< ಯೆಹೆಜ್ಕೇಲನು 7 >

1 ಇದಲ್ಲದೆ ಯೆಹೋವನು ಈ ಮಾತನ್ನು ನನಗೆ ದಯಪಾಲಿಸಿದನು,
וַיְהִי דְבַר־יְהֹוָה אֵלַי לֵאמֹֽר׃
2 “ನರಪುತ್ರನೇ, ಕರ್ತನಾದ ಯೆಹೋವನು ಇಸ್ರಾಯೇಲ್ ದೇಶಕ್ಕೆ ಹೀಗೆ ನುಡಿಯುತ್ತಾನೆ, ‘ಪ್ರಳಯವು, ಪೂರ್ಣ ಪ್ರಳಯವು ದೇಶದ ಚತುರ್ದಿಕ್ಕಿನಲ್ಲಿಯೂ ಸಂಭವಿಸಿದೆ.’
וְאַתָּה בֶן־אָדָם כֹּֽה־אָמַר אֲדֹנָי יֱהֹוִה לְאַדְמַת יִשְׂרָאֵל קֵץ בָּא הַקֵּץ עַל־[אַרְבַּע] (ארבעת) כַּנְפוֹת הָאָֽרֶץ׃
3 ಈಗಲೇ ನಿನಗೆ ಅಂತ್ಯವು ಬಂದಿದೆ; ನಾನು ನನ್ನ ಕೋಪವನ್ನು ನಿನ್ನ ಮೇಲೆ ಬರಮಾಡಿ, ನಿನ್ನ ನಡತೆಗೆ ತಕ್ಕಂತೆ ನ್ಯಾಯತೀರಿಸಿ ನಿನ್ನ ಸಮಸ್ತ ಅಸಹ್ಯಕಾರ್ಯಗಳ ಫಲವನ್ನು ನಿನಗೆ ತಿನ್ನಿಸುವೆನು.
עַתָּה הַקֵּץ עָלַיִךְ וְשִׁלַּחְתִּי אַפִּי בָּךְ וּשְׁפַטְתִּיךְ כִּדְרָכָיִךְ וְנָתַתִּי עָלַיִךְ אֵת כׇּל־תּוֹעֲבוֹתָֽיִךְ׃
4 ನಿನ್ನನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ; ನಿನ್ನ ದುರ್ಮಾರ್ಗದ ಫಲವನ್ನು ನಿನಗೆ ತಿನ್ನಿಸುವೆನು; ನಿನ್ನ ಅಸಹ್ಯಕಾರ್ಯಗಳು ನಿನ್ನ ಅನುಭವಕ್ಕೆ ಬರುವವು; ಆಗ ನಾನೇ ಯೆಹೋವನು ಎಂದು ನಿನಗೆ ಗೊತ್ತಾಗುವುದು.”
וְלֹא־תָחוֹס עֵינִי עָלַיִךְ וְלֹא אֶחְמוֹל כִּי דְרָכַיִךְ עָלַיִךְ אֶתֵּן וְתוֹעֲבוֹתַיִךְ בְּתוֹכֵךְ תִּֽהְיֶיןָ וִידַעְתֶּם כִּי־אֲנִי יְהֹוָֽה׃
5 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಕೇಡು, ಎಂದೂ ಕಾಣದ ಕೇಡು, ಇಗೋ ಬಂದಿತು!
כֹּה אָמַר אֲדֹנָי יֱהֹוִה רָעָה אַחַת רָעָה הִנֵּה בָאָֽה׃
6 ಅಂತ್ಯವು ಬಂತು, ಅಂತ್ಯವು ಬಂದುಬಿಟ್ಟಿತು, ನಿನ್ನನ್ನು ಚಚ್ಚುವುದಕ್ಕೆ ಎಚ್ಚರಗೊಂಡಿದೆ, ಇಗೋ, ಬಂದೇ ಬಂತು!
קֵץ בָּא בָּא הַקֵּץ הֵקִיץ אֵלָיִךְ הִנֵּה בָּאָֽה׃
7 ದೇಶ ನಿವಾಸಿಯೇ, ನಿನ್ನ ಗತಿ ಮುಗಿಯಿತು. ಸಮಯ ಬಂದಿತು, ದಿನ ಸಮೀಪಿಸಿತು; ಬೆಟ್ಟಗಳ ಮೇಲೆ ಕೇಳಿಸುವ ಧ್ವನಿಯು ಉತ್ಸಾಹ ಧ್ವನಿಯಲ್ಲ, ಅದು ಕಳವಳವೇ.
בָּאָה הַצְּפִירָה אֵלֶיךָ יוֹשֵׁב הָאָרֶץ בָּא הָעֵת קָרוֹב הַיּוֹם מְהוּמָה וְלֹא־הֵד הָרִֽים׃
8 ಇನ್ನು ಸ್ವಲ್ಪ ಕಾಲದೊಳಗೆ ನಾನು ನಿನ್ನ ಮೇಲೆ ನನ್ನ ರೋಷಾಗ್ನಿಯನ್ನು ಸುರಿದು, ನನ್ನ ಕೋಪವನ್ನು ತೀರಿಸಿಕೊಂಡು, ನಿನ್ನ ನಡತೆಗೆ ತಕ್ಕ ದಂಡನೆಯನ್ನು ವಿಧಿಸಿ, ನಿನ್ನ ಅಸಹ್ಯಕಾರ್ಯಗಳ ಫಲವನ್ನೆಲ್ಲಾ ನಿನಗೆ ತಿನ್ನಿಸುವೆನು.
עַתָּה מִקָּרוֹב אֶשְׁפּוֹךְ חֲמָתִי עָלַיִךְ וְכִלֵּיתִי אַפִּי בָּךְ וּשְׁפַטְתִּיךְ כִּדְרָכָיִךְ וְנָתַתִּי עָלַיִךְ אֵת כׇּל־תּוֹעֲבוֹתָֽיִךְ׃
9 ನಿನ್ನನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ, ನಿನ್ನ ದುರ್ಮಾರ್ಗಗಳಿಗೆ ತಕ್ಕ ಗತಿಯನ್ನು ಬರಮಾಡುವೆನು, ಆಗ ನಿನ್ನ ಅಸಹ್ಯಕಾರ್ಯಗಳು ನಿನ್ನ ಅನುಭವಕ್ಕೆ ಬರುವವು; ಯೆಹೋವನಾದ ನಾನು ದಂಡಿಸುವವನು ಎಂಬುದು ನಿನಗೆ ಗೊತ್ತಾಗುವುದು.
וְלֹא־תָחוֹס עֵינִי וְלֹא אֶחְמוֹל כִּדְרָכַיִךְ עָלַיִךְ אֶתֵּן וְתוֹעֲבוֹתַיִךְ בְּתוֹכֵךְ תִּהְיֶיןָ וִידַעְתֶּם כִּי אֲנִי יְהֹוָה מַכֶּֽה׃
10 ೧೦ “ಆಹಾ, ದಂಡನೆಯ ದಿನವು, ಇಗೋ ಬಂತು! ನಿನಗೆ ದುರ್ಗತಿಯು ಅಂಕುರಿಸಿದೆ, ಕೋಲು ಹೂಬಿಟ್ಟಿದೆ, ಹೆಮ್ಮೆಯು ಚಿಗುರಿದೆ.
הִנֵּה הַיּוֹם הִנֵּה בָאָה יָֽצְאָה הַצְּפִרָה צָץ הַמַּטֶּה פָּרַח הַזָּדֽוֹן׃
11 ೧೧ ಹಿಂಸೆಯು ಬೆಳೆದು ಕೆಡುಕಿನ ಕೋಲಾಗಿದೆ; ನಿನ್ನವರಲ್ಲಿ ಯಾರೂ ಉಳಿಯುವುದಿಲ್ಲ, ಆ ಜನಸಮೂಹದಲ್ಲಿಯೂ, ಅವರ ಆಸ್ತಿಯಲ್ಲಿಯೂ ಏನೂ ಉಳಿಯುವುದಿಲ್ಲ, ಅವರಲ್ಲಿ ಯಾವ ಶ್ರೇಷ್ಠತೆಯೂ ನಿಲ್ಲುವುದಿಲ್ಲ.
הֶֽחָמָס ׀ קָם לְמַטֵּה־רֶשַׁע לֹא־מֵהֶם וְלֹא מֵהֲמוֹנָם וְלֹא מֶהֱמֵהֶם וְלֹא־נֹהַּ בָּהֶֽם׃
12 ೧೨ ಸಮಯ ಬಂದಿದೆ, ದಿನ ಸಮೀಪಿಸಿತು; ಕೊಂಡುಕೊಳ್ಳುವವನು ಹರ್ಷಿಸದಿರಲಿ, ಮಾರುವವನು ದುಃಖಿಸದಿರಲಿ; ರೋಷಾಗ್ನಿಯು ಆ ಸಮೂಹದವರೆಲ್ಲರ ಮೇಲೆ ಹತ್ತಿದೆ.
בָּא הָעֵת הִגִּיעַ הַיּוֹם הַקּוֹנֶה אַל־יִשְׂמָח וְהַמֹּכֵר אַל־יִתְאַבָּל כִּי חָרוֹן אֶל־כׇּל־הֲמוֹנָֽהּ׃
13 ೧೩ ಮಾರಿದವನು ಎಷ್ಟು ವರ್ಷ ಬದುಕಿದರೂ ಮಾರಿದ ಸೊತ್ತು ಅವನ ವಶಕ್ಕೆ ತಿರುಗಿಬಾರದು; ಉಂಟಾದ ದಿವ್ಯದರ್ಶನವು ಸಮೂಹದವರಿಗೆಲ್ಲಾ ಸಂಬಂಧಿಸಿದೆ, ಯಾರೂ ಹಿಂದಿರುಗುವುದಿಲ್ಲ. ಯಾರೂ ತಮ್ಮ ಅಧರ್ಮದಿಂದ ತಮ್ಮ ಜೀವವನ್ನು ಉಳಿಸಿಕೊಳ್ಳುವುದಿಲ್ಲ.
כִּי הַמֹּכֵר אֶל־הַמִּמְכָּר לֹא יָשׁוּב וְעוֹד בַּחַיִּים חַיָּתָם כִּֽי־חָזוֹן אֶל־כׇּל־הֲמוֹנָהּ לֹא יָשׁוּב וְאִישׁ בַּעֲוֺנוֹ חַיָּתוֹ לֹא יִתְחַזָּֽקוּ׃
14 ೧೪ ಅವರು ಕೊಂಬನ್ನೂದಿ ಎಲ್ಲವನ್ನೂ ಸಿದ್ಧ ಮಾಡಿದರೂ ಯಾರೂ ಯುದ್ಧಕ್ಕೆ ಹೊರಡುವುದಿಲ್ಲ; ನನ್ನ ರೋಷಾಗ್ನಿಯು ಆ ಸಮೂಹದವರೆಲ್ಲರ ಮೇಲೆ ಹತ್ತಿದೆ.
תָּקְעוּ בַתָּקוֹעַ וְהָכִין הַכֹּל וְאֵין הֹלֵךְ לַמִּלְחָמָה כִּי חֲרוֹנִי אֶל־כׇּל־הֲמוֹנָֽהּ׃
15 ೧೫ ಊರ ಹೊರಗೆ ಖಡ್ಗ, ಊರೊಳಗೆ ವ್ಯಾಧಿ ಮತ್ತು ಕ್ಷಾಮಗಳು; ಹೊರಗಿರುವವರು ಖಡ್ಗದಿಂದ ಸಾಯುವರು, ಒಳಗಿರುವವರು ವ್ಯಾಧಿ ಕ್ಷಾಮಗಳಿಗೆ ತುತ್ತಾಗುವರು.
הַחֶרֶב בַּחוּץ וְהַדֶּבֶר וְהָרָעָב מִבָּיִת אֲשֶׁר בַּשָּׂדֶה בַּחֶרֶב יָמוּת וַאֲשֶׁר בָּעִיר רָעָב וָדֶבֶר יֹאכְלֶֽנּוּ׃
16 ೧೬ ಅವರಲ್ಲಿ ಪಲಾಯನ ಮಾಡಿದವರು ತಪ್ಪಿಸಿಕೊಂಡು, ತಮ್ಮ ಅಧರ್ಮದಲ್ಲಿಯೇ ಇದ್ದು, ಡೊಂಗರಗಳಲ್ಲಿನ ಪಾರಿವಾಳಗಳಂತೆ ಬೆಟ್ಟಗಳ ಮೇಲೆ ಗೋಳಾಡುತ್ತಿರುವರು.
וּפָֽלְטוּ פְּלִיטֵיהֶם וְהָיוּ אֶל־הֶהָרִים כְּיוֹנֵי הַגֵּאָיוֹת כֻּלָּם הֹמוֹת אִישׁ בַּעֲוֺנֽוֹ׃
17 ೧೭ ಎಲ್ಲರ ಕೈಗಳು ಜೋಲುಬಿದ್ದಿರುವುವು, ಎಲ್ಲರ ಮೊಣಕಾಲುಗಳು ನೀರಿನಂತೆ ಅದರುವುವು.
כׇּל־הַיָּדַיִם תִּרְפֶּינָה וְכׇל־בִּרְכַּיִם תֵּלַכְנָה מָּֽיִם׃
18 ೧೮ ಅವರು ಗೋಣಿತಟ್ಟನ್ನು ಸುತ್ತಿಕೊಳ್ಳುವರು, ದಿಗಿಲು ಅವರನ್ನು ಮುಚ್ಚಿಬಿಡುವುದು; ಎಲ್ಲರ ಮುಖದಲ್ಲಿಯೂ ನಾಚಿಕೆ ಕಾಣುವುದು, ಎಲ್ಲರೂ ತಲೆ ಬೋಳಿಸಿಕೊಂಡು ಇರುವರು.
וְחָגְרוּ שַׂקִּים וְכִסְּתָה אוֹתָם פַּלָּצוּת וְאֶל כׇּל־פָּנִים בּוּשָׁה וּבְכׇל־רָאשֵׁיהֶם קׇרְחָֽה׃
19 ೧೯ ಅವರು ತಮ್ಮ ಬೆಳ್ಳಿಯನ್ನು ಬೀದಿಗಳಲ್ಲಿ ಬಿಸಾಡುವರು, ಅವರ ಬಂಗಾರವು ಅಶುದ್ಧ ಪದಾರ್ಥದಂತಿರುವುದು; ಯೆಹೋವನು ತನ್ನ ರೋಷವನ್ನು ತೀರಿಸುವ ದಿನದಲ್ಲಿ ಅವರ ಬೆಳ್ಳಿಬಂಗಾರವು ಅವರನ್ನು ರಕ್ಷಿಸಲಾರದು; ಅವರ ಇಷ್ಟಾರ್ಥ ನೆರವೇರುವುದಿಲ್ಲ, ಅವರ ಹೊಟ್ಟೆ ತುಂಬುವುದಿಲ್ಲ; ಏಕೆಂದರೆ ಅವರ ಆಸ್ತಿಯು ಅವರಿಗೆ ಪಾಪಕಾರಿ ವಿಘ್ನವಾಗಿದೆ.
כַּסְפָּם בַּחוּצוֹת יַשְׁלִיכוּ וּזְהָבָם לְנִדָּה יִֽהְיֶה כַּסְפָּם וּזְהָבָם לֹא־יוּכַל לְהַצִּילָם בְּיוֹם עֶבְרַת יְהֹוָה נַפְשָׁם לֹא יְשַׂבֵּעוּ וּמֵעֵיהֶם לֹא יְמַלֵּאוּ כִּֽי־מִכְשׁוֹל עֲוֺנָם הָיָֽה׃
20 ೨೦ ಅವರ ಆಭರಣಗಳ ಚಂದವು ಅವರ ಗರ್ವಕ್ಕೆ ಆಸ್ಪದವಾಯಿತು; ಇದಲ್ಲದೆ ಹೇಯವೂ, ಅಸಹ್ಯವೂ ಆದ ತಮ್ಮ ದೇವತೆಗಳ ಪ್ರತಿಮೆಗಳನ್ನು ಬೆಳ್ಳಿಬಂಗಾರದಿಂದ ರೂಪಿಸುತ್ತಿದ್ದರು; ಆದಕಾರಣ ಅದನ್ನು ಅವರಿಗೆ ಅಶುದ್ಧ ಪದಾರ್ಥವನ್ನಾಗಿ ಮಾಡಿದೆನು.
וּצְבִי עֶדְיוֹ לְגָאוֹן שָׂמָהוּ וְצַלְמֵי תוֹעֲבֹתָם שִׁקּוּצֵיהֶם עָשׂוּ בוֹ עַל־כֵּן נְתַתִּיו לָהֶם לְנִדָּֽה׃
21 ೨೧ ಅನ್ಯರ ಕೈಯಿಂದ ಕೊಳ್ಳೆಹೊಡೆಯಿಸಿ ಲೋಕದ ಅತಿ ದುಷ್ಟರಿಂದ ಸೂರೆಮಾಡಿಸುವೆನು; ಅವರು ಅದನ್ನು ಹೊಲೆಗೊಳಿಸುವರು.
וּנְתַתִּיו בְּיַֽד־הַזָּרִים לָבַז וּלְרִשְׁעֵי הָאָרֶץ לְשָׁלָל (וחללוה) [וְחִלְּלֽוּהוּ]׃
22 ೨೨ ನಾನು ಅವರ ಕಡೆಯಿಂದ ನನ್ನ ಮುಖವನ್ನು ತಿರುಗಿಸಲು, ನನ್ನ ಪ್ರಿಯ ಮಂದಿರವನ್ನು ಹೊಲೆಗೆಡಿಸುವರು; ಕಳ್ಳರು ಅದರಲ್ಲಿ ನುಗ್ಗಿ ಅದನ್ನು ಹೊಲಸುಮಾಡುವರು.
וַהֲסִבּוֹתִי פָנַי מֵהֶם וְחִלְּלוּ אֶת־צְפוּנִי וּבָאוּ־בָהּ פָּרִיצִים וְחִלְּלֽוּהָ׃
23 ೨೩ ಒಂದು ಸರಪಣಿಯನ್ನು ಮಾಡು; ಏಕೆಂದರೆ ದೇಶವು ನರಹತ್ಯಭರಿತವಾಗಿದೆ, ಪಟ್ಟಣವು ಹಿಂಸೆಯಿಂದ ತುಂಬಿಹೋಗಿದೆ.
עֲשֵׂה הָרַתּוֹק כִּי הָאָרֶץ מָֽלְאָה מִשְׁפַּט דָּמִים וְהָעִיר מָלְאָה חָמָֽס׃
24 ೨೪ ಹೀಗಿರಲು ನಾನು ಅತಿ ದುಷ್ಟ ಜನಾಂಗಗಳನ್ನು ಬರಮಾಡುವೆನು, ಅವು ನನ್ನ ಜನರ ಮನೆಗಳನ್ನು ವಶಮಾಡಿಕೊಳ್ಳುವುದು; ನಾನು ಬಲಿಷ್ಠರ ಸೊಕ್ಕನ್ನು ಅಡಗಿಸುವೆನು, ಅವರ ಪವಿತ್ರ ಸ್ಥಾನಗಳು ಹೊಲೆಗೆಡುವವು.
וְהֵֽבֵאתִי רָעֵי גוֹיִם וְיָרְשׁוּ אֶת־בָּתֵּיהֶם וְהִשְׁבַּתִּי גְּאוֹן עַזִּים וְנִחֲלוּ מְקַֽדְשֵׁיהֶֽם׃
25 ೨೫ ಸಂಕಟ ಸಂಭವಿಸುವುದು; ಅವರು ಸಮಾಧಾನವನ್ನು ಹುಡುಕಿದರೂ ಸ್ವಲ್ಪವೂ ಸಿಕ್ಕುವುದಿಲ್ಲ.
קְפָדָה־בָא וּבִקְשׁוּ שָׁלוֹם וָאָֽיִן׃
26 ೨೬ ಕೇಡಿನ ಮೇಲೆ ಕೇಡು, ಸುದ್ದಿಯ ಮೇಲೆ ಸುದ್ದಿ ಬರುವುದು; ‘ದಿವ್ಯದರ್ಶನವಾಯಿತೇ?’ ಎಂದು ಪ್ರವಾದಿಯನ್ನು ಕೇಳುತ್ತಲೇ ಇರುವರು; ಯಾಜಕರಲ್ಲಿ ಧರ್ಮೋಪದೇಶವು ಅಡಗಿಹೋಗುವುದು, ಹಿರಿಯರಲ್ಲಿ ಸಲಹೆ, ಸಮಾಲೋಚನೆಯು ಇಲ್ಲವಾಗುವುದು.
הֹוָה עַל־הֹוָה תָּבוֹא וּשְׁמֻעָה אֶל־שְׁמוּעָה תִּֽהְיֶה וּבִקְשׁוּ חָזוֹן מִנָּבִיא וְתוֹרָה תֹּאבַד מִכֹּהֵן וְעֵצָה מִזְּקֵנִֽים׃
27 ೨೭ ಅರಸನು ದುಃಖಿಸುವನು, ಭಯವು ಪ್ರಭುವನ್ನು ಮುಸುಕುವುದು, ಸಾಧಾರಣಜನರ ಕೈಗಳು ತತ್ತರಿಸುವವು; ನಾನು ಅವರ ದುರ್ನಡತೆಗೆ ತಕ್ಕ ಪ್ರತಿಕಾರವನ್ನು ಮಾಡಿ, ಅವರ ದುಷ್ಟ ಕಾರ್ಯಗಳಿಗೆ ಸರಿಯಾಗಿ ದಂಡನೆಯನ್ನು ವಿಧಿಸುವೆನು; ಆಗ ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು.”
הַמֶּלֶךְ יִתְאַבָּל וְנָשִׂיא יִלְבַּשׁ שְׁמָמָה וִידֵי עַם־הָאָרֶץ תִּבָּהַלְנָה מִדַּרְכָּם אֶעֱשֶׂה אֹתָם וּבְמִשְׁפְּטֵיהֶם אֶשְׁפְּטֵם וְיָדְעוּ כִּֽי־אֲנִי יְהֹוָֽה׃

< ಯೆಹೆಜ್ಕೇಲನು 7 >