< ವಿಮೋಚನಕಾಂಡ 17 >

1 ತರುವಾಯ ಇಸ್ರಾಯೇಲರ ಸಮೂಹವೆಲ್ಲಾ ಯೆಹೋವನ ಅಪ್ಪಣೆಯ ಮೇರೆಗೆ “ಸೀನ್” ಎಂಬ ಮರುಭೂಮಿಯಿಂದ ಹೊರಟು ಮುಂದೆ ಪ್ರಯಾಣ ಮಾಡಿ ರೆಫೀದೀಮಿನಲ್ಲಿ ಇಳಿದುಕೊಂಡರು. ಅಲ್ಲಿಯೂ ಜನರಿಗೆ ಕುಡಿಯುವುದಕ್ಕೆ ನೀರು ಇರಲಿಲ್ಲ.
Jamii yote ya Israeli ili safiri kutoka nyikani ya Sinu, wakifuata maelekezo ya Yahweh. Walieka kambi Refidimu, lakini hapakuwa na maji ya watu kunywa.
2 ಆದಕಾರಣ ಜನರು ಮೋಶೆಯ ಮೇಲೆ ಗುಣುಗುಟ್ಟುತ್ತಾ, “ನಮಗೆ ಕುಡಿಯುವುದಕ್ಕೆ ನೀರು ದೊರಕಿಸಿಕೊಡಬೇಕು” ಎಂದು ಗದ್ದಲವೆಬ್ಬಿಸಲು, ಮೋಶೆಯು ಅವರಿಗೆ, “ನನ್ನ ಸಂಗಡ ಏಕೆ ಜಗಳವಾಡುತ್ತೀರಿ? ಯೆಹೋವನನ್ನು ಏಕೆ ಪರೀಕ್ಷಿಸುತ್ತೀರಿ?” ಎಂದನು.
Hivyo watu wakamlaumu Musa kwa hali yao na kusema, “Tupe maji ya kunywa.” Musa akasema, “Kwanini mnagombana na mimi? Kwanini mnajaribu Yahweh?”
3 ಅಲ್ಲಿ ಜನರು ಬಾಯಾರಿಕೆಯಿಂದ, ಮೋಶೆಗೆ ವಿರುದ್ಧವಾಗಿ ಗುಣುಗುಟ್ಟಿ, “ನೀನು ನಮ್ಮನ್ನೂ, ನಮ್ಮ ಮಕ್ಕಳನ್ನೂ, ದನಗಳನ್ನೂ ಐಗುಪ್ತ ದೇಶದಿಂದ ಇಲ್ಲಿಗೆ ಕರೆದುತಂದು ಈಗ ನೀರಿಲ್ಲದೆ ಸಾಯುವ ಹಾಗೆ ಮಾಡಿದ್ದೇಕೆ?” ಎಂದರು.
Watu walikuwa na kiu sana, na waka mlalamikia Musa. Wakasema, “Kwanini umetutoa Misri? Ili utuue sisi na watoto wetu na mifugo yetu kwa kiu?”
4 ಆಗ ಮೋಶೆ ಯೆಹೋವನಿಗೆ ಮೊರೆಯಿಟ್ಟು, “ಈ ಜನರಿಗಾಗಿ ನಾನೇನು ಮಾಡಲಿ? ಅವರು ನನ್ನನ್ನು ಕಲ್ಲೆಸೆದು ಕೊಲ್ಲುವ ಹಾಗಿದ್ದಾರಲ್ಲ” ಎಂದನು.
Kisha Musa akamlilia Yahweh, “Nini ni fanya kwa hawa watu? Wako tayari ata kunipiga mawe.”
5 ಅದಕ್ಕೆ ಯೆಹೋವನು ಮೋಶೆಗೆ, “ನೀನು ನೈಲ್ ನದಿಯನ್ನು ಹೊಡೆದ ಕೋಲನ್ನು ಕೈಯಲ್ಲಿ ಹಿಡಿದುಕೊಂಡು ಇಸ್ರಾಯೇಲರ ಹಿರಿಯರಲ್ಲಿ ಕೆಲವರನ್ನು ಕರೆದುಕೊಂಡು ಜನರ ಮುಂದೆ ಹೊರಟು, ನಾನು ತೋರಿಸುವ ಸ್ಥಳಕ್ಕೆ ಹೋಗು.
Yahweh akamwambia Musa, “Nenda mbele yao, na uchukuwe baadhi ya wazee wa Israeli. Chukuwa gongo ulilo piga nalo mto, na uende.
6 ಅಲ್ಲಿ ಹೋರೇಬಿನಲ್ಲಿರುವ ಬಂಡೆಯ ಮೇಲೆ ನಾನೇ ನಿನಗೆದುರಾಗಿ ನಿಂತುಕೊಳ್ಳುವೆನು. ನೀನು ಆ ಬಂಡೆಯನ್ನು ಹೊಡೆದಾಗ, ಜನರು ಕುಡಿಯುವಂತೆ ನೀರು ಹೊರಗೆ ಬರುವುದು” ಎಂದನು. ಮೋಶೆ ಇಸ್ರಾಯೇಲರ ಹಿರಿಯರ ಎದುರಿನಲ್ಲಿ ಹಾಗೆಯೇ ಮಾಡಿದನು.
Nitasimama mbele yako pale kwenye mwamba wa Horebu, na utaupiga mwamba. Maji yatatoka ya watu kunywa.” Kisha Musa akafanya hivyo mbele ya wazee wa Israeli.
7 ಇಸ್ರಾಯೇಲರು, “ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನೋ ಇಲ್ಲವೋ?” ಎಂದು ಯೆಹೋವನನ್ನು ಅಲ್ಲಿ ಪರೀಕ್ಷಿಸಿದ್ದರಿಂದ, ಮೋಶೆ ಆ ಸ್ಥಳಕ್ಕೆ ಮಸ್ಸಾ ಎಂತಲೂ ಅವರು ಗದ್ದಲ ಮಾಡಿದ್ದರಿಂದ ಅದಕ್ಕೆ ಮೆರೀಬಾ ಎಂತಲೂ ಹೆಸರಿಟ್ಟನು.
Aliita ile sehemu Massa na Meriba kwasababu ya malalamishi ya Waisraeli, na kwasababu walimjaribu Bwana kwa kusema, “Je Yahweh yupo miongoni mwetu au hapana?”
8 ಅಮಾಲೇಕ್ಯರು ರೆಫೀದೀಮಿನಲ್ಲಿ ಇಸ್ರಾಯೇಲರ ಸಂಗಡ ಯುದ್ಧಮಾಡಿದರು.
Kisha jeshi la watu wa Ameleki wakaja na kushambulia Israeli huko Refidimu.
9 ಆಗ ಮೋಶೆಯು ಯೆಹೋಶುವನಿಗೆ, “ನೀನು ನಮ್ಮ ಜನರಲ್ಲಿ ಕೆಲವರನ್ನು ಆರಿಸಿಕೊಂಡು ಅಮಾಲೇಕ್ಯರೊಡನೆ ಯುದ್ಧಮಾಡಬೇಕು. ನಾನು ನಾಳೆ ದೇವರ ಕೋಲನ್ನು ಕೈಯಲ್ಲಿ ಹಿಡಿದುಕೊಂಡು ಗುಡ್ಡದ ಮೇಲೆ ನಿಂತುಕೊಳ್ಳುವೆನು” ಎಂದು ಹೇಳಿದನು.
Hivyo Musa akamwambia Yoshua, “Chagau wanaume kadha na uende nje. Pigana na Ameleki. Kesho nitasimama juu ya kilima na gongo la Mungu mkononi mwangu.”
10 ೧೦ ಮೋಶೆಯ ಅಪ್ಪಣೆಯ ಮೇರೆಗೆ ಯೆಹೋಶುವನು ಅಮಾಲೇಕ್ಯರೊಡನೆ ಯುದ್ಧಮಾಡಿದನು. ಮೋಶೆಯೂ, ಆರೋನನೂ ಮತ್ತು ಹೂರನು ಗುಡ್ಡದ ಮೇಲೆ ಏರಿ ಹೋದರು.
Hivyo Yoshua akapigana na Ameleki kama Musa alivyo elekeza, wakati Musa, Aruni, na Huri walienda juu ya kilima.
11 ೧೧ ಮೋಶೆಯು ತನ್ನ ಕೈಗಳನ್ನು ಮೇಲಕ್ಕೆ ಎತ್ತಿದಾಗ ಇಸ್ರಾಯೇಲರು ಬಲಗೊಳ್ಳುವರು. ಅವನು ತನ್ನ ಕೈಯನ್ನು ಇಳಿಸಿದಾಗ ಅಮಾಲೇಕ್ಯರು ಬಲಗೊಳ್ಳುವರು.
Wakati Musa alipo kuwa ameshikilia mikono yake juu, Israeli ilikuwa yashinda; alipo acha mikono yake ipumzike, Ameleki alianza kushinda.
12 ೧೨ ಮೋಶೆಯ ಕೈಗಳು ಭಾರವಾದಾಗ, ಆರೋನ ಮತ್ತು ಹೂರನು ಒಂದು ಕಲ್ಲನ್ನು ತಂದು ಇಟ್ಟರು. ಮೋಶೆಯು ಅದರ ಮೇಲೆ ಕುಳಿತುಕೊಂಡನು. ಆರೋನನು ಒಂದು ಕಡೆಯಲ್ಲಿಯೂ, ಹೂರನು ಇನ್ನೊಂದು ಕಡೆಯಲ್ಲಿಯೂ ನಿಂತುಕೊಂಡು ಮೋಶೆಯ ಕೈಗಳನ್ನು ಎತ್ತಿ ಹಿಡಿಯಲು ಸಹಾಯ ಮಾಡಿದರು. ಹೀಗೆ ಅವನ ಕೈಗಳು ಸೂರ್ಯನು ಮುಳುಗುವವರೆಗೆ ಕೆಳಗಿಳಿಸದೆ ಇದ್ದರು.
Mikono ya Musa alipo kuwa mizito, Aruni na Huri walichukuwa jiwe na kuweka chini yake alikalie. Muda huo huo, Aruni na Huri walinyanyua mikono yake juu, mtu mmoja upande mmoja, na mtu mmoja upande mwingine. Hivyo mikono ya Musa ilishikiliwa tuli mpaka jua lilipo zama.
13 ೧೩ ಯೆಹೋಶುವನು ಅಮಾಲೇಕ್ಯರನ್ನು ಮತ್ತು ಅವರ ಭಟರನ್ನು ಖಡ್ಗದಿಂದ ಸೋಲಿಸಿದನು.
Hivyo Yoshua akawashinda watu wa Ameleki kwa upanga.
14 ೧೪ ಆಗ ಯೆಹೋವನು ಮೋಶೆಗೆ, “ಇದನ್ನು ಜ್ಞಾಪಕಾರ್ಥಕವಾಗಿ ಒಂದು ಗ್ರಂಥದಲ್ಲಿ ಬರೆ. ಅದನ್ನು ಯೆಹೋಶುವನಿಗೆ ತಿಳಿಸು. ಏಕೆಂದರೆ ನಾನು ಅಮಾಲೇಕ್ಯರ ನೆನಪು ಭೂಮಿಯ ಮೇಲೆ ಇರದಂತೆ ಸಂಪೂರ್ಣವಾಗಿ ನಾಶಮಾಡಿ ಬಿಡುವೆನು” ಎಂದು ಹೇಳಿದನು.
Yahweh akamwambia Musa, “Andika haya kwenye kitabu na umsomee Yoshua, kwasababu nitaondoa kumbukumbu ya Ameleki kutoka chini ya mbingu.”
15 ೧೫ ಆ ಸ್ಥಳದಲ್ಲಿ ಮೋಶೆಯು ಯಜ್ಞವೇದಿಯನ್ನು ಕಟ್ಟಿಸಿ ಅದಕ್ಕೆ “ಯೆಹೋವ ನಿಸ್ಸಿ” ಎಂದು ಹೆಸರಿಟ್ಟನು.
Kisha Musa akajenga madhabahu na kuiita “Yahweh ni bendera yangu.”
16 ೧೬ ಮೋಶೆಯು, “ಅಮಾಲೇಕ್ಯರ ಕೈಯು ಯೆಹೋವನ ಸಿಂಹಾಸನಕ್ಕೆ ವಿರೋಧವಾಗಿ ಎತ್ತಲ್ಪಟ್ಟಿದ್ದರಿಂದ ಯೆಹೋವನ ಸಿಂಹಾಸನದಾಣೆಗೂ ಅಮಾಲೇಕ್ಯರ ಮೇಲೆ ಯೆಹೋವನಿಗೆ ತಲತಲಾಂತರಗಳಲ್ಲಿ ಯುದ್ಧವಿರುವುದು” ಎಂದನು.
Alisema, “Kwa kuwa mkono ulinyanyuliwa juu kuelekea kiti cha enzi cha Yahweh - kwamba Yahweh ata fanya vita na Ameleki vizazi na vizazi.”

< ವಿಮೋಚನಕಾಂಡ 17 >