< ಯೆಹೆಜ್ಕೇಲನು 25 >

1 ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
主の言葉がわたしに臨んだ、
2 “ನರಪುತ್ರನೇ, ನೀನು ಅಮ್ಮೋನಿಗೆ ವಿರುದ್ಧವಾಗಿ, ಅದರ ವಿಷಯದಲ್ಲಿ ದೈವಸಂಕಲ್ಪವನ್ನು ಪ್ರವಾದಿಸುತ್ತಾ ಅದಕ್ಕೆ ಹೀಗೆ ನುಡಿ,
「人の子よ、あなたの顔をアンモンの人々に向け、これに向かって預言し、
3 ‘ಕರ್ತನಾದ ಯೆಹೋವನ ಮಾತನ್ನು ಕೇಳು’ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಅಮ್ಮೋನೇ, ನನ್ನ ಪವಿತ್ರಾಲಯವು ಅಪವಿತ್ರವಾದದ್ದನ್ನು, ಇಸ್ರಾಯೇಲ್ ದೇಶವು ಹಾಳುಬಿದ್ದದನ್ನು, ಯೆಹೂದ ವಂಶದವರು ಸೆರೆಹೋದದ್ದನ್ನು ನೀನು ನೋಡಿ, “ಅಹಾ!” ಎಂದು ಹಿಗ್ಗಿಕೊಂಡೆ.
アンモンの人々に言え。主なる神の言葉を聞け。主なる神はこう言われる、あなたはわが聖所の汚された時、またイスラエルの地の荒された時、またユダの家が捕え移された時、ああ、それはよい気味であると言った。
4 ಆದುದರಿಂದ ಇಗೋ, ನಾನು ನಿನ್ನನ್ನು ಮೂಡಣದವರಿಗೆ ಬಾಧ್ಯವಾಗಿ ವಶಪಡಿಸುವೆನು; ಅವರು ನಿನ್ನಲ್ಲಿ ತಮ್ಮ ಗುಡಾರಗಳನ್ನು ಹಾಕಿ ಪಾಳೆಯಮಾಡಿಕೊಳ್ಳುವರು; ನಿನ್ನ ಹಣ್ಣನ್ನು ತಿಂದು, ನಿನ್ನ ಹಾಲನ್ನು ಕುಡಿದುಬಿಡುವರು.
それゆえ、わたしはあなたを、東の人々に渡して彼らの所有とする。彼らはあなたのうちに陣営を設け、あなたのうちに住居を造り、あなたのくだものを食べ、あなたの乳を飲む。
5 ನಾನು ರಬ್ಬಾ ಪಟ್ಟಣವನ್ನು ಒಂಟೆಗಳಿಗೆ ಲಾಯವನ್ನಾಗಿಯೂ, ಅಮ್ಮೋನ್ ಸೀಮೆಯನ್ನು ಹಿಂಡುಗಳಿಗೆ ತಂಗುವ ಸ್ಥಳವನ್ನಾಗಿಯೂ ಮಾಡುವೆನು. ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.’”
わたしはラバを、らくだを飼う所とし、アンモンびとの町々を、羊の伏す所とする。そしてあなたがたは、わたしが主であることを知るようになる。
6 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀನು ಚಪ್ಪಾಳೆ ಹೊಡೆದು, ಕಾಲಿನಿಂದ ನೆಲವನ್ನು ಬಡಿದು, ಇಸ್ರಾಯೇಲ್ ದೇಶವನ್ನು ಮನಃಪೂರ್ವಕವಾಗಿ ತಿರಸ್ಕರಿಸಿ, ಅದರ ಗತಿಗೆ ಹಿಗ್ಗಿಕೊಂಡೆ.
主なる神はこう言われる、あなたはイスラエルの地に向かって手をうち、足を踏み、心に悪意を満たして喜んだ。
7 ಆದುದರಿಂದ ಇಗೋ, ನಾನು ನಿನ್ನ ಮೇಲೆ ಕೈಯೆತ್ತಿ ನಿನ್ನನ್ನು ಸುಲಿಗೆಗಾಗಿ ಮ್ಲೇಚ್ಛರಿಗೆ ವಶಪಡಿಸಿ, ಜನಾಂಗಗಳೊಳಗಿಂದ ಕಿತ್ತುಬಿಟ್ಟು, ದೇಶಗಳೊಳಗಿಂದ ನಿನ್ನ ಹೆಸರನ್ನು ಅಳಿಸಿ, ನಿನ್ನನ್ನು ಹಾಳುಮಾಡುವೆನು; ಆಗ ನಾನೇ ಯೆಹೋವನು ಎಂದು ನಿನಗೆ ಗೊತ್ತಾಗುವುದು.”
それゆえ、見よ、わたしはわが手をあなたに向けて伸べ、あなたを、もろもろの国民に渡して略奪にあわせ、あなたを、もろもろの民の中から断ち、諸国の中から滅ぼし絶やす。そしてあなたは、わたしが主であることを知るようになる。
8 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ಯೆಹೂದ ವಂಶವು ಎಲ್ಲಾ ಜನಾಂಗಗಳ ಹಾಗೆಯೇ ಇದೆ, ವಿಶೇಷವೇನು? ಎಂದು ಮೋವಾಬೂ ಮತ್ತು ಸೇಯೀರೂ ಅಂದುಕೊಂಡಿದೆ.
主なる神はわたしにこう言われる、モアブは言った、見よ、ユダの家は、他のすべての国民と同様であると。
9 ಆದುದರಿಂದ, ಇಗೋ, ದೇಶಭೂಷಣಗಳಾದ ಮೋವಾಬಿನ ಗಡಿಯ ಪಟ್ಟಣಗಳು, ಅಂದರೆ ಬೇತ್ ಯೆಷೀಮೋತ್, ಬಾಳ್ ಮೆಯೋನ್, ಕಿರ್ಯಾಥಯಿಮ್ ಎಂಬ ಪಟ್ಟಣಗಳು ಇರುವ ಕಡೆಯಲ್ಲಿ ನಾನು ಮೋವಾಬಿನ ಮೇರೆಯನ್ನು ಒಡೆದುಬಿಡುವೆನು.
それゆえ、わたしはモアブの境界の町々、すなわち国の栄えであるベテエシモテ、バアルメオン、キリアタイムの横腹を開き、
10 ೧೦ ಆ ಸೀಮೆಯನ್ನಲ್ಲದೆ, ಅಮ್ಮೋನನ್ನೂ ಮೂಡಣದವರಿಗೆ ಬಾಧ್ಯವಾಗಿ ಕೊಟ್ಟು, ಅಮ್ಮೋನ್ಯರು ಜನಾಂಗಗಳೊಳಗೆ ನಿರ್ನಾಮವಾಗಬೇಕೆಂಬ ನನ್ನ ಸಂಕಲ್ಪವನ್ನು ನೆರವೇರಿಸುವೆನು.
これをアンモンの人々と共に、東方の人々に与えて、その所有とし、モアブの人々をもろもろの国民の中に記憶させない。
11 ೧೧ ಮೋವಾಬ್ಯರಿಗೂ ದಂಡನೆಗಳನ್ನು ವಿಧಿಸಿ ತೀರಿಸುವೆನು. ಆಗ ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು.”
わたしはモアブの上にさばきを行う。そのとき、彼らはわたしが主であることを知る。
12 ೧೨ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಎದೋಮು ಯೆಹೂದ ವಂಶಕ್ಕೆ ಪ್ರತಿಕಾರಮಾಡಿದೆ; ಮುಯ್ಯಿಗೆ ಮುಯ್ಯಿ ತೀರಿಸಿ ಮಹಾಪರಾಧವನ್ನು ನಡೆಸಿದೆ.”
主なる神はこう言われる、エドムは恨みをふくんでユダの家に敵対し、これに恨みを返して、はなはだしく罪を犯した。
13 ೧೩ ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಎದೋಮಿನ ಮೇಲೆ ಕೈಯೆತ್ತಿ, ಅದರೊಳಗಿಂದ ಜನರನ್ನೂ ಮತ್ತು ಪಶುಗಳನ್ನೂ ನಿರ್ಮೂಲಮಾಡಿ, ತೇಮಾನಿನಿಂದ ದೆದಾನಿನವರೆಗೂ ಅದನ್ನು ಹಾಳುಮಾಡಿ, ಪ್ರಜೆಗಳನ್ನು ಖಡ್ಗಕ್ಕೆ ಸಿಕ್ಕಿಸುವೆನು.
それゆえ、主なる神はこう言われる、わたしはエドムの上に手を伸べて、その中から人と獣とを断ち、これを荒れ地とする。テマンからデダンまで人々はつるぎに倒れる。
14 ೧೪ ನಾನು ಎದೋಮಿಗೆ ನನ್ನ ಜನರಾದ ಇಸ್ರಾಯೇಲರ ಕೈಯಿಂದ ಮುಯ್ಯಿ ತೀರಿಸುವೆನು; ಅವರು ನನ್ನ ಕೋಪರೋಷಗಳಿಗೆ ತಕ್ಕ ಹಾಗೆ ಅದಕ್ಕೆ ಮಾಡುವರು; ನನ್ನ ಪ್ರತಿಕಾರವು ಎದೋಮಿನ ಅನುಭವಕ್ಕೆ ಬರುವುದು” ಇದು ಕರ್ತನಾದ ಯೆಹೋವನ ನುಡಿ.
わたしはわが民イスラエルの手をもって、エドムにわがあだを報いる。彼らがわが怒り、わが憤りに従ってエドムに行う時、エドムの人々は、わたしがあだを返すことを知るようになると、主なる神は言われる。
15 ೧೫ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಫಿಲಿಷ್ಟಿಯರು ಯೆಹೂದಕ್ಕೆ ಪ್ರತಿಕಾರಮಾಡಿದ್ದಾರೆ; ಹೌದು, ಮುಯ್ಯಿಗೆಮುಯ್ಯಿ ತೀರಿಸುತ್ತಾ ಅದನ್ನು ಮನಃಪೂರ್ವಕವಾಗಿ ತಿರಸ್ಕರಿಸಿ ದೀರ್ಘದ್ವೇಷದಿಂದ ಹಾಳುಮಾಡಿದ್ದಾರೆ.”
主なる神はこう言われる、ペリシテびとは恨みをふくんで行動し、心に悪意をもってあだを返し、深い敵意をもって、滅ぼすことをした。
16 ೧೬ ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ಫಿಲಿಷ್ಟಿಯರ ಮೇಲೆ ಕೈಯೆತ್ತುವೆನು; ಕೆರೇತಿಯರನ್ನು ಕತ್ತರಿಸಿಬಿಟ್ಟು, ಸಮುದ್ರತೀರದಲ್ಲಿನ ಜನಶೇಷವನ್ನು ನಿಶ್ಶೇಷಮಾಡುವೆನು.
それゆえ、主なる神はこう言われる、見よ、わたしは手をペリシテびとの上に伸べ、ケレテびとを断ち、海べの残りの者を滅ぼす。
17 ೧೭ ಅವರೆಲ್ಲರನ್ನು ಬಲವಾಗಿ ಖಂಡಿಸಿ ಮುಯ್ಯಿಗೆಮುಯ್ಯಿ ತೀರಿಸುವೆನು; ಹೀಗೆ ಪ್ರತಿಕಾರಮಾಡುವುದರಿಂದ ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು.”
わたしは怒りに満ちた懲罰をもって、大いなる復讐を彼らになす。わたしが彼らにあだを返す時、彼らはわたしが主であることを知るようになる」。

< ಯೆಹೆಜ್ಕೇಲನು 25 >