< ಹೋಶೇಯನು 6 >

1 ಅವರು, “ಯೆಹೋವನ ಕಡೆಗೆ ಹಿಂದಿರುಗಿ ಹೋಗೋಣ ಬನ್ನಿರಿ; ನಮ್ಮನ್ನು ಸೀಳಿಬಿಟ್ಟವನು ಆತನೇ, ಆತನೇ ಸ್ವಸ್ಥ ಮಾಡುವನು; ಹೊಡೆದವನು ಆತನೇ, ಆತನೇ ನಮ್ಮ ಗಾಯಗಳನ್ನು ಕಟ್ಟುವನು.
В скорби своей утреневати будут ко Мне, глаголюще: идем и обратимся ко Господу Богу нашему,
2 ಒಂದೆರಡು ದಿನದ ಮೇಲೆ ಆತನು ನಮ್ಮನ್ನು ಬದುಕಿಸುವನು; ಮೂರನೆಯ ದಿನದಲ್ಲಿ ಆತನು ನಮ್ಮನ್ನೆಬ್ಬಿಸಲು ಆತನ ಸಾನ್ನಿಧ್ಯದಲ್ಲಿ ಬಾಳುವೆವು.
яко Той поби ны, и изцелит ны: уязвит, и уврачует ны:
3 ಯೆಹೋವನನ್ನು ತಿಳಿದುಕೊಳ್ಳೋಣ, ನಿರಂತರವಾಗಿ ಹುಡುಕಿ ತಿಳಿದುಕೊಳ್ಳೋಣ, ಆತನ ಆಗಮನವು ಉದಯದಂತೆ ನಿಶ್ಚಯ; ಆತನು ಮುಂಗಾರಿನಂತೆಯೂ, ಭೂಮಿಯನ್ನು ತಂಪುಮಾಡುವ ಹಿಂಗಾರಿನಂತೆಯೂ ನಮಗೆ ಸಿಕ್ಕುವನು” ಅಂದುಕೊಂಡು ನನ್ನನ್ನು ಮೊರೆಹೋಗುವರು.
изцелит ны по двою дню, в день третий воскреснем и живи будем пред ним, и увемы: поженем, еже уведети Господа: яко утро готово обрящем Его, и приидет нам яко дождь ранний и поздный земли.
4 ಎಫ್ರಾಯೀಮೇ, ನಾನು ನಿನ್ನನ್ನು ಹೇಗೆ ತಿದ್ದಲಿ? ಯೆಹೂದವೇ, ನಿನ್ನನ್ನು ಹೇಗೆ ಸರಿಮಾಡಲಿ? ನಿಮ್ಮ ಭಕ್ತಿಯು ಪ್ರಾತಃಕಾಲದ ಮೋಡಕ್ಕೂ, ಬೇಗನೆ ಮಾಯವಾಗುವ ಇಬ್ಬನಿಗೂ ಸಮಾನವಾಗಿದೆ.
Что ти сотворю, Ефреме? Что ти сотворю, Иудо? Милость бо ваша яко облак утренний и яко роса рано падающая.
5 ಆದಕಾರಣ ನಾನು ನಿಮ್ಮ ಜನರನ್ನು ಪ್ರವಾದಿಗಳ ಮೂಲಕ ಹತಿಸಿದ್ದೇನೆ, ನನ್ನ ಬಾಯಿಯ ಮಾತುಗಳಿಂದ ಸಂಹರಿಸಿದ್ದೇನೆ; ನನ್ನ ನ್ಯಾಯದಂಡನೆಯು ಮಿಂಚಿನಂತೆ ಹೊರಡುವುದು.
Сего ради пожах пророки вашя, убих я словесем уст Моих, и суд Мой яко свет изыдет.
6 ನನಗೆ ಯಜ್ಞವು ಬೇಡ, ಕರುಣೆಯೇ ಬೇಕು; ಹೋಮಗಳಿಗಿಂತ ದೇವಜ್ಞಾನವೇ ಇಷ್ಟ.
Зане милости хощу а не жертвы, и уведения Божия, нежели всесожжения.
7 ಅವರು ಆದಾಮನಂತೆ ನನ್ನ ನಿಬಂಧನೆಯನ್ನು ಮೀರಿದ್ದಾರೆ; ಅಲ್ಲಲ್ಲಿ ನನಗೆ ದ್ರೋಹಮಾಡಿದ್ದಾರೆ.
Сии же суть яко человек преступаяй завет: тамо презреша Мя.
8 ಗಿಲ್ಯಾದು ಅಧರ್ಮಿಗಳು ತುಂಬಿದ ಪಟ್ಟಣ, ಅಲ್ಲಿನ ಹೆಜ್ಜೆಜಾಡುಗಳು ರಕ್ತಮಯವೇ.
Галаад град делаяй суетная, мутяй воду,
9 ಕಳ್ಳರ ಗುಂಪು ಒಬ್ಬನಿಗೆ ಹೊಂಚು ಹಾಕುವಂತೆ ಯಾಜಕರು ಗುಂಪಾಗಿ ದಾರಿಯಲ್ಲಿ ಹೊಂಚಿಕೊಂಡಿದ್ದು, ಶೆಕೆಮಿಗೆ ಯಾತ್ರೆ ಹೋಗುವವರನ್ನು ದೋಚಿ ಕೊಂದುಹಾಕುತ್ತಾರೆ; ಹೌದು, ಘೋರಕೃತ್ಯವನ್ನು ನಡೆಸುತ್ತಾರೆ.
а крепость твоя яко мужа морскаго разбойника: скрыша жерцы путь Господень, убиша Сикиму, яко беззаконие сотвориша.
10 ೧೦ ನಾನು ಇಸ್ರಾಯೇಲ್ ಮನೆತನದಲ್ಲಿ ಅಸಹ್ಯವನ್ನು ನೋಡಿದ್ದೇನೆ; ಎಫ್ರಾಯೀಮಿನೊಳಗೆ ವ್ಯಭಿಚಾರವು ನಡೆಯುತ್ತದೆ, ಇಸ್ರಾಯೇಲು ಹೊಲೆಯಾಗಿದೆ.
В дому Израилеве видех грозная: тамо блужение Ефремово: осквернися Израиль и Иуда.
11 ೧೧ ಯೆಹೂದವೇ, ನಿನಗೂ ಅಧರ್ಮಫಲದ ಸುಗ್ಗಿಯು ನೇಮಕವಾಗಿದೆ.
Начни оымати виноград себе, егда возвращу пленение людий Моих.

< ಹೋಶೇಯನು 6 >