< ಆದಿಕಾಂಡ 27 >

1 ಇಸಾಕನು ಮುಪ್ಪಿನಿಂದ ಕಣ್ಣು ಕಾಣಲಾರದಷ್ಟು ಮೊಬ್ಬಾಗಿರಲು ಅವನು ತನ್ನ ಹಿರೀಮಗನಾದ ಏಸಾವನನ್ನು ಕರೆದು, “ಮಗನೇ” ಎನ್ನಲು ಏಸಾವನು, “ಇಗೋ ಇದ್ದೇನೆ” ಅಂದನು.
İshaq qocalıb gözləri görməyəndə böyük oğlu Esavı yanına çağırıb dedi: «Ay oğlum». Esav ona «mən buradayam» dedi.
2 ಇಸಾಕನು ಅವನಿಗೆ, “ನಾನು ಮುದುಕನಾಗಿದ್ದೇನೆ; ಯಾವಾಗ ಸಾಯುವೆನೋ ಗೊತ್ತಿಲ್ಲ.
İshaq dedi: «Mən artıq qocalmışam, bu gün-sabah öləcəyəm.
3 ಆದುದರಿಂದ ನೀನು ಬಿಲ್ಲು ಬತ್ತಳಿಕೆ ಮುಂತಾದ ಆಯುಧಗಳನ್ನು ತೆಗೆದುಕೊಂಡು
İndi silahını, yayını və oxdanını götür, çöllüyə get və mənim üçün heyvan ovla.
4 ಕಾಡಿಗೆ ಹೋಗಿ ಬೇಟೆಯಾಡಿ ಬೇಟೆ ಮಾಂಸದಿಂದ ನನಗೆ ಇಷ್ಟವಾಗಿರುವ ರುಚಿಪದಾರ್ಥವನ್ನು ನನ್ನ ಊಟಕ್ಕೆ ಸಿದ್ಧಪಡಿಸು, ಸಾವು ಬರುವುದಕ್ಕಿಂತ ಮೊದಲು ನಾನು ಅದನ್ನು ತಿಂದು ನಿನ್ನನ್ನು ಆಶೀರ್ವದಿಸುತ್ತೇನೆ” ಎಂದು ಹೇಳಿದನು.
Sonra da mənə xoşladığım ləzzətli yeməyi hazırla və gətir ki, yeyim. Onda ölməmişdən qabaq mən sənə xeyir-dua verərəm».
5 ಇಸಾಕನು ತನ್ನ ಮಗನಾದ ಏಸಾವನಿಗೆ ಹೇಳಿದ ಮಾತು ರೆಬೆಕ್ಕಳ ಕಿವಿಗೆ ಬಿತ್ತು.
İshaq oğlu Esavla danışarkən Rivqa eşidirdi. Esav heyvan ovlayıb gətirmək üçün çöllüyə getdi.
6 ಏಸಾವನು ಬೇಟೆಯಾಡುವುದಕ್ಕೆ ಕಾಡಿಗೆ ಹೋಗಿದ್ದಾಗ ರೆಬೆಕ್ಕಳು ತನ್ನ ಮಗನಾದ ಯಾಕೋಬನಿಗೆ, “ನಿನ್ನ ತಂದೆಯು ನಿನ್ನ ಅಣ್ಣನಾದ ಏಸಾವನಿಗೆ,
Rivqa oğlu Yaquba belə dedi: «Bax mən eşitdim ki, atan qardaşın Esava bu sözləri dedi:
7 ‘ನೀನು ಹೋಗಿ ಬೇಟೆಯಾಡಿ ಬೇಟೆಯ ಮಾಂಸದಿಂದ ನನ್ನ ಊಟಕ್ಕೆ ರುಚಿಪದಾರ್ಥವನ್ನು ಸಿದ್ಧಮಾಡು; ಸಾವು ಬರುವುದಕ್ಕಿಂತ ಮೊದಲು ನಾನು ನಿನ್ನನ್ನು ಯೆಹೋವನ ಸನ್ನಿಧಿಯಲ್ಲಿ ಆಶೀರ್ವದಿಸುತ್ತೇನೆ’ ಎಂದು ಹೇಳುವುದನ್ನು ಕೇಳಿದ್ದೇನೆ.
“Mənim üçün ov əti gətir, mənə ləzzətli yemək hazırla ki, yeyim. Sonra sənə ölümümdən qabaq Rəbbin hüzurunda xeyir-dua verərəm”.
8 ಆದುದರಿಂದ ಮಗನೇ, ನೀನು ನನ್ನ ಮಾತಿಗೆ ಕಿವಿಗೊಟ್ಟು ನನ್ನ ಅಪ್ಪಣೆಯಂತೆ ಮಾಡು.
Oğlum, indi sənə əmr edəcəyim sözlərə qulaq as:
9 ಆಡಿನ ಹಿಂಡಿನೊಳಗೆ ಹೋಗಿ ಎರಡು ಒಳ್ಳೆ ಆಡಿನ ಮರಿಗಳನ್ನು ಬೇಗ ತೆಗೆದುಕೊಂಡು ಬಾ; ಅವುಗಳಿಂದ ನಿನ್ನ ತಂದೆಗೆ ಇಷ್ಟವಾಗಿರುವ ರುಚಿಪದಾರ್ಥವನ್ನು ನಾನೇ ಸಿದ್ಧಮಾಡುತ್ತೇನೆ.
bu saat sürüyə gedib oradan mənə iki yaxşı oğlaq gətir. Onlardan atanın xoşladığı kimi ləzzətli yemək hazırlayacağam.
10 ೧೦ ನೀನು ಅದನ್ನು ಅವನ ಬಳಿಗೆ ತೆಗೆದುಕೊಂಡು ಹೋಗಿ ಬಡಿಸಬೇಕು; ಹೀಗೆ ಮಾಡಿದರೆ ಅವನು ಸಾಯುವುದಕ್ಕಿಂತ ಮೊದಲು ನಿನ್ನನ್ನೇ ಆಶೀರ್ವದಿಸುವನು” ಎಂದಳು.
Sən də onu yeməsi üçün atana aparacaqsan ki, ölümündən qabaq sənə xeyir-dua versin».
11 ೧೧ ಅದಕ್ಕೆ ಯಾಕೋಬನು ತನ್ನ ತಾಯಿ ರೆಬೆಕ್ಕಳಿಗೆ, “ನನ್ನ ಅಣ್ಣನಾದ ಏಸಾವನು ಮೈತುಂಬ ಅಧಿಕವಾಗಿ ರೋಮವುಳ್ಳವನಾಗಿದ್ದಾನೆ. ನಾನು ನುಣುಪಾದ ಚರ್ಮವುಳ್ಳವನು.
Yaqub anası Rivqaya dedi: «Qardaşım Esav tüklü bir adamdır, mən isə tüksüzəm.
12 ೧೨ ಒಂದು ವೇಳೆ ತಂದೆಯು ನನ್ನನ್ನು ಮುಟ್ಟಿ ನೋಡಿದರೆ ನಾನು ಅವನಿಗೆ ಮೋಸ ಮಾಡುವವನಾಗಿ ಕಂಡು ಬಂದರೆ, ಆಶೀರ್ವಾದಕ್ಕಿಂತ ಶಾಪವನ್ನೇ ಹೊಂದುವೆನು” ಎಂದನು.
Birdən atam mənə əlini sürtər və mən onun nəzərində yalançı olaram. Onda üzərimə xeyir-dua yox, lənət gətirərəm».
13 ೧೩ ಅವನ ತಾಯಿಯು ಅವನಿಗೆ, “ಮಗನೇ, ಅವನು ನಿನಗೆ ಶಾಪಕೊಟ್ಟರೆ ಆ ಶಾಪ ನನಗಿರಲಿ; ನೀನು ನನ್ನ ಮಾತನ್ನು ಕೇಳಿ ಆಡಿನ ಮರಿಗಳನ್ನು ತೆಗೆದುಕೊಂಡು ಬಾ” ಎಂದು ಹೇಳಿದಳು.
Anası ona dedi: «Sənə olunacaq lənət mənə gəlsin, oğlum. Ancaq sözümə qulaq as: get, dediyim şeyi mənə gətir».
14 ೧೪ ಅವನು ಹೋಗಿ ಅವುಗಳನ್ನು ತಂದು ತಾಯಿಗೆ ಕೊಟ್ಟನು. ರೆಬೆಕ್ಕಳು ಅವನ ತಂದೆಗೆ ಇಷ್ಟವಾಗಿದ್ದ ಸವಿಯೂಟವನ್ನು ಸಿದ್ಧಪಡಿಸಿದಳು.
Yaqub gedib oğlaqları götürdü və anasına gətirdi, anası da onun atasının xoşladığı kimi ləzzətli yemək hazırladı.
15 ೧೫ ಆಮೇಲೆ ರೆಬೆಕ್ಕಳು ಮನೆಯಲ್ಲಿ ತನ್ನ ವಶದಲ್ಲಿದ್ದ ಹಿರೀಮಗನಾದ ಏಸಾವನ ಶ್ರೇಷ್ಠ ವಸ್ತ್ರಗಳನ್ನು ತೆಗೆದು, ತನ್ನ ಕಿರಿಯ ಮಗನಾದ ಯಾಕೋಬನಿಗೆ ಹೊದಿಸಿದಳು.
Rivqa böyük oğlu Esavın evdə saxladığı ən gözəl paltarını götürüb kiçik oğlu Yaquba geyindirdi.
16 ೧೬ ಆ ಆಡಿನ ಮರಿಗಳ ಚರ್ಮಗಳನ್ನು ಅವನ ಕೈಗಳಿಗೂ, ನುಣುಪಾದ ಕೊರಳಿಗೂ ಸುತ್ತಿದಳು.
Onun əllərinə və boynunun tüksüz yerinə oğlaq dəriləri bağladı.
17 ೧೭ ನಂತರ ತಾನು ಸಿದ್ಧಮಾಡಿದ್ದ ರುಚಿಪದಾರ್ಥವನ್ನೂ ರೊಟ್ಟಿಯನ್ನೂ ತನ್ನ ಮಗನಾದ ಯಾಕೋಬನ ಕೈಯಲ್ಲಿ ಕೊಟ್ಟಳು.
Sonra hazırladığı ləzzətli yeməyi və çörəyi oğlu Yaqubun əlinə verdi.
18 ೧೮ ಅವನು ತಂದೆಯ ಬಳಿಗೆ ಹೋಗಿ, “ಅಪ್ಪಾ” ಎಂದು ಕರೆಯಲು, ತಂದೆಯು, “ಏನು ಮಗನೇ, ನೀನು ಯಾರು?” ಎಂದು ಕೇಳಿದನು.
Yaqub atasının yanına gəlib dedi: «Ay ata». Atası dedi: «Mən buradayam. Sən kimsən, oğlum?»
19 ೧೯ ಯಾಕೋಬನು ಅವನಿಗೆ, “ನಾನು ನಿನ್ನ ಹಿರೀಮಗನಾದ ಏಸಾವನು; ನಿನ್ನ ಅಪ್ಪಣೆಯಂತೆ ಊಟ ಸಿದ್ಧಪಡಿಸಿಕೊಂಡು ತಂದಿದ್ದೇನೆ. ಎದ್ದು, ಕುಳಿತುಕೊಂಡು ನಾನು ತಂದಿರುವ ಬೇಟೆ ಮಾಂಸವನ್ನು ಊಟಮಾಡಿ ನನ್ನನ್ನು ಆಶೀರ್ವದಿಸು” ಎಂದು ಹೇಳಲು,
Yaqub atasına dedi: «Sənin ilk oğlun Esavam. Dediyin kimi elədim. Qalx otur və gətirdiyim ov ətindən ye ki, mənə xeyir-dua verəsən».
20 ೨೦ ಇಸಾಕನು, “ಏನು ಮಗನೇ, ಇಷ್ಟು ಬೇಗ ಬೇಟೆ ಹೇಗೆ ಸಿಕ್ಕಿತು” ಎಂದು ಕೇಳಿದ್ದಕ್ಕೆ ಅವನು, “ನಿನ್ನ ದೇವರಾದ ಯೆಹೋವನು ಅದನ್ನು ನನ್ನೆದುರಿಗೆ ಬರಮಾಡಿದನು” ಎಂದನು.
İshaq oğluna dedi: «Necə oldu ki, belə tez ov tapdın, oğlum?» O dedi: «Sənin Allahın Rəbb mənə uğur verdi».
21 ೨೧ ಇಸಾಕನು ಯಾಕೋಬನಿಗೆ, “ಕಂದಾ, ನನ್ನ ಬಳಿಗೆ ಬಾ; ನೀನು ನನ್ನ ಮಗನಾದ ಏಸಾವನೋ ಅಲ್ಲವೋ ನಿನ್ನನ್ನು ಮುಟ್ಟಿ ತಿಳಿದುಕೊಳ್ಳಬೇಕು” ಎಂದು ಹೇಳಿದನು.
İshaq Yaquba dedi: «Yaxın gəl, oğlum, əlimi sənə sürtüb bilim ki, doğrudanmı, oğlum Esavsan ya yox?»
22 ೨೨ ಯಾಕೋಬನು ತನ್ನ ತಂದೆಯ ಹತ್ತಿರಕ್ಕೆ ಬಂದಾಗ ಇಸಾಕನು ಅವನನ್ನು ಮುಟ್ಟಿ ನೋಡಿ, “ಸ್ವರವೇನೋ ಯಾಕೋಬನ ಸ್ವರವಾಗಿದೆ, ಕೈಗಳು ಏಸಾವನ ಕೈಗಳು” ಎಂದು ಹೇಳಿದನು.
Yaqub atası İshaqa yaxınlaşdı. İshaq əlini ona sürtüb dedi: «Səs Yaqubun səsidir, ancaq əllər Esavın əlləridir».
23 ೨೩ ಯಾಕೋಬನ ಕೈಗಳು ಏಸಾವನ ಕೈಗಳಂತೆ ರೋಮವುಳ್ಳವುಗಳಾಗಿದ್ದರಿಂದ ಇಸಾಕನು ಅವನ ಗುರುತನ್ನು ಹಿಡಿಯಲಾರದೆ ಅವನನ್ನು ಆಶೀರ್ವದಿಸಿದನು.
İshaq onu tanımadı, çünki onun əlləri qardaşı Esavın əlləri kimi tüklü idi. İshaq Yaquba xeyir-dua verdi.
24 ೨೪ ಅವನು, “ನೀನು ನಿಜವಾದ ನನ್ನ ಮಗನಾದ ಏಸಾವನೋ” ಎಂದು ಕೇಳಿದ್ದಕ್ಕೆ ಯಾಕೋಬನು, “ಹೌದು” ಎನ್ನಲು,
O soruşdu: «Doğrudanmı, sən oğlum Esavsan?» Yaqub dedi: «Bəli».
25 ೨೫ ಇಸಾಕನು, “ಆ ಪದಾರ್ಥವನ್ನು ಹತ್ತಿರಕ್ಕೆ ತೆಗೆದುಕೊಂಡು ಬಾ; ನೀನು ತಂದ ಬೇಟೆ ಮಾಂಸವನ್ನು ನಾನು ಊಟಮಾಡಿದ ಮೇಲೆ ನಿನ್ನನ್ನು ಆಶೀರ್ವದಿಸುವೆನು” ಎಂದು ಹೇಳಿದನು. ಯಾಕೋಬನು ಅದನ್ನು ಅವನ ಹತ್ತಿರಕ್ಕೆ ತೆಗೆದುಕೊಂಡು ಬರಲು ಅವನು ತಿಂದನು; ದ್ರಾಕ್ಷಾರಸವನ್ನು ಕುಡಿದನು.
İshaq dedi: «Oğlum, gətirdiyin ov ətini qabağıma qoy, yeyim, sonra da sənə xeyir-dua verərəm». Yaqub yeməyi onun qabağına qoydu və o yedi, Yaqub ona şərab gətirdi və o içdi.
26 ೨೬ ಆಮೇಲೆ ಅವನ ತಂದೆಯಾದ ಇಸಾಕನು ಅವನಿಗೆ, “ಮಗನೇ, ನೀನು ಹತ್ತಿರ ಬಂದು ನನಗೆ ಮುದ್ದಿಡು” ಎಂದು ಹೇಳಲು ಅವನು ಹತ್ತಿರ ಬಂದು ತಂದೆಗೆ ಮುದ್ದಿಟ್ಟನು.
Atası İshaq Yaquba dedi: «Oğlum, indi yaxınlaş, atanı öp».
27 ೨೭ ಇಸಾಕನು ಅವನ ವಸ್ತ್ರಗಳ ವಾಸನೆಯನ್ನು ಮೂಸಿ ನೋಡಿ ಅವನನ್ನು ಆಶೀರ್ವದಿಸಿ, “ಆಹಾ, ನನ್ನ ಮಗನ ಸುವಾಸನೆಯು, ಯೆಹೋವನು ಆಶೀರ್ವದಿಸಿದ ಹೊಲದ ಸುವಾಸನೆಯಂತಿರುವುದು.
O yaxınlaşıb atasını öpdü. İshaq onun paltarının qoxusunu hiss etdi və ona xeyir-dua verib dedi: «Bax oğlumun qoxusu Rəbbin xeyir-dua verdiyi Çölün qoxusu kimidir.
28 ೨೮ ದೇವರು ನಿನಗೆ ಆಕಾಶದ ಮಂಜನ್ನೂ, ಸಾರವುಳ್ಳ ಭೂಮಿಯನ್ನೂ ಕೊಟ್ಟು ದವಸಧಾನ್ಯಗಳನ್ನೂ, ದ್ರಾಕ್ಷಾರಸವನ್ನೂ ಹೇರಳವಾಗಿ ಅನುಗ್ರಹಿಸಲಿ.
Allah sənə göylərin şehini, Torpağın şirəsini, Bol buğda və çoxlu təzə şərab versin.
29 ೨೯ ಜನಗಳು ನಿನ್ನನ್ನು ಆರಾಧಿಸಲಿ, ಜನಾಂಗಗಳು ನಿನಗೆ ಅಧೀನವಾಗಲಿ. ನಿನ್ನ ಅಣ್ಣತಮ್ಮಂದಿರಿಗೆ ನೀನು ದೊರೆಯಾಗಿರು, ನಿನ್ನ ತಾಯಿಯ ಮಕ್ಕಳು ನಿನಗೆ ಅಡ್ಡಬೀಳಲಿ. ನಿನ್ನನ್ನು ಶಪಿಸುವವರಿಗೆ ಶಾಪವೂ, ನಿನ್ನನ್ನು ಆಶೀರ್ವದಿಸುವವರಿಗೆ ಆಶೀರ್ವಾದವೂ ಉಂಟಾಗಲಿ” ಎಂದನು.
Xalqlar sənə qulluq etsin, Ümmətlər sənə baş əysin. Öz qardaşlarına ağa ol, Ananın oğulları sənə baş əysin. Sənə lənət edənlərə lənət gəlsin, Sənə xeyir-dua verənlər xeyir-dua alsın».
30 ೩೦ ಇಸಾಕನು ಅವನನ್ನು ಆಶೀರ್ವದಿಸಿದ ಮೇಲೆ ಯಾಕೋಬನು ತನ್ನ ತಂದೆಯ ಬಳಿಯಿಂದ ಹೊರಟುಹೋದ ಕ್ಷಣವೇ ಅವನ ಅಣ್ಣನಾದ ಏಸಾವನು ಬೇಟೆಯಿಂದ ಬಂದನು.
İshaq Yaquba xeyir-dua verib qurtarandan sonra Yaqub atası İshaqın yanından çıxar-çıxmaz qardaşı Esav ovdan qayıtdı.
31 ೩೧ ಅವನೂ ಸವಿಯೂಟವನ್ನು ಸಿದ್ಧಮಾಡಿ ತನ್ನ ತಂದೆಯ ಬಳಿಗೆ ತಂದು ಅವನಿಗೆ, “ಅಪ್ಪಾ, ನೀನು ಎದ್ದು ನಿನ್ನ ಮಗನಾದ ನಾನು ಬೇಟೆಯಿಂದ ತಂದಿರುವ ಮಾಂಸವನ್ನು ಊಟಮಾಡಿ ನನ್ನನ್ನು ಆಶೀರ್ವದಿಸು” ಎಂದು ಹೇಳಿದನು.
Esav da ləzzətli yemək hazırlayıb atasına gətirdi və ona dedi: «Atam qalxıb oğlunun gətirdiyi ov ətindən yesin və mənə xeyir-dua versin».
32 ೩೨ ಅವನ ತಂದೆಯಾದ ಇಸಾಕನು, “ನೀನು ಯಾರು?” ಎಂದು ಅವನನ್ನು ಕೇಳಲು ಅವನು, “ನಾನು ನಿನ್ನ ಚೊಚ್ಚಲ ಮಗನಾದ ಏಸಾವನು” ಎಂದನು.
Atası İshaq ondan soruşdu: «Sən kimsən?» O cavab verdi: «Mən ilk oğlun Esavam».
33 ೩೩ ಅದಕ್ಕೆ ಇಸಾಕನು ಬಹಳವಾಗಿ ಗಡಗಡನೆ ನಡುಗುತ್ತಾ, “ಯಾರೋ ಬೇರೊಬ್ಬನು ಬೇಟೆ ಮಾಂಸವನ್ನು ತಂದು ನನಗೆ ಕೊಟ್ಟುಹೋದನಲ್ಲಾ. ನೀನು ಬರುವುದಕ್ಕಿಂತ ಮೊದಲೇ ಅವನು ತಂದಿದ್ದರಲ್ಲಿ ನಾನು ಊಟಮಾಡಿ ಅವನನ್ನೇ ಆಶೀರ್ವದಿಸಿದೆನು; ಅವನಿಗೆ ಮಾಡಿದ ಆಶೀರ್ವಾದ ತಪ್ಪಲಾರದು” ಎಂದನು.
İshaqın canına bərk titrətmə düşdü və o dedi: «Bəs onda heyvan ovlayıb mənə gətirən kim idi? Sən gəlməmişdən qabaq hər şeydən yedim və ona xeyir-dua verdim. Xeyir-dua da onunku oldu».
34 ೩೪ ಏಸಾವನು ತನ್ನ ತಂದೆಯ ಮಾತುಗಳನ್ನು ಕೇಳಿ ದುಃಖಾಕ್ರಾಂತನಾಗಿ ಬಹಳವಾಗಿ ಅಳುತ್ತಾ, “ಅಪ್ಪಾ, ತಂದೆಯೇ, ನನ್ನನ್ನು ಸಹ ಆಶೀರ್ವದಿಸು” ಎಂದು ಬೇಡಿಕೊಳ್ಳಲು ಇಸಾಕನು,
Esav atasının sözlərini eşidəndə ucadan və acı səslə fəryad edib dedi: «Ay ata, mənə də xeyir-dua ver».
35 ೩೫ “ನಿನ್ನ ತಮ್ಮನು ಮೋಸದಿಂದ ಬಂದು ನಿನಗಾಗಬೇಕಾಗಿದ್ದ ಆಶೀರ್ವಾದವನ್ನು ಪಡೆದುಕೊಂಡನು” ಎಂದನು.
İshaq dedi: «Qardaşın hiylə ilə gəlib sənin xeyir-duanı aldı».
36 ೩೬ ಅದಕ್ಕೆ ಏಸಾವನು, “ಯಾಕೋಬನೆಂಬ ಹೆಸರು ಅವನಿಗೆ ಉಂಟಾದದ್ದು ನ್ಯಾಯವಲ್ಲವೋ? ಎರಡು ಸಾರಿ ನನ್ನನ್ನು ವಂಚಿಸಿದ್ದಾನೆ, ಹಿಂದೆ ನನ್ನ ಚೊಚ್ಚಲತನದ ಹಕ್ಕನ್ನು ಅಪಹರಿಸಿದನು; ಈಗ ಬಂದು ನನಗಾಗ ಬೇಕಾಗಿದ್ದ ಆಶೀರ್ವಾದವನ್ನೂ ತೆಗೆದುಕೊಂಡಿದ್ದಾನೆ” ಎಂದು ಹೇಳಿ ತನ್ನ ತಂದೆಯನ್ನು, “ನನಗೋಸ್ಕರವೂ ನಿನ್ನ ಬಳಿ ಆಶೀರ್ವಾದವಿಲ್ಲವೋ” ಎಂದು ಕೇಳಲು,
Esav dedi: «Onu nahaq yerə Yaqub çağırmırlar ki? Bununla ikinci dəfədir ki, məni aldadır: əvvəl ilk oğulluq haqqımı, indi də xeyir-duamı aldı». Sonra soruşdu: «Bəs mənə xeyir-dua saxlamamısan?»
37 ೩೭ ಇಸಾಕನು ಏಸಾವನಿಗೆ, “ನನ್ನ ಮಗನೇ, ಅವನನ್ನು ನಿನ್ನ ದೊರೆಯನ್ನಾಗಿ ನೇಮಿಸಿದ್ದೇನೆ; ಅವನ ಅಣ್ಣತಮ್ಮಂದಿರನ್ನು ಅವನಿಗೆ ಸೇವಕನನ್ನಾಗಿ ಕೊಟ್ಟಿದ್ದೇನೆ; ದವಸಧಾನ್ಯಗಳನ್ನೂ ದ್ರಾಕ್ಷಾರಸವನ್ನೂ ಅವನ ಪೋಷಣೆಗಾಗಿ ಕೊಟ್ಟಿದ್ದೇನೆ ನೋಡು. ಹೀಗಿರುವಲ್ಲಿ ನಾನು ನಿನಗೋಸ್ಕರ ಏನು ಮಾಡಲಿ” ಎಂದನು.
İshaq Esava cavab verdi: «Onu sənə ağa etdim, bütün qardaşlarını ona qul olaraq verdim, buğda və təzə şərabla onu təmin etdim. Bəs sənə nə edim, oğlum?»
38 ೩೮ ಏಸಾವನು ಅವನಿಗೆ, “ಅಪ್ಪಾ, ತಂದೆಯೇ, ನಿನ್ನಲ್ಲಿ ಒಂದೇ ಒಂದು ಆಶೀರ್ವಾದ ಮಾತ್ರ ಇರುವುದೋ? ಅಪ್ಪಾ, ನನ್ನನ್ನೂ ಆಶೀರ್ವದಿಸಬೇಕು” ಎಂದು ಹೇಳಿ ಗೋಳಾಡುತ್ತಾ ಅಳಲು,
Esav atasına dedi: «Səndə yalnız bir xeyir-dua varmı, ata? Mənə də xeyir-dua ver, ata». Esav hönkürüb ağladı.
39 ೩೯ ಅವನ ತಂದೆಯಾದ ಇಸಾಕನು ಅವನಿಗೆ, “ಸಾರವುಳ್ಳ ಭೂಮಿಯೂ ಮೇಲಿನಿಂದ ಬೀಳುವ ಆಕಾಶದ ಮಂಜು ಇರುವ ಸ್ಥಳದಲ್ಲಿ ನಿನ್ನ ನಿವಾಸವಿರುವುದು.
Atası İshaq ona belə cavab verdi: «Yaşadığın yer torpağın şirəsindən, Yuxarıda göylərin şehindən uzaq olacaq.
40 ೪೦ ನೀನು ಕತ್ತಿಯಿಂದಲೇ ಜೀವನ ಮಾಡುವಿ. ನಿನ್ನ ತಮ್ಮನಿಗೆ ಸೇವಕನಾಗಿರುವಿ. ಆದರೂ ನೀನು ತಾಳ್ಮೆ ಮೀರುವಾಗ, ಅವನು ನಿನ್ನ ಹೆಗಲಿನ ಮೇಲೆ ಹೊರಿಸಿರುವ ನೊಗವನ್ನು ಮುರಿದು ಹಾಕುವಿ” ಎಂದು ಹೇಳಿದನು.
Qılıncınla yaşayıb Qardaşına qulluq edəcəksən. Amma azad olmaq istəyəndə Onun boyunduruğunu Boynundan qırıb atacaqsan».
41 ೪೧ ತಂದೆಯು ಯಾಕೋಬನಿಗೆ ಮಾಡಿದ ಆಶೀರ್ವಾದದ ನಿಮಿತ್ತ ಏಸಾವನು ಯಾಕೋಬನನ್ನು ಹಗೆಮಾಡಿ ತನ್ನ ಮನಸ್ಸಿನೊಳಗೆ, “ತಂದೆಗೋಸ್ಕರ ದುಃಖಿಸುವ ಕಾಲ ಸಮೀಪಿಸಿತು. ತರುವಾಯ ನನ್ನ ತಮ್ಮನಾದ ಯಾಕೋಬನನ್ನು ಕೊಲ್ಲುವೆನು” ಎಂದುಕೊಂಡನು.
Atası Yaquba xeyir-dua verdiyinə görə Esav qardaşına nifrət etdi. O öz-özünə dedi: «Atamın matəm günləri yaxınlaşır. O zaman qardaşım Yaqubu öldürərəm».
42 ೪೨ ಹಿರಿಮಗನಾದ ಏಸಾವನು ಹೇಳಿದ ಮಾತು ರೆಬೆಕ್ಕಳಿಗೆ ತಿಳಿದುಬಂದಾಗ ಆಕೆಯು ತನ್ನ ಕಿರಿಯ ಮಗನಾದ ಯಾಕೋಬನನ್ನು ಕರೆದು ಅವನಿಗೆ, “ನೋಡು, ನಿನ್ನ ಅಣ್ಣನಾದ ಏಸಾವನು ನಿನ್ನನ್ನು ಕೊಂದು ಸಮಾಧಾನದಿಂದ ಇರಬೇಕೆಂದುಕೊಂಡಿದ್ದಾನೆ.
Böyük oğlu Esavın dediyi sözlər Rivqanın qulağına çatdı. Buna görə də xəbər göndərib kiçik oğlu Yaqubu çağırdı və ona dedi: «Bax qardaşın Esav səni öldürməklə qisas almaq istəyir.
43 ೪೩ ಆದುದರಿಂದ ಮಗನೇ, ನನ್ನ ಮಾತಿಗೆ ವಿಧೇಯನಾಗು; ನೀನು ಎದ್ದು ಹಾರಾನಿನಲ್ಲಿರುವ ನನ್ನ ಅಣ್ಣನಾದ ಲಾಬಾನನ ಬಳಿಗೆ ಹೊರಟುಹೋಗು.
Oğlum, indi sözümə qulaq as: qalxıb Xarana, qardaşım Lavanın yanına qaç.
44 ೪೪ ಕೆಲವು ಕಾಲ, ನಿನ್ನ ಅಣ್ಣನ ಕೋಪವು ಶಮನವಾಗುವ ವರೆಗೂ ಅವನ ಬಳಿಯಲ್ಲೇ ಇರು.
Qardaşının hirsi soyuyana qədər bir müddət Lavanın yanında qal.
45 ೪೫ ನಿನ್ನ ಅಣ್ಣನು ನೀನು ಮಾಡಿರುವುದನ್ನು ಮರೆತು, ತನ್ನ ಕೋಪವನ್ನು ಮರೆತು ಬಿಟ್ಟಾಗ ನಾನು ನಿನ್ನನ್ನು ಅಲ್ಲಿಂದ ಕರೆಯಿಸುವೆನು. ನಾನು ಒಂದೇ ದಿನದಲ್ಲಿ ನಿಮ್ಮಿಬ್ಬರನ್ನೂ ಕಳೆದುಕೊಳ್ಳುವುದು ಏಕೆ?” ಎಂದು ಹೇಳಿದಳು.
Sənə qarşı qəzəbi sönəndə, ona elədiyini unudanda xəbər göndərib səni oradan çağıraram. Nə üçün bir gündə ikinizdən də məhrum olum?»
46 ೪೬ ರೆಬೆಕ್ಕಳು ಇಸಾಕನಿಗೆ, “ಹಿತ್ತಿಯರಾದ ಈ ಸ್ತ್ರೀಯರ ದೆಸೆಯಿಂದ ನನಗೆ ಬೇಸರವಾಗಿದೆ, ಯಾಕೋಬನೂ ಈ ದೇಶದಲ್ಲಿರುವ ಹಿತ್ತಿಯ ಸ್ತ್ರೀಯನ್ನು ಆರಿಸಿಕೊಂಡು ಮದುವೆ ಮಾಡಿಕೊಂಡರೆ, ನಾನು ಇನ್ನೂ ಬದುಕುವುದರಿಂದ ಪ್ರಯೋಜನವೇನು?” ಎಂದು ಹೇಳಿದಳು.
Sonra Rivqa İshaqa dedi: «Xetli qızların əlindən həyatımdan bezdim. Əgər Yaqub da beləcə bu ölkənin qızlarından – Xetli qızlardan özünə arvad alsa, daha mən niyə yaşayıram?»

< ಆದಿಕಾಂಡ 27 >