< ವಿಮೋಚನಕಾಂಡ 1 >

1 ಯಾಕೋಬನೊಂದಿಗೆ ಐಗುಪ್ತದೇಶಕ್ಕೆ ತಮ್ಮತಮ್ಮ ಮನೆಯವರ ಸಂಗಡ ಬಂದ ಇಸ್ರಾಯೇಲರ ಮಕ್ಕಳ ಹೆಸರುಗಳು:
Haya ndiyo majina ya wana wa Israeli waliokuja Misri pamoja na Yakobo kila moja na familia yake:
2 ರೂಬೇನ್, ಸಿಮೆಯೋನ್, ಲೇವಿ, ಯೆಹೂದ,
Rubeni, Simioni, Lawi, na Yuda,
3 ಇಸ್ಸಾಕಾರ್, ಜೆಬುಲೂನ್ ಮತ್ತು ಬೆನ್ಯಾಮೀನ್,
Isakari, Zebuluni, na Benjamini,
4 ದಾನ್, ಗಾದ್, ನಫ್ತಾಲಿ ಮತ್ತು ಆಶೇರ್.
Dani, Naftali, Gadi, na Asheri.
5 ಯಾಕೋಬನ ಎಲ್ಲಾ ಸಂತತಿಯವರು ಒಟ್ಟು ಎಪ್ಪತ್ತು ಮಂದಿ. ಆದರೆ ಯೋಸೇಫನು ಮೊದಲೇ ಐಗುಪ್ತದೇಶದಲ್ಲಿದ್ದನು.
Jumla ya watu wa ukoo wa Yakobo walikuwa sabini. Yusufu alikuwa Misri tayari.
6 ಆ ನಂತರ ಯೋಸೇಫನೂ, ಅವನ ಅಣ್ಣತಮ್ಮಂದಿರೂ, ಆ ಸಂತತಿಯವರೆಲ್ಲರೂ ಮರಣ ಹೊಂದಿದರು.
Ndipo Yusufu, pamoja na kaka zake wote, na kizazi chote wakafa.
7 ಆದರೆ ಇಸ್ರಾಯೇಲರ ಮಕ್ಕಳು ಅತ್ಯಧಿಕವಾಗಿ ಅಭಿವೃದ್ಧಿಯಾಗಿ, ಹೆಚ್ಚಿನ ಸಂಖ್ಯೆಯಲ್ಲಿ ಬೆಳೆದು ಬಲ ಹೊಂದಿದರು. ಆ ದೇಶವು ಅವರಿಂದ ತುಂಬಿಹೋಯಿತು.
Waisraeli walifanikiwa sana, wakaongezeka sana idadi yao, na wakawa na nguvu maana nchi ilijazwa na wao.
8 ತರುವಾಯ ಯೋಸೇಫನನ್ನು ಅರಿಯದ ಹೊಸ ಅರಸನು ಐಗುಪ್ತದೇಶದ ಆಳ್ವಿಕೆಗೆ ಬಂದನು.
Wakati huu sasa mfalme mpya asiyemjua Yusufu aliinuka katika Misri.
9 ಅರಸನು ತನ್ನ ಜನರಿಗೆ, “ಇಸ್ರಾಯೇಲರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಮತ್ತು ನಮಗಿಂತ ಬಹಳ ಬಲಶಾಲಿಗಳೂ ಆಗಿದ್ದಾರೆ ನೋಡಿರಿ.
Akawaambia watu wake, “Tazama, hawa Waisraeli ni wengi na wenye nguvu kuliko sisi.
10 ೧೦ ನಮಗೆ ಯುದ್ಧವೇನಾದರೂ ಸಂಭವಿಸಿದರೆ ಅವರು ನಮ್ಮ ಶತ್ರುಗಳೊಂದಿಗೆ ಸೇರಿಕೊಂಡು, ನಮಗೆ ವಿರುದ್ಧವಾಗಿ ಹೋರಾಡಿ ದೇಶವನ್ನು ಬಿಟ್ಟುಹೋದಾರು. ಆದ್ದರಿಂದ ಅವರು ನಮ್ಮ ದೇಶವನ್ನು ಬಿಟ್ಟು ಹೋಗದಂತೆ ನಾವು ಉಪಾಯ ಮಾಡೋಣ” ಎಂದು ಹೇಳಿ
Njooni na tukae nao kwa akili, ama sivyo wataendelea kuongezeka na kama vita ikiibuka, wataungana na adui zetu, watapigana nasi, na kisha wataondoka.”
11 ೧೧ ಅವರನ್ನು ಬಿಟ್ಟೀ ಕೆಲಸಗಳಿಂದ ಪೀಡಿಸುವುದಕ್ಕಾಗಿ, ಬಿಟ್ಟೀಕೆಲಸ ಮಾಡಿಸುವ ಅಧಿಕಾರಿಗಳನ್ನು ಅವರ ಮೇಲೆ ಇರಿಸಿದನು. ಅವರು ಫರೋಹನನಿಗೆ ಪಿತೋಮ್ ಮತ್ತು ರಾಮ್ಸೇಸ್ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದನು.
Hivyo wakawekea walinzi ambao waliwatesa kwa kuwatumikisha kazi ngumu. Waisraeli walijenga maghala ya miji kwa ajili ya Farao: Pishoni na Ramsei.
12 ೧೨ ಐಗುಪ್ತರು ಇಸ್ರಾಯೇಲರನ್ನು ಉಪದ್ರವಪಡಿಸಿದಷ್ಟೂ, ಅವರು ಬಹಳವಾಗಿ ಹೆಚ್ಚಿ ಹರಡಿಕೊಂಡಿದ್ದರಿಂದ ಐಗುಪ್ತರು ಇಸ್ರಾಯೇಲರ ವಿಷಯದಲ್ಲಿ ಬಹಳ ಹೆದರಿಕೆಯುಳ್ಳವರಾದರು.
Lakini kadiri Wamisri walivyowatesa, ndivyo Waisraeli waliendelea kuongezeka na kusambaa. Hivyo Wamisri wakaanza kuwaogopa Waisraeli.
13 ೧೩ ಐಗುಪ್ತರು ಇಸ್ರಾಯೇಲರಿಂದ ಕ್ರೂರವಾಗಿ ಸೇವೆಮಾಡಿಸಿಕೊಂಡರು.
Wamisri waliwafanya Waisraeli wafanye kazi kwa nguvu nyingi.
14 ೧೪ ಮಣ್ಣಿನ ಕೆಲಸದಲ್ಲಿಯೂ, ಇಟ್ಟಿಗೆಮಾಡುವ ಕೆಲಸದಲ್ಲಿಯೂ, ವ್ಯವಸಾಯದ ಎಲ್ಲಾ ವಿಧವಾದ ಕೆಲಸದಲ್ಲಿಯೂ ಕಠಿಣವಾಗಿ ದುಡಿಸಿಕೊಂಡು ಅವರ ಜೀವಿತವನ್ನೇ ಬೇಸರಪಡಿಸಿದರು. ಐಗುಪ್ತರು ಇಸ್ರಾಯೇಲರಿಂದ ಮಾಡಿಸಿದ ಎಲ್ಲಾ ಕೆಲಸಗಳು ಬಹಳ ಕಠಿಣವಾಗಿದ್ದವು.
Waliyafanya maisha yao kuwa machungu kwa kuwafanyisha kazi ngumu kwa vinu na matofali na kwa kila aina ya kazi za shambani. Kazi zao zote zilikuwa ngumu.
15 ೧೫ ಇದಲ್ಲದೆ ಐಗುಪ್ತ ದೇಶದ ಅರಸನು “ಶಿಪ್ರಾ” ಮತ್ತು “ಪೂಗಾ” ಎಂಬ ಹೆಸರಿನ ಇಬ್ರಿಯ ಸೂಲಗಿತ್ತಿಯರೊಂದಿಗೆ ಮಾತನಾಡಿದನು.
Kisha mfalme wa Misri akawaambia wakunga wa Kiebrania; mmoja wao aliitwa jina lake Shifra, na mwingine aliitwa Puha.
16 ೧೬ ಅವನು ಅವರಿಗೆ, “ನೀವು ಇಬ್ರಿಯ ಹೆಂಗಸರಿಗೆ ಹೆರಿಗೆ ಮಾಡಿಸುವಾಗ ಅವರು ಹೆರುವ ಮಗುವು ಗಂಡು ಮಗುವಾಗಿದ್ದರೆ ಕೊಂದುಹಾಕಿರಿ, ಹೆಣ್ಣಾಗಿದ್ದರೆ ಬದುಕಲು ಬಿಡಿ” ಎಂದು ಹೇಳಿದನು.
Akasema, “Wakati mnapowasaidia wanawake wa Kiebrania wanapojifungua, chunguzeni wanapozaa. Ikiwa ni mtoto wa kiume, basi muueni; bali ikiwa ni mtoto wa kike, basi mwacheni aishi.”
17 ೧೭ ಆದರೆ ಸೂಲಗಿತ್ತಿಯರು ದೇವರಿಗೆ ಭಯಪಟ್ಟು ಐಗುಪ್ತರ ಅರಸನ ಮಾತಿನಂತೆ ಮಾಡದೆ ಗಂಡು ಮಕ್ಕಳನ್ನು ಜೀವದಿಂದ ಉಳಿಸಿದರು.
Lakini wale Wakunga walimwogopa Mungu na hawakufanya kama mfalme wa Misri alivyowaagiza; badala yake waliwaacha watoto wa kiume waishi.
18 ೧೮ ಆಗ ಐಗುಪ್ತದ ಅರಸನು ಸೂಲಗಿತ್ತಿಯರನ್ನು ಕರೆಯಿಸಿ, “ನೀವು ಅವರ ಗಂಡು ಮಕ್ಕಳನ್ನು ಉಳಿಸಿದ್ದೇನು? ಹೀಗೆ ಯಾಕೆ ಮಾಡಿದಿರಿ?” ಎಂದು ಕೇಳಿದನು.
Mfalme wa Misri akawaita Wakunga na kuwaambia, “Kwanini mmefanya haya, na kuwaacha watoto wa kiume wakaishi?”
19 ೧೯ ಸೂಲಗಿತ್ತಿಯರು ಫರೋಹನಿಗೆ, “ಇಬ್ರಿಯರ ಸ್ತ್ರೀಯರು ಐಗುಪ್ತ ಸ್ತ್ರೀಯರಂತೆ ಅಲ್ಲ, ಅವರು ಬಹು ಚುರುಕು ಬುದ್ಧಿಯವರು. ಸೂಲಗಿತ್ತಿಯು ಅವರ ಹತ್ತಿರ ಬರುವುದಕ್ಕೆ ಮೊದಲೇ ಮಗುವನ್ನು ಹೆರುತ್ತಿದ್ದರು” ಎಂದು ಹೇಳಿದರು.
Wale Wakunga wakamjibu Farao, “Hawa wanawake wa Kiebrania siyo kama wanawake wa Kimisri. Hawa wana nguvu na jasiri sana maana wao humaliza kuzaa kabla hata mkunga hajafika.”
20 ೨೦ ಆದ್ದರಿಂದ ದೇವರು ಆ ಸೂಲಗಿತ್ತಿಯರಿಗೆ ಒಳ್ಳೆಯದನ್ನು ಮಾಡಿದನು. ಇದರಿಂದ ಇಸ್ರಾಯೇಲ್ ಜನರು ಹೆಚ್ಚಾಗಿ ಬಹಳ ಬಲಗೊಂಡರು.
Mungu aliwalinda hawa Wakunga. Watu waliongezeka kwa idadi na kuwa na nguvu sana.
21 ೨೧ ಸೂಲಗಿತ್ತಿಯರು ದೇವರಿಗೆ ಭಯಪಟ್ಟಿದ್ದರಿಂದ, ಆತನು ಅವರಿಗೆ ವಂಶಾಭಿವೃದ್ಧಿಯನ್ನು ಅನುಗ್ರಹಿಸಿದನು. ಇಸ್ರಾಯೇಲರು ಹೆಚ್ಚಿ ಬಲಗೊಂಡರು.
Kwa sababu wale Wakunga walimwogopa Mungu, aliwapa familia.
22 ೨೨ ತರುವಾಯ ಫರೋಹನು ತನ್ನ ಜನರಿಗೆ, “ಇಬ್ರಿಯರ ಗಂಡು ಕೂಸುಗಳನ್ನೆಲ್ಲಾ ನೈಲ್ ನದಿಯಲ್ಲಿ ಹಾಕಬೇಕು, ಹೆಣ್ಣುಕೂಸುಗಳನ್ನೆಲ್ಲಾ ಉಳಿಸಬೇಕು” ಎಂದು ಆಜ್ಞೆ ಮಾಡಿದನು.
Farao akawaagiza watu wote, “Lazima mmutupe kila mtoto wa kiume anayezaliwa katika mto, lakini kila mtoto wa kike wamwache aishi.”

< ವಿಮೋಚನಕಾಂಡ 1 >