< ಆದಿಕಾಂಡ 34 >

1 ಯಾಕೋಬನಿಗೆ ಲೇಯಳಲ್ಲಿ ಹುಟ್ಟಿದ ಮಗಳಾದ ದೀನಳು ಒಂದು ದಿನ ಆ ದೇಶದ ಸ್ತ್ರೀಯರನ್ನು ನೋಡುವುದಕ್ಕೆ ಹೊರಗೆ ಬಂದಳು.
وَخَرَجَتْ دِينَةُ ٱبْنَةُ لَيْئَةَ ٱلَّتِي وَلَدَتْهَا لِيَعْقُوبَ لِتَنْظُرَ بَنَاتِ ٱلْأَرْضِ،١
2 ದೇಶಾಧಿಪತಿಯಾಗಿರುವ ಹಿವ್ವಿಯನಾದ ಹಮೋರನ ಮಗ ಶೆಕೆಮನು ಆಕೆಯನ್ನು ನೋಡಿ ತೆಗೆದುಕೊಂಡು ಹೋಗಿ ಮಾನಭಂಗಪಡಿಸಿದನು.
فَرَآهَا شَكِيمُ ٱبْنُ حَمُورَ ٱلْحِوِّيِّ رَئِيسِ ٱلْأَرْضِ، وَأَخَذَهَا وَٱضْطَجَعَ مَعَهَا وَأَذَلَّهَا.٢
3 ಅವನ ಮನಸ್ಸು ಯಾಕೋಬನ ಮಗಳಾದ ದೀನಳ ಮೇಲೆಯೇ ಇತ್ತು. ಆ ಹುಡುಗಿಯನ್ನು ಪ್ರೀತಿಸಿ ಆಕೆಯ ಸಂಗಡ ಮನವೊಲಿಸುವ ಮಾತುಗಳನ್ನಾಡಿದನು.
وَتَعَلَّقَتْ نَفْسُهُ بِدِينَةَ ٱبْنَةِ يَعْقُوبَ، وَأَحَبَّ ٱلْفَتَاةَ وَلَاطَفَ ٱلْفَتاةَ.٣
4 ಶೆಕೆಮನು ತನ್ನ ತಂದೆಯಾದ ಹಮೋರನಿಗೆ, “ನೀನು ಈ ಹುಡುಗಿಯನ್ನು ನನಗೆ ಮದುವೆಮಾಡಿಸಬೇಕು” ಎಂದು ಕೇಳಿಕೊಂಡನು.
فَكَلَّمَ شَكِيمُ حَمُورَ أَبَاهُ قَائِلًا: «خُذْ لِي هَذِهِ ٱلصَّبِيَّةَ زَوْجَةً».٤
5 ಯಾಕೋಬನು ತನ್ನ ಮಗಳಾದ ದೀನಳಿಗೆ ಶೆಕೆಮನಿಂದ ಮಾನಭಂಗವಾದ ವರ್ತಮಾನವನ್ನು ಕೇಳಿದಾಗ ಅವನ ಗಂಡುಮಕ್ಕಳು ಅಡವಿಯಲ್ಲಿ ದನಗಳನ್ನು ಕಾಯುತ್ತಿದ್ದರು. ಅವರು ಬರುವ ತನಕ ಅವನು ಸುಮ್ಮನೇ ಇದ್ದನು.
وَسَمِعَ يَعْقُوبُ أَنَّهُ نَجَّسَ دِينَةَ ٱبْنَتَهُ. وَأَمَّا بَنُوهُ فَكَانُوا مَعَ مَوَاشِيهِ فِي ٱلْحَقْلِ، فَسَكَتَ يَعْقُوبُ حَتَّى جَاءُوا.٥
6 ಅಷ್ಟರಲ್ಲಿ ಶೆಕೆಮನ ತಂದೆಯಾದ ಹಮೋರನು ಯಾಕೋಬನ ಸಂಗಡ ಮಾತನಾಡುವುದಕ್ಕೆ ಬಂದನು.
فَخَرَجَ حَمُورُ أَبُو شَكِيمَ إِلَى يَعْقُوبَ لِيَتَكَلَّمَ مَعَهُ.٦
7 ಯಾಕೋಬನ ಗಂಡುಮಕ್ಕಳು ತಂಗಿಯ ಸಂಗತಿಯನ್ನು ಕೇಳಿ ಅಡವಿಯಿಂದ ಬಂದಾಗ ವ್ಯಸನಪಟ್ಟು ಬಹಳ ಕೋಪಗೊಂಡರು. ಶೆಕೆಮನು ಯಾಕೋಬನ ಮಗಳ ಮಾನಭಂಗ ಮಾಡಿ ಇಸ್ರಾಯೇಲರೊಳಗೆ ಬಹಳ ಅವಮಾನಕರವಾದ ಕೆಲಸವನ್ನು ಮಾಡಿದನು.
وَأَتَى بَنُو يَعْقُوبَ مِنَ ٱلْحَقْلِ حِينَ سَمِعُوا. وَغَضِبَ ٱلرِّجَالُ وَٱغْتَاظُوا جِدًّا لِأَنَّهُ صَنَعَ قَبَاحَةً فِي إِسْرَائِيلَ بِمُضَاجَعَةِ ٱبْنَةِ يَعْقُوبَ، وَهَكَذَا لَا يُصْنَعُ.٧
8 ಹಮೋರನು ಅವರಿಗೆ, “ನನ್ನ ಮಗನಾದ ಶೆಕೆಮನು ನಿಮ್ಮ ಹುಡುಗಿಯನ್ನು ಬಹಳ ಆಶೆಯಿಂದ ಮೋಹಿಸಿದ್ದಾನೆ, ಆಕೆಯನ್ನು ಅವನಿಗೆ ಮದುವೆ ಮಾಡಿಕೊಡಬೇಕು ಎಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ.
وَتَكَلَّمَ حَمُورُ مَعَهُمَ قَائِلًا: «شَكِيمُ ٱبْنِي قَدْ تَعَلَّقَتْ نَفْسُهُ بِٱبْنَتِكُمْ. أَعْطُوهُ إِيَّاهَا زَوْجَةً٨
9 ಇದಲ್ಲದೆ ನೀವು ನಮ್ಮಲ್ಲೇ ವಾಸವಾಗಿದ್ದು ನಿಮ್ಮ ಹೆಣ್ಣು ಮಕ್ಕಳನ್ನು ನಮಗೆ ಕೊಡುತ್ತಾ ನಮ್ಮ ಹೆಣ್ಣುಮಕ್ಕಳನ್ನು ನೀವು ತೆಗೆದುಕೊಳ್ಳುತ್ತಾ ನಮ್ಮೊಂದಿಗೆ ಬೀಗರಾಗಿರಿ.
وَصَاهِرُونَا. تُعْطُونَنَا بَنَاتِكُمْ، وَتَأْخُذُونَ لَكُمْ بَنَاتِنَا.٩
10 ೧೦ ದೇಶವೆಲ್ಲಾ ನಿಮ್ಮ ಮುಂದೆ ಇದೆ ಅಲ್ಲಿ ವಾಸಮಾಡಿಕೊಂಡು ವ್ಯಾಪಾರ ಮಾಡಿ, ಆಸ್ತಿಯನ್ನು ಸಂಪಾದಿಸಿಕೊಳ್ಳಬಹುದು” ಎಂದು ಹೇಳಿದನು.
وَتَسْكُنُونَ مَعَنَا، وَتَكُونُ ٱلْأَرْضُ قُدَّامَكُمُ. ٱسْكُنُوا وَٱتَّجِرُوا فِيهَا وَتَمَلَّكُوا بِهَا».١٠
11 ೧೧ ಬಳಿಕ ಶೆಕೆಮನು ಆ ಹುಡುಗಿಯ ತಂದೆಗೂ ಅಣ್ಣಂದಿರಿಗೂ, “ನಿಮ್ಮ ದಯೆ ನನ್ನ ಮೇಲೆ ಇರಲಿ, ನೀವು ಹೇಳುವಷ್ಟು ಕೊಡುತ್ತೇನೆ.
ثُمَّ قَالَ شَكِيمُ لِأَبِيهَا وَلإِخْوَتِهَا: «دَعُونِي أَجِدْ نِعْمَةً فِي أَعْيُنِكُمْ. فَٱلَّذِي تَقُولُونَ لِي أُعْطِي.١١
12 ೧೨ ನೀವು ಹೇಳುವ ಮೇರೆಗೆ ಎಷ್ಟಾದರೂ ತೆರವನ್ನೂ ಕಾಣಿಕೆಯನ್ನೂ ಹೆಣ್ಣಿಗಾಗಿ ಕೊಡುತ್ತೇನೆ. ಆದರೆ ಆ ಹುಡುಗಿಯನ್ನು ನನಗೆ ಹೆಂಡತಿಯಾಗಿ ಕೊಡಿರಿ” ಎಂದನು.
كَثِّرُوا عَلَيَّ جِدًّا مَهْرًا وَعَطِيَّةً، فَأُعْطِيَ كَمَا تَقُولُونَ لِي. وَأَعْطُونِي ٱلْفَتَاةَ زَوْجَةً».١٢
13 ೧೩ ಶೆಕೆಮನು ತಮ್ಮ ತಂಗಿಯಾದ ದೀನಳನ್ನು ಮಾನಭಂಗ ಮಾಡಿದ್ದರಿಂದ ಯಾಕೋಬನ ಮಕ್ಕಳು ಅವನಿಗೂ ಅವನ ತಂದೆಯಾದ ಹಮೋರನಿಗೂ ವಂಚನೆಯ ಉತ್ತರಕೊಟ್ಟರು.
فَأَجَابَ بَنُو يَعْقُوبَ شَكِيمَ وَحَمُورَ أَبَاهُ بِمَكْرٍ وَتَكَلَّمُوا. لِأَنَّهُ كَانَ قَدْ نَجَّسَ دِينَةَ أُخْتَهُمْ،١٣
14 ೧೪ ಯಾಕೋಬನ ಮಕ್ಕಳು ಅವರಿಗೆ, “ನಾವು ಈ ಕಾರ್ಯವನ್ನು ಮಾಡಲಾರೆವು. ಸುನ್ನತಿಯಿಲ್ಲದವನಿಗೆ ನಮ್ಮ ತಂಗಿಯನ್ನು ಕೊಡುವುದಕ್ಕಾಗುವುದಿಲ್ಲ, ಹಾಗೆ ಕೊಡುವುದು ನಮಗೆ ಅವಮಾನ.
فَقَالُوُا لَهُمَا: «لَا نَسْتَطِيعُ أَنْ نَفْعَلَ هَذَا ٱلْأَمْرَ أَنْ نُعْطِيَ أُخْتَنَا لِرَجُلٍ أَغْلَفَ، لِأَنَّهُ عَارٌ لَنَا.١٤
15 ೧೫ ನಿಮ್ಮಲ್ಲಿನ ಪುರುಷರೆಲ್ಲರೂ ಸುನ್ನತಿಮಾಡಿಸಿಕೊಂಡು ನಮ್ಮ ಹಾಗೆ ಆಗಬೇಕು. ಹೀಗಾಗುವ ಪಕ್ಷದಲ್ಲಿ ಮಾತ್ರ ನಾವು ನಿಮ್ಮ ಮಾತಿಗೆ ಒಪ್ಪುವೆವು.
غَيْرَ أَنَّنَا بِهَذَا نُواتِيكُمْ: إِنْ صِرْتُمْ مِثْلَنَا بِخَتْنِكُمْ كُلَّ ذَكَرٍ.١٥
16 ೧೬ ನಮ್ಮ ಹೆಣ್ಣುಮಕ್ಕಳನ್ನು ನಿಮಗೆ ಕೊಡುತ್ತಾ ನಿಮ್ಮ ಹೆಣ್ಣುಮಕ್ಕಳನ್ನು ನಾವು ತೆಗೆದುಕೊಳ್ಳುತ್ತಾ ನಿಮ್ಮಲ್ಲಿ ವಾಸಮಾಡಿ ನಿಮ್ಮೊಂದಿಗೆ ಒಂದೇ ಕುಲವಾಗಿರುವೆವು.
نُعْطِيكُمْ بَنَاتِنَا وَنَأْخُذُ لَنَا بَنَاتِكُمْ، وَنَسْكُنُ مَعَكُمْ وَنَصِيرُ شَعْبًا وَاحِدًا.١٦
17 ೧೭ ಆದರೆ ನೀವು ನಮ್ಮ ಮಾತಿಗೆ ಒಪ್ಪದೆ ಸುನ್ನತಿ ಮಾಡಿಸಿಕೊಳ್ಳದೆ ಹೋದರೆ ನಾವು ನಮ್ಮ ಹುಡುಗಿಯನ್ನು ಕರೆದುಕೊಂಡು ಹೊರಟು ಹೋಗುತ್ತೇವೆ” ಎಂದನು.
وَإِنْ لَمْ تَسْمَعُوا لَنَا، أَنْ تَخْتَتِنُوا، نَأْخُذُ ٱبْنَتَنَا وَنَمْضِي».١٧
18 ೧೮ ಅವರ ಮಾತುಗಳು ಹಮೋರನಿಗೂ, ಅವನ ಮಗನಾದ ಶೆಕೆಮನಿಗೂ ಒಳ್ಳೆಯದೆಂದು ತೋಚಿತು.
فَحَسُنَ كَلَامُهُمْ فِي عَيْنَيْ حَمُورَ وَفِي عَيْنَيْ شَكِيمَ بْنِ حَمُورَ.١٨
19 ೧೯ ಆ ಯೌವನಸ್ಥನು ಯಾಕೋಬನ ಮಗಳನ್ನು ಮೆಚ್ಚಿಕೊಂಡಿದ್ದರಿಂದ ಅವರು ಹೇಳಿದಂತೆ ಮಾಡುವುದಕ್ಕೆ ತಡಮಾಡಲಿಲ್ಲ. ಅವನು ತನ್ನ ತಂದೆಯ ಮನೆಯವರೆಲ್ಲರಿಗಿಂತ ಗೌರವವುಳ್ಳವನಾಗಿದ್ದನು.
وَلَمْ يَتَأَخَّرِ ٱلْغُلَامُ أَنْ يَفْعَلَ ٱلْأَمْرَ، لِأَنَّهُ كَانَ مَسْرُورًا بِٱبْنَةِ يَعْقُوبَ. وَكَانَ أَكْرَمَ جَمِيعِ بَيْتِ أَبِيهِ.١٩
20 ೨೦ ಆಗ ಹಮೋರನೂ ಅವನ ಮಗನಾದ ಶೆಕೆಮನೂ ಊರ ಬಾಗಿಲಿಗೆ ಬಂದು ಊರಿನವರೆಲ್ಲರ ಸಂಗಡ ಮಾತನಾಡಿ ಅವರಿಗೆ,
فَأَتَى حَمُورُ وَشَكِيمُ ٱبْنُهُ إِلَى بَابِ مَدِينَتِهْمَا، وَكَلَّمَا أَهْلَ مَدِينَتِهْمَا قَائِلَيْنِ:٢٠
21 ೨೧ “ಈ ಜನರು ನಮ್ಮ ಸಂಗಡ ಸಮಾಧಾನವಾಗಿದ್ದಾರೆ, ಆದ್ದರಿಂದ ಅವರು ನಮ್ಮ ದೇಶದಲ್ಲೇ ವಾಸ ಮಾಡಿಕೊಂಡು ವ್ಯಾಪಾರ ಮಾಡಲಿ. ಈ ದೇಶವು ಅವರಿಗೂ ನಮಗೂ ಸಾಕಾಗುವಷ್ಟು ವಿಸ್ತಾರವಾಗಿದೆ. ನಾವು ಅವರ ಹೆಣ್ಣುಮಕ್ಕಳನ್ನು ಮದುವೆಮಾಡಿಕೊಳ್ಳೋಣ ನಮ್ಮ ಹೆಣ್ಣುಮಕ್ಕಳನ್ನು ಅವರಿಗೆ ಕೊಡೋಣ.
«هَؤُلَاءِ ٱلْقَوْمُ مُسَالِمُونَ لَنَا. فَلْيَسْكُنُوا فِي ٱلْأَرْضِ وَيَتَّجِرُوا فِيهَا. وَهُوَذَا ٱلْأَرْضُ وَاسِعَةُ ٱلطَّرَفَيْنِ أَمَامَهُمْ. نَأْخُذُ لَنَا بَنَاتِهِمْ زَوْجَاتٍ وَنُعْطِيهِمْ بَنَاتِنَا.٢١
22 ೨೨ “ಆದರೆ ಅವರು ಸುನ್ನತಿ ಮಾಡಿಸಿಕೊಂಡವರಾದ್ದರಿಂದ ನಮ್ಮಲ್ಲಿಯೂ ಪುರುಷರೆಲ್ಲರು ಸುನ್ನತಿ ಮಾಡಿಸಿಕೊಳ್ಳಬೇಕನ್ನುತ್ತಾರೆ. ಹೀಗಾದರೆ ಮಾತ್ರ ಅವರು ನಮ್ಮಲ್ಲಿ ವಾಸ ಮಾಡುವುದಕ್ಕೂ ನಮ್ಮ ಸಂಗಡ ಒಂದೇ ಕುಲವಾಗುವುದಕ್ಕೂ ಒಪ್ಪುವರು.
غَيْرَ أَنَّهُ بِهَذَا فَقَطْ يُواتِينَا ٱلْقَوْمُ عَلَى ٱلسَّكَنِ مَعَنَا لِنَصِيرَ شَعْبًا وَاحِدًا: بِخَتْنِنَا كُلَّ ذَكَرٍ كَمَا هُمْ مَخْتُونُونَ.٢٢
23 ೨೩ ಅವರ ಕುರಿದನಗಳೂ, ಅವರ ಆಸ್ತಿಯೂ ಅವರ ಎಲ್ಲಾ ಪಶುಪ್ರಾಣಿಗಳೂ ನಮ್ಮದಾಗುವುದಲ್ಲವೇ? ಆದುದರಿಂದ ಅವರು ನಮ್ಮಲ್ಲಿ ವಾಸಮಾಡುವ ಹಾಗೆ ನಾವು ಅವರ ಮಾತಿಗೆ ಒಪ್ಪಿಕೊಳ್ಳೋಣ” ಎಂದು ಹೇಳಿದನು.
أَلَا تَكُونُ مَوَاشِيهِمْ وَمُقْتَنَاهُمْ وَكُلُّ بَهَائِمِهِمْ لَنَا؟ نُواتِيهِمْ فَقَطْ فَيَسْكُنُونَ مَعَنَا».٢٣
24 ೨೪ ಆಗ ಪಟ್ಟಣದ ದ್ವಾರದಲ್ಲಿ ಹೋಗುವವರೆಲ್ಲಾ, ಹಮೋರನ ಮಗನಾದ ಶೆಕೆಮನೂ ಹೇಳಿದ ಮಾತಿಗೆ ಊರಿನವರೆಲ್ಲರೂ ಸಮ್ಮತಿಸಿದ್ದರಿಂದ ಅವರಲ್ಲಿದ್ದ ಪುರುಷರೆಲ್ಲರೂ ಸುನ್ನತಿಮಾಡಿಸಿಕೊಂಡರು.
فَسَمِعَ لِحَمُورَ وَشَكِيمَ ٱبْنِهِ جَمِيعُ ٱلْخَارِجِينَ مِنْ بَابِ ٱلْمَدِينَةِ، وَٱخْتَتَنَ كُلُّ ذَكَرٍ. كُلُّ ٱلْخَارِجِينَ مِنْ بَابِ ٱلْمَدِينَةِ.٢٤
25 ೨೫ ಮೂರನೆಯ ದಿನದಲ್ಲಿ ಅವರು ಗಾಯದಿಂದ ಬಹು ಬಾಧೆಪಡುತ್ತಿರುವಾಗ ಯಾಕೋಬನ ಮಕ್ಕಳೂ, ದೀನಳ ಅಣ್ಣಂದಿರಾದ ಸಿಮೆಯೋನ್, ಲೇವಿ ಎಂಬ ಇಬ್ಬರು ಕೈಯಲ್ಲಿ ಕತ್ತಿಯನ್ನು ತೆಗೆದುಕೊಂಡು ಧೈರ್ಯವಾಗಿ ಪಟ್ಟಣಕ್ಕೆ ಬಂದು ಗಂಡಸರನ್ನೆಲ್ಲಾ ಕೊಂದು ಹಾಕಿದನು.
فَحَدَثَ فِي ٱلْيَوْمِ ٱلثَّالِثِ إِذْ كَانُوا مُتَوَجِّعِينَ أَنَّ ٱبْنَيْ يَعْقُوبَ، شِمْعُونَ وَلَاوِيَ أَخَوَيْ دِينَةَ، أَخَذَا كُلُّ وَاحِدٍ سَيْفَهُ وَأَتَيَا عَلَى ٱلْمَدِينَةِ بِأَمْنٍ وَقَتَلَا كُلَّ ذَكَرٍ.٢٥
26 ೨೬ ಊರಿನವರ ಮೇಲೆ ಬಿದ್ದು ಹಮೋರ ಮತ್ತು ಅವನ ಮಗನಾದ ಶೆಕೆಮ್ ಸಹಿತವಾಗಿ ಪುರುಷರೆಲ್ಲರನ್ನೂ ದಾಕ್ಷಿಣ್ಯವಿಲ್ಲದೆ ಕತ್ತಿಯಿಂದ ಕೊಂದು ಶೆಕೆಮನ ಮನೆಯಿಂದ ದೀನಳನ್ನು ಕರೆದುಕೊಂಡು ಹೊರಟುಹೋದರು.
وَقَتَلَا حَمُورَ وَشَكِيمَ ٱبْنَهُ بِحَدِّ ٱلسَّيْفِ، وَأَخَذَا دِينَةَ مِنْ بَيْتِ شَكِيمَ وَخَرَجَا.٢٦
27 ೨೭ ಅವರು ಹತವಾದ ನಂತರ ಯಾಕೋಬನ ಮಕ್ಕಳು ಬಂದು, ಇವರು ನಮ್ಮ ತಂಗಿಯನ್ನು ಮಾನಭಂಗಪಡಿಸಿದ್ದಾರೆ ಎಂದು ಹೇಳಿ ಊರನ್ನು ಸೂರೆಮಾಡಿಬಿಟ್ಟರು.
ثُمَّ أَتَى بَنُو يَعْقُوبَ عَلَى ٱلْقَتْلَى وَنَهَبُوا ٱلْمَدِينَةَ، لِأَنَّهُمْ نَجَّسُوا أُخْتَهُمْ.٢٧
28 ೨೮ ಅವರ ಕುರಿಗಳನ್ನು, ದನಗಳನ್ನು ಹಾಗೂ ಕತ್ತೆಗಳನ್ನು ಊರಿನಲ್ಲಿಯೂ ಅಡವಿಯಲ್ಲಿಯೂ ಇದ್ದ ಅವರ ಆಸ್ತಿಯೆಲ್ಲವನ್ನೂ ತೆಗೆದುಕೊಂಡರು.
غَنَمَهُمْ وَبَقَرَهُمْ وَحَمِيرَهُمْ وَكُلُّ مَا فِي ٱلْمَدِينَةِ وَمَا فِي ٱلْحَقْلِ أَخَذُوهُ.٢٨
29 ೨೯ ಅವರ ಮಕ್ಕಳನ್ನೂ ಹೆಂಡತಿಯರನ್ನೂ ಸೆರೆಹಿಡಿದು ಮನೆಯಲ್ಲಿದ್ದುದ್ದೆಲ್ಲವನ್ನು ಕೊಳ್ಳೆ ಹೊಡೆದರು.
وَسَبَوْا وَنَهَبُوا كُلَّ ثَرْوَتِهِمْ وَكُلَّ أَطْفَالِهِمْ، وَنِسَاءَهُمْ وَكُلَّ مَا فِي ٱلْبُيُوتِ.٢٩
30 ೩೦ ಆಗ ಯಾಕೋಬನು ಸಿಮೆಯೋನನಿಗೂ ಲೇವಿಗೂ, “ನೀವು ಈ ದೇಶದ ನಿವಾಸಿಗಳಾದ ಕಾನಾನ್ಯರಲ್ಲಿಯೂ ಪೆರಿಜೀಯರಲ್ಲಿಯೂ ನನ್ನ ಹೆಸರನ್ನು ಕೆಡಿಸಿದ್ದರಿಂದ ನನ್ನನ್ನು ಅಪಾಯಕ್ಕೆ ಗುರಿಮಾಡಿದ್ದೀರಿ. ನನಗಿರುವ ಜನರು ಸ್ವಲ್ಪವೇ. ಈ ದೇಶದವರು ಒಟ್ಟಾಗಿ ನನ್ನ ವಿರುದ್ಧ ಯುದ್ಧಕ್ಕೆ ಬಂದು ನನ್ನನ್ನು ಹೊಡೆದರೆ ನಾನೂ ನನ್ನ ಮನೆಯವರೆಲ್ಲರೂ ನಾಶವಾಗುವೆವು” ಎಂದನು.
فَقَالَ يَعْقُوبُ لِشَمْعُونَ وَلَاوِي: «كَدَّرْتُمَانِي بِتَكْرِيهِكُمَا إِيَّايَ عِنْدَ سُكَّانِ ٱلْأَرْضِ ٱلْكَنْعَانِيِّينَ وَٱلْفِرِزِيِّينَ، وَأَنَا نَفَرٌ قَلِيلٌ. فَيَجْتَمِعُونَ عَلَيَّ وَيَضْرِبُونَنِي، فَأَبِيدُ أَنَا وَبَيْتِي».٣٠
31 ೩೧ ಅದಕ್ಕೆ ಅವರು, “ನಮ್ಮ ತಂಗಿಯನ್ನು ವೇಶ್ಯೆಯಂತೆ ಉಪಯೋಗಿಸಿಕೊಂಡಿದ್ದು ಸರಿಯೇ” ಎಂದು ಕೇಳಿದರು.
فَقَالَا: «أَنَظِيرَ زَانِيَةٍ يَفْعَلُ بِأُخْتِنَا؟».٣١

< ಆದಿಕಾಂಡ 34 >