< ಯೆಶಾಯನು 59 >

1 ಇಗೋ, ಯೆಹೋವನ ಹಸ್ತವು ರಕ್ಷಿಸಲಾರದಂತಹ ಮೋಟುಗೈಯಲ್ಲ; ಆತನ ಕಿವಿಯು ಕೇಳಲಾರದ ಹಾಗೆ ಕಿವುಡಲ್ಲ.
Gle, nije okraèala ruka Gospodnja da ne može spasti, niti je otežalo uho njegovo da ne može èuti.
2 ಆದರೆ ನಿಮ್ಮ ಅಪರಾಧಗಳೇ ನಿಮ್ಮ ದೇವರಿಂದ ನಿಮ್ಮನ್ನು ಅಗಲಿಸುತ್ತಾ ಬಂದಿವೆ; ನಿಮ್ಮ ಪಾಪಗಳೇ ಆತನು ಕೇಳಲಾರದಂತೆ ಆತನ ಮುಖಕ್ಕೆ ಅಡ್ಡವಾಗಿವೆ.
Nego bezakonja vaša rastaviše vas s Bogom vašim, i grijesi vaši zakloniše lice njegovo od vas, da ne èuje.
3 ನಿಮ್ಮ ಕೈಗಳು ರಕ್ತದಿಂದ ಹೊಲಸಾಗಿವೆ, ನಿಮ್ಮ ಬೆರಳುಗಳು ಅಪರಾಧದಿಂದ ಅಶುದ್ಧವಾಗಿವೆ; ನಿಮ್ಮ ತುಟಿಗಳು ಸುಳ್ಳಾಡುತ್ತವೆ, ನಿಮ್ಮ ನಾಲಿಗೆಯು ಕೆಡುಕನ್ನು ನುಡಿಯುತ್ತದೆ.
Jer su ruke vaše oskvrnjene krvlju i prsti vaši bezakonjem; usne vaše govore laž i jezik vaš izrièe opaèinu.
4 ಇವರಲ್ಲಿ ಯಾರೂ ನ್ಯಾಯಸ್ಥಾನಕ್ಕೆ ನ್ಯಾಯವಾಗಿ ಹೋಗುವುದಿಲ್ಲ, ಯಾರೂ ಸತ್ಯವಾಗಿ ವಾದಿಸುವುದಿಲ್ಲ; ಇವರು ಶೂನ್ಯವಾಗಿರುವುದನ್ನು ನಂಬಿಕೊಂಡು ಸುಳ್ಳನ್ನಾಡುತ್ತಾರೆ; ಹಿಂಸೆಯನ್ನು ಗರ್ಭಧರಿಸಿ ಶ್ರಮೆಯನ್ನು ಹೆರುತ್ತಾರೆ.
Nema nikoga da vièe za pravdu, niti ima koga da se pre za istinu; uzdaju se u ništavilo, i govore laž; zaèinju nevolju, i raðaju muku.
5 ಹಾವಿನಂತೆ ಕೇಡಿನ ಮೊಟ್ಟೆಗಳನ್ನು ಮರಿಮಾಡುತ್ತಾರೆ, ಜೇಡರ ಹುಳದಂತೆ ಬಲೆಯನ್ನು ನೇಯುತ್ತಾರೆ; ಆ ಮೊಟ್ಟೆಗಳನ್ನು ತಿನ್ನುವವನಿಗೆ ಮರಣ ಉಂಟಾಗುವುದು, ಅದನ್ನು ಒಡೆದುಬಿಡುವುದರಿಂದ ವಿಷದ ಮರಿ ಹೊರಡುವುದು.
Nose jaja aspidina i tkaju pauèinu; ko pojede jaje njihovo umre, i ako koje razbije, ižljeze guja.
6 ಇವರ ಬಲೆಯ ದಾರವು ಬಟ್ಟೆಯಾಗದು, ಇವರು ನೇಯ್ದದ್ದು ಹೊದಿಕೆಯಾಗದು; ಇವರ ಕಾರ್ಯಗಳು ಅಧರ್ಮಕಾರ್ಯಗಳು, ಇವರ ಕೈಯಲ್ಲಿ ಬಲಾತ್ಕಾರವೇ ತುಂಬಿದೆ.
Platno njihovo nije za haljine, niti æe se oni odjesti svojim poslom; posao je njihov bezakonje i u rukama je njihovijem nasilje.
7 ಇವರ ಕಾಲುಗಳು ಕೇಡನ್ನು ಹಿಂಬಾಲಿಸಿ ಓಡುತ್ತವೆ, ಇವರು ನಿರಪರಾಧಿಯ ರಕ್ತವನ್ನು ಸುರಿಸಲು ಆತುರಪಡುತ್ತಾರೆ, ಇವರ ಯೋಚನೆಗಳು ಅಧರ್ಮದ ಯೋಚನೆಗಳೇ, ಇವರು ಹೋದ ದಾರಿಗಳಲ್ಲಿ ನಷ್ಟವೂ, ನಾಶನವೂ ಉಂಟಾಗುತ್ತವೆ;
Noge im trèe na zlo i brze su na proljevanje krvi prave; misli su njihove bezakonje; na putovima je njihovijem pustoš i rasap.
8 ಇವರು ಸಮಾಧಾನದ ಮಾರ್ಗವನ್ನೇ ಅರಿಯರು, ಇವರ ಹಾದಿಗಳಲ್ಲಿ ಯಾವ ನ್ಯಾಯವೂ ಇಲ್ಲ, ತಮ್ಮ ಮಾರ್ಗಗಳನ್ನು ಡೊಂಕು ಮಾಡಿಕೊಂಡಿದ್ದಾರೆ, ಅವುಗಳಲ್ಲಿ ನಡೆಯುವವರು ಸಮಾಧಾನವನ್ನು ಅರಿಯರು.
Puta mirnoga ne znaju, i na putovima njihovijem nema pravde; naèinili su sebi krive staze; ko god ide po njima, ne zna za mir.
9 ಆದಕಾರಣ ಯೆಹೋವನ ನ್ಯಾಯನಿರ್ಣಯವು ನಮಗೆ ದೂರವಾಗಿದೆ. ಆತನ ರಕ್ಷಣಾಧರ್ಮದ ಕಾರ್ಯವು ನಮಗೆ ಲಭಿಸುವುದಿಲ್ಲ; ಬೆಳಕನ್ನು ಎದುರುನೋಡುತ್ತಿರುವ ನಮ್ಮನ್ನು ಕತ್ತಲೆಯೇ ಆವರಿಸಿದೆ, ಜ್ಯೋತಿಯನ್ನು ನಿರೀಕ್ಷಿಸುತ್ತಿರುವ ನಾವು ಅಂಧಕಾರದಲ್ಲೇ ನಡೆಯುತ್ತೇವೆ.
Zato je sud daleko od nas, i pravda ne dolazi do nas; èekamo vidjelo, a ono, eto mrak; svjetlost, a ono hodimo po tami.
10 ೧೦ ಕುರುಡರಂತೆ ಗೋಡೆಯನ್ನು ತಡವರಿಸಿ ನಡೆಯುತ್ತೇವೆ, ಹೌದು, ಕಣ್ಣಿಲ್ಲದವರ ಹಾಗೆ ತಡಕಾಡುತ್ತೇವೆ, ಮಧ್ಯಾಹ್ನದಲ್ಲಿ ಸಂಜೆಯಂತೆ ಎಡವುತ್ತೇವೆ, ಪುಷ್ಟರ ನಡುವೆ ಸತ್ತವರ ಹಾಗಿದ್ದೇವೆ.
Pipamo kao slijepci zid, kao oni koji nemaju oèiju pipamo; spotièemo se u podne kao u sumraèje; u obilju smo kao mrtvi.
11 ೧೧ ನಾವೆಲ್ಲರೂ ಕರಡಿಗಳಂತೆ ಗುರುಗುಟ್ಟುತ್ತೇವೆ, ಪಾರಿವಾಳಗಳಂತೆ ಮುಲುಗುತ್ತಲೇ ಇದ್ದೇವೆ; ನಾವು ಯೆಹೋವನ ನ್ಯಾಯನಿರ್ಣಯವನ್ನು ಎದುರುನೋಡಿದರೂ ಅದು ನಮಗೆ ಸಿಕ್ಕದು, ಆತನ ರಕ್ಷಣಕಾರ್ಯವನ್ನು ನಿರೀಕ್ಷಿಸಿದರೂ ಅದು ನಮಗೆ ದೂರವಾಗಿರುವುದು.
Rièemo svikoliki kao medvjedi, i jednako uèemo kao golubice; èekamo sud, a njega nema, spasenje, a ono je daleko od nas.
12 ೧೨ ಏಕೆಂದರೆ ನಮ್ಮ ತಪ್ಪುಗಳು ನಿನ್ನ ದೃಷ್ಟಿಗೆ ಹೆಚ್ಚಾಗಿ ಬಿದ್ದಿವೆ, ನಮ್ಮ ಪಾಪಗಳು ನಮ್ಮ ವಿರುದ್ಧವಾಗಿ ಸಾಕ್ಷಿಕೊಡುತ್ತವೆ; ನಮ್ಮ ತಪ್ಪುಗಳು ನಮ್ಮ ಸಂಗಡಲೇ ಇವೆ, ನಮ್ಮ ಅಪರಾಧಗಳನ್ನು ನಾವೇ ಬಲ್ಲೆವು.
Jer se prijestupi naši umnožiše pred tobom i grijesi naši svjedoèe na nas; jer su prijestupi naši kod nas i bezakonja svoja znamo,
13 ೧೩ ಹೌದು, ಯೆಹೋವನಿಗೆ ತಪ್ಪಿ ನಡೆದು ಆತನನ್ನು ಅಲ್ಲಗಳೆದಿದ್ದೇವೆ, ನಮ್ಮ ದೇವರನ್ನು ಹಿಂಬಾಲಿಸುವುದನ್ನು ಬಿಟ್ಟು ಅವನಿಂದ ದೂರವಾಗಿದ್ದೇವೆ. ಅನ್ಯಾಯವನ್ನೂ ದ್ರೋಹವನ್ನೂ ನುಡಿದಿದ್ದೇವೆ, ಹೃದಯಪೂರ್ವಕವಾಗಿ ಸುಳ್ಳುಮಾತುಗಳನ್ನು ಕಲ್ಪಿಸಿ ಆಡಿದ್ದೇವೆ.
Da nevjeru uèinismo i slagasmo Gospodu, i otstupismo od Boga svojega, govorismo o nasilju i odmetu, da sastavljasmo i iznosismo iz srca rijeèi lažne.
14 ೧೪ ನ್ಯಾಯವು ಹಿಂದಕ್ಕೆ ತಳ್ಳಲ್ಪಟ್ಟಿದೆ, ಧರ್ಮವು ದೂರದಲ್ಲಿ ನಿಂತಿದೆ, ಸತ್ಯವು ಚಾವಡಿಯಲ್ಲಿ ಬಿದ್ದುಹೋಗಿದೆ, ಯಥಾರ್ಥತ್ವವು ಪ್ರವೇಶಿಸಲಾರದು.
Zato sud otstupi natrag, i pravda stoji daleko; jer istina pade na ulici i pravda ne može da proðe.
15 ೧೫ ಸತ್ಯವು ಇಲ್ಲವೇ ಇಲ್ಲ, ಕೇಡನ್ನು ಬಿಟ್ಟವನು ಸೂರೆಯಾಗುತ್ತಾನೆ.
I istine je nestalo, i ko se uklanja oda zla, postaje plijen. To vidje Gospod, i ne bi mu milo što nema suda.
16 ೧೬ ಯೆಹೋವನು ಇವುಗಳನ್ನು ನೋಡಿ ನ್ಯಾಯವಿಲ್ಲವಲ್ಲಾ ಎಂದು ವ್ಯಸನಗೊಂಡನು; ಉದ್ಧಾರಕನಾದ ಯಾವ ಪುರುಷನೂ ಇಲ್ಲವೆಂದು ಕಂಡು ಸ್ತಬ್ಧನಾದನು; ಆಗ ಆತನ ಸ್ವಹಸ್ತವೇ ಆತನಿಗೆ ರಕ್ಷಣಾ ಸಾಧನವಾಯಿತು, ಆತನ ಧರ್ಮವೇ ಆತನಿಗೆ ಆಧಾರವಾಯಿತು.
I vidje gdje nema èovjeka, i zaèudi se što nema posrednika; zato uèini mu spasenje mišica njegova, i pravda njegova poduprije ga.
17 ೧೭ ಅವನು ನೀತಿಯನ್ನು ವಜ್ರಕವಚವನ್ನಾಗಿ ಹಾಕಿಕೊಂಡು, ರಕ್ಷಣೆಯೆಂಬ ಶಿರಸ್ತ್ರಾಣವನ್ನು ಧರಿಸಿಕೊಂಡನು; ರೋಷವೆಂಬ ವಸ್ತ್ರವನ್ನು ಉಡುಪುಮಾಡಿಕೊಂಡು, ಸೇಡನ್ನು ನಿಲುವಂಗಿಯನ್ನಾಗಿ ಹಾಕಿಕೊಂಡನು.
Jer se obuèe u pravdu kao u oklop, i šljem spasenja metnu na glavu; odjede se osvetom kao odijelom, i ogrte se revnošæu kao plaštem.
18 ೧೮ ತನ್ನ ವಿರೋಧಿಗಳಲ್ಲಿಟ್ಟ ಕ್ರೋಧವನ್ನು ಈಡೇರಿಸಿ, ತನ್ನ ಶತ್ರುಗಳಿಗೆ ದಂಡನೆಯನ್ನು ವಿಧಿಸಿ, ಅವರವರ ಕೃತ್ಯಗಳಿಗೆ ತಕ್ಕಂತೆ ಮುಯ್ಯಿತೀರಿಸುವನು; ಕರಾವಳಿಯಲ್ಲಿರುವವರಿಗೂ ತಕ್ಕ ಪ್ರತಿಫಲವನ್ನು ನೀಡುವನು.
Po djelima, po djelima da vrati gnjev protivnicima svojim, platu neprijateljima svojim, ostrvima da plati.
19 ೧೯ ಹೀಗಿರಲು ಪಶ್ಚಿಮದವರು ಯೆಹೋವನ ನಾಮಕ್ಕೆ ಹೆದರುವರು, ಪೂರ್ವ ದಿಕ್ಕಿನವರು ಆತನ ಮಹಿಮೆಗೆ ಅಂಜುವರು; ಬಿರುಗಾಳಿಯಿಂದ ಹೊಡೆಯಲ್ಪಟ್ಟು ಇಕ್ಕಟ್ಟಿನಲ್ಲಿ ಹರಿಯುವ ತೊರೆಯ ಹಾಗೆ ಆತನು ರಭಸದಿಂದ ಬರುವನಷ್ಟೆ.
I bojaæe se imena Gospodnjega sa zapada, i slave njegove s istoka sunèanoga; jer æe neprijatelj navaliti kao rijeka, a duh æe Gospodnji podignuti zastavu suprot njemu.
20 ೨೦ “ಒಬ್ಬ ವಿಮೋಚಕನು ಚೀಯೋನಿಗೂ, ದ್ರೋಹವನ್ನು ಬಿಟ್ಟುಬಿಟ್ಟ ಯಾಕೋಬ್ಯರ ಬಳಿಗೂ ಬರುವನು”, ಯೆಹೋವನೇ ಇದನ್ನು ನುಡಿದಿದ್ದಾನೆ.
I doæi æe izbavitelj u Sion i k onima od Jakova koji se obraæaju od grijeha, veli Gospod.
21 ೨೧ ನಾನಂತೂ ಅವರೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು, ನೋಡಿರಿ; “ನಿಮ್ಮಲ್ಲಿ ಪ್ರವೇಶಿಸಿರುವ ನನ್ನ ಆತ್ಮವೂ, ನಿಮ್ಮ ಬಾಯಿಗೆ ನಾನು ಕೊಟ್ಟಿರುವ ಮಾತುಗಳೂ, ನಿಮ್ಮ ಬಾಯಿಂದಾಗಲಿ, ನಿಮ್ಮ ಸಂತತಿಯ ಬಾಯಿಂದಾಗಲಿ ಅಥವಾ ನಿಮ್ಮ ಸಂತತಿಯ ಸಂತಾನದ ಬಾಯಿಂದಾಗಲಿ ಇಂದಿನಿಂದ ಎಂದಿಗೂ ತೊಲಗುವುದಿಲ್ಲ” ಎಂದು ಯೆಹೋವನು ಹೇಳುತ್ತಾನೆ.
A ovo æe biti zavjet moj s njima, veli Gospod: duh moj, koji je u tebi, i rijeèi moje, koje metnuh u usta tvoja, neæe otiæi od usta tvojih ni od usta sjemena tvojega, ni od usta sjemena sjemena tvojega, veli Gospod, otsele i dovijeka.

< ಯೆಶಾಯನು 59 >