< ಯೆಶಾಯನು 48 >

1 ಇಸ್ರಾಯೇಲೆಂಬ ಹೆಸರಿನವರೂ, ಯೆಹೂದ ವಂಶೋತ್ಪನ್ನರೂ ಆದ ಯಾಕೋಬನ ಮನೆತನದವರೇ, ನೀವು ಯೆಹೋವನ ನಾಮದ ಮೇಲೆ ಆಣೆಯಿಟ್ಟು, ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ, ನಿಜ. ಆದರೆ ಈ ನಿಮ್ಮ ಕಾರ್ಯಗಳು ಸತ್ಯಕ್ಕೂ, ಧರ್ಮಕ್ಕೂ ಅನುಸಾರವಾಗಿಲ್ಲ.
Listen to this, descendants of Jacob, called by the name of Israel, and who come from the lineage of Judah. Listen, you people who swear by the name of the Lord, or who invoke the God of Israel, but not truly or sincerely.
2 ಇವರು ತಮ್ಮನ್ನು ಪರಿಶುದ್ಧ ಪಟ್ಟಣದವರು ಎಂದುಕೊಂಡು, ದೇವರು ಇಸ್ರಾಯೇಲಿನವನೇ ಎಂದು ಆತನ ಮೇಲೆ ಭರವಸವಿಟ್ಟುಕೊಂಡಿರುತ್ತಾರೆ. ಆತನ ಹೆಸರೋ ಸಕಲ ಸೈನ್ಯಗಳ ಸರ್ವಶಕ್ತನಾದ ಯೆಹೋವನು ಎಂಬುದು.
You say you're from the “Holy City,” and claim you're trusting in the God of Israel, whose name is the Lord Almighty.
3 ಯಾಕೋಬನ ಮನೆತನವೇ, ಕೇಳು, ಈವರೆಗೂ ನಡೆದ ಸಂಗತಿಗಳನ್ನು ಪುರಾತನಕಾಲದಲ್ಲಿಯೇ ತಿಳಿಸಿದೆನು. ಹೌದು, ನನ್ನ ಬಾಯಿಂದ ಹೊರಟವು, ನಾನು ಅವುಗಳನ್ನು ಪ್ರಕಟಿಸಿದೆನು. ನಾನು ತಟ್ಟನೆ ನಡೆಸಲು ಅವು ನೆರವೇರಿದವು.
I predicted long ago what was going to happen—I said it and let people know. Then suddenly I decided to act, and it all came true.
4 ಏಕೆಂದರೆ ನೀನು ಹಟವಾದಿ ನಿನ್ನ ಕತ್ತಿನ ನರವು ಕಬ್ಬಿಣ, ನಿನ್ನ ಹಣೆ ತಾಮ್ರ ಎಂದು ನಾನು ತಿಳಿದುಕೊಂಡೆನು.
I know how stubborn you are, with necks as unbending as iron and foreheads as hard as bronze.
5 ಆದುದರಿಂದಲೇ, “ಈ ಕಾರ್ಯಗಳನ್ನು ನನ್ನ ವಿಗ್ರಹವು ನಡೆಸಿದೆ, ನನ್ನ ಕೆತ್ತಿದ ವಿಗ್ರಹ ಮತ್ತು ಎರಕದ ವಿಗ್ರಹ ಇವುಗಳನ್ನು ವಿಧಿಸಿದೆ” ಎಂದು ನೀನು ಹೇಳಿಕೊಳ್ಳದಂತೆ ನಾನು ಪುರಾತನಕಾಲದಲ್ಲಿಯೇ ತಿಳಿಸಿದೆನು. ನಡೆಯುವುದಕ್ಕೆ ಮೊದಲೇ ಪ್ರಕಟಿಸಿದೆನು.
I predicted these things to you long ago, before they happened. I explained them to you so that you couldn't say “My idol did this,” or “My image and my metal god ordered this to happen.”
6 ನಡೆದ ಸಂಗತಿಗಳನ್ನು ನೀನು ಕೇಳಿದಿಯಲ್ಲಾ, ನಡೆದದ್ದನ್ನೆಲ್ಲಾ ನೋಡು, ನಿನ್ನವರೇ ಪ್ರಸಿದ್ಧಿಪಡಿಸಲಿ. ಇಂದಿನಿಂದ ಹೊಸ ಸಂಗತಿಗಳನ್ನು, ನೀನು ತಿಳಿಯದಿದ್ದ ಗುಪ್ತವಿಷಯಗಳನ್ನು ನಿನಗೆ ತಿಳಿಸುತ್ತೇನೆ.
You've heard all I predicted, and seen it happen. Won't you admit it? Now I'm going to tell you new things, secrets you don't know anything about.
7 ಈಗಲೇ ಉಂಟಾಗುತ್ತಿವೆ, ಪುರಾತನಕಾಲದಲ್ಲಿ ಆಗಿಲ್ಲ, “ಮೊದಲೇ ನಾನು ತಿಳಿದುಕೊಂಡಿದ್ದೆನು” ಎಂದು, ನೀನು ಅಂದುಕೊಳ್ಳದ ಹಾಗೆ ಈ ದಿನಕ್ಕೆ ಮೊದಲು ನಾನು ನಿನಗೆ ಕೇಳಗೊಡಿಸಲಿಲ್ಲ.
These are brand-new, not something from the past. Before today you won't have heard anything about them, so you can't say, “Oh yes, I know about that.”
8 ನೀನು ಕೇಳಿಲ್ಲ, ತಿಳಿದೂ ಇಲ್ಲ, ಪುರಾತನಕಾಲದಿಂದ ನಿನ್ನ ಕಿವಿಯು ತೆರೆದೇ ಇಲ್ಲ; ನೀನು ದೊಡ್ಡ ವಂಚಕನೆಂದೂ, ಗರ್ಭದಿಂದಲೇ ದ್ರೋಹಿಯೆಂದು ನಾನು ತಿಳಿದುಕೊಂಡಿದ್ದೇನೆ.
No, you've never heard that, and you've never known that! Nobody's told you about that before! I know how deviously you operate—you're called “rebels from birth”!
9 ನನ್ನ ಹೆಸರು ಕೆಡದಂತೆ ನಿನ್ನ ಮೇಲಣ ಕೋಪವನ್ನು ತಡೆದು, ನನ್ನ ಕೀರ್ತಿಗೆ ಕಳಂಕ ಬಾರದಂತೆ ನಿನ್ನನ್ನು ನಿರ್ಮೂಲಮಾಡದೆ ಸಹಿಸಿಕೊಳ್ಳುವೆನು.
But because of my nature I am delaying my punishment; and because of my reputation, I'm not going to destroy you.
10 ೧೦ ನೋಡು, ನಿನ್ನನ್ನು ಶೋಧಿಸಿದ್ದೇನೆ, ಆದರೆ ಬೆಳ್ಳಿಯಷ್ಟು ಶೋಧಿಸಲಿಲ್ಲ, ಸಂಕಟವೆಂಬ ಪುಟಕ್ಕೆ ಹಾಕಿ ನಿನ್ನನ್ನು ಪರೀಕ್ಷಿಸಿದ್ದೇನೆ.
Look how I've refined you, but not like silver—I chose you in the furnace of trouble.
11 ೧೧ ನನಗಾಗಿ, ನನಗೋಸ್ಕರವೇ, ಇದನ್ನು ಮಾಡುವೆನು. ಏಕೆಂದರೆ ನನ್ನ ಹೆಸರು ಹೇಗೆ ಅಪವಿತ್ರವಾಗುವುದು? ನನ್ನ ಮಹಿಮೆಯನ್ನು ಮತ್ತೊಬ್ಬನಿಗೆ ಸಲ್ಲಗೊಡಿಸೆನು.
The reason I'm doing this is because of who I am, yes, because of my very nature. I won't let my reputation be damaged—I won't let anyone else have it.
12 ೧೨ ಯಾಕೋಬೇ, ನಾನು ಕರೆದ ಇಸ್ರಾಯೇಲೇ, ನನ್ನ ಕಡೆಗೆ ಕಿವಿಗೊಡು. ನಾನೇ ಪರಮಾತ್ಮನು, ನಾನೇ ಆದಿಯೂ, ನಾನೇ ಅಂತ್ಯ
Listen to me, Jacon, and Israel, the one I called. Only I am God. I am the first, and I am the last.
13 ೧೩ ನನ್ನ ಕೈ ಭೂಮಿಗೆ ಅಸ್ತಿವಾರವನ್ನು ಹಾಕಿತು, ನನ್ನ ಬಲಗೈ ಆಕಾಶವನ್ನು ಹರಡಿತು, ನಾನು ಕರೆದ ಕೂಡಲೆ ಅವೆರಡೂ ಒಟ್ಟಾಗಿ ನಿಲ್ಲುವವು.
I laid the foundations of the earth with my own hands; I personally spread out the heavens. When I call the stars, they all take their positions.
14 ೧೪ ನೀವೆಲ್ಲರು ಕೂಡಿಕೊಂಡು ಕೇಳಿರಿ! ಅವುಗಳ ಮಧ್ಯದಲ್ಲಿ ಈ ಸಂಗತಿಗಳನ್ನು ಪ್ರಕಟಿಸಿದವನು ಯಾರು? ಯೆಹೋವನ ಪ್ರೀತಿಪಾತ್ರನು, ಬಾಬೆಲಿನಲ್ಲಿ ಆತನ ಇಷ್ಟವನ್ನು ನೆರವೇರಿಸುವನು. ಕಸ್ದೀಯರ ಮೇಲೆ ಕೈಮಾಡುವನು.
Everyone gather round and listen. Which of your “gods” told you anything like this? The one the Lord loves will carry out the Lord's wishes against Babylon—he will attack the Babylonians.
15 ೧೫ ನಾನೇ, ನಾನೇ ಬಾಯಿಬಿಟ್ಟು ಅವನನ್ನು ಕರೆದು ಬರಮಾಡಿದ್ದೇನೆ. ಅವನ ಮಾರ್ಗವು ಸಾರ್ಥಕವಾಗುವುದು.
I myself have spoken. I have called him to do this, and he will be successful in what he does.
16 ೧೬ ನನ್ನ ಬಳಿಗೆ ಬಂದು ಇದನ್ನು ಕೇಳಿರಿ, ಆದಿಯಿಂದಲೂ ನಾನು ಗುಟ್ಟಾಗಿ ಮಾತನಾಡಲಿಲ್ಲ, ಭೂಮಿಯು ಉಂಟಾದಂದಿನಿಂದ ನಾನು ಅಲ್ಲಿ ಇದ್ದೇನೆ. ಈಗ ಯೆಹೋವನೆಂಬ ದೇವರು ತನ್ನ ಆತ್ಮದೊಡನೆ ನನ್ನನ್ನು ಕಳುಹಿಸಿದ್ದಾನೆ.
Come close to me, and listen to this. From the very beginning I haven't spoken in secret; I am always there right when it happens. Now the Lord God and his Spirit has sent me to tell you this:
17 ೧೭ ನಿನ್ನ ವಿಮೋಚಕನೂ, ಇಸ್ರಾಯೇಲರ ಸದಮಲಸ್ವಾಮಿಯೂ ಆದ ಯೆಹೋವನು ಹೀಗೆನ್ನುತ್ತಾನೆ, “ನಾನೇ ನಿನ್ನ ದೇವರಾದ ಯೆಹೋವನು, ನಿನಗೆ ವೃದ್ಧಿಮಾರ್ಗವನ್ನು ಬೋಧಿಸಿ, ನೀನು ನಡೆಯಬೇಕಾದ ದಾರಿಯಲ್ಲಿ ನಿನ್ನನ್ನು ನಡೆಸುವೆನು.
This is what the Lord says, your Redeemer, the Holy One of Israel, I am the Lord your God. I am the one who teaches you what is good for you, who leads you along the way you should go.
18 ೧೮ ನೀನು ನನ್ನ ಆಜ್ಞೆಗಳನ್ನು ಕೇಳಿದ್ದರೆ ಎಷ್ಟೋ ಚೆನ್ನಾಗಿತ್ತು! ನಿನ್ನ ಸುಖವು ದೊಡ್ಡ ನದಿಯಂತೆಯೂ, ನಿನ್ನ ಕ್ಷೇಮವು ಸಮುದ್ರದ ಅಲೆಗಳ ಹಾಗೂ ಇರುತ್ತಿದ್ದವು.
If you had only listened carefully to what I told you! Then your blessings would have flowed like a river, and goodness would have washed over you like the waves of the sea.
19 ೧೯ ನಿನ್ನ ಸಂತತಿಯವರು ಮರಳಿನೋಪಾದಿಯಲ್ಲಿಯೂ, ನಿನ್ನ ಹೊಟ್ಟೆಯಲ್ಲಿ ಹುಟ್ಟಿದವರು ಉಸುಬಿನ ಅಣುರೇಣುಗಳಂತೆ ಅಸಂಖ್ಯಾತರಾಗುತ್ತಿದ್ದರು. ಅವರ ಹೆಸರು ನನ್ನ ಮುಂದೆ ನಿರ್ಮೂಲವಾಗಿ ಹಾಳಾಗುತ್ತಿರಲಿಲ್ಲ.
Your children, your descendants, would have been like all those grains of sand. They wouldn't have had to be destroyed, wiped out before me.
20 ೨೦ ಬಾಬೆಲಿನಿಂದ ಹೊರಡಿರಿ! ಕಸ್ದೀಯರ ಕಡೆಯಿಂದ ಹಾರಿಹೋಗಿರಿ! ಹರ್ಷಧ್ವನಿಯಿಂದ ಇದನ್ನು ತಿಳಿಸಿರಿ, ಪ್ರಕಟಿಸಿರಿ. ಭೂಮಿಯ ಕಟ್ಟಕಡೆಯವರೆಗೂ ಪ್ರಚಾರಪಡಿಸಿರಿ. ‘ಯೆಹೋವನು ತನ್ನ ಸೇವಕನಾದ ಯಾಕೋಬನ್ನು ವಿಮೋಚಿಸಿದ್ದಾನೆ’” ಎಂದು ಹೇಳಿರಿ.
Leave Babylon! Run away from Babylonia with happy shouts! Let everyone know, telling the whole earth, “The Lord has redeemed his servant Jacob!”
21 ೨೧ ಆತನು ಅವರನ್ನು ಮರುಭೂಮಿಯಲ್ಲಿ ನಡೆಸಿದಾಗ ಅವರು ದಾಹಗೊಳ್ಳಲಿಲ್ಲ; ಅವರಿಗಾಗಿ ನೀರನ್ನು ಕಲ್ಲಿನೊಳಗಿಂದ ಹರಿಸಿದನು; ಆತನು ಬಂಡೆಯನ್ನು ಸೀಳಲು ಜಲಪಾತವಾಯಿತು.
They weren't thirsty when he led them through the desert—he made water come out of the rock for them. He split the rock open and water poured out.
22 ೨೨ “ದುಷ್ಟರಿಗೆ ಸಮಾಧಾನವೇ ಇಲ್ಲ” ಎಂದು ಯೆಹೋವನು ನುಡಿಯುತ್ತಾನೆ.
The wicked have no peace, says the Lord.

< ಯೆಶಾಯನು 48 >