< ವಿಮೋಚನಕಾಂಡ 30 >

1 “ಸುಗಂಧದ್ರವ್ಯಗಳಿಂದ ಧೂಪಹಾಕುವುದಕ್ಕೆ ನೀವು ಜಾಲೀಮರದಿಂದ ಒಂದು ಧೂಪವೇದಿಯನ್ನು ಮಾಡಿಸಬೇಕು.
“Hãy đóng một bàn thờ xông hương bằng gỗ keo.
2 ಅದು ಒಂದು ಮೊಳ ಉದ್ದವಾಗಿಯು, ಒಂದು ಮೊಳ ಅಗಲವಾಗಿಯೂ ಇದ್ದು ಚಚ್ಚೌಕವಾಗಿರಬೇಕು. ಅದರ ಎತ್ತರವು ಎರಡು ಮೊಳವಾಗಿರಬೇಕು. ಅದರ ಕೊಂಬುಗಳು ಅದರಿಂದಲೇ ಆಗಿರಬೇಕು.
Mặt bàn vuông, mỗi bề 0,46 mét, cao 0,92 mét, có các sừng được gắn liền với bàn thờ.
3 ಅದರ ಮೇಲ್ಭಾಗಕ್ಕೆ, ನಾಲ್ಕು ಬದಿಗಳಿಗೆ ಹಾಗೂ ಕೊಂಬುಗಳಿಗೆ, ಚೊಕ್ಕ ಬಂಗಾರದ ತಗಡುಗಳನ್ನು ಹೊದಿಸಬೇಕು. ಸುತ್ತಲೂ ಚಿನ್ನದ ಅರುಗನ್ನು (ಅಂಚು) ಕಟ್ಟಿಸಬೇಕು.
Lấy vàng ròng bọc mặt bàn, cạnh bàn, các sừng và viền khắp chung quanh bàn.
4 ಅದರ ತೋರಣದ ಕೆಳಗೆ ಯಜ್ಞವೇದಿಯ ಎರಡು ಪಾರ್ಶ್ವಗಳಲ್ಲಿ ಎರಡೆರಡು ಚಿನ್ನದ ಬಳೆಗಳನ್ನು ಮೂಲೆಗಳಲ್ಲಿಯೇ ಹಾಕಿಸಬೇಕು. ಯಜ್ಞವೇದಿಯನ್ನು ಹೊರುವುದಕ್ಕೆ ಕಂಬಗಳನ್ನು ಅವುಗಳಲ್ಲಿ ಸೇರಿಸಬೇಕು.
Làm mỗi bên hai khoen vàng gắn ngay bên dưới đường viền, để giữ đòn khiêng.
5 ಆ ಕಂಬಗಳನ್ನು ಜಾಲೀಮರದಿಂದ ಮಾಡಿಸಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಬೇಕು.
Đòn khiêng được làm bằng gỗ keo bọc vàng.
6 ಆಜ್ಞಾಶಾಸನವಿರುವ ಮಂಜೂಷದ ಮುಂದಣ ಪರದೆಗೆ ಎದುರಾಗಿ, ಅಂದರೆ ಆಜ್ಞಾಶಾಸನವಿರುವ ಮಂಜೂಷದ ಮೇಲಿರುವಂಥ ಮತ್ತು ನಾನು ನಿನಗೆ ದರ್ಶನ ಕೊಡುವಂಥ ಕೃಪಾಸನದ ಮುಂದೆ ಅದನ್ನು ಇಡಬೇಕು.
Bàn thờ này được đặt ở trước bức màn che Hòm Giao Ước và nắp chuộc tội trên Hòm, là nơi Ta gặp con.
7 “ಆರೋನನು ಪ್ರತಿನಿತ್ಯ ಹೊತ್ತಾರೆಯಲ್ಲಿ ದೀಪಗಳನ್ನು ಸರಿಪಡಿಸುವಾಗಲೂ
Mỗi buổi sáng, lúc A-rôn sửa soạn đèn, người sẽ đốt hương thơm trên bàn thờ.
8 ಸಾಯಂಕಾಲದಲ್ಲಿ ದೀಪಗಳನ್ನು ಹೊತ್ತಿಸುವಾಗಲೂ ಅದರ ಮೇಲೆ ಸುಗಂಧದ್ರವ್ಯಗಳಿಂದ ಧೂಪವನ್ನು ಹಾಕಬೇಕು. ಹೀಗೆ ನಿಮ್ಮಿಂದಲೂ ನಿಮ್ಮ ಸಂತತಿಯವರಿಂದಲೂ ಯೆಹೋವನ ಸನ್ನಿಧಿಯಲ್ಲಿ ನಿರಂತರವಾದ ಧೂಪ ಸಮರ್ಪಣೆಯು ನಡೆಯುತ್ತಿರಬೇಕು.
Và mỗi buổi tối, khi A-rôn đốt đèn, người cũng sẽ đốt hương. Như vậy, hương sẽ được đốt liên tục trước mặt Chúa Hằng Hữu, từ thế hệ này sang thế hệ khác.
9 ಆ ಯಜ್ಞವೇದಿಯ ಮೇಲೆ ಬೇರೆ ಯಾವ ಧೂಪವನ್ನೂ ಹಾಕಬಾರದು. ಅದರ ಮೇಲೆ ಇತರೆ ಹೋಮವನ್ನಾಗಲಿ, ಭೋಜನದ್ರವ್ಯವನ್ನಾಗಲಿ ಹಾಗೂ ಪಾನದ್ರವ್ಯವನ್ನಾಗಲಿ ಸಮರ್ಪಿಸಕೂಡದು.
Trên bàn thờ này không được đốt hương lạ, cũng không dâng tế lễ thiêu, tế lễ chay, hay tế lễ thức uống.
10 ೧೦ ಆರೋನನು ಅವನ ಸಂತತಿಯವರೂ ವರ್ಷಕ್ಕೆ ಒಂದು ಸಾರಿ ದೋಷಪರಿಹಾರಕ ಯಜ್ಞದ ಪಶುವಿನ ರಕ್ತವನ್ನು ಆ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ಅದರ ಕುರಿತಾಗಿ ದೋಷಪರಿಹಾರವನ್ನು ಮಾಡಬೇಕು. ಅದು ಯೆಹೋವನಿಗೆ ಅತಿ ಪರಿಶುದ್ಧವಾಗಿದೆ.”
Hằng năm, A-rôn phải làm lễ chuộc tội tại bàn thờ, lấy máu con sinh tế chuộc tội bôi trên sừng bàn thờ. Lễ này phải làm mỗi năm, từ thế hệ này sang thế hệ khác, vì đây là một bàn thờ Chúa Hằng Hữu rất thánh.”
11 ೧೧ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ,
Chúa Hằng Hữu phán dạy Môi-se:
12 ೧೨ “ನೀನು ಇಸ್ರಾಯೇಲ್ಯರ ಜನಗಣತಿ ಮಾಡಿಸಿ ಅವರನ್ನು ಲೆಕ್ಕಿಸುವಾಗ ಅವರಿಗೆ ಬಾಧೆಯುಂಟಾಗಿ ವ್ಯಾಧಿ ಸಂಭವಿಸದಂತೆ ಪ್ರತಿಯೊಬ್ಬನೂ ತನ್ನ ತನ್ನ ಪ್ರಾಣಕ್ಕಾಗಿ ವಿಮೋಚನ ಕ್ರಯವನ್ನು ಯೆಹೋವನಿಗೆ ಕೊಡಬೇಕು.
“Khi nào con kiểm kê dân số Ít-ra-ên, mỗi công dân được kiểm kê phải nộp cho Ta một món tiền đền mạng, như thế họ sẽ không bị tai nạn gì trong cuộc kiểm kê này.
13 ೧೩ ಲೆಕ್ಕಿತರಾದವರಲ್ಲಿ ಪ್ರತಿಯೊಬ್ಬನೂ ದೇವರ ಸೇವೆಗೆ ನೇಮಕವಾದ ಇಪ್ಪತ್ತು ಗೇರಾ ತೂಕದ ರೂಪಾಯಿಯ ಮೇರೆಗೆ ಅರ್ಧ ಶೆಕೆಲ್ ಕಾಣಿಕೆಯನ್ನು ಕೊಡಬೇಕು. ಈ ಅರ್ಧ ಶೆಕೆಲ್ ಯೆಹೋವನಿಗೆ ಪವಿತ್ರವಾದ ಕಾಣಿಕೆಯಾಗಿರುತ್ತದೆ.
Mỗi người phải nộp nửa đồng bạc theo tiêu chuẩn tiền tệ của Nơi Thánh là lễ vật dâng lên Chúa Hằng Hữu.
14 ೧೪ ಲೆಕ್ಕ ಮಾಡಿದವರಲ್ಲಿ ಇಪ್ಪತ್ತು ವರ್ಷದವರೂ ಹಾಗೂ ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳವರೂ ಆ ಕಾಣಿಕೆಯನ್ನು ಯೆಹೋವನಿಗೆ ಕೊಡಬೇಕು.
Các công dân từ hai mươi tuổi trở lên sẽ được kiểm kê và nộp tiền này cho Chúa Hằng Hữu.
15 ೧೫ ಪ್ರಾಣಗಳ ಪ್ರಾಯಶ್ಚಿತ್ತಕ್ಕಾಗಿ ಕಾಣಿಕೆಯನ್ನು ಯೆಹೋವನಿಗೆ ಕೊಡುವುದರಲ್ಲಿ ಐಶ್ವರ್ಯವಂತರಾದರೂ ಅರ್ಧಶೆಕೆಲಿಗಿಂತ ಹೆಚ್ಚು ಕೊಡಬಾರದು. ಬಡವರು ಕಡಿಮೆ ಕೊಡಬಾರದು.
Người giàu không nộp hơn, nghèo không nộp kém, vì đây là một lễ vật mỗi người dâng lên Chúa Hằng Hữu để chuộc tội cho chính mình.
16 ೧೬ ನೀನು ಪ್ರಾಣಗಳ ಪ್ರಾಯಶ್ಚಿತ್ತಕ್ಕಾಗಿ ಹಣವನ್ನು ಇಸ್ರಾಯೇಲರಿಂದ ತೆಗೆದುಕೊಂಡು ಅದನ್ನು ದೇವದರ್ಶನದ ಗುಡಾರದ ಸೇವೆಗೆ ಉಪಯೋಗಿಸಬೇಕು. ಇಸ್ರಾಯೇಲರ ಪ್ರಾಣಗಳನ್ನು ಉಳಿಸಬೇಕೆಂಬುದಾಗಿ ಆ ಕಾಣಿಕೆಯು ಯೆಹೋವನಾದ ನನ್ನ ಸನ್ನಿಧಿಯಲ್ಲಿ ಜ್ಞಾಪಕವಾಗಿರುವುದು.”
Dùng tiền này vào công việc Đền Tạm, trước mặt Chúa Hằng Hữu, để Ta lưu ý và tha tội cho họ.”
17 ೧೭ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ,
Chúa Hằng Hữu phán bảo Môi-se:
18 ೧೮ “ಸ್ನಾನಕ್ಕಾಗಿ ಒಂದು ತಾಮ್ರದ ತೊಟ್ಟಿಯನ್ನೂ ಅದಕ್ಕೆ ತಾಮ್ರದ ಪೀಠವನ್ನೂ ಮಾಡಿಸಿ ದೇವದರ್ಶನದ ಗುಡಾರಕ್ಕೂ, ಯಜ್ಞವೇದಿಗೂ ನಡುವೆ ಇಟ್ಟು ಅದರಲ್ಲಿ ನೀರು ತುಂಬಿಸಬೇಕು.
“Hãy làm một cái bồn bằng đồng có chân cũng bằng đồng. Đặt bồn giữa Đền Tạm và bàn thờ, rồi đổ nước vào bồn.
19 ೧೯ ಆರೋನನೂ ಅವನ ಮಕ್ಕಳೂ ಅದರಿಂದ ಕೈಕಾಲುಗಳನ್ನು ತೊಳೆದುಕೊಳ್ಳಬೇಕು.
A-rôn và các con trai người sẽ rửa tay, và rửa chân tại đó.
20 ೨೦ ಅವರು ದೇವದರ್ಶನದ ಗುಡಾರದೊಳಗೆ ಹೋಗುವಾಗ ಹಾಗೂ ದೇವರ ಸೇವೆಯನ್ನು ಮಾಡುವವರಾಗಿ ಯೆಹೋವನಿಗೆ ಹೋಮವನ್ನು ಸಮರ್ಪಿಸುವುದಕ್ಕಾಗಿ ಯಜ್ಞವೇದಿಯ ಬಳಿಗೆ ಬರುವಾಗ ಜೀವದಿಂದಿರಲು ಕೈಕಾಲುಗಳನ್ನು ತೊಳೆದುಕೊಂಡು ಬರಬೇಕು.
Họ phải rửa tay và chân mình trước khi vào Đền Tạm hoặc đến gần bàn thờ để dâng tế lễ thiêu lên Chúa Hằng Hữu, nếu không họ sẽ chết.
21 ೨೧ ತೊಳೆದುಕೊಳ್ಳದೆ ಬಂದರೆ ಮರಣ ಶಿಕ್ಷೆಯಾಗುವುದು. ಇದು ಅವನಿಗೂ ಮತ್ತು ಅವನ ಸಂತತಿಯವರಿಗೂ ಶಾಶ್ವತ ನಿಯಮವಾಗಿರಬೇಕು.”
Lệ này áp dụng cho A-rôn và con cháu người, từ thế hệ này sang thế hệ khác.”
22 ೨೨ ಇದಲ್ಲದೆ ಯೆಹೋವನು ಮೋಶೆಗೆ ಪುನಃ ಹೇಳಿದ್ದೇನೆಂದರೆ,
Chúa Hằng Hữu phán bảo Môi-se:
23 ೨೩ “ನೀನು ಸುಗಂಧದ್ರವ್ಯಗಳಲ್ಲಿ ದೇವರ ಸೇವೆಗೆ ನೇಮಕವಾದ ತೂಕದ ಮೇರೆಗೆ ಐನೂರು ಶೆಕೆಲ್ ಅಚ್ಚರಕ್ತಬೋಳ, ಅದರರ್ಧ ಅಂದರೆ ಇನ್ನೂರೈವತ್ತು ಶೆಕೆಲ್ ಶ್ರೇಷ್ಠವಾದ ಲವಂಗ,
“Hãy lựa chọn các một dược thượng hạng, gồm có: 5,7 ký nhựa thơm nguyên chất, 2,9 ký hương quế, 2,9 ký hương thạch xương bồ,
24 ೨೪ ಐನೂರು ಸುಗಂಧವಾದ ಚೆಕ್ಕೆ, ಮತ್ತು ಒಂದು ಹೀನ್ ಒಲೀವ್ ಎಣ್ಣೆ ಇವುಗಳನ್ನೆಲ್ಲಾ ತೆಗೆದುಕೊಂಡು,
và 5,7 ký quế bì, theo cân Nơi Thánh, cùng với 3,8 lít dầu ô-liu.
25 ೨೫ ಸುಗಂಧ ದ್ರವ್ಯಕಾರರ ಪದ್ದತಿಯ ಮೇರೆಗೆ ಮಿಶ್ರಮಾಡಿ ಪರಿಶುದ್ಧವಾದ ಅಭಿಷೇಕ ತೈಲವನ್ನು ಮಾಡಿಸಬೇಕು. ಇದು ಪರಿಶುದ್ಧವಾದ ಅಭಿಷೇಕ ತೈಲವಾಗಿರುವುದು.
Dùng các hương liệu này chế ra một thứ dầu xức thánh, theo phép hòa hương.
26 ೨೬ ಆದುದರಿಂದ ದೇವದರ್ಶನದ ಗುಡಾರ, ಆಜ್ಞಾಶಾಸನಗಳ ಮಂಜೂಷ, ಮೇಜು, ಮೇಜಿನ ಉಪಕರಣಗಳು,
Dùng dầu này xức lên Đền Tạm, Hòm Giao Ước,
27 ೨೭ ದೀಪಸ್ತಂಭ, ದೀಪಸ್ತಂಭದ ಉಪಕರಣಗಳು,
bàn, và dụng cụ của bàn, chân đèn và dụng cụ đốt đèn, bàn thờ xông hương,
28 ೨೮ ಧೂಪವೇದಿ, ಯಜ್ಞವೇದಿ, ಯಜ್ಞವೇದಿಯ ಉಪಕರಣಗಳು ಹಾಗು ನೀರಿನ ತೊಟ್ಟಿ ಅದರ ಪೀಠ ಇವುಗಳನ್ನೆಲ್ಲಾ ಅಭಿಷೇಕಿಸಬೇಕು.
bàn thờ dâng tế lễ thiêu và dụng cụ của bàn thờ, bồn rửa và chân bồn.
29 ೨೯ ಅವು ಅತಿ ಪರಿಶುದ್ಧವಾಗುವಂತೆ ಅವುಗಳನ್ನು ಶುದ್ಧೀಕರಿಸಬೇಕು. ಅವುಗಳನ್ನು ಮುಟ್ಟುವವರೆಲ್ಲರೂ ಪರಿಶುದ್ಧರಾಗಿರಬೇಕು.
Như vậy, các vật này sẽ được thánh hóa, được dành riêng cho Chúa Hằng Hữu, bất kỳ vật gì đụng đến chúng cũng đều được thánh hóa.
30 ೩೦ ಅದಲ್ಲದೆ ಆರೋನನೂ ಅವನ ಮಕ್ಕಳೂ ನನಗೆ ಯಾಜಕರಾಗುವಂತೆ ಅವರನ್ನು ಅಭಿಷೇಕಿಸಿ ಶುದ್ಧೀಕರಿಸಬೇಕು.”
Hãy xức dầu đó cho A-rôn và các con trai người, đặc cử họ làm chức tế lễ thánh phục vụ Ta.
31 ೩೧ ನೀನು ಇಸ್ರಾಯೇಲರಿಗೆ ಆಜ್ಞಾಪಿಸತಕ್ಕದ್ದೇನೆಂದರೆ, “ನೀವೂ ನಿಮ್ಮ ಸಂತತಿಯವರೂ ಈ ತೈಲವನ್ನು ನನ್ನ ಸೇವೆಗೆ ನೇಮಕವಾದ ಪರಿಶುದ್ಧ ಅಭಿಷೇಕ ತೈಲವೆಂದು ತಿಳಿದುಕೊಳ್ಳಬೇಕು.
Nói cho người Ít-ra-ên biết rằng dầu này là dầu xức thánh của Ta mãi mãi.
32 ೩೨ ಜನರು ಮೈಗೆ ಹಚ್ಚಿಕೊಳ್ಳುವುದಕ್ಕೆ ಇದನ್ನು ಉಪಯೋಗಿಸಬಾರದು. ಈ ವಿಧಾನದ ಮೇರೆಗೆ ಬೇರೆ ಕೆಲಸಕ್ಕಾಗಿ ತೈಲವನ್ನು ಮಾಡಲೇಬಾರದು. ಇದು ದೇವರ ವಸ್ತು. ಇದು ಪರಿಶುದ್ಧವಾದದ್ದು ಎಂದು ನೀವು ತಿಳಿದುಕೊಳ್ಳಬೇಕು.
Không được dùng dầu này xức cho người thường, cũng không ai được chế dầu theo công thức này để dùng, vì đó là dầu thánh của Ta, cũng là dầu thánh của các ngươi.
33 ೩೩ ಇದರಂತೆ ತೈಲವನ್ನು ಮಾಡುವವನಾಗಲಿ ಇದನ್ನು ಯಾಜಕನಲ್ಲದವನ ಮೇಲೆ ಹಚ್ಚುವವನಾಗಲಿ ತನ್ನ ಕುಲದಿಂದ ಬಹಿಷ್ಕೃತನಾಗುವನು.”
Người nào chế dầu theo công thức này hoặc dùng dầu này xức cho một người thường sẽ bị trục xuất khỏi cộng đồng Ít-ra-ên.”
34 ೩೪ ಅದಲ್ಲದೆ ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೇನೆಂದರೆ, “ನೀನು ಹಾಲುಮಡ್ಡಿ, ಗುಗ್ಗುಲ ಹಾಗೂ ಗಂಧದ ಚೆಕ್ಕೆ ಎಂಬ ಪರಿಮಳ ದ್ರವ್ಯಗಳನ್ನು ಸ್ವಚ್ಛವಾದ ಧೂಪವನ್ನೂ ಸಮಭಾಗವಾಗಿ ತೆಗೆದುಕೊಂಡು,
Chúa Hằng Hữu lại phán dạy Môi-se: “Hãy dùng các hương liệu gồm có tô hợp hương, loa yểm hương, phong tử hương, và nhũ hương nguyên chất, phân lượng bằng nhau.
35 ೩೫ ಸುಗಂಧ ದ್ರವ್ಯ ತಯಾರಿಸುವವರ ಕೌಶಲ್ಯಕ್ಕೆ ತಕ್ಕಂತೆ ಕಲಿಸಿ ಉಪ್ಪು ಹಾಕಿ ದೇವರ ಸೇವೆಗೆ ಪವಿತ್ರವಾದ ಧೂಪದ್ರವ್ಯವನ್ನು ಮಾಡಿಸಬೇಕು.
Theo phép hòa hợp hương liệu, chế ra một thứ hương để đốt có pha muối. Hương này sẽ là thuần chất và thánh.
36 ೩೬ ಅದರಲ್ಲಿ ಸ್ವಲ್ಪವನ್ನು ಪುಡಿಮಾಡಿಸಿ ದೇವದರ್ಶನದ ಗುಡಾರದೊಳಗೆ ಆಜ್ಞಾಶಾಸನಗಳ ಮಂಜೂಷದ ಎದುರಾಗಿ ನಾನು ನಿನಗೆ ದರ್ಶನ ಕೊಡುವ ಸ್ಥಳದಲ್ಲಿ ಇರಿಸಬೇಕು. ಅದು ಅತಿ ಪರಿಶುದ್ಧವಾದದ್ದೆಂದು ನೀವು ಭಾವಿಸಬೇಕು.
Đem một ít hương này nghiền ra bột, để một ít bột hương trước Hòm Giao Ước, nơi Ta gặp con trong Đền Tạm. Hương này rất thánh.
37 ೩೭ ನೀವು ಆ ಧೂಪದ್ರವ್ಯದ ವಿಧಾನದ ಮೇರೆಗೆ ನಿಮ್ಮ ಸ್ವಂತಕ್ಕೋಸ್ಕರ ಧೂಪದ್ರವ್ಯವನ್ನು ಮಾಡಿಸಿಕೊಳ್ಳಬಾರದು. ಅದು ಯೆಹೋವನ ಸೇವೆಗೆ ಮಾತ್ರ ಉಪಯೋಗಿಸಬೇಕಾದ ಮೀಸಲಾದ ಪವಿತ್ರ ಪದಾರ್ಥವೆಂದು ಭಾವಿಸಬೇಕು.
Không ai được làm hương theo công thức này để dùng, vì đây là hương thánh của Chúa Hằng Hữu, cũng là hương thánh của các ngươi.
38 ೩೮ ಸುವಾಸನೆಗೋಸ್ಕರ ಅಂಥದನ್ನು ಮಾಡಿಕೊಳ್ಳುವವನು ತನ್ನ ಕುಲದಿಂದ ಬಹಿಷ್ಕಾರಕ್ಕೆ ಗುರಿಯಾಗುವನು.”
Ai làm hương này cho mình sẽ bị trục xuất khỏi cộng đồng Ít-ra-ên.”

< ವಿಮೋಚನಕಾಂಡ 30 >