< ಇಬ್ರಿಯರಿಗೆ ಬರೆದ ಪತ್ರಿಕೆ 10 >

1 ಧರ್ಮಶಾಸ್ತ್ರವು ಮುಂದೆ ಬರಬೇಕಾಗಿದ್ದ ಉತ್ತಮ ಸಂಗತಿಗಳ ಛಾಯೆಯೇ ಹೊರತು ಅವುಗಳ ನಿಜ ಸ್ವರೂಪವಲ್ಲ. ಆದ್ದರಿಂದ ಆ ಧರ್ಮಶಾಸ್ತ್ರವು ಪ್ರತಿ ವರ್ಷವೂ ಯಾವಾಗಲೂ ಅರ್ಪಿತವಾಗುವ ಒಂದೇ ವಿಧವಾದ ಯಜ್ಞಗಳನ್ನು ಅರ್ಪಿಸಿ, ದೇವರ ಸಮೀಪಕ್ಕೆ ಬರುವವರನ್ನು ಎಂದಿಗೂ ಪರಿಪೂರ್ಣತೆಗೆ ತರಲಾರದು.
Mivelhogy a törvény az eljövendő javaknak csak árnyéka és nem pedig a dolgok valóságos képe, ezért azokkal az áldozatokkal, amelyeket esztendőnként szüntelenül bemutatnak sohasem képesek tökéletességre juttatni az odajárulókat.
2 ತಂದಿದ್ದ ಪಕ್ಷದಲ್ಲಿ ಯಜ್ಞಗಳ ನಿಂತು ಹೋಗುತ್ತಿದ್ದವು, ಏಕೆಂದರೆ ಆರಾಧನೆ ಮಾಡುವವರು ಒಂದು ಸಾರಿ ಶುದ್ಧೀಕರಿಸಲ್ಪಟ್ಟ ಮೇಲೆ, ಅವರಿಗೆ ಪಾಪದ ಪ್ರಜ್ಞೆ ಎಂದಿಗೂ ಕಾಡುತ್ತಿರಲಿಲ್ಲ.
Különben megszűnt volna az áldozás, hiszen akik áldoztak és egyszer megtisztultak, nem éreztek volna bűntudatot.
3 ಈಗಲಾದರೋ ಆ ಯಜ್ಞಗಳಿಂದ ಪ್ರತಿ ವರ್ಷದಲ್ಲಿಯೂ ಪಾಪಗಳ ಜ್ಞಾಪಕವಾಗುವುದುಂಟು,
De az áldozatok évről-évre emlékeztetnek a bűnökre.
4 ಯಾಕೆಂದರೆ ಹೋರಿಗಳ ಮತ್ತು ಕುರಿಗಳ ರಕ್ತದಿಂದ ಪಾಪಗಳನ್ನು ಪರಿಹಾರಮಾಡುವುದು ಅಸಾಧ್ಯವಾಗಿದೆ.
Mert lehetetlen, hogy a bikák és bakok vére eltörölje a bűnöket.
5 ಆದ್ದರಿಂದ ಕ್ರಿಸ್ತನು ಭೂಲೋಕದೊಳಗೆ ಬರುವಾಗ, “(ದೇವರೇ, ) ಯಜ್ಞಗಳೂ ಕಾಣಿಕೆಗಳೂ ನಿನಗೆ ಇಷ್ಟವಾಗಿರಲಿಲ್ಲ, ಆದರೆ ನನಗೆ ಒಂದು ದೇಹವನ್ನು ಸಿದ್ಧಮಾಡಿಕೊಟ್ಟಿರುವೆ,
Ezért a világba való jövetelekor így szól az Úr: „Áldozatot és ajándékot nem akartál, de testet alkottál nekem.
6 ಸರ್ವಾಂಗಹೋಮಗಳಲ್ಲಿಯೂ ಪಾಪಪರಿಹಾರಕ ಯಜ್ಞಗಳಲ್ಲಿಯೂ ನೀನು ಸಂತೋಷಪಡುವುದಿಲ್ಲ.
Égő és bűnért való áldozatot nem kedveltél.
7 ಆಗ ನಾನು, ಇಗೋ, ದೇವರೇ, ಗ್ರಂಥದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದಿರುವ ಪ್ರಕಾರ ನಿನ್ನ ಚಿತ್ತವನ್ನು ನೆರವೇರಿಸುವುದಕ್ಕೆ ಬಂದಿದ್ದೇನೆ” ಎಂದು ಹೇಳಿದೆನು.
Akkor ezt mondtam: Íme itt vagyok, amint a könyvtekercsben írva van rólam hogy cselekedjem, ó, Isten, a te akaratodat.“
8 ಧರ್ಮಶಾಸ್ತ್ರದ ಪ್ರಕಾರ ಅರ್ಪಿಸಲ್ಪಟ್ಟ ಯಜ್ಞಗಳು, “ಸರ್ವಾಂಗಹೋಮಗಳು ಮತ್ತು ಪಾಪಪರಿಹಾರಕ ಯಜ್ಞಗಳು ನಿನಗೆ ಇಷ್ಟವಾಗಿರಲಿಲ್ಲ. ನೀನು ಅವುಗಳಲ್ಲಿ ಸಂತೋಷಪಡುವುದಿಲ್ಲ” ಎಂದು ಹೇಳಿದ್ದಾನೆ.
Előbb ezt mondta: „Áldozatot és ajándékot, égő és bűnért való áldozatokat nem akartál, sem nem kedveltél, amiket a törvény szerint mutatnak be.“
9 ತರುವಾಯ ಆತನು “ಇಗೋ, ನಿನ್ನ ಚಿತ್ತವನ್ನು ನೆರವೇರಿಸುವುದಕ್ಕೆ ಬಂದಿದ್ದೇನೆ” ಎಂದು ಹೇಳಿದ್ದಾನೆ. ಆತನು ಎರಡನೆಯದನ್ನು ಸ್ಥಾಪಿಸುವುದಕ್ಕಾಗಿ ಮೊದಲನೆಯದನ್ನು ತೆಗೆದುಬಿಡುತ್ತಾನೆ.
Később így szólt: „Íme, itt vagyok, hogy cselekedjem a te akaratodat.“Eltörli az elsőt, hogy életbe léptesse a másodikat.
10 ೧೦ ಯೇಸು ಕ್ರಿಸ್ತನು ಒಂದೇ ಸಾರಿ ದೇಹ ಸಮರ್ಪಣೆ ಮಾಡಿ ದೇವರ ಚಿತ್ತವನ್ನು ನೆರವೇರಿಸಿದ್ದರಿಂದಲೇ ನಾವು ಶುದ್ಧೀಕರಿಸಲ್ಪಟ್ಟವರಾಗಿರುವೆವು.
Ez az akarat megszentel minket egyszer s mindenkorra, Jézus Krisztus testének feláldozása által.
11 ೧೧ ಇದಲ್ಲದೆ ಪ್ರತಿಯೊಬ್ಬ ಯಾಜಕನು ಪ್ರತಿದಿನ ಸೇವೆಮಾಡುತ್ತಾ, ಎಂದಿಗೂ ಪಾಪಗಳನ್ನು ತೆಗೆದು ಹಾಕಲಾರದಂಥ, ಒಂದೇ ವಿಧವಾದ ಯಜ್ಞಗಳನ್ನು ಪದೇ ಪದೇ ಸಮರ್ಪಿಸುತ್ತಾ ನಿಂತುಕೊಂಡಿರುವನು.
Minden pap naponként szolgálatban áll, és sokszor mutatja be ugyanazokat az áldozatokat, amelyek sohasem képesek eltörölni a bűnöket.
12 ೧೨ ಆದರೆ ಕ್ರಿಸ್ತನು ಪಾಪಗಳಿಗೋಸ್ಕರ ಸದಾಕಾಲಕ್ಕೂ ಒಂದೇ ಯಜ್ಞವನ್ನು ಸಮರ್ಪಿಸಿದ ಮೇಲೆ ದೇವರ ಬಲಗಡೆಯಲ್ಲಿ ಕುಳಿತುಕೊಂಡನು.
Ő azonban egyetlen áldozattal áldozott a bűnökért, és mindörökre az Isten jobbjára ült,
13 ೧೩ ಅಂದಿನಿಂದ ತನ್ನ ವಿರೋಧಿಗಳು ತನ್ನ ಪಾದಪೀಠವಾಗಿ ಮಾಡಲ್ಪಡುವ ತನಕ ಆತನು ಕಾಯುತ್ತಿರುವನು.
várva, hogy ellenségei zsámolyul vetessenek lábai alá.
14 ೧೪ ಆತನು ಶುದ್ಧೀಕರಿಸಲ್ಪಡುವವರನ್ನು ಒಂದೇ ಸಮರ್ಪಣೆಯಿಂದ ನಿರಂತರವಾಗಿ ಪರಿಪೂರ್ಣರನ್ನಾಗಿ ಮಾಡಿದ್ದಾನೆ.
Mert egyetlen áldozatával örökre tökéletessé tette a megszentelteket.
15 ೧೫ ಪವಿತ್ರಾತ್ಮನು ಸಹ ನಮಗೆ ಸಾಕ್ಷಿಕೊಡುವಾತನಾಗಿ,
Bizonyságot tesz pedig erről nekünk a Szentlélek is, mert előre megmondta:
16 ೧೬ “ಆ ದಿನಗಳು ಬಂದ ಮೇಲೆ ನಾನು ಅವರ ಸಂಗಡ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು, ನನ್ನ ಆಜ್ಞೆಗಳನ್ನು ಅವರ ಹೃದಯಗಳಲ್ಲಿ ಇಡುವೆನು, ಅವರ ಮನಸ್ಸಿನಲ್ಲಿ ಅವುಗಳನ್ನು ಬರೆಯುವೆನು ಎಂದು ಕರ್ತನು ನುಡಿಯುತ್ತಾನೆ.” ಎಂಬುದಾಗಿ ಹೇಳಿದ ತರುವಾಯ ಇನ್ನು,
„Ez az a szövetség, amelyet kötök velük ama napok múltán“így szól az Úr. „Törvényemet szívükbe adom, és elméjükbe írom be azokat.“
17 ೧೭ “ಅವರ ಪಾಪಗಳನ್ನೂ ಅವರ ದುಷ್ಕೃತ್ಯಗಳನ್ನೂ ನನ್ನ ನೆನಪಿಗೆ ಎಂದಿಗೂ ತಂದುಕೊಳ್ಳುವುದಿಲ್ಲ.” ಎಂದು ಹೇಳುತ್ತಾನೆ.
Azután így szól: „Az ő bűneikről és álnokságukról többé meg nem emlékezem.“
18 ೧೮ ಪಾಪ ಕ್ಷಮಾಪಣೆಯಾದಲ್ಲಿ ಇನ್ನೂ ಅವುಗಳ ವಿಷಯದಲ್ಲಿ ಯಜ್ಞಗಳನ್ನು ಸಮರ್ಪಣೆಮಾಡುವಂಥ ಅವಶ್ಯಕತೆ ಇಲ್ಲ.
Ahol pedig bűnbocsánat van, ott nincs többé bűnért való áldozat.
19 ೧೯ ಹೀಗಿರುವಲ್ಲಿ ಸಹೋದರರೇ, ಯೇಸು ತನ್ನ ರಕ್ತದಿಂದ ಆತನ ದೇಹವೆಂಬ ಪರದೆಯ ಮೂಲಕ ನಮಗೆ ಹೊಸದಾದ ಸಜೀವ ಮಾರ್ಗವನ್ನು ತೆರೆದಿಟ್ಟಿದ್ದಾನೆ. ಅದರ ಮೂಲಕ ಅತಿ ಪರಿಶುದ್ಧ ಸ್ಥಳವನ್ನು ಪ್ರವೇಶಿಸಲು ನಮಗೆ ಭರವಸೆ ದೊರೆತಿದೆ.
Mivel tehát, atyámfiai, bizodalmunk van a szentélybe való bemenetelre a Jézus vére által,
20 ೨೦
azon az úton, amelyet Ő szentelt nekünk, mint új és élő utat, a kárpit, azaz az Ő teste által,
21 ೨೧ ಮತ್ತು ದೇವರ ಮನೆತನದ ಮೇಲೆ ಅಧಿಕಾರವಿರುವ ಶ್ರೇಷ್ಠ ಯಾಜಕನು ನಮಗಿದ್ದಾನೆ.
és mivel nagy papunk van, aki az Isten háza felett áll,
22 ೨೨ ಆದಕಾರಣ ಕೆಟ್ಟ ಮನಸ್ಸಾಕ್ಷಿಯನ್ನು ಪ್ರೋಕ್ಷಿಸಿ ಶುದ್ಧೀಕರಿಸಿಕೊಂಡು, ತಿಳಿನೀರಿನಿಂದ ತೊಳೆದ ದೇಹದಿಂದಲೂ, ಯಥಾರ್ಥಹೃದಯದಿಂದಲೂ, ನಂಬಿಕೆಯ ಪೂರ್ಣನಿಶ್ಚಯದಿಂದಲೂ ದೇವರ ಸಮೀಪಕ್ಕೆ ಬರೋಣ.
járuljunk hozzá igaz szívvel, a hitnek teljességével, mint akiknek szíve megtisztult a gonosz lelkiismerettől,
23 ೨೩ ನಾವು ನಮ್ಮ ನಿರೀಕ್ಷೆಯನ್ನು ಕುರಿತು ಮಾಡಿದ ಅರಿಕೆಯನ್ನು ನಿಶ್ಚಂಚಲದಿಂದ ಬಿಗಿಯಾಗಿ ಹಿಡಿಯೋಣ, ಯಾಕೆಂದರೆ ವಾಗ್ದಾನ ಮಾಡಿದಾತನು ನಂಬಿಗಸ್ತನು.
és testük meg van mosva tiszta vízzel. Tartsuk meg a reménység hitvallását tántoríthatatlanul, mert hű az, aki ígéretet tett.
24 ೨೪ ನಾವು ಪರಸ್ಪರ ಹಿತಚಿಂತಕರಾಗಿದ್ದು ಪ್ರೀತಿಸುತ್ತಿರಬೇಕೆಂತಲೂ ಸತ್ಕಾರ್ಯಮಾಡಬೇಕೆಂತಲೂ ಒಬ್ಬರನ್ನೊಬ್ಬರು ಹುರಿದುಂಬಿಸೋಣ.
És ügyeljünk arra, hogy egymást szeretetre és jócselekedetekre ösztönözzük.
25 ೨೫ ಸಭೆಯಾಗಿ ಸೇರುವ ರೂಢಿಯನ್ನು ಕೆಲವರು ಬಿಟ್ಟಂತೆ ನಾವು ಬಿಟ್ಟು ಬಿಡದೆ, ಆ ದಿನವು ಸಮೀಪಿಸುತ್ತಾ ಬರುತ್ತದೆಂದು ನೀವು ತಿಳಿದುಕೊಂಡಿರುವುದರಿಂದ ಒಬ್ಬರನ್ನೊಬ್ಬರು ಮತ್ತಷ್ಟು ಹೆಚ್ಚಾಗಿಯೇ ಪ್ರೋತ್ಸಾಹಿಸುತ್ತಿರೋಣ.
El nem hagyva a magunk gyülekezetét, ahogyan szokásuk némelyeknek, hanem intvén egymást, annyival is inkább, mert látjátok, hogy ama nap közeledik.
26 ೨೬ ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೂ ಬೇಕೆಂದು ಪಾಪಮಾಡಿದರೆ ಪಾಪಪರಿಹಾರಕ್ಕಾಗಿ ಇನ್ನಾವ ಯಜ್ಞವೂ ಉಳಿದಿರುವುದಿಲ್ಲ.
Mert ha szándékosan vétkezünk az igazság megismerése után, akkor nincs többé bűneinkért való áldozat,
27 ೨೭ ಬದಲಿಗೆ, ಅತ್ಯಂತ ಭಯಂಕರವಾದ ನ್ಯಾಯತೀರ್ಪಿನ ನಿರೀಕ್ಷೆ ಹಾಗೂ ದೇವರ ವಿರೋಧಿಗಳನ್ನು ದಹಿಸುವ ಕೋಪಾಗ್ನಿಯೂ ಮಾತ್ರ ಇರುವವು.
hanem az ítéletnek valami félelmes várása és a tűz lángja, amely megemészti az ellenszegülőket.
28 ೨೮ ಮೋಶೆಯ ಧರ್ಮಶಾಸ್ತ್ರವನ್ನು ತಿರಸ್ಕಾರ ಮಾಡಿದವನಿಗೆ ಇಬ್ಬರ ಇಲ್ಲವೆ ಮೂವರ ಸಾಕ್ಷ್ಯಧಾರದ ಮೇಲೆ ಕರುಣೆಯಿಲ್ಲದೆ ಮರಣದಂಡನೆ ಆಗುತ್ತಿತಷ್ಟೆ.
Aki megveti a Mózes törvényét, az két vagy három tanúvallomása alapján irgalom nélkül meghal.
29 ೨೯ ಹೀಗಿರುವಲ್ಲಿ, ದೇವಕುಮಾರನನ್ನು ತುಳಿದು, ತನ್ನನ್ನು ಶುದ್ಧೀಕರಿಸಿದ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ, ದೇವರ ಕೃಪಾವರವಾಗಿರುವ ಆತ್ಮನನ್ನು ತಿರಸ್ಕರಿಸುವವನೋ, ಇನೆಂಥ ಕ್ರೂರದಂಡನೆಗೆ ಗುರಿ ಆಗುತ್ತಾನೆಂದು ನೀವೇ ಯೋಚಿಸಿನೋಡಿ?
Gondoljátok meg, mennyivel súlyosabb büntetésre méltó az, aki az Isten Fiát lábbal tapodja, és a szövetség vérét, amellyel megszenteltetett, tisztátalannak tartja, és a kegyelem Lelkét megveti.
30 ೩೦ “ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನೆಂದು” ಹೇಳಿದಾತನನ್ನು ಬಲ್ಲೆವು. ಇದಲ್ಲದೆ “ಕರ್ತನು ತನ್ನ ಜನರಿಗೆ ನ್ಯಾಯ ತೀರಿಸುವನು” ಎಂದು ಹೇಳಿಯದೆ.
Mert ismerjük azt, aki így szólt: „Enyém az ítélet, én megfizetek.“És ismét: „Az Úr megítéli az ő népét.“
31 ೩೧ ಜೀವಸ್ವರೂಪನಾದ ದೇವರ ಕೈಯಲ್ಲಿ ಸಿಕ್ಕಿಬೀಳುವುದು ಎಷ್ಟೋ ಭಯಂಕರವಾದದ್ದು.
Rettenetes az élő Isten kezébe esni.
32 ೩೨ ಹೀಗಿರಲಾಗಿ ನೀವು ಜ್ಞಾನಪ್ರಕಾಶವನ್ನು ಹೊಂದಿದ ಮೇಲೆ ಕಷ್ಟಾನುಭವವೆಂಬ ಬಹು ಹೋರಾಟವನ್ನು ಸಹಿಸಿಕೊಂಡ ಹಿಂದಿನ ದಿನಗಳನ್ನು ನೆನಪಿಗೆ ತಂದುಕೊಳ್ಳಿರಿ.
Emlékezzetek pedig vissza a régebbi napokra, amelyekben, miután megvilágosodtatok, sok szenvedéssel teljes küzdelmet állottatok ki,
33 ೩೩ ಕೆಲವು ಸಾರಿ ನೀವು ನಿಂದೆಗಳನ್ನೂ, ಸಂಕಟಗಳನ್ನೂ, ಅನುಭವಿಸಿ ಹಾಸ್ಯಕ್ಕೆ ಗುರಿಯಾದಿರಿ. ಕೆಲವು ಸಾರಿ ಅಂಥವುಗಳನ್ನು ಅನುಭವಿಸಿದವರಲ್ಲಿ ಪಾಲುಗಾರರಾಗಿದ್ದು ಕಷ್ಟಾನುಭವಿಗಳಾದಿರಿ.
amikor egyfelől gyalázásokkal és nyomorgattatásokkal nyilvánosság elé hurcoltak titeket, másfelől társai lettetek azoknak, akik így jártak.
34 ೩೪ ನೀವು ಸೆರೆಯವರಿಗೆ ಅನುತಾಪ ತೋರಿಸಿ, ನಿಮಗೋಸ್ಕರವಾಗಿ ಉತ್ತಮವಾಗಿಯೂ, ಸ್ಥಿರವಾಗಿಯೂ ಇರುವ ಆಸ್ತಿಯುಂಟೆಂದು ಚೆನ್ನಾಗಿ ಅರಿತುಕೊಂಡು, ನಿಮ್ಮ ಸೊತ್ತನ್ನು ಸುಲುಕೊಳ್ಳುವವರಿಗೆ ಸಂತೋಷದಿಂದ ಬಿಟ್ಟು ಕೊಟ್ಟಿದ್ದೀರಿ.
Mert a foglyokkal is együtt szenvedtetek, és vagyonotok elrablását örömmel fogadtátok, mivel tudtátok, hogy jobb és maradandóbb vagyonotok van a mennyben.
35 ೩೫ ಆದ್ದರಿಂದ ನಿಮ್ಮ ಧೈರ್ಯವನ್ನು ಬಿಟ್ಟುಬಿಡಬೇಡಿರಿ. ಅದಕ್ಕೆ ಮಹಾ ಪ್ರತಿಫಲ ಉಂಟು.
Ne dobjátok el tehát bizodalmatokat, amelynek nagy jutalma van.
36 ೩೬ ನೀವು ದೇವರ ಚಿತ್ತವನ್ನು ನೆರವೇರಿಸಿದ ಮೇಲೆ ವಾಗ್ದಾನವನ್ನು ಹೊಂದಬೇಕಾದರೆ ನಿಮಗೆ ತಾಳ್ಮೆಯು ಅವಶ್ಯವಾಗಿದೆ.
Mert béketűrésre van szükségetek, hogy az Isten akaratát cselekedve elnyerjétek az ígéretet.
37 ೩೭ “ಬರುವಾತನು ಇನ್ನು ಸ್ವಲ್ಪ ಕಾಲದಲ್ಲಿ ಬರುವನು ತಡಮಾಡುವುದಿಲ್ಲ.
Mert még „egy igen-igen kevés idő, és aki eljövendő, eljön, és nem késik.
38 ೩೮ ಆದರೆ ನನ್ನವನಾಗಿರುವ ನೀತಿವಂತನು ನಂಬಿಕೆಯಿಂದಲೇ ಬದುಕುವನು, ಅವನು ಅದರಿಂದ ಹಿಂಜರಿದರೆ ಅವನಲ್ಲಿ ನನಗೆ ಮೆಚ್ಚಿಕೆಯಿರುವುದಿಲ್ಲ.”
Az igaz ember pedig hitből él. És aki meghátrál, abban nem gyönyörködik a lelkem.“
39 ೩೯ ನಾವಾದರೋ ಹಿಂಜರಿದವರಾಗಿ ನಾಶವಾಗುವವರಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವರಾಗಿದ್ದೇವೆ.
De mi nem vagyunk a meghátrálás emberei, hogy elvesszünk, hanem a hitéi, hogy életet nyerjünk.

< ಇಬ್ರಿಯರಿಗೆ ಬರೆದ ಪತ್ರಿಕೆ 10 >