< ಯೆಶಾಯನು 4 >

1 ಆ ದಿನದಲ್ಲಿ ಏಳು ಮಂದಿ ಹೆಂಗಸರು ಒಬ್ಬ ಪುರುಷನನ್ನು ಹಿಡಿದು, “ನಾವು ಸ್ವಂತವಾಗಿ ದುಡಿದ ಅನ್ನವನ್ನು ಉಣ್ಣುವೆವು, ನಾವೇ ಸಂಪಾದಿಸಿದ ಬಟ್ಟೆಯನ್ನು ಉಟ್ಟುಕೊಳ್ಳುವೆವು, ನಿನ್ನ ಹೆಸರು ಮಾತ್ರ ನಮಗಿದ್ದರೆ ಸಾಕು. ಯಜಮಾನನಾಗಿ ನಮ್ಮ ಮಾನ ಕಾಪಾಡಿದರೆ ಸಾಕು” ಎಂದು ಕೇಳಿಕೊಳ್ಳುವರು.
その日、七人の女がひとりの男にすがって、「わたしたちは自分のパンをたべ、自分の着物を着ます。ただ、あなたの名によって呼ばれることを許して、わたしたちの恥を取り除いてください」と言う。
2 ಆ ದಿನದಲ್ಲಿ ಯೆಹೋವನು ದಯಪಾಲಿಸಿದ ಬೆಳೆಯಿಂದ ಇಸ್ರಾಯೇಲರಲ್ಲಿ ಉಳಿದವರಿಗೆ ಸೌಂದರ್ಯವೂ, ಮಹಿಮೆಯೂ ಉಂಟಾಗುವವು. ದೇಶದಿಂದ ಫಲವೂ, ಉನ್ನತಿಯೂ, ಭೂಷಣವೂ ಲಭಿಸುವುದು.
その日、主の枝は麗しく栄え、地の産物はイスラエルの生き残った者の誇、また光栄となる。
3 ಆಗ ಚೀಯೋನಿನಲ್ಲಿ ಉಳಿದವರು, ಯೆರೂಸಲೇಮಿನಲ್ಲಿ ಉಳಿದವರು ಮತ್ತು ಯೆರೂಸಲೇಮಿನಲ್ಲಿ ವಾಸಿಸುವರೆಂದು ದಾಖಲೆಗೊಂಡ ಪ್ರತಿಯೊಬ್ಬ ಮನುಷ್ಯನು ಪರಿಶುದ್ಧನೆಂದು ಕರೆಯಲ್ಪಡುವನು.
4 ಆಗ ಕರ್ತನಾದ ಯೆಹೋವನು ನ್ಯಾಯತೀರ್ಪಿನ ಆತ್ಮದಿಂದಲೂ, ದಹಿಸುವ ಆತ್ಮದಿಂದಲೂ ಚೀಯೋನಿನ ಸ್ತ್ರೀಯರ ಕಲ್ಮಷವನ್ನೂ ಮತ್ತು ಯೆರೂಸಲೇಮಿನ ರಕ್ತದ ಕಲೆಯನ್ನು ತೊಳೆದುಬಿಡುವನು.
そして主が審判の霊と滅亡の霊とをもって、シオンの娘らの汚れを洗い、エルサレムの血をその中から除き去られるとき、シオンに残る者、エルサレムにとどまる者、すべてエルサレムにあって、生命の書にしるされた者は聖なる者ととなえられる。
5 ಆಮೇಲೆ ಯೆಹೋವನು ಚೀಯೋನ್ ಪರ್ವತದ ಪ್ರತಿಯೊಂದು ವಾಸಿಸುವ ಸ್ಥಳದ ಮೇಲೆಯೂ, ಅಲ್ಲಿ ನಡೆಯುವ ಸಭೆಗಳ ಮೇಲೆಯೂ, ಹಗಲಲ್ಲಿ ಹೊಗೆಯನ್ನೂ, ಮೇಘವನ್ನೂ, ಇರುಳಲ್ಲಿ ಪ್ರಜ್ವಲಿಸುವ ಅಗ್ನಿಯ ಪ್ರಕಾಶವನ್ನೂ ಉಂಟುಮಾಡುವನು. ಈ ಮಹಿಮೆಯು ಎಲ್ಲಾ ಕಡೆಯು ಆವರಿಸಿರುವುದು.
その時、主はシオンの山のすべての場所と、そのもろもろの集会との上に、昼は雲をつくり、夜は煙と燃える火の輝きとをつくられる。これはすべての栄光の上にある天蓋であり、あずまやであって、
6 ಅದು ಹಗಲಿನ ಬಿಸಿಲಿನಲ್ಲಿ ನೆರಳನ್ನೂ, ಸಣ್ಣ ದೊಡ್ಡ ಮಳೆಗಳಲ್ಲಿ ಆಶ್ರಯವನ್ನೂ ಕೊಡುವ ಗುಡಾರವಾಗಿರುವುದು.
昼は暑さをふせぐ陰となり、また暴風と雨を避けて隠れる所となる。

< ಯೆಶಾಯನು 4 >