< ಹಬಕ್ಕೂಕನು 1 >

1 ಪ್ರವಾದಿಯಾದ ಹಬಕ್ಕೂಕನಿಗೆ ಕಂಡುಬಂದ ದೈವೋಕ್ತಿ.
Ujumbe ambao habakuki nabii alipokea,
2 ಯೆಹೋವನೇ, ನಾನು ಎಷ್ಟು ಕಾಲ ನಿನಗೆ ಸಹಾಯಕ್ಕಾಗಿ ಮೊರೆಯಿಡುತ್ತಿರಬೇಕು? ನೀನು ಎಷ್ಟು ಕಾಲ ಕೇಳದೇ ಇರುವಿ? ಹಿಂಸೆ, ಹಿಂಸೆ ಎಂದು ನಿನ್ನನ್ನು ಕೂಗಿಕೊಂಡರೂ ರಕ್ಷಿಸದೇ ಇರುವಿ.
Yahwe, kwa muda gani nitalilia msaada, na hutasikia? Nimekulilia wewe katika kitisho, 'vurugu' lakini hutaniokoa.
3 ಕೇಡನ್ನೇ ನನ್ನ ಕಣ್ಣಿಗೆ ಏಕೆ ಕಾಣಿಸುವಂತೆ ಮಾಡಿದ್ದಿ? ಕಷ್ಟವನ್ನೇಕೆ ಅನುಭವಿಸುವಂತೆ ಮಾಡಿರುವೆ? ಹಿಂಸೆಬಾಧೆಗಳು ನನ್ನ ಕಣ್ಣೆದುರಿಗೆ ಇದ್ದೇ ಇವೆ; ಜಗಳವಾಗುತ್ತಿದೆ ವ್ಯಾಜ್ಯವೇಳುತ್ತಿದೆ.
Kwanini unanifanya nione mabaya na kuangalia matendo mabaya. Uharibifu na vurugu uko mbele yangu; kuna mapambano, na ushindani unainuka.
4 ಹೀಗಿರಲು ಧರ್ಮೋಪದೇಶವು ಜಡವಾಗಿದೆ, ನ್ಯಾಯವು ಎಂದಿಗೂ ಸಾಧ್ಯವಾಗುತ್ತಿಲ್ಲ; ದುಷ್ಟರು ಶಿಷ್ಟರನ್ನು ಆಕ್ರಮಿಸಿರುವುದರಿಂದ ದೊರೆಯುವ ನ್ಯಾಯವೂ ವಕ್ರವಾಗಿಯೇ ಇರುತ್ತದೆ.
Walakini sheria ni dhaifu, na haki haiishi kwa wakati wowote. Sababu uovu umezunguka haki; walakini haki ya uongo inatoweka. “Yahwe” anamjibu habakuki
5 ಜನಾಂಗಗಳ ಮಧ್ಯೆ ನಡೆಯುವುದನ್ನು ದೃಷ್ಟಿಸಿ ನೋಡಿ. ಅದರಿಂದ ನೀವು ಬೆರಗಾಗಿ ಹೋಗುವಿರಿ; ನಿಮ್ಮ ಕಾಲದಲ್ಲೇ ನಾನು ಒಂದು ಕಾರ್ಯವನ್ನು ಮಾಡುವೆನು. ನಾನು ಆ ಕಾರ್ಯದ ಬಗ್ಗೆ ನಿಮಗೆ ಎಷ್ಟು ತಿಳಿಹೇಳಿದರೂ ನೀವು ನಂಬುವುದಿಲ್ಲ.
“Angalia mataifa na uwajaribu; stajaabishwa na shangazwa! Sababu nina uhakika kuhusu kufanya kitu katika siku zako kwamba hutaamini itakapotaarifiwa kwenu.
6 ಇಗೋ, ನಾನು ಶಕ್ತಿಶಾಲಿಗಳೂ, ತೀಕ್ಷ್ಣಬುದ್ಧಿಯುಳ್ಳವರೂ ಆಗಿರುವ ಕಸ್ದೀಯ ಜನಾಂಗದವರನ್ನು ನಿಮ್ಮ ವಿರುದ್ಧ ಹುರಿದುಂಬಿಸಿ ಎಬ್ಬಿಸುತ್ತೇನೆ; ಆ ಜನರು ಭಯಂಕರರೂ, ಉಗ್ರರೂ ಆಗಿ ತಮ್ಮದಲ್ಲದ ಸಂಸ್ಥಾನವನ್ನು ವಶಮಾಡಿಕೊಳ್ಳುವರು ಮತ್ತು ಲೋಕದಲ್ಲೆಲ್ಲಾ ಸಂಚರಿಸುವರು.
Sababu angalia! nakaribia kuwainua Wakaldayo - taifa katili na lenye kishindo - wanatembea kupitia upana wa nchi kuteka nyumba zisizo za kwao.
7 ಅವರ ಅಧಿಕಾರವನ್ನೂ ತಮ್ಮದೇ ಆದ ನ್ಯಾಯ ನೀತಿಯನ್ನೂ ರೂಪಿಸಿಕೊಂಡು; ಅವರ ಸ್ವ ಸಾಮರ್ಥ್ಯ, ಸ್ವ ಗೌರವಕ್ಕೆ ಪ್ರಾಮುಖ್ಯತೆ ನೀಡುವರು.
Wanahofu na kuogopa; hukumu yao na uzuri kutoka kwao unaendelea.
8 ಅವರ ಕುದುರೆಗಳು ಚಿರತೆಗಳಿಗಿಂತ ವೇಗವಾಗಿ ಓಡಬಲ್ಲವು, ಸಂಜೆಯ ತೋಳಗಳಿಗಿಂತ ಚುರುಕಾಗಿವೆ; ಅದರ ಸವಾರರು ರಭಸದಿಂದ ಹಾರಿಬರುವರು, ಬೇಟೆಯನ್ನು ಕಬಳಿಸಲು ಹಾರಿ ಬರುವ ರಣಹದ್ದಿನಂತೆ ದೂರದಿಂದ ಹಾರಿಬರುವರು.
Farasi wao pia wanambio sana kuliko chui, wepesi sana kuliko mbwa mwitu wa jioni. Farasi wao huwaseta, na wapanda farasi wao wanakuja kutoka mbali - wanapaa kama tai anayewahi kula.
9 ಹಿಂಸೆ, ಬಾಧೆಯನ್ನು ಗುರಿಯಾಗಿಟ್ಟುಕೊಂಡೆ ಮುನ್ನುಗ್ಗಿ ಬರುವರು. ಜನರನ್ನು ಮರಳಿನಂತೆ ಲೆಕ್ಕವಿಲ್ಲದಷ್ಟು ಸೆರೆಹಿಡಿದು ಗುಂಪು ಕೂಡಿಸುವರು.
Wote wanakuja kwa vurugu; makundi yao yanakwenda kama upepo wa jangwani, na wanakusanya mateka kama mchanga.
10 ೧೦ ಅವರು ಅರಸರನ್ನು ಧಿಕ್ಕರಿಸಿ ಅಪಹಾಸ್ಯ ಮಾಡುವರು. ಸರದಾರರು ಅಧಿಪತಿಗಳು ಅವರ ಪರಿಹಾಸ್ಯಕ್ಕೆ ಗುರಿಯಾಗುವರು. ಒಂದೊಂದು ಕೋಟೆಯನ್ನೂ ಆಕ್ರಮಿಸಿ ಧೂಳಿಪಟ ಮಾಡುವರು.
Wanawadhihaki wafalme, na viongozi ni dhihaka kwaajili yao. Huicheka kila ngome, maana hurundika mavumbi na kuyaondoa.
11 ೧೧ ಬಿರುಗಾಳಿಯಂತೆ ಬಂದು ಮಾಯವಾಗುವರು. ತಮ್ಮ ಸ್ವಂತ ಬಲವೇ ದೇವರು ಎಂದು ಭಾವಿಸಿ ಅಹಂಕಾರದಿಂದ ದೇವರನ್ನು ತಾತ್ಸಾರಮಾಡಿ ಅಪರಾಧಿಗಳಾಗಿ ದೈವಕೋಪಕ್ಕೆ ಗುರಿಯಾಗುವರು.
Ndipo upepo utapita; itaendelea kupita - watu wenye hatia, ambao uwezo wao ni katika mungu.” Habakuki anamuuliza Yahwe swali lingine
12 ೧೨ ನನ್ನ ದೇವರಾದ ಯೆಹೋವನೇ, ನನ್ನ ಸದಮಲಸ್ವಾಮಿಯೇ, ನೀನು ಅನಾದಿಯಿಂದಿದ್ದೀಯಲ್ಲಾ, ನಾವು ಖಂಡಿತ ಸಾಯುವುದಿಲ್ಲ. ಯೆಹೋವನೇ ನಮ್ಮ ನ್ಯಾಯತೀರ್ಪಿಗಾಗಿ ಅವರನ್ನು ನೇಮಿಸಿರುವೆ; ಶರಣನೇ, ನಮ್ಮನ್ನು ಶಿಕ್ಷಿಸುವುದಕ್ಕಾಗಿ ಅವರನ್ನು ನಮ್ಮ ಮುಂದೆ ನಿಲ್ಲಿಸಿರುವೆ.
“Wewe si wa tangu nyakati za zamani, Yahwe Mungu wangu, uliye Mtakatifu? Sisi hatutakufa. Yahwe aliwatenga kwaajili ya hukumu, na ninyi, Mwamba, mmeimarisha kwaajili ya kusahihisha.
13 ೧೩ ನೀನು ಕೇಡನ್ನು ಬಯಸುವಂತಹ ದೇವರಲ್ಲ, ಪವಿತ್ರ ದೃಷ್ಟಿಯಿಂದ ನೋಡುವ ನಿನ್ನ ಕಣ್ಣಿನ ರಕ್ಷಣೆ ನಮ್ಮೊಂದಿಗಿದೆ. ಆದರೆ ನಮಗಾಗುತ್ತಿರುವ ಕೇಡನ್ನು ನೋಡಿಯೂ ಏಕೆ ಸುಮ್ಮನಿರುವೆ? ದುಷ್ಟರು ತಮಗಿಂತ ಯೋಗ್ಯನನ್ನು ಕಬಳಿಸುತ್ತಿರುವುದನ್ನು ನೋಡಿ ಏಕೆ ಸುಮ್ಮನಿರುವೇ?
Macho yenu ni safi kuangaza juu ya uovu, lakini hamuwezi kuangalia matendo mabaya kwa fadhila; kwa nini mnaangalia kwa upendeleo hivyo juu ambao wanasaliti? Kwanini kunyamaza wakati uovu unameza sana wenye haki zaidi yao?
14 ೧೪ ಮನುಷ್ಯರನ್ನು ಸಮುದ್ರದ ಮೀನುಗಳ ಸ್ಥಿತಿಗೆ ಏಕೆ ತಂದಿದ್ದೀ, ಆಳುವವನಿಲ್ಲದ ಕ್ರಿಮಿಕೀಟಗಳ ಗತಿಗೆ ಏಕೆ ಬರಮಾಡಿದ್ದೀ?
unawafanya watu kama samaki baharini, kama vitu vitambaavyo bila kiongozi juu yao.
15 ೧೫ ನಲಿದಾಡುತ್ತಾ ಶತ್ರುಗಳು ನಮ್ಮನ್ನು ಗಾಳಗಳಿಂದ ಹಿಡಿದು ತಮ್ಮ ಬಲೆಗಳಲ್ಲಿ ರಾಶಿ ರಾಶಿಯಾಗಿ ಬಾಚಿಕೊಂಡು ಹೋಗಬೇಕೋ?
Wao wanawaleta wote kwa ndoano; wanawakokota watu kutoka kwenye nyavu za samaki na kuwakusanya kwenye wavu wao. Hii ndiyo sababu wanafurahi na kupiga kelele kwa uchangamfu sana.
16 ೧೬ ತಮ್ಮ ಬಲೆಗಳಿಗೆ ಆರಾಧನೆ ಮಾಡುತ್ತಾ ಬಲಿ ಕೊಡುತ್ತಾರೆ, ತಮ್ಮ ಜಾಲಗಳ ಎದುರು ಧೂಪಹಾಕುತ್ತಾರೆ; ಅವುಗಳ ಮೂಲಕವೇ ಅವರ ಭೋಜನವು ಪುಷ್ಟಿಯಾಯಿತು, ಅವರ ಆಹಾರವು ರುಚಿ ಎಂದು ಹೇಳುತ್ತಾರೆ.
Walakini wanatoa sadaka kwenye nyavu zao za kuvulia na kuchoma ubani kwenye nyavu zao, sababu wanyama wanene ni sehemu yao, na nyama iliyonona ni chakula chao.
17 ೧೭ ಹೀಗಿರಲು, ತಮ್ಮ ಬಲೆಗೆ ಸಿಕ್ಕಿದ್ದನ್ನು ಅವರು ನಿತ್ಯವೂ ಸುರಿಯುತ್ತಿರಲೋ, ಜನಾಂಗಗಳನ್ನು ಕರುಣಿಸದೆ ಸದಾ ಸಂಹರಿಸುತ್ತಿರಬೇಕೋ?
Kwa sababu hiyo watamaliza nyavu zao za kuvulia na kuendelea kuchicha mataifa, bila kuhisi huruma”?

< ಹಬಕ್ಕೂಕನು 1 >