+ ಆದಿಕಾಂಡ 1 >

1 ಆದಿಯಲ್ಲಿ ದೇವರು ಆಕಾಶವನ್ನು, ಭೂಮಿಯನ್ನು ಸೃಷ್ಟಿಮಾಡಿದನು.
Hapo mwanzo Mungu aliumba mbingu na dunia.
2 ಭೂಮಿಯು ಕ್ರಮವಿಲ್ಲದೆಯೂ ಬರಿದಾಗಿಯೂ ಇತ್ತು. ಆದಿಸಾಗರದ ಮೇಲೆ ಕತ್ತಲಿತ್ತು. ದೇವರಾತ್ಮವು ಸಾಗರದ ಮೇಲೆ ಚಲಿಸುತ್ತಿತ್ತು.
Wakati huu dunia ilikuwa haina umbo, tena ilikuwa tupu. Giza lilikuwa juu ya uso wa vilindi vya maji, naye Roho wa Mungu alikuwa ametulia juu ya maji.
3 ಅನಂತರ ದೇವರು “ಬೆಳಕಾಗಲಿ” ಎಂದು ಆಜ್ಞಾಪಿಸಲು ಬೆಳಕಾಯಿತು.
Mungu akasema, “Iwepo nuru,” nayo nuru ikawepo.
4 ದೇವರು ಆ ಬೆಳಕನ್ನು ಒಳ್ಳೆಯದೆಂದು ಕಂಡನು.
Mungu akaona ya kuwa nuru ni njema, ndipo Mungu akatenganisha nuru na giza.
5 ದೇವರು ಬೆಳಕನ್ನೂ ಕತ್ತಲನ್ನೂ ಬೇರ್ಪಡಿಸಿ ಬೆಳಕಿಗೆ “ಹಗಲು” ಎಂದೂ, ಕತ್ತಲೆಗೆ “ಇರುಳು” ಎಂದೂ ಹೆಸರಿಟ್ಟನು. ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಮೊದಲನೆಯ ದಿನವಾಯಿತು.
Mungu akaiita nuru “mchana,” na giza akaliita “usiku.” Ikawa jioni, ikawa asubuhi, siku ya kwanza.
6 ಬಳಿಕ ದೇವರು “ಜಲರಾಶಿಗಳ ನಡುವೆ ವಿಸ್ತಾರವಾದ ಗುಮ್ಮಟವು ಉಂಟಾಗಲಿ ಅದು ಕೆಳಗಿನ ನೀರುಗಳನ್ನೂ ಮೇಲಿನ ನೀರುಗಳನ್ನೂ ಬೇರೆ ಬೇರೆ ಮಾಡಲಿ” ಅಂದನು.
Mungu akasema, “Iwepo nafasi kati ya maji igawe maji na maji.”
7 ದೇವರು ವಿಸ್ತಾರವಾದ ಗುಮ್ಮಟವನ್ನು ಮಾಡಿ ಅದರ ಕೆಳಗಿದ್ದ ನೀರುಗಳನ್ನು ಅದರ ಮೇಲಿದ್ದ ನೀರುಗಳಿಂದ ವಿಂಗಡಿಸಿದನು. ಅದು ಹಾಗೆಯೇ ಆಯಿತು.
Kwa hiyo Mungu akafanya nafasi, akatenganisha maji yaliyo chini ya hiyo nafasi na maji yaliyo juu yake. Ikawa hivyo.
8 ದೇವರು ಆ ಗುಮ್ಮಟಕ್ಕೆ “ಆಕಾಶ” ಎಂದು ಹೆಸರಿಟ್ಟನು. ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಎರಡನೆಯ ದಿನವಾಯಿತು.
Mungu akaiita hiyo nafasi “anga.” Ikawa jioni, ikawa asubuhi, siku ya pili.
9 ಅನಂತರ ದೇವರು, “ಆಕಾಶದ ಕೆಳಗಿರುವ ನೀರೆಲ್ಲಾ ಒಂದೇ ಸ್ಥಳದಲ್ಲಿ ಒಟ್ಟಿಗೆ ಕೂಡಿಕೊಳ್ಳಲಿ ಮತ್ತು ಒಣನೆಲವು ಕಾಣಿಸಲಿ” ಅಂದನು. ಹಾಗೆಯೇ ಆಯಿತು.
Mungu akasema, “Maji yaliyopo chini ya anga na yakusanyike mahali pamoja, pawepo na nchi kavu.” Ikawa hivyo.
10 ೧೦ ದೇವರು ಒಣನೆಲಕ್ಕೆ “ಭೂಮಿ” ಎಂದೂ ಜಲರಾಶಿಗೆ “ಸಮುದ್ರ” ಎಂದೂ ಹೆಸರಿಟ್ಟನು. ಆತನು ಅದನ್ನು ಒಳ್ಳೆಯದೆಂದು ನೋಡಿದನು.
Mungu akaiita nchi kavu “ardhi,” nalo lile kusanyiko la maji akaliita “bahari.” Mungu akaona kuwa ni vyema.
11 ೧೧ ತರುವಾಯ ದೇವರು, “ಭೂಮಿಯು ಹುಲ್ಲನ್ನು, ಸಸ್ಯಗಳನ್ನೂ, ಬೀಜಬಿಡುವ ಕಾಯಿಪಲ್ಯದ ಗಿಡಗಳನ್ನೂ ಬೆಳೆಯಿಸಲಿ ಮತ್ತು ಬೀಜವುಳ್ಳ ಹಣ್ಣಿನ ಮರಗಳನ್ನು ಅವುಗಳ ಜಾತಿಗನುಸಾರವಾಗಿ ಫಲಿಸಲಿ” ಎಂದು ಹೇಳಿದನು, ಹಾಗೆಯೇ ಆಯಿತು.
Kisha Mungu akasema, “Ardhi na itoe mimea: miche itoayo mbegu, miti juu ya nchi itoayo matunda yenye mbegu ndani yake, kila mmea kulingana na aina zake mbalimbali.” Ikawa hivyo.
12 ೧೨ ಭೂಮಿಯಲ್ಲಿ ಸಸ್ಯಗಳು ಬೆಳೆದವು. ತಮ್ಮ ತಮ್ಮ ಜಾತಿಯ ಪ್ರಕಾರ ಬೀಜಬಿಡುವ ಕಾಯಿಪಲ್ಯದ ಗಿಡಗಳು ಉಂಟಾದವು. ತಮ್ಮ ತಮ್ಮ ಜಾತಿಗನುಸಾರವಾಗಿ ಬೀಜವುಳ್ಳ ಹಣ್ಣಿನ ಮರಗಳು ಉತ್ಪತ್ತಿಯಾದವು. ದೇವರು ಅದನ್ನು ಒಳ್ಳೆಯದೆಂದು ಕಂಡನು
Ardhi ikachipua mimea: Mimea itoayo mbegu kulingana na aina zake, na miti itoayo matunda yenye mbegu kulingana na aina zake. Mungu akaona ya kuwa hili ni jema.
13 ೧೩ ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಮೂರನೆಯ ದಿನವಾಯಿತು.
Ikawa jioni, ikawa asubuhi, siku ya tatu.
14 ೧೪ ಬಳಿಕ ದೇವರು, “ಆಕಾಶ ಮಂಡಲದಲ್ಲಿ ಬೆಳಕುಗಳು ಉಂಟಾಗಲಿ. ಅವು ಹಗಲಿರುಳುಗಳನ್ನು ಬೇರೆ ಬೇರೆ ಮಾಡಲಿ. ಅವು ಕಾಲಗಳನ್ನೂ, ದಿನಸಂವತ್ಸರಗಳನ್ನೂ ಸೂಚಿಸುವ ಗುರುತುಗಳಾಗಿರಲಿ.
Mungu akasema, “Iwepo mianga kwenye nafasi ya anga ili itenganishe usiku na mchana, nayo iwe alama ya kutambulisha majira mbalimbali, siku na miaka,
15 ೧೫ ಭೂಮಿಯ ಮೇಲೆ ಬೆಳಕು ಕೊಡುವುದಕ್ಕೆ ಅವು ಆಕಾಶಮಂಡಲದಲ್ಲಿ ದೀಪಗಳಂತಿರಲಿ” ಅಂದನು. ಹಾಗೆಯೇ ಆಯಿತು.
nayo iwe mianga kwenye nafasi ya anga ya kutia nuru juu ya dunia.” Ikawa hivyo.
16 ೧೬ ದೇವರು ಹಗಲನ್ನಾಳುವುದಕ್ಕೆ ದೊಡ್ಡ ದೀಪವನ್ನೂ ಇರುಳನ್ನಾಳುವುದಕ್ಕೆ ಚಿಕ್ಕ ದೀಪವನ್ನೂ ಹೀಗೆ ಎರಡು ದೊಡ್ಡ ದೀಪಗಳನ್ನು ಉಂಟು ಮಾಡಿದನು. ಆತನು ನಕ್ಷತ್ರಗಳನ್ನು ಸಹ ಉಂಟು ಮಾಡಿದನು.
Mungu akafanya mianga miwili mikubwa: mwanga mkubwa utawale mchana, na mwanga mdogo utawale usiku. Pia Mungu akafanya nyota.
17 ೧೭ ದೇವರು ಆ ಬೆಳಕುಗಳನ್ನು ಆಕಾಶದಲ್ಲಿ ನಿಲ್ಲಿಸಿ ಭೂಮಿಯ ಮೇಲೆ ಬೆಳಕು ಕೊಡುವುದಕ್ಕೂ
Mungu akaiweka katika nafasi ya anga iangaze dunia,
18 ೧೮ ಹಗಲಿರುಳುಗಳನ್ನು ಆಳುವುದಕ್ಕೂ ಬೆಳಕನ್ನು, ಕತ್ತಲನ್ನು ಬೇರೆ ಬೇರೆ ಮಾಡುವುದಕ್ಕೂ ಅವುಗಳನ್ನು ನೇಮಿಸಿದನು. ದೇವರು ಅದನ್ನು ಒಳ್ಳೆಯದೆಂದು ಕಂಡನು.
itawale usiku na mchana, na ikatenganishe nuru na giza. Mungu akaona kuwa hili ni jema.
19 ೧೯ ಸಾಯಂಕಾಲವೂ ಉದಯಕಾಲವೂ ಆಗಿ ನಾಲ್ಕನೆಯ ದಿನವಾಯಿತು.
Ikawa jioni, ikawa asubuhi, siku ya nne.
20 ೨೦ ತರುವಾಯ ದೇವರು, “ಗುಂಪು ಗುಂಪಾಗಿ ಚಲಿಸುವ ಜಲಜಂತುಗಳು ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಅಂತರಿಕ್ಷದಲ್ಲಿ ಹಾರಾಡಲಿ” ಎಂದು ಹೇಳಿದನು.
Mungu akasema, “Kuwepo na viumbe hai tele kwenye maji, nao ndege waruke juu ya dunia katika nafasi ya anga.”
21 ೨೧ ಹೀಗೆ ದೇವರು ಮಹಾ ಜಲಚರಗಳನ್ನೂ ನೀರಿನಲ್ಲಿ ತುಂಬಿರುವ ಸಕಲ ವಿಧವಾದ ಜೀವಿಗಳನ್ನೂ ರೆಕ್ಕೆಗಳುಳ್ಳ ಸಕಲವಿಧವಾದ ಪಕ್ಷಿಗಳನ್ನೂ ಅವುಗಳ ಜಾತಿಗನುಸಾರವಾಗಿ ಉಂಟುಮಾಡಿದನು. ಆತನು ಅದನ್ನು ಒಳ್ಳೆಯದೆಂದು ಕಂಡನು.
Kwa hiyo Mungu akaumba viumbe wakubwa wa baharini na kila kiumbe hai kiendacho majini kulingana na aina zake, na kila ndege mwenye mabawa kulingana na aina yake. Mungu akaona kuwa hili ni jema.
22 ೨೨ ಇದಲ್ಲದೆ ದೇವರು, “ಅವುಗಳಿಗೆ ನೀವು ಅಭಿವೃದ್ಧಿಯಾಗಿ ಹೆಚ್ಚಿರಿ, ಜಲಚರಗಳು ಸಮುದ್ರದ ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಹೆಚ್ಚಲಿ” ಎಂದು ಹೇಳಿ ಆಶೀರ್ವದಿಸಿದನು.
Mungu akavibariki, akasema, “Zaeni mwongezeke, mkayajaze maji ya bahari, nao ndege waongezeke katika dunia.”
23 ೨೩ ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಐದನೆಯ ದಿನವಾಯಿತು.
Ikawa jioni, ikawa asubuhi, siku ya tano.
24 ೨೪ ಬಳಿಕ ದೇವರು, “ಭೂಮಿಯಿಂದ ಜೀವಜಂತುಗಳು ಉಂಟಾಗಲಿ; ಪಶು, ಕ್ರಿಮಿಗಳೂ ಕಾಡುಮೃಗಗಳು, ತಮ್ಮ ತಮ್ಮ ಜಾತಿಗನುಸಾರವಾಗಿ ಹುಟ್ಟಲಿ” ಅಂದನು. ಹಾಗೆಯೇ ಆಯಿತು.
Mungu akasema, “Ardhi na itoe viumbe hai kulingana na aina zake: wanyama wa kufugwa, viumbe vitambaavyo ardhini na wanyama pori, kila mnyama kulingana na aina yake.” Ikawa hivyo.
25 ೨೫ ದೇವರು ಕಾಡುಮೃಗಗಳನ್ನೂ, ಪಶುಗಳನ್ನೂ, ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳನ್ನೂ ಅವುಗಳ ಜಾತಿಗನುಸಾರವಾಗಿ ಉಂಟುಮಾಡಿದನು. ಆತನು ಅದನ್ನು ಒಳ್ಳೆಯದೆಂದು ಕಂಡನು.
Mungu akafanya wanyama pori kulingana na aina zake, wanyama wa kufugwa kulingana na aina zake, na viumbe vyote vitambaavyo juu ya ardhi kulingana na aina zake. Mungu akaona kuwa hili ni jema.
26 ೨೬ ಆಮೇಲೆ ದೇವರು, ನಮ್ಮ ಸ್ವರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯರನ್ನು ಉಂಟು ಮಾಡೋಣ. ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ, ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ, ಪ್ರಾಣಿಗಳ ಮೇಲೆಯೂ, ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಕೀಟಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ದೊರೆತನಮಾಡಲಿ ಅಂದನು.
Ndipo Mungu akasema, “Tufanye mtu kwa mfano wetu, kwa sura yetu, wakatawale juu ya samaki wa baharini na ndege wa angani, juu ya mifugo, juu ya dunia yote, na juu ya viumbe wote watambaao juu ya nchi.”
27 ೨೭ ಹೀಗೆ ದೇವರು; “ಮನುಷ್ಯನನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದನು. ದೇವರ ಸ್ವರೂಪದಲ್ಲಿ ಅವನನ್ನು ಉಂಟುಮಾಡಿದನು. ಅವರನ್ನು ಗಂಡುಹೆಣ್ಣಾಗಿ ಸೃಷ್ಟಿ ಮಾಡಿದನು.”
Kwa hiyo Mungu akamuumba mtu kwa mfano wake mwenyewe, kwa mfano wa Mungu alimuumba; mwanaume na mwanamke aliwaumba.
28 ೨೮ ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿ, “ನೀವು ಬಹು ಸಂತಾನವುಳ್ಳವರಾಗಿ ಹೆಚ್ಚಿರಿ. ಭೂಮಿಯಲ್ಲಿ ತುಂಬಿಕೊಂಡು ಅದನ್ನು ವಶಮಾಡಿಕೊಳ್ಳಿರಿ. ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲಾ ಜೀವಿಗಳ ಮೇಲೆಯೂ ದೊರೆತನ ಮಾಡಿರಿ” ಎಂದು ಅವರಿಗೆ ಹೇಳಿದನು.
Mungu akawabariki na akawaambia, “Zaeni na mkaongezeke, mkaijaze tena dunia na kuitiisha. Mkatawale samaki wa baharini, ndege wa angani, na kila kiumbe hai kiendacho juu ya ardhi.”
29 ೨೯ ಅಲ್ಲದೆ ದೇವರು, “ಇಗೋ, ಸಮಸ್ತ ಭೂಮಿಯ ಮೇಲಿರುವ ಬೀಜವುಳ್ಳ ಎಲ್ಲಾ ಪೈರುಗಳನ್ನೂ, ಬೀಜವುಳ್ಳ ಎಲ್ಲಾ ಹಣ್ಣಿನ ಮರಗಳನ್ನೂ ನಿಮಗೆ ಆಹಾರಕ್ಕಾಗಿ ಕೊಟ್ಟಿದ್ದೇನೆ
Kisha Mungu akasema, “Nimewapa kila mche utoao mbegu juu ya uso wa dunia yote, na kila mti wenye matunda yenye mbegu ndani yake. Vitakuwa chakula chenu.
30 ೩೦ ಇದಲ್ಲದೆ ಭೂಮಿಯ ಮೇಲೆ ತಿರುಗಾಡುವ ಮೃಗಗಳು, ಆಕಾಶದಲ್ಲಿ ಹಾರಾಡುವ ಪಕ್ಷಿಗಳು, ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳು ಮೊದಲಾದ ಜೀವಿಗಳಿಗೆ ಹಸುರಾದ ಸಸ್ಯಗಳನ್ನೆಲ್ಲಾ ಆಹಾರಕ್ಕಾಗಿ ಕೊಟ್ಟಿದ್ದೇನೆ” ಎಂದು ಹೇಳಿದನು. ಅದು ಹಾಗೆಯೇ ಆಯಿತು.
Nao wanyama wote wa dunia, ndege wote wa angani, na viumbe vyote viendavyo juu ya ardhi: yaani kila kiumbe chenye pumzi ya uhai, ninawapa kila mche wa kijani kuwa chakula.” Ikawa hivyo.
31 ೩೧ ದೇವರು ತಾನು ಉಂಟುಮಾಡಿದ್ದನ್ನೆಲ್ಲಾ ನೋಡಲಾಗಿ ಅವೆಲ್ಲವೂ ಬಹು ಒಳ್ಳೆಯದಾಗಿ ತೋರಿತು. ಸಾಯಂಕಾಲವೂ ಉದಯಕಾಲವೂ ಆಗಿ ಆರನೆಯ ದಿನವಾಯಿತು.
Mungu akaona vyote alivyoumba, na tazama, ilikuwa vizuri sana. Ikawa jioni, ikawa asubuhi, siku ya sita.

+ ಆದಿಕಾಂಡ 1 >