< ಆದಿಕಾಂಡ 45 >

1 ಯೋಸೇಫನು ಇದನ್ನು ಕೇಳಿ ತನ್ನ ಎದುರಿನಲ್ಲಿ ನಿಂತಿದ್ದವರ ಮುಂದೆ ದುಃಖವನ್ನು ತಾಳಲಾರದೆ, “ಎಲ್ಲರನ್ನು ನನ್ನ ಬಳಿಯಿಂದ ಹೊರಗೆ ಕಳುಹಿಸಿರಿ” ಎಂದು ಕೂಗಿದನು. ಯೋಸೇಫನು ತನ್ನ ಅಣ್ಣತಮ್ಮಂದಿರಿಗೆ ತನ್ನ ಗುರುತು ಸಿಕ್ಕುವಂತೆ ಮಾಡುವ ವೇಳೆಯಲ್ಲಿ ಬೇರೆ ಯಾರೂ ಹತ್ತಿರ ಇರಲಿಲ್ಲ.
Ndipo Yusufu hakuweza kujizuia mwenyewe mbele ya watumishi waliosimama kando yake. Akasema kwa sauti, “Kila mtu aondoke.” Hivyo hakuna mtumishi aliyesimama kando yake wakati Yusufu alipojitambulisha kwa ndugu zake.
2 ಅವನು ಗಟ್ಟಿಯಾಗಿ ಅತ್ತದ್ದರಿಂದ ಐಗುಪ್ತರಿಗೂ, ಫರೋಹನ ಮನೆಯವರಿಗೂ ಆ ಶಬ್ದವು ಕೇಳಿಸಿತು.
Akalia kwa sauti, Wamisri wakasikia, na nyumba ya Farao wakasikia kuhusu hilo.
3 ಅವನು, “ತನ್ನ ಅಣ್ಣತಮ್ಮಂದಿರಿಗೆ ನಾನು ಯೋಸೇಫನು, ನನ್ನ ತಂದೆ ಇನ್ನೂ ಇದ್ದಾನೋ?” ಎಂದು ಹೇಳಲು ಅವರು ಅವನ ಮುಂದೆ ತತ್ತರಗೊಂಡು ಉತ್ತರಕೊಡಲಾರದೆ ಹೋದರು.
Yusufu akawambia ndugu zake, “Mimi ni Yusufu. Je baba yangu ni mzima bado? Ndugu zake hawakuweza kumjibu, kwani walitishwa na uwepo wake.
4 ಯೋಸೇಫನು, “ನನ್ನ ಹತ್ತಿರಕ್ಕೆ ದಯಮಾಡಿ ಬನ್ನಿರಿ” ಎಂದು ಅಣ್ಣಂದಿರಿಗೆ ಹೇಳಲು ಅವರು ಹತ್ತಿರಕ್ಕೆ ಬಂದರು. ಅವನು ಅವರಿಗೆ “ಐಗುಪ್ತ ದೇಶಕ್ಕೆ ಮಾರಿಬಿಟ್ಟ ನಿಮ್ಮ ತಮ್ಮನಾದ ಯೋಸೇಫನು ನಾನೇ.
Kisha Yusufu akawambia ndugu zake, “Nikaribieni, tafadhari.” Nao wakasogea. Akawambia, “Mimi ni Yusufu ndugu yenu, mliyemwuza Misri.
5 ನೀವು ನನ್ನನ್ನು ಹಾಗೆ ಮಾರಿದ್ದಕ್ಕಾಗಿ ವ್ಯಸನಪಟ್ಟು ದುಃಖಿಸಬೇಡಿರಿ. ಪ್ರಾಣ ಸಂರಕ್ಷಣೆಗಾಗಿ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದನು.
Lakini sasa msihuzunike au kukasirika miongoni mwenu kwamba mliniuza huku, kwani Mungu alinituma mbele yenu ili kutunza uhai.
6 ದೇಶಕ್ಕೆ ಬರ ಬಂದು ಎರಡು ವರ್ಷವಾಗಿದೆಯಷ್ಟೆ. ಇನ್ನೂ ಐದು ವರ್ಷಗಳ ಪರ್ಯಂತರ ಬಿತ್ತುವುದಕ್ಕಾಗಲಿ, ಕೊಯ್ಯುವುದಕ್ಕಾಗಲಿ, ಅವಕಾಶವಿಲ್ಲ.
Maana ni miaka miwili njaa imekuwa katika nchi, na bado kuna miaka mitano ambayo hakutakuwa na kulima wala kuvuna.
7 ನಿಮ್ಮ ಸಂತತಿ ಭೂಮಿಯ ಮೇಲೆ ಉಳಿಯುವಂತೆಯೂ ನೀವು ಈ ವಿಪತ್ತಿಗೆ ಸಿಕ್ಕದೆ, ಬಹು ಜನವಾಗುವಂತೆಯೂ ದೇವರು ನನ್ನನ್ನು ಮೊದಲು ಕಳುಹಿಸಿದನು.
Mungu alinituma mbele yenu kuwahifadhi kama masalia duniani, na kuwaweka hai kwa ukombozi mkuu.
8 “ದೇವರೇ ನನ್ನನ್ನು ಇಲ್ಲಿಗೆ ಕಳುಹಿಸಿದನಲ್ಲದೆ ನೀವು ಕಳುಹಿಸಲಿಲ್ಲ. ನನ್ನ ತಂದೆಯು ನನ್ನನ್ನು ಫರೋಹನ ಮಂತ್ರಿಯನ್ನಾಗಿಯೂ, ಫರೋಹನ ಅರಮನೆಯಲ್ಲಿ ಅಧಿಪತಿಯನ್ನಾಗಿಯೂ, ಐಗುಪ್ತ ದೇಶಕ್ಕೆ ಸರ್ವಾಧಿಕಾರಿಯನ್ನಾಗಿಯೂ ಮಾಡಿದ್ದಾನೆ.
Hivyo si ninyi mlionipeleka huku bali ni Mungu, na amenifanya baba kwa Farao, bwana wa nyumba yake yote, na mtawala wa nchi yote ya Misri.
9 ನೀವು ಬೇಗ ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ, ‘ನಿನ್ನ ಮಗನಾದ ಯೋಸೇಫನು ಹೀಗೆನ್ನುತ್ತಾನೆ, ದೇವರು ನನ್ನನ್ನು ಐಗುಪ್ತ ದೇಶಕ್ಕೆ ಸರ್ವಾಧಿಕಾರಿಯನ್ನಾಗಿ ನೇಮಿಸಿದ್ದಾನೆ. ನೀನು ತಡಮಾಡದೆ ನನ್ನ ಬಳಿಗೆ ಬಾ.
Fanyeni haraka mwende kwa baba yangu na mmwambie, 'Hivi ndivyo asemavyo Yusufu mwanao, “Mungu amenifanya bwana kwa Wamisri wote. Shuka kwangu, usikawie.
10 ೧೦ ಗೋಷೆನ್ ಸೀಮೆಯಲ್ಲಿ ನೀನು ವಾಸಮಾಡಬಹುದು. ನೀನೂ, ನಿನ್ನ ಮಕ್ಕಳೂ, ಮೊಮ್ಮಕ್ಕಳೂ, ಕುರಿದನಗಳೂ ಮೊದಲಾದ ಎಲ್ಲವೂ ನನ್ನ ಬಳಿಯಲ್ಲೇ ಇರಬೇಕು.
Utaishi katika nchi ya Gosheni, nawe utakuwa karibu nami, wewe na watoto wako na watoto wa watoto wako, na kondoo wako na mbuzi wako, na yote uliyonayo.
11 ೧೧ ಈ ಬರಗಾಲ ಮುಗಿಯುವುದಕ್ಕೆ ಇನ್ನೂ ಐದು ವರ್ಷ ಹೋಗಬೇಕು. ಆದ್ದರಿಂದ ನಿನಗೂ, ನಿನ್ನ ಮನೆಯವರಿಗೂ ನಿನಗಿರುವ ಎಲ್ಲವುಗಳಿಗೂ ಬಡತನವುಂಟಾಗದಂತೆ ಇಲ್ಲಿ ನಿನ್ನನ್ನು ಪೋಷಿಸುವೆನೆಂದು’ ಹೇಳುತ್ತಾನೆ ಎಂಬುದಾಗಿ ತಿಳಿಸಿರಿ.
Nami nitakuhudumia pale, kwa maana bado kuna miaka mitano ya njaa, hivyo usije ukaingia katika uhitaji, wewe, nyumba yako, na yote uliyonayo.”
12 ೧೨ “ನಾನು ಸ್ವತಃ ನಿಮ್ಮ ಸಂಗಡ ಮಾತನಾಡಿದ್ದೆನಲ್ಲಾ. ಅದಕ್ಕೆ ನೀವೇ ಸಾಕ್ಷಿ. ನನ್ನ ಒಡಹುಟ್ಟಿದವನಾದ ಬೆನ್ಯಾಮೀನನೂ ಸಾಕ್ಷಿ.
Tazama, macho yenu yanaona, na macho ya Benjamini ndugu yangu, kwamba ni kinywa changu kinachoongea nanyi.
13 ೧೩ ಐಗುಪ್ತ ದೇಶದಲ್ಲಿ ನನಗಿರುವ ಎಲ್ಲಾ ವೈಭವವನ್ನೂ, ನೀವು ಕಂಡಿದ್ದೆಲ್ಲವನ್ನು ತಂದೆಗೆ ತಿಳಿಸಿ ಬೇಗನೆ ಅವನನ್ನು ಇಲ್ಲಿಗೆ ಕರೆದುಕೊಂಡು ಬರಬೇಕು” ಎಂದು ಹೇಳಿ,
Mtamwambia baba yangu juu ya heshima yangu yote huku Misri na yote mliyoyaona. Mtaharakisha na kumleta baba yangu huku.”
14 ೧೪ ತನ್ನ ತಮ್ಮನಾದ ಬೆನ್ಯಾಮೀನನ ಕೊರಳನ್ನು ಅಪ್ಪಿಕೊಂಡು ಅತ್ತನು. ಬೆನ್ಯಾಮೀನನೂ ಅವನ ಕೊರಳನ್ನು ಅಪ್ಪಿಕೊಂಡು ಅತ್ತನು.
Akaikumbatia shingo ya Benjamini ndugu yake na kulia, na Benjamini akalia shongoni mwake.
15 ೧೫ ಇದಲ್ಲದೆ ಅವನು ತನ್ನ ಅಣ್ಣಂದಿರಲ್ಲಿ ಪ್ರತಿಯೊಬ್ಬನಿಗೂ ಮುದ್ದಿಟ್ಟು ಅವರನ್ನು ಅಪ್ಪಿಕೊಂಡು ಅತ್ತನು. ತರುವಾಯ ಅವರು ಅವನ ಸಂಗಡ ಮಾತನಾಡಿದರು.
Akawabusu ndugu zake wote na kulia kwa ajili yao. Baada ya hayo ndugu zake wakaongea naye.
16 ೧೬ ಯೋಸೇಫನ ಅಣ್ಣತಮ್ಮಂದಿರು ಬಂದ ಸಮಾಚಾರವು ಫರೋಹನ ಮನೆಯವರಿಗೆ ತಿಳಿದಾಗ ಫರೋಹನಿಗೂ ಅವನ ಪರಿವಾರದವರಿಗೂ ಸಂತೋಷವಾಯಿತು.
Habari ya jambo hili ikasemwa katika nyumba ya Farao: “Ndugu zake Yusufu wamekuja.” Ikampendeza sana Farao na watumishi wake.
17 ೧೭ ಫರೋಹನು ಯೋಸೇಫನನ್ನು ಕರೆಯಿಸಿ, “ನೀನು ನಿನ್ನ ಅಣ್ಣತಮ್ಮಂದಿರಿಗೆ ತಿಳಿಸಬೇಕಾದ ನನ್ನ ಆಜ್ಞೆ ಏನೆಂದರೆ ‘ನಿಮ್ಮ ಕತ್ತೆಗಳ ಮೇಲೆ ಸಾಮಾನುಗಳನ್ನು ಹೇರಿ ಕಾನಾನ್ ದೇಶಕ್ಕೆ ಹೋಗಿ,
Farao akamwambia Yusufu, “Wambie ndugu zako, 'Fanyeni hivi: Wapakieni wanyama wenu na mwende katika nchi ya Kanaani.
18 ೧೮ ನಿಮ್ಮ ತಂದೆಯನ್ನೂ ಮನೆಯವರನ್ನೂ ನನ್ನ ಬಳಿಗೆ ಕರೆದುಕೊಂಡು ಬನ್ನಿರಿ. ನಾನು ನಿಮಗೆ ಐಗುಪ್ತ ದೇಶದಲ್ಲಿ ದೊರಕುವ ಉತ್ತಮ ವಸ್ತುಗಳನ್ನು ನಿಮಗೆ ಕೊಡುವೆನು ಮತ್ತು ನೀವು ಈ ದೇಶದ ಸುಖವನ್ನು ಅನುಭವಿಸುವಿರಿ.
Mchukueni baba yenu na nyumba zenu mnijie. Nami nitawapa mema ya nchi ya Misri, nanyi mtakula unono wa nchi.'
19 ೧೯ ಮತ್ತು ನಿಮ್ಮ ಹೆಂಡತಿ ಮಕ್ಕಳಿಗೋಸ್ಕರ ಐಗುಪ್ತ ದೇಶದಿಂದ ರಥಗಳನ್ನು ತೆಗೆದುಕೊಂಡು ಹೋಗಿ ನಿಮ್ಮ ತಂದೆಯನ್ನು ಕರೆದುಕೊಂಡು ಬನ್ನಿರಿ.
Basi mmeamriwa, 'Fanyeni hivi, chukueni mikokoteni kutoka Misri kwa ajili ya watoto wenu na kwa ajili ya wake zenu. Mchukueni baba yenu na kuja.
20 ೨೦ ನಿಮ್ಮ ಸಾಮಗ್ರಿಗಳಿಗಾಗಿ ಚಿಂತಿಸಬೇಡಿರಿ. ಐಗುಪ್ತ ದೇಶದಲ್ಲೆಲ್ಲಾ ಇರುವ ಉತ್ತಮ ವಸ್ತುಗಳು ನಿಮ್ಮದೇ’” ಎಂದು ಹೇಳಿದನು.
Msijari kuhusu mali zenu, kwani mema yote ya nchi ya Misri ni yenu.”
21 ೨೧ ಇಸ್ರಾಯೇಲನ ಮಕ್ಕಳು ಅದೇ ರೀತಿಯಾಗಿ ಮಾಡಿದರು. ಫರೋಹನ ಅಪ್ಪಣೆಯ ಪ್ರಕಾರ ಯೋಸೇಫನು ಅವರಿಗೆ ರಥಗಳನ್ನೂ ಮಾರ್ಗಕ್ಕೆ ಬೇಕಾದ ಆಹಾರವನ್ನೂ ಕೊಡಿಸಿದನು.
Wana wa Israeli wakafanya hivyo. Yusufu akawapa mikokoteni, kwa kadili ya agizo la Farao, na akawapa mahitaji ya safari.
22 ೨೨ ಇದಲ್ಲದೆ ಪ್ರತಿಯೊಬ್ಬನಿಗೂ ಶ್ರೇಷ್ಠ ವಸ್ತ್ರಗಳನ್ನು ಕೊಟ್ಟನು. ಬೆನ್ಯಾಮೀನನಿಗೋ ಮುನ್ನೂರು ಬೆಳ್ಳಿ ನಾಣ್ಯಗಳನ್ನೂ ಹಾಗೂ ಐದು ಶ್ರೇಷ್ಠ ವಸ್ತ್ರಗಳನ್ನೂ ಕೊಟ್ಟನು.
Akawapa wote mavazi ya kubadilisha, lakini akampa Benjamini vipande mia tatu vya fedha na mavazi matano ya kubadilisha.
23 ೨೩ ತನ್ನ ತಂದೆಗೋಸ್ಕರ ಐಗುಪ್ತ ದೇಶದ ಒಳ್ಳೆಯ ವಸ್ತುಗಳನ್ನು ಹತ್ತು ಕತ್ತೆಗಳ ಮೇಲೆ ಹೇರಿಸಿ, ಹತ್ತು ಹೆಣ್ಣುಕತ್ತೆಗಳ ಮೇಲೆ ತನ್ನ ತಂದೆಗೆ ಪ್ರಯಾಣಕ್ಕೆ ಬೇಕಾದ ದವಸ ಧಾನ್ಯಗಳನ್ನು, ರೊಟ್ಟಿ ಮತ್ತು ಇತರ ಆಹಾರವನ್ನು ಕಳುಹಿಸಿದನು.
Akampelekea baba yake: punda kumi waliobeba mema ya Misri, punda majike kumi wamebeba nafaka, mikate, na mahitaji mengine kwa baba yake kwa ajili ya safari.
24 ೨೪ ಆಗ ತನ್ನ ಅಣ್ಣತಮ್ಮಂದಿರಿಗೆ, “ನೀವು ದಾರಿಯಲ್ಲಿ ಜಗಳಮಾಡಬೇಡಿರಿ” ಎಂದು ಬುದ್ಧಿ ಹೇಳಿ ಅವರಿಗೆ ಹೋಗುವುದಕ್ಕೆ ಅಪ್ಪಣೆಕೊಟ್ಟನು. ಅವರು ಹೊರಟು ಹೋದರು.
Hivyo akawaruhusu ndugu zake nao wakaondoka. Akawambia, “Angalieni msijemkagombana njiani.”
25 ೨೫ ಅವರು ಐಗುಪ್ತ ದೇಶವನ್ನು ಬಿಟ್ಟು ಕಾನಾನ್ ದೇಶಕ್ಕೆ ಸೇರಿ ತಂದೆಯಾದ ಯಾಕೋಬನ ಬಳಿಗೆ ಬಂದರು.
Wakapanda kutoka Misri na kuja katika nchi ya Kanaani, kwa Yakobo baba yao.
26 ೨೬ ಅವನಿಗೆ, “ಯೋಸೇಫನು ಇನ್ನೂ ಜೀವದಿಂದ ಇದ್ದಾನೆ ಅವನು ಐಗುಪ್ತ ದೇಶದ ಸರ್ವಾಧಿಕಾರಿಯಾಗಿದ್ದಾನೆ” ಎಂದು ತಿಳಿಸಲು, ಅವನು ಆಶ್ಚರ್ಯಪಟ್ಟು ನಂಬಲಿಲ್ಲ.
Wakamwambia “Yusufu bado yu hai, na ndiye mtawala juu ya nchi yote ya Misri.” Na moyo wake ulishikwa na ushangao, kwani hakuwaamini.
27 ೨೭ ತರುವಾಯ ಯೋಸೇಫನು ಹೇಳಿ ಕಳುಹಿಸಿದ್ದ ಎಲ್ಲಾ ಮಾತುಗಳನ್ನು ಕೇಳಿ ತನ್ನ ಪ್ರಯಾಣಕ್ಕೋಸ್ಕರ ಯೋಸೇಫನ ಕಡೆಯಿಂದ ಬಂದ ರಥಗಳನ್ನು ನೋಡಿದಾಗ ಯಾಕೋಬನ ಆತ್ಮವು ಉಲ್ಲಾಸಗೊಂಡಿತು, ಅಲ್ಲದೆ ಅವನಿಗೆ ಹೊಸ ಜೀವ ಬಂದಂತಾಯಿತು.
Wakamwambia maneno yote ya Yusufu aliyokuwa amewambia. Yakobo alipoona mikokoteni Yusufu aliyokuwa amepeleka kuwabeba, roho ya Yakobo baba yao ikafufuka.
28 ೨೮ ಆಗ ಇಸ್ರಾಯೇಲನು, “ನನ್ನ ಮಗನಾದ ಯೋಸೇಫನು ಜೀವಂತವಾಗಿದ್ದಾನೆ. ನಾನು ಸಾಯುವುದಕ್ಕಿಂತ ಮೊದಲು ಹೋಗಿ ಅವನನ್ನು ನೋಡುವೆನು” ಎಂದನು.
Israeli akasema, “Inatosha. Yusufu mwanangu yu hai. Nitakwenda nikamwone kabla sijafa.”

< ಆದಿಕಾಂಡ 45 >