< ಆದಿಕಾಂಡ 14 >

1 ಆ ದಿನಗಳಲ್ಲಿ ಶಿನಾರಿನ ಅರಸನಾದ ಅಮ್ರಾಫೆಲನು, ಎಲ್ಲಜಾರಿನ ಅರಸನಾದ ಅರಿಯೋಕನು, ಏಲಾಮಿನ ಅರಸನಾದ ಕೆದೊರ್ಲಗೋಮರನು, ಗೋಯಿಮದ ಅರಸನಾದ ತಿದ್ಗಾಲನು ಈ ನಾಲ್ವರು ಈಗಿನ ಲವಣಸಮುದ್ರ ಎನ್ನಿಸಿಕೊಳ್ಳುವ ಸಿದ್ದೀಮ್,
וַיְהִי בִּימֵי אַמְרָפֶל מֶֽלֶךְ־שִׁנְעָר אַרְיוֹךְ מֶלֶךְ אֶלָּסָר כְּדָרְלָעֹמֶר מֶלֶךְ עֵילָם וְתִדְעָל מֶלֶךְ גּוֹיִֽם׃
2 ತಗ್ಗು ಪ್ರದೇಶದಲ್ಲಿ ಒಟ್ಟಾಗಿ ಕೂಡಿದ್ದ ಸೊದೋಮಿನ ಅರಸನಾದ ಬೆರಗನು, ಗೊಮೋರದ ಅರಸನಾದ ಬಿರ್ಶಗನು, ಅದ್ಮಾಹದ ಅರಸನಾದ ಶಿನಾಬನು, ಚೆಬೋಯಿಮನ ಅರಸನಾದ ಶೆಮೇಬರನ, ಬೇಲಗ (ಅಂದರೆ ಚೋಗರದ) ಎಂಬ ಐದು ಅರಸರ ವಿರುದ್ಧವಾಗಿ ಯುದ್ಧ ಮಾಡಿದರು.
עָשׂוּ מִלְחָמָה אֶת־בֶּרַע מֶלֶךְ סְדֹם וְאֶת־בִּרְשַׁע מֶלֶךְ עֲמֹרָה שִׁנְאָב ׀ מֶלֶךְ אַדְמָה וְשֶׁמְאֵבֶר מֶלֶךְ צביים צְבוֹיִים וּמֶלֶךְ בֶּלַע הִיא־צֹֽעַר׃
3 ಈ ಐದು ಅರಸರು ಈಗಿನ ಲವಣಸಮುದ್ರ ಎನ್ನಿಸಿಕೊಳ್ಳುವ ಸಿದ್ದೀಮ್, ತಗ್ಗಿನ ಪ್ರದೇಶದಲ್ಲಿ ಒಟ್ಟಾಗಿ ಕೂಡಿದ್ದರು.
כָּל־אֵלֶּה חָֽבְרוּ אֶל־עֵמֶק הַשִּׂדִּים הוּא יָם הַמֶּֽלַח׃
4 ಬೆರಗ ಮೊದಲಾದ ಈ ಐದು ಅರಸರು ಹನ್ನೆರಡು ವರ್ಷ ಕೆದೊರ್ಲಗೋಮರನಿಗೆ ಅಧೀನರಾಗಿದ್ದು ಹದಿಮೂರನೆಯ ವರ್ಷದಲ್ಲಿ ತಿರುಗಿ ಬಿದ್ದರು.
שְׁתֵּים עֶשְׂרֵה שָׁנָה עָבְדוּ אֶת־כְּדָרְלָעֹמֶר וּשְׁלֹשׁ־עֶשְׂרֵה שָׁנָה מָרָֽדוּ׃
5 ಹದಿನಾಲ್ಕನೆಯ ವರ್ಷದಲ್ಲಿ ಕೆದೊರ್ಲಗೋಮರನೂ ಅವನಿಗೆ ಸೇರಿದ್ದ ರಾಜರೂ ಬಂದು ಅಷ್ಟರೋತ್ ಕರ್ನಯಿಮಿನಲ್ಲಿ ರೆಫಾಯರನ್ನೂ ಹಾಮಿನಲ್ಲಿ ಜೂಜ್ಯರನ್ನೂ ಶಾವೆಕಿರ್ಯಾತಯಿಮಿನಲ್ಲಿ ಏಮಿಯರನ್ನೂ ಸೋಲಿಸಿದರು.
וּבְאַרְבַּע עֶשְׂרֵה שָׁנָה בָּא כְדָרְלָעֹמֶר וְהַמְּלָכִים אֲשֶׁר אִתּוֹ וַיַּכּוּ אֶת־רְפָאִים בְּעַשְׁתְּרֹת קַרְנַיִם וְאֶת־הַזּוּזִים בְּהָם וְאֵת הֽ͏ָאֵימִים בְּשָׁוֵה קִרְיָתָֽיִם׃
6 ಇದಲ್ಲದೆ ಸೇಯೀರೆಂಬ ಬೆಟ್ಟದ ಸೀಮೆಯಲ್ಲಿ ವಾಸವಾಗಿದ್ದ ಹೋರಿಯರನ್ನು, ಅಲ್ಲೇ ಸೋಲಿಸಿ ಮರಳುಗಾಡಿನ ಹತ್ತಿರವಿರುವ ಎಲ್ಪಾರಾನಿನ ವರೆಗೂ ಹಿಂದಟ್ಟಿದನು.
וְאֶת־הַחֹרִי בְּהַרְרָם שֵׂעִיר עַד אֵיל פָּארָן אֲשֶׁר עַל־הַמִּדְבָּֽר׃
7 ಆ ಮೇಲೆ ಅವರು ಹಿಂದಿರುಗಿಕೊಂಡು ಕಾದೇಶ್ ಎನ್ನುವ ಎನ್ಮಿಷ್ಟಾಟಿಗೆ ಬಂದು ಅಮಾಲೇಕ್ಯರ ಸಮಸ್ತ ನಾಡನ್ನೂ ಹಚಚೋನ್ ತಾಮರಿನಲ್ಲಿ ವಾಸವಾಗಿದ್ದ ಅಮೋರಿಯರನ್ನೂ ಗೆದ್ದರು.
וַיָּשֻׁבוּ וַיָּבֹאוּ אֶל־עֵין מִשְׁפָּט הִוא קָדֵשׁ וַיַּכּוּ אֶֽת־כָּל־שְׂדֵה הָעֲמָלֵקִי וְגַם אֶת־הָאֱמֹרִי הַיֹּשֵׁב בְּחַֽצְצֹן תָּמָֽר׃
8 ಆಗ ಸೊದೋಮ್, ಗೊಮೋರ, ಅದ್ಮಾಹ, ಚೆಬೋಯಿಮ್ ಹಾಗೂ ಚೋಗರೆಂಬ ಬೇಲಗದ ರಾಜರು ಹೊರಟು ಅವರಿಗೆದುರಾಗಿ,
וַיֵּצֵא מֶֽלֶךְ־סְדֹם וּמֶלֶךְ עֲמֹרָה וּמֶלֶךְ אַדְמָה וּמֶלֶךְ צביים צְבוֹיִם וּמֶלֶךְ בֶּלַע הִוא־צֹעַר וַיַּֽעַרְכוּ אִתָּם מִלְחָמָה בְּעֵמֶק הַשִּׂדִּֽים׃
9 ಅಂದರೆ ಏಲಾಮಿನ ರಾಜನಾದ ಕೆದೊರ್ಲಗೋಮರ್, ಗೋಯಿಮದ ರಾಜನಾದ ತಿದ್ಗಾಲ, ಶಿನಾರ್ ಅರಸನಾದ ಅಮ್ರಾಫೆಲ್, ಎಲ್ಲಸಾರಿನ ರಾಜನಾದ ಅರಿಯೋಕ ಇವರಿಗೆ ವಿರೋಧವಾಗಿ ಸಿದ್ದೀಮ್ ಎಂಬ ತಗ್ಗಿನಲ್ಲಿ ತಮ್ಮ ದಂಡನ್ನು ನಿಲ್ಲಿಸಿದರು. ಹೀಗೆ ನಾಲ್ಕು ಮಂದಿ ರಾಜರು ಐದು ಮಂದಿ ರಾಜರನ್ನು ಎದುರಿಸಿದರು.
אֵת כְּדָרְלָעֹמֶר מֶלֶךְ עֵילָם וְתִדְעָל מֶלֶךְ גּוֹיִם וְאַמְרָפֶל מֶלֶךְ שִׁנְעָר וְאַרְיוֹךְ מֶלֶךְ אֶלָּסָר אַרְבָּעָה מְלָכִים אֶת־הַחֲמִשָּֽׁה׃
10 ೧೦ ಆದರೆ ಸಿದ್ದೀಮ್ ತಗ್ಗು ಪ್ರದೇಶ ಕಲ್ಲರಗಿನ ಕೆಸರುಗುಣಿಗಳಿಂದ ತುಂಬಿತ್ತು. ಸೊದೋಮ್ ಗೊಮೋರಗಳ ರಾಜರ ಕಡೆಯವರು ಓಡಿಹೋಗುವಾಗ ಆ ಗುಣಿಗಳಲ್ಲಿ ಬಿದ್ದು ಸತ್ತರು; ಉಳಿದವರು ಬೆಟ್ಟಗಳಿಗೆ ಓಡಿಹೋದರು.
וְעֵמֶק הַשִׂדִּים בּֽ͏ֶאֱרֹת בֶּאֱרֹת חֵמָר וַיָּנֻסוּ מֶֽלֶךְ־סְדֹם וַעֲמֹרָה וַיִּפְּלוּ־שָׁמָּה וְהַנִּשְׁאָרִים הֶרָה נָּֽסוּ׃
11 ೧೧ ಗೆದ್ದ ಆ ನಾಲ್ಕು ಅರಸರು ಸೊದೋಮ್ ಗೊಮೋರ ಪಟ್ಟಣಗಳನ್ನು ಸೂರೆಮಾಡಿ ಅವುಗಳಲ್ಲಿದ್ದ ಎಲ್ಲಾ ಸಂಪತ್ತನ್ನೂ ದವಸವನ್ನೂ ತೆಗೆದುಕೊಂಡು ಹೋದರು.
וַיִּקְחוּ אֶת־כָּל־רְכֻשׁ סְדֹם וַעֲמֹרָה וְאֶת־כָּל־אָכְלָם וַיֵּלֵֽכוּ׃
12 ೧೨ ಸೊದೋಮಿನಲ್ಲಿ ವಾಸವಾಗಿದ್ದ ಅಬ್ರಾಮನ ತಮ್ಮನ ಮಗನಾದ ಲೋಟನನ್ನೂ ಅವನ ಆಸ್ತಿ ಸಹಿತ ಹಿಡಿದುಕೊಂಡು ಹೋದರು.
וַיִּקְחוּ אֶת־לוֹט וְאֶת־רְכֻשׁוֹ בֶּן־אֲחִי אַבְרָם וַיֵּלֵכוּ וְהוּא יֹשֵׁב בִּסְדֹֽם׃
13 ೧೩ ತಪ್ಪಿಸಿಕೊಂಡವನೊಬ್ಬನು, ಇಬ್ರಿಯನಾದ ಅಬ್ರಾಮನ ಬಳಿಗೆ ಬಂದು ಈ ಸಂಗತಿಯನ್ನು ತಿಳಿಸಿದನು. ಅಬ್ರಾಮನು ಅಮೋರಿಯನಾದ ಮಮ್ರೆಯನ ಮೋರೆ ತೋಪಿನ ಬಳಿಯಲ್ಲಿ ವಾಸವಾಗಿದ್ದನು. ಮಮ್ರೆಯನಿಗೆ ಎಷ್ಕೋಲ ಮತ್ತು ಆನೇರ ಎಂಬ ಸಹೋದರರಿದ್ದರು; ಇವರಿಬ್ಬರಿಗೂ ಅಬ್ರಾಮನಿಗೂ ಒಡಂಬಡಿಕೆಯಿತ್ತು.
וַיָּבֹא הַפָּלִיט וַיַּגֵּד לְאַבְרָם הָעִבְרִי וְהוּא שֹׁכֵן בְּאֵֽלֹנֵי מַמְרֵא הָאֱמֹרִי אֲחִי אֶשְׁכֹּל וַאֲחִי עָנֵר וְהֵם בַּעֲלֵי בְרִית־אַבְרָֽם׃
14 ೧೪ ಅಬ್ರಾಮನು ತನ್ನ ತಮ್ಮನ ಮಗನು ಸೆರೆಗೆ ಸಿಕ್ಕಿದ್ದನ್ನು ಕೇಳಿ ತನ್ನ ಮನೆಯಲ್ಲೇ ಹುಟ್ಟಿ ಬೆಳೆದ ಶಿಕ್ಷಿತರಾದ ಮುನ್ನೂರ ಹದಿನೆಂಟು ಮಂದಿ ಆಳುಗಳನ್ನು ಯುದ್ಧಕ್ಕೆ ಸಿದ್ಧಮಾಡಿಕೊಂಡು ಹೊರಟು ಆ ರಾಜರನ್ನು ದಾನೂರಿನವರೆಗೂ ಹಿಂದಟ್ಟಿದನು.
וַיִּשְׁמַע אַבְרָם כִּי נִשְׁבָּה אָחִיו וַיָּרֶק אֶת־חֲנִיכָיו יְלִידֵי בֵיתוֹ שְׁמֹנָה עָשָׂר וּשְׁלֹשׁ מֵאוֹת וַיִּרְדֹּף עַד־דָּֽן׃
15 ೧೫ ಅವನು ರಾತ್ರಿ ವೇಳೆಯಲ್ಲಿ ತನ್ನ ದಂಡನ್ನು ಎರಡು ಭಾಗಮಾಡಿ ತನ್ನ ಭಟರೊಡನೆ ಅವರ ಮೇಲೆ ಬಿದ್ದು, ಹೊಡೆದು, ದಮಸ್ಕ ಪಟ್ಟಣದ ಉತ್ತರಕಡೆಯಲ್ಲಿರುವ ಹೋಬಾ ಊರಿನ ತನಕ ಅವರನ್ನು ಹಿಂದಟ್ಟಿದ್ದನು.
וַיֵּחָלֵק עֲלֵיהֶם ׀ לַיְלָה הוּא וַעֲבָדָיו וַיַּכֵּם וֽ͏ַיִּרְדְּפֵם עַד־חוֹבָה אֲשֶׁר מִשְּׂמֹאל לְדַמָּֽשֶׂק׃
16 ೧೬ ರಾಜರು ಅಪಹರಿಸಿದ್ದ ಎಲ್ಲಾ ವಸ್ತುಗಳನ್ನು ಅವನು ತಿರುಗಿ ಪಡೆದುಕೊಂಡನು. ತನ್ನ ತಮ್ಮನ ಮಗನಾದ ಲೋಟನನ್ನೂ ಅವನ ಆಸ್ತಿಯನ್ನೂ ಬಿಡಿಸಿಕೊಂಡದ್ದಲ್ಲದೆ, ಸೆರೆಯಲ್ಲಿದ್ದ ಸ್ತ್ರೀಯರನ್ನೂ, ಉಳಿದಿದ್ದ ಜನರನ್ನು ಕರೆದುಕೊಂಡು ಬಂದನು.
וַיָּשֶׁב אֵת כָּל־הָרְכֻשׁ וְגַם אֶת־לוֹט אָחִיו וּרְכֻשׁוֹ הֵשִׁיב וְגַם אֶת־הַנָּשִׁים וְאֶת־הָעָֽם׃
17 ೧೭ ಅವನು ಕೆದೊರ್ಲಗೋಮರನ್ನೂ ಅವನೊಂದಿಗೆ ಇದ್ದ ರಾಜರನ್ನೂ ಸೋಲಿಸಿ ಬಂದ ಮೇಲೆ ಸೊದೋಮಿನ ಅರಸನು ಅವನನ್ನು ಅರಸನ ತಗ್ಗು ಎನ್ನಿಸಿಕೊಳ್ಳುವ ಶಾವೆ ತಗ್ಗಿನಲ್ಲಿ ಅಬ್ರಾಮನನ್ನು ಎದುರುಗೊಂಡನು.
וַיֵּצֵא מֶֽלֶךְ־סְדֹם לִקְרָאתוֹ אַחַרֵי שׁוּבוֹ מֽ͏ֵהַכּוֹת אֶת־כְּדָר־לָעֹמֶר וְאֶת־הַמְּלָכִים אֲשֶׁר אִתּוֹ אֶל־עֵמֶק שָׁוֵה הוּא עֵמֶק הַמֶּֽלֶךְ׃
18 ೧೮ ಸಾಲೇಮಿನ ಅರಸನಾದ ಮೆಲ್ಕೀಚೆದೆಕನು ಸಹ ಬಂದು ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ಕೊಟ್ಟನು. ಇವನು ಪರಾತ್ಪರನಾದ ದೇವರ ಯಾಜಕನಾಗಿದ್ದನು.
וּמַלְכִּי־צֶדֶק מֶלֶךְ שָׁלֵם הוֹצִיא לֶחֶם וָיָיִן וְהוּא כֹהֵן לְאֵל עֶלְיֽוֹן׃
19 ೧೯ ಇವನು ಅಬ್ರಾಮನನ್ನು ಆಶೀರ್ವದಿಸಿ, “ಭೂಮ್ಯಾಕಾಶವನ್ನು ನಿರ್ಮಾಣಮಾಡಿದ ಪರಾತ್ಪರನಾದ ದೇವರ ಆಶೀರ್ವಾದವು ಅಬ್ರಾಮನಿಗೆ ದೊರೆಯಲಿ;
וֽ͏ַיְבָרְכֵהוּ וַיֹּאמַר בָּרוּךְ אַבְרָם לְאֵל עֶלְיוֹן קֹנֵה שָׁמַיִם וָאָֽרֶץ׃
20 ೨೦ ಪರಾತ್ಪರನಾದ ದೇವರು ನಿನ್ನ ಶತ್ರುಗಳನ್ನು ನಿನ್ನ ಕೈಗೆ ಒಪ್ಪಿಸಿದ್ದಕ್ಕಾಗಿ ಆತನಿಗೆ ಸ್ತೋತ್ರ” ಎಂದು ಹೇಳಿದನು. ಅಬ್ರಾಮನು ತಾನು ಗೆದ್ದು ತಂದಿದ್ದ ಎಲ್ಲಾ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಯಾಜಕನಿಗೆ ಕೊಟ್ಟನು.
וּבָרוּךְ אֵל עֶלְיוֹן אֲשֶׁר־מִגֵּן צָרֶיךָ בְּיָדֶךָ וַיִּתֶּן־לוֹ מַעֲשֵׂר מִכֹּֽל׃
21 ೨೧ ಸೊದೋಮಿನ ಅರಸನು, ಅಬ್ರಾಮನಿಗೆ, “ನೀನು ಬಿಡಿಸಿ ತಂದ ಜನರನ್ನು ನನಗೆ ಒಪ್ಪಿಸು; ಆಸ್ತಿಯನ್ನು ನೀನೇ ತೆಗೆದುಕೋ” ಎಂದು ಹೇಳಿದನು.
וַיֹּאמֶר מֶֽלֶךְ־סְדֹם אֶל־אַבְרָם תֶּן־לִי הַנֶּפֶשׁ וְהָרְכֻשׁ קַֽח־לָֽךְ׃
22 ೨೨ ಅಬ್ರಾಮನು, ಸೊದೋಮಿನ ಅರಸನಿಗೆ,
וַיֹּאמֶר אַבְרָם אֶל־מֶלֶךְ סְדֹם הֲרִימֹתִי יָדִי אֶל־יְהוָה אֵל עֶלְיוֹן קֹנֵה שָׁמַיִם וָאָֽרֶץ׃
23 ೨೩ “ಒಂದು ದಾರವನ್ನಾಗಲಿ, ಕೆರದ ಬಾರನ್ನಾಗಲಿ ನಿನ್ನದರಲ್ಲಿ ಯಾವುದನ್ನೂ ನಾನು ತೆಗೆದುಕೊಳ್ಳುವುದಿಲ್ಲವೆಂದು ಭೂಮ್ಯಾಕಾಶಗಳನ್ನು ನಿರ್ಮಾಣಮಾಡಿದ ಪರಾತ್ಪರನಾದ ದೇವರಾಗಿರುವ ಯೆಹೋವನ ಕಡೆಗೆ ಕೈ ಎತ್ತಿ ಪ್ರಮಾಣಮಾಡುತ್ತೇನೆ. ‘ನನ್ನಿಂದ ಅಬ್ರಾಮನು ಐಶ್ವರ್ಯವಂತನಾದನೆಂದು ಹೇಳಿಕೊಳ್ಳುವುದಕ್ಕೆ ನಿನಗೆ ಆಸ್ಪದವಾಗಬಾರದು, ನನಗೆ ಏನೂ ಬೇಡ.’
אִם־מִחוּט וְעַד שְׂרֽוֹךְ־נַעַל וְאִם־אֶקַּח מִכָּל־אֲשֶׁר־לָךְ וְלֹא תֹאמַר אֲנִי הֶעֱשַׁרְתִּי אֶת־אַבְרָֽם׃
24 ೨೪ ಆಳುಗಳು ತಿಂದದ್ದು ಹೊರತು ನನ್ನ ಜೊತೆಯವರಾದ ಆನೇರ ಎಷ್ಕೋಲ ಮಮ್ರೆಯರಿಗೆ ಬರತಕ್ಕ ಪಾಲು ಮಾತ್ರ ಅವರಿಗೆ ಇರಲಿ” ಎಂದು ಹೇಳಿದನು.
בִּלְעָדַי רַק אֲשֶׁר אֽ͏ָכְלוּ הַנְּעָרִים וְחֵלֶק הֽ͏ָאֲנָשִׁים אֲשֶׁר הָלְכוּ אִתִּי עָנֵר אֶשְׁכֹּל וּמַמְרֵא הֵם יִקְחוּ חֶלְקָֽם׃

< ಆದಿಕಾಂಡ 14 >