< ಯೆಹೆಜ್ಕೇಲನು 24 >

1 ಒಂಭತ್ತನೆಯ ವರ್ಷದ, ಹತ್ತನೆಯ ತಿಂಗಳಿನ, ಹತ್ತನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
و در روز دهم ماه دهم از سال نهم کلام خداوند بر من نازل شده، گفت:۱
2 “ನರಪುತ್ರನೇ, ಈ ದಿನದ, ಇದೇ ದಿನದ ಹೆಸರನ್ನು ಬರೆದುಕೋ; ಇದೇ ದಿನದಲ್ಲಿ ಬಾಬೆಲಿನ ಅರಸನು ಯೆರೂಸಲೇಮಿಗೆ ಮುತ್ತಿಗೆ ಹಾಕಿದ್ದಾನೆ.
«ای پسر انسان اسم امروز را برای خود بنویس، اسم همین روز را، زیرا که در همین روز پادشاه بابل براورشلیم هجوم آورد.۲
3 “ಈ ದಂಗೆಕೋರ ಮನೆತನದವರಿಗೆ ದೃಷ್ಟಾಂತವನ್ನು ತಿಳಿಸಿ ಹೀಗೆ ಹೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಹಂಡೆಯನ್ನು ಒಲೆಯ ಮೇಲಿಡು, ಮೇಲಿಡು, ಅದರಲ್ಲಿ ನೀರನ್ನು ಹೊಯ್ಯಿ;
و برای این خاندان فتنه انگیز مثلی آورده، به ایشان بگو: خداوند یهوه چنین می‌گوید: دیگ را بگذار. آن را بگذار و آب نیز در آن بریز.۳
4 ಮಾಂಸದ ತುಂಡುಗಳನ್ನು ಅಂದರೆ ತೊಡೆ, ಹೆಗಲು ಮೊದಲಾದ ಒಳ್ಳೆಯ ತುಂಡುಗಳನ್ನೆಲ್ಲಾ ಅದರಲ್ಲಿ ಒಟ್ಟಿಗೆ ಹಾಕು, ಉತ್ತಮವಾದ ಎಲುಬುಗಳನ್ನು ಅದರಲ್ಲಿ ತುಂಬಿಸು.
قطعه هایش یعنی هر قطعه نیکو و ران و دوش را در میانش جمع کن و از بهترین استخوانها آن را پر ساز.۴
5 ಹಿಂಡಿನಲ್ಲಿ ಶ್ರೇಷ್ಠವಾದದನ್ನು ತೆಗೆದುಕೋ; ಹಂಡೆಯ ತಳದಲ್ಲಿ ಎಲುಬುಗಳನ್ನು ರಾಶಿಯಾಗಿ ಒಟ್ಟು; ಚೆನ್ನಾಗಿ ಕುದಿಸು; ಹೌದು, ಎಲುಬುಗಳು ಅದರಲ್ಲಿ ಬೇಯಿಸು.’”
و بهترین گوسفندان رابگیر و استخوانها را زیرش دسته کرده، آن راخوب بجوشان تا استخوانهایی که در اندرونش هست پخته شود.۵
6 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ರಕ್ತಮಯವಾದ ಪಟ್ಟಣವೇ ನಿನಗೆ ಧಿಕ್ಕಾರ, ಒಳಗೆ ಕಿಲುಬು ಹಿಡಿದಿರುವ, ಕಿಲುಬು ಬಿಟ್ಟುಹೋಗದಿರುವ ಹಂಡೆ! ಅದರಿಂದ ಮಾಂಸದ ತುಂಡುಗಳನ್ನು ಸಿಕ್ಕಿ ಸಿಕ್ಕಿದ ಹಾಗೆ ತೆಗೆದುಬಿಡು, ಅದಕ್ಕಾಗಿ ಚೀಟುಗಳನ್ನು ಹಾಕಬೇಡ.
بنابراین خداوند یهوه چنین می‌گوید: وای برآن شهر خونریز! وای بر آن دیگی که زنگش در میانش است و زنگش ازمیانش در نیامده است! آن را به قطعه هایش بیرون آور و قرعه بر آن انداخته نشود.۶
7 “ಯೆರುಸಲೇಮ್ ನಗರ ಸುರಿಸಿದ ರಕ್ತವು ಅದರ ಮಧ್ಯದಲ್ಲಿದೆ; ಅದು ಅದನ್ನು ಬಂಡೆಯ ತುದಿಯಲ್ಲಿ ಇಟ್ಟಿದ್ದಾರೆ. ಧೂಳು ಮುಚ್ಚುವ ಹಾಗೆ ನೆಲದ ಮೇಲೆ ಚೆಲ್ಲಲಿಲ್ಲ.
زیرا خونی که ریخت در میانش می‌باشد. آن را بر صخره صاف نهاد و بر زمین نریخت تا از خاک پوشانیده شود.۷
8 ಮುಯ್ಯಿಗೆ ಮುಯ್ಯಿ ತೀರಿಸುವುದಕ್ಕೆ, ರೋಷವನ್ನೆಬ್ಬಿಸುವ ಹಾಗೆ, ನಾನು ಅದರ ರಕ್ತಾಪರಾಧವನ್ನು ಮುಚ್ಚಿ ಬಿಡದಂತೆ ಅದನ್ನು ಬಂಡೆಯ ತುದಿಯ ಮೇಲೆ ಇಟ್ಟಿದ್ದೇನೆ.”
من خون او را بر صخره صاف نهادم که پنهان نشود تا آنکه حدت خشم را برانگیخته انتقام بکشم.۸
9 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ರಕ್ತಾಪರಾಧವುಳ್ಳ ಆ ಪಟ್ಟಣಕ್ಕೆ ಕಷ್ಟ! ನಾನೇ ಬೆಂಕಿಯನ್ನು ರಾಶಿಯಾಗಿ ಹೆಚ್ಚಿಸುವೆನು.
بنابراین خداوند یهوه چنین می‌گوید: وای بر آن شهر خونریز! من نیز توده هیزم را بزرگ خواهم ساخت.۹
10 ೧೦ ಬಹಳ ಸೌದೆ ಹಾಕಿ, ಬೆಂಕಿಯನ್ನು ಹೆಚ್ಚಿಸಿ, ಮಾಂಸವನ್ನು ಬೇಯಿಸು, ಸಾರು ಮಂದವಾಗಿರಲಿ, ಎಲುಬುಗಳು ಬೆಂದು ಹೋಗಲಿ.
هیزم زیاد بیاور و آتش بیفروزو گوشت را مهیا ساز و ادویه جات در آن بریز واستخوانها سوخته بشود.۱۰
11 ೧೧ “ಆ ಮೇಲೆ ಹಂಡೆಯು ಕಾದು ತಾಮ್ರವು ಕೆಂಪಾಗಿ, ಒಳಗಿನ ಕಲ್ಮಷವು ಕರಗಿ, ಕಿಲುಬು ಇಲ್ಲವಾಗುವಂತೆ ಅದನ್ನು ಬರಿದುಮಾಡಿ ಕೆಂಡಗಳ ಮೇಲೆ ಇಡು.
پس آن را بر اخگرخالی بگذار تا تابیده شده مسش سوخته گردد ونجاستش در آن گداخته شود و زنگش نابود گردد.۱۱
12 ೧೨ ಅದರ ಕಲ್ಮಷವು ನನ್ನಲ್ಲಿ ಕೇವಲ ಪ್ರಯಾಸವನ್ನೂ, ಆಯಾಸವನ್ನೂ ಉಂಟುಮಾಡಿದೆ; ಆದರೂ ಅದಕ್ಕೆ ಹತ್ತಿದ ಕಿಲುಬು ಹೋಗಲಿಲ್ಲ, ಬೆಂಕಿಯಿಂದಲೂ ನೀಗಲಿಲ್ಲ.
او از مشقت‌ها خسته گردید، اما زنگ بسیارش از وی بیرون نیامد. پس زنگش در آتش بشود.۱۲
13 ೧೩ “ಅಂತೆಯೇ ನಿನ್ನ ದುಷ್ಕರ್ಮವು ಅಸಹ್ಯವಾಗಿರುವುದರಿಂದಲೂ, ನಾನು ನಿನ್ನನ್ನು ಎಷ್ಟು ಶುದ್ಧಿಮಾಡಿದರೂ ನೀನು ಶುದ್ಧಿಯಾಗದೆ ಹೋದದ್ದರಿಂದಲೂ ನಾನು ನನ್ನ ರೋಷವನ್ನು ನಿನ್ನಲ್ಲಿ ತೀರಿಸಿ ಶಾಂತನಾಗುವವರೆಗೂ ನೀನು ನಿನ್ನ ಕೊಳೆಯನ್ನು ಇನ್ನು ಕಳೆದುಕೊಳ್ಳದೆ, ಶುದ್ಧಿಯಾಗದೆ ಇರುವಿ.”
در نجاسات تو قباحت است چونکه تو راتطهیر نمودم. اما طاهر نشدی. لهذا تا غضب خودرا بر تو به اتمام نرسانم، دیگر از نجاست خود طاهر نخواهی شد.۱۳
14 ೧೪ ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ, “ಇದು ನಡೆಯುವುದು ನಿಶ್ಚಯ, ನಾನು ನೆರವೇರಿಸುವೆನು; ಹಿಂದೆಗೆಯೆನು, ಕ್ಷಮಿಸೆನು, ಕರುಣಿಸೆನು; ನಿನ್ನ ದುರ್ಮಾರ್ಗ, ದುಷ್ಕೃತ್ಯಗಳಿಗೆ ಸರಿಯಾಗಿ ನಿನಗೆ ನ್ಯಾಯತೀರ್ಪು ಆಗುವುದು” ಇದು ಕರ್ತನಾದ ಯೆಹೋವನ ನುಡಿ.
من که یهوه هستم این را گفته‌ام و به وقوع خواهد پیوست وآن را بجا خواهم آورد. پس خداوند یهوه می‌گوید: دست نخواهم برداشت و شفقت نخواهم نمود و پشیمان نخواهم شد و بر‌حسب رفتارت و بر وفق اعمالت بر تو داوری خواهندکرد.»۱۴
15 ೧೫ ಯೆಹೋವನು ಇನ್ನೊಂದು ವಾಕ್ಯವನ್ನು ನನಗೆ ದಯಪಾಲಿಸಿದನು,
و کلام خداوند بر من نازل شده، گفت:۱۵
16 ೧೬ “ನರಪುತ್ರನೇ, ಇಗೋ, ಒಂದೇ ಏಟಿನಿಂದ ನಾನು ನಿನಗೆ ನೇತ್ರಾನಂದವಾಗಿರುವವಳನ್ನು ನಿನ್ನಿಂದ ತೆಗೆದುಬಿಡುವೆನು, ಆದರೂ ನೀನು ಗೋಳಾಡಬೇಡ, ಅಳಬೇಡ, ನಿನ್ನ ಕಣ್ಣೀರು ಸುರಿಯದಿರಲಿ.
«ای پسر انسان اینک من آرزوی چشمانت رابغته از تو خواهم گرفت. ماتم و گریه منما و اشک از چشمت جاری نشود.۱۶
17 ೧೭ ಸದ್ದಿಲ್ಲದೆ ಮೊರೆಯಿಡು, ವಿಯೋಗ ದುಃಖವನ್ನು ತೋರಿಸಬೇಡ, ರುಮಾಲನ್ನು ಸುತ್ತಿಕೊಂಡಿರು, ಕೆರಗಳನ್ನು ಮೆಟ್ಟಿಕೊಂಡಿರು, ಬಾಯನ್ನು ಬಟ್ಟೆಯಿಂದ ಮುಚ್ಚಿಕೊಳ್ಳಬೇಡ, ಗಾರಿಗೆಯನ್ನು ತಿನ್ನಬೇಡ.”
آه بکش و خاموش شو و برای مرده ماتم مگیر. بلکه عمامه بر سرت بپیچ و کفش به پایت بکن و شاربهایت را مپوشان وطعام مرده را مخور.»۱۷
18 ೧೮ ಹೀಗೆ ಆಜ್ಞೆಯಾಗಲು ನಾನು ಪ್ರಾತಃಕಾಲದಲ್ಲಿ ಜನರೊಂದಿಗೆ ಮಾತನಾಡಿದನು, ಸಾಯಂಕಾಲಕ್ಕೆ ನನ್ನ ಪತ್ನಿಯು ತೀರಿಹೋದಳು; ಮಾರನೆಯ ಬೆಳಿಗ್ಗೆ ನನಗೆ ಅಪ್ಪಣೆಯಾದಂತೆ ಮಾಡಿದೆನು.
پس بامدادان با قوم تکلم نمودم و وقت عصر زن من مرد و صبحگاهان به نهجی که مامورشده بودم عمل نمودم.۱۸
19 ೧೯ ಆಗ ಜನರು, “ನೀನು ಹೀಗೆ ಮಾಡುವುದರಿಂದ ಪ್ರಯೋಜನವೇನೆಂದು ತಿಳಿಸುವುದಿಲ್ಲವೇ?” ಎಂದು ನನ್ನನ್ನು ಕೇಳಲು,
و قوم به من گفتند: «آیاما را خبر نمی دهی که این کارهایی که می‌کنی به ما چه نسبت دارد؟»۱۹
20 ೨೦ ನಾನು ಅವರಿಗೆ ಹೀಗೆ ಹೇಳಿದೆನು, “ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದ್ದಾನೆ.
ایشان را جواب دادم که کلام خداوند بر من نازل شده، گفت:۲۰
21 ೨೧ ಇಸ್ರಾಯೇಲ್ ವಂಶದವರಿಗೆ ಹೀಗೆ ಸಾರು, ‘ಇಗೋ, ನಿಮಗೆ ಮುಖ್ಯಬಲವೂ ನೇತ್ರಾನಂದವೂ ಪ್ರಾಣಪ್ರಿಯವೂ ಆದ ನನ್ನ ಪವಿತ್ರಾಲಯವನ್ನು ನಾನು ಅಪವಿತ್ರಪಡಿಸುವೆನು, ನೀವು ಬಿಟ್ಟು ಬಂದಿರುವ ನಿಮ್ಮ ಗಂಡು ಮತ್ತು ಹೆಣ್ಣು ಮಕ್ಕಳು ಖಡ್ಗಕ್ಕೆ ತುತ್ತಾಗುವರು, ಎಂಬುದಾಗಿ ಸೇನಾದೀಶ್ವರನಾದ ಯೆಹೋವನು ನುಡಿದಿದ್ದಾರೆ
«به خاندان اسرائیل بگو: خداوند یهوه چنین می‌فرماید که هان من مقدس خود را که فخر جلال شما و آرزوی چشمان شماو لذت جانهای شما است، بی‌عصمت خواهم نمود. و پسران و دختران شما که ایشان را ترک خواهید کرد، به شمشیر خواهند افتاد.۲۱
22 ೨೨ ನಾನು ಮಾಡಿದಂತೆ ಆಗ ನೀವೂ ಮಾಡುವಿರಿ, ಅಂದರೆ ಬಟ್ಟೆಯಿಂದ ಬಾಯನ್ನು ಮುಚ್ಚಿಕೊಳ್ಳದೆ, ಮನುಷ್ಯರ ರೊಟ್ಟಿಯನ್ನು ತಿನ್ನದೆ ಇರುವಿರಿ,
و به نهجی که من عمل نمودم، شما عمل خواهیدنمود. شاربهای خود را نخواهید پوشانید و طعام مردگان را نخواهید خورد.۲۲
23 ೨೩ ರುಮಾಲುಗಳು ನಿಮ್ಮ ತಲೆಯ ಮೇಲೆಯೂ, ಕೆರಗಳು ನಿಮ್ಮ ಪಾದಗಳ ಅಡಿಯಲ್ಲಿಯೂ ಇರುವವು; ನೀವು ಗೋಳಾಡುವುದಿಲ್ಲ, ಅಳುವುದಿಲ್ಲ; ನಿಮ್ಮ ಅಧರ್ಮದಿಂದ ಕ್ಷೀಣವಾಗಿ ಹೋಗುವಿರಿ, ಒಬ್ಬರ ಸಂಗಡಲೊಬ್ಬರು ನರಳುವಿರಿ.
عمامه های شما برسر و کفشهای شما در پایهای شما بوده، ماتم وگریه نخواهید کرد. بلکه به‌سبب گناهان خودکاهیده شده، بسوی یکدیگر آه خواهید کشید.۲۳
24 ೨೪ ಹೀಗೆ ಯೆಹೆಜ್ಕೇಲನು ನಿಮಗೆ ಮುಂಗುರುತಾಗಿರುವನು; ಅವನು ಮಾಡಿದಂತೆಯೇ ಎಲ್ಲವನ್ನು ನೀವು ಮಾಡುವಿರಿ; ಇದು ಸಂಭವಿಸುವಾಗ ನಾನೇ ಕರ್ತನಾದ ಯೆಹೋವನು ಎಂದು ನಿಮಗೆ ಗೊತ್ತಾಗುವುದು.’”
و حزقیال برای شما آیتی خواهد بود موافق هر‌آنچه او کرد، شما عمل خواهید نمود. و حینی که این واقع شود خواهید دانست که من خداوندیهوه می‌باشم.۲۴
25 ೨೫ “ನರಪುತ್ರನೇ, ಅವರ ಬಲಾಧಾರವೂ, ಅವರ ನೇತ್ರಾನಂದಕರವಾದ ಆಲಯವನ್ನು, ಅವರು ಆಶಿಸುವುದನ್ನೂ, ಅವರ ಗಂಡು ಮತ್ತು ಹೆಣ್ಣು ಮಕ್ಕಳನ್ನೂ ಅವರ ಬಲದಿಂದ ತೆಗೆದು ಹಾಕುವ ದಿನದಲ್ಲಿ,
«و اما تو‌ای پسر انسان! در روزی که من قوت و سرور فخر و آرزوی چشمان و رفعت جانهای ایشان یعنی پسران و دختران ایشان را ازایشان گرفته باشم، آیا واقع نخواهد شد۲۵
26 ೨೬ ಆ ದಿನದಲ್ಲಿ ತಪ್ಪಿಸಿಕೊಂಡವನು ನಿನ್ನ ಬಳಿಗೆ ಬಂದು ನಡೆದ ಸಂಗತಿಯನ್ನು ನಿನಗೆ ತಿಳಿಸುವನು.
که درآن روز هر‌که رهایی یابد نزد تو آمده، این را به سمع تو خواهد رسانید؟۲۶
27 ೨೭ ಆ ದಿನದಲ್ಲಿ ತಪ್ಪಿಸಿಕೊಂಡವನ ಕಡೆಗೆ ನಿನ್ನ ಬಾಯಿ ತೆರೆದಿರುವುದು. ನೀನು ಇನ್ನು ಮೂಕನಾಗಿರದೆ ಮಾತನಾಡುವೆ ಮತ್ತು ಅವರಿಗೆ ಗುರುತಾಗಿರುವೆ. ನಾನೇ ಯೆಹೋವನು” ಎಂದು ಅವರಿಗೆ ಗೊತ್ತಾಗುವುದು.
پس در آن روزدهانت برای آنانی که رهایی یافته‌اند باز خواهدشد و متکلم شده، دیگر گنگ نخواهی بود و برای ایشان آیتی خواهی بود و خواهند دانست که من یهوه می‌باشم.»۲۷

< ಯೆಹೆಜ್ಕೇಲನು 24 >