< ಯೆಶಾಯನು 3 >

1 ಇಗೋ, ಕರ್ತನೂ, ಸೇನಾಧೀಶ್ವರನೂ ಆಗಿರುವ ಯೆಹೋವನೆಂಬ ನಾನು ಯೆರೂಸಲೇಮಿನಿಂದಲೂ, ಯೆಹೂದದಿಂದಲೂ ಜೀವನಕ್ಕೆ ಆಧಾರವಾದ ಅನ್ನಪಾನಗಳನ್ನೆಲ್ಲಾ ತೆಗೆದುಬಿಡುವೆನು.
כִּי הִנֵּה הָאָדוֹן יְהוָה צְבָאוֹת מֵסִיר מִירוּשָׁלִַם וּמִיהוּדָה מַשְׁעֵן וּמַשְׁעֵנָה כֹּל מִשְׁעַן־לֶחֶם וְכֹל מִשְׁעַן־מָֽיִם׃
2 ಇದಲ್ಲದೆ ಶೂರ, ಯುದ್ಧಭಟರು, ನ್ಯಾಯಾಧಿಪತಿ, ಪ್ರವಾದಿ, ಶಕುನದವ, ಹಿರಿಯ,
גִּבּוֹר וְאִישׁ מִלְחָמָה שׁוֹפֵט וְנָבִיא וְקֹסֵם וְזָקֵֽן׃
3 ಪಂಚಾಶತಾಧಿಪತಿ, ಘನವಂತನು, ಆಲೋಚನಾಪರನು, ತಾಂತ್ರಿಕನು ಮತ್ತು ವಾಕ್ಚಾತುರ್ಯವುಳ್ಳವನು ಆಗಿರುವ ಇವರೆಲ್ಲರನ್ನು ತೊಲಗಿಸಿಬಿಡುವೆನು.
שַׂר־חֲמִשִּׁים וּנְשׂוּא פָנִים וְיוֹעֵץ וַחֲכַם חֲרָשִׁים וּנְבוֹן לָֽחַשׁ׃
4 ನಾನು, “ಬಾಲಕರನ್ನು ಪ್ರಭುಗಳನ್ನಾಗಿ ಆ ದೇಶಕ್ಕೆ ನೇಮಿಸುವೆನು, ಬಾಲಕರು ಅದನ್ನು ಆಳುವರು.
וְנָתַתִּי נְעָרִים שָׂרֵיהֶם וְתַעֲלוּלִים יִמְשְׁלוּ־בָֽם׃
5 ಪ್ರಜೆಗಳು ಪರಸ್ಪರ ವಿರೋಧಿಗಳಾಗಿ, ಒಬ್ಬರನೊಬ್ಬರು ಹಿಂಸಿಸುವರು, ಬಾಲಕರು ಹಿರಿಯರ ಮೇಲೆಯೂ, ನೀಚನು ಘನವಂತನ ಜೊತೆಯಲ್ಲಿ ಸೊಕ್ಕಿನಿಂದ ವರ್ತಿಸುವರು.
וְנִגַּשׂ הָעָם אִישׁ בְּאִישׁ וְאִישׁ בְּרֵעֵהוּ יִרְהֲבוּ הַנַּעַר בַּזָּקֵן וְהַנִּקְלֶה בַּנִּכְבָּֽד׃
6 ಆ ದಿನದಲ್ಲಿ ಒಬ್ಬನು ತನ್ನ ಸಹೋದರನನ್ನು ತಂದೆಯ ಮನೆಯಲ್ಲಿ ಹಿಡಿದು, ‘ನಿನಗೆ ನಿಲುವಂಗಿ ಇದೆ. ನೀನು ನಮಗೆ ಒಡೆಯನಾಗಬೇಕು. ಹಾಳಾದ ಈ ಪಟ್ಟಣವು ನಿನ್ನ ಕೈಕೆಳಗಿರಲಿ ತಂದೆಯ ಮನೆಯೊಳಗೆ ಅಣ್ಣನನ್ನು ಬಲವಂತ ಮಾಡಲು ಅಣ್ಣನು ದೇಶದ ನಿರರ್ಥಕ ವ್ರಣವೈದ್ಯನಾಗುವುದಕ್ಕೆ ನನಗೆ ಇಷ್ಟವಿಲ್ಲ’ ಎಂದು ನಿರಾಕರಿಸುವನು.
כִּֽי־יִתְפֹּשׂ אִישׁ בְּאָחִיו בֵּית אָבִיו שִׂמְלָה לְכָה קָצִין תִּֽהְיֶה־לָּנוּ וְהַמַּכְשֵׁלָה הַזֹּאת תַּחַת יָדֶֽךָ׃
7 ಆ ದಿನದಲ್ಲಿ ಅವನು ಗಟ್ಟಿಯಾಗಿ ಕೂಗುತ್ತಾ, ‘ನಾನು ನಿಮ್ಮನ್ನು ಸ್ವಸ್ಥಪಡಿಸುವುದಿಲ್ಲ. ನನ್ನ ಮನೆಯಲ್ಲಿ ಅನ್ನವಾಗಲೀ, ವಸ್ತ್ರವಾಗಲೀ ಇಲ್ಲ: ಜನರನ್ನು ಆಳುವ ಒಡೆಯನನ್ನಾಗಿ ನನ್ನನ್ನು ಮಾಡಬೇಡಿರಿ’” ಎಂದು ಹೇಳುವನು.
יִשָּׂא בַיּוֹם הַהוּא ׀ לֵאמֹר לֹא־אֶהְיֶה חֹבֵשׁ וּבְבֵיתִי אֵין לֶחֶם וְאֵין שִׂמְלָה לֹא תְשִׂימֻנִי קְצִין עָֽם׃
8 ಏಕೆಂದರೆ ಯೆರೂಸಲೇಮ್ ಹಾಳಾಯಿತು. ಯೆಹೂದವು ಬಿದ್ದುಹೋಯಿತು. ಅವರ ನಡೆನುಡಿಗಳು ಯೆಹೋವನಿಗೆ ವಿರುದ್ಧವಾಗಿ ಆತನ ಪ್ರಭಾವದ ದೃಷ್ಟಿಯನ್ನು ಕೆರಳಿಸುತ್ತದಲ್ಲವೇ?
כִּי כָשְׁלָה יְרוּשָׁלִַם וִיהוּדָה נָפָל כִּֽי־לְשׁוֹנָם וּמַֽעַלְלֵיהֶם אֶל־יְהוָה לַמְרוֹת עֵנֵי כְבוֹדֽוֹ׃
9 ಅವರ ಮುಖಭಾವವೇ ಅವರಿಗೆ ವಿರುದ್ಧ ಸಾಕ್ಷಿಯಾಗಿದೆ. ತಮ್ಮ ಪಾಪವನ್ನು ಮರೆಮಾಡದೇ ಸೊದೋಮಿನವರಂತೆ ಪ್ರಕಟಿಸುತ್ತಾರೆ. ಅಯ್ಯೋ, ಅವರ ಆತ್ಮದ ಗತಿಯೇ! ತಮಗೆ ತಾವೇ ಕೇಡು ಮಾಡಿಕೊಂಡಿದ್ದಾರೆ.
הַכָּרַת פְּנֵיהֶם עָנְתָה בָּם וְחַטָּאתָם כִּסְדֹם הִגִּידוּ לֹא כִחֵדוּ אוֹי לְנַפְשָׁם כִּֽי־גָמְלוּ לָהֶם רָעָֽה׃
10 ೧೦ ನೀವು ನೀತಿವಂತರಿಗೆ, “ನಿಮಗೆ ಒಳ್ಳೆಯದಾಗಲಿ” ಎಂದು ಹೇಳಿರಿ, ಅವರು ತಮ್ಮ ಒಳ್ಳೆಯ ಫಲವನ್ನು ಅನುಭವಿಸುವರು.
אִמְרוּ צַדִּיק כִּי־טוֹב כִּֽי־פְרִי מַעַלְלֵיהֶם יֹאכֵֽלוּ׃
11 ೧೧ ದುಷ್ಟರ ಗತಿಯನ್ನು ಏನು ಹೇಳಲಿ! ಅವರ ಕಾರ್ಯಗಳಿಗೆ ತಕ್ಕ ಪ್ರತಿಫಲವು ಅವರಿಗೆ ದೊರಕುವುದು.
אוֹי לְרָשָׁע רָע כִּֽי־גְמוּל יָדָיו יֵעָשֶׂה לּֽוֹ׃
12 ೧೨ ನನ್ನ ಪ್ರಜೆಗಳನ್ನು ಬಾಲಕರು ಬಾಧಿಸುವರು. ಸ್ತ್ರೀಯರು ಅವರನ್ನು ಆಳುವರು. ನನ್ನ ಪ್ರಜೆಗಳೇ, ನಿಮ್ಮನ್ನು ನಡೆಸುವವರು ದಾರಿತಪ್ಪಿಸುವವರಾಗಿದ್ದಾರೆ. ನೀವು ನಡೆಯತಕ್ಕ ದಾರಿಯನ್ನು ಹಾಳುಮಾಡಿದ್ದಾರೆ.
עַמִּי נֹגְשָׂיו מְעוֹלֵל וְנָשִׁים מָשְׁלוּ בוֹ עַמִּי מְאַשְּׁרֶיךָ מַתְעִים וְדֶרֶךְ אֹֽרְחֹתֶיךָ בִּלֵּֽעוּ׃
13 ೧೩ ಯೆಹೋವನು ವಾದಿಸುವುದಕ್ಕೂ, ಜನರಿಗೆ ನ್ಯಾಯತೀರಿಸುವುದಕ್ಕೂ ಎದ್ದು ನಿಂತಿದ್ದಾನೆ.
נִצָּב לָרִיב יְהוָה וְעֹמֵד לָדִין עַמִּֽים׃
14 ೧೪ ಯೆಹೋವನು ತನ್ನ ಜನರ ಹಿರಿಯರನ್ನು, ಅಧಿಕಾರಿಗಳನ್ನೂ ನ್ಯಾಯವಿಚಾರಣೆಗೆ ತರುವನು. ಏಕೆಂದರೆ, “ನೀವು ದ್ರಾಕ್ಷಿಯ ತೋಟವನ್ನು ನುಂಗಿಬಿಟ್ಟಿದ್ದೀರಿ. ಬಡವರಿಂದ ಕೊಳ್ಳೆಹೊಡೆದದ್ದು ನಿಮ್ಮ ಮನೆಗಳಲ್ಲಿ ಇದೆ.
יְהוָה בְּמִשְׁפָּט יָבוֹא עִם־זִקְנֵי עַמּוֹ וְשָׂרָיו וְאַתֶּם בִּֽעַרְתֶּם הַכֶּרֶם גְּזֵלַת הֶֽעָנִי בְּבָתֵּיכֶֽם׃
15 ೧೫ ನೀವು ನನ್ನ ಜನರನ್ನು ಜಜ್ಜಿ, ಬಡವರನ್ನು ದುಃಖದಿಂದ ಹಿಂಸಿಸುವುದೇಕೆ?” ಎಂದು ಕರ್ತನಾದ ಸೇನಾಧೀಶ್ವರ ಯೆಹೋವನು ವಾದಿಸುವನು.
מלכם מַה־לָּכֶם תְּדַכְּאוּ עַמִּי וּפְנֵי עֲנִיִּים תִּטְחָנוּ נְאֻם־אֲדֹנָי יְהוִה צְבָאֽוֹת׃
16 ೧೬ ಇದಲ್ಲದೆ ಯೆಹೋವನು ಹೀಗನ್ನುತ್ತಾನೆ, ಚೀಯೋನಿನ ಹೆಂಗಸರು ಅಹಂಕಾರವುಳ್ಳವರಾಗಿ, ಕತ್ತು ತೂಗುತ್ತಾ, ಕಣ್ಣುಗಳನ್ನು ತಿರುಗಿಸುತ್ತಾ, ವಯ್ಯಾರವಾಗಿ ಹೆಜ್ಜೆ ಇಡುತ್ತಾ, ಕಾಲು ಗೆಜ್ಜೆ ಜಣಜಣಿಸುತ್ತಾ ನಡೆಯುವವರಾಗಿರುವುದರಿಂದ,
וַיֹּאמֶר יְהוָה יַעַן כִּי גָֽבְהוּ בְּנוֹת צִיּוֹן וַתֵּלַכְנָה נטוות נְטוּיוֹת גָּרוֹן וּֽמְשַׂקְּרוֹת עֵינָיִם הָלוֹךְ וְטָפֹף תֵּלַכְנָה וּבְרַגְלֵיהֶם תְּעַכַּֽסְנָה׃
17 ೧೭ ಕರ್ತನಾದ ಯೆಹೋವನು ಚೀಯೋನಿನ ಪುತ್ರಿಯರ ನಡುನೆತ್ತಿಯನ್ನೂ ಹುಣ್ಣಿನಿಂದ ಬಾಧಿಸಿ, ಅವರ ಮಾನವನ್ನು ಬಯಲುಮಾಡುವನು.
וְשִׂפַּח אֲדֹנָי קָדְקֹד בְּנוֹת צִיּוֹן וַיהוָה פָּתְהֵן יְעָרֶֽה׃
18 ೧೮ ಆ ದಿನದಲ್ಲಿ ಕರ್ತನು ಅವರ ಅಂದುಗೆ, ತುರುಬುಬಲೆ, ಅರ್ಧಚಂದ್ರ,
בַּיּוֹם הַהוּא יָסִיר אֲדֹנָי אֵת תִּפְאֶרֶת הָעֲכָסִים וְהַשְּׁבִיסִים וְהַשַּׂהֲרֹנִֽים׃
19 ೧೯ ಜುಮುಕಿ, ಬಳೆ, ಶಿರವಸ್ತ್ರ,
הַנְּטִיפוֹת וְהַשֵּׁירוֹת וְהָֽרְעָלֽוֹת׃
20 ೨೦ ಮುಂಡಾಸು, ಕಾಲಗೆಜ್ಜೆ, ಡಾಬು, ಗಂಧದ ಭರಣಿ, ತೋಳಬಂಧಿ,
הַפְּאֵרִים וְהַצְּעָדוֹת וְהַקִּשֻּׁרִים וּבָתֵּי הַנֶּפֶשׁ וְהַלְּחָשִֽׁים׃
21 ೨೧ ಮುದ್ರೆ ಉಂಗುರ, ಮೂಗುತಿ,
הַטַּבָּעוֹת וְנִזְמֵי הָאָֽף׃
22 ೨೨ ಹಬ್ಬದ ಉಡುಗೆ-ತೊಡುಗೆ, ಮೇಲಂಗಿ, ಶಾಲು, ಕೈಚೀಲ,
הַמַּֽחֲלָצוֹת וְהַמַּעֲטָפוֹת וְהַמִּטְפָּחוֹת וְהָחֲרִיטִֽים׃
23 ೨೩ ಕೈಗನ್ನಡಿ, ನಾರುಮಡಿ, ಮುಡಿ ಮುಕುಟ, ಮೇಲ್ಹೊದಿಕೆ ಈ ಸೊಗಸಾದ ಭೂಷಣಗಳನ್ನೆಲ್ಲಾ ತೆಗೆದುಹಾಕುವನು.
וְהַגִּלְיֹנִים וְהַסְּדִינִים וְהַצְּנִיפוֹת וְהָרְדִידִֽים׃
24 ೨೪ ಆಗ ಸುಗಂಧದ ಬದಲಾಗಿ ದುರ್ವಾಸನೆ, ಡಾಬಿಗೆ ಬದಲಾಗಿ ಹಗ್ಗ, ಅಂದವಾದ ಜಡೆಯ ಬದಲಾಗಿ ಬೋಳುತಲೆ, ನಡುವಿನ ಶಲ್ಯಕ್ಕೆ ಬದಲಾಗಿ ಗೋಣಿತಟ್ಟು, ಸೌಂದರ್ಯಕ್ಕೆ ಬದಲಾಗಿ ಕುರೂಪ, ಬೆತ್ತಲೆ ಉಂಟಾಗುವುದು.
וְהָיָה תַחַת בֹּשֶׂם מַק יִֽהְיֶה וְתַחַת חֲגוֹרָה נִקְפָּה וְתַחַת מַעֲשֶׂה מִקְשֶׁה קָרְחָה וְתַחַת פְּתִיגִיל מַחֲגֹרֶת שָׂק כִּי־תַחַת יֹֽפִי׃
25 ೨೫ ಚೀಯೋನ್ ನಗರಿಯೇ, ನಿನ್ನ ವೀರರು ಖಡ್ಗದಿಂದ ಬಿದ್ದುಹೋಗುವರು. ನಿನ್ನ ಶೌರ್ಯವು ಯುದ್ಧದಲ್ಲಿ ಅಡಗಿ ಹೋಗುವುದು.
מְתַיִךְ בַּחֶרֶב יִפֹּלוּ וּגְבוּרָתֵךְ בַּמִּלְחָמָֽה׃
26 ೨೬ ಅವಳ ಪುರದ್ವಾರಗಳಲ್ಲಿ ಪ್ರಲಾಪವೂ, ದುಃಖವೂ ತುಂಬಿರುವವು. ಅವಳು ಹಾಳಾಗಿ ನೆಲದ ಮೇಲೆ ಕುಳಿತುಕೊಳ್ಳುವಳು.
וְאָנוּ וְאָבְלוּ פְּתָחֶיהָ וְנִקָּתָה לָאָרֶץ תֵּשֵֽׁב׃

< ಯೆಶಾಯನು 3 >