< ಎಜ್ರನು 8 >

1 ಅರ್ತಷಸ್ತ ರಾಜನ ಆಳ್ವಿಕೆಯಲ್ಲಿ ನನ್ನೊಂದಿಗೆ ಬಾಬಿಲೋನಿನಿಂದ ಹೊರಟ ಗೋತ್ರಪ್ರಧಾನರ ಮತ್ತು ಅವರ ಸಂತಾನದವರ ವಿವರಣೆ.
Ti so torej vodje njihovih očetov in to je rodovnik tistih, ki so z menoj odšli gor iz Babilona, v kraljevanju kralja Artakserksa.
2 ಫೀನೆಹಾಸನ ಸಂತಾನದವರಲ್ಲಿ ಗೇರ್ಷೋಮ್; ಈತಾಮಾರನ ಸಂತಾನದವರಲ್ಲಿ ದಾನಿಯೇಲ್; ದಾವೀದನ ಸಂತಾನದವರಲ್ಲಿ ಶೆಕನ್ಯನ ಮೊಮ್ಮಗನಾದ ಹಟ್ಟೂಷ್.
Od Pinhásovih sinov Geršóm. Od Itamárjevih sinov Daniel. Od Davidovih sinov Hatúš.
3 ಪರೋಷಿನವರಲ್ಲಿ ಜೆಕರ್ಯನೂ ಅವನೊಡನೆ ಶೆಕನ್ಯನ ವಂಶಕ್ಕೆ ಸೇರುವ 150 ಗಂಡಸರು.
Od Šehanjájevih sinov, od Paróševih sinov Zeharjá, in z njim je bilo po rodovniku preštetih sto petdeset moških.
4 ಪಹತ್ ಮೋವಾಬಿನವರಲ್ಲಿ ಜೆರಹ್ಯನ ಮಗನಾದ ಎಲ್ಯೆಹೋವೇನೈಯೂ ಮತ್ತು ಅವನೊಡನೆ 200 ಗಂಡಸರು.
Od Pahat Moábovih sinov Eljoenáj, Zerahjájev sin in z njim dvesto moških.
5 ಜತ್ತೂವಿನವರಲ್ಲಿ ಯಹಜೀಯೇಲನ ಮಗನಾದ ಶೆಕನ್ಯನೂ ಹಾಗೂ ಅವನೊಡನೆ 300 ಗಂಡಸರು.
Od Šehanjájevih sinov Jahaziélov sin in z njim tristo moških.
6 ಆದೀನನವರಲ್ಲಿ ಯೋನಾತಾನನ ಮಗನಾದ ಎಬೆದನೂ ಅವನೊಡನೆ 50 ಗಂಡಸರು.
Tudi od Adínovih sinov Jonatanov sin Ebed in z njim petdeset moških.
7 ಏಲಾಮಿನವರಲ್ಲಿ ಅತಲ್ಯನ ಮಗನಾದ ಯೆಶಾಯನೂ ಅವನೊಡನೆ 70 ಗಂಡಸರು.
Od Elámovih sinov Ataljájin sin Ješajá in z njim sedemdeset moških.
8 ಶೆಫಟ್ಯನವರಲ್ಲಿ ಮಿಕಾಯೇಲನ ಮಗನಾದ ಜೆಬದ್ಯನೂ ಅವನೊಡನೆ 80 ಗಂಡಸರು.
Od Šefatjájevih sinov Mihaelov sin Zebadjá in z njim osemdeset moških.
9 ಯೋವಾಬನವರಲ್ಲಿ ಯೆಹೀಯೇಲನ ಮಗನಾದ ಓಬದ್ಯನೂ ಅವನೊಡನೆ 218 ಗಂಡಸರು.
Od Joábovih sinov Jehiélov sin Obadjá in z njim dvesto osemnajst moških.
10 ೧೦ ಬಾನೀಯವರಲ್ಲಿ ಯೋಸಿಫ್ಯನ ಮಗನಾದ ಶಿಲೋಮೀತನೂ ಅವನೊಡನೆ 160 ಗಂಡಸರು.
Od Šelomítovih sinov Josifjájev sin in z njim sto šestdeset moških.
11 ೧೧ ಬೇಬೈಯವರಲ್ಲಿ ಬೇಬೈಯ ಮಗನಾದ ಜೆಕರ್ಯನೂ ಅವನೊಡನೆ 28 ಗಂಡಸರು.
Od Bebájevih sinov Bebájev sin Zeharjá in z njim osemindvajset moških.
12 ೧೨ ಅಜ್ಗಾದನವರಲ್ಲಿ ಹಕ್ಕಾಟಾನನ ಮಗನಾದ ಯೋಹಾನಾನನೂ ಅವನೊಡನೆ 110 ಗಂಡಸರು.
Od Azgádovih sinov Katánov sin Johanán in z njim sto deset moških.
13 ೧೩ ಅದೋನೀಕಾಮಿನವರಲ್ಲಿ ಕಡೆಯವರಾದ ಎಲೀಫೆಲೆಟ್, ಎಮೀಯೇಲ್, ಶೆಮಾಯ ಎಂಬ ಹೆಸರುಳ್ಳವರೂ ಅವರೊಡನೆ 60 ಗಂಡಸರು.
Od zadnjih sinov Adonikáma, katerih imena so ta: Elifélet, Jeiél, Šemajá in z njimi šestdeset moških.
14 ೧೪ ಬಿಗ್ವೈಯವರಲ್ಲಿ ಜಕ್ಕೂರನ ಮಗನಾದ ಊತೈಯೂ ಅವನೊಡನೆ 70 ಗಂಡಸರು.
Tudi od Bigvájevih sinov Utáj in Zabúd in z njima sedemdeset moških.
15 ೧೫ ಅಹವಾ ಪ್ರಾಂತ್ಯದ ಕಡೆಗೆ ಹರಿಯುವ ನದಿಯ ಬಳಿಯಲ್ಲಿ ನಾನು ಇವರನ್ನು ಕೂಡಿಸಿದೆನು. ಅಲ್ಲಿ ಮೂರು ದಿನ ಪಾಳೆಯಮಾಡಿಕೂಂಡ ಮೇಲೆ ಸಾಧಾರಣ ಜನರೂ, ಯಾಜಕರೂ ಬಂದಿದ್ದಾರೆ, ಲೇವಿಯರಲ್ಲಿ ಯಾರೂ ಬರಲಿಲ್ಲ ಎಂದು ಕಂಡುಬಂತು.
Zbral sem jih skupaj k reki, ki teče proti Ahaváju in tam smo tri dni ostali v šotorih in opazoval sem ljudstvo in duhovnike, pa tam nisem našel nobenega izmed Lévijevih sinov.
16 ೧೬ ಆದುದರಿಂದ ನಾನು ಪ್ರಧಾನರಾದ ಎಲೀಯೆಜೆರ್, ಅರೀಯೇಲ್, ಶೆಮಾಯ, ಎಲ್ನಾತಾನ್, ಯಾರೀಬ್, ಎಲ್ನಾತಾನ್, ನಾತಾನ್, ಜೆಕರ್ಯ, ಮೆಷುಲ್ಲಾಮ್ ಇವರನ್ನೂ, ಪಂಡಿತರಾದ ಯೋಯಾರೀಬ್ ಎಲ್ನಾತಾನ್ ಇವರನ್ನೂ ಕರೆಯಿಸಿದೆನು.
Potem sem poslal po Eliézerja, po Ariéla, po Šemajája, po Elnatána, po Jaríba, po Elnatána, po Natána, po Zeharjá in po Mešuláma, vodilne može. Tudi po Jojaríba in po Elnatána, razumna moža.
17 ೧೭ ಅವರ ತರುವಾಯ ನಾನು ಕಾಸಿಫ್ಯ ಊರಿನ ಮುಖ್ಯಸ್ಥನಾದ ಇದ್ದೋವಿನ ಬಳಿಗೆ ಹೋಗಬೇಕೆಂದು ಅಪ್ಪಣೆಮಾಡಿ, ನಮ್ಮ ಬಳಿಗೆ ದೇವಾಲಯ ಸೇವಕರನ್ನು ಕಳುಹಿಸುವ ಹಾಗೆ, ಅವರು ಇದ್ದೋವಿಗೂ ಕಾಸಿಫ್ಯ ಊರಿನಲ್ಲಿ ವಾಸಿಸುತ್ತಿದ್ದ ಅವನ ಸಹೋದರರಾದ ದೇವಸ್ಥಾನದ ಪರಿಚಾರಕರಿಗೂ ಹೇಳತಕ್ಕ ಮಾತುಗಳನ್ನು ಹೇಳಿಕೊಟ್ಟೆನು. ಆ ಊರಿನವರು ದೇವದಾಸವರ್ಗದವರಷ್ಟೆ.
Poslal sem jih z zapovedjo k Idóju, vodju pri kraju Kasífja in povedal sem jim, kaj naj rečejo Idóju in njegovim bratom Netinimcem na kraju Kasífja, da naj bi k nam privedli služabnike za hišo našega Boga.
18 ೧೮ ನಮ್ಮ ದೇವರ ಕೃಪಾಶೀರ್ವಾದ ನಮಗೆ ದೊರೆಕ್ಕಿದ್ದರಿಂದ ಅವರು ಇಸ್ರಾಯೇಲನ ಮಗನಾದ ಲೇವಿಯ ಕುಲದ ಮಹ್ಲೀ ಸಂತಾನದವರಲ್ಲಿ ಈಸ್ಸೆಕೆಲನನ್ನೂ, ಶೇರೇಬ್ಯನನ್ನೂ ಅವನ ಪುತ್ರಭ್ರಾತೃಗಳಲ್ಲಿ ಹದಿನೆಂಟು ಜನರನ್ನೂ,
Z dobro roko našega Boga nad nami so nam privedli razumnega moža izmed Mahlíjevih sinov, sinú Lévijevega, sinú Izraelovega in Šerebjá z njegovimi sinovi in njegovimi brati, osemnajst;
19 ೧೯ ಮೆರಾರೀಯರಲ್ಲಿ ಹಷಬ್ಯನನ್ನೂ ಅವನೊಡನೆ ಯೆಶಾಯನನ್ನೂ, ಅವರ ಪುತ್ರ ಸಹೋದರರಲ್ಲಿ ಇಪ್ಪತ್ತು ಜನರು,
in Hašabjá in z njim Ješajá izmed Meraríjevih sinov, njegove brate in njegove sinove, dvajset.
20 ೨೦ ದಾವೀದನೂ ಅವನ ಮುಖ್ಯಸ್ಥರನ್ನು ಲೇವಿಯರೊಂದಿಗೆ ಸೇವೆಗಾಗಿ ಕೊಟ್ಟು ದೇವಸ್ಥಾನ ಪರಿಚಾರಕರಲ್ಲಿ ಇನ್ನೂರಿಪ್ಪತ್ತು ಜನರನ್ನೂ ನಮ್ಮ ಬಳಿಗೆ ಕರೆದುಕೊಂಡು ಬಂದರು. ಇವರೆಲ್ಲರ ಹೆಸರುಗಳು ಪಟ್ಟಿಯಲ್ಲಿದ್ದವು.
Tudi od Netinimcev, ki so jih David in princi določili za službo Lévijevcem, dvesto in dvajset Netinimcev. Vsi izmed njih so bili določeni po imenu.
21 ೨೧ ಆ ಮೇಲೆ ಆ ಅಹವಾ ನದಿಯ ಬಳಿಯಲ್ಲಿ ನಾವು ಉಪವಾಸದಿಂದಿದ್ದು, ನಮ್ಮ ದೇವರ ಮುಂದೆ ನಮ್ಮನ್ನು ತಗ್ಗಿಸಿಕೊಂಡು, ನಮಗೂ ನಮ್ಮ ಮನೆಯವರಿಗೂ ನಮ್ಮ ಎಲ್ಲಾ ಆಸ್ತಿಗೂ ಪ್ರಯಾಣದಲ್ಲಿ ಶುಭವನ್ನು ಬೇಡಿಕೊಳ್ಳಬೇಕೆಂದು ಉಪವಾಸವನ್ನು ಪ್ರಕಟಿಸಿದನು.
Potem sem tam, pri reki Ahavá, razglasil post, da bi se lahko užalostili pred našim Bogom, da od njega iščemo pravo pot za sebe in za svoje malčke in za vse svoje imetje.
22 ೨೨ ನಮ್ಮ ದೇವರ ಹಸ್ತವು ಆತನ ಎಲ್ಲಾ ಶರಣಾರ್ಥಿಗಳನ್ನೂ ಪಾಲಿಸುವುದು; ಆತನನ್ನು ತೊರೆದುಬಿಟ್ಟವರೆಲ್ಲರೂ ಆತನ ಉಗ್ರವಾದ ಕೋಪಕ್ಕೆ ಗುರಿಯಾಗುವರು. ದಾರಿಯಲ್ಲಿ ನಮ್ಮನ್ನು ಶತ್ರುಗಳಿಂದ ರಕ್ಷಿಸುವುದಕ್ಕೋಸ್ಕರ ಸೈನ್ಯವನ್ನೂ, ಅಶ್ವಬಲವನ್ನೂ ಕೊಡಲು ಅರಸನಿಂದ ಸಹಾಯ ಕೇಳಲು ನಾಚಿಕೊಂಡಿದ್ದೆನು.
Kajti sram me je bilo, da od kralja zahtevam četo vojakov in konjenikov, da nam pomagajo zoper sovražnika na poti, ker smo kralju govorili, rekoč: »Roka našega Boga je za dobro nad vsemi tistimi, ki ga iščejo, toda njegova moč in njegov bes sta proti vsem tem, ki ga zapustijo.«
23 ೨೩ ಆದುದರಿಂದ ನಾವು ಉಪವಾಸಮಾಡಿ ದೇವರನ್ನು ಪ್ರಾರ್ಥಿಸಲು ಆತನು ನಮಗೆ ಪ್ರಸನ್ನನಾದನು.
Tako smo se postili in glede tega iskali svojega Boga in on je bil izprošen od nas.
24 ೨೪ ಅನಂತರ ನಾನು ಯಾಜಕರ ಮುಖ್ಯಸ್ಥರಲ್ಲಿ ಶೇರೇಬ್ಯ, ಹಷಬ್ಯ ಇವರ ಸಹೋದರರಲ್ಲಿ ಹತ್ತು ಜನರನ್ನೂ ಆರಿಸಿಕೊಂಡು ಅರಸನಿಂದಲೂ, ಅವನ ಮಂತ್ರಿಗಳಿಂದಲೂ, ಸರದಾರರಿಂದಲೂ ಮತ್ತು
Potem sem ločil dvanajst izmed vodij duhovnikov: Šerebjája, Hašabjája in deset od njihovih bratov z njimi
25 ೨೫ ಇಸ್ರಾಯೇಲರಿಂದಲೂ ನಮ್ಮ ದೇವರ ಆಲಯಕ್ಕೋಸ್ಕರ ಕಾಣಿಕೆಯಾಗಿ ಕೊಡಲ್ಪಟ್ಟ ಬೆಳ್ಳಿ ಬಂಗಾರವನ್ನೂ, ಸಾಮಾನುಗಳನ್ನೂ ತೂಕಮಾಡಿ ಅವರಿಗೆ ಒಪ್ಪಿಸಿದೆನು.
in jim odtehtal srebro, zlato in posode, celó daritev hiše našega Boga, ki so jih kralj, njegovi svetovalci, njegovi poveljniki in ves tam prisoten Izrael, darovali.
26 ೨೬ ಅವರ ಕೈಯಲ್ಲಿ ಕೊಟ್ಟ ಬೆಲೆಬಾಳುವ ಸಾಮಾನುಗಳ ತೂಕ: ಬೆಳ್ಳಿಯು ಆರುನೂರೈವತ್ತು ತಲಾಂತು, ಬಂಗಾರವು ನೂರು ತಲಾಂತು,
V njihove roke sem celo odtehtal šeststo petdeset talentov srebra in sto talentov srebrnih posod in sto talentov zlata,
27 ೨೭ ಬಂಗಾರದ ಇಪ್ಪತ್ತು ಬಟ್ಟಲುಗಳು ಪ್ರತಿಯೊಂದೂ ಸಾವಿರ ಪವನು; ಇವುಗಳಲ್ಲದೆ ಶ್ರೇಷ್ಠವಾದ ಶುಭ್ರತಾಮ್ರದ ಎರಡು ಪಾತ್ರೆಗಳಿದ್ದವು. ಅವು ಬಂಗಾರದಷ್ಟು ಬೆಲೆಯುಳ್ಳವುಗಳು.
tudi dvajset umivalnikov iz zlata za tisoč darejkov in dve posodi iz finega bakra, dragoceni kakor zlato.
28 ೨೮ ನಾನು ಅವರಿಗೆ, “ನೀವು ಯೆಹೋವನ ಸ್ವಕೀಯರು; ಆ ಪಾತ್ರೆಗಳೂ, ದೇವರ ವಸ್ತುಗಳು; ಆ ಬೆಳ್ಳಿಬಂಗಾರವೂ ನಿಮ್ಮ ಪೂರ್ವಿಕರ ದೇವರಾದ ಯೆಹೋವನಿಗೋಸ್ಕರ ಸಮರ್ಪಿತವಾದ ಕಾಣಿಕೆಯು.
Rekel sem jim: »Vi ste sveti Gospodu. Tudi posode so svete in srebro in zlato sta prostovoljno darovana Gospodu, Bogu vaših očetov.
29 ೨೯ ಆದುದರಿಂದ ನೀವು ಜಾಗರೂಕರಾಗಿದ್ದು ಯೆರೂಸಲೇಮಿನಲ್ಲಿರುವ ಯಾಜಕರ ಮತ್ತು ಲೇವಿಯರ ಪ್ರಧಾನರ ಮುಂದೆಯೂ ಇವುಗಳನ್ನು ತೂಕಮಾಡಿ ಯೆಹೋವನ ಆಲಯದ ಕೊಠಡಿಗಳಲ್ಲಿ ಇಡುವವರೆಗೂ ಕಾಯಿರಿ” ಎಂದು ಹೇಳಿದನು.
Pazite in varujte jih, dokler jih ne stehtamo pred vodji duhovnikov in Lévijevcev in vodji Izraelovih očetov v Jeruzalemu, v sobah Gospodove hiše.«
30 ೩೦ ಆ ಯಾಜಕರೂ ಮತ್ತು ಲೇವಿಯರೂ, ಯೆರೂಸಲೇಮಿನ ದೇವಾಲಯಕ್ಕೆ ತಲುಪಿಸುವುದಕ್ಕೋಸ್ಕರ ಬೆಳ್ಳಿಬಂಗಾರವನ್ನೂ, ಉಪಕರಣಗಳನ್ನೂ ತೂಕಮಾಡಿಸಿ ತಮ್ಮ ವಶದಲ್ಲಿಟ್ಟುಕೊಂಡರು.
Tako so duhovniki in Lévijevci vzeli težo srebra, zlata in posod, da jih prinesejo v Jeruzalem, v hišo našega Boga.
31 ೩೧ ನಾವು ಮೊದಲನೆಯ ತಿಂಗಳಿನ ಹನ್ನೆರಡನೆಯ ದಿನದಲ್ಲಿ ಅಹವಾ ನದಿಯನ್ನು ಬಿಟ್ಟು ಯೆರೂಸಲೇಮಿಗೆ ಹೊರಟೆವು. ನಮ್ಮ ದೇವರ ಹಸ್ತವು ನಮ್ಮನ್ನು ಪಾಲಿಸುತ್ತಾ ಇತ್ತು. ಆತನು ಶತ್ರುಗಳ ಮತ್ತು ದಾರಿಯಲ್ಲಿ ಹೊಂಚುಹಾಕುವವರ ಕೈಗೆ ಸಿಕ್ಕದಂತೆ ನಮ್ಮನ್ನು ತಪ್ಪಿಸಿದನು.
Potem smo se na dvanajsti dan prvega meseca odpravili od reke Ahavá, da gremo v Jeruzalem in roka našega Boga je bila nad nami in osvobodil nas je iz roke sovražnika in takih, ki ob poti prežijo v zasedi.
32 ೩೨ ನಾವು ಯೆರೂಸಲೇಮನ್ನು ಸೇರಿ ಮೂರು ದಿನ ವಿಶ್ರಮಿಸಿಕೊಂಡೆವು.
In prišli smo v Jeruzalem ter tam ostali tri dni.
33 ೩೩ ನಾಲ್ಕನೆಯ ದಿನ ನಮ್ಮ ದೇವರ ಆಲಯದಲ್ಲಿ ಊರೀಯನ ಮಗನಾದ ಮೆರೇಮೋತ್ ಎಂಬ ಯಾಜಕನಿಗೆ ಬೆಳ್ಳಿಬಂಗಾರವನ್ನೂ ಉಪಕರಣಗಳನ್ನೂ ತೂಕಮಾಡಿ ಒಂದೊಂದಾಗಿ ಎಣಿಸಿಕೊಟ್ಟೆವು. ಫೀನೆಹಾಸನ ವಂಶದವನಾದ ಎಲ್ಲಾಜಾರ್, ಯೇಷೂವನ ಮಗನಾದ ಯೋಜಾಬಾದ್, ಬಿನ್ನೂಯನ ಮಗನಾದ ನೋವದ್ಯ ಎಂಬ ಲೇವಿಯರು ಅವನ ಜೊತೆಯಲ್ಲಿದ್ದರು.
Torej na četrti dan so bile po roki Urijájevega sina Meremóta, duhovnika, srebro, zlato in posode stehtane v hiši našega Boga in z njim je bil Pinhásov sin Eleazar in z njim sta bila Lévijevca Ješúov sin Jozabád in Binújev sin Noádja,
34 ೩೪ ಆಗಲೇ ಎಲ್ಲವುಗಳ ತೂಕವು ಲಿಖಿತವಾಯಿತು.
po številu in po teži vsake in vsa teža je bila ob tistem času zapisana.
35 ೩೫ ದೇಶಾಂತರದ ಸೆರೆಯಿಂದ ಹಿಂತಿರುಗಿ ಬಂದವರು ಇಸ್ರಾಯೇಲರ ದೇವರಿಗೆ ತೊಂಭತ್ತಾರು ಟಗರುಗಳನ್ನೂ, ಎಪ್ಪತ್ತೇಳು ಕುರಿಮರಿಗಳನ್ನೂ, ಸಮಸ್ತ ಇಸ್ರಾಯೇಲರ ನಿಮಿತ್ತವಾಗಿ ಹನ್ನೆರಡು ಹೋತಗಳನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದರು. ಇವೆಲ್ಲಾ ಯೆಹೋವನಿಗೆ ಸರ್ವಾಂಗಹೋಮವೇ.
Tudi otroci tistih, ki so bili odvedeni proč, ki so prišli iz ujetništva, so darovali žgalne daritve Izraelovemu Bogu: dvanajst bikcev za ves Izrael, šestindevetdeset ovnov, sedeminsedemdeset jagnjet, dvanajst kozlov za daritev za greh. Vse to je bila žgalna daritev Gospodu.
36 ೩೬ ಆ ಮೇಲೆ ಅವರು ರಾಜಶಾಸನವನ್ನು ರಾಜೋದ್ಯೋಗಸ್ಥರಿಗೂ, ಹೊಳೆಯಾಚೆಯ ಪ್ರದೇಶಾಧಿಪತಿಗಳಿಗೂ ಒಪ್ಪಿಸಿದರು. ಇವರು ಜನರಿಗೂ ಮತ್ತು ದೇವಾಲಯಕ್ಕೂ ಸಹಾಯಮಾಡಿದರು.
Kraljeva naročila so izročili kraljevim poročnikom in voditeljem na tej strani reke in ti so podpirali ljudstvo in Božjo hišo.

< ಎಜ್ರನು 8 >