֲנֵ֣ה מִצְרַ֗יִם וּבֵין֙ מַחֲנֵ֣ה יִשְׂרָאֵ֔ל וַיְהִ֤י הֶֽעָנָן֙ וְהַחֹ֔שֶׁךְ וַיָּ֖אֶר אֶת־הַלָּ֑יְלָה וְלֹא־קָרַ֥ב זֶ֛ה אֶל־זֶ֖ה כָּל־הַלָּֽיְלָה׃
21 ೨೧ ಮೋಶೆ ಸಮುದ್ರದ ಮೇಲೆ ಕೈಚಾಚಿದಾಗ, ಯೆಹೋವನು ಆ ರಾತ್ರಿಯೆಲ್ಲಾ ಮೂಡಣ ದಿಕ್ಕಿನಿಂದ ಬಲವಾದ ಬಿರುಗಾಳಿಯನ್ನು ಬೀಸುವಂತೆ ಮಾಡಿ ಸಮುದ್ರದ ನೀರನ್ನು ಒಂದು ಕಡೆಗೆ ನೂಕಿ ಅದರ ತಳದಲ್ಲಿ ಒಣನೆಲವು ಕಾಣಿಸುವಂತೆ ಮಾಡಿದನು. ನೀರು ಇಬ್ಭಾಗವಾಯಿತು.
וַיֵּ֨ט מֹשֶׁ֣ה אֶת־יָדֹו֮ עַל־הַיָּם֒ וַיֹּ֣ולֶךְ יְהוָ֣ה ׀ אֶת־הַ֠יָּם בְּר֨וּחַ קָדִ֤ים עַזָּה֙ כָּל־הַלַּ֔יְלָה וַיָּ֥שֶׂם אֶת־הַיָּ֖ם לֶחָרָבָ֑ה וַיִּבָּקְע֖וּ הַמָּֽיִם׃
22 ೨೨ ಇಸ್ರಾಯೇಲರು ಸಮುದ್ರದ ಮಧ್ಯದಲ್ಲಿ ಒಣನೆಲದಲ್ಲಿ ನಡೆದುಹೋದರು. ನೀರು ಅವರ ಎಡಗಡೆ ಮತ್ತು ಬಲಗಡೆಗಳಲ್ಲಿ ಗೋಡೆಯಂತೆ ನಿಂತುಕೊಂಡಿತು.
וַיָּבֹ֧אוּ בְנֵֽי־יִשְׂרָאֵ֛ל בְּתֹ֥וךְ הַיָּ֖ם בַּיַּבָּשָׁ֑ה וְהַמַּ֤יִם לָהֶם֙ חֹמָ֔ה מִֽימִינָ֖ם וּמִשְּׂמֹאלָֽם׃
23 ೨೩ ಐಗುಪ್ತ್ಯರೂ ಅಂದರೆ ಫರೋಹನ ಕುದುರೆಗಳೂ, ರಥಗಳೂ, ರಾಹುತರೂ ಅವರನ್ನು ಬೆನ್ನಟ್ಟುವವರಾಗಿ ಅವರ ಹಿಂದೆಯೇ ಸಮುದ್ರದೊಳಗೆ ಬಂದರು.
וַיִּרְדְּפ֤וּ מִצְרַ֙יִם֙ וַיָּבֹ֣אוּ אַחֲרֵיהֶ֔ם כֹּ֚ל ס֣וּס פַּרְעֹ֔ה רִכְבֹּ֖ו וּפָרָשָׁ֑יו אֶל־תֹּ֖וךְ הַיָּֽם׃
24 ೨೪ ಬೆಳಗಿನ ಜಾವದಲ್ಲಿ ಯೆಹೋವನು ಆ ಅಗ್ನಿ ಸ್ತಂಭ ಮತ್ತು ಮೇಘ ಸ್ತಂಭದೊಳಗಿನಿಂದ ಐಗುಪ್ತ್ಯರ ದಂಡಿನ ಕಡೆಗೆ ನೋಡಿ ಅವರಲ್ಲಿ ಗಲಿಬಿಲಿಯನ್ನು ಉಂಟುಮಾಡಿದನು.
וַֽיְהִי֙ בְּאַשְׁמֹ֣רֶת הַבֹּ֔קֶר וַיַּשְׁקֵ֤ף יְהוָה֙ אֶל־מַחֲנֵ֣ה מִצְרַ֔יִם בְּעַמּ֥וּד אֵ֖שׁ וְעָנָ֑ן וַיָּ֕הָם אֵ֖ת מַחֲנֵ֥ה מִצְרָֽיִם׃
25 ೨೫ ಯೆಹೋವನು ಅವರ ರಥಗಳ ಚಕ್ರದ ಕೀಲುಗಳಲ್ಲಿ ವ್ಯತ್ಯಾಸ ಮಾಡಿಬಿಟ್ಟದ್ದರಿಂದ ಐಗುಪ್ತರು ಬಹು ಕಷ್ಟದಿಂದ ರಥಗಳನ್ನು ಸಾಗಿಸಿಕೊಂಡು ಹೋಗಬೇಕಾಯಿತು. ಆಗ ಐಗುಪ್ತ್ಯರು, “ನಾವು ಇಸ್ರಾಯೇಲರ ಮುಂದೆ ನಿಲ್ಲಲಾರೆವು, ಓಡಿ ಹೋಗೋಣ, ಯೆಹೋವನು ಅವರಿಗೋಸ್ಕರ ನಮಗೆ ವಿರೋಧವಾಗಿ ಯುದ್ಧಮಾಡುತ್ತಿದ್ದಾನೆ” ಎಂದು ಹೇಳಿಕೊಂಡರು.
וַיָּ֗סַר אֵ֚ת אֹפַ֣ן מַרְכְּבֹתָ֔יו וַֽיְנַהֲגֵ֖הוּ בִּכְבֵדֻ֑ת וַיֹּ֣אמֶר מִצְרַ֗יִם אָנ֙וּסָה֙ מִפְּנֵ֣י יִשְׂרָאֵ֔ל כִּ֣י יְהוָ֔ה נִלְחָ֥ם לָהֶ֖ם בְּמִצְרָֽיִם פ
26 ೨೬ ಅಷ್ಟರಲ್ಲಿ ಯೆಹೋವನು ಮೋಶೆಗೆ, “ಸಮುದ್ರದ ಮೇಲೆ ನಿನ್ನ ಕೈಚಾಚು, ಆಗ ಅದರ ನೀರು ಮೊದಲಿನಂತೆ ಬಂದು ಐಗುಪ್ತ್ಯರನ್ನೂ, ಅವರ ರಥಗಳನ್ನೂ, ರಾಹುತರನ್ನೂ ಮುಳುಗಿಸುವುದು” ಎಂದು ಹೇಳಿದನು.
וַיֹּ֤אמֶר יְהוָה֙ אֶל־מֹשֶׁ֔ה נְטֵ֥ה אֶת־יָדְךָ֖ עַל־הַיָּ֑ם וְיָשֻׁ֤בוּ הַמַּ֙יִם֙ עַל־מִצְרַ֔יִם עַל־רִכְבֹּ֖ו וְעַל־פָּרָשָֽׁיו׃
27 ೨೭ ಮೋಶೆ ಸಮುದ್ರದ ಮೇಲೆ ಕೈಚಾಚಿದನು. ಬೆಳಗಾಗುವಾಗಲೇ ಸಮುದ್ರದ ನೀರು ಮೊದಲಿದ್ದಂತೆಯೇ ತುಂಬಿಕೊಂಡಿತು. ಐಗುಪ್ತ್ಯರು ಓಡಿಹೋಗುತ್ತಾ ಅದರ ಎದುರಾಗಿಯೇ ಬಂದರು. ಹೀಗೆ ಯೆಹೋವನು ಐಗುಪ್ತ್ಯರನ್ನು ಸಮುದ್ರದೊಳಗೆ ತಳ್ಳಿಬಿಟ್ಟನು.
וַיֵּט֩ מֹשֶׁ֨ה אֶת־יָדֹ֜ו עַל־הַיָּ֗ם וַיָּ֨שָׁב הַיָּ֜ם לִפְנֹ֥ות בֹּ֙קֶר֙ לְאֵ֣יתָנֹ֔ו וּמִצְרַ֖יִם נָסִ֣ים לִקְרָאתֹ֑ו וַיְנַעֵ֧ר יְהוָ֛ה אֶת־מִצְרַ֖יִם בְּתֹ֥וךְ הַיָּֽם׃
28 ೨೮ ನೀರು ಮೊದಲಿನಂತೆ ಬಂದು ಆ ರಥಗಳನ್ನೂ, ರಾಹುತರನ್ನೂ, ಅವರ ಹಿಂದೆ ಸಮುದ್ರದೊಳಗೆ ಹೋಗಿದ್ದ ಫರೋಹನ ಸೈನ್ಯದವರೆಲ್ಲರನ್ನೂ ಮುಳುಗಿಸಿಬಿಟ್ಟಿತ್ತು, ಅವರಲ್ಲಿ ಒಬ್ಬರಾದರೂ ಉಳಿಯಲಿಲ್ಲ.
וַיָּשֻׁ֣בוּ הַמַּ֗יִם וַיְכַסּ֤וּ אֶת־הָרֶ֙כֶב֙ וְאֶת־הַפָּ֣רָשִׁ֔ים לְכֹל֙ חֵ֣יל פַּרְעֹ֔ה הַבָּאִ֥ים אַחֲרֵיהֶ֖ם בַּיָּ֑ם לֹֽא־נִשְׁאַ֥ר בָּהֶ֖ם עַד־אֶחָֽד׃
29 ೨೯ ಇಸ್ರಾಯೇಲರಾದರೋ, ಸಮುದ್ರದೊಳಗೆ ಒಣನೆಲದಲ್ಲೇ ನಡೆದುಹೋದರು. ನೀರು ಅವರ ಎಡಗಡೆ ಮತ್ತು ಬಲಗಡೆಗಳಲ್ಲಿ ಗೋಡೆಯಂತೆ ನಿಂತಿತ್ತು.
וּבְנֵ֧י יִשְׂרָאֵ֛ל הָלְכ֥וּ בַיַּבָּשָׁ֖ה בְּתֹ֣וךְ הַיָּ֑ם וְהַמַּ֤יִם לָהֶם֙ חֹמָ֔ה מִֽימִינָ֖ם וּמִשְּׂמֹאלָֽם
30 ೩೦ ಆ ದಿನದಲ್ಲಿ ಯೆಹೋವನು ಇಸ್ರಾಯೇಲ್ಯರನ್ನು ಐಗುಪ್ತ್ಯರ ಕೈಯಿಂದ ರಕ್ಷಿಸಿದನು. ಐಗುಪ್ತ್ಯರು ಸತ್ತು ಸಮುದ್ರ ತೀರದಲ್ಲಿ ಬಿದ್ದಿರುವುದನ್ನು ಇಸ್ರಾಯೇಲರು ನೋಡಿದರು.
וַיֹּ֨ושַׁע יְהוָ֜ה בַּיֹּ֥ום הַה֛וּא אֶת־יִשְׂרָאֵ֖ל מִיַּ֣ד מִצְרָ֑יִם וַיַּ֤רְא יִשְׂרָאֵל֙ אֶת־מִצְרַ֔יִם מֵ֖ת עַל־שְׂפַ֥ת הַיָּֽם׃
31 ೩೧ ಯೆಹೋವನು ಐಗುಪ್ತ್ಯರಲ್ಲಿ ಮಾಡಿದ ಈ ಪರಾಕ್ರಮ ಕಾರ್ಯವನ್ನು ಇಸ್ರಾಯೇಲರು ನೋಡಿ ಯೆಹೋವನಿಗೆ ಭಯಪಟ್ಟು ಆತನಲ್ಲಿಯೂ ಆತನ ಸೇವಕನಾದ ಮೋಶೆಯಲ್ಲಿಯೂ ನಂಬಿಕೆಯನ್ನಿಟ್ಟರು.
וַיַּ֨רְא יִשְׂרָאֵ֜ל אֶת־הַיָּ֣ד הַגְּדֹלָ֗ה אֲשֶׁ֨ר עָשָׂ֤ה יְהוָה֙ בְּמִצְרַ֔יִם וַיִּֽירְא֥וּ הָעָ֖ם אֶת־יְהוָ֑ה וַיּֽ͏ַאֲמִ֙ינוּ֙ בַּֽיהוָ֔ה וּבְמֹשֶׁ֖ה עַבְדֹּֽו׃ פ

< ವಿಮೋಚನಕಾಂಡ 14 >