< ಹೋಶೇಯನು 11 >

1 ಇಸ್ರಾಯೇಲ್ ಇನ್ನೂ ಬಾಲ್ಯದಲ್ಲಿದ್ದಾಗ ನಾನು ಅದರ ಮೇಲೆ ಪ್ರೀತಿಯಿಟ್ಟು, ಆ ನನ್ನ ಮಗನನ್ನು ಐಗುಪ್ತ ದೇಶದಿಂದ ಕರೆದೆನು.
When Israel was a child, then I loved him, and called my son out of Egypt.
2 ನಾನು ಕರೆದ ಹಾಗೆಲ್ಲಾ ನನ್ನ ಜನರು ದೂರದೂರ ಹೋಗುತ್ತಲೇ ಬಂದರು. ಬಾಳ್ ದೇವತೆಗಳಿಗೆ ಯಜ್ಞಮಾಡಿ, ಬೊಂಬೆಗಳಿಗೆ ಧೂಪ ಹಾಕಿದರು.
As they called them, so they went from them: they sacrificed unto the Baalim, and burned incense to graven images.
3 ನಾನೇ ಎಫ್ರಾಯೀಮಿಗೆ ನಡೆದಾಟವನ್ನು ಕಲಿಸಿದೆನು; ಅದನ್ನು ಕೈಯಲ್ಲಿ ಎತ್ತಿಕೊಂಡೆನು. ತನ್ನನ್ನು ಸ್ವಸ್ಥಮಾಡಿದವನು ನಾನೇ ಎಂದು ಅದಕ್ಕೆ ತಿಳಿಯಲಿಲ್ಲ.
Yet I taught Ephraim to go; I took them on my arms; but they knew not that I healed them.
4 ನಾನು ನನ್ನ ಜನರನ್ನು ಮಾನವರಿಗೆ ತಕ್ಕ ಮೂಗುದಾರದಿಂದ, ಅಂದರೆ ಮಮತೆಯ ಹಗ್ಗದಿಂದ ಸೆಳೆದುಕೊಂಡೆನು. ನೊಗವನ್ನು ತಲೆಯ ಈಚೆಗೆ ತೆಗೆಯುವವರಂತೆ ನಾನು ಅವರನ್ನು ಸುಧಾರಿಸಿ, ಅವರಿಗೆ ಆಹಾರವನ್ನು ಉಣಿಸಿದೆನು.
I drew them with cords of a man, with bands of love; and I was to them as they that take off the yoke on their jaws, and I laid meat before them.
5 ಇಸ್ರಾಯೇಲ್ ಐಗುಪ್ತ ದೇಶಕ್ಕೆ ಹಿಂದಿರುಗದು; ಅದು ನನ್ನ ಕಡೆಗೆ ಹಿಂದಿರುಗಲು ಒಪ್ಪದ ಕಾರಣ ಅಶ್ಶೂರವೇ ಅದಕ್ಕೆ ರಾಜನಾಗಬೇಕು.
He shall not return into the land of Egypt; but the Assyrian shall be his king, because they refused to return.
6 ಅದರ ದುರಾಲೋಚನೆಗಳ ನಿಮಿತ್ತ ಖಡ್ಗವು ಅದರ ಪಟ್ಟಣಗಳ ಮೇಲೆ ಬೀಸಲ್ಪಟ್ಟು, ಅಲ್ಲಿನ ಕೋಟೆಗಳನ್ನು ಧ್ವಂಸಮಾಡಿ ನುಂಗಿಬಿಡುವುದು.
And the sword shall fall upon his cities, and shall consume his bars, and devour [them], because of their own counsels.
7 ನನ್ನ ಕಡೆಯಿಂದ ತಿರಿಗಿಕೊಳ್ಳುವುದು ನನ್ನ ಜನರ ಗುಣವೇ; ಅವರನ್ನು ಮೇಲಕ್ಕೆ ಕರೆಯುವವರು ಇದ್ದರೂ, ಮೇಲಕ್ಕೆತ್ತುವವರು ಯಾರೂ ಇಲ್ಲ.
And my people are bent to backsliding from me: though they call them to [him that is] on high, none at all will exalt [him].
8 ಎಫ್ರಾಯೀಮೇ, ನಾನು ನಿನ್ನನ್ನು ಹೇಗೆ ತ್ಯಜಿಸಲಿ! ಇಸ್ರಾಯೇಲೇ, ಹೇಗೆ ನಿನ್ನನ್ನು ಕೈಬಿಡಲಿ! ಅಯ್ಯೋ, ನಿನ್ನನ್ನು ಅದ್ಮಾದ ಗತಿಗೆ ಹೇಗೆ ತರಲಿ! ಚೆಬೋಯಿಮಿನಂತೆ ಹೇಗೆ ನಾಶಮಾಡಲಿ! ನನ್ನ ಮನಸ್ಸು ನನ್ನೊಳಗೆ ತಿರುಗಿತು, ಕರುಳು ತೀರಾ ಮರುಗಿತು.
How shall I give thee up, Ephraim? [how] shall I deliver thee, Israel? how shall I make thee as Admah? [how] shall I set thee as Zeboim? mine heart is turned within me, my compassions are kindled together.
9 ನನ್ನ ಉಗ್ರಕೋಪವನ್ನು ತೀರಿಸೆನು, ಎಫ್ರಾಯೀಮನ್ನು ನಾಶಮಾಡಲು ತಿರಿಗಿಕೊಳ್ಳೆನು. ನಾನು ಮನುಷ್ಯನಲ್ಲ, ದೇವರೇ; ನಾನು ನಿಮ್ಮಲ್ಲಿ ನೆಲೆಯಾಗಿರುವ ಸದಮಲಸ್ವಾಮಿ, ನಾನು ನಿನ್ನ ಬಳಿಗೆ ರೋಷದಿಂದ ಬಾರೆನು.
I will not execute the fierceness of mine anger, I will not return to destroy Ephraim: for I am God, and not man; the Holy One in the midst of thee: and I will not enter into the city.
10 ೧೦ ಸಿಂಹದಂತೆ ಗರ್ಜಿಸುತ್ತಿರುವ ಯೆಹೋವನನ್ನು ಆತನ ಜನರು ಹಿಂಬಾಲಿಸುವರು; ಆತನು ಆರ್ಭಟಿಸಲು ಆತನ ಮಕ್ಕಳು ಪಶ್ಚಿಮದಿಂದ ನಡಗುತ್ತಾ ಬರುವರು;
They shall walk after the LORD, who shall roar like a lion: for he shall roar, and the children shall come trembling from the west.
11 ೧೧ ಗುಬ್ಬಿಗಳಂತೆ ಐಗುಪ್ತದಿಂದಲೂ, ಪಾರಿವಾಳಗಳಂತೆ ಅಶ್ಶೂರದಿಂದಲೂ ಅದರುತ್ತಾ ತ್ವರೆಪಡುವರು; ಅವರು ತಮ್ಮ ತಮ್ಮ ನಿವಾಸಗಳಲ್ಲಿ ವಾಸಿಸುವಂತೆ ಮಾಡುವೆನು; ಇದು ಯೆಹೋವನ ನುಡಿ.
They shall come trembling as a bird out of Egypt, and as a dove out of the land of Assyria: and I will make them to dwell in their houses, saith the LORD.
12 ೧೨ ಎಫ್ರಾಯೀಮು ಸುಳ್ಳಿನಿಂದಲೂ, ಇಸ್ರಾಯೇಲ್ ವಂಶವು ಮೋಸದಿಂದಲೂ ನನ್ನನ್ನು ಮುತ್ತಿಕೊಂಡಿವೆ; ಯೆಹೂದವು ಸತ್ಯಸಂಧನೂ, ಸದಮಲಸ್ವಾಮಿಯೂ ಆದ ದೇವರ ಕಡೆಯಿಂದ ಇನ್ನೂ ಅಲೆದಾಡುತ್ತಿದೆ.
Ephraim compasseth me about with falsehood, and the house of Israel with deceit: but Judah yet ruleth with God, and is faithful with the Holy One.

< ಹೋಶೇಯನು 11 >