< ವಿಮೋಚನಕಾಂಡ 7 >

1 ಆಗ ಯೆಹೋವನು ಮೋಶೆಗೆ ಇಂತೆಂದನು, “ನಿನ್ನನ್ನು ಫರೋಹನಿಗೆ ದೇವರಂತೆ ನೇಮಿಸಿದ್ದೇನೆ. ನೋಡು, ನಿನ್ನ ಅಣ್ಣನಾದ ಆರೋನನು ನಿನಗೋಸ್ಕರ ಪ್ರವಾದಿಯಾಗಿರುವನು.
यह सुनकर याहवेह ने मोशेह से कहा, “अब देखना कि मैं तुम्हें कैसे फ़रोह के सामने ईश्वर-समान बना देता हूं. और तुम्हारा भाई अहरोन तुम्हारा प्रवक्ता होगा.
2 ನಾನು ನಿನಗೆ ಆಜ್ಞಾಪಿಸುವುದ್ದನ್ನೆಲ್ಲಾ ನೀನು ಹೇಳಬೇಕು. ಇಸ್ರಾಯೇಲರು ದೇಶದಿಂದ ಹೊರಟುಹೋಗುವುದಕ್ಕೆ ಅಪ್ಪಣೆಕೊಡಬೇಕೆಂಬುದಾಗಿ ನಿನ್ನ ಅಣ್ಣನಾದ ಆರೋನನೇ ಫರೋಹನ ಮುಂದೆ ಮಾತನಾಡಬೇಕು.
जो जो बात मैं तुम्हें बताऊंगा, वह सब बात तुम अहरोन से कहना और अहरोन वही सब फ़रोह से कह देगा, तब फ़रोह इस्राएलियों को अपने देश से जाने देगा.
3 ಆದರೂ ನಾನು ಫರೋಹನ ಮನಸ್ಸಿನಲ್ಲಿ ಹಠವನ್ನು ಹುಟ್ಟಿಸಿ, ಐಗುಪ್ತದೇಶದಲ್ಲಿ ಅನೇಕ ಸೂಚಕಕಾರ್ಯಗಳನ್ನೂ ಮತ್ತು ಅದ್ಭುತಕಾರ್ಯಗಳನ್ನೂ ಮಾಡಿ ನನ್ನ ಶಕ್ತಿಯನ್ನು ತೋರಿಸುವೆನು.
लेकिन मैं फ़रोह के मन को कठोर बना दूंगा, ताकि मैं मिस्र देश में और ज्यादा चिन्ह और अद्भुत काम कर सकूं.
4 ಫರೋಹನು ನಿಮ್ಮ ಮಾತನ್ನು ಕೇಳುವುದಿಲ್ಲ. ಆಗ ನಾನು ಐಗುಪ್ತದೇಶದವರನ್ನು ಬಾಧಿಸಿ, ಅವರಿಗೆ ಮಹಾಶಿಕ್ಷೆಗಳನ್ನು ವಿಧಿಸಿ, ನನ್ನ ಜನರಾಗಿರುವ ಇಸ್ರಾಯೇಲರ ಸೈನ್ಯವನ್ನೆಲ್ಲಾ ಐಗುಪ್ತದೇಶದಿಂದ ಹೊರತರುವೆನು.
फिर भी फ़रोह उन सब बातों पर ध्यान नहीं देगा. तब मैं मिस्र देश को बड़ा कष्ट और दंड दूंगा और मिस्र से इस्राएल के लोगों को बाहर निकालूंगा.
5 ನಾನು ಐಗುಪ್ತ್ಯರಿಗೆ ವಿರೋಧವಾಗಿ ಕೈಚಾಚಿ ಅವರ ಮಧ್ಯದಿಂದ ಇಸ್ರಾಯೇಲರನ್ನು ಹೊರತಂದಾಗ ನಾನು ಯೆಹೋವನು ಎಂಬುವುದನ್ನು ಐಗುಪ್ತ್ಯರು ತಿಳಿದುಕೊಳ್ಳುವರು” ಅಂದನು.
मिस्र के लोग यह जान जाएंगे कि मैं ही याहवेह हूं, जिसने मिस्र देश पर अपना हाथ बढ़ाया है और मैंने ही इस्राएलियों को उसके बीच से निकाला है.”
6 ಯೆಹೋವನ ಆಜ್ಞೆಯಂತೆಯೇ ಮೋಶೆ ಮತ್ತು ಆರೋನರು ಮಾಡಿದರು.
तब मोशेह एवं अहरोन ने ऐसा ही किया—जैसा याहवेह ने उनसे कहा था.
7 ಅವರು ಫರೋಹನ ಹತ್ತಿರ ಮಾತನಾಡಿದ ಕಾಲದಲ್ಲಿ ಮೋಶೆ ಎಂಬತ್ತು ವರ್ಷದವನೂ ಮತ್ತು ಆರೋನನು ಎಂಭತ್ತಮೂರು ವರ್ಷದವನೂ ಆಗಿದ್ದರು.
जब मोशेह और अहरोन फ़रोह के पास गए, तब मोशेह की उम्र अस्सी वर्ष तथा अहरोन की तेरासी वर्ष थी.
8 ಯೆಹೋವನು ಮೋಶೆ ಹಾಗೂ ಆರೋನರ ಸಂಗಡ ಮಾತನಾಡಿ,
तब याहवेह ने मोशेह तथा अहरोन को यह आदेश दिया,
9 “ಫರೋಹನು ನಿಮಗೆ ‘ನಾನು ನಿಮ್ಮ ಮಾತನ್ನು ನಂಬುವಂತೆ ನೀವು ಮಹತ್ಕಾರ್ಯವನ್ನು ನನ್ನ ಮುಂದೆ ಮಾಡಬೇಕು’ ಎಂದು ಹೇಳಿದರೆ ಮೋಶೆಯು ಆರೋನನಿಗೆ, ‘ನಿನ್ನ ಕೈಯಲ್ಲಿರುವ ಕೋಲನ್ನು ಫರೋಹನ ಮುಂದೆ ನೆಲದಲ್ಲಿ ಹಾಕು’ ಎಂದು ಹೇಳಬೇಕು. ಅದು ಸರ್ಪವಾಗುವುದು” ಎಂದು ಆಜ್ಞಾಪಿಸಿದನು.
“जब फ़रोह तुमसे चमत्कार दिखाने को कहे, तब तुम अहरोन से कहना, ‘अपनी लाठी फ़रोह के सामने डाल दे, ताकि वह सांप बन जाए.’”
10 ೧೦ ಮೋಶೆ ಆರೋನರು ಫರೋಹನ ಬಳಿಗೆ ಹೋಗಿ ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಆರೋನನು ತನ್ನ ಕೋಲನ್ನು ಫರೋಹನ ಮತ್ತು ಅವನ ಪರಿವಾರದವರ ಮುಂದೆ ನೆಲದಲ್ಲಿ ಹಾಕಿದಾಗ ಅದು ಸರ್ಪವಾಯಿತು.
इसलिये मोशेह तथा अहरोन फ़रोह के पास गए और ठीक वही किया, जो याहवेह ने कहा था. अहरोन ने अपनी लाठी फ़रोह एवं उसके सेवकों के सामने डाल दी और वह सांप बन गई.
11 ೧೧ ಫರೋಹನು ಐಗುಪ್ತದೇಶದ ವಿದ್ವಾಂಸರನ್ನೂ ಮತ್ತು ಮಂತ್ರವಾದಿಗಳನ್ನೂ ಕರೆಯಿಸಿದಾಗ ಆ ಮಾಂತ್ರಿಕರು ತಮ್ಮ ಮಂತ್ರವಿದ್ಯೆಗಳಿಂದ ಅದೇ ರೀತಿಯಾಗಿ ಮಾಡಿದರು.
यह देख फ़रोह ने भी पंडितों तथा ओझों को बुलवाया और मिस्र देश के जादूगरों ने भी वैसा ही किया.
12 ೧೨ ಅವರು ತಮ್ಮ ತಮ್ಮ ಕೋಲುಗಳನ್ನು ನೆಲಕ್ಕೆ ಹಾಕಲು ಅವು ಸರ್ಪಗಳಾದವು. ಆದರೆ ಆರೋನನ ಕೋಲು ಅವರ ಕೋಲುಗಳನ್ನು ನುಂಗಿಬಿಟ್ಟಿತು.
उन सबने अपनी-अपनी लाठी फेंकी जो सांप बन गईं. पर अहरोन की लाठी ने उन सभी की लाठियों को निगल लिया.
13 ೧೩ ಯೆಹೋವನು ಮೊದಲು ಹೇಳಿದಂತೆಯೇ ಫರೋಹನ ಹೃದಯವು ಕಠಿಣವಾಯಿತು. ಅವನು ಅವರ ಮಾತಿಗೆ ಕಿವಿಗೊಡದೆ ಹೋದನು.
इससे फ़रोह का मन और कठोर हो गया और उसने उनकी बात नहीं मानी, जैसा ही याहवेह ने कहा था.
14 ೧೪ ಆಗ ಯೆಹೋವನು ಮೋಶೆಗೆ, “ಫರೋಹನ ಹೃದಯವು ಕಠಿಣವಾಗಿದೆ, ತಾನು ಜನರಿಗೆ ಹೋಗುವುದಕ್ಕೆ ಅಪ್ಪಣೆಕೊಡುವುದಿಲ್ಲ ಎನ್ನುತ್ತಾನೆ.
तब याहवेह ने मोशेह से कहा, “फ़रोह का मन बहुत कठोर हो गया है, वह लोगों को जाने नहीं देगा.
15 ೧೫ ನೀನು ಬೆಳಿಗ್ಗೆ ಫರೋಹನ ಬಳಿಗೆ ಹೋಗು, ಅವನು ನೀರಿನ ಬಳಿಗೆ ಇಳಿದು ಬರುತ್ತಾನಲ್ಲಾ. ಸರ್ಪವಾಗಿ ಮಾರ್ಪಾಟುಮಾಡಿದ ಆ ಕೋಲನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಅವನನ್ನು ಎದುರುಗೊಳ್ಳುವುದಕ್ಕೆ ನೈಲ್ ನದಿ ತೀರದಲ್ಲಿ ನಿಂತುಕೊಂಡು ಅವನಿಗೆ ಹೀಗನ್ನಬೇಕು,
सुबह जब फ़रोह नदी की ओर जाएगा, तब तुम नदी पर उनसे मिलना और तुम्हारे हाथ में वही लाठी रखना, जो सांप बन गई थी.
16 ೧೬ ‘ಇಬ್ರಿಯರ ದೇವರಾದ ಯೆಹೋವನು ನನ್ನನ್ನು ನಿನ್ನ ಬಳಿಗೆ ಕಳುಹಿಸಿ, ಅರಣ್ಯದಲ್ಲಿ ತನ್ನನ್ನು ಆರಾಧಿಸುವಂತೆ ತನ್ನ ಜನರಿಗೆ ಅಪ್ಪಣೆಕೊಡಬೇಕೆಂದು ನಿನಗೆ ಆಜ್ಞಾಪಿಸಿದ್ದಾನಷ್ಟೇ. ಈ ವರೆಗೂ ನೀನು ಅದನ್ನು ಲಕ್ಷ್ಯಕ್ಕೆ ತರಲಿಲ್ಲ.
तुम फ़रोह से यह कहना ‘याहवेह ने, जो इब्रियों के परमेश्वर हैं, मुझे तुमको यह कहने के लिए भेजा है कि मेरे लोगों को जाने दो कि वे निर्जन प्रदेश में जाकर मेरी आराधना कर सकें; लेकिन अभी तक तुमने यह बात नहीं मानी है.
17 ೧೭ ಆದುದರಿಂದ ಯೆಹೋವನು ಹೇಳುವುದೇನೆಂದರೆ, ನೀನು ನನ್ನನ್ನು ಯೆಹೋವನೆಂದು ತಿಳಿದುಕೊಳ್ಳುವುದಕ್ಕಾಗಿ ನನ್ನ ಸೇವಕನ ಕೈಯಲ್ಲಿರುವ ಕೋಲಿನಿಂದ ನೈಲ್ ನದಿಯ ನೀರನ್ನು ಹೊಡೆಸುವೆನು. ಆಗ ಅದು ರಕ್ತವಾಗುವುದು.
याहवेह ने यह कहा है कि तुम जान जाओगे कि मैं ही याहवेह हूं, तुम देखना कि नदी के जल पर मैं इस लाठी से, जो मेरे हाथ में है, मारूंगा और पानी खून बन जाएगा.
18 ೧೮ ನದಿಯಲ್ಲಿರುವ ಮೀನುಗಳು ಸಾಯುವವು. ನದಿಯು ಹೊಲಸಾಗಿ ನಾರುವುದು. ಅದನ್ನು ಕುಡಿಯುವುದಕ್ಕೆ ಐಗುಪ್ತರಿಗೆ ಹೇಸಿಗೆಯಾಗುವುದು’ ಎಂದು ಹೇಳಬೇಕು” ಅಂದನು.
और उसमें सब मछलियां मर जायेंगी और नदी से बदबू आएगी और मिस्र के लोग नील नदी से पानी नहीं पी पायेंगे.’”
19 ೧೯ ಯೆಹೋವನು ಮೋಶೆಯ ಸಂಗಡ ಮಾತನಾಡಿ, “ನೀನು ಆರೋನನಿಗೆ ‘ನಿನ್ನ ಕೋಲನ್ನು ತೆಗೆದುಕೊಂಡು ಐಗುಪ್ತದೇಶದಲ್ಲಿರುವ ಹೊಳೆ, ಕಾಲುವೆ, ಕೆರೆ, ಕೊಳ ಮೊದಲಾದ ನೀರಿರುವ ಎಲ್ಲಾ ಸ್ಥಳಗಳ ಮೇಲೆ ಅದನ್ನು ಚಾಚು’ ಎಂದು ಹೇಳಬೇಕು. ಅವನು ಚಾಚುವಾಗ ಆ ನೀರೆಲ್ಲಾ ರಕ್ತವಾಗುವುದು. ಐಗುಪ್ತದೇಶದಲ್ಲೆಲ್ಲಾ ಮರದ ಪಾತ್ರೆಗಳಲ್ಲಿಯೂ, ಕಲ್ಲಿನ ಪಾತ್ರೆಗಳಲ್ಲಿಯೂ ಇರುವ ನೀರು ರಕ್ತವಾಗುವುದು” ಅಂದನು.
फिर याहवेह ने मोशेह से कहा, “अहरोन से यह कहो: ‘अपनी लाठी मिस्र देश की नदियों, नालों, तालाबों और जल-कुं‍डों की ओर बढ़ाए ताकि सारा पानी लहू बन जाये—चाहे पानी बर्तन में हो या पत्थर के पात्र में.’”
20 ೨೦ ಮೋಶೆ ಮತ್ತು ಆರೋನರು ಯೆಹೋವನು ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಆರೋನನು ಫರೋಹನ ಮತ್ತು ಅವನ ಪರಿವಾರದ ಮುಂದೆ ಕೋಲನ್ನು ಎತ್ತಿ, ನೈಲ್ ನದಿಯಲ್ಲಿರುವ ನೀರನ್ನು ಹೊಡೆಯಲು ಅದೆಲ್ಲಾ ರಕ್ತವಾಯಿತು.
मोशेह तथा अहरोन ने वैसा ही किया, जैसा याहवेह ने उनसे कहा. उन्होंने लाठी उठाई और नील नदी के जल पर मारा. फ़रोह एवं उसके सेवक यह सब देख रहे थे. एकदम नील नदी का पूरा पानी लहू बन गया.
21 ೨೧ ಅದರಲ್ಲಿದ್ದ ಮೀನುಗಳು ಸತ್ತುಹೋದವು. ನದಿಯು ದುರ್ವಾಸನೆಗೊಂಡಿದ್ದರಿಂದ ಐಗುಪ್ತರು ನೈಲ್ ನದಿಯ ನೀರನ್ನು ಕುಡಿಯಲಾರದೆ ಹೋದರು. ಐಗುಪ್ತ ದೇಶದಲ್ಲೆಲ್ಲಾ ರಕ್ತವೇ ಕಾಣುತಿತ್ತು.
नील नदी में जो मछलियां थी, मर गईं. नदी में इतनी दुर्गंध थी कि मिस्र के लोग नील नदी का पानी नहीं पी सकते थे. पूरे मिस्र देश में रक्त फैल गया.
22 ೨೨ ಆದರೆ ಐಗುಪ್ತ್ಯ ದೇಶದ ಮಾಂತ್ರಿಕರು ತಮ್ಮ ಮಂತ್ರವಿದ್ಯೆಗಳಿಂದ ಅದೇ ರೀತಿಯಾಗಿ ಮಾಡಿದ್ದರಿಂದ ಫರೋಹನ ಹೃದಯವು ಇನ್ನೂ ಕಠಿಣವಾಯಿತು. ಯೆಹೋವನು ಹೇಳಿದಂತೆಯೇ ಅವನು ಮೋಶೆ ಮತ್ತು ಆರೋನರ ಮಾತನ್ನು ಕೇಳದೆ ಹೋದನು.
अपने तंत्र मंत्र से मिस्र के जादूगरों ने भी यही कर दिखाया; तौभी फ़रोह का मन और कठोर हो गया और उसने उनकी बात नहीं मानी.
23 ೨೩ ಫರೋಹನು ಆ ಮಹತ್ಕಾರ್ಯವನ್ನು ಲಕ್ಷ್ಯಕ್ಕೆ ತೆಗೆದುಕೊಳ್ಳದೆ ತನ್ನ ಮನೆಗೆ ಹೊರಟುಹೋದನು.
फ़रोह पर इन सब बातों का कोई असर नहीं हुआ और वह अपने घर चला गया.
24 ೨೪ ಐಗುಪ್ತ್ಯರೆಲ್ಲರೂ ನದಿಯ ನೀರನ್ನು ಕುಡಿಯಲಾರದೆ ಕುಡಿಯುವ ನೀರಿಗಾಗಿ ನದಿಯ ಸುತ್ತಲೂ ಗುಂಡಿಗಳನ್ನು ತೆಗೆದರು.
मिस्र के लोग पीने के पानी के लिए नील नदी के पास गड्ढे खोदने लगे, क्योंकि नील नदी का पानी पीने योग्य नहीं रहा था.
25 ೨೫ ಯೆಹೋವನು ನೈಲ್ ನದಿಯನ್ನು ಹೊಡೆದ ಮೇಲೆ ಏಳು ದಿನಗಳು ತುಂಬಿದವು.
याहवेह द्वारा नील नदी के पानी को लहू बनाए सात दिन हो चुके थे.

< ವಿಮೋಚನಕಾಂಡ 7 >