< ಯೆಹೆಜ್ಕೇಲನು 11 >

1 ಆ ಮೇಲೆ ದೇವರಾತ್ಮವು ನನ್ನನ್ನು ಎತ್ತಿ ಪೂರ್ವದಿಕ್ಕಿಗೆ ಅಭಿಮುಖವಾಗಿರುವ ಯೆಹೋವನ ಆಲಯದ ಮೂಡಣ ಬಾಗಿಲಿಗೆ ತಂದುಬಿಟ್ಟಿತು; ಇಗೋ, ಬಾಗಿಲ ಮುಂದೆ ಇಪ್ಪತ್ತೈದು ಜನರು ನಿಂತಿದ್ದರು; ಅವರ ಮಧ್ಯದಲ್ಲಿ ಅಜ್ಜೂರನ ಮಗನಾದ ಯಾಜನ್ಯ, ಬೆನಾಯನ ಮಗನಾದ ಪೆಲತ್ಯ ಎಂಬ ಜನನಾಯಕರನ್ನು ನಾನು ನೋಡಿದೆ.
וַתִּשָּׂ֨א אֹתִ֜י ר֗וּחַ וַתָּבֵ֣א אֹ֠תִי אֶל־שַׁ֨עַר בֵּית־יְהוָ֤ה הַקַּדְמוֹנִי֙ הַפּוֹנֶ֣ה קָדִ֔ימָה וְהִנֵּה֙ בְּפֶ֣תַח הַשַּׁ֔עַר עֶשְׂרִ֥ים וַחֲמִשָּׁ֖ה אִ֑ישׁ וָאֶרְאֶ֨ה בְתוֹכָ֜ם אֶת־יַאֲזַנְיָ֧ה בֶן־עַזֻּ֛ר וְאֶת־פְּלַטְיָ֥הוּ בֶן־בְּנָיָ֖הוּ שָׂרֵ֖י הָעָֽם׃ פ
2 ಅಲ್ಲಿ ದೇವರು ನನಗೆ, “ನರಪುತ್ರನೇ, ಪಟ್ಟಣದಲ್ಲಿ ಕುತಂತ್ರಗಳನ್ನು ಕಲ್ಪಿಸಿ ದುರಾಲೋಚನೆಯನ್ನು ಹೇಳಿಕೊಡುವವರು ಈ ಜನರೇ.
וַיֹּ֖אמֶר אֵלָ֑י בֶּן־אָדָ֕ם אֵ֣לֶּה הָאֲנָשִׁ֞ים הַחֹשְׁבִ֥ים אָ֛וֶן וְהַיֹּעֲצִ֥ים עֲצַת־רָ֖ע בָּעִ֥יר הַזֹּֽאת׃
3 ಇವರು, ‘ಮನೆಗಳನ್ನು ಕಟ್ಟಿಕೊಳ್ಳುವ ಕಾಲವು ಬಂದಿಲ್ಲ; ಈ ಪಟ್ಟಣವು ಒಂದು ಹಂಡೆ, ನಾವು ಅದರಲ್ಲಿನ ಮಾಂಸ’ ಎಂದು ಹೇಳುತ್ತಾರೆ.
הָאֹ֣מְרִ֔ים לֹ֥א בְקָר֖וֹב בְּנ֣וֹת בָּתִּ֑ים הִ֣יא הַסִּ֔יר וַאֲנַ֖חְנוּ הַבָּשָֽׂר׃
4 ಆದಕಾರಣ, ನರಪುತ್ರನೇ, ನೀನು ಇವರ ವಿಷಯವಾಗಿ ಅಹಿತವನ್ನು ನುಡಿ, ತಪ್ಪದೆ ನುಡಿ” ಎಂದು ಆಜ್ಞಾಪಿಸಿದನು.
לָכֵ֖ן הִנָּבֵ֣א עֲלֵיהֶ֑ם הִנָּבֵ֖א בֶּן־אָדָֽם׃
5 ಆಗ ಯೆಹೋವನ ಆತ್ಮವು ನನ್ನಲ್ಲಿ ಆವೇಶ ಉಂಟುಮಾಡಿ, ಹೀಗೆ ಸಾರಬೇಕೆಂದು ಅಪ್ಪಣೆಯಾಯಿತು. ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲ್ ವಂಶದವರೇ, ನೀವು ಹೀಗೆ ಮಾತನಾಡುತ್ತಿದ್ದೀರಿ, ಸರಿ; ನಿಮ್ಮ ಮನಸ್ಸಿನಲ್ಲಿ ಹುಟ್ಟಿರುವ ಆಲೋಚನೆಗಳು ನನಗೆ ಗೊತ್ತೇ ಇವೆ.
וַתִּפֹּ֣ל עָלַי֮ ר֣וּחַ יְהוָה֒ וַיֹּ֣אמֶר אֵלַ֗י אֱמֹר֙ כֹּה־אָמַ֣ר יְהוָ֔ה כֵּ֥ן אֲמַרְתֶּ֖ם בֵּ֣ית יִשְׂרָאֵ֑ל וּמַעֲל֥וֹת רֽוּחֲכֶ֖ם אֲנִ֥י יְדַעְתִּֽיהָ׃
6 ನೀವು ಈ ಪಟ್ಟಣದಲ್ಲಿ ನರಹತ್ಯವನ್ನು ಹೆಚ್ಚೆಚ್ಚಾಗಿ ಮಾಡಿ, ಹತರಾದವರಿಂದ ಬೀದಿಗಳನ್ನು ತುಂಬಿಸಿದ್ದೀರಿ.
הִרְבֵּיתֶ֥ם חַלְלֵיכֶ֖ם בָּעִ֣יר הַזֹּ֑את וּמִלֵּאתֶ֥ם חוּצֹתֶ֖יהָ חָלָֽל׃ פ
7 “ಆದಕಾರಣ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನಿಮ್ಮ ದೋಷದಿಂದ ಹತರಾಗಿ ಪಟ್ಟಣದಲ್ಲಿ ಬಿದ್ದಿರುವ ನಿಮ್ಮವರ ಶವಗಳೇ ಹಂಡೆಯಲ್ಲಿನ ಮಾಂಸ, ಈ ಪಟ್ಟಣವೇ ಹಂಡೆ, ನಿಮ್ಮನ್ನಾದರೋ ನಾನು ಪಟ್ಟಣದೊಳಗಿಂದ ಕಿತ್ತುಹಾಕುವೆನು.
לָכֵ֗ן כֹּֽה־אָמַר֮ אֲדֹנָ֣י יְהוִה֒ חַלְלֵיכֶם֙ אֲשֶׁ֣ר שַׂמְתֶּ֣ם בְּתוֹכָ֔הּ הֵ֥מָּה הַבָּשָׂ֖ר וְהִ֣יא הַסִּ֑יר וְאֶתְכֶ֖ם הוֹצִ֥יא מִתּוֹכָֽהּ׃
8 ಖಡ್ಗಕ್ಕೆ ಹೆದರಿದ ನಿಮ್ಮನ್ನೇ ಖಡ್ಗಕ್ಕೆ ಗುರಿಮಾಡುವೆನು’” ಇದು ಕರ್ತನಾದ ಯೆಹೋವನ ನುಡಿ.
חֶ֖רֶב יְרֵאתֶ֑ם וְחֶ֙רֶב֙ אָבִ֣יא עֲלֵיכֶ֔ם נְאֻ֖ם אֲדֹנָ֥י יְהוִֽה׃
9 “ನಾನು ಪಟ್ಟಣದೊಳಗಿಂದ ನಿಮ್ಮನ್ನು ಕಿತ್ತು ಅನ್ಯರ ಕೈಗೆ ಕೊಟ್ಟು ದಂಡಿಸುವೆನು.
וְהוֹצֵאתִ֤י אֶתְכֶם֙ מִתּוֹכָ֔הּ וְנָתַתִּ֥י אֶתְכֶ֖ם בְּיַד־זָרִ֑ים וְעָשִׂ֛יתִי בָכֶ֖ם שְׁפָטִֽים׃
10 ೧೦ ನೀವು ಖಡ್ಗಕ್ಕೆ ತುತ್ತಾಗುವಿರಿ. ಇಸ್ರಾಯೇಲಿನ ಮೇರೆಯಲ್ಲಿ ನಿಮಗೆ ದಂಡನೆಯನ್ನು ವಿಧಿಸುವೆನು, ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.
בַּחֶ֣רֶב תִּפֹּ֔לוּ עַל־גְּב֥וּל יִשְׂרָאֵ֖ל אֶשְׁפּ֣וֹט אֶתְכֶ֑ם וִֽידַעְתֶּ֖ם כִּֽי־אֲנִ֥י יְהוָֽה׃
11 ೧೧ ಈ ಪಟ್ಟಣವು ನಿಮಗೆ ಹಂಡೆಯಾಗುವುದಿಲ್ಲ; ನೀವು ಅದರಲ್ಲಿನ ಮಾಂಸವಾಗುವುದಿಲ್ಲ. ಇಸ್ರಾಯೇಲಿನ ಮೇರೆಯಲ್ಲಿ ನಿಮಗೆ ದಂಡನೆಯನ್ನು ವಿಧಿಸುವೆನು.
הִ֗יא לֹֽא־תִהְיֶ֤ה לָכֶם֙ לְסִ֔יר וְאַתֶּ֛ם תִּהְי֥וּ בְתוֹכָ֖הּ לְבָשָׂ֑ר אֶל־גְּב֥וּל יִשְׂרָאֵ֖ל אֶשְׁפֹּ֥ט אֶתְכֶֽם׃
12 ೧೨ “‘ನಾನೇ ಯೆಹೋವನು’ ಎಂದು ನಿಮಗೆ ಗೊತ್ತಾಗುವುದು; ನೀವು ನನ್ನ ವಿಧಿಗಳನ್ನು ಕೈಕೊಳ್ಳದೆ, ನನ್ನ ನಿಯಮಗಳನ್ನು ಅನುಸರಿಸದೆ, ನಿಮ್ಮ ಸುತ್ತಲಿನ ಜನಾಂಗಗಳ ಆಚಾರಗಳನ್ನೇ ಅನುಸರಿಸಿದ್ದರಿಂದ ಇದೆಲ್ಲಾ ಆಗುವುದು.”
וִֽידַעְתֶּם֙ כִּֽי־אֲנִ֣י יְהוָ֔ה אֲשֶׁ֤ר בְּחֻקַּי֙ לֹ֣א הֲלַכְתֶּ֔ם וּמִשְׁפָּטַ֖י לֹ֣א עֲשִׂיתֶ֑ם וּֽכְמִשְׁפְּטֵ֧י הַגּוֹיִ֛ם אֲשֶׁ֥ר סְבִיבוֹתֵיכֶ֖ם עֲשִׂיתֶֽם׃
13 ೧೩ ನಾನು ಈ ಮಾತನ್ನು ನುಡಿಯುತ್ತಿರುವಾಗಲೇ ಬೆನಾಯನ ಮಗನಾದ ಪೆಲತ್ಯನು ಸತ್ತುಹೋದನು. ಆಗ ನಾನು ಅಡ್ಡಬಿದ್ದು ಗಟ್ಟಿಯಾಗಿ ಕೂಗಿಕೊಂಡೆ, “ಅಯ್ಯೋ, ಕರ್ತನಾದ ಯೆಹೋವನೇ, ಇಸ್ರಾಯೇಲಿನಲ್ಲಿ ಉಳಿದವರನ್ನು ಸಂಪೂರ್ಣವಾಗಿ ನಿರ್ಮೂಲಮಾಡುವಿಯೋ?” ಎಂದು ಮೊರೆಯಿಟ್ಟೆನು.
וַֽיְהִי֙ כְּהִנָּ֣בְאִ֔י וּפְלַטְיָ֥הוּ בֶן־בְּנָיָ֖ה מֵ֑ת וָאֶפֹּ֨ל עַל־פָּנַ֜י וָאֶזְעַ֣ק קוֹל־גָּד֗וֹל וָאֹמַר֙ אֲהָהּ֙ אֲדֹנָ֣י יְהוִ֔ה כָּלָה֙ אַתָּ֣ה עֹשֶׂ֔ה אֵ֖ת שְׁאֵרִ֥ית יִשְׂרָאֵֽל׃ פ
14 ೧೪ ಆಗ ಯೆಹೋವನು ಈ ಮಾತನ್ನು ನನಗೆ ದಯಪಾಲಿಸಿದನು,
וַיְהִ֥י דְבַר־יְהוָ֖ה אֵלַ֥י לֵאמֹֽר׃
15 ೧೫ “ನರಪುತ್ರನೇ, ನಿನ್ನ ಸಹೋದರರು, ನಿನ್ನ ಅಣ್ಣತಮ್ಮಂದಿರು, ನಿನ್ನ ನೆಂಟರು ಅಂತು ಯೆರೂಸಲೇಮಿನವರು ಮತ್ತು ಇಸ್ರಾಯೇಲ್ ವಂಶದವರಲ್ಲಿ ಉಳಿದಿರುವವರು, ‘ಯೆಹೋವನ ಬಳಿಯಿಂದ ದೂರವಾಗಿ ತೊಲಗಿರಿ, ಈ ದೇಶವು ನಮಗೇ ಸ್ವತ್ತಾಗಿ ಸಿಕ್ಕಿದೆ’ ಎಂದು ಹೀನೈಸಿದರೋ ಅವರೆಲ್ಲರು ಉಳಿದಿದ್ದಾರಲ್ಲಾ.
בֶּן־אָדָ֗ם אַחֶ֤יךָ אַחֶ֙יךָ֙ אַנְשֵׁ֣י גְאֻלָּתֶ֔ךָ וְכָל־בֵּ֥ית יִשְׂרָאֵ֖ל כֻּלֹּ֑ה אֲשֶׁר֩ אָמְר֨וּ לָהֶ֜ם יֹשְׁבֵ֣י יְרוּשָׁלִַ֗ם רַֽחֲקוּ֙ מֵעַ֣ל יְהוָ֔ה לָ֥נוּ הִ֛יא נִתְּנָ֥ה הָאָ֖רֶץ לְמוֹרָשָֽׁה׃ ס
16 ೧೬ “ಆದಕಾರಣ ನೀನು ಹೀಗೆ ಸಾರು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನಾನು ಅವರನ್ನು ದೂರವಾಗಿ ತೊಲಗಿಸಿ, ಜನಾಂಗಗಳಲ್ಲಿ ಮತ್ತು ಅನ್ಯದೇಶದ ಜನಾಂಗಗಳಲ್ಲಿ ಚದರಿಸಿದರೂ ಅವರು ಸೇರಿರುವ ದೇಶಗಳಲ್ಲಿಯೇ ನಾನು ಸ್ವಲ್ಪ ಕಾಲದ ಮಟ್ಟಿಗೆ ಅವರಿಗೆ ಪವಿತ್ರಾಲಯವಾಗಿರುವೆನು.’
לָכֵ֣ן אֱמֹ֗ר כֹּֽה־אָמַר֮ אֲדֹנָ֣י יְהוִה֒ כִּ֤י הִרְחַקְתִּים֙ בַּגּוֹיִ֔ם וְכִ֥י הֲפִֽיצוֹתִ֖ים בָּאֲרָצ֑וֹת וָאֱהִ֤י לָהֶם֙ לְמִקְדָּ֣שׁ מְעַ֔ט בָּאֲרָצ֖וֹת אֲשֶׁר־בָּ֥אוּ שָֽׁם׃ ס
17 ೧೭ “ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಅವರನ್ನು ಜನಾಂಗಗಳೊಳಗಿಂದ ಕೂಡಿಸುವೆನು, ಚದರಿರುವ ದೇಶಗಳಿಂದ ಅವರನ್ನು ಒಟ್ಟಿಗೆ ಬರಮಾಡಿ ಇಸ್ರಾಯೇಲ್ ದೇಶವನ್ನು ಅವರಿಗೆ ದಯಪಾಲಿಸುವೆನು.’
לָכֵ֣ן אֱמֹ֗ר כֹּֽה־אָמַר֮ אֲדֹנָ֣י יְהוִה֒ וְקִבַּצְתִּ֤י אֶתְכֶם֙ מִן־הָ֣עַמִּ֔ים וְאָסַפְתִּ֣י אֶתְכֶ֔ם מִן־הָ֣אֲרָצ֔וֹת אֲשֶׁ֥ר נְפֹצוֹתֶ֖ם בָּהֶ֑ם וְנָתַתִּ֥י לָכֶ֖ם אֶת־אַדְמַ֥ת יִשְׂרָאֵֽל׃
18 ೧೮ ಅವರು ಅಲ್ಲಿಗೆ ಸೇರಿ ಎಲ್ಲಾ ಅಸಹ್ಯ ವಸ್ತುಗಳನ್ನೂ, ಸಮಸ್ತ ಅಸಹ್ಯ ವಿಗ್ರಹಗಳನ್ನೂ ಅಲ್ಲಿಂದ ತೆಗೆದುಹಾಕುವರು.
וּבָ֖אוּ־שָׁ֑מָּה וְהֵסִ֜ירוּ אֶת־כָּל־שִׁקּוּצֶ֛יהָ וְאֶת־כָּל־תּוֹעֲבוֹתֶ֖יהָ מִמֶּֽנָּה׃
19 ೧೯ “ಅವರು ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು ನೆರವೇರಿಸಲಿ ಎಂದು ನಾನು ಅವರಿಗೆ ಒಂದೇ ಮನಸ್ಸನ್ನು ದಯಪಾಲಿಸಿ ನೂತನ ಸ್ವಭಾವವನ್ನು ಅವರಲ್ಲಿ ಹುಟ್ಟಿಸುವೆನು.
וְנָתַתִּ֤י לָהֶם֙ לֵ֣ב אֶחָ֔ד וְר֥וּחַ חֲדָשָׁ֖ה אֶתֵּ֣ן בְּקִרְבְּכֶ֑ם וַהֲסִ֨רֹתִ֜י לֵ֤ב הָאֶ֙בֶן֙ מִבְּשָׂרָ֔ם וְנָתַתִּ֥י לָהֶ֖ם לֵ֥ב בָּשָֽׂר׃
20 ೨೦ ಕಲ್ಲಾದ ಹೃದಯವನ್ನು ಅವರೊಳಗಿಂದ ತೆಗೆದು ಮೃದುವಾದ ಹೃದಯವನ್ನು ಅವರಿಗೆ ಅನುಗ್ರಹಿಸುವೆನು; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು.
לְמַ֙עַן֙ בְּחֻקֹּתַ֣י יֵלֵ֔כוּ וְאֶת־מִשְׁפָּטַ֥י יִשְׁמְר֖וּ וְעָשׂ֣וּ אֹתָ֑ם וְהָיוּ־לִ֣י לְעָ֔ם וַאֲנִ֕י אֶהְיֶ֥ה לָהֶ֖ם לֵאלֹהִֽים׃
21 ೨೧ ಆದರೆ ಯಾರ ಮನಸ್ಸು ತಮ್ಮ ಅಸಹ್ಯ ವಸ್ತುಗಳನ್ನೂ, ಅಸಹ್ಯ ವಿಗ್ರಹಗಳನ್ನೂ ಅನುಸರಿಸುತ್ತದೋ ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು” ಇದು ಕರ್ತನಾದ ಯೆಹೋವನ ನುಡಿ.
וְאֶל־לֵ֧ב שִׁקּוּצֵיהֶ֛ם וְתוֹעֲבוֹתֵיהֶ֖ם לִבָּ֣ם הֹלֵ֑ךְ דַּרְכָּם֙ בְּרֹאשָׁ֣ם נָתַ֔תִּי נְאֻ֖ם אֲדֹנָ֥י יְהוִֽה׃
22 ೨೨ ಬಳಿಕ ಚಕ್ರಗಳ ಪಕ್ಕದಲ್ಲಿದ್ದ ಕೆರೂಬಿಗಳು ರೆಕ್ಕೆಗಳನ್ನು ಹರಡಿಕೊಂಡವು, ಇಸ್ರಾಯೇಲಿನ ದೇವರ ತೇಜಸ್ಸು ಅವುಗಳ ಮೇಲ್ಗಡೆ ನೆಲೆಸಿತ್ತು.
וַיִּשְׂא֤וּ הַכְּרוּבִים֙ אֶת־כַּנְפֵיהֶ֔ם וְהָאֽוֹפַנִּ֖ים לְעֻמָּתָ֑ם וּכְב֧וֹד אֱלֹהֵֽי־יִשְׂרָאֵ֛ל עֲלֵיהֶ֖ם מִלְמָֽעְלָה׃
23 ೨೩ ಆಗ ಯೆಹೋವನ ತೇಜಸ್ಸು ಪಟ್ಟಣದ ಮಧ್ಯದೊಳಗಿಂದ ಏರಿ ಪಟ್ಟಣಕ್ಕೆ ಪೂರ್ವದಲ್ಲಿರುವ ಗುಡ್ಡದ ಮೇಲೆ ನಿಂತಿತು.
וַיַּ֙עַל֙ כְּב֣וֹד יְהוָ֔ה מֵעַ֖ל תּ֣וֹךְ הָעִ֑יר וַֽיַּעֲמֹד֙ עַל־הָהָ֔ר אֲשֶׁ֖ר מִקֶּ֥דֶם לָעִֽיר׃
24 ೨೪ ಆಮೇಲೆ ದೇವರಾತ್ಮ ಪರವಶನಾದ ನನ್ನನ್ನು ಎತ್ತಿ, ದಿವ್ಯ ದರ್ಶನದ ಮುಖಾಂತರ ಕಸ್ದೀಯರ ದೇಶದಲ್ಲಿ ಸೆರೆಯಾದವರ ಬಳಿಗೆ ಕರೆತಂದಿತು. ನನಗಾದ ದಿವ್ಯದರ್ಶನವು ಆಗ ಮಾಯವಾಯಿತು.
וְר֣וּחַ נְשָׂאַ֗תְנִי וַתְּבִיאֵ֤נִי כַשְׂדִּ֙ימָה֙ אֶל־הַגּוֹלָ֔ה בַּמַּרְאֶ֖ה בְּר֣וּחַ אֱלֹהִ֑ים וַיַּ֙עַל֙ מֵֽעָלַ֔י הַמַּרְאֶ֖ה אֲשֶׁ֥ר רָאִֽיתִי׃
25 ೨೫ ಯೆಹೋವನು ತೋರಿಸಿದ ಎಲ್ಲವುಗಳನ್ನು ಕೂಡಲೆ ಸೆರೆಯವರಿಗೆ ತಿಳಿಸಿದೆನು.
וָאֲדַבֵּ֖ר אֶל־הַגּוֹלָ֑ה אֵ֛ת כָּל־דִּבְרֵ֥י יְהוָ֖ה אֲשֶׁ֥ר הֶרְאָֽנִי׃ פ

< ಯೆಹೆಜ್ಕೇಲನು 11 >