< ಯೆಹೆಜ್ಕೇಲನು 9 >

1 ಆಮೇಲೆ ಆತನು, “ಪಟ್ಟಣವನ್ನು ದಂಡಿಸತಕ್ಕವರೇ, ನೀವೆಲ್ಲರೂ ನಿಮ್ಮ ಹತ್ಯಾ ಆಯುಧಗಳನ್ನು ಹಿಡಿದವರಾಗಿ ಸಮೀಪಿಸಿರಿ” ಎಂದು ಗಟ್ಟಿಯಾಗಿ ಕೂಗಿ ಹೇಳಿದ ಮಾತು ನನ್ನ ಕಿವಿಗೆ ಬಿತ್ತು.
他向我耳中大声喊叫说:“要使那监管这城的人手中各拿灭命的兵器前来。”
2 ಕೂಡಲೆ ಗದೆಗಳನ್ನು ಹಿಡಿದುಕೊಂಡ ಆರು ಮಂದಿ ಪುರುಷರು ಉತ್ತರ ಮುಖವಾಗಿರುವ ಮೇಲಣ ಹೆಬ್ಬಾಗಿಲಿನ ಮಾರ್ಗವಾಗಿ ಬಂದರು; ನಾರಿನ ಬಟ್ಟೆಯನ್ನು ಹೊದ್ದುಕೊಂಡು ಲೇಖಕನ ಮಸಿಕುಡಿಕೆಯನ್ನು ನಡುವಿಗೆ ಕಟ್ಟಿಕೊಂಡಿರುವ ಮತ್ತೊಬ್ಬ ಪುರುಷನು ಅವರ ಮಧ್ಯದಲ್ಲಿದ್ದನು. ಇವರೆಲ್ಲರೂ ಒಳಕ್ಕೆ ಸೇರಿ ತಾಮ್ರದ ಯಜ್ಞವೇದಿಯ ಪಕ್ಕದಲ್ಲಿ ನಿಂತುಕೊಂಡರು.
忽然有六个人从朝北的上门而来,各人手拿杀人的兵器;内中有一人身穿细麻衣,腰间带着墨盒子。他们进来,站在铜祭坛旁。
3 ಇಷ್ಟರಲ್ಲಿ ಇಸ್ರಾಯೇಲಿನ ದೇವರ ತೇಜಸ್ಸು ತನ್ನ ವಾಹನವಾದ ಕೆರೂಬಿಯನ್ನು ಬಿಟ್ಟು ಮೇಲಕ್ಕೇರಿ ಆಲಯದ ಹೊಸ್ತಿಲಿನ ಮೇಲ್ಗಡೆ ನಿಂತಿತ್ತು; ಆಗ ನಾರಿನ ಬಟ್ಟೆಯನ್ನು ಹೊದ್ದುಕೊಂಡು, ಲೇಖಕನ ಮಸಿಕೊಂಬನ್ನು ನಡುವಿಗೆ ಕಟ್ಟಿಕೊಂಡಿರುವ ಪುರುಷನನ್ನು ಕಂಡನು.
以色列 神的荣耀本在基路伯上,现今从那里升到殿的门槛。 神将那身穿细麻衣、腰间带着墨盒子的人召来。
4 ಯೆಹೋವನು ಕೂಗಿ ಅವನಿಗೆ, “ನೀನು ಯೆರೂಸಲೇಮ್ ಪಟ್ಟಣದಲ್ಲೆಲ್ಲಾ ತಿರುಗಿ ಅದರೊಳಗೆ ನಡೆಯುವ ಸಮಸ್ತ ಅಸಹ್ಯ ಕಾರ್ಯಗಳಿಗಾಗಿ ನರಳಿ ಗೋಳಾಡುತ್ತಿರುವ ಜನರ ಹಣೆಯ ಮೇಲೆ ಗುರುತುಮಾಡು” ಎಂದು ಅಪ್ಪಣೆಕೊಟ್ಟನು.
耶和华对他说:“你去走遍耶路撒冷全城,那些因城中所行可憎之事叹息哀哭的人,画记号在额上。”
5 ಮತ್ತೂ ಆತನು ಉಳಿದವರಿಗೆ, “ನೀವು ಪಟ್ಟಣದಲ್ಲೆಲ್ಲಾ ಇವನ ಹಿಂದೆ ತಿರುಗುತ್ತಾ ಹತಿಸಿರಿ; ಯಾರನ್ನೂ ಕಟಾಕ್ಷಿಸದಿರಿ, ಉಳಿಸದಿರಿ; ವೃದ್ಧ, ಯುವಕ, ಯುವತಿ, ಸ್ತ್ರೀ, ಬಾಲಕ ಎನ್ನದೆ ಸಕಲರನ್ನೂ ಸಂಹಾರ ಮಾಡಿಬಿಡಿರಿ; ಆದರೆ ಆ ಗುರುತುಳ್ಳವರಲ್ಲಿ ಯಾರನ್ನೂ ಮುಟ್ಟಬೇಡಿರಿ; ನನ್ನ ಆಲಯದಲ್ಲಿಯೇ ಪ್ರಾರಂಭಮಾಡಿರಿ” ಎಂಬುದಾಗಿ ಆತನು ನನಗೆ ಕೇಳಿಸುವಂತೆ ಅಪ್ಪಣೆಮಾಡಿದನು.
我耳中听见他对其余的人说:“要跟随他走遍全城,以行击杀。你们的眼不要顾惜,也不要可怜他们。
6 ಆಗ ಅವರು ದೇವಾಲಯದ ಮುಂದೆ ಇದ್ದ ಹಿರಿಯರನ್ನು ಮೊದಲುಗೊಂಡು ಹತಿಸತೊಡಗಿದರು.
要将年老的、年少的,并处女、婴孩,和妇女,从圣所起全都杀尽,只是凡有记号的人不要挨近他。”于是他们从殿前的长老杀起。
7 ಆತನು ಅವರಿಗೆ, “ಹೊರಡಿರಿ, ಪ್ರಾಕಾರಗಳನ್ನು ಶವಗಳಿಂದ ತುಂಬಿಸಿ, ದೇವಾಲಯವನ್ನು ಹೊಲೆಗೆಡಿಸಿರಿ” ಎಂದು ಅಪ್ಪಣೆ ಕೊಡಲು ಅವರು ಹೊರಟು ಪಟ್ಟಣದಲ್ಲಿದ್ದವರನ್ನು ಹತಿಸಿದರು.
他对他们说:“要污秽这殿,使院中充满被杀的人。你们出去吧!”他们就出去,在城中击杀。
8 ಅವರು ಹತಿಸುತ್ತಿರುವಾಗ ಅಲ್ಲಿ ಒಂಟಿಗನಾಗಿ ಉಳಿದ ನಾನು ಅಡ್ಡಬಿದ್ದು, “ಅಯ್ಯೋ, ಕರ್ತನಾದ ಯೆಹೋವನೇ, ನೀನು ಯೆರೂಸಲೇಮಿನ ಮೇಲೆ ನಿನ್ನ ಕೋಪಾಗ್ನಿಯನ್ನು ಹೊಯ್ದು, ಇಸ್ರಾಯೇಲರಲ್ಲಿ ಉಳಿದವರನ್ನೆಲ್ಲಾ ನಾಶಮಾಡುವಿಯಾ?” ಎಂದು ಮೊರೆಯಿಟ್ಟೆನು.
他们击杀的时候,我被留下,我就俯伏在地,说:“哎!主耶和华啊,你将忿怒倾在耶路撒冷,岂要将以色列所剩下的人都灭绝吗?”
9 ಆತನು ನನಗೆ, “ಇಸ್ರಾಯೇಲ್ ಮತ್ತು ಯೆಹೂದ ವಂಶದವರ ಅಧರ್ಮವು ಅತ್ಯಂತವಾಗಿದೆ; ದೇಶವು ರಕ್ತಪೂರ್ಣವಾಗಿದೆ, ಪಟ್ಟಣವು ಅನ್ಯಾಯಭರಿತವಾಗಿದೆ; ಆ ವಂಶದವರು, ‘ನಮ್ಮ ದೇಶವನ್ನು ಯೆಹೋವನು ಬಿಟ್ಟುಬಿಟ್ಟಿದ್ದಾನೆ, ಯೆಹೋವನು ನೋಡುವುದಿಲ್ಲ’ ಎಂಬುದಾಗಿ ಮಾತನಾಡಿಕೊಳ್ಳುತ್ತಿದ್ದಾರೆ.
他对我说:“以色列家和犹大家的罪孽极其重大。遍地有流血的事,满城有冤屈,因为他们说:‘耶和华已经离弃这地,他看不见我们。’
10 ೧೦ ನಾನಂತು, ಅವರನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ, ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು” ಎಂದು ಹೇಳಿದನು.
故此,我眼必不顾惜,也不可怜他们,要照他们所行的报应在他们头上。”
11 ೧೧ ಕೂಡಲೆ ನಾರಿನ ಬಟ್ಟೆಯನ್ನು ಹೊದ್ದುಕೊಂಡು ಮಸಿಕೊಂಬನ್ನು ನಡುವಿಗೆ ಕಟ್ಟಿಕೊಂಡಿರುವ ಪುರುಷನು, “ನಿನ್ನ ಅಪ್ಪಣೆಯಂತೆಯೇ ಮಾಡಿದ್ದೇನೆ” ಎಂದು ಅರಿಕೆಮಾಡಿದನು.
那穿细麻衣、腰间带着墨盒子的人将这事回复说:“我已经照你所吩咐的行了。”

< ಯೆಹೆಜ್ಕೇಲನು 9 >