< ವಿಮೋಚನಕಾಂಡ 19 >

1 ಇಸ್ರಾಯೇಲರು ಐಗುಪ್ತ ದೇಶದಿಂದ ಹೊರಟ ಮೂರನೆಯ ತಿಂಗಳಿನ ಅದೇ ದಿನದಲ್ಲಿ ಸೀನಾಯಿ ಮರುಭೂಮಿಗೆ ಬಂದರು.
בַּחֹ֙דֶשׁ֙ הַשְּׁלִישִׁ֔י לְצֵ֥את בְּנֵי־יִשְׂרָאֵ֖ל מֵאֶ֣רֶץ מִצְרָ֑יִם בַּיֹּ֣ום הַזֶּ֔ה בָּ֖אוּ מִדְבַּ֥ר סִינָֽי׃
2 ಇಸ್ರಾಯೇಲರು ರೇಫೀದೀಮನ್ನು ಬಿಟ್ಟು ಮರುಭೂಮಿಗೆ ಬಂದು ಮರುಭೂಮಿಯಲ್ಲಿ ಡೇರೆ ಹಾಕಿ ಸೀನಾಯಿ ಬೆಟ್ಟಕ್ಕೆ ಎದುರಾಗಿ ಇಳಿದುಕೊಂಡರು.
וַיִּסְע֣וּ מֵרְפִידִ֗ים וַיָּבֹ֙אוּ֙ מִדְבַּ֣ר סִינַ֔י וַֽיַּחֲנ֖וּ בַּמִּדְבָּ֑ר וַיִּֽחַן־שָׁ֥ם יִשְׂרָאֵ֖ל נֶ֥גֶד הָהָֽר׃
3 ಮೋಶೆ ಬೆಟ್ಟವನ್ನೇರಿ ದೇವರ ಸನ್ನಿಧಿಗೆ ಹೋದನು. ಆಗ ಯೆಹೋವನು ಬೆಟ್ಟದ ಮೇಲಿಂದ ಮೋಶೆಯನ್ನು ಕರೆದು ಅವನಿಗೆ, “ನೀನು ಯಾಕೋಬನ ಮನೆತನದವರಾದ ಇಸ್ರಾಯೇಲರಿಗೆ ಈ ಮಾತುಗಳನ್ನು ತಿಳಿಸಿ ಹೇಳಬೇಕು.
וּמֹשֶׁ֥ה עָלָ֖ה אֶל־הָאֱלֹהִ֑ים וַיִּקְרָ֨א אֵלָ֤יו יְהוָה֙ מִן־הָהָ֣ר לֵאמֹ֔ר כֹּ֤ה תֹאמַר֙ לְבֵ֣ית יַעֲקֹ֔ב וְתַגֵּ֖יד לִבְנֵ֥י יִשְׂרָאֵֽל׃
4 ‘ನಾನು ಐಗುಪ್ತ್ಯರಿಗೆ ಮಾಡಿದ್ದನ್ನೂ, ಹದ್ದು ತನ್ನ ಮರಿಗಳನ್ನು ರೆಕ್ಕೆಗಳ ಮೇಲೆ ಹೊತ್ತುಕೊಳ್ಳುವಂತೆ ನಾನು ನಿಮ್ಮನ್ನು ಹೊತ್ತುಕೊಂಡು ಈ ಸ್ಥಳಕ್ಕೆ ಬರಮಾಡಿದ್ದನ್ನೆಲ್ಲಾ ನೀವು ನೋಡಿದ್ದೀರಿ.
אַתֶּ֣ם רְאִיתֶ֔ם אֲשֶׁ֥ר עָשִׂ֖יתִי לְמִצְרָ֑יִם וָאֶשָּׂ֤א אֶתְכֶם֙ עַל־כַּנְפֵ֣י נְשָׁרִ֔ים וָאָבִ֥א אֶתְכֶ֖ם אֵלָֽי׃
5 ಆದ್ದರಿಂದ ನೀವು ನನ್ನ ಮಾತುಗಳನ್ನು ಶ್ರದ್ಧೆಯಿಂದ ಕೇಳಿ, ನನ್ನ ಒಡಂಬಡಿಕೆಯನ್ನು ಕಾಪಾಡಿಕೊಂಡರೆ, ನೀವು ಎಲ್ಲಾ ಜನಾಂಗಗಳಲ್ಲಿ ನನಗೆ ಸ್ವಕೀಯ ಜನರಾಗಿರುವಿರಿ. ಸಮಸ್ತ ಭೂಮಿಯು ನನ್ನದೇ.
וְעַתָּ֗ה אִם־שָׁמֹ֤ועַ תִּשְׁמְעוּ֙ בְּקֹלִ֔י וּשְׁמַרְתֶּ֖ם אֶת־בְּרִיתִ֑י וִהְיִ֨יתֶם לִ֤י סְגֻלָּה֙ מִכָּל־הָ֣עַמִּ֔ים כִּי־לִ֖י כָּל־הָאָֽרֶץ׃
6 ನೀವು ನನಗೆ ಶ್ರೇಷ್ಠ ಯಾಜಕರೂ, ಪರಿಶುದ್ಧ ಜನರೂ ಆಗಿರುವಿರಿ’ ನೀನು ಇಸ್ರಾಯೇಲರಿಗೆ ಹೇಳಬೇಕಾದ ಮಾತುಗಳು ಇವೇ” ಅಂದನು.
וְאַתֶּ֧ם תִּהְיוּ־לִ֛י מַמְלֶ֥כֶת כֹּהֲנִ֖ים וְגֹ֣וי קָדֹ֑ושׁ אֵ֚לֶּה הַדְּבָרִ֔ים אֲשֶׁ֥ר תְּדַבֵּ֖ר אֶל־בְּנֵ֥י יִשְׂרָאֵֽל׃
7 ಆಗ ಮೋಶೆ ಬಂದು ಜನರ ಹಿರಿಯರನ್ನು ಒಟ್ಟಾಗಿ ಸೇರಿಸಿದನು. ಯೆಹೋವನು ಆಜ್ಞಾಪಿಸಿದ್ದ ಈ ಮಾತುಗಳನ್ನೆಲ್ಲಾ ಅವರಿಗೆ ತಿಳಿಸಿದನು.
וַיָּבֹ֣א מֹשֶׁ֔ה וַיִּקְרָ֖א לְזִקְנֵ֣י הָעָ֑ם וַיָּ֣שֶׂם לִפְנֵיהֶ֗ם אֵ֚ת כָּל־הַדְּבָרִ֣ים הָאֵ֔לֶּה אֲשֶׁ֥ר צִוָּ֖הוּ יְהוָֽה׃
8 ಜನರೆಲ್ಲರೂ ಒಗ್ಗಟ್ಟಾಗಿ, “ಯೆಹೋವನು ಹೇಳಿದಂತೆಯೇ ಮಾಡುವೆವು” ಎಂದು ಉತ್ತರಕೊಟ್ಟರು. ಮೋಶೆ ಯೆಹೋವನ ಬಳಿಗೆ ಹಿಂತಿರುಗಿ ಹೋಗಿ ಅವರು ಹೇಳಿದ ಮಾತುಗಳನ್ನು ಆತನಿಗೆ ಹೇಳಿದನು.
וַיַּעֲנ֨וּ כָל־הָעָ֤ם יַחְדָּו֙ וַיֹּ֣אמְר֔וּ כֹּ֛ל אֲשֶׁר־דִּבֶּ֥ר יְהוָ֖ה נַעֲשֶׂ֑ה וַיָּ֧שֶׁב מֹשֶׁ֛ה אֶת־דִּבְרֵ֥י הָעָ֖ם אֶל־יְהוָֽה׃
9 ಯೆಹೋವನು ಮೋಶೆಗೆ, “ಇಗೋ, ನಾನು ನಿನ್ನ ಸಂಗಡ ಮಾತನಾಡುವಾಗ, ಜನರು ಕೇಳಿ ಯಾವಾಗಲೂ ನಿನ್ನನ್ನು ನಂಬುವಂತೆ ನಾನು ಮೇಘದೊಳಗಿನಿಂದ ನಿನ್ನ ಬಳಿಗೆ ಬರುತ್ತೇನೆ” ಎಂದು ಹೇಳಿದನು. ಮೋಶೆ ಜನರ ಮಾತುಗಳನ್ನು ಯೆಹೋವನಿಗೆ ತಿಳಿಸಿದನು.
וַיֹּ֨אמֶר יְהוָ֜ה אֶל־מֹשֶׁ֗ה הִנֵּ֨ה אָנֹכִ֜י בָּ֣א אֵלֶיךָ֮ בְּעַ֣ב הֶֽעָנָן֒ בַּעֲב֞וּר יִשְׁמַ֤ע הָעָם֙ בְּדַבְּרִ֣י עִמָּ֔ךְ וְגַם־בְּךָ֖ יַאֲמִ֣ינוּ לְעֹולָ֑ם וַיַּגֵּ֥ד מֹשֶׁ֛ה אֶת־דִּבְרֵ֥י הָעָ֖ם אֶל־יְהוָֽה׃
10 ೧೦ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ನೀನು ಜನರ ಬಳಿಗೆ ಹೋಗಿ, ಈ ದಿನ ಮತ್ತು ನಾಳೆ ಅವರನ್ನು ಶುದ್ಧಗೊಳಿಸು. ನನ್ನ ಬರುವಿಕೆಗಾಗಿ ಅವರನ್ನು ಸಿದ್ಧಗೊಳಿಸು. ಅವರು ತಮ್ಮ ಬಟ್ಟೆಗಳನ್ನು ತೊಳೆದುಕೊಂಡು,
וַיֹּ֨אמֶר יְהוָ֤ה אֶל־מֹשֶׁה֙ לֵ֣ךְ אֶל־הָעָ֔ם וְקִדַּשְׁתָּ֥ם הַיֹּ֖ום וּמָחָ֑ר וְכִבְּס֖וּ שִׂמְלֹתָֽם׃
11 ೧೧ ಮೂರನೆಯ ದಿನದಲ್ಲಿ ಅವರು ಸಿದ್ಧರಾಗಿರಬೇಕು. ಮೂರನೆಯ ದಿನದಲ್ಲಿ ಯೆಹೋವನು ಸಮಸ್ತ ಜನರಿಗೂ ಪ್ರತ್ಯಕ್ಷನಾಗಿ ಸೀನಾಯಿ ಬೆಟ್ಟದ ಮೇಲೆ ಇಳಿದು ಬರುವನು.
וְהָי֥וּ נְכֹנִ֖ים לַיֹּ֣ום הַשְּׁלִישִׁ֑י כִּ֣י ׀ בַּיֹּ֣ום הַשְּׁלִישִׁ֗י יֵרֵ֧ד יְהוָ֛ה לְעֵינֵ֥י כָל־הָעָ֖ם עַל־הַ֥ר סִינָֽי׃
12 ೧೨ ಜನರು ಹತ್ತಿರ ಬಾರದಂತೆ ನೀನು ಬೆಟ್ಟದ ಸುತ್ತಲೂ ಗಡಿಯನ್ನು ಮಾಡಿಸಿ ಜನರಿಗೆ, ‘ಎಚ್ಚರಿಕೆಯಾಗಿರಿ, ನೀವು ಈ ಬೆಟ್ಟವನ್ನು ಏರದಂತೆಯೂ ಅದರ ಗಡಿಯನ್ನು ಮುಟ್ಟದಂತೆಯೂ ಜಾಗ್ರತೆಯಿಂದಿರಬೇಕು. ಬೆಟ್ಟವನ್ನು ಮುಟ್ಟಿದವರೆಲ್ಲಾ ಖಂಡಿತವಾಗಿ ಸತ್ತುಹೋಗುವರು.’
וְהִגְבַּלְתָּ֤ אֶת־הָעָם֙ סָבִ֣יב לֵאמֹ֔ר הִשָּׁמְר֥וּ לָכֶ֛ם עֲלֹ֥ות בָּהָ֖ר וּנְגֹ֣עַ בְּקָצֵ֑הוּ כָּל־הַנֹּגֵ֥עַ בָּהָ֖ר מֹ֥ות יוּמָֽת׃
13 ೧೩ ಅಂಥವನನ್ನು ಯಾರೂ ಮುಟ್ಟಬಾರದು. ಕಲ್ಲೆಸೆದು ಅಥವಾ ಬಾಣವನ್ನು ಎಸೆದು ಖಂಡಿತವಾಗಿ ಅವನನ್ನು ಕೊಲ್ಲಬೇಕು. ಮನುಷ್ಯನಾಗಲಿ, ಪಶುಗಳಾಗಲಿ ಬೆಟ್ಟವನ್ನು ಮುಟ್ಟಿದರೆ ಸಾಯಲೇಬೇಕು. ಕೊಂಬಿನ ಧ್ವನಿ ದೀರ್ಘವಾಗಿ ಕೇಳಿಸಿದಾಗ ಅವರು ಬೆಟ್ಟದ ಸಮೀಪಕ್ಕೆ ಬರಬೇಕು” ಎಂದು ಹೇಳು ಎಂದನು.
לֹא־תִגַּ֨ע בֹּ֜ו יָ֗ד כִּֽי־סָקֹ֤ול יִסָּקֵל֙ אֹו־יָרֹ֣ה יִיָּרֶ֔ה אִם־בְּהֵמָ֥ה אִם־אִ֖ישׁ לֹ֣א יִחְיֶ֑ה בִּמְשֹׁךְ֙ הַיֹּבֵ֔ל הֵ֖מָּה יַעֲל֥וּ בָהָֽר׃
14 ೧೪ ಮೋಶೆ ಬೆಟ್ಟದಿಂದಿಳಿದು ಜನರ ಬಳಿಗೆ ಬಂದು, ಅವರನ್ನು ಶುದ್ಧಗೊಳಿಸಿದನು. ಅವರು ತಮ್ಮ ಬಟ್ಟೆಗಳನ್ನು ತೊಳೆದುಕೊಂಡು ಶುದ್ಧರಾದರು.
וַיֵּ֧רֶד מֹשֶׁ֛ה מִן־הָהָ֖ר אֶל־הָעָ֑ם וַיְקַדֵּשׁ֙ אֶת־הָעָ֔ם וַֽיְכַבְּס֖וּ שִׂמְלֹתָֽם׃
15 ೧೫ ಆಗ ಮೋಶೆ ಜನರಿಗೆ, “ಮೂರನೆಯ ದಿನದಲ್ಲಿ ಸಿದ್ಧವಾಗಿರಿ. ಯಾವ ಪುರುಷನೂ ಸ್ತ್ರೀಸಂಗ ಮಾಡಬಾರದು” ಎಂದು ಹೇಳಿದನು.
וַיֹּ֙אמֶר֙ אֶל־הָעָ֔ם הֱי֥וּ נְכֹנִ֖ים לִשְׁלֹ֣שֶׁת יָמִ֑ים אַֽל־תִּגְּשׁ֖וּ אֶל־אִשָּֽׁה׃
16 ೧೬ ಮೂರನೆಯ ದಿನದಲ್ಲಿ ಸೂರ್ಯೋದಯವಾಗಲು ಆ ಬೆಟ್ಟದ ಮೇಲೆ ಗುಡುಗು, ಮಿಂಚೂ, ಕಾರ್ಮುಗಿಲೂ, ತುತ್ತೂರಿಯ ಮಹಾಧ್ವನಿಯೂ ಉಂಟಾಗಲು ಪಾಳೆಯಲ್ಲಿದ್ದ ಜನರೆಲ್ಲರೂ ನಡುಗಿದರು.
וַיְהִי֩ בַיֹּ֨ום הַשְּׁלִישִׁ֜י בִּֽהְיֹ֣ת הַבֹּ֗קֶר וַיְהִי֩ קֹלֹ֨ת וּבְרָקִ֜ים וְעָנָ֤ן כָּבֵד֙ עַל־הָהָ֔ר וְקֹ֥ל שֹׁפָ֖ר חָזָ֣ק מְאֹ֑ד וַיֶּחֱרַ֥ד כָּל־הָעָ֖ם אֲשֶׁ֥ר בַּֽמַּחֲנֶֽה׃
17 ೧೭ ದೇವದರ್ಶನಕ್ಕಾಗಿ ಮೋಶೆ ಜನರನ್ನು ಪಾಳೆಯದ ಹೊರಕ್ಕೆ ಕರೆದುಕೊಂಡು ಬರಲು, ಅವರು ಬೆಟ್ಟದ ಕೆಳಗೆ ನಿಂತುಕೊಂಡರು.
וַיֹּוצֵ֨א מֹשֶׁ֧ה אֶת־הָעָ֛ם לִקְרַ֥את הָֽאֱלֹהִ֖ים מִן־הַֽמַּחֲנֶ֑ה וַיִּֽתְיַצְּב֖וּ בְּתַחְתִּ֥ית הָהָֽר׃
18 ೧೮ ಯೆಹೋವನು ಬೆಂಕಿಯೊಳಗೆ ಸೀನಾಯಿ ಬೆಟ್ಟದ ಮೇಲೆ ಇಳಿದು ಬಂದನು. ಆದುದರಿಂದ ಆ ಬೆಟ್ಟವೆಲ್ಲಾ ಹೊಗೆಯಿಂದ ಆವರಿಸಿಕೊಂಡಿತು. ಆ ಹೊಗೆ ಆವಿಗೆಯ ಹೊಗೆಯಂತೆ ಏರಿತು. ಅದಲ್ಲದೆ ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು.
וְהַ֤ר סִינַי֙ עָשַׁ֣ן כֻּלֹּ֔ו מִ֠פְּנֵי אֲשֶׁ֨ר יָרַ֥ד עָלָ֛יו יְהוָ֖ה בָּאֵ֑שׁ וַיַּ֤עַל עֲשָׁנֹו֙ כְּעֶ֣שֶׁן הַכִּבְשָׁ֔ן וַיֶּחֱרַ֥ד כָּל־הָהָ֖ר מְאֹֽד׃
19 ೧೯ ತುತ್ತೂರಿಯ ಧ್ವನಿ ಹೆಚ್ಚಾಗುತ್ತಾ ಬಂದಾಗ, ಮೋಶೆಯು ದೇವರ ಸಂಗಡ ಮಾತನಾಡಿದನು. ಆಗ ದೇವರು ಎತ್ತರದ ಧ್ವನಿಯಲ್ಲಿ ಅವನಿಗೆ ಉತ್ತರಕೊಟ್ಟನು.
וַיְהִי֙ קֹ֣ול הַשֹּׁופָ֔ר הֹולֵ֖ךְ וְחָזֵ֣ק מְאֹ֑ד מֹשֶׁ֣ה יְדַבֵּ֔ר וְהָאֱלֹהִ֖ים יַעֲנֶ֥נּוּ בְקֹֽול׃
20 ೨೦ ಯೆಹೋವನು ಸೀನಾಯಿ ಬೆಟ್ಟದ ಶಿಖರಕ್ಕೆ ಇಳಿದು ಬಂದನು. ಆತನು ಬೆಟ್ಟದ ತುದಿಗೆ ಬಾ ಎಂದು ಮೋಶೆಯನ್ನು ಕರೆಯಲು ಅವನು ಬೆಟ್ಟವನ್ನೇರಿದನು.
וַיֵּ֧רֶד יְהוָ֛ה עַל־הַ֥ר סִינַ֖י אֶל־רֹ֣אשׁ הָהָ֑ר וַיִּקְרָ֨א יְהוָ֧ה לְמֹשֶׁ֛ה אֶל־רֹ֥אשׁ הָהָ֖ר וַיַּ֥עַל מֹשֶֽׁה׃
21 ೨೧ ಆಗ ಯೆಹೋವನು ಮೋಶೆಗೆ, “ನೀನು ಇಳಿದು ಹೋಗಿ ಜನರನ್ನು ಎಚ್ಚರಿಸಬೇಕು. ಅವರು ನೋಡಬೇಕೆಂಬ ಆಶೆಯಿಂದ ಗಡಿಯನ್ನು ದಾಟಿ ಯೆಹೋವನ ಹತ್ತಿರಕ್ಕೆ ಬಂದರೆ ಅವರಲ್ಲಿ ಬಹಳ ಜನರು ನಾಶವಾಗುವರು.
וַיֹּ֤אמֶר יְהוָה֙ אֶל־מֹשֶׁ֔ה רֵ֖ד הָעֵ֣ד בָּעָ֑ם פֶּן־יֶהֶרְס֤וּ אֶל־יְהוָה֙ לִרְאֹ֔ות וְנָפַ֥ל מִמֶּ֖נּוּ רָֽב׃
22 ೨೨ ಯೆಹೋವನ ಸನ್ನಿಧಿಗೆ ಬರುವ ಯಾಜಕರೂ ತಮ್ಮನ್ನು ಶುದ್ಧಿಪಡಿಸಿಕೊಳ್ಳಬೇಕು. ಇಲ್ಲವಾದರೆ ಯೆಹೋವನು ಪಕ್ಕನೆ ಅವರನ್ನೂ ಸಂಹಾರಮಾಡುವನು” ಎಂದು ಹೇಳಿದನು.
וְגַ֧ם הַכֹּהֲנִ֛ים הַנִּגָּשִׁ֥ים אֶל־יְהוָ֖ה יִתְקַדָּ֑שׁוּ פֶּן־יִפְרֹ֥ץ בָּהֶ֖ם יְהוָֽה׃
23 ೨೩ ಅದಕ್ಕೆ ಮೋಶೆ ಯೆಹೋವನಿಗೆ, “ಜನರು ಸೀನಾಯಿ ಬೆಟ್ಟವನ್ನೇರುವುದಕ್ಕೆ ಆಗುವುದಿಲ್ಲ. ಯಾಕೆಂದರೆ ‘ಬೆಟ್ಟದ ಸುತ್ತಲೂ ಗಡಿಯನ್ನು ಹಾಕಿ ನಿನಗಾಗಿ ಶುದ್ಧಮಾಡು’” ಎಂದು ಆಜ್ಞಾಪಿಸಿರುವೆಯಲ್ಲಾ ಎಂದನು.
וַיֹּ֤אמֶר מֹשֶׁה֙ אֶל־יְהוָ֔ה לֹא־יוּכַ֣ל הָעָ֔ם לַעֲלֹ֖ת אֶל־הַ֣ר סִינָ֑י כִּֽי־אַתָּ֞ה הַעֵדֹ֤תָה בָּ֙נוּ֙ לֵאמֹ֔ר הַגְבֵּ֥ל אֶת־הָהָ֖ר וְקִדַּשְׁתֹּֽו׃
24 ೨೪ ಯೆಹೋವನು ಮೋಶೆಗೆ, “ನೀನು ಇಳಿದುಹೋಗಿ ಆರೋನನ್ನು ನಿನ್ನ ಸಂಗಡ ಕರೆದುಕೊಂಡು ಮೇಲಕ್ಕೆ ಬಾ. ಆದರೆ ಯಾಜಕರೂ, ಜನರೂ ಆ ಗಡಿಯನ್ನು ದಾಟಿ ಯೆಹೋವನ ಹತ್ತಿರ ಬರಬಾರದು. ದಾಟಿ ಬಂದರೆ ನಾನು ಅವರನ್ನು ಪಕ್ಕನೇ ಸಂಹಾರ ಮಾಡುವೆನು” ಎಂದು ಹೇಳಿದನು.
וַיֹּ֨אמֶר אֵלָ֤יו יְהוָה֙ לֶךְ־רֵ֔ד וְעָלִ֥יתָ אַתָּ֖ה וְאַהֲרֹ֣ן עִמָּ֑ךְ וְהַכֹּהֲנִ֣ים וְהָעָ֗ם אַל־יֽ͏ֶהֶרְס֛וּ לַעֲלֹ֥ת אֶל־יְהוָ֖ה פֶּן־יִפְרָץ־בָּֽם׃
25 ೨೫ ಮೋಶೆ ಜನರ ಬಳಿಗೆ ಇಳಿದುಹೋಗಿ ಆ ಮಾತುಗಳನ್ನು ಅವರಿಗೆ ತಿಳಿಸಿದನು.
וַיֵּ֥רֶד מֹשֶׁ֖ה אֶל־הָעָ֑ם וַיֹּ֖אמֶר אֲלֵהֶֽם׃ ס

< ವಿಮೋಚನಕಾಂಡ 19 >