< ಆದಿಕಾಂಡ 18 >

1 ಅಬ್ರಹಾಮನು ಬಿಸಿಲೇರಿದಾಗ ಮಮ್ರೆಯ ಮೋರೆ ತೋಪಿನ ತನ್ನ ಗುಡಾರದ ಬಾಗಿಲಲ್ಲಿ ಕುಳಿತಿರುವಾಗ ಯೆಹೋವನು ಅವನಿಗೆ ಪ್ರತ್ಯಕ್ಷನಾದನು.
Ukázal se pak jemu Hospodin v rovině Mamre; a on seděl u dveří stanu, když veliké horko na den bylo.
2 ಹೇಗೆಂದರೆ, ಅಬ್ರಹಾಮನು ಕಣ್ಣೆತ್ತಿ ನೋಡಲು ಅವನೆದುರಿನಲ್ಲಿ ಮೂವರು ಪುರುಷರು ನಿಂತಿದ್ದರು. ಕೂಡಲೆ ಅವರನ್ನು ಎದುರುಗೊಳ್ಳುವುದಕ್ಕೆ ಅವನು ಗುಡಾರದ ಬಾಗಿಲಿನಿಂದ ಓಡಿ ಹೋಗಿ ತಲೆಬಾಗಿ ನಮಸ್ಕರಿಸಿ.
A když pozdvihl očí svých, viděl, a aj, tři muži stáli naproti němu. Kteréžto jakž uzřel, běžel jim vstříc ode dveří stanu, a sklonil se až k zemi.
3 “ಕರ್ತನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರೆತಿದ್ದರೆ; ದಾಸನ ಗುಡಾರಕ್ಕೆ ದಯಮಾಡದೆ ಮುಂದೆ ಹೋಗಬೇಡಿರಿ. ನೀವು ದಾಸನಿರುವ ಸ್ಥಳದ ಹತ್ತಿರ ಹಾದು ಹೋಗುತ್ತೀರಲ್ಲಾ.
A řekl: Pane můj, jestliže jsem nyní nalezl milost před očima tvýma, prosím, nepomíjej služebníka svého.
4 ನೀರು ತರಿಸಿಕೊಡುತ್ತೇನೆ; ನಿಮ್ಮ ಕಾಲುಗಳನ್ನು ತೊಳೆದುಕೊಂಡು ಮರದ ನೆರಳಿನಲ್ಲಿ ವಿಶ್ರಮಿಸಿಕೊಳ್ಳಿರಿ.
Přineseno bude trochu vody, a umyjete nohy své, a odpočinete pod stromem.
5 ಸ್ವಲ್ಪ ಆಹಾರ ತರುತ್ತೇನೆ, ಊಟವಾದ ಮೇಲೆ ನೀವು ಮುಂದಕ್ಕೆ ಪ್ರಯಾಣ ಮಾಡಬಹುದು” ಎನ್ನಲು ಅವರು, “ನೀನು ಹೇಳಿದಂತೆ ಮಾಡಬಹುದು” ಅಂದರು.
Zatím přinesu kus chleba, a posilníte srdce svého; potom půjdete, poněvadž mimo služebníka svého jdete. I řekli: Tak učiň, jakž jsi mluvil.
6 ಆಗ ಅಬ್ರಹಾಮನು ಗುಡಾರದಲ್ಲಿದ್ದ ಸಾರಳ ಬಳಿಗೆ ಓಡಿಹೋಗಿ ಆಕೆಗೆ, “ಹಸನಾದ ಮೂರು ಸೇರು ಹಿಟ್ಟನ್ನು ನಾದಿ ಬೇಗ ರೊಟ್ಟಿಗಳನ್ನು ಮಾಡು” ಎಂದು ಹೇಳಿದನು.
Tedy pospíšil Abraham do stanu k Sáře, a řekl: Spěšně tři míry mouky bělné zadělej, a napec podpopelných chlebů.
7 ಆ ಮೇಲೆ ಅವನು ದನಗಳ ಕಡೆಗೆ ಓಡಿಹೋಗಿ ಕೊಬ್ಬಿದ ಎಳೇ ಕರುವನ್ನು ತೆಗೆದು ಆಳಿನ ಕೈಗೆ ಕೊಟ್ಟನು.
Abraham pak běžel k stádu; a vzav tele mladé a dobré, dal služebníku, kterýžto pospíšil připraviti je.
8 ಆಳು ಬೇಗನೆ ಕೊಬ್ಬಿದ ಕರುವನ್ನು ಕಡಿದು, ಅಡಿಗೆ ಮಾಡಿದನು. ತರುವಾಯ ಅಬ್ರಹಾಮನು ಹಾಲು ಮೊಸರನ್ನೂ ಅಡಿಗೆ ಮಾಡಿದ ಮಾಂಸವನ್ನೂ ತೆಗೆದುಕೊಂಡು ಬಂದು ಆ ಮನುಷ್ಯರಿಗೆ ಬಡಿಸಿದನು. ಅವರು ಮರದ ಕೆಳಗೆ ಕುಳಿತು ಊಟ ಮಾಡುವವರೆಗೂ ಅವನು ಹತ್ತಿರ ನಿಂತು ಅವರಿಗೆ ಉಪಚಾರ ಮಾಡಿದನು.
Potom vzav másla a mléka, i tele, kteréž připravil, položil před ně; sám pak stál při nich pod stromem, i jedli.
9 ಬಳಿಕ ಅವರು ಅವನಿಗೆ, “ನಿನ್ನ ಪತ್ನಿಯಾದ ಸಾರಳು ಎಲ್ಲಿದ್ದಾಳೆ” ಎಂದು ಕೇಳಲು ಅವನು “ಅಗೋ, ಗುಡಾರದಲ್ಲಿದ್ದಾಳೆ” ಎಂದನು.
Řekli pak jemu: Kde jest Sára manželka tvá? Kterýžto odpověděl: Teď v stanu.
10 ೧೦ ಅದಕ್ಕೆ ಆತನು, “ಬರುವ ವರ್ಷ ಇದೇ ವೇಳೆಗೆ ನಾನು ತಪ್ಪದೆ ತಿರುಗಿ ನಿನ್ನ ಬಳಿಗೆ ಬರುತ್ತೇನೆ; ಬಂದಾಗ ನಿನ್ನ ಪತ್ನಿಯಾದ ಸಾರಳಿಗೆ ಮಗನಿರುವನು” ಎಂದನು. ಆ ಮಾತು ಹಿಂದೆ ಗುಡಾರದ ಬಾಗಿಲಲ್ಲಿ ನಿಂತಿದ್ದ ಸಾರಳ ಕಿವಿಗೆ ಬಿತ್ತು.
A řekl: Jistotně se navrátím k tobě vedlé času života, a aj, syna míti bude Sára manželka tvá. Ale Sára poslouchala u dveří stanu, kteréž byly za ním.
11 ೧೧ ಅಬ್ರಹಾಮನೂ ಸಾರಳೂ ಬಹುವೃದ್ಧರಾಗಿದ್ದರು; ಸಾರಳಿಗೆ ಮುಟ್ಟು ನಿಂತು ಹೋಗಿತ್ತು.
Abraham pak i Sára byli staří a sešlého věku, a přestal byl Sáře běh ženský.
12 ೧೨ ಹೀಗಿರಲಾಗಿ ಸಾರಳು, “ನನ್ನಂಥ ಮುದುಕಿಗೆ ಭೋಗವಾದೀತೇ?” ನನ್ನ ಯಜಮಾನನೂ ಮುದುಕನಲ್ಲವೇ ಎಂದು ತನ್ನೊಳಗೆ ನಕ್ಕಳು.
I smála se Sára sama v sobě, řkuci: Teprv když jsem se sstarala, v rozkoše se vydám? A ještě i pán můj se sstaral.
13 ೧೩ ಯೆಹೋವನು ಅಬ್ರಹಾಮನಿಗೆ, “ಸಾರಳು ನಕ್ಕು, ಮುದುಕಿಯಾದ, ನಾನು ಮಗುವನ್ನು ಹೆರುವುದಾದೀತೇ ಎಂದು ಹೇಳಿದ್ದೇನು?
Tedy řekl Hospodin Abrahamovi: Proč jest se smála Sára, řkuci: Zdaliž opravdu ještě roditi budu, a já se sstarala?
14 ೧೪ ಯೆಹೋವನಿಗೆ ಅಸಾಧ್ಯವಾದದ್ದುಂಟೋ? ನಾನು ಹೇಳಿದಂತೆಯೇ ಬರುವ ವರ್ಷದ ಇದೇ ಕಾಲದಲ್ಲಿ ನಾನು ನಿನ್ನ ಬಳಿಗೆ ಬಂದಾಗ ಸಾರಳಿಗೆ ಮಗನಿರುವನು” ಎಂದು ಹೇಳಿದನು.
Zdaliž co skrytého bude před Hospodinem? K času určitému navrátím se k tobě vedlé času života, a Sára bude míti syna.
15 ೧೫ ಆಗ ಸಾರಳು ಭಯಪಟ್ಟು, “ನಾನು ನಗಲಿಲ್ಲ” ಎಂದು ಸುಳ್ಳಾಡಿದಾಗ, ಆತನು ಅದಕ್ಕೆ, “ಹಾಗಲ್ಲ, ನೀನು ನಕ್ಕಿದ್ದುಂಟು” ಎಂದನು.
Zapřela pak Sára a řekla: Nesmála jsem se; nebo se bála. I řekl Hospodin: Neníť tak, ale smála jsi se.
16 ೧೬ ತರುವಾಯ ಆ ಮನುಷ್ಯರು ಅಲ್ಲಿಂದ ಹೊರಟು ಸೊದೋಮಿನ ಕಡೆಗೆ ನೋಡಿದರು. ಅಬ್ರಹಾಮನು ಅವರನ್ನು ಕಳುಹಿಸಿಕೊಡಲು ಅವರ ಜೊತೆಯಲ್ಲೇ ಹೋದನು.
Tedy vstavše odtud muži ti, obrátili se k Sodomě; Abraham pak šel s nimi, aby je provodil.
17 ೧೭ ಆಗ ಯೆಹೋವನು ತನ್ನೊಳಗೆ, “ನಾನು ಮಾಡಬೇಕೆಂದಿರುವ ಕಾರ್ಯವನ್ನು ಅಬ್ರಹಾಮನಿಗೆ ಮರೆಮಾಡುವುದು ಸರಿಯೋ?
A řekl Hospodin: Zdali já zatajím před Abrahamem, což dělati budu?
18 ೧೮ ಅವನಿಂದ ಬಲಿಷ್ಠವಾದ ಮಹಾ ಜನಾಂಗವು ಹುಟ್ಟಬೇಕಲ್ಲಾ; ಅವನ ಮೂಲಕ ಭೂಮಿಯ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದಲ್ಲಾ;
Poněvadž Abraham jistotně bude v národ veliký a silný, a požehnáni budou v něm všickni národové země.
19 ೧೯ ಅವನು ತನ್ನ ಮಕ್ಕಳಿಗೂ ಮನೆಯವರಿಗೂ ನ್ಯಾಯ ನೀತಿಗಳನ್ನು ತಿಳಿಸಿ ಯೆಹೋವನ ಮಾರ್ಗವನ್ನು ಅನುಸರಿಸಬೇಕೆಂದು ಬೋಧಿಸುವಂತೆ ಅವನನ್ನು ನಾನು ಆರಿಸಿಕೊಂಡೆನಲ್ಲಾ; ಅವನು ಹೀಗೆ ಮಾಡುವುದರಿಂದ ಯೆಹೋವನಾದ ನನ್ನ ವಾಗ್ದಾನವು ನೆರವೇರುವುದು” ಅಂದುಕೊಂಡನು.
Nebo znám jej; protož přikáže synům svým a domu svému po sobě, aby ostříhali cesty Hospodinovy, a činili spravedlnost a soud, aťby naplnil Hospodin Abrahamovi, což mu zaslíbil.
20 ೨೦ ಇದಲ್ಲದೆ ಯೆಹೋವನು, “ಸೊದೋಮ್ ಗೊಮೋರಗಳ ದೊಡ್ಡ ಮೊರೆ ನನಗೆ ಮುಟ್ಟಿತು; ಆ ಊರಿನವರ ಮೇಲೆ ಹೊರಿಸಿರುವ ಪಾಪವು ಎಷ್ಟೋ ಘೋರವಾದದ್ದು,
I řekl Hospodin: Proto že rozmnožen jest křik Sodomských a Gomorských, a hřích jejich že obtížen jest náramně:
21 ೨೧ ನಾನು ಇಳಿದು ಹೋಗಿ, ನನಗೆ ಮುಟ್ಟಿದ ಮೊರೆಯಂತೆಯೇ ಅವರು ಮಾಡಿರುವರೋ ಇಲ್ಲವೋ ಎಂದು ನೋಡಿ ತಿಳಿದುಕೊಳ್ಳುತ್ತೇನೆ” ಎಂದನು.
Sstoupím již a pohledím, jestliže podle křiku jejich, kterýž přišel ke mně, činili, důjde na ně setření; a pakli toho není, zvím.
22 ೨೨ ಆ ಮನುಷ್ಯರು ಅಲ್ಲಿಂದ ಸೊದೋಮಿನ ಕಡೆಗೆ ಹೋದರು; ಆದರೆ ಅಬ್ರಹಾಮನು ಯೆಹೋವನಿಗೆ ಎದುರಾಗಿ ಇನ್ನೂ ನಿಂತುಕೊಂಡಿದ್ದನು.
A obrátivše se odtud muži, šli do Sodomy; Abraham pak ještě stál před Hospodinem.
23 ೨೩ ಆಗ ಅಬ್ರಹಾಮನು ಹತ್ತಿರಕ್ಕೆ ಬಂದು, “ನೀನು ದುಷ್ಟರ ಸಂಗಡ ನೀತಿವಂತರನ್ನೂ ನಾಶಮಾಡುವಿಯಾ?
V tom přistoupiv Abraham, řekl: Zdali také zahladíš spravedlivého s bezbožným?
24 ೨೪ ಒಂದು ವೇಳೆ ಆ ಪಟ್ಟಣದೊಳಗೆ ಐವತ್ತು ಮಂದಿ ನೀತಿವಂತರಿದ್ದಾರು; ಅದರಲ್ಲಿ ಐವತ್ತು ಮಂದಿ ನೀತಿವಂತರಿದ್ದರೂ ಆ ಸ್ಥಳವನ್ನು ಉಳಿಸದೆ ನಾಶಮಾಡುವಿಯಾ?
Bude-li padesáte spravedlivých v tom městě, zdali předce zahubíš, a neodpustíš místu pro padesáte spravedlivých, kteříž jsou v něm?
25 ೨೫ ಆ ರೀತಿಯಾಗಿ ದುಷ್ಟರಿಗೂ ಶಿಷ್ಟರಿಗೂ ಭೇದ ಮಾಡದೆ ದುಷ್ಟರ ಸಂಗಡ ನೀತಿವಂತರನ್ನೂ ಸಂಹರಿಸುವುದು ನಿನ್ನಿಂದ ಎಂದಿಗೂ ಆಗಬಾರದು; ಸರ್ವಲೋಕಕ್ಕೆ ನ್ಯಾಯತೀರಿಸುವವನು ನ್ಯಾಯವನ್ನೇ ನಡಿಸುವನಲ್ಲವೇ” ಎಂದು ಹೇಳಲು.
Odstup to od tebe, abys takovou věc učiniti měl, abys usmrtil spravedlivého s bezbožným; takť by byl spravedlivý jako bezbožný. Odstup to od tebe; zdaliž soudce vší země neučiní soudu?
26 ೨೬ ಯೆಹೋವನು, “ಸೊದೋಮನಲ್ಲಿ ಐವತ್ತು ಮಂದಿ ನೀತಿವಂತರು ನನಗೆ ಸಿಕ್ಕಿದರೆ ಅವರ ನಿಮಿತ್ತ ಪಟ್ಟಣವನ್ನೆಲ್ಲಾ ಉಳಿಸುವೆನು” ಎಂದನು.
I řekl Hospodin: Jestliže naleznu v Sodomě, v městě tom, padesáte spravedlivých, odpustím všemu tomu místu pro ně.
27 ೨೭ ಅದಕ್ಕೆ ಅಬ್ರಹಾಮನು, “ಇಗೋ, ಮಣ್ಣೂ ಬೂದಿಯೂ ಆಗಿರುವ ನಾನು ಸ್ವಾಮಿಯ ಸಂಗಡ ವಾದಿಸುವುದಕ್ಕೆ ಧೈರ್ಯಗೊಂಡಿದ್ದೇನೆ;
A odpovídaje Abraham, řekl: Aj, nyní chtěl bych mluviti ku Pánu svému, ačkoli jsem prach a popel.
28 ೨೮ ಒಂದು ವೇಳೆ ಐವತ್ತು ಮಂದಿ ನೀತಿವಂತರಲ್ಲಿ ಐದು ಮಂದಿ ಕಡಿಮೆ ಇದ್ದರೆ ಪಟ್ಟಣವನ್ನೆಲ್ಲಾ ನಾಶ ಮಾಡುವಿಯಾ?” ಎಂದು ಕೇಳಲು ಯೆಹೋವನು, “ಅಲ್ಲಿ ನಲ್ವತ್ತೈದು ಮಂದಿ ನೀತಿವಂತರು ಸಿಕ್ಕಿದರೆ ಅದನ್ನು ನಾಶ ಮಾಡುವುದಿಲ್ಲ” ಅಂದನು.
Co pak, nedostane-li se ku padesáti spravedlivým pěti, zdali zkazíš pro těch pět všecko město? I řekl: Nezahladím, jestliže najdu tam čtyřidceti pět.
29 ೨೯ ಅಬ್ರಹಾಮನು ಆತನ ಸಂಗಡ ಇನ್ನೂ ಮಾತನಾಡಿ, “ಒಂದು ವೇಳೆ ಅಲ್ಲಿ ನಲ್ವತ್ತು ಮಂದಿ ಸಿಕ್ಕಾರು” ಎನ್ನಲು ಆತನು, “ನಲ್ವತ್ತು ಮಂದಿ ಸಿಕ್ಕಿದರೆ ಆ ಪಟ್ಟಣವನ್ನು ನಾಶ ಮಾಡುವುದಿಲ್ಲ” ಎಂದನು.
Opět mluvil Abraham a řekl: Snad nalezeno bude tam čtyřidceti? A odpověděl: Neučiním pro těch čtyřidceti.
30 ೩೦ ಅಬ್ರಹಾಮನು, “ಕರ್ತನೇ, ಕೋಪಮಾಡಬಾರದು; ಇನ್ನೂ ಮಾತನಾಡುತ್ತೇನೆ; ಒಂದು ವೇಳೆ ಮೂವತ್ತು ಮಂದಿ ಅಲ್ಲಿ ಸಿಕ್ಕಾರು” ಎನ್ನಲು ಆತನು, “ಅಲ್ಲಿ ಮೂವತ್ತು ಮಂದಿ ಸಿಕ್ಕಿದರೆ ಅದನ್ನು ನಾಶ ಮಾಡುವುದಿಲ್ಲ” ಅಂದನು.
I řekl Abraham: Prosím, nechť se nehněvá Pán můj, že mluviti budu: Snad se jich nalezne tam třidceti? Odpověděl: Neučiním, jestliže naleznu tam třidceti.
31 ೩೧ ಅವನು, “ಇಗೋ, ಸ್ವಾಮಿಯ ಸಂಗಡ ಮಾತನಾಡುವುದಕ್ಕೆ ಧೈರ್ಯಗೊಂಡಿದ್ದೇನೆ; ಒಂದು ವೇಳೆ ಇಪ್ಪತ್ತು ಮಂದಿ ಅಲ್ಲಿ ಸಿಕ್ಕಾರು” ಎನ್ನಲು ಆತನು, “ಇಪ್ಪತ್ತು ಮಂದಿಯಿದ್ದರೆ ಅವರ ನಿಮಿತ್ತ ಆ ಪಟ್ಟಣವನ್ನು ಉಳಿಸುವೆನು, ನಾಶ ಮಾಡುವುದಿಲ್ಲ” ಅಂದನು.
A opět řekl: Aj, nyní počal jsem mluviti ku Pánu svému: Snad se nalezne tam dvadceti? Odpověděl: Nezahladím i pro těch dvadceti.
32 ೩೨ ಅಬ್ರಹಾಮನು, “ಕರ್ತನೇ, ಸಿಟ್ಟಾಗಬಾರದು; ಇನ್ನು ಒಂದೇ ಸಾರಿ ಮಾತನಾಡುತ್ತೇನೆ; ಒಂದು ವೇಳೆ ಹತ್ತು ಮಂದಿ ಸಿಕ್ಕಾರು” ಎನ್ನಲು ಆತನು, “ಹತ್ತು ಮಂದಿಯ ನಿಮಿತ್ತವೂ ಅದನ್ನು ಉಳಿಸುವೆನು, ನಾಶ ಮಾಡುವುದಿಲ್ಲ.” ಎಂದನು.
Řekl ještě: Prosím, ať se nehněvá Pán můj, jestliže jednou ještě mluviti budu: Snad se jich najde tam deset? Odpověděl: Nezahladím i pro těch deset.
33 ೩೩ ಯೆಹೋವನು ಅಬ್ರಹಾಮನ ಸಂಗಡ ಮಾತನಾಡುವುದನ್ನು ನಿಲ್ಲಿಸಿ ಅಲ್ಲಿಂದ ಹೊರಟು ಹೋದನು; ಅಬ್ರಹಾಮನು ತನ್ನ ಸ್ಥಳಕ್ಕೆ ಹಿಂದಿರುಗಿ ಹೋದನು.
I odšel Hospodin, když dokonal řeč k Abrahamovi; Abraham pak navrátil se k místu svému.

< ಆದಿಕಾಂಡ 18 >