< ವಿಮೋಚನಕಾಂಡ 6 >

1 ಆನಂತರ ಯೆಹೋವನು ಮೋಶೆಗೆ, “ನಾನು ಫರೋಹನಿಗೆ ಮಾಡುವುದನ್ನು ನೀನು ಈಗ ನೋಡುವೆ. ಅವನು ನನ್ನ ಬಲವಾದ ಹಸ್ತವನ್ನು ನೋಡಿ ಅವರನ್ನು ಹೋಗಗೊಡಿಸುವನು. ನನ್ನ ಭುಜಬಲದಿಂದ ಪೀಡಿತನಾಗಿ ಅವರನ್ನು ತನ್ನ ದೇಶದಿಂದ ಹೊರಡಿಸುವನು” ಅಂದನು.
इस पर याहवेह ने मोशेह से कहा, “अब तुम देखना कि मैं फ़रोह के साथ क्या करूंगा; मेरे पराक्रमी हाथ की वजह से उसे तुम सबको छोड़ना ही पड़ेगा, मेरे पराक्रमी हाथ की वजह से ही फ़रोह इतना परेशान हो जाएगा, कि वह अपने देश से सबको निकाल देगा.”
2 ದೇವರು ಮೋಶೆಯ ಸಂಗಡ ಪುನಃ ಮಾತನಾಡಿ ಇಂತೆಂದನು, “ನಾನೇ ಯೆಹೋವನು,
परमेश्वर ने मोशेह से यह भी कहा, “मैं ही याहवेह हूं;
3 ನಾನು ಅಬ್ರಹಾಮನಿಗೂ, ಇಸಾಕನಿಗೂ, ಯಾಕೋಬನಿಗೂ ಸರ್ವಶಕ್ತನಾದ ದೇವರಾಗಿ ಕಾಣಿಸಿಕೊಂಡಿದ್ದೆನು. ಆದರೆ ಯೆಹೋವನೆಂಬ ನನ್ನ ಹೆಸರಿನಲ್ಲಿ ಅವರಿಗೆ ಗೋಚರವಾಗಿರಲಿಲ್ಲ.
अब्राहाम, यित्सहाक तथा याकोब पर मैं ही सर्वसामर्थी होकर प्रकट हुआ था; परंतु, याहवेह के नाम से कभी अपने आपको प्रकट नहीं किया.
4 ನಾನು ಅವರಿಗೆ ಕಾನಾನ್ ದೇಶವನ್ನು ಅಂದರೆ, ಅವರು ಪರದೇಶದವರಾಗಿ ವಾಸವಾಗಿದ್ದ ಪ್ರವಾಸದ ದೇಶವನ್ನು ನಾನು ಅವರಿಗೆ ಕೊಡುವೆನೆಂದು ಅವರ ಸಂಗಡ ನನ್ನ ಒಡಂಬಡಿಕೆಯನ್ನು ಮಾಡಿಕೊಂಡಿರುವೆನು.
मैंने कनान देश, जहां वे पराये होकर रहते थे, उनको देने का पक्का वायदा भी किया था.
5 ಐಗುಪ್ತರು ದಾಸರಾಗಿ ಮಾಡಿಕೊಂಡಿರುವ ಇಸ್ರಾಯೇಲರ ಗೋಳು ಈಗ ನನಗೆ ಕೇಳಿಸಿತು. ನಾನು ಮಾಡಿದ ವಾಗ್ದಾನವನ್ನು ಪುನಃ ನೆನಪುಮಾಡಿಕೊಂಡೆನು.
परमेश्वर ने इस्राएलियों का रोना सुना है, क्योंकि मिस्रियों ने उन्हें बंदी बना रखा है और मुझे मेरा वायदा जो मैं ने इस्राएलियों से किया था याद है.
6 ಆದುದರಿಂದ, ನೀನು ಇಸ್ರಾಯೇಲರಿಗೆ ನನ್ನ ಹೆಸರಿನಲ್ಲಿ ಹೇಳಬೇಕಾದದ್ದೇನೆಂದರೆ, ‘ನಾನೇ ಯೆಹೋವನು ಐಗುಪ್ತರು ನಿಮ್ಮಿಂದ ಮಾಡಿಸುವ ಬಿಟ್ಟೀ ಕೆಲಸಗಳನ್ನು ತಪ್ಪಿಸಿ, ಅವರ ದಾಸತ್ವದಿಂದ ನಿಮ್ಮನ್ನು ಬಿಡಿಸಿ, ನನ್ನ ಕೈಚಾಚಿ ಅವರಿಗೆ ಮಹಾ ಶಿಕ್ಷೆಗಳನ್ನು ವಿಧಿಸಿ ನಿಮ್ಮನ್ನು ರಕ್ಷಿಸುವೆನು.
“इस कारण इस्राएलियों से यह कहना: ‘मैं ही याहवेह हूं. मैं ही तुम्हें मिस्रियों की परेशानी से निकालूंगा. मैं तुम्हें उनके बंधन से छुड़ाऊंगा. मैं तुम्हें अपनी बाहों में लेकर तथा उन्हें दंड देकर तुम्हें छुड़ा लूंगा.
7 ನಾನು ನಿಮ್ಮನ್ನು ನನ್ನ ಪ್ರಜೆಗಳನ್ನಾಗಿ ಆರಿಸಿಕೊಂಡು ನಿಮಗೆ ದೇವರಾಗಿರುವೆನು. ಐಗುಪ್ತ್ಯರು ಮಾಡಿಸುವ ಬಿಟ್ಟೀ ಸೇವೆಯನ್ನು ನಾನು ನಿಮಗೆ ತಪ್ಪಿಸಿದಾಗ ಯೆಹೋವನೆಂಬ ನಾನೇ ನಿಮ್ಮ ದೇವರಾಗಿದ್ದೇನೆ ಎಂಬುದು ನಿಮಗೆ ತಿಳಿಯುವುದು.
फिर तुम मेरे लोग ठहरोगे और मैं तुम्हारा परमेश्वर. और तुम्हें तसल्ली मिलेगी कि मैं ही याहवेह, तुम्हारा परमेश्वर हूं, जिसने तुम्हें मिस्रियों के दबाव और बोझ से निकाला है.
8 ಇದಲ್ಲದೆ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ನಾನು ಕೈ ಎತ್ತಿ ಪ್ರಮಾಣಮಾಡಿದ ದೇಶದಲ್ಲಿ ನಿಮ್ಮನ್ನು ಬರಮಾಡಿ, ಅದನ್ನು ನಿಮಗೆ ಸ್ವತ್ತಾಗಿ ಕೊಡುವೆನೆಂದು ಹೇಳಿದವನು ಯೆಹೋವನೆಂಬ ನಾನೇ’ ಎಂದು ಅವರಿಗೆ ಹೇಳು” ಅಂದನು.
मैं तुम्हें उस देश में लाऊंगा, जिसे देने का शपथ मैंने हाथ उठाकर अब्राहाम, यित्सहाक तथा याकोब से ली थी, और वह देश तुम्हारा ही हो जाएगा. मैं ही वह याहवेह हूं.’”
9 ಮೋಶೆ ಈ ಮಾತುಗಳನ್ನು ಅದೇ ಪ್ರಕಾರವಾಗಿ ಇಸ್ರಾಯೇಲರಿಗೆ ಹೇಳಿದಾಗ, ಅವರ ಮನಸ್ಸು ಕುಗ್ಗಿಹೋದದ್ದರಿಂದಲೂ, ಕಠಿಣವಾಗಿ ದಾಸತ್ವದ ಸೇವೆ ಮಾಡಬೇಕಾಗಿ ಬಂದದ್ದರಿಂದಲೂ ಅವರು ಮೋಶೆಯ ಮಾತಿಗೆ ಕಿವಿಗೊಡಲೇ ಇಲ್ಲ.
मोशेह ने वह सब बात जो याहवेह ने कही थी, सबको बता दी, लेकिन इस्राएलियों ने फ़रोह के द्वारा हो रहे अत्याचार के कारण इन पर विश्वास नहीं किया.
10 ೧೦ ಆಗ ಯೆಹೋವನು ಮೋಶೆಯ ಸಂಗಡ ಮಾತನಾಡಿ,
याहवेह मोशेह के पास आए और उनसे कहा,
11 ೧೧ “ನೀನು ಐಗುಪ್ತ್ಯರ ಅರಸನಾದ ಫರೋಹನ ಬಳಿಗೆ ಹೋಗಿ ಅವನು ಇಸ್ರಾಯೇಲರನ್ನು ತನ್ನ ದೇಶದಿಂದ ಹೊರಟು ಹೋಗುವಂತೆ ಅವನ ಸಂಗಡ ಮಾತನಾಡು” ಅಂದನು.
“जाकर मिस्र देश के राजा फ़रोह से कहो कि वह इस्राएलियों को इस देश से बाहर जाने दे.”
12 ೧೨ ಅದಕ್ಕೆ ಮೋಶೆ ಯೆಹೋವನ ಸನ್ನಿಧಿಯಲ್ಲಿ, “ಇಗೋ, ಇಸ್ರಾಯೇಲರೇ ನನ್ನ ಮಾತುಗಳನ್ನು ಕೇಳುತ್ತಿಲ್ಲ; ಹೀಗಿರುವಾಗ ತೊದಲು ಮಾತನಾಡುವ ನನ್ನ ಮಾತುಗಳಿಗೆ ಫರೋಹನು ಕಿವಿಗೊಟ್ಟಾನೇ?” ಅಂದನು.
मोशेह ने याहवेह से कहा, “इस्राएलियों ने मेरी बात नहीं मानी है, तो फ़रोह कैसे मेरी बात मानेगा, मैं तो हकलाता बात करता हूं.”
13 ೧೩ ಯೆಹೋವನು ಮೋಶೆ ಮತ್ತು ಆರೋನರ ಸಂಗಡ ಮಾತನಾಡಿ, ಇಸ್ರಾಯೇಲರನ್ನು ಐಗುಪ್ತದೇಶದೊಳಗಿಂದ ಬರಮಾಡಬೇಕೆಂದು ಅವರಿಗೆ ಆಜ್ಞಾಪಿಸಿ ಅವರನ್ನು ಇಸ್ರಾಯೇಲರ ಬಳಿಗೂ ಐಗುಪ್ತದ ಅರಸನಾದ ಫರೋಹನ ಬಳಿಗೂ ಕಳುಹಿಸಿದನು.
फिर याहवेह ने मोशेह तथा अहरोन से इस्राएल एवं मिस्र के राजा फ़रोह के लिए यह आदेश दिया कि इस्राएली मिस्र देश से निकाले जाएं.
14 ೧೪ ಇಸ್ರಾಯೇಲ್ ಗೋತ್ರಗಳ ಕುಟುಂಬಗಳ ಮುಖ್ಯಸ್ಥರು: ಇಸ್ರಾಯೇಲನ ಚೊಚ್ಚಲು ಮಗನಾದ ರೂಬೇನನ ಮಕ್ಕಳು: ಹನೋಕ್, ಫಲ್ಲು, ಹೆಚ್ರೋನ್, ಕರ್ಮೀ. ಇವರೇ ರೂಬೇನಿನಿಂದ ಉಂಟಾದ ಗೋತ್ರಗಳ ಮೂಲ ಪುರುಷರು.
इस्राएल के परिवार के मुखिया इस प्रकार थे: इस्राएल का पहला बेटा रियूबेन. रियूबेन के पुत्र: हनोख, पल्लू, हेज़रोन, कारमी; ये सभी रियूबेन के परिवार के लोग हैं.
15 ೧೫ ಸಿಮೆಯೋನನ ಮಕ್ಕಳಾದ; ಯೆಮೂಯೇಲ್, ಯಾಮೀನ್, ಓಹದ್, ಯಾಕೀನ್, ಚೋಹರ್ ಮತ್ತು ಕಾನಾನ್ಯ ಸ್ತ್ರೀಯಲ್ಲಿ ಹುಟ್ಟಿದ ಸೌಲ ಇವರು ಸಿಮೆಯೋನನಿಂದುಂಟಾದ ಗೋತ್ರಗಳಿಗೆ ಮೂಲ ಪುರುಷರು.
शिमओन के पुत्र: येमुएल, यामिन, ओहद, याकिन, ज़ोहार तथा शाऊल, जो एक कनानी स्त्री से जन्मे थे; ये सभी शिमओन के परिवार के लोग हैं.
16 ೧೬ ವಂಶಾವಳಿಗಳ ಪ್ರಕಾರ ಲೇವಿಯರ ಮಕ್ಕಳು: ಗೇರ್ಷೋನ್, ಕೆಹಾತ್, ಮೆರಾರೀ, ಇವರೇ. ಲೇವಿಯು ನೂರ ಮೂವತ್ತೇಳು ವರ್ಷ ಬದುಕಿದ್ದನು.
लेवी के पुत्रों के नाम: गेरशोन, कोहाथ तथा मेरारी. (लेवी की कुल आयु एक सौ सैंतीस वर्ष की हुई.)
17 ೧೭ ಗೋತ್ರಗಳಿಗನುಸಾರವಾಗಿ ಗೇರ್ಷೋನನ ಮಕ್ಕಳು: ಲಿಬ್ನೀ ಮತ್ತು ಶಿಮ್ಮಿ.
गेरशोन के पुत्र उनके परिवारों के अनुसार: लिबनी और शिमेई.
18 ೧೮ ಕೊಹಾತನ ಮಕ್ಕಳು: ಅಮ್ರಾಮ್, ಇಚ್ಹಾರ್, ಹೆಬ್ರೋನ್, ಉಜ್ಜೀಯೇಲ್. ಕೆಹಾತನು ನೂರ ಮೂವತ್ತಮೂರು ವರ್ಷ ಬದುಕಿದನು.
कोहाथ के पुत्र: अमराम, इज़हार, हेब्रोन तथा उज्ज़िएल. (कोहाथ की कुल आयु एक सौ सैंतीस वर्ष की हुई.)
19 ೧೯ ಮೆರಾರೀಯ ಮಕ್ಕಳು: ಮಹ್ಲೀ, ಮೂಷೀ ವಂಶಾವಳಿಗಳ ಪ್ರಕಾರ ಲೇವಿಯಿಂದುಂಟಾದ ಗೋತ್ರಗಳು ಇವೇ ಆಗಿದ್ದವು.
मेरारी के पुत्र: माहली तथा मूशी. ये उनकी पीढ़ियों के अनुसार लेवियों के परिवार हैं.
20 ೨೦ ಅಮ್ರಾಮನು ತನ್ನ ತಂದೆಯ ತಂಗಿ ಯೋಕೆಬೆದಳನ್ನು ಮದುವೆಮಾಡಿಕೊಂಡನು. ಆಕೆಯು ಅವನಿಗೆ ಆರೋನನನ್ನೂ, ಮೋಶೆಯನ್ನೂ ಹೆತ್ತಳು. ಅಮ್ರಾಮನು ನೂರಮೂವತ್ತೇಳು ವರ್ಷ ಬದುಕಿದನು.
अमराम ने अपने पिता की बहन से विवाह किया, जिससे अहरोन एवं मोशेह पैदा हुए. (अमराम की कुल आयु एक सौ सैंतीस वर्ष की हुई.)
21 ೨೧ ಇಚ್ಹಾರನ ಮಕ್ಕಳು ಕೋರಹ, ನೆಫೆಗ್ ಮತ್ತು ಚಿಕ್ರಿ.
इज़हार के पुत्र: कोराह, नेफ़ेग तथा ज़ीकरी.
22 ೨೨ ಉಜ್ಜೀಯೇಲನ ಮಕ್ಕಳು: ಮೀಷಾಯೇಲ್, ಎಲ್ಜಾಫಾನ್ ಮತ್ತು ಸಿತ್ರಿ.
उज्ज़िएल के पुत्र: मिषाएल, एलज़ाफन तथा सिथरी.
23 ೨೩ ಆರೋನನು ಅಮ್ಮೀನಾದಾಬನ ಮಗಳೂ ನಹಶೋನನ ತಂಗಿಯೂ ಆಗಿದ್ದ, ಎಲೀಶೇಬಳನ್ನು ಮದುವೆಯಾದನು. ಆಕೆಯಲ್ಲಿ ಅವನಿಗೆ ನಾದಾಬ್, ಅಬೀಹೂ, ಎಲ್ಲಾಜಾರ್, ಈತಾಮಾರ್ ಎಂಬವರು ಹುಟ್ಟಿದರು.
अहरोन ने अम्मीनादाब की पुत्री, नाहशोन की बहन एलिशेबा से विवाह किया, जिसने नादाब, अबीहू, एलिएज़र तथा इथामार को जन्म दिया.
24 ೨೪ ಕೋರಹನ ಮಕ್ಕಳು: ಅಸ್ಸೀರ್, ಎಲ್ಕಾನ್, ಅಬೀಯಾಸಾಫ್ ಇವರೇ ಕೋರಹೀಯರ ಗೋತ್ರಗಳು.
कोराह के पुत्र: अस्सिर, एलकाना तथा अबीयासाफ़. कोराह के वंशजों के परिवार ये हैं.
25 ೨೫ ಆರೋನನ ಮಗನಾದ ಎಲ್ಲಾಜಾರನು ಪೂಟಿಯೇಲನ ಹೆಣ್ಣು ಮಕ್ಕಳಲ್ಲಿ ಒಬ್ಬಾಕೆಯನ್ನು ಮದುವೆ ಮಾಡಿಕೊಂಡನು. ಆಕೆ ಅವನಿಗೆ ಫೀನೆಹಾಸನನ್ನು ಹೆತ್ತಳು. ಅವರವರ ಗೋತ್ರದ ಪ್ರಕಾರ ಇವರೇ ಲೇವಿಯರ ಪೂರ್ವಿಕರು.
अहरोन के पुत्र एलिएज़र ने पुतिएल की पुत्री से विवाह किया, जिससे फिनिहास पैदा हुए. ये लेवी वंश के कुलों के मुखिया थे.
26 ೨೬ ಇಸ್ರಾಯೇಲರನ್ನು ಅವರ ಗೋತ್ರಗಳಿಗನುಸಾರವಾಗಿ, ಐಗುಪ್ತದೇಶದಿಂದ ಹೊರಗೆ ಬರಮಾಡಬೇಕೆಂದು ಯೆಹೋವನು ಯಾರಿಗೆ ಹೇಳಿದನೋ ಅವರೇ ಆರೋನ್ ಮತ್ತು ಮೋಶೆ.
ये अहरोन तथा मोशेह थे, जिन्हें याहवेह द्वारा कहा गया था, “इस्राएलियों को अपनी समझदारी से मिस्र देश से निकाल लाओ.”
27 ೨೭ ಇಸ್ರಾಯೇಲರನ್ನು ಐಗುಪ್ತದೇಶದಿಂದ ಹೊರಗೆ ಬರಮಾಡುವುದಕ್ಕಾಗಿ ಐಗುಪ್ತ್ಯರ ಅರಸನಾದ ಫರೋಹನ ಸಂಗಡ ಮಾತನಾಡಿದಂತಹ ಮೋಶೆ ಮತ್ತು ಆರೋನರು ಇವರೇ.
मोशेह और अहरोन, जो इस्राएलियों को मिस्र देश से निकालने के लिए फ़रोह से बार-बार कहते रहे.
28 ೨೮ ಯೆಹೋವನು ಐಗುಪ್ತದೇಶದಲ್ಲಿ, ಮೋಶೆಯ ಸಂಗಡ ಮಾತನಾಡಿದಾಗ
जिस दिन याहवेह ने मिस्र देश में मोशेह से बात की,
29 ೨೯ ಆತನು ಮೋಶೆಗೆ, “ನಾನು ಯೆಹೋವನು ನಾನು ನಿನಗೆ ಹೇಳುವುದನ್ನೆಲ್ಲಾ ನೀನು ಐಗುಪ್ತ್ಯರ ಅರಸನಾದ ಫರೋಹನನಿಗೆ ತಿಳಿಸು” ಎಂದನು.
और कहा, “मैं ही याहवेह हूं. और जो कुछ मैं तुमसे कहता हूं, वह सब तुम मिस्र देश के राजा फ़रोह से कहना.”
30 ೩೦ ಆದರೆ ಮೋಶೆಯು ಯೆಹೋವನಿಗೆ, “ಇಗೋ, ಸ್ವಾಮಿ ನಾನು ಮಾತನಾಡುವುದರಲ್ಲಿ ಜಾಣನಲ್ಲ, ಫರೋಹನು ನನ್ನ ಮಾತನ್ನು ಹೇಗೆ ಕೇಳಾನು” ಅಂದನು.
लेकिन मोशेह ने याहवेह से कहा, “मैं अच्छी तरह बोल नहीं सकता; फ़रोह मेरी बात क्यों सुनेगा?”

< ವಿಮೋಚನಕಾಂಡ 6 >