< ಯೆಹೆಜ್ಕೇಲನು 39 >

1 ಈಗ, “ನರಪುತ್ರನೇ, ನೀನು ಗೋಗನಿಗೆ ವಿರುದ್ಧವಾಗಿ ಈ ಪ್ರವಾದನೆಯನ್ನು ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ರೋಷ್, ಮೆಷೆಕ್, ತೂಬಲ್ ಜನಾಂಗಗಳ ಪ್ರಭುವಾದ ಗೋಗನೇ, ಆಹಾ! ನಾನು ನಿನ್ನ ವಿರುದ್ಧವಾಗಿದ್ದೇನೆ.
“Kisha wewe, mwanadamu, tabiri dhidi ya Gogu na sema, 'Bwana Yahwe asema hivi: Tazama! ni kinyume nawe, Gogu, mkuu wa Mesheki na Tubali.
2 ನಾನು ನಿನ್ನನ್ನು ಪರಿವರ್ತಿಸಿ, ಮುಂದುವರಿಸಿ ಉತ್ತರದಿಕ್ಕಿನ ಕಟ್ಟಕಡೆಯಿಂದ ಬರಮಾಡಿ, ಇಸ್ರಾಯೇಲಿನ ಪರ್ವತಗಳ ಮೇಲೆ ನುಗ್ಗಿಸಿ,
Nitakugeuza na kukuongoza; nitakupandisha juu kutoka mbali kaskazini na kukuleta hata milima ya Israeli.
3 ನಾನು ನಿನ್ನ ಎಡಗೈಯಲ್ಲಿರುವ ಬಿಲ್ಲನ್ನು ಹೊಡೆದು ಹಾಕಿ, ನಿನ್ನ ಬಲಗೈಯಲ್ಲಿರುವ ಬಾಣಗಳನ್ನು ಬೀಳುವಂತೆ ಮಾಡುವೆನು.
Kisha nitaufunga upinde wako utoke katika mkono wako wa kushoto na kuifanya mishale kuanguka kutoka kwenye mkono wako wa kuume.
4 ನೀನೂ, ನಿನ್ನ ಎಲ್ಲಾ ಸೈನ್ಯದಳಗಳೂ ಮತ್ತು ನಿನ್ನೊಂದಿಗಿರುವ ನಿನ್ನ ಜನರೂ ಇಸ್ರಾಯೇಲಿನ ಪರ್ವತಗಳಲ್ಲಿ ಬೀಳುವಿರಿ; ನಾನು ನಿಮ್ಮನ್ನು ಹದ್ದುಗಳಿಗೂ, ಪಕ್ಷಿಗಳಿಗೂ ಕಾಡಿನ ಮೃಗಗಳಿಗೂ, ಬಯಲಿನ ಭೂಜಂತುಗಳಿಗೂ ಆಹಾರವಾಗುವಂತೆ ನಾನು ನಿನ್ನನ್ನು ಕೊಡುವೆನು.
Utaanguka juu ya milima ya Israeli-wewe na jeshi lako late na maaskari walio pamoja nawe. Nitawapatia ndege mbua na wanyama pori wa mashambani kwa ajili ya chakula.
5 ನೀನು ತೆರೆದ ಬಯಲಿನಲ್ಲಿ ಬೀಳುವಿ. ಏಕೆಂದರೆ ನಾನೇ ಅಪ್ಪಣೆ ಕೊಟ್ಟಿದ್ದೇನೆ’ ಎಂದು ಕರ್ತನಾದ ಯೆಹೋವನ ನುಡಿಯುತ್ತಾನೆ.
Utaanguka juu ya uso wa shamba, kwa kuwa mimi mwenyewe nimesema hivyo-hivi ndivyo Bwana Yahwe asemavyo.
6 ನಾನು ಮಾಗೋಗ್ ದೇಶದ ಮೇಲೂ, ಕರಾವಳಿಯ ಸೀಮೆಗಳಲ್ಲಿ ನಿರ್ಭಯವಾಗಿ ವಾಸಿಸುವವರ ಮೇಲೂ ಬೆಂಕಿಯನ್ನು ಕಳುಹಿಸುವೆನು. ಆಗ ನಾನೇ ಯೆಹೋವನು ಎಂದು ಅವರಿಗೆ ತಿಳಿಯುವುದು.
Kisha nitapeleka moto juu ya Magogu na kwa wale waishio salama juu ya pwani, na watajua yakwamba mimi ni Yahwe.
7 “ನಾನು ನನ್ನ ಪವಿತ್ರ ನಾಮವನ್ನು ನನ್ನ ಜನರಾದ ಇಸ್ರಾಯೇಲರ ಮಧ್ಯದಲ್ಲಿ ವ್ಯಕ್ತಗೊಳಿಸುವೆನು. ಅದನ್ನು ಇನ್ನು ಮುಂದೆ ಅಪಕೀರ್ತಿಗೆ ಗುರಿಯಾಗದ ಹಾಗೆ ಮಾಡುತ್ತೇನೆ. ನಾನೇ ಯೆಹೋವ, ಇಸ್ರಾಯೇಲಿನ ಸದಮಲಸ್ವಾಮಿ ಎಂದು ಅನ್ಯ ಜನಾಂಗಗಳಿಗೆ ಗೊತ್ತಾಗುವುದು.”
Kwa kuwa nitalifanya jina langu takatifu lijulikane kati ya watu wangu Israeli, na sitaruhusu tena jina langu takatifu litukanwe; mataifa watajua kwamba mimi ni Yahwe, Mtakatifu katika Israeli.
8 ಕರ್ತನಾದ ಯೆಹೋವನು ಇಂತೆನ್ನುತ್ತಾನೆ. “ಇಗೋ! ಇದು ಬಂತು, ಇದು ಸಂಭವಿಸಿತು; ನಾನು ಮುಂತಿಳಿಸಿದ ದಿನವು ಇದೇ.
Tazama! Siku inakuja, na itachukua nafasi-hivi ndivyo Bwana Yahwe asemavyo.
9 “ಇಸ್ರಾಯೇಲಿನ ಪಟ್ಟಣಗಳ ನಿವಾಸಿಗಳು ಬಯಲಿಗೆ ಬಂದು ಶತ್ರುವಿನ ಆಯುಧಗಳಿಗೆ ಬೆಂಕಿಯಿಟ್ಟು ಸುಟ್ಟುಬಿಡುವರು. ಹೌದು, ಖೇಡ್ಯ, ಗುರಾಣಿ, ಬಿಲ್ಲು, ಬಾಣ, ದೊಣ್ಣೆ, ಈಟಿ ಇವುಗಳನ್ನು ಏಳು ವರ್ಷಗಳ ತನಕ ಸುಡುತ್ತಲೇ ಬರುವರು.
Hao wakaao katika miji ya Israeli watatoka nje na watatumia silaha kuwasha moto na kutengeneza moto na kuwachoma-ngao ndogo, ngao kubwa, pinde, mishale, rungu, na mikuki; watatengeneza mioto pamoja nao kwa muda wa siku saba.
10 ೧೦ ಅದಕ್ಕಾಗಿ ಅವರು ಕಾಡಿನಿಂದ ಸೌದೆಯನ್ನು ತರಬೇಕಾಗುವುದಿಲ್ಲ, ವನದಲ್ಲಿ ಮರವನ್ನು ಕಡಿಯಬೇಕಾಗುವುದಿಲ್ಲ; ಆಯುಧಗಳನ್ನೇ ಸೌದೆಯನ್ನಾಗಿ ಉರಿಸುವರು; ತಮ್ಮನ್ನು ಸೂರೆಮಾಡಿದವರನ್ನು ತಾವು ಸೂರೆಮಾಡುವರು, ತಮ್ಮನ್ನು ಕೊಳ್ಳೆಹೊಡೆದವರನ್ನು ತಾವು ಕೊಳ್ಳೆಹೊಡೆಯುವರು” ಇದು ಕರ್ತನಾದ ಯೆಹೋವನ ನುಡಿ.
Hawatakusanya kuni kutoka mashambani wala kukata miti kutoka kwenye misitu, kwa kuwa watazichoma hizo silaha; watawateka nyara wale watakaotaka kuwateka nyara-hivi ndivyo Bwana Yahwe asemavyo.”
11 ೧೧ “ಆ ದಿನದಲ್ಲಿ ಗೋಗನಿಗೆ ನಾನು ಇಸ್ರಾಯೇಲಿನ ಸಮಾಧಿಗಳಲ್ಲಿ ಸ್ಥಳವನ್ನು ಏರ್ಪಡಿಸುವೆನು; ಲವಣ ಸಮುದ್ರದ ಪೂರ್ವದಿಕ್ಕಿನಲ್ಲಿ ಪ್ರಯಾಣಿಕರ ಮಾರ್ಗವಾದ ಕಣಿವೆಯೇ. ಅಲ್ಲಿ ಪ್ರಯಾಣ ಮಾಡಲು ಆಗುವುದಿಲ್ಲ; ಅಲ್ಲೇ ಗೋಗನನ್ನೂ ಮತ್ತು ಅವನ ಸಮೂಹವೆಲ್ಲವನ್ನೂ ಸಮಾಧಿ ಮಾಡುವರು; ಅ ಕಣಿವೆಯನ್ನು ‘ಗೋಗನ ಸಮೂಹದ ಕಣಿವೆ’ ಎಂದು ಕರೆಯುವರು.
Kisha itakuwa katika hiyo siku ambayo nitaifanya sehemu huko kwa ajili ya Gogu-kaburi la Israeli, bonde kwa ajili ya wale wanaosafiri hata mashariki ya bahari. Litawazuia wale wanaotegemea kupita. Huko watamzika Gogu pamoja na kundi lake lote. Watapaita bonde la Hamon-Gogu.
12 ೧೨ ಇಸ್ರಾಯೇಲರು ದೇಶವನ್ನು ಶುದ್ಧಿಮಾಡುವುದಕ್ಕಾಗಿ ಏಳು ತಿಂಗಳು ಅವರನ್ನು ಸಮಾಧಿ ಮಾಡುತ್ತಲೇ ಇರುವರು.
Kwa muda wa siku saba nyumba ya Israeli itawazika ili kuitakasa nchi.
13 ೧೩ ಹೌದು, ದೇಶದ ಸಕಲ ಪ್ರಜೆಗಳು ಅವರನ್ನು ಸಮಾಧಿ ಮಾಡುವರು. ಹೀಗೆ ನಾನು ಮಹಿಮೆಯನ್ನು ಹೊಂದುವ ದಿನವು ನನ್ನ ಜನರಿಗೆ ಸ್ಮರಣೆಯ ದಿನವಾಗಿರುವುದು” ಇದು ಕರ್ತನಾದ ಯೆಹೋವನ ನುಡಿ.
Kwa kuwa watu wa nchi watawazika; itakuwa siku ya kukumbukwa kwao wakati nitakapotukuzwa-hivi ndivyo Bwana Yahwe asemavyo.
14 ೧೪ ತರುವಾಯ ಅವರು ದೇಶವನ್ನು ಶುದ್ಧಿ ಮಾಡುವುದಕ್ಕೆ ತಕ್ಕವರನ್ನು ಆರಿಸಿ, ದೇಶದಲ್ಲಿ ತಿರುಗುತ್ತಾ ನೆಲದ ಮೇಲೆ ಉಳಿದಿರುವವರನ್ನು ಸಮಾಧಿ ಮಾಡುವುದಕ್ಕೆ ಯಾವಾಗಲೂ ದೇಶವನ್ನು ಹಾದುಹೋಗುವ ಮನುಷ್ಯರನ್ನೇ ನೇಮಿಸುವರು ಮತ್ತು ಏಳು ತಿಂಗಳಾದ ಮೇಲೆ ಇವರು ಈ ಹುಡುಕುವ ಕೆಲಸದಲ್ಲಿ ತೊಡಗುವರು.
Kisha watawateua watu kuendelea kwenda kwenye nchi, kuwatafuta wale waliokuwa wakisafiri, lakini waliokufa na miili yao kubaki juu ya uso wa nchi, ili kwamba waweze kuwazika, kwa ajili ya kusafisha nchi. Katika siku ya mwisho ya mwezi wa saba wataanza kutafuta.
15 ೧೫ ಪ್ರಯಾಣಿಕರಲ್ಲಿ ಯಾರೇ ಆಗಲಿ ಪ್ರಯಾಣ ಮಾಡುತ್ತಿರುವಾಗ ಮನುಷ್ಯನ ಎಲುಬನ್ನು ನೋಡಿದರೆ, ಅಲ್ಲಿ ಒಂದು ಗುರುತನ್ನು ನಿಲ್ಲಿಸುವರು; ಸಮಾಧಿ ಮಾಡುವವರು ಗೋಗನ ಸಮೂಹದ ಕಣಿವೆಯಲ್ಲಿ ಅದನ್ನು ಸಮಾಧಿ ಮಾಡುವ ತನಕ ಆ ಗುರುತು ಹಾಗೆಯೇ ನಿಂತಿರುವುದು.
Kama hawa watu wapitao kwenye nchi, watakapoona mfupa wowote wa binadamu, wataweka alama kwa huo, hadi wachimba kaburi watakapokuja na kuizika katika bonde la Hamoni Gogu.
16 ೧೬ ಆ ಪಟ್ಟಣಕ್ಕೆ ‘ಹಮೇನ್’ “ಸಮೂಹಪುರ” ಎಂದು ಹೆಸರಾಗುವುದು. ಹೀಗೆ ಅವರು ದೇಶವನ್ನು ಶುದ್ಧಿಮಾಡುವರು.
Kutakuwa na mji huko unaitwa Hamona. Wataitakasa nchi kwa njia hii.
17 ೧೭ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನರಪುತ್ರನೇ, ಎಲ್ಲಾ ಬಗೆಯ ಪಕ್ಷಿಗಳಿಗೂ, ಸಮಸ್ತ ಭೂಜಂತುಗಳಿಗೂ ಹೀಗೆ ನುಡಿ, ‘ನೀವು ಕೂಡಿಬನ್ನಿರಿ; ನಾನು ಇಸ್ರಾಯೇಲಿನ ಪರ್ವತಗಳ ಮೇಲೆ ನಿಮಗಾಗಿ ಅರ್ಪಿಸುವ ಮಹಾಯಜ್ಞಕ್ಕೆ ಎಲ್ಲಾ ಕಡೆಯಿಂದಲೂ ನೆರೆದು ಬಂದು, ಮಾಂಸವನ್ನು ತಿಂದು, ರಕ್ತವನ್ನು ಕುಡಿಯಿರಿ.
Kwako wewe, mwanadamu, Bwana Yahwe asema hivi: Waambie ndege wote wenye mabawa na wanyama wote wa porini katika mashamba, 'Kusanyikeni pamoja na mje. Kusanyikeni kutoka pande zote kwenda kwenye dhabihu yote ambayo mimi mwenyewe ninayoifanya kwa ajili yako, dhabihu kubwa juu ya milima ya Israeli, ili kwamba mle nyama na kunywa damu.
18 ೧೮ ಟಗರುಗಳ, ಕುರಿಗಳ, ಹೋತಗಳ, ಹೋರಿಗಳ ಅಂತು ಬಾಷಾನಿನ ಕೊಬ್ಬಿದ ಪಶುಗಳ ರಕ್ತವನ್ನು ಕುಡಿಯುವಿರಿ. ನೀವು ಬಲಿಷ್ಠರ ಮತ್ತು ಭೂಪತಿಗಳ ಮಾಂಸವನ್ನು ತಿನ್ನುವಿರಿ.
Mtakula nyama ya walio hodari na kunywa damu ya wakuu wa dunia; watakuwa kondoo waume, wana kondoo, mbuzi, na ng'ombe, wote walikuwa wanene katika Basheni.
19 ೧೯ ನಾನು ನಿಮಗೋಸ್ಕರ ಅರ್ಪಿಸುವ ಯಜ್ಞಪಶುಗಳ ಮಾಂಸವನ್ನು ಹೊಟ್ಟೆತುಂಬಾ ತಿನ್ನುವಿರಿ, ರಕ್ತವನ್ನು ಅಮಲೇರುವವರೆಗೂ ಕುಡಿಯುವಿರಿ.
Kisha mtakula mafuta hata kuridhika kwenu; mtakunywa damu hadi kulewa; hii itakuwa dhabihu nitakayoichinja kwa ajili yenu.
20 ೨೦ ನಾನು ಸಿದ್ಧಪಡಿಸುವ ಆ ಔತಣದಲ್ಲಿ ಕುದುರೆ, ರಾಹುತ, ಶೂರ ಸಕಲ ವಿಧವಾದ ಸೈನಿಕರನ್ನು ಬೇಕಾದಷ್ಟು ಭಕ್ಷಿಸುವಿರಿ’” ಇದು ಕರ್ತನಾದ ಯೆಹೋವನ ನುಡಿ.
Mtatosheka kwenye meza yangu pamoja na farasi, magari ya farasi, shujaa, na kila mtu wa vita-hivi ndivyo Bwana Yahwe asemavyo.'
21 ೨೧ “ನಂತರ ನಾನು ಜನಾಂಗಗಳ ನಡುವೆ ನನ್ನ ಮಹಿಮೆಯನ್ನು ಸ್ಥಾಪಿಸಲು, ಆ ಸೈನಿಕರ ಮೇಲೆ ಕೈಮಾಡಿ, ನ್ಯಾಯದಂಡನೆ ನಡೆಸಿದವನು ನಾನೇ ಎಂಬುದು ಆ ಜನಾಂಗಗಳಿಗೆಲ್ಲಾ ತಿಳಿಯುವುದು.
Nitauweka utukufu wangu kati ya mataifa, na mataifa yote yataona hukumu yangu ninayoionyesha na mkono wangu nimeuweka juu yao.
22 ೨೨ ಹೀಗೆ ಇಸ್ರಾಯೇಲ್ ವಂಶದವರು ನಾನೇ ಅವರ ದೇವರಾದ ಯೆಹೋವನೆಂದು ಅಂದಿನಿಂದ ಯಾವಾಗಲೂ ತಿಳಿದುಕೊಳ್ಳುವರು.
Nyumba ya Israeli itajua yakwamba mimi ni Yahwe Mungu wao kutoka hiyo siku na kuendelea.
23 ೨೩ “ಇದಲ್ಲದೆ, ಇಸ್ರಾಯೇಲರು ತಮ್ಮ ಅಧರ್ಮದ ನಿಮಿತ್ತವೇ ಸೆರೆಯಾಗಿ ಹೋದರೆಂತಲೂ, ಅವರು ನನಗೆ ದ್ರೋಹಮಾಡಿದ್ದರಿಂದ ನಾನು ಅವರಿಗೆ ವಿಮುಖನಾಗಿ ಅವರೆಲ್ಲರೂ ಖಡ್ಗದಿಂದ ಹತರಾಗುವಂತೆ ಅವರನ್ನು ಶತ್ರುಗಳ ವಶ ಮಾಡಿದೆನೆಂತಲೂ ಜನಾಂಗಗಳಿಗೆ ಗೊತ್ತಾಗುವುದು.
Mataifa yatajua kwamba nyumba ya Israeli wameenda uhamishoni kwa sababu ya udhalimu wao kwa kunisaliti, hivyo naficha uso wangu kwao na kuwaweka kwenye mkono wa maadui zao ili kwamba wote waanguke kwa upanga.
24 ೨೪ ಅವರ ಪಾಪಕ್ಕೂ, ದುರಾಚಾರಗಳಿಗೂ ತಕ್ಕಂತೆ ನಾನು ಅವರನ್ನು ದಂಡಿಸಿ ನನ್ನ ಮುಖವನ್ನು ಅವರಿಗೆ ಮರೆಮಾಡಿದ್ದೇನೆ.”
Nimewafanyia kutokana na uchafu wao na dhambi zao, nitakapokuwa nimeuficha uso wangu kwao.
25 ೨೫ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಪವಿತ್ರನಾಮಕ್ಕೆ ಇನ್ನು ಅಪಕೀರ್ತಿ ಬಾರದಂತೆ ನಾನು ಈಗ ಅನುಕಂಪವುಳ್ಳವನಾಗಿ ಯಾಕೋಬ್ಯರ ದುರಾವಸ್ಥೆಯನ್ನು ತಪ್ಪಿಸಿ, ಇಸ್ರಾಯೇಲ್ ವಂಶದವರಿಗೆಲ್ಲಾ ಕೃಪೆ ತೋರಿಸುವೆನು.
Kwa hiyo Bwana Yahwe asema hivi: Sasa nitawarudisha watu wa Yakobo, na kuwa na huruma juu ya nyumba yote ya Israeli, wakati nitakapoona wivu kwa ajili ya jina langu.
26 ೨೬ ನಾನು ನನ್ನ ಜನರನ್ನು ದೇವದ್ರೋಹಿಗಳಾದ ಅನ್ಯಜನಾಂಗಗಳ ವಶದಿಂದ ತಪ್ಪಿಸಿ, ಆ ಶತ್ರುಗಳ ದೇಶಗಳಿಂದ ಒಟ್ಟುಗೂಡಿಸಿ, ಅನೇಕ ಜನಾಂಗಗಳ ಕಣ್ಣೆದುರಿಗೆ ಅವರ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು.
Kisha watabeba aibu yao na uhaini mkubwa walio nihaini. Watayasahau haya yote watakapopumzika katika nchi yao katika usalama, wala hakuna mtu atakaye waogofya.
27 ೨೭ ನಾನು ಅವರನ್ನು ಜನರೊಳಗಿಂದ ತಂದ ಮೇಲೆ ಅವರ ಶತ್ರುಗಳ ದೇಶದೊಳಗಿಂದ ಅವರನ್ನು ಕೂಡಿಸಿ, ಅನೇಕ ಜನಾಂಗಗಳ ಮುಂದೆ ಅವರಲ್ಲಿ ಪರಿಶುದ್ಧನಾಗುವೆನು.
Wakati nitakapokuwa nimewarudisha kutoka kwa watu na kuwakusanya kutoka kwenye nchi za maadui zao, nitajionyesha mimi mwenyewe kuwa mtakatifu kwenye uso wa mataifa mengi.
28 ೨೮ “ನಾನು ಅವರನ್ನು ಅನ್ಯಜನಾಂಗಗಳೊಳಗೆ ಸೆರೆಹೋಗುವಂತೆ ಮಾಡಿದ ಮೇಲೆ ಅವರನ್ನು ಒಟ್ಟುಗೂಡಿಸಿ, ಸ್ವದೇಶಕ್ಕೆ ಬರಮಾಡಿದುದರಿಂದ ನಾನೇ ಅವರ ದೇವರಾದ ಯೆಹೋವನು ಎಂದು ದೃಢಮಾಡಿಕೊಳ್ಳುವರು. ಅವರಲ್ಲಿ ಯಾರನ್ನೂ ದೇಶದಲ್ಲಿ ವಾಸಿಸುವುದಕ್ಕೆ ಬಿಡುವುದಿಲ್ಲ.
Kisha watajua kwamba mimi ni Yahwe Mungu wao, kwa kuwa nimewapeleka utumwani kati ya mataifa, lakini kisha nitawakusanya kuwarudisha hata nchi yao. Sitamuacha hata mmoja wao kati ya mataifa.
29 ೨೯ ಇನ್ನೆಂದಿಗೂ ನಾನು ನನ್ನ ಮುಖವನ್ನು ಮರೆಮಾಡುವುದಿಲ್ಲ. ಇಸ್ರಾಯೇಲ್ ವಂಶದ ಮೇಲೆ ನನ್ನ ಆತ್ಮವನ್ನು ಸುರಿಸಿದ್ದೇನೆ” ಇದು ಕರ್ತನಾದ ಯೆಹೋವನ ನುಡಿ.
Sitawaficha uso wangu kwao wakati nitakapomwaga Roho wangu katika nyumba ya Israeli-hivi ndivyo Bwana Yahwe asemavyo.”

< ಯೆಹೆಜ್ಕೇಲನು 39 >