< ಇಬ್ರಿಯರಿಗೆ ಬರೆದ ಪತ್ರಿಕೆ 12 >

1 ಆದಕಾರಣ ಇಷ್ಟು ಸಾಕ್ಷಿಗಳ ದೊಡ್ಡ ಗುಂಪು ಮೇಘದಂತೆ ನಮ್ಮ ಸುತ್ತಲು ಇರುವುದರಿಂದ ನಮಗೆ ಅಭ್ಯಂತರಪಡಿಸುವ ಎಲ್ಲಾ ಭಾರವನ್ನೂ, ಸುಲಭವಾಗಿ ಮುತ್ತಿಕೊಳ್ಳುವ ಪಾಪವನ್ನು ಸಹ ನಾವು ತೆಗೆದಿಟ್ಟು, ನಂಬಿಕೆಯನ್ನು ಹುಟ್ಟಿಸುವಾತನೂ ಅದನ್ನು ಪರಿಪೂರ್ಣಗೊಳಿಸುವಾತನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸಹನೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅಪಮಾನವನ್ನು ಅಲಕ್ಷ್ಯಮಾಡಿ, ಶಿಲುಬೆಯ ಮರಣವನ್ನು ಸಹಿಸಿಕೊಂಡು, ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನನಾಗಿದ್ದಾನೆ.
Zato tudi mi torej, ker imamo tako silo prič okrog sebe, vrzimo raz sebe vsako breme in greh, ki nas lahko obdá, ter prebimo v stanovitnosti naloženi nam boj;
2
Ozirajoč se v začetnika in izpolnjevalca vere Jezusa, kateri je za namenjeno mu veselje križ pretrpel, ne meneč se za sramoto in sedel na desnico Božjega prestola.
3 ನೀವು ಮನಗುಂದಿದವರಾಗಿ ಬೇಸರಗೊಳ್ಳದಂತೆ ಯೇಸುವನ್ನು ಕುರಿತು ಯೋಚಿಸಿರಿ. ಆತನು ಪಾಪಿಗಳಿಂದ ಎಷ್ಟೋ ವಿರೋಧವನ್ನು ಸಹಿಸಿಕೊಂಡನು.
Pomislite namreč njega, ki je toliko prestal od grešnikov nasprotovanja proti sebi, da ne omagata pešajoč v dušah svojih.
4 ನೀವು ಪಾಪಕ್ಕೆ ವಿರೋಧವಾಗಿ ಹೋರಾಡುವುದರಲ್ಲಿ ರಕ್ತವನ್ನು ಸುರಿಸುವಷ್ಟು ಹೋರಾಡಲಿಲ್ಲವಲ್ಲ.
Še niste do krvi ustavljali se v boji z grehom,
5 ಮಕ್ಕಳಿಗೆ ಹೇಳುವಂತೆ ನಿಮಗೆ ಹೇಳಿದ ಎಚ್ಚರಿಕೆಯ ಮಾತುಗಳನ್ನು ಮರೆತುಬಿಟ್ಟಿದ್ದೀರೋ? ಅದೇನೆಂದರೆ, “ನನ್ನ ಮಗನೇ, ಕರ್ತನ ಶಿಕ್ಷೆಯನ್ನು ಕಡೆಗಣಿಸಬೇಡ. ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ.”
In pozabili ste tolažbe, katera z vami kakor sè sinovi govori: "Sin moj, ne puščaj v nemar pokore Gospodove, in ne omaguj, ko te kara.
6 ಏಕೆಂದರೆ ಕರ್ತನು ಯಾರನ್ನು ಪ್ರೀತಿಸುತ್ತಾನೋ ಅವರನ್ನು ಶಿಕ್ಷಿಸುತ್ತಾನೆ. ತಾನು ಮಗನಂತೆ ಸ್ವೀಕರಿಸುವ ಪ್ರತಿಯೊಬ್ಬನನ್ನು ದಂಡಿಸುತ್ತಾನೆ ಎಂಬುದಾಗಿದೆ.
Kogar namreč ljubi, pokori Gospod, in šiba vsakega sina, kateri mu je po volji."
7 ನಿಮ್ಮ ಶಿಸ್ತಿಗಾಗಿಯೇ, ನಿಮಗೆ ಶಿಕ್ಷೆಯಾಗುತ್ತದೆಂದು ಅದನ್ನು ಸಹಿಸಿಕೊಳ್ಳಿರಿ. ದೇವರು ನಿಮ್ಮನ್ನು ಮಕ್ಕಳೆಂದು ನಡೆಸುತ್ತಾನೆ. ಯಾಕೆಂದರೆ ತಂದೆಯಿಂದ ಶಿಕ್ಷೆ ಹೊಂದದ ಮಗನೆಲ್ಲಿದ್ದಾನೆ?
Ako trpite pokoro, kaže se vam Bog kakor otrokom; kajti kje je sin, katerega ne pokori oče?
8 ಎಲ್ಲರೂ ಪಾಲುಗಾರರಬೇಕಾದ ಶಿಕ್ಷೆಯು ನಿಮಗುಂಟಾಗದಿದ್ದರೆ ನೀವು ಹಾದರದಿಂದ ಹುಟ್ಟಿದವರೇ ಹೊರತು ಆತನ ಮಕ್ಕಳಲ್ಲ.
Ako ste pa brez pokore, katere so deležni postali vsi, torej ste nezakonski otroci in ne sinovi.
9 ಇದು ಮಾತ್ರವಲ್ಲದೆ ನಮ್ಮನ್ನು ಶಿಕ್ಷಿಸಿದ ಲೌಕಿಕ ತಂದೆಗಳನ್ನು ನಾವು ಸನ್ಮಾನಿಸಿತ್ತೇವಲ್ಲ. ನಮ್ಮ ಆತ್ಮಗಳಿಗೆ ತಂದೆಯಾಗಿರುವಾತನಿಗೆ ನಾವು ಇನ್ನೂ ಹೆಚ್ಚಾಗಿ ಅಧೀನರಾಗಿ ಜೀವಿಸಬೇಕಲ್ಲವೇ?
Dalje: mesa svojega očete smo imeli za pokoritelje in bali smo se jih, ali ne bodemo mnogo bolj podložni očetu duhov ter živeli?
10 ೧೦ ನಮ್ಮ ಲೌಕಿಕ ತಂದೆಗಳು ಮನಸ್ಸಿಗೆ ಸರಿದೋರಿದಂತೆ ಕೆಲವು ಕಾಲ ಮಾತ್ರ ನಮ್ಮನ್ನು ಶಿಕ್ಷಿಸಿದರು. ಆದರೆ ದೇವರು ತನ್ನ ಪರಿಶುದ್ಧತೆಯಲ್ಲಿ ನಾವು ಪಾಲುಗಾರರಾಗಬೇಕೆಂದು ನಮ್ಮ ಹಿತಕ್ಕಾಗಿಯೇ ಶಿಕ್ಷಿಸುತ್ತಾನೆ.
Kajti oni so nas pokorili za malo dnî, kakor se jim je ljubilo, tá pa v korist, da bodemo deležni svetosti njegove.
11 ೧೧ ಯಾವ ಶಿಕ್ಷೆಯಾದರೂ ತತ್ಕಾಲಕ್ಕೆ ಸಂತೋಷಕರವಾಗಿ ತೋರದೆ, ದುಃಖಕರವಾಗಿ ತೋರುತ್ತದೆ. ಆದರೆ ಶಿಸ್ತಿನ ಅಭ್ಯಾಸವನ್ನು ಹೊಂದಿದವರು, ಮುಂದೆ ಸಮಾಧಾನವುಳ್ಳ ನೀತಿಯ ಫಲವನ್ನು ಪಡೆಯುತ್ತಾರೆ.
Vsaka pokora pa se za sedaj ne zdí prijetna, nego da boli, pozneje pa daje njim, ki jih je vadila, miropolni sad pravice.
12 ೧೨ ಆದುದ್ದರಿಂದ ಜೋಲುಬಿದ್ದ ಕೈಗಳನ್ನೂ ಮತ್ತು ನಡುಗುವ ಮೊಣಕಾಲುಗಳನ್ನೂ ಬಲಪಡಿಸಿರಿ.
Zato dvignite omahujoče roke in šibeča se kolena,"
13 ೧೩ ನಿಮ್ಮ ಪಾದಗಳಿಗೆ ನೇರವಾದ ದಾರಿಯನ್ನು ಮಾಡಿಕೊಳ್ಳಿರಿ. ಹೀಗೆ ಮಾಡಿದರೆ ಕುಂಟುವ ಕಾಲು ಉಳುಕಿ ಹೋಗದೇ ವಾಸಿಯಾಗುವುದು.
In "ravne tire delajte sè svojimi nogami," da se hromo ne izključi, nego ozdravi.
14 ೧೪ ಎಲ್ಲರೊಂದಿಗೆ ಸಮಾಧಾನದಿಂದ ಜೀವಿಸಲು ಮತ್ತು ಪರಿಶುದ್ಧರಾಗಿರಲು ಪ್ರಯತ್ನಮಾಡಿರಿ. ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವುದಿಲ್ಲ.
Iščite mirú z vsemi, in posvečevanja, brez katerega nihče ne bode videl Gospoda;
15 ೧೫ ನಿಮ್ಮಲ್ಲಿ ಯಾವನೂ ದೇವರ ಕೃಪೆಯಿಂದ ತಪ್ಪಿ ಹಿಂಜಾರಿ ಹೋಗದಂತೆಯೂ, ಯಾವ ಕಹಿಯಾದ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಅನೇಕರನ್ನು ಮಲಿನಪಡಿಸದಂತೆ ನೋಡಿಕೊಳ್ಳಿರಿ.
Pazite, da kdo ne zaostane za milostjo Božjo, da ne požene kaka bridkosti korenina in ne dela napotja, in jih mnogo ne oskruni;
16 ೧೬ ಯಾವ ಜಾರನಾಗಲಿ, ಏಸಾವನಂಥ ಪ್ರಾಪಂಚಿಕನಾಗಲಿ ನಿಮ್ಮಲ್ಲಿ ಇರದಂತೆ ಜಾಗ್ರತೆ ವಹಿಸಿಕೊಳ್ಳಿರಿ. ಆ ಏಸಾವನು ಒಂದೇ ಒಂದು ಊಟಕ್ಕೋಸ್ಕರ ತನ್ನ ಚೊಚ್ಚಲುತನದ ಹಕ್ಕನ್ನು ಮಾರಿಬಿಟ್ಟನು.
Da ne bode kdo kurbir ali posvetnjak kakor Ezav, kateri je za eno jed prodal prvorojenstvo svoje;
17 ೧೭ ಅನಂತರದಲ್ಲಿ ತನ್ನ ತಂದೆಯ ಆಶೀರ್ವಾದವನ್ನು ಬಾಧ್ಯವಾಗಿ ಹೊಂದಬೇಕೆಂದು ಕಣ್ಣೀರು ಸುರಿಸುತ್ತಾ ಬೇಡಿಕೊಂಡರೂ, ಪಶ್ಚಾತ್ತಾಪಕ್ಕೆ ಮಾರ್ಗವಿಲ್ಲದೆ ನಿರಾಕರಿಸಲ್ಪಟ್ಟನೆಂದು ನೀವು ಬಲ್ಲವರಾಗಿದ್ದೀರಿ.
Kajti veste, da je tudi, ko je pozneje hotel zadobiti blagoslov, zavržen bil; kajti kosanju ni našel mesta, da si ga je sè solzami iskal.
18 ೧೮ ನೀವು ಮುಟ್ಟಬಹುದಾದ ಮತ್ತು ಬೆಂಕಿ ಹೊತ್ತಿದಂಥ ಬೆಟ್ಟಕ್ಕೂ, ಕಾರ್ಮೋಡ, ಕಗ್ಗತ್ತಲೆ, ಬಿರುಗಾಳಿ, ತುತ್ತೂರಿಯ ಶಬ್ದ, ಮಾತುಗಳ ಧ್ವನಿ ಎಂಬಿವುಗಳ ಬಳಿಗಲ್ಲ ನೀವು ಬಂದಿರುವುದು. ಆ ಧ್ವನಿಯನ್ನು ಕೇಳಿದವರು ಇನ್ನೆಂದಿಗೂ ಆ ಧ್ವನಿ ತಮ್ಮೊಂದಿಗೆ ಮಾತನಾಡುವುದೇ ಬೇಡವೆಂದು ಕೇಳಿಕೊಂಡರು.
Kajti pristopili niste k dotakljivi gori in z ognjem goreči in oblačju in temi in nevihti,
19 ೧೯
In trombe donenju in glasu beséd, katerega poslušalci so se branili, da se jim pridene beseda;
20 ೨೦ ಏಕೆಂದರೆ, “ಒಂದು ಮೃಗವಾದರೂ ಬೆಟ್ಟವನ್ನು ಮುಟ್ಟಿದರೆ ಅದನ್ನು ಕಲ್ಲೆಸೆದು ಕೊಲ್ಲಬೇಕೆಂಬ” ವಿಧಿಯನ್ನು ಅವರಿಂದ ತಾಳಲಾಗಲಿಲ್ಲ.
(Niso namreč prenašali ukaza. "Če se tudi žival dotakne gore, bode kamenjena ali sè strelo pobita".
21 ೨೧ ಇದಲ್ಲದೆ ಆ ದೃಶ್ಯವು ಅತಿ ಭಯಾನಕವಾಗಿದ್ದದರಿಂದ ಮೋಶೆಯು, “ನಾನು ಹೆದರಿ, ನಡುಗುತ್ತಿದ್ದೇನೆ” ಎಂದು ಹೇಳಿದನು.
In, tako strašna je bila prikazen, Mojzes je rekel: V strahu sem in trepetu; )
22 ೨೨ ಆದರೆ ನೀವು ಚೀಯೋನ್ ಪರ್ವತಕ್ಕೂ, ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ, ಉತ್ಸವ ಸಂಘದಲ್ಲಿ ಕೂಡಿರುವ ಕೋಟ್ಯಾನುಕೋಟಿ ದೇವದೂತರ ಬಳಿಗೂ,
Temuč pristopili ste h gori Sijonski in mestu Boga živega, Jeruzalemu nebeškemu, in mirijadam angelov,
23 ೨೩ ಪರಲೋಕದಲ್ಲಿ ಹೆಸರು ಬರೆಸಿಕೊಂಡಿರುವ ಚೊಚ್ಚಲ ಮಕ್ಕಳ ಸಭೆಗೂ, ಎಲ್ಲರಿಗೆ ನ್ಯಾಯಾಧಿಪತಿಯಾಗಿರುವ ದೇವರ ಬಳಿಗೂ, ಪರಿಪೂರ್ಣರಾಗಿರುವ ನೀತಿವಂತರ ಆತ್ಮಗಳ ಬಳಿಗೂ,
Zboru in občini prvorojencev v nebesih zapisanih, in Bogu vseh sodniku, in duhovom pravičnih zveličanih,
24 ೨೪ ಹೊಸ ಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ, ಹೇಬೆಲನ ರಕ್ತಕ್ಕಿಂತ ಉತ್ತಮವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.
In nove zaveze sredniku Jezusu, in krvi pokropljenja, boljše govoreči mimo Abelna.
25 ೨೫ ಮಾತನಾಡುತ್ತಿರುವಾತನನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಭೂಮಿಯ ಮೇಲೆ ದೈವೋಕ್ತಿಗಳನ್ನಾಡಿದವನನ್ನು ಅಸಡ್ಡೆಮಾಡಿದವರು ದಂಡನೆಗೆ ತಪ್ಪಿಸಿಕೊಳ್ಳಲಾಗದಿದ್ದರೆ, ಪರಲೋಕದಿಂದ ಮಾತನಾಡುವಾತನನ್ನು ಬಿಟ್ಟು ದೂರವಾಗಿ ನಾವು ಹೋದರೆ ದಂಡನೆಯಿಂದ ಹೇಗೆ ತಪ್ಪಿಸಿಕೊಂಡೆವು?
Glejte, da se ne branite govorečega; če namreč oni niso ubežali, kateri so branili se ukazujočega na zemlji, veliko menj mi, ki se obračamo od njega, kateri je z nebes.
26 ೨೬ ಆತನ ಧ್ವನಿಯು ಆಗ ಭೂಮಿಯನ್ನು ಕದಲಿಸಿತು. ಈಗಲಾದರೋ ಆತನು, “ಇನ್ನೊಂದೇ ಸಾರಿ ನಾನು ಭೂಮಿಯನ್ನು ಮಾತ್ರವಲ್ಲದೆ ಪರಲೋಕವನ್ನೂ ಕದಲಿಸುತ್ತೇನೆ” ಎಂದು ವಾಗ್ದಾನಮಾಡಿ ಹೇಳಿದ್ದಾನೆ.
Glas njegov je zemljo potresel tedaj, sedaj pa je obljubil govoreč: "Še enkrat stresam jaz ne samo zemlje, nego tudi nebo".
27 ೨೭ “ಇನ್ನೊಂದೇ ಸಾರಿ,” ಎಂಬ ಈ ಮಾತನ್ನು ಯೋಚಿಸಿದರೆ, ಕದಲಿಸಿರುವ ವಸ್ತುಗಳು ನಿರ್ಮಿತವಾದವುಗಳಾದ್ದರಿಂದ ತೆಗೆದುಹಾಕಲ್ಪಡುತ್ತವೆಂಬುದು ಸ್ಪಷ್ಟವಾಗುತ್ತದೆ. ಆಗ, ಕದಲಿಸದೇ ಇರುವ ವಸ್ತುಗಳು ಸ್ಥಿರವಾಗಿ ನಿಲ್ಲುವವು.
Tisto: "še enkrat" pomeni premembo tistega, kar je bilo potreseno, kakor kaj narejenega; da ostane kar je nepotreseno.
28 ೨೮ ಆದ್ದರಿಂದ ಯಾರೂ ಕದಲಿಸಲಾರದ ರಾಜ್ಯವನ್ನು ಪಡೆದುಕೊಳ್ಳುವವರಾದ ನಾವು ಕೃತಜ್ಞತೆಯುಳ್ಳವರಾಗಿ, ಆತನಿಗೆ ಸಮರ್ಪಕವಾದ ಆರಾಧನೆಯನ್ನು ಭಕ್ತಿಯಿಂದಲೂ ಮತ್ತು ಭಯದಿಂದಲೂ ಮಾಡೋಣ.
Zato, prejemši kraljestvo nepotresno, imejmo hvaležnost, po kateri služimo po volji Bogu sè svetim strahom in grozo;
29 ೨೯ ಏಕೆಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.
Kajti tudi "Bog naš je ogenj, ki pali".

< ಇಬ್ರಿಯರಿಗೆ ಬರೆದ ಪತ್ರಿಕೆ 12 >