< ವಿಮೋಚನಕಾಂಡ 20 >

1 ದೇವರು ಈ ಎಲ್ಲಾ ಆಜ್ಞಾವಿಧಿಗಳನ್ನು ಅವರಿಗೆ ಕೊಟ್ಟನು:
וַיְדַבֵּ֣ר אֱלֹהִ֔ים אֵ֛ת כָּל־הַדְּבָרִ֥ים הָאֵ֖לֶּה לֵאמֹֽר׃ ס
2 “ನೀನು ಗುಲಾಮತನದಲ್ಲಿದ್ದ ಐಗುಪ್ತ ದೇಶದೊಳಗಿಂದ ನಿನ್ನನ್ನು ಬಿಡುಗಡೆಮಾಡಿದ ಯೆಹೋವನು ಎಂಬ ‘ನಾನೇ ನಿನ್ನ ದೇವರು’
אָֽנֹכִ֖י֙ יְהוָ֣ה אֱלֹהֶ֑֔יךָ אֲשֶׁ֧ר הֹוצֵאתִ֛יךָ מֵאֶ֥רֶץ מִצְרַ֖יִם מִבֵּ֣֥ית עֲבָדִֽ֑ים׃
3 ನಾನಲ್ಲದೆ ನಿಮಗೆ ಬೇರೆ ದೇವರುಗಳು ಇರಬಾರದು.
לֹֽ֣א יִהְיֶֽה־לְךָ֛֩ אֱלֹהִ֥֨ים אֲחֵרִ֖֜ים עַל־פָּנָֽ֗יַ
4 “ಯಾವ ಮೂರ್ತಿಯನ್ನೂ ಮಾಡಿಕೊಳ್ಳಬಾರದು. ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ, ಭೂಮಿಯ ಕೆಳಗಣ ನೀರಿನಲ್ಲಾಗಲಿ ಇರುವ ಯಾವುದರ ರೂಪವನ್ನೂ ಮಾಡಿಕೊಳ್ಳಬಾರದು.
לֹֽ֣א תֽ͏ַעֲשֶׂ֨ה־לְךָ֥֣ פֶ֣֙סֶל֙ ׀ וְכָל־תְּמוּנָ֡֔ה אֲשֶׁ֤֣ר בַּשָּׁמַ֣֙יִם֙ ׀ מִמַּ֡֔עַל וֽ͏ַאֲשֶׁ֥ר֩ בָּאָ֖֨רֶץ מִתָּ֑͏ַ֜חַת וַאֲשֶׁ֥֣ר בַּמַּ֖֣יִם ׀ מִתַּ֥֣חַת לָאָֽ֗רֶץ
5 ಅವುಗಳಿಗೆ ಅಡ್ಡ ಬೀಳಬಾರದು, ಪೂಜೆ ಮಾಡಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಬಿಟ್ಟುಕೊಡುವುದಿಲ್ಲ. ಆದುದರಿಂದ ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ, ಮೂರು ನಾಲ್ಕು ತಲೆಗಳವರೆಗೆ ಬರಮಾಡುವೆನು.
לֹֽא־תִשְׁתַּחְוֶ֥֣ה לָהֶ֖ם֮ וְלֹ֣א תָעָבְדֵ֑ם֒ כִּ֣י אֽ͏ָנֹכִ֞י יְהוָ֤ה אֱלֹהֶ֙יךָ֙ אֵ֣ל קַנָּ֔א פֹּ֠קֵד עֲוֹ֨ן אָבֹ֧ת עַל־בָּנִ֛ים עַל־שִׁלֵּשִׁ֥ים וְעַל־רִבֵּעִ֖ים לְשֹׂנְאָֽ֑י׃
6 ನನ್ನನ್ನು ಪ್ರೀತಿಸಿ ನನ್ನ ಆಜ್ಞೆಗಳನ್ನು ಕೈಗೊಳ್ಳುವವರಿಗಾದರೋ ಸಾವಿರ ತಲೆಗಳವರೆಗೆ ದಯೆತೋರಿಸುವೆನು.
וְעֹ֥֤שֶׂה חֶ֖֙סֶד֙ לַאֲלָפִ֑֔ים לְאֹהֲבַ֖י וּלְשֹׁמְרֵ֥י מִצְוֹתָֽי׃ ס
7 ನಿನ್ನ ದೇವರಾದ ಯೆಹೋವನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಎತ್ತಬಾರದು. ಯೆಹೋವನು ತನ್ನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಎತ್ತುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.
לֹ֥א תִשָּׂ֛א אֶת־שֵֽׁם־יְהוָ֥ה אֱלֹהֶ֖יךָ לַשָּׁ֑וְא כִּ֣י לֹ֤א יְנַקֶּה֙ יְהוָ֔ה אֵ֛ת אֲשֶׁר־יִשָּׂ֥א אֶת־שְׁמֹ֖ו לַשָּֽׁוְא׃ פ
8 “ಸಬ್ಬತ್ ದಿನವನ್ನು ದೇವರ ದಿನವೆಂದು ಆಚರಣೆಗೆ ತರುವುದಕ್ಕೆ ನೆನಪಿನಲ್ಲಿಟ್ಟುಕೊಳ್ಳಬೇಕು.
זָכֹ֛ור֩ אֶת־יֹ֥֨ום הַשַּׁבָּ֖֜ת לְקַדְּשֹֽׁ֗ו
9 ಆರು ದಿನಗಳು ನೀನು ದುಡಿದು ನಿನ್ನ ಕೆಲಸವನ್ನೆಲ್ಲಾ ಮಾಡಿಕೊಳ್ಳಬೇಕು.
שֵׁ֤֣שֶׁת יָמִ֣ים֙ תּֽ͏ַעֲבֹ֔ד֮ וְעָשִׂ֖֣יתָ כָּל־מְלַאכְתֶּֽךָ֒
10 ೧೦ ಆದರೆ ಏಳನೆಯ ದಿನವು ನಿನ್ನ ದೇವರಾದ ಯೆಹೋವನಿಗೆ ಮೀಸಲಾದ ವಿಶ್ರಾಂತಿಯ ಸಬ್ಬತ್ ದಿನವಾಗಿದೆ. ಆ ದಿನದಲ್ಲಿ ನೀನು ಯಾವ ಕೆಲಸವನ್ನು ಮಾಡಬಾರದು. ನಿನ್ನ ಗಂಡುಮಕ್ಕಳು, ಹೆಣ್ಣುಮಕ್ಕಳು, ಗಂಡಾಳು, ಹೆಣ್ಣಾಳು, ಪಶುಪ್ರಾಣಿಗಳು ನಿನ್ನ ಊರಿನಲ್ಲಿರುವ ಅನ್ಯದೇಶದವನು ಸಹ ಯಾವ ಕೆಲಸವನ್ನೂ ಮಾಡಬಾರದು.
וְיֹ֙ום֙ הַשְּׁבִיעִ֔֜י שַׁבָּ֖֣ת ׀ לַיהוָ֣ה אֱלֹהֶ֑֗יךָ לֹֽ֣א־תַעֲשֶׂ֣֨ה כָל־מְלָאכָ֡֜ה אַתָּ֣ה ׀ וּבִנְךָֽ֣־וּ֠בִתֶּ֗ךָ עַבְדְּךָ֤֨ וַאֲמָֽתְךָ֜֙ וּבְהֶמְתֶּ֔֗ךָ וְגֵרְךָ֖֙ אֲשֶׁ֥֣ר בִּשְׁעָרֶֽ֔יךָ
11 ೧೧ ಆರು ದಿನಗಳಲ್ಲಿ ಯೆಹೋವನು ಭೂಮ್ಯಾಕಾಶಗಳನ್ನೂ, ಸಮುದ್ರವನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ನಿರ್ಮಾಣ ಮಾಡಿ, ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನು. ಆದುದರಿಂದ ಯೆಹೋವನು ಸಬ್ಬತ್ ದಿನವನ್ನು ತನ್ನ ಪರಿಶುದ್ಧ ದಿನವಾಗಿರಲಿ ಎಂದು ಆಶೀರ್ವದಿಸಿದನು.
כִּ֣י שֵֽׁשֶׁת־יָמִים֩ עָשָׂ֨ה יְהוָ֜ה אֶת־הַשָּׁמַ֣יִם וְאֶת־הָאָ֗רֶץ אֶת־הַיָּם֙ וְאֶת־כָּל־אֲשֶׁר־בָּ֔ם וַיָּ֖נַח בַּיֹּ֣ום הַשְּׁבִיעִ֑י עַל־כֵּ֗ן בֵּרַ֧ךְ יְהוָ֛ה אֶת־יֹ֥ום הַשַּׁבָּ֖ת וַֽיְקַדְּשֵֽׁהוּ׃ ס
12 ೧೨ “ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು, ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಬದುಕುವಿ.
כַּבֵּ֥ד אֶת־אָבִ֖יךָ וְאֶת־אִמֶּ֑ךָ לְמַ֙עַן֙ יַאֲרִכ֣וּן יָמֶ֔יךָ עַ֚ל הָאֲדָמָ֔ה אֲשֶׁר־יְהוָ֥ה אֱלֹהֶ֖יךָ נֹתֵ֥ן לָֽךְ׃ ס
13 ೧೩ “ಕೊಲೆ ಮಾಡಬಾರದು.
לֹ֥֖א תִּֿרְצָֽ֖ח׃ ס
14 ೧೪ “ವ್ಯಭಿಚಾರಮಾಡಬಾರದು.
לֹ֣֖א תִּֿנְאָֽ֑ף׃ ס
15 ೧೫ “ಕದಿಯಬಾರದು.
לֹ֣֖א תִּֿגְנֹֽ֔ב׃ ס
16 ೧೬ “ಮತ್ತೊಬ್ಬನ ಮೇಲೆ ಸುಳ್ಳುಸಾಕ್ಷಿ ಹೇಳಬಾರದು.
לֹֽא־תַעֲנֶ֥ה בְרֵעֲךָ֖ עֵ֥ד שָֽׁקֶר׃ ס
17 ೧೭ “ಮತ್ತೊಬ್ಬನ ಮನೆಯನ್ನು ನೋಡಿ ಆಶೆಪಡಬಾರದು. ಮತ್ತೊಬ್ಬನ ಹೆಂಡತಿ, ಗಂಡಾಳು, ಹೆಣ್ಣಾಳು, ಎತ್ತು, ಕತ್ತೆ ಮುಂತಾದ ಯಾವುದನ್ನೂ ಬಯಸಬಾರದು.”
לֹ֥א תַחְמֹ֖ד בֵּ֣ית רֵעֶ֑ךָ לֹֽא־תַחְמֹ֞ד אֵ֣שֶׁת רֵעֶ֗ךָ וְעַבְדֹּ֤ו וַאֲמָתֹו֙ וְשֹׁורֹ֣ו וַחֲמֹרֹ֔ו וְכֹ֖ל אֲשֶׁ֥ר לְרֵעֶֽךָ׃ פ
18 ೧೮ ಆ ಗುಡುಗು, ಮಿಂಚು, ತುತ್ತೂರಿಯ ಧ್ವನಿ, ಹಾಗೂ ಬೆಟ್ಟದಿಂದ ಹೊರಬರುತ್ತಿದ್ದ ಹೊಗೆಯನ್ನು ಜನರೆಲ್ಲರೂ ನೋಡಿ, ನಡುಗುತ್ತಾ ದೂರದಲ್ಲಿ ನಿಂತುಕೊಂಡರು.
וְכָל־הָעָם֩ רֹאִ֨ים אֶת־הַקֹּולֹ֜ת וְאֶת־הַלַּפִּידִ֗ם וְאֵת֙ קֹ֣ול הַשֹּׁפָ֔ר וְאֶת־הָהָ֖ר עָשֵׁ֑ן וַיַּ֤רְא הָעָם֙ וַיָּנֻ֔עוּ וַיּֽ͏ַעַמְד֖וּ מֵֽרָחֹֽק׃
19 ೧೯ ಅವರು ಮೋಶೆಗೆ, “ನೀನೇ ನಮ್ಮ ಸಂಗಡ ಮಾತನಾಡು, ನಾವು ಕೇಳುತ್ತೇವೆ. ದೇವರು ನಮ್ಮ ಸಂಗಡ ಮಾತನಾಡಿದರೆ ನಾವು ಸತ್ತು ಹೋಗುತ್ತೇವೆ” ಎಂದು ಹೇಳಿದರು.
וַיֹּֽאמְרוּ֙ אֶל־מֹשֶׁ֔ה דַּבֵּר־אַתָּ֥ה עִמָּ֖נוּ וְנִשְׁמָ֑עָה וְאַל־יְדַבֵּ֥ר עִמָּ֛נוּ אֱלֹהִ֖ים פֶּן־נָמֽוּת׃
20 ೨೦ ಅದಕ್ಕೆ ಮೋಶೆಯು ಜನರಿಗೆ, “ಭಯಪಡಬೇಡಿರಿ, ದೇವರು ನಿಮ್ಮನ್ನು ಪರೀಕ್ಷಿಸುವುದಕ್ಕಾಗಿ, ನೀವು ಪಾಪ ಮಾಡದಂತೆ ಆತನ ಮೇಲಿನ ಭಯವು ನಿಮಗೆ ಇರಬೇಕೆಂತಲೂ ಇಳಿದು ಬಂದಿದ್ದಾನೆ” ಎಂದನು.
וַיֹּ֨אמֶר מֹשֶׁ֣ה אֶל־הָעָם֮ אַל־תִּירָאוּ֒ כִּ֗י לְבַֽעֲבוּר֙ נַסֹּ֣ות אֶתְכֶ֔ם בָּ֖א הָאֱלֹהִ֑ים וּבַעֲב֗וּר תִּהְיֶ֧ה יִרְאָתֹ֛ו עַל־פְּנֵיכֶ֖ם לְבִלְתִּ֥י תֶחֱטָֽאוּ׃
21 ೨೧ ಜನರು ದೂರದಲ್ಲಿ ನಿಂತಿದ್ದರು. ಮೋಶೆಯು ದೇವರಿರುವ ಆ ಕಾರ್ಗತ್ತಲಿನ ಸಮೀಪಕ್ಕೆ ಹೋದನು.
וַיַּעֲמֹ֥ד הָעָ֖ם מֵרָחֹ֑ק וּמֹשֶׁה֙ נִגַּ֣שׁ אֶל־הָֽעֲרָפֶ֔ל אֲשֶׁר־שָׁ֖ם הָאֱלֹהִֽים׃ פ
22 ೨೨ ಯೆಹೋವನು ಮೋಶೆಗೆ ಹೀಗೆಂದನು, “ನೀನು ಇಸ್ರಾಯೇಲರಿಗೆ ಹೇಳಬೇಕಾದದ್ದೇನೆಂದರೆ; ‘ನಾನು ಆಕಾಶದಿಂದ ನಿಮ್ಮ ಸಂಗಡ ಮಾತನಾಡಿದ್ದನ್ನು ನೀವು ನೋಡಿದ್ದೀರಿ.
וַיֹּ֤אמֶר יְהוָה֙ אֶל־מֹשֶׁ֔ה כֹּ֥ה תֹאמַ֖ר אֶל־בְּנֵ֣י יִשְׂרָאֵ֑ל אַתֶּ֣ם רְאִיתֶ֔ם כִּ֚י מִן־הַשָּׁמַ֔יִם דִּבַּ֖רְתִּי עִמָּכֶֽם׃
23 ೨೩ ನೀವು ಬೆಳ್ಳಿ ಬಂಗಾರಗಳ ದೇವರುಗಳನ್ನು ಮಾಡಿಕೊಳ್ಳಬೇಡಿರಿ.
לֹ֥א תַעֲשׂ֖וּן אִתִּ֑י אֱלֹ֤הֵי כֶ֙סֶף֙ וֵאלֹהֵ֣י זָהָ֔ב לֹ֥א תַעֲשׂ֖וּ לָכֶֽם׃
24 ೨೪ ನೀವು ನನ್ನ ಯಜ್ಞವೇದಿಯನ್ನು ಮಣ್ಣಿನಿಂದ ಮಾಡಬೇಕು. ನೀವು ಅದರ ಮೇಲೆ ನಿಮ್ಮ ಸರ್ವಾಂಗಹೋಮ, ಸಮಾಧಾನಯಜ್ಞ, ಕುರಿದನಗಳನ್ನು ಸಮರ್ಪಿಸಬೇಕು. ನಾನು ನನ್ನ ಹೆಸರನ್ನು ಗೌರವಿಸುವಂತೆ ಮಾಡುವ ಎಲ್ಲಾ ಸ್ಥಳಗಳಲ್ಲಿಯೂ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.
מִזְבַּ֣ח אֲדָמָה֮ תַּעֲשֶׂה־לִּי֒ וְזָבַחְתָּ֣ עָלָ֗יו אֶת־עֹלֹתֶ֙יךָ֙ וְאֶת־שְׁלָמֶ֔יךָ אֶת־צֹֽאנְךָ֖ וְאֶת־בְּקָרֶ֑ךָ בְּכָל־הַמָּקֹום֙ אֲשֶׁ֣ר אַזְכִּ֣יר אֶת־שְׁמִ֔י אָבֹ֥וא אֵלֶ֖יךָ וּבֵרַכְתִּֽיךָ׃
25 ೨೫ ನೀವು ನನಗಾಗಿ ಕಲ್ಲಿನಿಂದ ಯಜ್ಞವೇದಿಯನ್ನು ಕಟ್ಟುವುದಾದರೆ, ಅದನ್ನು ಕೆತ್ತಿರುವ ಕಲ್ಲುಗಳಿಂದ ಕಟ್ಟಬಾರದು. ಏಕೆಂದರೆ ಉಳಿ, ಮುಂತಾದುದನ್ನು ಅದರ ಮೇಲೆ ಉಪಯೋಗಿಸಿದರೆ ಅದು ಅಪವಿತ್ರವಾಗುವುದು.
וְאִם־מִזְבַּ֤ח אֲבָנִים֙ תַּֽעֲשֶׂה־לִּ֔י לֹֽא־תִבְנֶ֥ה אֶתְהֶ֖ן גָּזִ֑ית כִּ֧י חַרְבְּךָ֛ הֵנַ֥פְתָּ עָלֶ֖יהָ וַתְּחַֽלְלֶֽהָ׃
26 ೨೬ ಅದಲ್ಲದೆ ನನ್ನ ಯಜ್ಞವೇದಿಯನ್ನು ನಿಮ್ಮ ನಗ್ನತೆಯು ಕಾಣುವ ಹಾಗೆ ಮೆಟ್ಟಲುಗಳನ್ನು ಬಳಸಿ ಅದನ್ನು ಹತ್ತಬಾರದು’” ಎಂದು ಆಜ್ಞಾಪಿಸಿದನು.
וְלֹֽא־תַעֲלֶ֥ה בְמַעֲלֹ֖ת עַֽל־מִזְבְּחִ֑י אֲשֶׁ֛ר לֹֽא־תִגָּלֶ֥ה עֶרְוָתְךָ֖ עָלָֽיו׃ פ

< ವಿಮೋಚನಕಾಂಡ 20 >