< ಯೆಶಾಯನು 40 >

1 “ನನ್ನ ಸಂತೈಸಿರಿ, ಸಂತೈಸಿರಿ” ಎಂದು ನಿಮ್ಮ ದೇವರು ಹೇಳುತ್ತಾನೆ.
נַחֲמוּ נַחֲמוּ עַמִּי יֹאמַר אֱלֹֽהֵיכֶֽם׃
2 ಯೆರೂಸಲೇಮಿನ ಸಂಗಡ ಹೃದಯಂಗಮವಾಗಿ ಮಾತನಾಡಿರಿ; ಅದರ ಗಡು ತೀರಿತು, ವಿಧಿಸಿದ ದೋಷಫಲವೆಲ್ಲಾ ನೆರವೇರಿತು, ಅದರ ಎಲ್ಲಾ ಪಾಪಗಳಿಗೂ ಯೆಹೋವನ ಕೈಯಿಂದ ಎರಡರಷ್ಟು ಶಿಕ್ಷೆಯಾಯಿತು ಎಂದು ಆ ನಗರಿಗೆ ಕೂಗಿ ಹೇಳಿರಿ; ಇದೇ ನಿಮ್ಮ ದೇವರ ಆಜ್ಞೆ.
דַּבְּרוּ עַל־לֵב יְרוּשָׁלַ͏ִם וְקִרְאוּ אֵלֶיהָ כִּי מָֽלְאָה צְבָאָהּ כִּי נִרְצָה עֲוֺנָהּ כִּי לָֽקְחָה מִיַּד יְהֹוָה כִּפְלַיִם בְּכׇל־חַטֹּאתֶֽיהָ׃
3 ಇಗೋ ಒಂದು ವಾಣಿ! “ಅರಣ್ಯದಲ್ಲಿ ಯೆಹೋವನ ದಾರಿಯನ್ನು ಸರಿಪಡಿಸಿರಿ, ಅಡವಿಯಲ್ಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ಸರಿಪಡಿಸಿರಿ”
קוֹל קוֹרֵא בַּמִּדְבָּר פַּנּוּ דֶּרֶךְ יְהֹוָה יַשְּׁרוּ בָּעֲרָבָה מְסִלָּה לֵאלֹהֵֽינוּ׃
4 ಎಲ್ಲಾ ಹಳ್ಳಕೊಳ್ಳಗಳು ಮುಚ್ಚಲ್ಪಡುವವು, ಎಲ್ಲಾ ಬೆಟ್ಟಗುಡ್ಡಗಳು ತಗ್ಗಿಸಲ್ಪಡುವವು, ಮಲೆನಾಡು ಬಯಲು ಸೀಮೆಯಾಗುವುದು. ಒರಟಾದ ನೆಲವು ಸಮವಾಗುವುದು.
כׇּל־גֶּיא יִנָּשֵׂא וְכׇל־הַר וְגִבְעָה יִשְׁפָּלוּ וְהָיָה הֶֽעָקֹב לְמִישׁוֹר וְהָרְכָסִים לְבִקְעָֽה׃
5 ಯೆಹೋವನ ಮಹಿಮೆಯು ಗೋಚರವಾಗುವುದು. ಎಲ್ಲಾ ಮನುಷ್ಯರೂ ಒಟ್ಟಿಗೆ ಅದನ್ನು ಕಾಣುವರು, ಯೆಹೋವನ ಬಾಯೇ ಇದನ್ನು ನುಡಿದಿದೆ ಎಂದು ಒಬ್ಬನು ಕೂಗುತ್ತಾನೆ.
וְנִגְלָה כְּבוֹד יְהֹוָה וְרָאוּ כׇל־בָּשָׂר יַחְדָּו כִּי פִּי יְהֹוָה דִּבֵּֽר׃
6 ಆಹಾ, ವಾಣಿಯು ಮತ್ತೆ ಕೇಳಿಸಿ, “ಕೂಗು ಎನ್ನುತ್ತದೆ” ಅದಕ್ಕೆ ನಾನು, “ಏನು ಕೂಗಲಿ?” ಎಂದು ಕೇಳಲು, “ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ, ಅದರ ಲಾವಣ್ಯವೆಲ್ಲಾ ಅಡವಿಯ ಹೂವಿನಂತಿದೆ.
קוֹל אֹמֵר קְרָא וְאָמַר מָה אֶקְרָא כׇּל־הַבָּשָׂר חָצִיר וְכׇל־חַסְדּוֹ כְּצִיץ הַשָּׂדֶֽה׃
7 ಯೆಹೋವನ ಶ್ವಾಸವು ಅದರ ಮೇಲೆ ಬೀಸುವುದರಿಂದ ಹುಲ್ಲು ಒಣಗಿ ಹೋಗುವುದು, ಹೂವು ಬಾಡಿ ಹೋಗುವುದು. ನಿಶ್ಚಯವಾಗಿ ಜನರು ಹುಲ್ಲೇ ಹುಲ್ಲು!
יָבֵשׁ חָצִיר נָבֵֽל־צִיץ כִּי רוּחַ יְהֹוָה נָשְׁבָה בּוֹ אָכֵן חָצִיר הָעָֽם׃
8 ಹುಲ್ಲು ಒಣಗಿ ಹೋಗುವುದು, ಹೂವು ಬಾಡಿ ಹೋಗುವುದು, ನಮ್ಮ ದೇವರ ಮಾತೋ ಸದಾಕಾಲವೂ ಇರುವುದು” ಎಂದು ಉತ್ತರವಾಯಿತು.
יָבֵשׁ חָצִיר נָבֵֽל צִיץ וּדְבַר־אֱלֹהֵינוּ יָקוּם לְעוֹלָֽם׃
9 ಶುಭಸಮಾಚಾರವನ್ನು ತಿಳಿಸಬಲ್ಲ ಚೀಯೋನೇ, ನೀನು ಉನ್ನತಪರ್ವತವನ್ನು ಏರು; ಸುವರ್ತಮಾನವನ್ನು ಪ್ರಕಟಿಸಬಲ್ಲ ಯೆರೂಸಲೇಮೇ, ನಿನ್ನ ಧ್ವನಿಯನ್ನು ಗಟ್ಟಿಯಾಗಿ ಎತ್ತು, ನಿರ್ಭಯವಾಗಿ ಎತ್ತಿ, ಯೆಹೂದದ ಪಟ್ಟಣಗಳಿಗೆ, “ಇಗೋ, ನಿಮ್ಮ ದೇವರು!
עַל הַר־גָּבֹהַּ עֲלִי־לָךְ מְבַשֶּׂרֶת צִיּוֹן הָרִימִי בַכֹּחַ קוֹלֵךְ מְבַשֶּׂרֶת יְרוּשָׁלָ͏ִם הָרִימִי אַל־תִּירָאִי אִמְרִי לְעָרֵי יְהוּדָה הִנֵּה אֱלֹהֵיכֶֽם׃
10 ೧೦ ಇಗೋ, ಕರ್ತನಾದ ಯೆಹೋವನು ಶೂರನಾಗಿ ಬರುವನು, ತನ್ನ ಭುಜಬಲದಿಂದಲೇ ಆಳುವನು. ಇಗೋ, ಆತನ ಕ್ರಿಯಾಲಾಭವು ಆತನೊಂದಿಗಿದೆ, ಆತನ ಶ್ರಮದ ಫಲವು ಆತನ ಮುಂದೆಯೇ ಇದೆ.
הִנֵּה אֲדֹנָי יֱהֹוִה בְּחָזָק יָבוֹא וּזְרֹעוֹ מֹשְׁלָה לוֹ הִנֵּה שְׂכָרוֹ אִתּוֹ וּפְעֻלָּתוֹ לְפָנָֽיו׃
11 ೧೧ ಆತನು ಕುರುಬನಂತೆ ತನ್ನ ಮಂದೆಯನ್ನು ಮೇಯಿಸುವನು, ಮರಿಗಳನ್ನು ಕೈಯಿಂದ ಕೂಡಿಸಿ ಎದೆಗಪ್ಪಿಕೊಳ್ಳುವನು. ಹಾಲು ಕುಡಿಸುವ ಕುರಿಮರಿಗಳನ್ನು ಮೆಲ್ಲನೆ ನಡೆಸುವನು” ಎಂದು ಸಾರು.
כְּרֹעֶה עֶדְרוֹ יִרְעֶה בִּזְרֹעוֹ יְקַבֵּץ טְלָאִים וּבְחֵיקוֹ יִשָּׂא עָלוֹת יְנַהֵֽל׃
12 ೧೨ ಯಾರು ಸಾಗರ ಸಮುದ್ರಗಳನ್ನು ಬರಿದಾದ ಕೈಯಿಂದ ಅಳತೆಮಾಡಿದವನು? ಯಾರು ಆಕಾಶಮಂಡಲದ ವ್ಯಾಪ್ತಿಯನ್ನು ಗೇಣಿನಿಂದ ನಿರ್ಣಯಿಸಿದವನು? ಭೂಲೋಕದ ಮಣ್ಣನ್ನೆಲ್ಲಾ ಕೊಳಗಕ್ಕೆ ತುಂಬಿದವನು ಯಾರು? ಬೆಟ್ಟಗಳನ್ನು ತ್ರಾಸಿನಿಂದಲೂ, ಗುಡ್ಡಗಳನ್ನು ತಕ್ಕಡಿಯಿಂದಲೂ ತೂಗಿದವನು ಯಾರು?
מִֽי־מָדַד בְּשׇׁעֳלוֹ מַיִם וְשָׁמַיִם בַּזֶּרֶת תִּכֵּן וְכָל בַּשָּׁלִשׁ עֲפַר הָאָרֶץ וְשָׁקַל בַּפֶּלֶס הָרִים וּגְבָעוֹת בְּמֹאזְנָֽיִם׃
13 ೧೩ ಯೆಹೋವನ ಆತ್ಮಕ್ಕೆ ಯಾರು ವಿಧಿಯನ್ನು ನೇಮಿಸಿದನು? ಆಲೋಚನಾ ಕರ್ತನಾಗಿ ಆತನಿಗೆ ಉಪದೇಶಿಸಿದವರು ಯಾರು?
מִֽי־תִכֵּן אֶת־רוּחַ יְהֹוָה וְאִישׁ עֲצָתוֹ יוֹדִיעֶֽנּוּ׃
14 ೧೪ ಆತನು ಯಾರ ಆಲೋಚನೆಯನ್ನು ಕೇಳಿದನು? ಯಾರು ಆತನಿಗೆ ಬುದ್ಧಿಕಲಿಸಿ ಆತನನ್ನು ನ್ಯಾಯಮಾರ್ಗದಲ್ಲಿ ನಡೆಯಿಸಿದನು? ಯಾರು ಆತನಿಗೆ ಜ್ಞಾನವನ್ನು ಬೋಧಿಸಿ ವಿವೇಕ ಮಾರ್ಗವನ್ನು ತೋರಿಸಿದವನು?
אֶת־מִי נוֹעָץ וַיְבִינֵהוּ וַֽיְלַמְּדֵהוּ בְּאֹרַח מִשְׁפָּט וַיְלַמְּדֵהוּ דַעַת וְדֶרֶךְ תְּבוּנוֹת יוֹדִיעֶֽנּוּ׃
15 ೧೫ ಆಹಾ, ಆತನ ಗಣನೆಯಲ್ಲಿ ಜನಾಂಗಗಳು ಕಪಿಲೆಯಿಂದ ಉದುರುವ ತುಂತುರಿನಂತೆಯೂ, ತಕ್ಕಡಿಯಲ್ಲಿನ ಧೂಳಿನ ಹಾಗೂ ಇರುತ್ತವೆ. ಇಗೋ, ದ್ವೀಪಗಳನ್ನು ಅಣುರೇಣುವಿನಂತೆ ಎತ್ತುತ್ತಾನೆ.
הֵן גּוֹיִם כְּמַר מִדְּלִי וּכְשַׁחַק מֹאזְנַיִם נֶחְשָׁבוּ הֵן אִיִּים כַּדַּק יִטּֽוֹל׃
16 ೧೬ (ಆತನಿಗರ್ಪಿಸತಕ್ಕ) ಹೋಮಕ್ಕೆ ಲೆಬನೋನಿನ ಬೆಂಕಿಯು ಸಾಲದು, ಅಲ್ಲಿನ ಪ್ರಾಣಿಗಳು ಸರ್ವಾಂಗಹೋಮಗಳಿಗೆ ಸಾಲದು.
וּלְבָנוֹן אֵין דֵּי בָּעֵר וְחַיָּתוֹ אֵין דֵּי עוֹלָֽה׃
17 ೧೭ ಸಕಲ ಜನಾಂಗಗಳು ಆತನ ದೃಷ್ಟಿಯಲ್ಲಿ ಏನೂ ಇಲ್ಲದಂತಿವೆ, ಅವು ಆತನ ಎಣಿಕೆಯಲ್ಲಿ ಶುದ್ಧಶೂನ್ಯವೇ.
כׇּל־הַגּוֹיִם כְּאַיִן נֶגְדּוֹ מֵאֶפֶס וָתֹהוּ נֶחְשְׁבוּ־לֽוֹ׃
18 ೧೮ ಹೀಗಿರಲು ದೇವರನ್ನು ಯಾರಿಗೆ ಹೋಲಿಸುವಿರಿ? ಅಥವಾ ಯಾವ ರೂಪವನ್ನು ಆತನಿಗೆ ಸಮಾನ ಮಾಡುವಿರಿ?
וְאֶל־מִי תְּדַמְּיוּן אֵל וּמַה־דְּמוּת תַּעַרְכוּ לֽוֹ׃
19 ೧೯ ವಿಗ್ರಹವಾದರೋ, ಶಿಲ್ಪಿಯು ಅದನ್ನು ಎರಕಹೊಯ್ಯುವನು, ಅಕ್ಕಸಾಲಿಗನು ಅದಕ್ಕೆ ಚಿನ್ನದ ಕವಚವನ್ನು ಹೊದಿಸಿ, ಬೆಳ್ಳಿಯ ಸರಪಣಿಗಳನ್ನು ಹಾಕುವನು.
הַפֶּסֶל נָסַךְ חָרָשׁ וְצֹרֵף בַּזָּהָב יְרַקְּעֶנּוּ וּרְתֻקוֹת כֶּסֶף צוֹרֵֽף׃
20 ೨೦ (ಇಂಥದನ್ನು ದೇವರಿಗೆ) ಕಾಣಿಕೆಯನ್ನಾಗಿ ಪ್ರತಿಷ್ಠಿಸಿಕೊಳ್ಳಲಾರದ ಬಡವನು, ಹುಳಿತು ಹೋಗದ ಮರವನ್ನು ಹುಡುಕಿ ಚಲಿಸದ ವಿಗ್ರಹವನ್ನು ಮಾಡಿಸಲು ಶಿಲ್ಪಿಯನ್ನು ವಿಚಾರಿಸಿಕೊಳ್ಳುವನು.
הַֽמְסֻכָּן תְּרוּמָה עֵץ לֹא־יִרְקַב יִבְחָר חָרָשׁ חָכָם יְבַקֶּשׁ־לוֹ לְהָכִין פֶּסֶל לֹא יִמּֽוֹט׃
21 ೨೧ ನಿಮಗೆ ತಿಳಿದಿಲ್ಲವೋ? ನೀವು ಕೇಳಲಿಲ್ಲವೋ? ಆದಿಯಿಂದಲೇ ನಿಮಗೆ ಉಪದೇಶವಾಗಿ ಬಂದಿಲ್ಲವೋ? ಭೂಮಿಯು ನಿರ್ಮಾಣವಾದ ದಿನದಿಂದ ನೀವು ಗ್ರಹಿಸುತ್ತಿಲ್ಲವೋ?
הֲלוֹא תֵֽדְעוּ הֲלוֹא תִשְׁמָעוּ הֲלוֹא הֻגַּד מֵרֹאשׁ לָכֶם הֲלוֹא הֲבִינוֹתֶם מוֹסְדוֹת הָאָֽרֶץ׃
22 ೨೨ ಭೂಮಂಡಲ ನಿವಾಸಿಗಳು ಮಿಡತೆಗಳಂತೆ ಸಣ್ಣಗೆ ಕಾಣಿಸುವಷ್ಟು ಉನ್ನತವಾದ ಆಕಾಶದಲ್ಲಿ ಆತನು ಆಸೀನನಾಗಿದ್ದಾನೆ; ಆಕಾಶಮಂಡಲವನ್ನು ನಾರುಬಟ್ಟೆಯಂತೆ ಹರಡಿ ನಿವಾಸದ ಗುಡಾರದಂತೆ ಎತ್ತಿ ಕಟ್ಟಿದ್ದಾನೆ.
הַיֹּשֵׁב עַל־חוּג הָאָרֶץ וְיֹשְׁבֶיהָ כַּחֲגָבִים הַנּוֹטֶה כַדֹּק שָׁמַיִם וַיִּמְתָּחֵם כָּאֹהֶל לָשָֽׁבֶת׃
23 ೨೩ ಪ್ರಭುಗಳನ್ನು ನಿರ್ನಾಮ ಮಾಡುತ್ತಾನೆ, ಭೂಪತಿಗಳನ್ನು ಶೂನ್ಯಗೊಳಿಸುತ್ತಾನೆ.
הַנּוֹתֵן רוֹזְנִים לְאָיִן שֹׁפְטֵי אֶרֶץ כַּתֹּהוּ עָשָֽׂה׃
24 ೨೪ ಇವರು ನೆಡಲ್ಪಟ್ಟ ಕೂಡಲೆ, ಬಿತ್ತಲ್ಪಟ್ಟ ಕ್ಷಣವೇ, ಇವರ ಸಂತಾನವು ಭೂಮಿಯಲ್ಲಿ ಬೇರೂರಿದಾಗಲೇ, ಆತನ ಶ್ವಾಸದಿಂದ ಬಾಡುವರು, ಬಿರುಗಾಳಿಯು ಇವರನ್ನು ಒಣಹುಲ್ಲಿನಂತೆ ಬಡಿದುಕೊಂಡು ಹೋಗುವುದು.
אַף בַּל־נִטָּעוּ אַף בַּל־זֹרָעוּ אַף בַּל־שֹׁרֵשׁ בָּאָרֶץ גִּזְעָם וְגַם־נָשַׁף בָּהֶם וַיִּבָשׁוּ וּסְעָרָה כַּקַּשׁ תִּשָּׂאֵֽם׃
25 ೨೫ ಹೀಗಿರಲು, “ನನ್ನನ್ನು ಯಾರಿಗೆ ಹೋಲಿಸಿ ಸರಿಸಮಾನ ಮಾಡುತ್ತೀರಿ?” ಎಂದು ಸದಮಲಸ್ವಾಮಿಯು ಕೇಳುತ್ತಾನೆ.
וְאֶל־מִי תְדַמְּיוּנִי וְאֶשְׁוֶה יֹאמַר קָדֽוֹשׁ׃
26 ೨೬ ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ನೋಡಿರಿ! ಈ ನಕ್ಷತ್ರಗಳನ್ನು ಸೃಷ್ಟಿಸಿದಾತನು ಯಾರು? ಈ ಸೈನ್ಯವನ್ನು ಲೆಕ್ಕಕ್ಕೆ ಸರಿಯಾಗಿ ಮುಂದುವರಿಸುತ್ತಾನೆ. ಎಲ್ಲವನ್ನೂ ಹೆಸರೆತ್ತಿ ಕರೆಯುತ್ತಾನೆ; ಆತನು ಅತಿ ಬಲಾಢ್ಯನೂ, ಮಹಾಶಕ್ತನೂ ಆಗಿರುವುದರಿಂದ ಅವುಗಳೊಳಗೆ ಒಂದೂ ಕಡಿಮೆಯಾಗದು.
שְׂאוּ־מָרוֹם עֵינֵיכֶם וּרְאוּ מִי־בָרָא אֵלֶּה הַמּוֹצִיא בְמִסְפָּר צְבָאָם לְכֻלָּם בְּשֵׁם יִקְרָא מֵרֹב אוֹנִים וְאַמִּיץ כֹּחַ אִישׁ לֹא נֶעְדָּֽר׃
27 ೨೭ ಯಾಕೋಬೇ, ಇಸ್ರಾಯೇಲೇ, “ನನ್ನ ಮಾರ್ಗವು ಯೆಹೋವನಿಗೆ ಮರೆಯಾಗಿದೆ, ನನಗೆ ಸಿಕ್ಕಬೇಕಾದ ನ್ಯಾಯವು ನನ್ನ ದೇವರ ಲಕ್ಷ್ಯಕ್ಕೆ ಬಿದ್ದಿಲ್ಲವಲ್ಲಾ” ಎಂದು ಏಕೆ ಅಂದುಕೊಳ್ಳುತ್ತೀ?
לָמָּה תֹאמַר יַֽעֲקֹב וּתְדַבֵּר יִשְׂרָאֵל נִסְתְּרָה דַרְכִּי מֵיְהֹוָה וּמֵאֱלֹהַי מִשְׁפָּטִי יַעֲבֽוֹר׃
28 ೨೮ ನೀನು ಗ್ರಹಿಸಲಿಲ್ಲವೋ? ಕೇಳಲಿಲ್ಲವೋ? ಯೆಹೋವನು ನಿರಂತರ ದೇವರೂ, ಭೂಮಿಯ ಕಟ್ಟಕಡೆಗಳನ್ನು ನಿರ್ಮಿಸಿದವನೂ ಆಗಿದ್ದಾನೆ. ಆತನು ದಣಿದು ಬಳಲುವುದಿಲ್ಲ, ಆತನ ವಿವೇಕವು ಪರಿಶೋಧನೆಗೆ ಅಗಮ್ಯ.
הֲלוֹא יָדַעְתָּ אִם־לֹא שָׁמַעְתָּ אֱלֹהֵי עוֹלָם ׀ יְהֹוָה בּוֹרֵא קְצוֹת הָאָרֶץ לֹא יִיעַף וְלֹא יִיגָע אֵין חֵקֶר לִתְבוּנָתֽוֹ׃
29 ೨೯ ಸೋತವನಿಗೆ ತ್ರಾಣವನ್ನು ಅನುಗ್ರಹಿಸಿ, ಬಲಹೀನನಿಗೆ ಬಹು ಬಲವನ್ನು ದಯಪಾಲಿಸುತ್ತಾನೆ.
נֹתֵן לַיָּעֵף כֹּחַ וּלְאֵין אוֹנִים עׇצְמָה יַרְבֶּֽה׃
30 ೩೦ ಯುವಕರೂ ದಣಿದು ಬಳಲುವರು, ತರುಣರೂ ಸೊರಗಿ ಮುಗ್ಗರಿಸುವರು.
וְיִעֲפוּ נְעָרִים וְיִגָעוּ וּבַחוּרִים כָּשׁוֹל יִכָּשֵֽׁלוּ׃
31 ೩೧ ಯೆಹೋವನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗಳಂತೆ ರೆಕ್ಕೆಗಳನ್ನು ಚಾಚಿಕೊಂಡು ಏರುವರು; ಅವರು ಓಡಿ ದಣಿಯರು, ನಡೆದು ಬಳಲರು.
וְקוֹיֵ יְהֹוָה יַחֲלִיפוּ כֹחַ יַעֲלוּ אֵבֶר כַּנְּשָׁרִים יָרוּצוּ וְלֹא יִיגָעוּ יֵלְכוּ וְלֹא יִיעָֽפוּ׃

< ಯೆಶಾಯನು 40 >