< ಯೆಶಾಯನು 42 >

1 ಇಗೋ, ನನ್ನ ಸೇವಕನು! ಇವನಿಗೆ ನಾನೇ ಆಧಾರ. ಇವನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು. ಇವನಲ್ಲಿ ನನ್ನ ಆತ್ಮವನ್ನು ಇರಿಸಿದ್ದೇನೆ. ಇವನು ಅನ್ಯಜನಗಳಲ್ಲಿಯೂ ಸದ್ಧರ್ಮವನ್ನು ಪ್ರಚುರಪಡಿಸುವನು.
Ecco il mio servo che io sostengo, il mio eletto di cui mi compiaccio. Ho posto il mio spirito su di lui; egli porterà il diritto alle nazioni.
2 ಇವನು ಕೂಗಾಡುವುದಿಲ್ಲ, ಆರ್ಭಟಿಸುವುದಿಲ್ಲ, ಬೀದಿಗಳಲ್ಲಿ ಇವನ ಧ್ವನಿಯೇ ಕೇಳಿಸುವುದಿಲ್ಲ.
Non griderà né alzerà il tono, non farà udire in piazza la sua voce,
3 ಜಜ್ಜಿದ ದಂಟನ್ನು ಮುರಿದು ಹಾಕದೆ, ಕಳೆಗುಂದಿದ ದೀಪವನ್ನು ನಂದಿಸದೆ, ಸದ್ಧರ್ಮವನ್ನು ಪ್ರಚುರಪಡಿಸಿ ಸಿದ್ಧಿಗೆ ತರುವನು.
non spezzerà una canna incrinata, non spegnerà uno stoppino dalla fiamma smorta. Proclamerà il diritto con fermezza;
4 ಲೋಕದಲ್ಲಿ ಸದ್ಧರ್ಮವನ್ನು ಸ್ಥಾಪಿಸುವ ತನಕ ಇವನು ಕಳೆಗುಂದದೆಯೂ, ಜಜ್ಜಿಹೋಗದೆಯೂ ತನ್ನ ಕಾರ್ಯದಲ್ಲಿ ನಿರತನಾಗಿರುವನು. ದ್ವೀಪಗಳು ಇವನ ಧರ್ಮಪ್ರಮಾಣಕ್ಕೆ ಕಾದಿರುವವು.
non verrà meno e non si abbatterà, finché non avrà stabilito il diritto sulla terra; e per la sua dottrina saranno in attesa le isole.
5 ಆಕಾಶಮಂಡಲವನ್ನು ಉಂಟುಮಾಡಿ ಹರಡಿ ಭೂಮಂಡಲವನ್ನೂ, ಅದರಲ್ಲಿನ ಉತ್ಪತ್ತಿಯನ್ನೂ ವಿಸ್ತರಿಸಿ ಲೋಕದ ಜನರಿಗೆ ಪ್ರಾಣವನ್ನು, ಹೌದು, ಭೂಜನರಿಗೆ ಜೀವಾತ್ಮವನ್ನೂ ದಯಪಾಲಿಸುವ ಯೆಹೋವನೆಂಬ ದೇವರು ಹೀಗೆನ್ನುತ್ತಾನೆ,
Così dice il Signore Dio che crea i cieli e li dispiega, distende la terra con ciò che vi nasce, dà il respiro alla gente che la abita e l'alito a quanti camminano su di essa:
6 “ಯೆಹೋವನೆಂಬ ನಾನು ನನ್ನ ಧರ್ಮದ ಸಂಕಲ್ಪಾನುಸಾರವಾಗಿ ನಿನ್ನನ್ನು ಕೈಹಿಡಿದು, ಕಾಪಾಡಿ ನನ್ನ ಜನರಿಗೆ ಒಡಂಬಡಿಕೆಯ ಆಧಾರವನ್ನಾಗಿಯೂ, ಅನ್ಯಜನಗಳಿಗೆ ಬೆಳಕನ್ನಾಗಿಯೂ ನೇಮಿಸಿದ್ದೇನೆ.
«Io, il Signore, ti ho chiamato per la giustizia e ti ho preso per mano; ti ho formato e stabilito come alleanza del popolo e luce delle nazioni,
7 ನೀನು ಕುರುಡರಿಗೆ ಕಣ್ಣುಕೊಟ್ಟು, ಬಂದಿಗಳನ್ನು ಸೆರೆಯಿಂದಲೂ, ಕತ್ತಲಲ್ಲಿ ಬಿದ್ದವರನ್ನು ಕಾರಾಗೃಹದಿಂದಲೂ ಹೊರಗೆ ತರುವಿ.
perché tu apra gli occhi ai ciechi e faccia uscire dal carcere i prigionieri, dalla reclusione coloro che abitano nelle tenebre.
8 ನಾನೇ ಯೆಹೋವನು; ಇದೇ ನನ್ನ ನಾಮವು; ನನ್ನ ಮಹಿಮೆಯನ್ನು ಮತ್ತೊಬ್ಬನಿಗೆ ಸಲ್ಲಗೊಡಿಸೆನು, ನನ್ನ ಸ್ತೋತ್ರವನ್ನು ವಿಗ್ರಹಗಳ ಪಾಲು ಮಾಡೆನು.
Io sono il Signore: questo è il mio nome; non cederò la mia gloria ad altri, né il mio onore agli idoli.
9 ಇಗೋ ಮೊದಲನೆಯ ಸಂಗತಿಗಳು ನೆರವೇರಿವೆ, ಹೊಸ ಸಂಗತಿಗಳನ್ನು ಪ್ರಕಟಿಸುತ್ತೇನೆ. ಅವು ತಲೆದೋರುವುದಕ್ಕೆ ಮೊದಲು ಅವುಗಳನ್ನು ನಿಮಗೆ ತಿಳಿಸುತ್ತೇನೆ.”
I primi fatti, ecco, sono avvenuti e i nuovi io preannunzio; prima che spuntino, ve li faccio sentire».
10 ೧೦ ಸಮುದ್ರಪ್ರಯಾಣಿಕರೇ, ಸಕಲಜಲಚರಗಳೇ, ದ್ವೀಪಾಂತರಗಳೇ, ದ್ವೀಪಾಂತರವಾಸಿಗಳೇ, ಯೆಹೋವನ ಘನತೆಗಾಗಿ ನೂತನ ಗೀತೆಯನ್ನು ಹಾಡಿ ದಿಗಂತಗಳಲ್ಲಿಯೂ ಆತನನ್ನು ಕೀರ್ತಿಸಿರಿ.
Cantate al Signore un canto nuovo, lode a lui fino all'estremità della terra; lo celebri il mare con quanto esso contiene, le isole con i loro abitanti.
11 ೧೧ ಅರಣ್ಯವೂ, ಅಲ್ಲಿನ ಊರುಗಳೂ, ಕೇದಾರಿನವರು ವಾಸಿಸುವ ಗ್ರಾಮಗಳೂ ಆರ್ಭಟಿಸಲಿ, ಸೆಲ ಪಟ್ಟಣದವರು ಹರ್ಷಧ್ವನಿಗೈದು ಪರ್ವತಾಗ್ರಗಳಲ್ಲಿ ಜಯಘೋಷ ಮಾಡಿರಿ.
Esulti il deserto con le sue città, esultino i villaggi dove abitano quelli di Kedàr; acclamino gli abitanti di Sela, dalla cima dei monti alzino grida.
12 ೧೨ ಯೆಹೋವನನ್ನು ಘನಪಡಿಸಿ ದ್ವೀಪಾಂತರಗಳಲ್ಲಿ ಆತನ ಸ್ತೋತ್ರವನ್ನು ಹಬ್ಬಿಸಲಿ.
Diano gloria al Signore e il suo onore divulghino nelle isole.
13 ೧೩ ಯೆಹೋವನು ಶೂರನಂತೆ ಹೊರಟು, ಯುದ್ಧವೀರನ ಹಾಗೆ ತನ್ನ ರೌದ್ರವನ್ನು ಎಬ್ಬಿಸುವನು. ಆರ್ಭಟಿಸಿ ಗರ್ಜಿಸಿ ಶತ್ರುಗಳ ಮೇಲೆ ಬಿದ್ದು ತನ್ನ ಪರಾಕ್ರಮವನ್ನು ತೋರ್ಪಡಿಸುವನು.
Il Signore avanza come un prode, come un guerriero eccita il suo ardore; grida, lancia urla di guerra, si mostra forte contro i suoi nemici.
14 ೧೪ ನಾನು ಬಹುಕಾಲದಿಂದ ಸುಮ್ಮನೆ ಮೌನವಾಗಿ ನನ್ನನ್ನು ಬಿಗಿ ಹಿಡಿದಿದ್ದೆನು. ಈಗ ಹೆರುವವಳಂತೆ ಕೂಗುವೆನು. ನಿಟ್ಟುಸಿರಿನೊಡನೆ ಏದುವೆನು.
Per molto tempo, ho taciuto, ho fatto silenzio, mi sono contenuto; ora griderò come una partoriente, mi affannerò e sbufferò insieme.
15 ೧೫ ಬೆಟ್ಟಗುಡ್ಡಗಳನ್ನು ನಾಶಪಡಿಸಿ ಅಲ್ಲಿಯ ಮೇವನ್ನೆಲ್ಲಾ ಒಣಗಿಸಿ, ನದಿಗಳನ್ನು ಒಣ ದಿಣ್ಣೆಮಾಡಿ ಕೆರೆಗಳನ್ನು ಬತ್ತಿಸುವೆನು.
Renderò aridi monti e colli, farò seccare tutta la loro erba; trasformerò i fiumi in stagni e gli stagni farò inaridire.
16 ೧೬ ಕುರುಡರನ್ನು ತಿಳಿಯದ ಮಾರ್ಗದಲ್ಲಿ ಬರಮಾಡುವೆನು, ಅವರಿಗೆ ಗೊತ್ತಿಲ್ಲದ ದಾರಿಗಳಲ್ಲಿ ಅವರನ್ನು ನಡೆಸುವೆನು, ಅವರೆದುರಿಗೆ ಕತ್ತಲನ್ನು ಬೆಳಕುಮಾಡಿ, ಡೊಂಕನ್ನು ಸರಿಪಡಿಸುವೆನು. ಈ ಕಾರ್ಯಗಳನ್ನು ಬಿಡದೆ ಮಾಡುವೆನು. ನಾನು ಅವರನ್ನು ಕೈ ಬಿಡುವುದಿಲ್ಲ.
Farò camminare i ciechi per vie che non conoscono, li guiderò per sentieri sconosciuti; trasformerò davanti a loro le tenebre in luce, i luoghi aspri in pianura. Tali cose io ho fatto e non cesserò di farle.
17 ೧೭ ಕೆತ್ತಿದ ವಿಗ್ರಹಗಳಲ್ಲಿ ಭರವಸವಿಟ್ಟು, “ನೀವೇ ನಮ್ಮ ದೇವರುಗಳು” ಎಂದು ಎರಕದ ಬೊಂಬೆಗಳಿಗೆ ಅರಿಕೆಮಾಡುವವರು ಹಿಂದೆ ಬಿದ್ದು ಕೇವಲ ಅವಮಾನಕ್ಕೆ ಈಡಾಗುವರು.
Retrocedono pieni di vergogna quanti sperano in un idolo, quanti dicono alle statue: «Voi siete i nostri dei».
18 ೧೮ ಕಿವುಡರೇ, ಕೇಳಿರಿ! ಕುರುಡರೇ, ನೀವು ಕಣ್ಣಿಟ್ಟು ನೋಡಿರಿ!
Sordi, ascoltate, ciechi, volgete lo sguardo per vedere.
19 ೧೯ ನನ್ನ ಸೇವಕನ ಹೊರತು ಯಾರು ಕುರುಡರು? ನಾನು ಕಳುಹಿಸುವ ದೂತನಂತೆ ಯಾರು ಕಿವುಡರು? ನನ್ನ ಭಕ್ತನ ಹಾಗೆ ಯಾರು ಕುರುಡರು? ಯೆಹೋವನ ಸೇವಕನ ಪ್ರಕಾರ ಅಂಧರು ಯಾರು?
Chi è cieco, se non il mio servo? Chi è sordo come colui al quale io mandavo araldi? Chi è cieco come il mio privilegiato? Chi è sordo come il servo del Signore?
20 ೨೦ ನೀನು ಬಹು ವಿಷಯಗಳನ್ನು ಕಂಡಿದ್ದರೂ ನಿನಗೆ ಗಮನವಿಲ್ಲ, ಇವನ ಕಿವಿ ತೆರೆದಿದ್ದರೂ ಕೇಳನು.
Hai visto molte cose, ma senza farvi attenzione, hai aperto gli orecchi, ma senza sentire.
21 ೨೧ ಯೆಹೋವನು ಧರ್ಮಸ್ವರೂಪನಾಗಿರುವುದರಿಂದ ಧರ್ಮೋಪದೇಶವನ್ನು ಘನಪಡಿಸಿ ಮಹತ್ತಿಗೆ ತರಬೇಕೆಂದು ಇಷ್ಟಪಟ್ಟನು.
Il Signore si compiacque, per amore della sua giustizia, di dare una legge grande e gloriosa.
22 ೨೨ ಈ ಜನರೇ ಕೊಳ್ಳೆಗೆ ಈಡಾಗಿ ಸೂರೆಹೋಗಿದ್ದಾರೆ. ಎಲ್ಲರೂ ಹಳ್ಳಕೊಳ್ಳಗಳಿಗೆ ಸಿಕ್ಕಿಬಿದ್ದಿದ್ದಾರೆ, ಸೆರೆಮನೆಗಳಲ್ಲಿ ಮುಚ್ಚಲ್ಪಟ್ಟಿದ್ದಾರೆ. ಅವರು ಸುಲಿಗೆಯಾಗಿದ್ದರೂ ಯಾರೂ ಬಿಡಿಸರು, ಸೂರೆಯಾಗಿದ್ದರೂ ಯಾರೂ ಹಿಂದಕ್ಕೆ ಬಿಡು ಎನ್ನುವುದಿಲ್ಲ.
Eppure questo è un popolo saccheggiato e spogliato; sono tutti presi con il laccio nelle caverne, sono rinchiusi in prigioni. Furono saccheggiati e nessuno li liberava; furono spogliati, e nessuno diceva: «Restituisci».
23 ೨೩ ನಿಮ್ಮಲ್ಲಿ ಯಾರು ಈ ಮಾತಿಗೆ ಕಿವಿಗೊಡುವರು? ಯಾರು ಇನ್ನು ಮುಂದೆ ಆಲಿಸಿ ಕೇಳುವರು?
Chi fra di voi porge l'orecchio a ciò, vi fa attenzione e ascolta per il futuro?
24 ೨೪ ಯಾಕೋಬನ್ನು ಸುಲಿಗೆಗೂ, ಇಸ್ರಾಯೇಲನ್ನು ಕೊಳ್ಳೆಗೂ ಕೊಟ್ಟವನು ಯಾರು? ಯಾರ ವಿರುದ್ಧವಾಗಿ ನಾವು ದ್ರೋಹಮಾಡಿದೆವೋ ಆ ಯೆಹೋವನಲ್ಲವೆ. ಅವರು ಆತನ ಮಾರ್ಗದಲ್ಲಿ ನಡೆಯಲಿಲ್ಲ. ಆತನ ಉಪದೇಶವನ್ನು ಕೇಳಲಿಲ್ಲ
Chi abbandonò Giacobbe al saccheggio, Israele ai predoni? Non è stato forse il Signore contro cui peccarono, per le cui vie non vollero camminare, la cui legge non osservarono?
25 ೨೫ ಆದುದರಿಂದ ಆತನು ಅವರ ಮೇಲೆ ತನ್ನ ರೋಷಾಗ್ನಿಯನ್ನೂ, ಯುದ್ಧದ ರೌದ್ರವನ್ನೂ ಸುರಿಸಿದನು. ಎಲ್ಲಾ ಕಡೆಯಿಂದಲೂ ಅವರಿಗೆ ಉರಿಹೊತ್ತಿಕೊಂಡಿತು, ಆದರೆ ಅವರು ತಿಳಿಯಲಿಲ್ಲ. ದಹಿಸಿತು, ಆದರೆ ಅವರು ಲಕ್ಷ್ಯಕ್ಕೆ ತಂದುಕೊಳ್ಳಲಿಲ್ಲ.
Egli, perciò, ha riversato su di esso la sua ira ardente e la violenza della guerra. L'ira divina lo ha avvolto nelle sue fiamme senza che egli se ne accorgesse, lo ha bruciato, senza che vi facesse attenzione.

< ಯೆಶಾಯನು 42 >