< ಹೋಶೇಯನು 10 >

1 ಇಸ್ರಾಯೇಲ್ ಸೊಂಪಾಗಿ ಬೆಳೆದ ದ್ರಾಕ್ಷಾಲತೆಯಾಗಿದೆ; ಹಣ್ಣುಬಿಟ್ಟುಕೊಂಡಿದೆ; ಅದರ ಹಣ್ಣುಗಳು ಹೆಚ್ಚಿದಷ್ಟೂ ಯಜ್ಞವೇದಿಗಳನ್ನು ಹೆಚ್ಚಿಸಿಕೊಂಡಿದೆ; ಅದರ ಭೂಮಿಯು ಎಷ್ಟು ಒಳ್ಳೆಯದೋ, ಅಷ್ಟು ಒಳ್ಳೆಯ ವಿಗ್ರಹ ಸ್ತಂಭಗಳನ್ನು ನಿರ್ಮಾಣ ಮಾಡಿಕೊಂಡಿದೆ.
イスラエルは果をむすびて茂り榮る葡萄の樹その果の多くなるがままに祭壇をましその地の饒かなるがままに偶像を美しくせり
2 ಇಸ್ರಾಯೇಲರ ಮನಸ್ಸು ನುಣುಚಿಕೊಳ್ಳುತ್ತದೆ; ಈಗ ದಂಡನೆಗೆ ಈಡಾಗಿದ್ದಾರೆ. ಯೆಹೋವನೇ ಅವರ ಯಜ್ಞವೇದಿಗಳನ್ನು ಮುರಿದುಬಿಡುವನು. ಅವರ ವಿಗ್ರಹ ಸ್ತಂಭಗಳನ್ನು ಹಾಳುಮಾಡುವನು.
かれらは二心をいだけり今かれら罪せらるべし神はその祭壇を打毀ちその偶像を折棄てたまはん
3 “ನಮಗೆ ರಾಜನೇ ಇಲ್ಲ; ನಾವು ಯೆಹೋವನಲ್ಲಿ ಭಯಭಕ್ತಿಯಿಟ್ಟವರಲ್ಲ. ರಾಜನಾದರೋ ನಮಗಾಗಿ ಏನು ಮಾಡಿಯಾನು?” ಎಂದು ಈಗ ಅವರು ಅಂದುಕೊಳ್ಳಬೇಕಾಯಿತು.
かれら今いふべし我儕神を畏れざりしに因て我らに王なしこの王はわれらのために何をかなさんと
4 ಹರಟೆಹರಟುತ್ತಾರೆ, ಸುಳ್ಳಾಣೆಯಿಡುತ್ತಾರೆ, ಸಂಧಾನ ಮಾಡಿಕೊಳ್ಳುತ್ತಾರೆ; ಅಲ್ಲಿನ ನ್ಯಾಯವು ನೇಗಿಲಗೆರೆಗಳಲ್ಲಿ ಹುಟ್ಟುವ ವಿಷದ ಕಳೆಗಳಂತಿದೆ.
かれらは虚しき言をいだし偽の誓をなして約をたつ審判は畑の畝にもえいづる茵蔯のごとし
5 ಸಮಾರ್ಯದ ನಿವಾಸಿಗಳು ಬೇತಾವೆನಿನ ಬಸವನ ವಿಷಯದಲ್ಲಿ ಭಯಪಡುವರು. ಅದರ ಭಕ್ತ ಜನರು ಅದಕ್ಕಾಗಿ ಎದೆಬಡಿದುಕೊಳ್ಳುವರು; ಅದರ ಮಹಿಮೆಯು ನಂದಿಹೋಯಿತು ಎಂದು ಪೂಜಾರಿಗಳು ಅದಕ್ಕಾಗಿ ನಡುಗುವರು.
サマリヤの居民はベテアベンの犢の故によりて戰慄かんその民とこれを悦ぶ祭司等はその榮のうせたるが爲になげかん
6 ಅದು ಜಗಳಗಂಟ ಮಹಾರಾಜನಿಗೆ ಕಾಣಿಕೆಯಾಗಿ ಅಶ್ಶೂರಕ್ಕೆ ಒಯ್ಯಲ್ಪಡುವುದು. ಎಫ್ರಾಯೀಮಿಗೆ ಅವಮಾನವಾಗುವುದು, ಇಸ್ರಾಯೇಲ್ ತಾನು ಸಂಕಲ್ಪಿಸಿಕೊಂಡ ವಿಷಯಕ್ಕಾಗಿ ನಾಚಿಕೆಪಡುವುದು.
犢はアッスリヤに携へられ禮物としてヤレブ王に献げらるべしエフライムは羞をかうむりイスラエルはおのが計議を恥ぢん
7 ಸಮಾರ್ಯದ ರಾಜನು ಹಾಳಾಗಿ ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗುವ ಮರದ ಚಕ್ಕೆಗೆ ಸಮಾನನಾಗಿದ್ದಾನೆ.
サマリヤはほろびその王は水のうへの木片のごとし
8 ಇಸ್ರಾಯೇಲಿಗೆ ಪಾಪಾಸ್ಪದವಾದ ಆವೆನಿನ ಪೂಜಾಸ್ಥಾನಗಳು ನಾಶವಾಗುವವು. ಮುಳ್ಳುಗಿಡಗಳೂ, ಕಳೆಗಳೂ ಅಲ್ಲಿನ ಯಜ್ಞವೇದಿಗಳ ಮೇಲೆ ಹುಟ್ಟುವವು; ಅಲ್ಲಿನ ಜನರು, “ಬೆಟ್ಟಗಳೇ, ನಮ್ಮನ್ನು ಮುಚ್ಚಿಕೊಳ್ಳಿರಿ, ಗುಡ್ಡಗಳೇ, ನಮ್ಮ ಮೇಲೆ ಬೀಳಿರಿ” ಎಂದು ಕೂಗಿಕೊಳ್ಳುವರು.
イスラエルの罪なるアベンの崇邱は荒はてて荊棘と蒺藜その壇のうへにはえ茂らんその時かれら山にむかひて我儕をおほへ陵にむかひて我儕のうへに倒れよといはん
9 ಇಸ್ರಾಯೇಲೇ, ಗಿಬ್ಯದಲ್ಲಿ ದುರಾಚಾರವು ನಡೆದಂದಿನಿಂದ ನೀನು ಪಾಪಮಾಡುತ್ತಾ ಬಂದಿದ್ದಿ; ಆಹಾ, ನಿನ್ನ ಜನರು ಅಲ್ಲಿ ನಿಂತಿದ್ದಾರೆ, ದುರಾಚಾರಿಗಳಿಗೆ ವಿರುದ್ಧವಾದ ಗಿಬ್ಯದಲ್ಲಿ ನಡೆದ ಯುದ್ಧಕ್ಕೆ ಅವರು ತುತ್ತಾಗುವುದಿಲ್ಲವೋ?
イスラエルよ汝はギベアの日より罪ををかせり彼等はそこに立り邪惡のひとびとを攻たりし戰爭はギベアにてかれらに及ばざりき
10 ೧೦ ನನಗಿಷ್ಟವಾದಾಗ ನಾನು ಅವರನ್ನು ದಂಡಿಸುವೆನು; ಅವರ ಎರಡು ಅಪರಾಧಗಳ ದಂಡನೆಗೋಸ್ಕರ ಜನಾಂಗಗಳು ಅವರಿಗೆ ವಿರುದ್ಧವಾಗಿ ಒಟ್ಟುಗೂಡುವವು.
我思ふままに彼等をいましめん彼等その二の罪につながれん時もろもろの民あつまりて之をせめん
11 ೧೧ ಎಫ್ರಾಯೀಮು ಹತೋಟಿಗೆ ಬಂದು ತೆನೆಹುಲ್ಲನ್ನು ತುಳಿಯುತ್ತಿರುವುದರಲ್ಲಿಯೇ ಇಷ್ಟಪಡುವ ಕಡಸಾಗಿದೆ; ಈಗಲಾದರೋ ಅದರ ಅಂದವಾದ ಹೆಗಲಿನ ಮೇಲೆ ಕೈಹಾಕಿದ್ದೇನೆ, ಎಫ್ರಾಯೀಮನ್ನು ನೊಗಕ್ಕೆ ಹೂಡುವೆನು, ಯೆಹೂದವು ಉಳಬೇಕು, ಯಾಕೋಬು ಕುಂಟೆ ಎಳೆಯಬೇಕು.
エフライムは馴されたる牝牛のごとくにして穀をふむことを好むされどわれその美しき頸に物を負しむべし我エフライムに軛をかけんユダは耕しヤコブは土塊をくだかん
12 ೧೨ ನೀತಿಯ ಬೀಜವನ್ನು ಬಿತ್ತಿರಿ, ಪ್ರೀತಿಯ ಫಲವನ್ನು ಕೊಯ್ಯಿರಿ, ಹಾಳಾದ ನಿಮ್ಮ ಭೂಮಿಯನ್ನು ಫಲವತ್ತಾಗಿಸಿ; ಯೆಹೋವನು ಬಂದು ನಮ್ಮ ಮೇಲೆ ನೀತಿಯನ್ನು ವರ್ಷಿಸಲೆಂದು ಆತನಿಗೆ ಶರಣುಹೋಗುವ ಸಮಯವು ಒದಗಿದೆ.
なんぢら義を生ずるために種をまき憐憫にしたがひてかりとり又新地をひらけ今はヱホバを求むべき時なり終にはヱホバきたりて義を雨のごとく汝等のうへに降せたまはん
13 ೧೩ ನೀವು ಮಾಡಿದ ವ್ಯವಸಾಯವು ದುಷ್ಟತನ, ನಿಮಗಾದ ಬೆಳೆಯು ಅನ್ಯಾಯ ನೀವು ನಿಮ್ಮ ಕಟ್ಟುಪಾಡಿನಲ್ಲಿಯೂ, ನಿಮ್ಮ ಶೂರರ ರಥಗಳಲ್ಲಿಯೂ ಭರವಸವಿಟ್ಟಿದ್ದರಿಂದ ಮೋಸದ ಫಲವನ್ನು ಅನುಭವಿಸಿದ್ದೀರಿ.
なんぢらは惡をたがへし不義を穫をさめ虚偽の果をくらへりこは汝おのれの途をたのみ己が勇士の數衆きをたのめるに縁る
14 ೧೪ ಹೀಗಿರಲು ನಿಮ್ಮ ಕುಲಗಳವರಿಗೆ ವಿರುದ್ಧವಾಗಿ ಯುದ್ಧಘೋಷವು ಮೊಳಗುವುದು. ಕಾಳಗದ ದಿನದಲ್ಲಿ ಶಲ್ಮಾನನು ತಾಯಿ ಮತ್ತು ಮಕ್ಕಳನ್ನು ಒಟ್ಟಿಗೆ ಬಂಡೆಗೆ ಅಪ್ಪಳಿಸಲ್ಪಡುವುದು. ಬೇತ್ ಅರ್ಬೇಲ್ ಪಟ್ಟಣವನ್ನು ಸೂರೆಮಾಡಿದಂತೆ ನಿಮ್ಮ ಎಲ್ಲಾ ಕೋಟೆಗಳು ಸೂರೆಮಾಡಲ್ಪಡುವವು.
この故になんぢらの民のなかに擾亂おこりて汝らの城はことごとく打破られんシャルマンが戰門の日にベテアルベルを打破りしにことならず母その子とともに碎かれたり
15 ೧೫ ನಿಮ್ಮ ದುಷ್ಟತನವು ಬಹಳವಾಗಿರುವುದರಿಂದ ಬೇತೇಲು ಇಂಥ ದುರ್ಗತಿಯನ್ನು ನಿಮಗೆ ತರುವುದು; ಬೆಳಗಾಗುವುದರೊಳಗೆ ಇಸ್ರಾಯೇಲಿನ ರಾಜನು ತೀರಾ ಹಾಳಾಗುವನು.
なんぢらの大なる惡のゆゑによりてべテル如此なんぢらに行へるなりイスラエルの王はあしたに滅びん

< ಹೋಶೇಯನು 10 >