< ಆದಿಕಾಂಡ 33 >

1 ಯಾಕೋಬನು ಕಣ್ಣೆತ್ತಿ ನೋಡಿದಾಗ, ಏಸಾವನು ನಾನೂರು ಮಂದಿ ಜನರ ಸಮೇತ ಬರುವುದನ್ನು ಕಂಡನು. ಆಗ ಅವನು ಲೇಯಳಿಗೂ ರಾಹೇಲಳಿಗೂ ಇಬ್ಬರು ದಾಸಿಯರಿಗೂ ಅವರವರ ಮಕ್ಕಳನ್ನು ಒಪ್ಪಿಸಿ ಅವರನ್ನು ಬೇರೆ ಬೇರೆ ಮಾಡಿ
Воззрев же Иаков очима своима, виде: и се, Исав брат его идый, и четыриста мужей с ним. И раздели Иаков дети Лии и Рахили и двум рабыням,
2 ಮುಂದುಗಡೆಯಲ್ಲಿ ದಾಸಿಯರನ್ನೂ ಅವರ ಮಕ್ಕಳನ್ನೂ ಅವರ ಹಿಂದೆ ಲೇಯಳನ್ನೂ ಆಕೆಯ ಮಕ್ಕಳನ್ನೂ ಕಡೆಯಲ್ಲಿ ರಾಹೇಲಳನ್ನೂ ಯೋಸೇಫನನ್ನೂ ನಿಲ್ಲಿಸಿದನು.
и постави обе рабыни и сыны их в первых, Лию же и дети ея позади, а Рахиль и Иосифа в последних:
3 ತಾನೇ ಅವರ ಮುಂದಾಗಿ ಹೋಗಿ ತನ್ನ ಅಣ್ಣನು ಹತ್ತಿರ ಸಮೀಪಿಸುತ್ತಿರುವಾಗ ಏಳು ಸಾರಿ ನೆಲದವರೆಗೆ ತಲೆಬಾಗಿ ನಮಸ್ಕರಿಸಿದನು.
сам же изыде первее пред ними и поклонися до земли седмижды, дондеже приближися к брату своему.
4 ಆಗ ಏಸಾವನು ಅವನನ್ನು ಎದುರುಗೊಳ್ಳುವುದಕ್ಕೆ ಓಡಿ ಬಂದು ಅವನ ಕೊರಳನ್ನು ಅಪ್ಪಿಕೊಂಡು ಮುದ್ದಿಟ್ಟನು. ಅವರಿಬ್ಬರೂ ಅತ್ತರು.
И притече Исав во сретение ему: и объемь его, припаде на выю его и облобыза его: и плакастася оба.
5 ತರುವಾಯ ಏಸಾವನು ಕಣ್ಣೆತ್ತಿ ಆ ಸ್ತ್ರೀಯರನ್ನೂ ಮಕ್ಕಳನ್ನೂ ಕಂಡು, “ನಿನ್ನ ಜೊತೆಯಲ್ಲಿರುವ ಜನರು ಯಾರು?” ಎಂದು ಕೇಳಲು ಯಾಕೋಬನು ಅವನಿಗೆ, “ದೇವರು ನಿನ್ನ ಸೇವಕನಿಗೆ ಕೃಪೆಯಿಂದ ಅನುಗ್ರಹಿಸಿಕೊಟ್ಟ ಮಕ್ಕಳೇ ಇವರು” ಎಂದು ಹೇಳಿದನು.
И воззрев Исав, виде жены и дети и рече: что сии тебе суть? Он же рече: дети, имиже помилова Бог раба твоего.
6 ಆಗ ಅವನ ದಾಸಿಯರಿಬ್ಬರೂ ತಮ್ಮ ಮಕ್ಕಳನ್ನು ಕರೆದುಕೊಂಡು ಹತ್ತಿರಕ್ಕೆ ಬಂದು ಅಡ್ಡಬಿದ್ದರು.
И приступиша рабыни и дети их и поклонишася:
7 ಆ ಮೇಲೆ ಲೇಯಳು ತನ್ನ ಮಕ್ಕಳೊಡನೆ ಬಂದು ಅಡ್ಡಬಿದ್ದಳು. ಕೊನೆಗೆ ಯೋಸೇಫನೂ ರಾಹೇಲಳೂ ಬಂದು ಅಡ್ಡಬಿದ್ದರು.
и приступи Лиа и дети ея и поклонишася: посем же приступи Рахиль и Иосиф и поклонистася.
8 ಏಸಾವನು, “ನಾನು ದಾರಿಯಲ್ಲಿ ಕಂಡ ಆ ಪಶುಗಳು ಯಾತಕ್ಕೆ?” ಎಂದು ಕೇಳಲು ಯಾಕೋಬನು, “ಸ್ವಾಮಿಯವರ ದಯೆ ನನಗೆ ದೊರಕಬೇಕೆಂದು ನಾನು ತಮಗೆ ಅವುಗಳನ್ನು ಕಳುಹಿಸಿಕೊಟ್ಟೆನು” ಎಂದನು.
И рече: что сия тебе суть, полцы сии вси, яже сретох? Он же рече: да обрящет раб твой благодать пред тобою, господине.
9 ಏಸಾವನು ಅದಕ್ಕೆ, “ತಮ್ಮನೇ, ನನಗೆ ಬೇಕಾದಷ್ಟು ಆಸ್ತಿಯುಂಟು, ನಿನ್ನದು ನಿನಗೇ ಇರಲಿ” ಎನ್ನಲು,
Рече же Исав: суть мне многа, брате: да будут тебе твоя.
10 ೧೦ ಯಾಕೋಬನು, “ಹಾಗಲ್ಲ, ನಿನಗೆ ನನ್ನ ಮೇಲೆ ದಯೆಯಿದ್ದರೆ, ನಾನು ಸಮರ್ಪಿಸುವ ಕಾಣಿಕೆಯನ್ನು ಅಂಗೀಕರಿಸಬೇಕು. ನಿನ್ನನ್ನು ನೋಡಿದ್ದು ದೇವರನ್ನು ನೋಡಿದ ಹಾಗಾಯಿತು, ನನ್ನನ್ನು ಪ್ರೀತಿಯಿಂದ ಅಂಗೀಕರಿಸಿದ್ದೇ ವಿಶೇಷ ಸಂಗತಿಯಾಗಿದೆ.
И рече Иаков: аще обретох благодать пред тобою, приими дары от руку моею: сего ради видех лице твое, яко бы аще кто видел лице Божие: и возблаговолиши о мне:
11 ೧೧ ದೇವರು ನನಗೆ ಕೃಪೆಯನ್ನು ತೋರಿದ್ದರಿಂದ ನನಗೆ ಸಮೃದ್ಧಿಯುಂಟಾಯಿತು. ಆದಕಾರಣ ನಾನು ಸಮರ್ಪಿಸುವ ಉಡುಗೊರೆಯನ್ನು ನೀನು ದಯವಿಟ್ಟು ಅಂಗೀಕರಿಸಬೇಕು” ಎಂದು ಹೇಳಿ ಏಸಾವನನ್ನು ಬಲವಂತ ಮಾಡಿದ್ದರಿಂದ ಅವನು ಆ ಉಡುಗೊರೆಯನ್ನು ತೆಗೆದುಕೊಂಡನು.
приими благословение мое, еже принесох тебе, яко помилова мя Бог, и суть ми вся. И принуди его, и взя.
12 ೧೨ ತರುವಾಯ ಏಸಾವನು, “ನಾವು ಮುಂದಕ್ಕೆ ಪ್ರಯಾಣವನ್ನು ಬೆಳೆಸೋಣ. ನಾನು ಮುಂದಾಗಿ ಹೋಗುತ್ತೇನೆ” ಎಂದನು.
И рече: воставше пойдем прямо.
13 ೧೩ ಅದಕ್ಕೆ ಯಾಕೋಬನು, “ನನ್ನ ಮಕ್ಕಳು ಎಳೇ ಪ್ರಾಯದವರು ಇದಲ್ಲದೆ ಎಳೆಯ ದನಕುರಿಗಳು ನನ್ನ ಬಳಿಯಲ್ಲಿರುವುದು ಪ್ರಭುವಿಗೆ ತಿಳಿದಿದೆ. ಒಂದು ದಿನ ಹೆಚ್ಚಾಗಿ ಅವುಗಳನ್ನು ನಡಿಸಿದರೆ ಆಡುಕುರಿಗಳ ಹಿಂಡುಗಳೆಲ್ಲವೂ ಸತ್ತು ಹೋದಾವು.
Рече же ему: господин мой весть, яко дети мои юны, овцы же и говяда бременны у мене: аще убо пожену я един день, измрет весь скот:
14 ೧೪ ತಾವು ದಯವಿಟ್ಟು ಸೇವಕನಿಗಿಂತಲೂ ಮುಂಚೆ ಹೋಗಬಹುದು ನಾನು ನನ್ನ ಮುಂದಿರುವ ಆಡುಕುರಿಗಳ ನಡಿಗೆಗೂ ಮಕ್ಕಳ ಶಕ್ತಿಗೂ ಸರಿಯಾಗಿ ಮೆಲ್ಲಮೆಲ್ಲನೆ ನಡೆದು ನನ್ನ ಪ್ರಭುವಿನ ಸೀಮೆಯಾಗಿರುವ ಸೇಯೀರಿಗೆ ಬರುತ್ತೇನೆ” ಎಂದನು.
да предидет господин мой пред рабом своим: аз же укреплюся на пути умедлением шествия моего, еже предо мною, и якоже возмогут ити дети, дондеже прииду к господину моему в Сиир.
15 ೧೫ ಏಸಾವನು, “ನನ್ನ ಆಳುಗಳಲ್ಲಿ ಕೆಲವರನ್ನು ನಿನ್ನ ಸಂಗಡ ಬಿಟ್ಟು ಹೋಗುತ್ತೇನೆ” ಎನ್ನಲು ಯಾಕೋಬನು, “ಅದರ ಅಗತ್ಯವೇನು? ಒಡೆಯನೇ, ತಮ್ಮ ದಯೆ ನನ್ನ ಮೇಲಿದ್ದರೆ ಸಾಕು” ಎಂದು ಹೇಳಿದನು.
И рече Исав: оставлю с тобою от людий сущих со мною. Он же рече: вскую сие? Довлеет, яко обретох благодать пред тобою, господине.
16 ೧೬ ಹೀಗೆ ಏಸಾವನು ಆ ದಿನವೇ ಸೇಯೀರ್ ಸೀಮೆಗೆ ಹೊರಟುಹೋದನು.
Возвратися же Исав в том дни путем своим в Сиир:
17 ೧೭ ಯಾಕೋಬನು ಪ್ರಯಾಣಮಾಡಿ ಸುಕ್ಕೋತಿಗೆ ಬಂದನು. ಅಲ್ಲಿ ತನಗೋಸ್ಕರ ಮನೆಯನ್ನೂ ದನಗಳಿಗೆ ಆಶ್ರಯವನ್ನೂ ಮಾಡಿಸಿದನು. ಆದುದರಿಂದ ಆ ಸ್ಥಳಕ್ಕೆ “ಸುಕ್ಕೋತ್” ಎಂದು ಹೆಸರಾಯಿತು.
и Иаков пойде в Кущы, и постави себе тамо храмины, и скоту своему сотвори кущы: сего ради нарече имя месту тому Кущы.
18 ೧೮ ಯಾಕೋಬನು ಪದ್ದನ್ ಅರಾಮಿನಿಂದ ಬಂದು, ಕಾನಾನ್ ದೇಶದ ಶೆಕೆಮ್ ಪಟ್ಟಣವನ್ನು ಸುರಕ್ಷಿತವಾಗಿ ಸೇರಿದನು. ಆ ಊರಿನ ಬಳಿಯಲ್ಲಿ ತನ್ನ ಗುಡಾರಗಳನ್ನು ಹಾಕಿಸಿಕೊಂಡನು.
И прииде Иаков в салим град Сикимск, иже есть в земли Ханаанстей, егда прииде от Месопотамии Сирския, и ста пред лицем града:
19 ೧೯ ಅವನು ತನ್ನ ಗುಡಾರಗಳನ್ನು ಹಾಕಿಸಿದ ಭೂಮಿಯನ್ನು ಹಮೋರನ ಮಕ್ಕಳಿಗೆ ನೂರು ನಾಣ್ಯ ಕೊಟ್ಟು ಅವರಿಂದ ಕೊಂಡುಕೊಂಡನು. ಹಮೋರನು ಶೆಕೆಮನ ತಂದೆ.
и купи часть села, идеже постави кущу свою тамо, у Еммора отца Сихемля, стома агнцы:
20 ೨೦ ಅಲ್ಲಿ ಯಾಕೋಬನು ಯೆಹೋವನ ಯಜ್ಞವೇದಿಯನ್ನು ಕಟ್ಟಿಸಿ ಅದಕ್ಕೆ “ಏಲ್ ಎಲೋಹೆ ಇಸ್ರಾಯೇಲ್” ಎಂದು ಹೆಸರಿಟ್ಟನು.
и постави тамо жертвенник, и призва Бога Израилева.

< ಆದಿಕಾಂಡ 33 >