< ಆದಿಕಾಂಡ 19 >

1 ಆ ದೂತರಿಬ್ಬರು ಸಾಯಂಕಾಲದಲ್ಲಿ ಸೊದೋಮಿಗೆ ಬಂದಾಗ ಲೋಟನು ಸೊದೋಮಿನ ಊರು ಬಾಗಿಲಲ್ಲಿ ಕುಳಿತುಕೊಂಡಿದ್ದನು. ಅವನು ಅವರನ್ನು ಕಂಡಾಗ ಎದ್ದು, ಎದುರುಗೊಂಡು ತಲೆ ಬಾಗಿ ನಮಸ್ಕರಿಸಿ,
Malaika wawili wakaja Sodoma jioni, wakati ambao Lutu alikuwa amekaa langoni mwa Sodoma. Lutu akawaona, akainuka kuwalaki, na akainama uso wake chini ardhini.
2 “ಸ್ವಾಮಿಗಳೇ, ನಿಮ್ಮ ದಾಸನ ಮನೆಗೆ ಬಂದು ಇಳಿದುಕೊಂಡು ಕಾಲುಗಳನ್ನು ತೊಳೆದುಕೊಳ್ಳಿರಿ; ಬೆಳಿಗ್ಗೆ ನಿಮ್ಮ ಮಾರ್ಗ ಹಿಡಿದುಕೊಂಡು ಹೋಗಬಹುದು” ಅಂದನು. ಅವರು, “ಹಾಗಲ್ಲ, ಬೀದಿಯಲ್ಲೇ ರಾತ್ರಿ ಕಳೆಯುತ್ತೇವೆ” ಎನ್ನಲು
Akasema, Tafadhari Bwana zangu, nawasihi mgeuke mwende kwenye nyumba ya mtumishi wenu, mlale pale usiku na muoshe miguu yenu. Kisha muamke asubuhi na mapema muondoke.” Nao wakasema, “Hapana, usiku tutalala mjini.”
3 ಅವನು ಅವರನ್ನು ಬಹಳ ಬಲವಂತ ಮಾಡಿದ್ದರಿಂದ ಅವರು ಅವನ ಬಳಿಯಲ್ಲಿ ಇಳಿದುಕೊಳ್ಳುವುದಕ್ಕೆ ಒಪ್ಪಿದರು. ಅವರು ಮನೆಗೆ ಬಂದಾಗ ಅವನು ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿ ಔತಣವನ್ನು ಮಾಡಿಸಲು ಅವರು ಊಟಮಾಡಿದರು.
Lakini akawasihi sana, mwishowe wakaondoka pamoja nae, na wakaingia katika nyumba yake. Akaandaa chakula na kuoka mkate usiotiwa chachu, wakala.
4 ಅವರು ಮಲಗುವುದಕ್ಕಿಂತ ಮುಂಚೆ ಹುಡುಗರು ಮುದುಕರು ಸಹಿತವಾಗಿ ಸೊದೋಮಿನ ಪಟ್ಟಣದವರೆಲ್ಲರೂ ಒಗ್ಗಟ್ಟಾಗಿ ಮನೆಯನ್ನು ಮುತ್ತಿಗೆ ಹಾಕಿ,
Lakini kabla hawaja lala, wanaume wa mji, wa Sodoma, vijana kwa wazee wakaizunguka nyumba, wanaume wote kutoka kila kona ya mji.
5 ಲೋಟನಿಗೆ, “ಈ ರಾತ್ರಿ ನಿನ್ನ ಬಳಿಗೆ ಬಂದ ಮನುಷ್ಯರು ಎಲ್ಲಿ? ಅವರನ್ನು ಹೊರಕ್ಕೆ ಕರೆದುಕೊಂಡು ಬಾ; ಅವರೊಡನೆ ನಮಗೆ ಸಂಗಮವಾಗಬೇಕೆಂದು” ಕೂಗಿ ಹೇಳಿದರು.
Wakamwita Lutu, na kumwambia, “Wale wanaume walioingia kwako usiku wakowapi? watoe hapa nje waje kwetu, ili tuweze kulala nao.”
6 ಲೋಟನು ಅವರ ಬಳಿಗೆ ಹೊರಕ್ಕೆ ಬಂದು ತನ್ನ ಹಿಂದೆ ಕದಹಾಕಿ,
Lutu akatoka nje na akafunga mlango.
7 “ಅಣ್ಣಂದಿರೇ, ಈ ದುಷ್ಟತನವನ್ನು ಮಾಡಬೇಡಿರಿ.
Akasema, “Nawasihi, ndugu zangu, msitende uovu.
8 ಕೇಳಿರಿ, ನನಗೆ ಪುರುಷನನ್ನು ಅರಿಯದ ಇಬ್ಬರು ಹೆಣ್ಣುಮಕ್ಕಳು ಇದ್ದಾರೆ; ಅವರನ್ನಾದರೂ ನಿಮಗೆ ತಂದು ಒಪ್ಪಿಸುತ್ತೇನೆ; ಅವರನ್ನು ಮನಸ್ಸು ಬಂದಂತೆ ಮಾಡಬಹುದು; ಆದರೆ ಆ ಮನುಷ್ಯರು ನನ್ನ ಆಶ್ರಯಕ್ಕೆ ಬಂದವರು; ಅವರಿಗೆ ಏನೂ ಮಾಡಕೂಡದು” ಎಂದು ಹೇಳಿದನು.
Tazama, nina mabinti wawili ambao hawajawahi kulala na mwanaume yeyote. Nawaomba tafadhari niwalete kwenu, na muwafanyie lolote muonalo kuwa jema machoni penu. Msitende lolote kwa wanaume hawa, kwa kuwa wamekuja chini ya kivuli cha dari yangu.”
9 ಅವರು ದಾರಿ ಬಿಡು ಎಂದು ಹೇಳಿ, “ಇವನು ಯಾರೋ ಒಬ್ಬ ಪರದೇಶಿಯಾಗಿ ಬಂದು ಈಗ ನ್ಯಾಯಾಧಿಪತಿಯಾಗಬೇಕೆಂದಿದ್ದಾನೆ; ಆ ಮನುಷ್ಯರಿಗೆ ಕೇಡು ಮಾಡುವುದಕ್ಕಿಂತ ಹೆಚ್ಚಾಗಿ ನಿನಗೇ ಕೇಡು ಮಾಡುತ್ತೇವೆ” ಎಂದು ಹೇಳಿ ಲೋಟನ ಮೇಲೆ ಬಿದ್ದು ಬಹಳವಾಗಿ ತುಳಿದು ಬಾಗಿಲನ್ನು ಮುರಿಯಲು ಸಮೀಪಕ್ಕೆ ಬಂದರು.
Wakasema, “Ondoka hapa!” Wakasema pia, huyu alikuja kukaa hapa kama mgeni, na sasa amekuwa mwamuzi! Sasa tutakushugulilia vibaya wewe kuliko wao.” Wakamsonga sana huyo mtu, huyo Lutu, na wakakaribia kuvunja mlango.
10 ೧೦ ಆದರೆ ಒಳಗಿದ್ದ ಆ ಮನುಷ್ಯರು ಕೈಚಾಚಿ ಲೋಟನನ್ನು ತಮ್ಮ ಕಡೆಗೆ ಎಳೆದುಕೊಂಡು ಮನೆಯೊಳಗೆ ಸೇರಿಸಿ ಕದ ಮುಚ್ಚಿದರು.
Lakini wale wanaume wakamkamata Lutu na kumweka ndani na wakafunga mlango.
11 ೧೧ ಇದಲ್ಲದೆ ಅವರು ಮನೆಯ ಹೊರಗಿದ್ದ ಮನುಷ್ಯರಿಗೆ ಚಿಕ್ಕವರಿಗೂ ದೊಡ್ಡವರಿಗೂ ಕೂಡ ಕಣ್ಣು ಮೊಬ್ಬಾಗುವಂತೆ ಮಾಡಿದ್ದರಿಂದ ಅವರು ಬಾಗಿಲು ಯಾವುದೆಂದು ತಿಳಿಯದೆ ಬೇಸರಗೊಂಡರು.
Kisha wale wageni wa Lutu wakawapiga kwa upofu wale wanaume waliokuwa nje ya nyumba, vijana na wazee kwa pamoja, kiasi kwamba wakachoka wakati wakiutafuta mlango.
12 ೧೨ ಆಗ ಆ ದೂತರು ಲೋಟನಿಗೆ, “ಇಲ್ಲಿ ನಿನಗೆ ಇನ್ನಾರಿದ್ದಾರೆ? ಅಳಿಯಂದಿರನ್ನೂ ಗಂಡು ಮತ್ತು ಹೆಣ್ಣು ಮಕ್ಕಳನ್ನೂ ಪಟ್ಟಣದಲ್ಲಿ ನಿನಗಿರುವ ಎಲ್ಲರನ್ನೂ ಊರ ಹೊರಕ್ಕೆ ಕರೆದುಕೊಂಡು ಬಾ.
Basi wale watu wakamwambia Lutu, Je una mtu mwingine yeyote hapa? wakwe zako, wanao na mabinti zako, na yeyote mwingine katika huu mji, ukawatoe hapa.
13 ೧೩ ನಾವು ಈ ಸ್ಥಳವನ್ನು ನಾಶಮಾಡುವುದಕ್ಕೆ ಬಂದವರು. ಇಲ್ಲಿಯವರ ವಿಷಯವಾಗಿ ಬಲು ದೊಡ್ಡ ಮೊರೆಯು ಯೆಹೋವನಿಗೆ ಮುಟ್ಟಿದ್ದರಿಂದ ಇವರನ್ನು ನಾಶಮಾಡುವುದಕ್ಕಾಗಿ ಆತನು ನಮ್ಮನ್ನು ಕಳುಹಿಸಿದ್ದಾನೆ” ಎಂದು ಹೇಳಿದರು.
Kwa kuwa tunakaribia kuiangamiza sehemu hii, kwa sababu mashitaka dhidi yake mbele ya Yahwe yamezidi kiasi kwamba ametutuma kuuangamiza.”
14 ೧೪ ಆಗ ಲೋಟನು ಹೊರಕ್ಕೆ ಹೋಗಿ ತನ್ನ ಹೆಣ್ಣುಮಕ್ಕಳನ್ನು ಗೊತ್ತುಮಾಡಿಕೊಂಡಿದ್ದ ಅಳಿಯಂದಿರಿಗೆ ಈ ಸಂಗತಿಯನ್ನು ತಿಳಿಸಿ, “ನೀವೆದ್ದು, ಈ ಸ್ಥಳವನ್ನು ಬಿಟ್ಟು ಹೋಗಿರಿ ಯೆಹೋವನು ಈ ಊರನ್ನು ನಾಶಮಾಡುತ್ತಾನೆ” ಎಂದು ಹೇಳಿದನು. ಆದರೆ ಅವರು ಲೋಟನು ಅಪಹಾಸ್ಯ ಮಾಡುತ್ತಿದ್ದಾನೆ ಎಂದುಕೊಂಡರು.
Lutu akatoka na akazungumza na wakwe zake, wanaume ambao walikuwa wamewaposa binti zake, akawambia, “Ondokeni upesi mahali hapa, kwa kuwa Yahwe anakaribia kuuangamiza mji.” Lakini kwa wakwe zake alionekana kuwa anawatania.
15 ೧೫ ಹೊತ್ತು ಮೂಡುವುದಕ್ಕೆ ಮುಂಚೆ ಆ ದೂತರು ಲೋಟನಿಗೆ, “ನೀನೆದ್ದು ಇಲ್ಲಿರುವ ನಿನ್ನ ಹೆಂಡತಿಯನ್ನೂ ನಿನ್ನ ಇಬ್ಬರು ಹೆಣ್ಣುಮಕ್ಕಳನ್ನೂ ಬೇಗ ಕರೆದುಕೊಂಡು ಹೋಗು; ಊರಿಗೆ ಉಂಟಾಗುವ ದಂಡನೆಯಿಂದ ನಿನಗೂ ನಾಶವುಂಟಾದೀತು” ಎಂದು ಹೇಳಿ ತ್ವರೆಪಡಿಸಿದರು.
Alfajiri, malaika wakamsihi Lutu, wakisema, ondoka, mtwae mkeo na binti zako wawili ambao wako hapa, ili kwamba usipotelee katika adhabu ya mji huu.”
16 ೧೬ ಅವನು ತಡಮಾಡಲು ಯೆಹೋವನು ಅವನನ್ನು ಕನಿಕರಿಸಿದ್ದರಿಂದ ಆ ಮನುಷ್ಯರು ಅವನನ್ನೂ ಅವನ ಹೆಂಡತಿ ಮಕ್ಕಳನ್ನೂ ಕೈಹಿಡಿದು ಹೊರಗೆ ತಂದು ಪಟ್ಟಣದ ಆಚೆಗೆ ಬಿಟ್ಟರು.
Lakini akakawia-kawia. Kwa hiyo watu wale wakamshika mkono wake, na mkono wa mkewe, na mikono ya binti zake wawili, kwa sababu Yahwe alimhurumia. Wakawatoa nje, na kuwaweka nje ya mji.
17 ೧೭ ಅವರನ್ನು ಹೊರಗೆ ತಂದ ಮೇಲೆ ಅವರಲ್ಲಿ ಒಬ್ಬನು, “ಓಡಿಹೋಗು, ಪ್ರಾಣವನ್ನು ಉಳಿಸಿಕೋ; ಹಿಂದಕ್ಕೆ ತಿರುಗಿ ನೋಡಬೇಡ; ಈ ಪ್ರದೇಶದೊಳಗೆ ಎಲ್ಲಿಯೂ ನಿಲ್ಲದೆ ಬೆಟ್ಟದ ಸೀಮೆಗೆ ಓಡಿಹೋಗು; ನಿನಗೂ ನಾಶವುಂಟಾದೀತು” ಎಂದನು.
Wakisha kuwatoa nje mmoja wa wale watu akasema, “jiponye nafsi yako! usitazame nyuma, au usikae mahali popote kwenye hili bonde. Toroka uende milimani ili kwamba usije ukatoweshwa mbali.”
18 ೧೮ ಅದಕ್ಕೆ ಲೋಟನು, “ಕರ್ತನೇ, ಅದು ನನ್ನಿಂದಾಗದು;
Lutu akawambia, “Hapana, tafadhali bwana zangu!
19 ೧೯ ನೀನು ನಿನ್ನ ದಾಸನ ಮೇಲೆ ದಯೆ ಇಟ್ಟು ನನ್ನ ಪ್ರಾಣವನ್ನು ಉಳಿಸಿದ್ದು ಬಹು ವಿಶೇಷವಾದ ಉಪಕಾರವೇ; ಆದರೆ ಬೆಟ್ಟಕ್ಕೆ ಓಡಿ ಹೋಗಲಾರೆನು; ನಾನು ಹೋಗುತ್ತಿರುವಾಗ ಆ ವಿಪತ್ತು ನನಗೂ ಉಂಟಾಗಿ ಸತ್ತೇನು.
Mtumishi wenu amepata kibali machoni pako, na umenionesha wema ulio mkuu kwa kuokoa maisha yangu, lakini sitaweza kutorokea milimani, kwa sababu mabaya yataniwahi na nitakufa.
20 ೨೦ ಆಗೋ, ಅಲ್ಲಿ ಒಂದು ಪಟ್ಟಣ ಹತ್ತಿರವಾಗಿದೆ; ಅದು ಸಣ್ಣದು; ಅಲ್ಲಿಗಾದರೂ ಹೋಗುವುದಕ್ಕೆ ಅಪ್ಪಣೆಯಾದರೆ ನನ್ನ ಪ್ರಾಣ ಉಳಿಯುವುದು; ಆ ಊರು ಸಣ್ಣದಲ್ಲವೇ?” ಎಂದನು.
Tazama, ule mji pale uko karibu nijisalimishe pale, na ni mdogo. Tafadhari niacheni nikimbilie pale ( Je Siyo mdogo ule?), na maisha yangu yataokolewa.”
21 ೨೧ ಅದಕ್ಕಾತನು, “ಈ ವಿಷಯದಲ್ಲಿಯೂ ನಿನ್ನ ಬೇಡಿಕೆಯನ್ನು ಅನುಗ್ರಹಿಸಿದ್ದೇನೆ, ನೋಡು; ನೀನು ಹೇಳಿದ ಊರನ್ನು ನಾನು ಕೆಡವಿ ಹಾಕುವುದಿಲ್ಲ.
Akamwambia, “Sawa, nimekubali ombi hili pia, kwamba sitaangamiza mji ambaoumeutaja.
22 ೨೨ ಬೇಗ ಅಲ್ಲಿಗೆ ಹೋಗಿ ತಪ್ಪಿಸಿಕೋ; ನೀನು ಆ ಪಟ್ಟಣವನ್ನು ಮುಟ್ಟುವ ತನಕ ನಾನೇನೂ ಮಾಡುವುದಕ್ಕಾಗುವುದಿಲ್ಲ” ಎಂದನು. ಇದರಿಂದ ಆ ಊರಿಗೆ ಚೋಗರ್ ಎಂದು ಹೆಸರಾಯಿತು.
Harakisha! toroka uende pale, kwa kuwa sitafanya chochote mpaka ufike pale.” kwa hiyo mji ule ukaitwa Soari.
23 ೨೩ ಲೋಟನು ಚೋಗರ್ ಮುಟ್ಟುವಷ್ಟರಲ್ಲಿ ಸೂರ್ಯನು ಉದಯಿಸಿದನು.
Jua lilikuwa limekwisha chomoza juu ya nchi wakati Lutu alipofika Soari.
24 ೨೪ ಆಗ ಯೆಹೋವನು ಸೊದೋಮ್ ಗೊಮೋರಗಳ ಮೇಲೆ ಆಕಾಶದಿಂದ ಅಗ್ನಿಗಂಧಕಗಳನ್ನು ಸುರಿಸಿ
Kisha Yahwe akanyesha juu ya Sodoma na Gomora kiberiti na moto toka kwa Yahwe mbinguni.
25 ೨೫ ಆ ಪಟ್ಟಣಗಳನ್ನೂ ಸುತ್ತಲಿರುವ ಸೀಮೆಯೆಲ್ಲವನ್ನೂ ಊರುಗಳಲ್ಲಿದ್ದ ಜನರೆಲ್ಲರನ್ನೂ ಭೂಮಿಯ ಮೇಲಣ ಎಲ್ಲಾ ಬೆಳೆಯನ್ನೂ ಹಾಳುಮಾಡಿದನು.
Akaharibu miji ile, na bonde lote, na vyote vilivyomo katika miji, na mimea iliyo chipua juu ya ardhi.
26 ೨೬ ಲೋಟನ ಹೆಂಡತಿ ಅವನ ಹಿಂದೆ ಬರುತ್ತಿರುವಾಗ ಹಿಂತಿರುಗಿ ನೋಡಿದ್ದರಿಂದ ಉಪ್ಪಿನ ಕಂಬವಾದಳು.
Lakini mke wa Lutu aliye kuwa nyuma yake, akatazama nyuma, na akawa nguzo ya chumvi.
27 ೨೭ ಇತ್ತಲಾಗಿ ಅಬ್ರಹಾಮನು ಬೆಳಿಗ್ಗೆ ಎದ್ದು ತಾನು ಯೆಹೋವನ ಸನ್ನಿಧಿಯಲ್ಲಿ ನಿಂತಿದ್ದ ಸ್ಥಳಕ್ಕೆ ತಿರುಗಿ ಬಂದು ಸೊದೋಮ್ ಗೊಮೋರಗಳ ಕಡೆಗೂ
Abraham akaamuka asubuhi na mapema akaenda mahali alipokuwa amesimama mbele ya Yahwe.
28 ೨೮ ಸೊದೋಮ್ ಗೊಮೋರದ ಸುತ್ತಲಿನ ಎಲ್ಲಾ ದಿಕ್ಕುಗಳ ಕಡೆಗೂ ನೋಡಿದಾಗ, ಅಯ್ಯೋ, ಆ ಪ್ರದೇಶದಿಂದ ಹೊಗೆಯು ಆವಿಗೆಯ ಹೊಗೆಯಂತೆ ಮೇಲಕ್ಕೇರುತ್ತಿತ್ತು.
Akatazama chini kuelekea Sodoma na Gomora na kuelekea katika nchi yote bondeni. Akaona na tazama, moshi ulikuwauki ukienda juu kutoka chini kama moshi wa tanuru.
29 ೨೯ ದೇವರು ಆ ಪ್ರದೇಶದ ಪಟ್ಟಣಗಳನ್ನು ನಾಶಮಾಡಿದಾಗ, ಅಬ್ರಹಾಮನನ್ನು ನೆನಪುಮಾಡಿಕೊಂಡನು. ಲೋಟನು ವಾಸವಾಗಿದ್ದ ಪಟ್ಟಣಗಳನ್ನು ಹಾಳುಮಾಡಿ ಆ ಸ್ಥಳದೊಳಗಿಂದ ಲೋಟನನ್ನು ಹೊರಗೆ ಕಳುಹಿಸಿ ಪಾರುಮಾಡಿದನು.
Wakati Mungu alipoharibu miji ya bondeni, Mungu akamkumbuka Abraham. Akamtoa Lutu kutoka katika maangamizi alipoangamiza miji ambayo katika hiyo Lutu aliishi.
30 ೩೦ ಲೋಟನು ಚೋಗರಿನಲ್ಲಿರುವುದಕ್ಕೆ ಹೆದರಿ ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಕರೆದುಕೊಂಡು ಬೆಟ್ಟವನ್ನು ಹತ್ತಿ ಅಲ್ಲಿ ವಾಸಮಾಡಿದನು. ಅವನೂ ಅವನ ಇಬ್ಬರು ಹೆಣ್ಣುಮಕ್ಕಳೂ ಒಂದು ಗವಿಯಲ್ಲಿ ವಾಸಮಾಡಿದರು.
Lakini Lutu akapanda juu kutoka Soari na kwenda kuishi katika milima akiwa pamoja na binti zake wawili, kwa sababu aliogopa kuishi Soari. Kwa hiyo akaishi pangoni, yeye na binti zake wawili.
31 ೩೧ ಹೀಗಿರುವಲ್ಲಿ ಹಿರೀಮಗಳು ತನ್ನ ತಂಗಿಗೆ, “ನಮ್ಮ ತಂದೆ ಮುದುಕನಷ್ಟೆ; ಸರ್ವಲೋಕದ ಪದ್ಧತಿಯ ಮೇರೆಗೆ ನಮ್ಮನ್ನು ಮದುವೆ ಮಾಡಿಕೊಳ್ಳುವ ಪುರುಷರು ಎಲ್ಲಿಯೂ ಇಲ್ಲ;
Yule wa kwanza akamwambia yule mdogo, “Baba yetu ni mzee, na hakuna mwanaume mahali popote wa kulala na sisi kulingana na desturi ya dunia yote.
32 ೩೨ ನಾವು ತಂದೆಗೆ ದ್ರಾಕ್ಷಾರಸವನ್ನು ಕುಡಿಸಿ, ಅವನ ಸಂಗಡ ಮಲಗಿಕೊಂಡು ತಂದೆಯಿಂದ ಸಂತಾನವನ್ನು ಪಡೆದುಕೊಳ್ಳೋಣ” ಎಂದು ಹೇಳಿದಳು.
Njoo na tumnyweshe baba yetu mvinyo na tulale naye ili kwamba tuendeleze uzao wa baba yetu.”
33 ೩೩ ಆ ರಾತ್ರಿ ಅವರು ತಂದೆಗೆ ದ್ರಾಕ್ಷಾರಸವನ್ನು ಕುಡಿಸಿದಾಗ ಹಿರೀ ಮಗಳು ಅವನ ಸಂಗಡ ಮಲಗಿಕೊಂಡಳು; ಯಾವಾಗ ಮಲಗಿಕೊಂಡಳೋ ಯಾವಾಗ ಎದ್ದು ಹೋದಳೋ ಅವನಿಗೇನೂ ತಿಳಿಯಲಿಲ್ಲ.
Kwa hiyo wakamnywesha baba yako mvinyo usiku ule. Kisha yule wa kwanza akaingia na akalala na baba yake; Baba yake hakujua ni wakati gani alikuja kulala, wala wakati alipo amka.
34 ೩೪ ಮಾರನೆಯ ದಿನ ಹಿರಿಯವಳು ಕಿರಿಯವಳಿಗೆ, “ನಿನ್ನೆಯ ರಾತ್ರಿ ನಾನೇ ಅಪ್ಪನ ಸಂಗಡ ಮಲಗಿಕೊಂಡೆನು; ಈ ರಾತ್ರಿಯೂ ಅವನಿಗೆ ದ್ರಾಕ್ಷಾರಸವನ್ನು ಕುಡಿಸೋಣ; ಆ ಮೇಲೆ ನೀನು ಅವನ ಸಂಗಡ ಮಲಗಿಕೋ; ಹೀಗೆ ನಮ್ಮ ತಂದೆಯಿಂದ ಸಂತಾನವನ್ನು ಪಡೆದುಕೊಳ್ಳೋಣ” ಎಂದು ಹೇಳಿದಳು.
Siku iliyo fuata yule wa kwanza akamwambia mdogowake, “Sikiliza, usiku wa jana nililala na baba yangu. Na tumnyweshe mvinyo usiku wa leo pia, na uingie ukalale naye. Ili kwamba tuendeleze uzao wa baba yetu.”
35 ೩೫ ಆ ರಾತ್ರಿಯೂ ಅವರು ತಂದೆಗೆ ದ್ರಾಕ್ಷಾರಸವನ್ನು ಕುಡಿಸಿದ ಮೇಲೆ ಕಿರಿಯ ಮಗಳು ಅವನ ಸಂಗಡ ಮಲಗಿಕೊಂಡಳು; ಅವಳು ಯಾವಾಗ ಮಲಗಿದಳೋ ಯಾವಾಗ ಎದ್ದು ಹೋದಳೋ ಅವನಿಗೇನೂ ತಿಳಿಯಲಿಲ್ಲ.
Kwa hiyo wakamnywesha baba yao mvinyo usiku ule pia, na yule mdogo akaenda na akalala naye. Baba yake hakujua ni wakati gani alilala, wala wakati alipoamka.
36 ೩೬ ಹೀಗೆ ಲೋಟನ ಇಬ್ಬರು ಹೆಣ್ಣುಮಕ್ಕಳು ತಂದೆಯಿಂದ ಬಸುರಾದರು.
Basi hao binti wote wawili wa Lutu wakapata mimba kwa baba yao.
37 ೩೭ ಹಿರಿಯವಳು ಗಂಡು ಮಗುವನ್ನು ಹೆತ್ತು ಅದಕ್ಕೆ “ಮೋವಾಬ್” (ತಂದೆಯಿಂದ ಹುಟ್ಟಿದವನು) ಎಂದು ಹೆಸರಿಟ್ಟಳು. ಇಂದಿನ ವರೆಗೂ ಇರುವ ಮೋವಾಬ್ಯರಿಗೆ ಅವನೇ ಮೂಲಪುರುಷನು.
Wa kwanza akazaa mwana wa kiume, na akamwita jina lake Moabu. Akawa ndiye baba wa wamoabu hata leo.
38 ೩೮ ಕಿರಿಯ ಮಗಳು ಗಂಡು ಮಗುವನ್ನು ಹೆತ್ತು ಅದಕ್ಕೆ “ಬೆನಮ್ಮಿ” (ರಕ್ತ ಸಂಬಂಧಿಕನ ಮಗ) ಎಂದು ಹೆಸರಿಟ್ಟಳು. ಇಂದಿನವರೆಗೂ ಇರುವ ಅಮ್ಮೋನಿಯರಿಗೆ ಇವನೇ ಮೂಲಪುರುಷನು.
Nayule mdogo naye akazaa mwana wa kiume, na akamwita Benami. Huyu ndiye baba wa watu wa Waamoni hata leo.

< ಆದಿಕಾಂಡ 19 >