< ಯೆಶಾಯನು 47 >

1 ಯುವತಿಯೇ, ಬಾಬೆಲ್ ಪುರಿಯೇ, ಕೆಳಕ್ಕಿಳಿದು ಧೂಳಿನಲ್ಲಿ ಕುಳಿತುಕೋ, ಕಸ್ದೀಯರ ಯುವತಿಯೇ, ಸಿಂಹಾಸನರಹಿತಳಾಗಿ ನೆಲದ ಮೇಲೆ ಕುಳಿತುಕೋ! ನಿನ್ನನ್ನು ಇನ್ನು ಕೋಮಲೆ ಮತ್ತು ಸುಕುಮಾರಿ ಎಂದು ಕರೆಯುವುದಿಲ್ಲ.
רְדִי ׀ וּשְׁבִי עַל־עָפָר בְּתוּלַת בַּת־בָּבֶל שְׁבִי־לָאָרֶץ אֵין־כִּסֵּא בַּת־כַּשְׂדִּים כִּי לֹא תוֹסִיפִי יִקְרְאוּ־לָךְ רַכָּה וַעֲנֻגָּֽה׃
2 ಬೀಸುವ ಕಲ್ಲನ್ನು ಹಿಡಿದು ಹಿಟ್ಟನ್ನು ಬೀಸು, ಮುಸುಕನ್ನು ತೆಗೆದುಹಾಕಿ, ಈಜಾಡುವ ಬಟ್ಟೆಯ ನೆರಿಗೆಯನ್ನು ಹರಿದುಬಿಟ್ಟು, ಬೆತ್ತಲಾಗಿ ನದಿಗಳನ್ನು ಹಾದುಹೋಗು.
קְחִי רֵחַיִם וְטַחֲנִי קָמַח גַּלִּי צַמָּתֵךְ חֶשְׂפִּי־שֹׁבֶל גַּלִּי־שׁוֹק עִבְרִי נְהָרֽוֹת׃
3 ನಿನ್ನ ಬೆತ್ತಲೆತನವು ಬಯಲಿಗೆ ಬಂದು, ನೀನು ನಾಚಿಕೆಗೀಡಾಗುವಿ, ನಾನು ಯಾರನ್ನೂ ಕರುಣಿಸದೆ ಮುಯ್ಯಿತೀರಿಸುವೆನು.
תִּגָּל עֶרְוָתֵךְ גַּם תֵּרָאֶה חֶרְפָּתֵךְ נָקָם אֶקָּח וְלֹא אֶפְגַּע אָדָֽם׃
4 ನಮ್ಮ ವಿಮೋಚಕನಿಗೆ ಸೇನಾಧೀಶ್ವರನಾದ ಯೆಹೋವನೆಂಬ ನಾಮಧೇಯ, ಆತನೇ ಇಸ್ರಾಯೇಲಿನ ಪರಿಶುದ್ಧನು!
גֹּאֲלֵנוּ יְהוָה צְבָאוֹת שְׁמוֹ קְדוֹשׁ יִשְׂרָאֵֽל׃
5 ಕಸ್ದೀಯರ ಯುವತಿಯೇ (ನಗರವೇ), ಮೌನವಾಗಿ ಕುಳಿತುಕೋ, ಕತ್ತಲೊಳಗೆ ಹೋಗು. ಏಕೆಂದರೆ ನೀನು ಇನ್ನು ರಾಜ್ಯಗಳ ರಾಣಿ ಎಂದು ಕರೆಯಲ್ಪಡುವುದಿಲ್ಲ.
שְׁבִי דוּמָם וּבֹאִי בַחֹשֶׁךְ בַּת־כַּשְׂדִּים כִּי לֹא תוֹסִיפִי יִקְרְאוּ־לָךְ גְּבֶרֶת מַמְלָכֽוֹת׃
6 ನಾನು ನನ್ನ ಜನರ ಮೇಲೆ ರೋಷಗೊಂಡು, ನನ್ನ ಸ್ವತ್ತನ್ನು ಹೊಲೆಗೆಡಿಸಿದೆನು. ಅವರನ್ನು ನಿನ್ನ ಕೈವಶ ಮಾಡಳು, ನೀನು ಅವರನ್ನು ಕರುಣಿಸದೆ ಬಹುಭಾರವಾದ ನೊಗವನ್ನು ಹೊರಿಸಿದಿ.
קָצַפְתִּי עַל־עַמִּי חִלַּלְתִּי נַחֲלָתִי וָאֶתְּנֵם בְּיָדֵךְ לֹא־שַׂמְתְּ לָהֶם רַחֲמִים עַל־זָקֵן הִכְבַּדְתְּ עֻלֵּךְ מְאֹֽד׃
7 “ನಾನು ಶಾಶ್ವತವಾದ ರಾಣಿ” ಎಂದು ನೀನು ಅಂದುಕೊಂಡು ಅವರ ಹಿಂಸೆಗಳನ್ನು ಮನಸ್ಸಿಗೆ ತಾರದೆ, ಅವುಗಳಿಂದ ನಿನಗಾಗುವ ಪರಿಣಾಮವನ್ನು ನೆನಸಿಕೊಳ್ಳಲಿಲ್ಲ.
וַתֹּאמְרִי לְעוֹלָם אֶהְיֶה גְבָרֶת עַד לֹא־שַׂמְתְּ אֵלֶּה עַל־לִבֵּךְ לֹא זָכַרְתְּ אַחֲרִיתָֽהּ׃
8 “ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ, ನಾನು ವಿಧವೆಯಾಗಿ ಕುಳಿತುಕೊಳ್ಳುವುದಿಲ್ಲ, ಪುತ್ರಶೋಕವನ್ನು ಅನುಭವಿಸುವುದಿಲ್ಲ” ಎಂದು ಅಂದುಕೊಳ್ಳುವವಳೇ, ಭೋಗಾಸಕ್ತಳೇ, ನೆಮ್ಮದಿಯಾಗಿ ನೆಲೆಗೊಂಡಿರುವವಳೇ, ಈಗ ಇದನ್ನು ಕೇಳು.
וְעַתָּה שִׁמְעִי־זֹאת עֲדִינָה הַיּוֹשֶׁבֶת לָבֶטַח הָאֹֽמְרָה בִּלְבָבָהּ אֲנִי וְאַפְסִי עוֹד לֹא אֵשֵׁב אַלְמָנָה וְלֹא אֵדַע שְׁכֽוֹל׃
9 ಒಂದೇ ದಿನದೊಳಗೆ, ಒಂದು ಕ್ಷಣದಲ್ಲಿ, ಪುತ್ರಶೋಕ ಮತ್ತು ವಿಧವೆಯ ಸ್ಥಿತಿ ಇವೆರಡೂ ನಿನಗುಂಟಾಗುವವು. ನೀನು ಎಷ್ಟು ಮಾಟಮಾಡಿದರೂ, ಎಷ್ಟೇ ಮಂತ್ರತಂತ್ರಗಳನ್ನು ನಡೆಸಿದರೂ ಇವುಗಳನ್ನು ಸಂಪೂರ್ಣವಾಗಿ ಅನುಭವಿಸುವಿ.
וְתָבֹאנָה לָּךְ שְׁתֵּי־אֵלֶּה רֶגַע בְּיוֹם אֶחָד שְׁכוֹל וְאַלְמֹן כְּתֻמָּם בָּאוּ עָלַיִךְ בְּרֹב כְּשָׁפַיִךְ בְּעָצְמַת חֲבָרַיִךְ מְאֹֽד׃
10 ೧೦ ನೀನು ನಿನ್ನ ಕೆಟ್ಟತನದಲ್ಲಿ ನಂಬಿಕೆಯಿಟ್ಟು, “ನನ್ನನ್ನು ಯಾರೂ ನೋಡರು?” ಎಂದುಕೊಂಡಿದ್ದಿ. ನನ್ನ ಜ್ಞಾನವಿವೇಕಗಳು ನಿನ್ನನ್ನು ಸೊಟ್ಟಗೆ ತಿರುಗಿಸಿದ್ದರಿಂದ, “ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ” ಎಂದು ಯೋಚಿಸಿಕೊಂಡಿದ್ದಿ.
וַתִּבְטְחִי בְרָעָתֵךְ אָמַרְתְּ אֵין רֹאָנִי חָכְמָתֵךְ וְדַעְתֵּךְ הִיא שׁוֹבְבָתֶךְ וַתֹּאמְרִי בְלִבֵּךְ אֲנִי וְאַפְסִי עֽוֹד׃
11 ೧೧ ಹೀಗಿರಲು ನೀನು ಮಂತ್ರಿಸಿ ನಿವಾರಿಸಲಾರದ ಕೇಡು ನಿನಗೆ ಸಂಭವಿಸುವುದು, ನೀನು ಪರಿಹರಿಸಲಾಗದ ವಿಪತ್ತು ನಿನ್ನ ಮೇಲೆ ಬೀಳುವುದು. ನೀನು ತಪ್ಪಿಸಿಕೊಳ್ಳಲಾಗದ ನಾಶನವು ನಿನ್ನ ಮೇಲೆ ಪಕ್ಕನೆ ಬರುವುದು.
וּבָא עָלַיִךְ רָעָה לֹא תֵדְעִי שַׁחְרָהּ וְתִפֹּל עָלַיִךְ הֹוָה לֹא תוּכְלִי כַּפְּרָהּ וְתָבֹא עָלַיִךְ פִּתְאֹם שׁוֹאָה לֹא תֵדָֽעִי׃
12 ೧೨ ನೀನು ಬಾಲ್ಯಾರಭ್ಯ ಪ್ರಯಾಸಪಟ್ಟು ಅಭ್ಯಾಸಿಸಿರುವ ನಿನ್ನ ಮಂತ್ರತಂತ್ರಗಳನ್ನೂ, ಲೆಕ್ಕವಿಲ್ಲದ ನಿನ್ನ ಮಾಟಮಂತ್ರಗಳನ್ನೂ ಪ್ರಯೋಗಿಸಿ ಎದ್ದು ನಿಲ್ಲು. ಇದರಿಂದ ಒಂದು ವೇಳೆ ನಿನಗೆ ಪ್ರಯೋಜನವಾದೀತು. ಒಂದು ವೇಳೆ ನಿನ್ನ ಶತ್ರುವಿನಲ್ಲಿ ಭಯ ಹುಟ್ಟೀತು.
עִמְדִי־נָא בַחֲבָרַיִךְ וּבְרֹב כְּשָׁפַיִךְ בַּאֲשֶׁר יָגַעַתְּ מִנְּעוּרָיִךְ אוּלַי תּוּכְלִי הוֹעִיל אוּלַי תַּעֲרֽוֹצִי׃
13 ೧೩ ಮಂತ್ರಾಲೋಚನೆಗಳನ್ನು ಕೇಳಿ ಕೇಳಿ ನಿನಗೆ ಸಾಕಾಯಿತಲ್ಲವೇ. ಖಗೋಳಜ್ಞರು, ಜೋಯಿಸರು, ಪಂಚಾಂಗದವರು ಇವರೆಲ್ಲರೂ, ನಿಂತು ನಿನಗೆ ಬರುವ ವಿಪತ್ತುಗಳಿಂದ ನಿನ್ನನ್ನು ಉದ್ಧರಿಸಲಿ.
נִלְאֵית בְּרֹב עֲצָתָיִךְ יַעַמְדוּ־נָא וְיוֹשִׁיעֻךְ הברו הֹבְרֵי שָׁמַיִם הַֽחֹזִים בַּכּוֹכָבִים מֽוֹדִיעִם לֶחֳדָשִׁים מֵאֲשֶׁר יָבֹאוּ עָלָֽיִךְ׃
14 ೧೪ ಇಗೋ, ಇವರೆಲ್ಲಾ ಕೂಳೆಯಂತಿರುವರು, ಬೆಂಕಿಯು ಅವರನ್ನು ಸುಟ್ಟುಬಿಡುವುದು; ಜ್ಞಾಲೆಯ ರಭಸದಿಂದ ತಮ್ಮನ್ನು ರಕ್ಷಿಸಿಕೊಳ್ಳಲಾರರು; ಅದು ಕಾಯಿಸಿಕೊಳ್ಳುವ ಕೆಂಡವಲ್ಲ, ಮುಂದೆ ಕುಳಿತರೆ ಹಾಯಾಗಿರುವ ಬೆಂಕಿಯೂ ಅಲ್ಲ.
הִנֵּה הָיוּ כְקַשׁ אֵשׁ שְׂרָפָתַם לֹֽא־יַצִּילוּ אֶת־נַפְשָׁם מִיַּד לֶֽהָבָה אֵין־גַּחֶלֶת לַחְמָם אוּר לָשֶׁבֶת נֶגְדּֽוֹ׃
15 ೧೫ ನೀನು ಪ್ರಯಾಸಪಟ್ಟವುಗಳೆಲ್ಲಾ ನಿನಗೆ ಹೀಗಾಗುವವು. ನಿನ್ನ ಬಾಲ್ಯದಿಂದ ನಿನ್ನಲ್ಲಿ ವ್ಯಾಪಾರ ಮಾಡಿದವರೆಲ್ಲರೂ; ಚದರಿ ತಮ್ಮ ತಮ್ಮ ಪ್ರಾಂತ್ಯಕ್ಕೆ ಹೋಗಿಬಿಡುವರು. ನಿನ್ನನ್ನು ರಕ್ಷಿಸಲು ಒಬ್ಬನೂ ಇರುವುದಿಲ್ಲ.
כֵּן הָיוּ־לָךְ אֲשֶׁר יָגָעַתְּ סֹחֲרַיִךְ מִנְּעוּרַיִךְ אִישׁ לְעֶבְרוֹ תָּעוּ אֵין מוֹשִׁיעֵֽךְ׃

< ಯೆಶಾಯನು 47 >