< ಆದಿಕಾಂಡ 25 >

1 ಅಬ್ರಹಾಮನು ಕೆಟೂರಳೆಂಬ ಇನ್ನೊಬ್ಬ ಹೆಂಡತಿಯನ್ನು ಮದುವೆ ಮಾಡಿಕೊಂಡನು.
וַיֹּסֶף אַבְרָהָם וַיִּקַּח אִשָּׁה וּשְׁמָהּ קְטוּרָֽה׃
2 ಆಕೆ ಅವನಿಗೆ ಜಿಮ್ರಾನ್, ಯೊಕ್ಷಾನ್, ಮೆದಾನ್, ಮಿದ್ಯಾನ್, ಇಷ್ಬಾಕ್, ಶೂಹ ಇವರನ್ನು ಹೆತ್ತಳು.
וַתֵּלֶד לוֹ אֶת־זִמְרָן וְאֶת־יׇקְשָׁן וְאֶת־מְדָן וְאֶת־מִדְיָן וְאֶת־יִשְׁבָּק וְאֶת־שֽׁוּחַ׃
3 ಯೊಕ್ಷಾನನು ಶೆಬಾ, ದೆದಾನ್ ಎಂಬಿವರನ್ನು ಪಡೆದನು. ಅಶ್ಮೂರ್ಯರೂ, ಲೆಟೂಶ್ಯರೂ, ಲೆಯುಮ್ಯರೂ ದೆದಾನನಿಂದ ಹುಟ್ಟಿದವರು.
וְיׇקְשָׁן יָלַד אֶת־שְׁבָא וְאֶת־דְּדָן וּבְנֵי דְדָן הָיוּ אַשּׁוּרִם וּלְטוּשִׁם וּלְאֻמִּֽים׃
4 ಗೇಫಾ, ಗೇಫೆರ್, ಹನೋಕ್, ಅಬೀದಾ, ಎಲ್ದಾಯ ಎಂಬುವವರು ಮಿದ್ಯಾನನಿಂದ ಹುಟ್ಟಿದರು. ಇವರೆಲ್ಲರೂ ಕೆಟೂರಳ ಸಂತತಿಯವರು.
וּבְנֵי מִדְיָן עֵיפָה וָעֵפֶר וַחֲנֹךְ וַאֲבִידָע וְאֶלְדָּעָה כׇּל־אֵלֶּה בְּנֵי קְטוּרָֽה׃
5 ಅಬ್ರಹಾಮನು ತನಗಿದ್ದ ಆಸ್ತಿಯನ್ನೆಲ್ಲಾ ಇಸಾಕನಿಗೆ ಕೊಟ್ಟನು.
וַיִּתֵּן אַבְרָהָם אֶת־כׇּל־אֲשֶׁר־לוֹ לְיִצְחָֽק׃
6 ಅಬ್ರಹಾಮನು ತನ್ನ ಉಪಪತ್ನಿಯರ ಮಕ್ಕಳಿಗೆ ಕೆಲವು ಸೊತ್ತುಗಳನ್ನು ದಾನಮಾಡಿ ತಾನು ಇನ್ನೂ ಜೀವದಿಂದಿರುವಾಗಲೇ ಅವರನ್ನು ತನ್ನ ಮಗನಾದ ಇಸಾಕನ ಬಳಿಯಿಂದ ಪೂರ್ವ ದಿಕ್ಕಿನಲ್ಲಿರುವ ಕೆದೆಮ್ ದೇಶಕ್ಕೆ ಕಳುಹಿಸಿ ಬಿಟ್ಟನು.
וְלִבְנֵי הַפִּֽילַגְשִׁים אֲשֶׁר לְאַבְרָהָם נָתַן אַבְרָהָם מַתָּנֹת וַֽיְשַׁלְּחֵם מֵעַל יִצְחָק בְּנוֹ בְּעוֹדֶנּוּ חַי קֵדְמָה אֶל־אֶרֶץ קֶֽדֶם׃
7 ಅಬ್ರಹಾಮನು ನೂರ ಎಪ್ಪತ್ತೈದು ವರ್ಷ ಬದುಕಿದನು.
וְאֵלֶּה יְמֵי שְׁנֵֽי־חַיֵּי אַבְרָהָם אֲשֶׁר־חָי מְאַת שָׁנָה וְשִׁבְעִים שָׁנָה וְחָמֵשׁ שָׁנִֽים׃
8 ಅಬ್ರಹಾಮನು ಪೂರ್ಣಾಯುಷ್ಯದಿಂದ ದಿನತುಂಬಿದ ಮುದುಕನಾಗಿ ಪ್ರಾಣ ಬಿಟ್ಟು ತನ್ನ ಪೂರ್ವಿಕರ ಬಳಿಗೆ ಸೇರಿದನು.
וַיִּגְוַע וַיָּמׇת אַבְרָהָם בְּשֵׂיבָה טוֹבָה זָקֵן וְשָׂבֵעַ וַיֵּאָסֶף אֶל־עַמָּֽיו׃
9 ಅವನ ಮಕ್ಕಳಾದ ಇಸಾಕ್, ಇಷ್ಮಾಯೇಲರು ಹಿತ್ತಿಯನಾದ ಚೋಹರನ ಮಗ ಎಫ್ರೋನನ ಭೂಮಿಯಲ್ಲಿರುವ ಮಕ್ಪೇಲದ ಗವಿಯಲ್ಲಿ ಅವನನ್ನು ಸಮಾಧಿಮಾಡಿದರು. ಅದು ಮಮ್ರೆಯ ತೋಪಿನ ಪೂರ್ವದಿಕ್ಕಿನಲ್ಲಿದೆ.
וַיִּקְבְּרוּ אֹתוֹ יִצְחָק וְיִשְׁמָעֵאל בָּנָיו אֶל־מְעָרַת הַמַּכְפֵּלָה אֶל־שְׂדֵה עֶפְרֹן בֶּן־צֹחַר הַֽחִתִּי אֲשֶׁר עַל־פְּנֵי מַמְרֵֽא׃
10 ೧೦ ಅಬ್ರಹಾಮನು ಅದನ್ನು ಹಿತ್ತಿಯರಿಂದ ಕೊಂಡುಕೊಂಡಿದ್ದನು. ಅದರಲ್ಲಿ ಅಬ್ರಹಾಮನಿಗೂ, ಅವನ ಹೆಂಡತಿಯಾದ ಸಾರಳಿಗೂ ಸಮಾಧಿ ಆಯಿತು.
הַשָּׂדֶה אֲשֶׁר־קָנָה אַבְרָהָם מֵאֵת בְּנֵי־חֵת שָׁמָּה קֻבַּר אַבְרָהָם וְשָׂרָה אִשְׁתּֽוֹ׃
11 ೧೧ ಅಬ್ರಹಾಮನು ತೀರಿಹೋದ ನಂತರ ದೇವರ ಅನುಗ್ರಹವು ಅವನ ಮಗನಾದ ಇಸಾಕನ ಮೇಲೂ ಉಂಟಾಯಿತು. ಇಸಾಕನು ಬೆರ್ ಲಹೈರೋಯಿಯ ಹತ್ತಿರ ವಾಸವಾಗಿದ್ದನು.
וַיְהִי אַחֲרֵי מוֹת אַבְרָהָם וַיְבָרֶךְ אֱלֹהִים אֶת־יִצְחָק בְּנוֹ וַיֵּשֶׁב יִצְחָק עִם־בְּאֵר לַחַי רֹאִֽי׃
12 ೧೨ ಅಬ್ರಹಾಮನಿಗೆ ಸಾರಳ ಐಗುಪ್ತ ದಾಸಿಯಾದ ಹಾಗರಳಲ್ಲಿ ಹುಟ್ಟಿದ ಇಷ್ಮಾಯೇಲನ ವಂಶದ ಚರಿತ್ರೆ.
וְאֵלֶּה תֹּלְדֹת יִשְׁמָעֵאל בֶּן־אַבְרָהָם אֲשֶׁר יָלְדָה הָגָר הַמִּצְרִית שִׁפְחַת שָׂרָה לְאַבְרָהָֽם׃
13 ೧೩ ಇಷ್ಮಾಯೇಲನ ಮಕ್ಕಳಿಗೂ ಇವರಿಂದ ಹುಟ್ಟಿದ ಕುಲಗಳಿಗೂ ಇರುವ ಹೆಸರುಗಳು ಯಾವುದೆಂದರೆ: ಮೊದಲು ಹುಟ್ಟಿದವನು ನೆಬಾಯೋತ್, ಆ ಮೇಲೆ ಹುಟ್ಟಿದವರು ಕೇದಾರ್, ಅದ್ಬಯೇಲ್, ಮಿಬ್ಸಾಮ್,
וְאֵלֶּה שְׁמוֹת בְּנֵי יִשְׁמָעֵאל בִּשְׁמֹתָם לְתוֹלְדֹתָם בְּכֹר יִשְׁמָעֵאל נְבָיֹת וְקֵדָר וְאַדְבְּאֵל וּמִבְשָֽׂם׃
14 ೧೪ ಮಿಷ್ಮಾ, ದೂಮಾ, ಮಸ್ಸಾ,
וּמִשְׁמָע וְדוּמָה וּמַשָּֽׂא׃
15 ೧೫ ಹದದ್, ತೇಮಾ, ಯಟೂರ್, ನಾಫೀಷ್, ಕೇದ್ಮಾ ಎಂಬುವವರೇ.
חֲדַד וְתֵימָא יְטוּר נָפִישׁ וָקֵֽדְמָה׃
16 ೧೬ ವಂಶ ಪಾರಂಪರೆಯಾಗಿ ಊರುಗಳಲ್ಲಿಯೂ, ಪಾಳೆಯಗಳಲ್ಲಿಯೂ ವಾಸಿಸುವ ಇಷ್ಮಾಯೇಲನ ಸಂತಾನದವರೂ ಇವರೇ ಆಗಿದ್ದಾರೆ. ಇವರ ಕುಲಗಳ ಸಂಖ್ಯೆಗಳಿಗನುಸಾರವಾಗಿ ಹನ್ನೆರಡು ಮಂದಿ ಅರಸರಿರುತ್ತಾರೆ.
אֵלֶּה הֵם בְּנֵי יִשְׁמָעֵאל וְאֵלֶּה שְׁמֹתָם בְּחַצְרֵיהֶם וּבְטִֽירֹתָם שְׁנֵים־עָשָׂר נְשִׂיאִם לְאֻמֹּתָֽם׃
17 ೧೭ ಇಷ್ಮಾಯೇಲನು ನೂರಮೂವತ್ತೇಳು ವರ್ಷ ಬದುಕಿದನು. ನಂತರ ಅವನು ಪ್ರಾಣ ಬಿಟ್ಟು ತನ್ನ ಪೂರ್ವಿಕರ ಬಳಿಗೆ ಸೇರಿದನು.
וְאֵלֶּה שְׁנֵי חַיֵּי יִשְׁמָעֵאל מְאַת שָׁנָה וּשְׁלֹשִׁים שָׁנָה וְשֶׁבַע שָׁנִים וַיִּגְוַע וַיָּמׇת וַיֵּאָסֶף אֶל־עַמָּֽיו׃
18 ೧೮ ಇಷ್ಮಾಯೇಲ್ಯರು ಹವೀಲದಿಂದ ಐಗುಪ್ತ ದೇಶದ ಮೂಡಲಲ್ಲಿರುವ ಅಶ್ಶೂರಿನ ದಾರಿಯಲ್ಲಿರುವ ಶೂರಿನ ತನಕ ವಾಸಮಾಡಿದರು. ಹೀಗೆ ಅವರು ತಮ್ಮ ಸಂಬಂಧಿಕರ ಎದುರಾಗಿ ವಾಸಿಸಿದರು.
וַיִּשְׁכְּנוּ מֵֽחֲוִילָה עַד־שׁוּר אֲשֶׁר עַל־פְּנֵי מִצְרַיִם בֹּאֲכָה אַשּׁוּרָה עַל־פְּנֵי כׇל־אֶחָיו נָפָֽל׃
19 ೧೯ ಅಬ್ರಹಾಮನ ಮಗನಾದ ಇಸಾಕನ ಚರಿತ್ರೆ.
וְאֵלֶּה תּוֹלְדֹת יִצְחָק בֶּן־אַבְרָהָם אַבְרָהָם הוֹלִיד אֶת־יִצְחָֽק׃
20 ೨೦ ಅಬ್ರಹಾಮನು ಇಸಾಕನನ್ನು ಪಡೆದನು. ಇಸಾಕನು ನಲವತ್ತು ವರ್ಷದವನಾದಾಗ ಅರಾಮ್ಯನಾದ ಬೆತೂವೇಲನ ಮಗಳೂ ಅರಾಮ್ಯನಾದ ಲಾಬಾನನ ತಂಗಿಯೂ ಆಗಿದ್ದ ರೆಬೆಕ್ಕಳನ್ನು ಪದ್ದನ್ ಅರಾಮಿನಿಂದ ಕರೆದುತಂದು ಹೆಂಡತಿಯನ್ನಾಗಿ ಮಾಡಿಕೊಂಡನು.
וַיְהִי יִצְחָק בֶּן־אַרְבָּעִים שָׁנָה בְּקַחְתּוֹ אֶת־רִבְקָה בַּת־בְּתוּאֵל הָֽאֲרַמִּי מִפַּדַּן אֲרָם אֲחוֹת לָבָן הָאֲרַמִּי לוֹ לְאִשָּֽׁה׃
21 ೨೧ ಆಕೆ ಬಂಜೆಯಾಗಿರಲಾಗಿ ಇಸಾಕನು ಆಕೆಗೊಸ್ಕರ ಯೆಹೋವನನ್ನು ಬೇಡಿಕೊಂಡನು. ಯೆಹೋವನು ಅವನ ವಿಜ್ಞಾಪನೆಯನ್ನು ಲಾಲಿಸಿದ್ದರಿಂದ ರೆಬೆಕ್ಕಳು ಬಸುರಾದಳು.
וַיֶּעְתַּר יִצְחָק לַֽיהֹוָה לְנֹכַח אִשְׁתּוֹ כִּי עֲקָרָה הִוא וַיֵּעָתֶר לוֹ יְהֹוָה וַתַּהַר רִבְקָה אִשְׁתּֽוֹ׃
22 ೨೨ ಆಕೆಯ ಗರ್ಭದಲ್ಲಿ ಶಿಶುಗಳು ಒಂದನ್ನೊಂದು ನೂಕಾಡುತ್ತಿದ್ದಾಗ ಆಕೆಯು, “ಹೀಗಾದರೆ ನಾನು ಹೇಗೆ ಬದುಕಬೇಕು” ಎಂದು ಹೇಳಿ ಇದರ ವಿಷಯದಲ್ಲಿ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸುವುದಕ್ಕೆ ಹೋದಳು.
וַיִּתְרֹֽצְצוּ הַבָּנִים בְּקִרְבָּהּ וַתֹּאמֶר אִם־כֵּן לָמָּה זֶּה אָנֹכִי וַתֵּלֶךְ לִדְרֹשׁ אֶת־יְהֹוָֽה׃
23 ೨೩ ಯೆಹೋವನು ಆಕೆಗೆ, “ನಿನ್ನ ಗರ್ಭದಲ್ಲಿ ಎರಡು ಜನಾಂಗಗಳು ಇವೆ; ಆ ಎರಡು ಜನಾಂಗಗಳು ಹುಟ್ಟಿನಿಂದಲೇ ಭಿನ್ನವಾಗಿರುವವು; ಅವುಗಳಲ್ಲಿ ಒಂದು ಮತ್ತೊಂದಕ್ಕಿಂತ ಬಲಿಷ್ಠವಾಗುವುದು; ಹಿರಿಯವನು ಕಿರಿಯವನಿಗೆ ಸೇವೆ ಮಾಡುವನು” ಎಂದು ಹೇಳಿದನು.
וַיֹּאמֶר יְהֹוָה לָהּ שְׁנֵי (גיים) [גוֹיִם] בְּבִטְנֵךְ וּשְׁנֵי לְאֻמִּים מִמֵּעַיִךְ יִפָּרֵדוּ וּלְאֹם מִלְאֹם יֶֽאֱמָץ וְרַב יַעֲבֹד צָעִֽיר׃
24 ೨೪ ಆಕೆ ದಿನತುಂಬಿದಾಗ ಅವಳಿ ಮಕ್ಕಳನ್ನು ಹೆತ್ತಳು.
וַיִּמְלְאוּ יָמֶיהָ לָלֶדֶת וְהִנֵּה תוֹמִם בְּבִטְנָֽהּ׃
25 ೨೫ ಮೊದಲು ಹುಟ್ಟಿದ್ದು ಕೆಂಪಾಗಿಯೂ ಮೈಮೇಲೆಲ್ಲಾ ಕೂದಲಿನ ವಸ್ತ್ರದಂತೆ ರೋಮವುಳ್ಳದ್ದಾಗಿಯೂ ಇತ್ತು. ಅದಕ್ಕೆ “ಏಸಾವ” ಎಂದು ಹೆಸರಿಟ್ಟರು.
וַיֵּצֵא הָרִאשׁוֹן אַדְמוֹנִי כֻּלּוֹ כְּאַדֶּרֶת שֵׂעָר וַיִּקְרְאוּ שְׁמוֹ עֵשָֽׂו׃
26 ೨೬ ಎರಡನೆಯ ಶಿಶುವು ಏಸಾವನ ಹಿಮ್ಮಡಿಯನ್ನು ಕೈಯಿಂದ ಹಿಡಿದುಕೊಂಡು ಹುಟ್ಟಿದ್ದರಿಂದ ಅದಕ್ಕೆ “ಯಾಕೋಬ” ಎಂದು ಹೆಸರಿಟ್ಟರು. ಇವರಿಬ್ಬರು ಹುಟ್ಟಿದಾಗ ಇಸಾಕನು ಅರುವತ್ತು ವರ್ಷದವನಾಗಿದ್ದನು.
וְאַֽחֲרֵי־כֵן יָצָא אָחִיו וְיָדוֹ אֹחֶזֶת בַּעֲקֵב עֵשָׂו וַיִּקְרָא שְׁמוֹ יַעֲקֹב וְיִצְחָק בֶּן־שִׁשִּׁים שָׁנָה בְּלֶדֶת אֹתָֽם׃
27 ೨೭ ಆ ಹುಡುಗರಿಬ್ಬರೂ ಬೆಳೆದಾಗ ಅವರಲ್ಲಿ ಏಸಾವನು ಬೇಟೆಯಾಡುವುದರಲ್ಲಿ ನಿಪುಣನಾಗಿದ್ದನು; ಅವನು ಅರಣ್ಯವಾಸಿ. ಯಾಕೋಬನು ಸಾಧು ಮನುಷ್ಯನಾಗಿ ಗುಡಾರಗಳಲ್ಲೇ ವಾಸಿಸುತ್ತಿದ್ದನು.
וַֽיִּגְדְּלוּ הַנְּעָרִים וַיְהִי עֵשָׂו אִישׁ יֹדֵעַ צַיִד אִישׁ שָׂדֶה וְיַעֲקֹב אִישׁ תָּם יֹשֵׁב אֹהָלִֽים׃
28 ೨೮ ಬೇಟೆಯ ಮಾಂಸವು ಇಸಾಕನಿಗೆ ಇಷ್ಟವಾದುದರಿಂದ ಅವನು ಏಸಾವನನ್ನು ಪ್ರೀತಿಸಿದನು; ರೆಬೆಕ್ಕಳು ಯಾಕೋಬನನ್ನು ಪ್ರೀತಿಸಿದಳು.
וַיֶּאֱהַב יִצְחָק אֶת־עֵשָׂו כִּי־צַיִד בְּפִיו וְרִבְקָה אֹהֶבֶת אֶֽת־יַעֲקֹֽב׃
29 ೨೯ ಒಂದು ದಿನ ಯಾಕೋಬನು ಅಡಿಗೆ ಮಾಡುತ್ತಿರುವಾಗ ಏಸಾವನು ಕಾಡಿನಿಂದ ದಣಿದು ಬಂದು ಅವನಿಗೆ, “ನಾನು ಬಹಳ ದಣಿದು ಬಂದಿದ್ದೇನೆ;
וַיָּזֶד יַעֲקֹב נָזִיד וַיָּבֹא עֵשָׂו מִן־הַשָּׂדֶה וְהוּא עָיֵֽף׃
30 ೩೦ ಆ ಕೆಂಪಾದ ರುಚಿ ಪದಾರ್ಥವನ್ನು ಈಗಲೇ ತಿನ್ನುವುದಕ್ಕೆ ಕೊಡು” ಎಂದು ಕೇಳಿದನು. ಈ ಸಂಗತಿಯಿಂದ ಏಸಾವನಿಗೆ “ಎದೋಮ್” ಎಂದು ಹೆಸರಾಯಿತು.
וַיֹּאמֶר עֵשָׂו אֶֽל־יַעֲקֹב הַלְעִיטֵנִי נָא מִן־הָאָדֹם הָאָדֹם הַזֶּה כִּי עָיֵף אָנֹכִי עַל־כֵּן קָרָֽא־שְׁמוֹ אֱדֽוֹם׃
31 ೩೧ ಯಾಕೋಬನು ಅವನಿಗೆ, “ನೀನು ಮೊದಲು ನಿನ್ನ ಚೊಚ್ಚಲತನದ ಹಕ್ಕನ್ನು ನನಗೆ ಮಾರಿ ಬಿಡು” ಅನ್ನಲು.
וַיֹּאמֶר יַעֲקֹב מִכְרָה כַיּוֹם אֶת־בְּכֹרָֽתְךָ לִֽי׃
32 ೩೨ ಏಸಾವನು, “ಆಗಲಿ” ನನ್ನಂಥ ಸಾಯುವವನಿಗೆ ಚೊಚ್ಚಲತನದಿಂದ ಪ್ರಯೋಜನವೇನು ಅಂದನು.
וַיֹּאמֶר עֵשָׂו הִנֵּה אָנֹכִי הוֹלֵךְ לָמוּת וְלָמָּה־זֶּה לִי בְּכֹרָֽה׃
33 ೩೩ ಆಗ ಯಾಕೋಬನು ಮೊದಲು ಪ್ರಮಾಣಮಾಡು ಅಂದಾಗ ಏಸಾವನು ಪ್ರಮಾಣಮಾಡಿ ಅವನಿಗೆ ತನ್ನ ಚೊಚ್ಚಲತನದ ಹಕ್ಕನ್ನು ಕೊಟ್ಟುಬಿಟ್ಟನು.
וַיֹּאמֶר יַעֲקֹב הִשָּׁבְעָה לִּי כַּיּוֹם וַיִּשָּׁבַע לוֹ וַיִּמְכֹּר אֶת־בְּכֹרָתוֹ לְיַעֲקֹֽב׃
34 ೩೪ ಆಗ ಯಾಕೋಬನು ಏಸಾವನಿಗೆ ರೊಟ್ಟಿಯನ್ನೂ ಅಲಸಂದಿ ಗುಗ್ಗರಿಯ ಪಲ್ಯವನ್ನು ಕೊಟ್ಟನು. ಏಸಾವನು ತಿಂದು ಕುಡಿದು ಎದ್ದು ಹೋದನು. ಹೀಗೆ ಅವನು ತನ್ನ ಚೊಚ್ಚಲತನದ ಹಕ್ಕನ್ನು ತಾತ್ಸಾರ ಮಾಡಿ ಬಿಟ್ಟನು.
וְיַעֲקֹב נָתַן לְעֵשָׂו לֶחֶם וּנְזִיד עֲדָשִׁים וַיֹּאכַל וַיֵּשְׁתְּ וַיָּקׇם וַיֵּלַךְ וַיִּבֶז עֵשָׂו אֶת־הַבְּכֹרָֽה׃

< ಆದಿಕಾಂಡ 25 >