< ಯೆಹೆಜ್ಕೇಲನು 14 >

1 ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ಬಂದು,
爰にイスラエルの長老の中の人々我にきたりて吾前に坐しけるに
2 ನನ್ನ ಮುಂದೆ ಕುಳಿತುಕೊಂಡಿರುವಾಗ ಯೆಹೋವನು ಈ ವಾಕ್ಯವನ್ನು ನನಗೆ ಅನುಗ್ರಹಿಸಿದನು,
ヱホバの言われに臨みて言ふ
3 “ನರಪುತ್ರನೇ, ಇವರು ತಮ್ಮ ವಿಗ್ರಹಗಳನ್ನು, ಮನಸ್ಸಿನಲ್ಲಿ ನೆಲೆಗೊಳಿಸಿ, ಪಾಪಕಾರಿಯಾದ ಈ ವಿಘ್ನವನ್ನು ತಮ್ಮ ಮುಂದೆ ಇಟ್ಟುಕೊಂಡಿದ್ದಾರೆ; ಇಂಥವರಿಗೆ ನಾನು ದೈವೋತ್ತರವನ್ನು ದಯಪಾಲಿಸುವುದು ಸರಿಯೆ? ಎಂದಿಗೂ ಇಲ್ಲ.”
人の子よこの人々はその偶像を心の中に立しめ罪に陷いるるところの障礙をその面の前に置なり我あに是等の者の求を容べけんや
4 ಆದಕಾರಣ ನೀನು ಅವರನ್ನು ಸಂಬೋಧಿಸಿ ಹೀಗೆ ಹೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲ್ ವಂಶದವರಲ್ಲಿ ಯಾರು ತನ್ನ ವಿಗ್ರಹಗಳನ್ನು ಮನಸ್ಸಿನಲ್ಲಿ ನೆಲೆಗೊಳಿಸಿ, ತನಗೆ ಪಾಪಕಾರಿಯಾದ ವಿಘ್ನವನ್ನು ತನ್ನ ಮುಂದೆಯೇ ಇಟ್ಟುಕೊಂಡು, ಪ್ರವಾದಿಯನ್ನು ಪ್ರಶ್ನೆ ಕೇಳುವುದಕ್ಕೆ ಬರುವ ಅವನಿಗೆ ಯೆಹೋವನಾದ ನಾನು ಅವನ ಲೆಕ್ಕವಿಲ್ಲದ ವಿಗ್ರಹಗಳಿಗೆ ತಕ್ಕ ಹಾಗೆ ಉತ್ತರವನ್ನು ಕೊಡುವೆನು.
然ば汝かれらに告げて言ふべし主ヱホバかくいひたまふ凡そイスラエルの家の人のその心の中に偶像を立しめその面のまへに罪に陷いるるところの障礙を置きて預言者に來る者には我ヱホバその偶像の多衆にしたがひて應をなすべし
5 ಇಸ್ರಾಯೇಲ್ ವಂಶದವರೆಲ್ಲರೂ ತಮ್ಮ ವಿಗ್ರಹಗಳ ನಿಮಿತ್ತ ನನ್ನನ್ನು ತೊರೆದುದರಿಂದ ನಾನು ಅವರನ್ನೆಲ್ಲಾ ಅವರ ಆಶಾಪಾಶದಲ್ಲೇ ಸಿಕ್ಕಿಸಿ ಹಿಡಿಯುವೆನು.”
斯して我イスラエルの家の人の心を執へん是かれら皆その偶像のために我を離れたればなり
6 ಆದಕಾರಣ ನೀನು ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀವು ನಿಮ್ಮ ವಿಗ್ರಹಗಳನ್ನು ತೊರೆದುಬಿಟ್ಟು ಹಿಂದಿರುಗಿ, ನಿಮ್ಮ ಎಲ್ಲಾ ಅಸಹ್ಯ ವಸ್ತುಗಳ ಕಡೆಗೆ ಬೆನ್ನುಮಾಡಿರಿ.
是故にイスラエルの家に言ふべし主ヱホバかくいひたまふ汝等悔い汝らの偶像を棄てはなるべし汝等面を回らしてその諸の憎むべき物を離れよ
7 “ಏಕೆಂದರೆ ಇಸ್ರಾಯೇಲ್ ವಂಶದವರಲ್ಲಾಗಲಿ ಮತ್ತು ಇಸ್ರಾಯೇಲಿನೊಳಗೆ ವಾಸವಾಗಿರುವ ವಿದೇಶಿಗಳಲ್ಲಾಗಲಿ ಯಾವನು ನನ್ನಿಂದ ದೂರವಾಗಿ, ತನ್ನ ವಿಗ್ರಹಗಳನ್ನು ಮನಸ್ಸಿನಲ್ಲಿ ನೆಲೆಗೊಳಿಸಿ, ತನಗೆ ಪಾಪಕಾರಿಯಾದ ವಿಘ್ನವನ್ನು ತನ್ನ ಮುಂದೆ ಇಟ್ಟುಕೊಂಡು ಪ್ರವಾದಿಯ ಬಳಿಗೆ ಬಂದು ಅವನ ಮೂಲಕ ದೈವೋತ್ತರವನ್ನು ಕೇಳಿಕೊಳ್ಳುವನೋ ಅವನಿಗೆ ಯೆಹೋವನಾದ ನಾನೇ ಉತ್ತರಕೊಡುವೆನು.
凡てイスラエルの家およびイスラエルに寓るところの外國人若われを離れてその偶像を心の中に立しめ其面の前に罪に陷るるところの障礙をおきて預言者に來りその心のままに我に求むる時は我ヱホバわが心のままにこれに應ふべし
8 ಅವನ ಮೇಲೆ ಉಗ್ರಕೋಪಗೊಂಡು, ಅವನನ್ನು ಎಚ್ಚರಿಕೆಗೆ ಗುರುತಾಗಿಯೂ, ಕಟ್ಟು ಗಾದೆಗಳಿಗೂ ವಸ್ತುವಾಗಿ ಮಾಡಿ, ನನ್ನ ಜನರೊಳಗಿಂದ ಕಿತ್ತುಹಾಕುವೆನು; ಹೀಗೆ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.
即ち我面をその人にむけこれを滅して兆象となし諺語となし之をわが民の中より絕さるべし汝等これによりて我がヱホバなるを知るにいたらん
9 “ಒಬ್ಬ ಪ್ರವಾದಿಯು ಮರುಳುಗೊಂಡು ದೈವೋಕ್ತಿಯನ್ನು ನುಡಿದರೆ, ಆ ಪ್ರವಾದಿಯನ್ನು ಮರುಳುಗೊಳಿಸಿದವನು ಯೆಹೋವನಾದ ನಾನೇ; ನಾನು ಅವನ ಮೇಲೆ ಕೈಯೆತ್ತಿ ಇಸ್ರಾಯೇಲರಾದ ನನ್ನ ಜನರೊಳಗಿಂದ ಅವನನ್ನು ಕಿತ್ತು ನಿರ್ನಾಮಮಾಡುವೆನು.
もし預言者欺かれて言を出すことあらば我ヱホバその預言者を欺けるなり我かれの上にわが手を伸べ吾民イスラエルの中より彼を絕さらん
10 ೧೦ ಪ್ರವಾದಿಯ ದೋಷವು ಎಷ್ಟೋ, ಅವನನ್ನು ಪ್ರಶ್ನೆಕೇಳುವವನ ದೋಷವೂ ಅಷ್ಟೇ; ಇಬ್ಬರೂ ತಮ್ಮ ತಮ್ಮ ದೋಷ ಫಲವನ್ನು ಅನುಭವಿಸುವರು.
彼等その罪を負ふべしその預言者の罪はかの問求むる者の罪のごとくなるべし
11 ೧೧ ಹೀಗಾದರೆ ಇಸ್ರಾಯೇಲ್ ವಂಶದವರು ಇನ್ನು ನನ್ನನ್ನು ತೊರೆಯುವುದಿಲ್ಲ, ತಮ್ಮ ಲೆಕ್ಕವಿಲ್ಲದ ದ್ರೋಹಗಳಿಂದ ತಮ್ಮನ್ನು ಹೊಲೆ ಮಾಡಿಕೊಳ್ಳುವುದಿಲ್ಲ; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು” ಇದು ಕರ್ತನಾದ ಯೆಹೋವನ ನುಡಿ.
是イスラエルの民をして重ねて我を離れて迷はざらしめ重ねてその諸の愆に汚れざらしめんため又かれらの吾民となり我の彼らの神とならんためなり主ヱホバこれをいふ
12 ೧೨ ಆಮೇಲೆ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
ヱホバの言また我にのぞみて言ふ
13 ೧೩ “ನರಪುತ್ರನೇ, ಅಪರಾಧವನ್ನು ನಡೆಸಿ ನನ್ನ ವಿರುದ್ಧವಾಗಿ ಪಾಪಮಾಡಿದ ದೇಶದ ಮೇಲೆ ನಾನು ಕೈಯೆತ್ತಿ, ಅದರ ಆಹಾರ ಸರಬರಾಜನ್ನು ತೆಗೆದುಬಿಟ್ಟು, ಕ್ಷಾಮವನ್ನು ಬರಮಾಡಿ, ಜನರನ್ನು, ಪಶುಗಳನ್ನು ಅದರೊಳಗಿಂದ ನಿರ್ಮೂಲ ಮಾಡುತ್ತೇನೆ.
人の子よ國もし悖れる事をおこなひて我に罪を犯すことあり我手をその上に伸て其杖とたのむところのパンを打碎き饑饉を之におくりて人と畜とをその中より絕ことある時には
14 ೧೪ ನೋಹ, ದಾನಿಯೇಲ, ಯೋಬ ಎಂಬ ಮೂವರು ಪುರುಷರು ಆ ದೇಶದಲ್ಲಿದ್ದರೂ ತಮ್ಮ ಸದಾಚಾರದಿಂದ ಸ್ವಂತ ಪ್ರಾಣಗಳನ್ನು ಮಾತ್ರ ಉಳಿಸಿಕೊಳ್ಳುತ್ತಿದ್ದರು” ಇದು ಕರ್ತನಾದ ಯೆಹೋವನ ನುಡಿ.
其處にかのノア、ダニエル、ヨブの三人あるも只其義によりて己の生命を救ふことをうるのみなり主ヱホバこれをいふ
15 ೧೫ “ನನ್ನ ಅಪ್ಪಣೆಯ ಮೇರೆಗೆ ದುಷ್ಟ ಮೃಗಗಳು ದೇಶದಲ್ಲಿ ತಿರುಗುತ್ತಾ ಅದನ್ನು ನಿರ್ಜನಗೊಳ್ಳಿಸಿ, ಹಾಳುಮಾಡಿ, ಯಾರೂ ಹಾದು ಹೋಗದಂತೆ ಹೆದರಿಸುವ ಪಕ್ಷದಲ್ಲಿ,
我もし惡き獸を國に行めぐらしめて之を子なき處となし荒野となして其獸のために其處を通る者なきに至らん時には
16 ೧೬ ಈ ಮೂವರು ಪುರುಷರು ಆ ದೇಶದಲ್ಲಿದ್ದರೂ ನನ್ನ ಜೀವದಾಣೆ, ತಾವು ಉಳಿದುಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡು ಮಕ್ಕಳನ್ನಾಗಲಿ, ಹೆಣ್ಣು ಮಕ್ಕಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ; ದೇಶವು ಹಾಳಾಗಿ ಹೋಗುವುದು” ಇದು ಕರ್ತನಾದ ಯೆಹೋವನ ನುಡಿ.
主ヱホバ言ふ我は活く此三人そこにをるもその子女を救ふことをえず只その身を救ふことを得るのみ國は荒野となるべし
17 ೧೭ “ಖಡ್ಗವೇ, ದೇಶವನ್ನು ಹೊಕ್ಕು ಹೋಗು ಎಂದು ಆಜ್ಞಾಪಿಸಿ, ನಾನು ಅದನ್ನು ಆ ದೇಶಕ್ಕೆ ತಂದು, ಜನ ಪಶುಗಳನ್ನು ಅದರೊಳಗಿಂದ ನಿರ್ಮೂಲಮಾಡುವ ಪಕ್ಷದಲ್ಲಿ,
又は我劍を國に臨ませて劍よ國を行めぐるべしと言ひ人と畜をそこより絕さらん時には
18 ೧೮ ಈ ಮೂವರು ಪುರುಷರು ಆ ದೇಶದಲ್ಲಿದ್ದರೂ ನನ್ನ ಜೀವದಾಣೆ, ತಾವು ಉಳಿದುಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡು ಮಕ್ಕಳನ್ನಾಗಲಿ, ಹೆಣ್ಣು ಮಕ್ಕಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ” ಇದು ಕರ್ತನಾದ ಯೆಹೋವನ ನುಡಿ.
主ヱホバいふ我は活く此三人そこにをるもその子女をすくふことをえず只その身をすくふことを得るのみ
19 ೧೯ “ನಾನು ಆ ದೇಶದ ಮೇಲೆ ನನ್ನ ಕೋಪವನ್ನು ಹೊಯ್ದು, ರಕ್ತವನ್ನು ಸುರಿಸಿ, ವ್ಯಾಧಿಯನ್ನು ಕಳುಹಿಸಿ, ಜನರನ್ನು, ಪಶುಗಳನ್ನು ನಿರ್ಮೂಲಮಾಡುವ ಪಕ್ಷದಲ್ಲಿ,
又われ疫病を國におくり血をもてわが怒をその上にそそぎ人と畜をそこより絕さらん時には
20 ೨೦ ನೋಹ, ದಾನಿಯೇಲ, ಯೋಬ ಎಂಬುವರು ಆ ದೇಶದಲ್ಲಿದ್ದರೂ ನನ್ನ ಜೀವದಾಣೆ, ತಮ್ಮ ಸದಾಚಾರದಿಂದ ಸ್ವಂತಪ್ರಾಣಗಳನ್ನು ಉಳಿಸಿಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡು ಮಗನನ್ನಾಗಲಿ, ಹೆಣ್ಣು ಮಗಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ” ಇದು ಕರ್ತನಾದ ಯೆಹೋವನ ನುಡಿ.
主ヱホバいふ我は活くノア、ダニエル、ヨブそこにをるもその子女を救ふことをえず只その義によりて己の生命を救ふことを得るのみ
21 ೨೧ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಖಡ್ಗ, ಕ್ಷಾಮ, ದುಷ್ಟಮೃಗ ಮತ್ತು ವ್ಯಾಧಿ ಎಂಬ ನಾಲ್ಕು ಬಾಧೆಗಳನ್ನು ಯೆರೂಸಲೇಮಿನ ಮೇಲೆ ಒಟ್ಟಿಗೆ ತಂದು, ಜನರನ್ನು, ಪಶುಗಳನ್ನು ನಿರ್ಮೂಲ ಮಾಡುವಾಗ ಹೇಳತಕ್ಕದ್ದೇನು!
主ヱホバかくいひたまふ然ばわが四箇の嚴しき罰すなはち劍と饑饉と惡き獸と疫病をヱルサレムにおくりて人と畜をそこより絕さらんとする時は如何にぞや
22 ೨೨ ಆದರೂ ಸ್ತ್ರೀಪುರುಷರಲ್ಲಿ ಕೆಲವರು ಹೇಗೋ ತಪ್ಪಿಸಿಕೊಂಡು ಉಳಿದು ಅಲ್ಲಿಂದ ಒಯ್ಯಲ್ಪಡುವರು; ಆಹಾ, ಅವರು ನಿಮ್ಮ ಬಳಿಗೆ ಸೇರಿದಾಗ ನೀವು ಅವರ ದುರ್ಮಾರ್ಗ, ದುಷ್ಕೃತ್ಯಗಳನ್ನು ಕಂಡು ನಾನು ಯೆರೂಸಲೇಮಿನ ಮೇಲೆ ಬರಮಾಡಿದ ಕೇಡಿನ ವಿಷಯವಾಗಿ, ಅದಕ್ಕೆ ಉಂಟುಮಾಡಿದ ಎಲ್ಲಾ ಕೇಡುಗಳ ವಿಷಯವಾಗಿ ಸಮಾಧಾನ ಹೊಂದುವಿರಿ.
其中に逃れて遺るところの男子女子あり彼等携へ去らるべし彼ら出ゆきて汝等の所にいたらん汝らかれらの行爲と擧動を見ば吾がヱルサレムに災をくだせし事につきて心をやすむるにいたるべし
23 ೨೩ ನೀವು ಅವರ ದುರ್ಮಾರ್ಗ, ದುಷ್ಕೃತ್ಯಗಳನ್ನು ನೋಡುವಾಗ ಅವರಿಂದಲೇ ನಿಮಗೆ ಸಮಾಧಾನವಾಗುವುದು; ನಾನು ಯೆರೂಸಲೇಮಿಗೆ ಮಾಡಿದ್ದೆಲ್ಲಾ ಕಾರಣವಿಲ್ಲದೆ ಮಾಡಿದ್ದಲ್ಲವೆಂದು ನಿಮಗೆ ತಿಳಿದು ಬರುವುದು” ಇದು ಕರ್ತನಾದ ಯೆಹೋವನ ನುಡಿ.
汝ら彼らの行爲と擧動を見ばこれがためにその心をやすむるにいたりわがこれに爲たる事は皆故なくして爲たるにあらざるなるをしるにいたらん主ヱホバこれを言ふ

< ಯೆಹೆಜ್ಕೇಲನು 14 >