< ಎಜ್ರನು 7 >

1 ಇದಾದ ಮೇಲೆ ಪರ್ಷಿಯ ರಾಜನಾದ ಅರ್ತಷಸ್ತನ ಆಳ್ವಿಕೆಯಲ್ಲಿ ಎಜ್ರನು ಬಾಬಿಲೋನಿನಿಂದ ಬಂದನು. ಇವನು ಸೆರಾಯನ ಮಗ; ಸೆರೆಯನು ಅಜರ್ಯನ ಮಗ; ಇವನು ಹಿಲ್ಕೀಯನ ಮಗ.
וְאַחַר הַדְּבָרִים הָאֵלֶּה בְּמַלְכוּת אַרְתַּחְשַׁסְתְּא מֶֽלֶךְ־פָּרָס עֶזְרָא בֶּן־שְׂרָיָה בֶּן־עֲזַרְיָה בֶּן־חִלְקִיָּֽה׃
2 ಹಿಲ್ಕೀಯನು ಶಲ್ಲೂಮನ ಮಗ; ಇವನು ಚಾದೋಕನ ಮಗ; ಇವನು ಅಹೀಟೂಬನ ಮಗ; ಇವನು ಅಮರ್ಯನ ಮಗ.
בֶּן־שַׁלּוּם בֶּן־צָדוֹק בֶּן־אֲחִיטֽוּב׃
3 ಅಮರ್ಯನು ಅಜರ್ಯನ ಮಗ; ಇವನು ಮೆರಾಯೋತನ ಮಗ.
בֶּן־אֲמַרְיָה בֶן־עֲזַרְיָה בֶּן־מְרָיֽוֹת׃
4 ಮೆರಾಯೋತನು ಜೆರಹ್ಯನ ಮಗ; ಇವನು ಉಜ್ಜೀಯ ಮಗ; ಇವನು ಬುಕ್ಕೀಯ ಮಗ.
בֶּן־זְרַֽחְיָה בֶן־עֻזִּי בֶּן־בֻּקִּֽי׃
5 ಬುಕ್ಕೀಯನು ಅಬೀಷೂವನ ಮಗ; ಇವನು ಫೀನೆಹಾಸನ ಮಗ; ಇವನು ಎಲ್ಲಾಜಾರನ ಮಗ; ಇವನು ಪ್ರಧಾನಯಾಜಕನಾದ ಆರೋನನ ಮಗ.
בֶּן־אֲבִישׁוּעַ בֶּן־פִּֽינְחָס בֶּן־אֶלְעָזָר בֶּן־אַהֲרֹן הַכֹּהֵן הָרֹֽאשׁ׃
6 ಎಜ್ರನು ಇಸ್ರಾಯೇಲ್ ದೇವರಾದ ಯೆಹೋವನಿಂದ ದೊರಕಿದ ಮೋಶೆಯ ಧರ್ಮೋಪದೇಶದಲ್ಲಿ ಪಾರಂಗತನಾದ ಶಾಸ್ತ್ರಿಯಾಗಿದ್ದನು. ಅವನ ದೇವರಾದ ಯೆಹೋವನ ಹಸ್ತಪಾಲನೆಯಿಂದ ಅರಸನು ಅವನಿಗೆ ಇಷ್ಟವಾದದ್ದನ್ನೆಲ್ಲಾ ಅನುಗ್ರಹಿಸಿದನು.
הוּא עֶזְרָא עָלָה מִבָּבֶל וְהֽוּא־סֹפֵר מָהִיר בְּתוֹרַת מֹשֶׁה אֲשֶׁר־נָתַן יְהֹוָה אֱלֹהֵי יִשְׂרָאֵל וַיִּתֶּן־לוֹ הַמֶּלֶךְ כְּיַד־יְהֹוָה אֱלֹהָיו עָלָיו כֹּל בַּקָּשָׁתֽוֹ׃
7 ಅವನೊಡನೆ ಕೆಲವು ಜನರು ಇಸ್ರಾಯೇಲರೂ, ಯಾಜಕರೂ, ಲೇವಿಯರೂ, ಗಾಯಕರೂ, ದ್ವಾರಪಾಲಕರೂ ಮತ್ತು ದೇವಸ್ಥಾನದಾಸರೂ ಅರ್ತಷಸ್ತ ಅರಸನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಯೆರೂಸಲೇಮಿಗೆ ಬಂದರು.
וַיַּֽעֲלוּ מִבְּנֵֽי־יִשְׂרָאֵל וּמִן־הַכֹּהֲנִים וְהַלְוִיִּם וְהַמְשֹׁרְרִים וְהַשֹּׁעֲרִים וְהַנְּתִינִים אֶל־יְרוּשָׁלָ͏ִם בִּשְׁנַת־שֶׁבַע לְאַרְתַּחְשַׁסְתְּא הַמֶּֽלֶךְ׃
8 ಎಜ್ರನು ಆ ಅರಸನ ಆಳ್ವಿಕೆಯ ಏಳನೆಯ ವರ್ಷದ ಐದನೆಯ ತಿಂಗಳಲ್ಲಿ ಯೆರೂಸಲೇಮನ್ನು ತಲುಪಿದನು.
וַיָּבֹא יְרוּשָׁלַ͏ִם בַּחֹדֶשׁ הַחֲמִישִׁי הִיא שְׁנַת הַשְּׁבִיעִית לַמֶּֽלֶךְ׃
9 ಅವನು ಮೊದಲನೆಯ ತಿಂಗಳಿನ ಮೊದಲ ದಿನದಲ್ಲಿ ಬಾಬಿಲೋನಿನಿಂದ ಹೊರಟನು; ತನ್ನ ದೇವರ ಕೃಪಾ ಹಸ್ತಪಾಲನೆಯಿಂದ ಐದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆರೂಸಲೇಮಿಗೆ ಬಂದು ಸೇರಿದನು.
כִּי בְּאֶחָד לַחֹדֶשׁ הָרִאשׁוֹן הוּא יְסֻד הַֽמַּעֲלָה מִבָּבֶל וּבְאֶחָד לַחֹדֶשׁ הַחֲמִישִׁי בָּא אֶל־יְרוּשָׁלַ͏ִם כְּיַד־אֱלֹהָיו הַטּוֹבָה עָלָֽיו׃
10 ೧೦ ಎಜ್ರನು ಯೆಹೋವನ ಧರ್ಮಶಾಸ್ತ್ರವನ್ನು ಅಭ್ಯಾಸಿಸಿ ಅನುಸರಿಸಲಿಕ್ಕೂ, ಇಸ್ರಾಯೇಲರಿಗೆ ಅದರ ವಿಧಿನ್ಯಾಯಗಳನ್ನು ಕಲಿಸಬೇಕೆಂದು ದೃಢಮಾಡಿಕೊಂಡಿದ್ದನು.
כִּי עֶזְרָא הֵכִין לְבָבוֹ לִדְרֹשׁ אֶת־תּוֹרַת יְהֹוָה וְלַעֲשֹׂת וּלְלַמֵּד בְּיִשְׂרָאֵל חֹק וּמִשְׁפָּֽט׃
11 ೧೧ ಯಾಜಕನು ಮತ್ತು ಶಾಸ್ತ್ರಿಯೂ, ಇಸ್ರಾಯೇಲರಿಗಾಗಿ ಕೊಡಲ್ಪಟ್ಟ ಯೆಹೋವನ ಆಜ್ಞಾವಿಧಿಸೂತ್ರಗಳಲ್ಲಿ ವಿದ್ವಾಂಸನೂ ಆಗಿದ್ದ ಎಜ್ರನಿಗೆ ಅರಸನಾದ ಅರ್ತಷಸ್ತನು ಕೊಟ್ಟ ಪತ್ರ.
וְזֶה ׀ פַּרְשֶׁגֶן הַֽנִּשְׁתְּוָן אֲשֶׁר נָתַן הַמֶּלֶךְ אַרְתַּחְשַׁסְתְּא לְעֶזְרָא הַכֹּהֵן הַסֹּפֵר סֹפֵר דִּבְרֵי מִצְוֺת־יְהֹוָה וְחֻקָּיו עַל־יִשְׂרָאֵֽל׃
12 ೧೨ “ರಾಜಾಧಿರಾಜನಾದ ಅರ್ತಷಸ್ತನು, ಯಾಜಕನೂ ಪರಲೋಕದೇವರ ಧರ್ಮಶಾಸ್ತ್ರದಲ್ಲಿ ಪ್ರವೀಣನೂ ಆದ ಎಜ್ರನಿಗೆ ತಿಳಿಸುವುದೇನೆಂದರೆ,
אַרְתַּחְשַׁסְתְּא מֶלֶךְ מַלְכַיָּא לְעֶזְרָא כָהֲנָא סָפַר דָּתָא דִּֽי־אֱלָהּ שְׁמַיָּא גְּמִיר וּכְעֶֽנֶת׃
13 ೧೩ ನನ್ನ ರಾಜ್ಯದಲ್ಲಿರುವ ಇಸ್ರಾಯೇಲರು ತಮ್ಮ ಯಾಜಕರು ಮತ್ತು ಲೇವಿಯರು ಹಾಗು ಯೆರೂಸಲೇಮಿಗೆ ಹೋಗಬೇಕೆಂದು ಮನಸ್ಸುಳ್ಳವರೆಲ್ಲರೂ ನಿನ್ನ ಸಂಗಡ ಹೋಗಬಹುದೆಂದು ಅಪ್ಪಣೆ ಕೊಡುತ್ತಿದ್ದೇನೆ.
מִנִּי שִׂים טְעֵם דִּי כׇל־מִתְנַדַּב בְּמַלְכוּתִי מִן־עַמָּא יִשְׂרָאֵל וְכָהֲנוֹהִי וְלֵוָיֵא לִמְהָךְ לִֽירוּשְׁלֶם עִמָּךְ יְהָֽךְ׃
14 ೧೪ ನೀನು ಹೋಗಿ ಯೆಹೂದದವರ ಮತ್ತು ಯೆರೂಸಲೇಮಿನವರ ಆಚರಣೆಯು ನಿನ್ನ ಕೈಯಲ್ಲಿರುವ ನಿನ್ನ ದೇವರ ಧರ್ಮೋಪದೇಶಗ್ರಂಥಕ್ಕೆ ಅನುಸಾರವಾಗಿದೆಯೋ ಇಲ್ಲವೋ ಎಂದು ಪರಿಶೀಲಿಸಬೇಕು.
כׇּל־קֳבֵל דִּי מִן־קֳדָם מַלְכָּא וְשִׁבְעַת יָעֲטֹהִי שְׁלִיחַ לְבַקָּרָה עַל־יְהוּד וְלִֽירוּשְׁלֶם בְּדָת אֱלָהָךְ דִּי בִידָֽךְ׃
15 ೧೫ ಮತ್ತು ಅರಸನೂ ಅವನ ಮಂತ್ರಿಗಳೂ ಯೆರೂಸಲೇಮಿನಲ್ಲಿ ವಾಸಿಸುತ್ತಿರುವ ಇಸ್ರಾಯೇಲ್ ದೇವರಿಗೊಸ್ಕರ ಕಾಣಿಕೆಯಾಗಿ ಸಮರ್ಪಿಸಿದ ಬೆಳ್ಳಿಬಂಗಾರ,
וּלְהֵיבָלָה כְּסַף וּדְהַב דִּֽי־מַלְכָּא וְיָעֲטוֹהִי הִתְנַדַּבוּ לֶאֱלָהּ יִשְׂרָאֵל דִּי בִֽירוּשְׁלֶם מִשְׁכְּנֵֽהּ׃
16 ೧೬ ಬಾಬೆಲ್ ಸಂಸ್ಥಾನದಲ್ಲಿ ನಿನಗೆ ಸಿಕ್ಕುವ ಬೆಳ್ಳಿಬಂಗಾರ, ಇಸ್ರಾಯೇಲ್ ಸಾಧಾರಣಜನರೂ, ಯಾಜಕರೂ, ಯೆರೂಸಲೇಮಿನಲ್ಲಿರುವ ತಮ್ಮ ದೇವರ ಆಲಯಕ್ಕಾಗಿ ಸ್ವ ಇಚ್ಛೆಯಿಂದ ಕೊಡುವ ಕಾಣಿಕೆ ಇವುಗಳನ್ನು ಅಲ್ಲಿಗೆ ಒಪ್ಪಿಸಬೇಕು; ಹೀಗೆಂದು ನಾನೂ ಮತ್ತು ನನ್ನ ಏಳು ಜನ ಮಂತ್ರಿಗಳೂ ನಿನ್ನನ್ನು ಕಳುಹಿಸುತ್ತೇವೆ.
וְכֹל כְּסַף וּדְהַב דִּי תְהַשְׁכַּח בְּכֹל מְדִינַת בָּבֶל עִם הִתְנַדָּבוּת עַמָּא וְכָֽהֲנַיָּא מִֽתְנַדְּבִין לְבֵית אֱלָהֲהֹם דִּי בִירוּשְׁלֶֽם׃
17 ೧೭ ನೀನು ಈ ಹಣದಿಂದ ಹೋರಿ, ಟಗರು, ಕುರಿ ಇವುಗಳನ್ನೂ ಮತ್ತು ಇವುಗಳೊಡನೆ ಸಮರ್ಪಣೆಯಾಗತಕ್ಕ ಧಾನ್ಯದ್ರವ್ಯ, ಪಾನದ್ರವ್ಯಗಳನ್ನೂ ಕೊಂಡುಕೊಂಡು ಅವುಗಳನ್ನು ಯೆರೂಸಲೇಮಿನಲ್ಲಿರುವ ನಿಮ್ಮ ದೇವರ ಆಲಯದ ಯಜ್ಞವೇದಿಯ ಮೇಲೆ ಸಮರ್ಪಿಸಬೇಕು.
כׇּל־קֳבֵל דְּנָה אׇסְפַּרְנָא תִקְנֵא בְּכַסְפָּא דְנָה תּוֹרִין ׀ דִּכְרִין אִמְּרִין וּמִנְחָתְהוֹן וְנִסְכֵּיהוֹן וּתְקָרֵב הִמּוֹ עַֽל־מַדְבְּחָה דִּי בֵּית אֱלָהֲכֹם דִּי בִירוּשְׁלֶֽם׃
18 ೧೮ ಉಳಿದ ಬೆಳ್ಳಿಬಂಗಾರವನ್ನು, ನಿಮ್ಮ ದೇವರ ಆಜ್ಞೆಯನ್ನು ಅನುಸರಿಸಿ, ನಿನಗೂ ನಿನ್ನ ಸಹೋದರರಿಗೂ ಸರಿತೋರುವಂತೆ ವೆಚ್ಚಮಾಡಿರಿ.
וּמָה דִי (עליך) [עֲלָךְ] וְעַל־[אֶחָךְ] (אחיך) יֵיטַב בִּשְׁאָר כַּסְפָּא וְדַהֲבָה לְמֶעְבַּד כִּרְעוּת אֱלָהֲכֹם תַּעַבְדֽוּן׃
19 ೧೯ ನಿನ್ನ ದೇವರ ಆಲಯದ ಆರಾಧನೆಗಾಗಿ ನಿನ್ನ ವಶಕ್ಕೆ ಕೊಡುವ ಸಾಮಾನುಗಳನ್ನು ಯೆರೂಸಲೇಮಿನ ದೇವರ ಸನ್ನಿಧಿಗೆ ತೆಗೆದುಕೊಂಡು ಹೋಗು.
וּמָֽאנַיָּא דִּֽי־מִתְיַהֲבִין לָךְ לְפׇלְחָן בֵּית אֱלָהָךְ הַשְׁלֵם קֳדָם אֱלָהּ יְרוּשְׁלֶֽם׃
20 ೨೦ ನಿನ್ನ ದೇವರ ಆಲಯಕ್ಕೋಸ್ಕರ ನೀನು ಬೇರೆ ಯಾವುದನ್ನಾದರೂ ವೆಚ್ಚಮಾಡಬೇಕಾದರೆ ಅದನ್ನು ರಾಜಭಂಡಾರದಿಂದ ತೆಗೆದುಕೊಂಡು ವೆಚ್ಚಮಾಡು.
וּשְׁאָר חַשְׁחוּת בֵּית אֱלָהָךְ דִּי יִפֶּל־לָךְ לְמִנְתַּן תִּנְתֵּן מִן־בֵּית גִּנְזֵי מַלְכָּֽא׃
21 ೨೧ “ಅರ್ತಷಸ್ತ ರಾಜನಾದ ನಾನು ಹೊಳೆಯಾಚೆಯ ಪ್ರಾಂತ್ಯಗಳ ಭಂಡಾರಗಳ ಮುಖ್ಯಸ್ಥರಿಗೆ ಆಜ್ಞಾಪಿಸುವುದು ಏನೆಂದರೆ, ‘ಯಾಜಕರೂ ಪರಲೋಕದೇವರ ಧರ್ಮಾಚಾರ್ಯನೂ ಆದ ಎಜ್ರನು ಕೇಳಿಕೊಳ್ಳುವುದನ್ನೆಲ್ಲಾ ನೀವು ತಪ್ಪದೆ ಕೊಡಬೇಕು.
וּמִנִּי אֲנָה אַרְתַּחְשַׁסְתְּא מַלְכָּא שִׂים טְעֵם לְכֹל גִּזַּֽבְרַיָּא דִּי בַּעֲבַר נַהֲרָה דִּי כׇל־דִּי יִשְׁאֲלֶנְכוֹן עֶזְרָא כָהֲנָא סָפַר דָּתָא דִּֽי־אֱלָהּ שְׁמַיָּא אׇסְפַּרְנָא יִתְעֲבִֽד׃
22 ೨೨ ನೂರು ತಲಾಂತು ಬೆಳ್ಳಿ, ನೂರು ಕೋರ್ ಗೋದಿ ನೂರು ಬತ್ ದ್ರಾಕ್ಷಾರಸ, ಎಣ್ಣೆ ನೂರು ಬತ್ ಇಷ್ಟರ ಮಟ್ಟಿಗೂ ಕೊಡಬಹುದು; ಉಪ್ಪನ್ನು ಎಷ್ಟು ಬೇಕಾದರೂ ಕೊಡಬಹುದು.
עַד־כְּסַף כַּכְּרִין מְאָה וְעַד־חִנְטִין כּוֹרִין מְאָה וְעַד־חֲמַר בַּתִּין מְאָה וְעַד־בַּתִּין מְשַׁח מְאָה וּמְלַח דִּי־לָא כְתָֽב׃
23 ೨೩ ಅರಸನ ಮತ್ತು ಅವನ ಸಂತಾನದವರ ರಾಜ್ಯದ ಮೇಲೆ ದೈವಕೋಪ ಉಂಟಾಗದ ಹಾಗೆ ನೀವು ಪರಲೋಕದೇವರ ಆಜ್ಞಾನುಸಾರ ಬೇಕಾದದ್ದನ್ನೆಲ್ಲಾ ಯಾವ ಕೊರತೆಯೂ ಇಲ್ಲದೆ ಒದಗಿಸಿ ಕೊಡಬೇಕು.
כׇּל־דִּי מִן־טַעַם אֱלָהּ שְׁמַיָּא יִתְעֲבֵד אַדְרַזְדָּא לְבֵית אֱלָהּ שְׁמַיָּא דִּֽי־לְמָה לֶֽהֱוֵא קְצַף עַל־מַלְכוּת מַלְכָּא וּבְנֽוֹהִי׃
24 ೨೪ ಇದಲ್ಲದೆ ಆ ದೇವಾಲಯದ ಸೇವೆಯಲ್ಲಿರುವ ಯಾಜಕರು, ಲೇವಿಯರು, ಗಾಯಕರು, ದ್ವಾರಪಾಲಕರು, ದಾಸರು ಮುಂತಾದ ಸೇವಕರಲ್ಲಿ ಯಾರಿಂದಲೂ ಕಪ್ಪ, ತೆರಿಗೆ, ಸುಂಕ ಇವುಗಳನ್ನು ವಸೂಲಿಮಾಡುವುದಕ್ಕೆ ನಿಮಗೆ ಅಧಿಕಾರವಿಲ್ಲ ಎಂಬುದು ತಿಳಿದಿರಲಿ.’
וּלְכֹם מְהוֹדְעִין דִּי כׇל־כָּהֲנַיָּא וְלֵוָיֵא זַמָּרַיָּא תָרָֽעַיָּא נְתִינַיָּא וּפָלְחֵי בֵּית אֱלָהָא דְנָה מִנְדָּה בְלוֹ וַהֲלָךְ לָא שַׁלִּיט לְמִרְמֵא עֲלֵיהֹֽם׃
25 ೨೫ “ಎಜ್ರನೇ, ನಿನ್ನ ಕೈಯಲ್ಲಿರುವ ನಿನ್ನ ದೇವರ ಜ್ಞಾನೋಪದೇಶಗ್ರಂಥಕ್ಕೆ ಅನುಸಾರವಾಗಿ ನ್ಯಾಯಾಧೀಶರನ್ನೂ ಮತ್ತು ಪಂಚಾಯತರನ್ನೂ ನೇಮಿಸು. ಅವರು ಹೊಳೆಯಾಚೆಯ ಇಸ್ರಾಯೇಲರಲ್ಲಿ ನಿನ್ನ ದೇವರ ಧರ್ಮವನ್ನು ಅರಿತಿರುವವರೆಲ್ಲರ ವ್ಯಾಜ್ಯಗಳನ್ನು ತೀರಿಸಲಿ. ಅರಿಯದವರಿಗೆ ನೀವು ಅದನ್ನು ಕಲಿಸಬೇಕು.
וְאַנְתְּ עֶזְרָא כְּחׇכְמַת אֱלָהָךְ דִּֽי־בִידָךְ מֶנִּי שָׁפְטִין וְדַיָּנִין דִּי־לֶהֱוֺן (דאנין) [דָּאיְנִין] לְכׇל־עַמָּא דִּי בַּעֲבַר נַהֲרָה לְכׇל־יָדְעֵי דָּתֵי אֱלָהָךְ וְדִי לָא יָדַע תְּהוֹדְעֽוּן׃
26 ೨೬ ನಿನ್ನ ದೇವರ ಧರ್ಮಶಾಸ್ತ್ರವನ್ನೂ ಮತ್ತು ರಾಜಾಜ್ಞೆಯನ್ನೂ ಕೈಕೊಳ್ಳದವರಿಗೆಲ್ಲಾ ಮರಣದಂಡನೆ, ಬೇಡಿಹಾಕುವುದು ಈ ವಿಧವಾದ ಶಿಕ್ಷೆಯನ್ನು ತಪ್ಪದೆ ವಿಧಿಸಬೇಕು” ಎಂಬುದು ನಿಮಗೆ ತಿಳಿದಿರಲಿ.
וְכׇל־דִּי־לָא לֶהֱוֵא עָבֵד דָּתָא דִֽי־אֱלָהָךְ וְדָתָא דִּי מַלְכָּא אׇסְפַּרְנָא דִּינָה לֶהֱוֵא מִתְעֲבֵד מִנֵּהּ הֵן לְמוֹת הֵן (לשרשו) [לִשְׁרֹשִׁי] הֵן־לַעֲנָשׁ נִכְסִין וְלֶאֱסוּרִֽין׃
27 ೨೭ ಎಜ್ರನು ನೀಡಿದ ಪ್ರತಿಕ್ರಿಯೆ, “ನಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ಅರಸನು ಯೆರೂಸಲೇಮಿನಲ್ಲಿರುವ ಯೆಹೋವನ ಆಲಯವನ್ನು ಶೋಭಾಯಮಾನದ ಸ್ಥಿತಿಗೆ ತರುವುದಕ್ಕೆ ಆತನ ಪ್ರೇರಣೆಯಿಂದಲೇ ಮನಸ್ಸುಮಾಡಿದ್ದಾನೆ. ಅರಸನು ಅವನ ಮಂತ್ರಿಗಳ ಮತ್ತು ಅವನ ಎಲ್ಲಾ ಶ್ರೇಷ್ಠರಾದ ಸರದಾರರ ಮುಂದೆ ನನಗೆ ದಯೆತೋರಿಸಿದ್ದಾನೆ.
בָּרוּךְ יְהֹוָה אֱלֹהֵי אֲבֹתֵינוּ אֲשֶׁר נָתַן כָּזֹאת בְּלֵב הַמֶּלֶךְ לְפָאֵר אֶת־בֵּית יְהֹוָה אֲשֶׁר בִּירוּשָׁלָֽ͏ִם׃
28 ೨೮ ನನ್ನ ದೇವರಾದ ಯೆಹೋವನ ಹಸ್ತಪಾಲನೆಯು ನನ್ನೊಂದಿಗೆ ಇರುವುದರಿಂದ ಅರಸನ ಮುಂದೆ ನನಗೆ ದೊರಕ್ಕಿದ್ದರಿಂದ ನಾನು ಧೈರ್ಯವಾಗಿ ನನ್ನೊಂದಿಗೆ ಪ್ರಯಾಣ ಮಾಡುವುದಕ್ಕೆ ಕೆಲವು ಜನ ಇಸ್ರಾಯೇಲ್ ಪ್ರಧಾನರನ್ನು ಕೂಡಿಸಿಕೊಂಡೆನು” ಎಂದು ಹೇಳಿದನು.
וְעָלַי הִטָּה־חֶסֶד לִפְנֵי הַמֶּלֶךְ וְיֽוֹעֲצָיו וּלְכׇל־שָׂרֵי הַמֶּלֶךְ הַגִּבֹּרִים וַאֲנִי הִתְחַזַּקְתִּי כְּיַד־יְהֹוָה אֱלֹהַי עָלַי וָאֶקְבְּצָה מִיִּשְׂרָאֵל רָאשִׁים לַעֲלוֹת עִמִּֽי׃

< ಎಜ್ರನು 7 >