< ಯೆಶಾಯನು 17 >

1 ದಮಸ್ಕದ ವಿಷಯವಾದ ದೈವೋಕ್ತಿ. “ಆಹಾ, ದಮಸ್ಕವು ಇನ್ನು ಪಟ್ಟಣವಾಗಿರದೇ ಹಾಳು ದಿಬ್ಬವಾಗಿರುವುದು.
وحی درباره دمشق: اینک دمشق از میان شهرها برداشته می‌شود و توده خراب خواهد گردید.۱
2 ಆರೋಯೇರಿನ ಪಟ್ಟಣಗಳು ನಿರ್ಜನವಾಗಿ, ಮಂದೆಗಳಿಗೆ ಆಸರೆಯಾಗುವವು. ಅವು ಯಾರ ಹೆದರಿಕೆಯೂ ಇಲ್ಲದೆ ಅಲ್ಲಿ ತಂಗುವವು.
شهرهای عروعیر متروک می‌شود و به جهت خوابیدن گله‌ها خواهد بود و کسی آنها را نخواهد ترسانید.۲
3 ಎಫ್ರಾಯೀಮಿಗೆ ರಕ್ಷಣೆಯಾಗಿರುವ ಕೋಟೆಯೂ, ದಮಸ್ಕವು ನಡೆಸುವ ರಾಜ್ಯಾಧಿಕಾರವೂ ಇಲ್ಲವಾಗುವವು. ಅರಾಮ್ಯರಲ್ಲಿ ಉಳಿದವರು ಇಸ್ರಾಯೇಲರ ಮಕ್ಕಳ ವೈಭವದಂತೆ ಇರುವರು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
و حصار از افرایم تلف خواهد شد و سلطنت ازدمشق و از بقیه ارام. و مثل جلال بنی‌اسرائیل خواهند بود زیرا که یهوه صبایوت چنین می‌گوید.۳
4 “ಆ ದಿನದಲ್ಲಿ, ಯಾಕೋಬಿನ ಮಾಂಸದ ಕೊಬ್ಬು ಕರಗಿ, ಅದರ ಮಹಿಮೆಯೂ ಕ್ಷೀಣವಾಗುವುದು.
و در آن روز جلال یعقوب ضعیف می‌شود و فربهی جسدش به لاغری تبدیل می‌گردد.۴
5 ಹೊಲದಲ್ಲಿ ಬೆಳೆ ಕೊಯ್ಯುವವನು ಪೈರುಗಳನ್ನು ಒಟ್ಟುಗೂಡಿಸಿ ಕೈಯಿಂದ ತೆನೆಗಳನ್ನು ಕತ್ತರಿಸುವ ಹಾಗಿರುವುದು. ಹೌದು, ರೆಫಾಯೀಮ್ ತಗ್ಗಿನಲ್ಲಿ ತೆನೆಗಳನ್ನು ಕೂಡಿಸುವ ಹಾಗೆ ಇರುವುದು.
و چنان خواهد بود که دروگران زرع راجمع کنند و دستهای ایشان سنبله‌ها را درو کند. و خواهد بود مثل وقتی که در وادی رفایم سنبله‌ها را بچینند.۵
6 ಆದರೂ ಎಣ್ಣೆಯ ಮರದ ಕಾಯಿಗಳನ್ನು ಉದುರಿಸಿದ ಬಳಿಕ ಮೇಲಿನ ಕೊಂಬೆಯ ತುಟ್ಟತುದಿಯಲ್ಲಿ, ಎರಡು ಮೂರು ಕಾಯಿಗಳು, ಫಲವತ್ತಾದ ಆ ಮರದ ಕೊಂಬೆಗಳಲ್ಲೆಲ್ಲಾ ನಾಲ್ಕೈದು ಕಾಯಿಗಳು ಉಳಿದಿರುವಂತೆ ಹಕ್ಕಲುಹಣ್ಣುಗಳು ಅದರಲ್ಲಿ ಉಳಿದಿರುವುದು” ಎಂದು ಇಸ್ರಾಯೇಲರ ದೇವರಾದ ಯೆಹೋವನು ನುಡಿಯುತ್ತಾನೆ.
و خوشه های چند در آن باقی ماند و مثل وقتی که زیتون را بتکانند که دو یاسه دانه بر سر شاخه بلند و چهار یا پنج دانه برشاخچه های بارور آن باقی ماند. یهوه خدای اسرائیل چنین می‌گوید.۶
7 ಆ ದಿನದಲ್ಲಿ ಜನರು ತಮ್ಮ ಸೃಷ್ಟಿಕರ್ತನನ್ನೇ ದೃಷ್ಟಿಸುವರು ಮತ್ತು ಇಸ್ರಾಯೇಲಿನ ಸದಮಲಸ್ವಾಮಿಯ ಕಡೆಗೆ ಕಣ್ಣುಗಳನ್ನು ತಿರುಗಿಸುವರು.
در آن روز انسان بسوی آفریننده خود نظرخواهد کرد و چشمانش بسوی قدوس اسرائیل خواهد نگریست.۷
8 ತಮ್ಮ ಕೈಯಿಂದ ಮಾಡಿದ ಬಲಿಪೀಠಗಳನ್ನು ಲಕ್ಷಿಸದೆ, ತಮ್ಮ ಬೆರಳುಗಳಿಂದ ನಿರ್ಮಿಸಿದ ಅಶೇರವೆಂಬ ವಿಗ್ರಹಸ್ತಂಭಗಳನ್ನಾಗಲಿ, ಸೂರ್ಯಸ್ತಂಭಗಳನ್ನಾಗಲಿ ದೃಷ್ಟಿಸುವುದಿಲ್ಲ.
و بسوی مذبح هایی که به‌دستهای خود ساخته است نظر نخواهد کرد و به آنچه با انگشتهای خویش بنا نموده یعنی اشیریم و بتهای آفتاب نخواهد نگریست.۸
9 ಆ ದಿನದಲ್ಲಿ ದೇಶದ ಬಲವಾದ ಕೋಟೆಗಳು ಪೂರ್ವದಲ್ಲಿ ಇಸ್ರಾಯೇಲರ ಭಯದಿಂದ ನಿರ್ಜನವಾಗಿದ್ದ, ಅದು ಅಡವಿಯಲ್ಲಿಯೂ, ಬೆಟ್ಟಗಳ ತುದಿಯ ಮೇಲೂ ಕಾಣುವ ಹಾಳು ನಿವೇಶನಗಳಂತಿರುವವು, ಅಂತೂ ದೇಶವೆಲ್ಲಾ ಹಾಳಾಗಿರುವುದು.
در آن روز شهرهای حصینش مثل خرابه هایی که در جنگل یا بر کوه بلند است خواهد شد که آنها را از حضور بنی‌اسرائیل واگذاشتند و ویران خواهد شد.۹
10 ೧೦ ಏಕೆಂದರೆ ನೀನು ನಿನ್ನ ರಕ್ಷಕನಾದ ದೇವರನ್ನು ಮರೆತುಬಿಟ್ಟು, ನಿನ್ನ ಆಶ್ರಯಗಿರಿಯನ್ನು ಸ್ಮರಿಸಲಿಲ್ಲ. ಹೀಗಿರಲು ನೀನು ಇಷ್ಟವಾದ ದ್ರಾಕ್ಷಿಯ ಗಿಡಗಳನ್ನು ನೆಟ್ಟು, ನಿನ್ನ ದೇಶದಲ್ಲಿ ದೇಶಾಂತರದ ಸಸಿಗಳನ್ನು ನೆಟಿದ್ದಿ.
چونکه خدای نجات خود را فراموش کردی و صخره قوت خویش را به یاد نیاوردی بنابراین نهالهای دلپذیرغرس خواهی نمود و قلمه های غریب را خواهی کاشت.۱۰
11 ೧೧ ಬೀಜವನ್ನು ನೆಟ್ಟ ದಿನದಲ್ಲಿಯೇ ಬೇಲಿಕಟ್ಟಿ, ಮರುದಿನ ಬೆಳಿಗ್ಗೆ ಮೊಳೆಯುವಂತೆ ಮಾಡಿದ್ದೀ. ಆದರೆ ಬೆಳೆಯನ್ನು ಕುಪ್ಪೆಯಾಗಿ ಕೂಡಿಸುವ ದಿನವು ವ್ಯಾಧಿಯ ಮತ್ತು ವಿಪರೀತ ವ್ಯಥೆಯ ದಿನವಾಗಿರುತ್ತದೆ.
در روزی که غرس می‌نمایی آن را نموخواهی داد و در صبح مزروع خود را به شکوفه خواهی آورد اما محصولش در روز آفت مهلک وحزن علاج ناپذیر بر باد خواهد رفت.۱۱
12 ೧೨ ಆಹಾ, ಸಮುದ್ರವು ಭೋರ್ಗರೆಯುವಂತೆ ಭೋರ್ಗರೆಯುವ ಬಹು ಜನಾಂಗಗಳ ಗದ್ದಲ! ಮಹಾ ಜಲಪ್ರವಾಹಗಳು ಘೋಷಿಸುವಂತೆ ಘೋಷಿಸುವ ಜನಗಳ ಘೋಷ!
وای بر شورش قوم های بسیار که مثل شورش دریا شورش می‌نمایند و خروش طوایفی که مثل خروش آبهای زورآور خروش می‌کنند.۱۲
13 ೧೩ ಹೌದು, ಮಹಾ ಜಲಪ್ರವಾಹಗಳು ಘೋಷಿಸುವಂತೆ ಜನಾಂಗಗಳು ಘೋಷಿಸುತ್ತಿವೆ. ಆದರೆ ಆತನು ಅವರನ್ನು ಗದರಿಸುವಾಗ ಅವರು ದೂರ ಓಡಿಹೋಗಿ ಬೆಟ್ಟಗಳಲ್ಲಿ ಗಾಳಿಗೆ ಸಿಕ್ಕಿದ ಹೊಟ್ಟಿನಂತೆಯೂ, ಸುಂಟರ ಗಾಳಿಯಿಂದ ಸುತ್ತಾಡುವ ಧೂಳಿನಂತೆಯೂ ಅಟ್ಟಲ್ಪಡುವರು.
طوایف مثل خروش آبهای بسیارمی خروشند اما ایشان را عتاب خواهد کرد و به‌جای دور خواهند گریخت و مثل کاه کوهها دربرابر باد رانده خواهند شد و مثل غبار در برابرگردباد.۱۳
14 ೧೪ ಇಗೋ, ಸಂಜೆಯಲ್ಲಿ ಹೆದರಿ ಉದಯದೊಳಗಾಗಿ ಇಲ್ಲವಾಗುವರು! ನಮ್ಮನ್ನು ಸೂರೆ ಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆಹೊಡೆಯುವವರ ಪಾಡು ಇದೇ.
در وقت شام اینک خوف است و قبل از صبح نابود می‌شوند. نصیب تاراج کنندگان ما و حصه غارت نمایندگان ما همین است.۱۴

< ಯೆಶಾಯನು 17 >