< ಯೆಶಾಯನು 60 >

1 ಏಳು, ಪ್ರಕಾಶಿಸು, ನಿನಗೆ ಬೆಳಕು ಬಂತು, ಯೆಹೋವನ ತೇಜಸ್ಸು ನಿನ್ನ ಮೇಲೆ ಉದಯಿಸಿದೆ.
Ustani, svijetli se, jer doðe svjetlost tvoja, i slava Gospodnja obasja te.
2 ಇಗೋ, ಕತ್ತಲು ಭೂಮಿಯನ್ನು ಆವರಿಸಿದೆ, ಕಾರ್ಗತ್ತಲು ಜನಾಂಗಗಳನ್ನು ಮುಚ್ಚಿದೆ; ನಿನ್ನ ಮೇಲಾದರೋ ಯೆಹೋವನು ಉದಯಿಸುವನು, ಆತನ ತೇಜಸ್ಸು ನಿನ್ನಲ್ಲಿ ಕಾಣಿಸುವುದು.
Jer, gle, mrak æe pokriti zemlju i tama narode; a tebe æe obasjati Gospod i slava njegova pokazaæe se nad tobom.
3 ಜನಾಂಗಗಳು ನಿನ್ನ ಬೆಳಕಿಗೆ ನೆರೆದು ಬರುವವು, ಅರಸರೂ ನಿನ್ನಲ್ಲಿನ ಉದಯಪ್ರಕಾಶಕ್ಕೆ ಸೇರುವರು.
I narodi æe doæi k vidjelu tvojemu i ka svjetlosti koja æe te obasjati.
4 ಕಣ್ಣೆತ್ತಿ ಸುತ್ತಲು ನೋಡು, ನಿನ್ನ ಮಕ್ಕಳೆಲ್ಲರೂ ಗುಂಪುಕೂಡಿ ನಿನ್ನ ಬಳಿಗೆ ಸೇರಿಬರುತ್ತಾರೆ; ಗಂಡುಮಕ್ಕಳು ದೂರದಿಂದ ಸಮೀಪಿಸುತ್ತಾರೆ, ಹೆಣ್ಣುಮಕ್ಕಳು ಕಂಕುಳಿನಲ್ಲಿ ಕುಳಿತು ಬರುತ್ತಾರೆ.
Podigni oèi svoje unaokolo, i vidi: svi se skupljaju i idu k tebi, sinovi æe tvoji iz daleka doæi i kæeri tvoje nosiæe se u naruèju.
5 ನೀನು ಅವರನ್ನು ನೋಡಿ ಸಂತೋಷ ಸಂಭ್ರಮ ಪಡುವೆ, ನಿನ್ನ ಹೃದಯವು ಹರ್ಷಿಸಿ ಉಲ್ಲಾಸಿಸುವುದು; ಏಕೆಂದರೆ ಸಮುದ್ರ ವ್ಯಾಪಾರದ ಸಮೃದ್ಧಿಯು ನಿನಗೆ ಅತಿಯಾದ ಲಾಭತರುವುದು. ಕಡೆಗೆ ತಿರುಗುವುದು, ಜನಾಂಗಗಳ ಐಶ್ವರ್ಯವು ನಿನಗೆ ದೊರೆಯುವುದು.
Tada æeš vidjeti, i obradovaæeš se, i srce æe ti se udiviti i raširiti, jer æe se k tebi okrenuti mnoštvo morsko i sila naroda doæi æe k tebi.
6 ಉಷ್ಟ್ರಸಮೂಹವೂ, ಮಿದ್ಯಾನಿನ ಮತ್ತು ಏಫದ ಪ್ರಾಯದ ಒಂಟೆಗಳೂ ನಿನ್ನಲ್ಲಿ ತುಂಬಿರುವವು; ಅವೆಲ್ಲವೂ ಬಂಗಾರವನ್ನೂ, ಧೂಪವನ್ನೂ ತೆಗೆದುಕೊಂಡು ಶೆಬದಿಂದ ಬಂದು ಯೆಹೋವನ ಸ್ತುತ್ಯಕೃತ್ಯಗಳನ್ನು ಸಾರುವರು.
Mnoštvo kamila prekriliæe te, dromedari iz Madijama i Efe; svi iz Save doæi æe, zlato i kad donijeæe, i slavu Gospodnju javljaæe.
7 ಕೇದಾರಿನ ಹಿಂಡುಗಳೆಲ್ಲಾ ನಿನ್ನಲ್ಲಿ ಕೂಡುವವು; ನೆಬಾಯೋತಿನ ಟಗರುಗಳು ನೀನು ಮಾಡುವ ಯಜ್ಞಕ್ಕೆ ಅನುಕೂಲಿಸುವವು. ಅವು ನನ್ನ ಯಜ್ಞವೇದಿಯ ಮೇಲೆ ಸಮರ್ಪಕವಾಗಿ ಒಯ್ಯಲ್ಪಡುವವು; ಮಹಿಮೆಯಿಂದ ಕೂಡಿದ ನನ್ನ ಆಲಯವನ್ನು ಘನಪಡಿಸುವೆನು.
Sva stada Kidarska skupiæe se k tebi, ovnovi Navajotski biæe ti na potrebu; prineseni na oltaru mom biæe ugodni, i dom slave svoje proslaviæu.
8 ಆಹಾ, ದ್ವೀಪನಿವಾಸಿಗಳೂ ನನ್ನನ್ನು ನಿರೀಕ್ಷಿಸುವವರಾಗಿದ್ದಾರೆ! ಮೇಘದೋಪಾದಿಯಲ್ಲಿ ಗೂಡುಗಳಿಗೆ ತ್ವರೆಪಡುವ ಪಾರಿವಾಳಗಳಂತೆ ಹಾರಿ ಬರುತ್ತಿರುವ ಇವರು ಯಾರು?
Ko su ono što lete kao oblaci i kao golubovi na prozore svoje?
9 ಯೆಹೋವನು ನಿನ್ನನ್ನು ವೈಭವಪಡಿಸಿರುವುದನ್ನು ಕೇಳಿ ತಾರ್ಷೀಷಿನ ಹಡಗುಗಳು, ನಿನ್ನ ದೇವರಾದ ಯೆಹೋವನ ನಾಮಮಹತ್ತಿನ ನಿಧಿಯೂ, ಇಸ್ರಾಯೇಲಿನ ಸದಮಲಸ್ವಾಮಿಯ ಸನ್ನಿಧಿಯ ಸ್ಥಾನಕ್ಕೆ ನಿನ್ನ ಮಕ್ಕಳನ್ನು ಅವರ ಬೆಳ್ಳಿ ಬಂಗಾರಗಳ ಸಮೇತ ದೂರದಿಂದ ತರುವುದರಲ್ಲಿ ಮುಂದಾಗುತ್ತಿವೆ.
Ostrva æe me èekati i prve laðe Tarsiske, da dovezu sinove tvoje iz daleka, i s njima srebro njihovo i zlato njihovo, imenu Gospoda Boga tvojega i sveca Izrailjeva, jer te proslavi.
10 ೧೦ ವಿದೇಶೀಯರು ನಿನ್ನ ಪೌಳಿಗೋಡೆಗಳನ್ನು ಪುನಃ ಕಟ್ಟುವರು, ಅವರ ಅರಸರು ನಿನ್ನನ್ನು ಆರಾಧಿಸುವರು; ನನ್ನ ಕೋಪದಿಂದ ನಿನ್ನನ್ನು ಹೊಡೆದು, ನನ್ನ ಕೃಪೆಯಿಂದ ನಿನ್ನನ್ನು ಕರುಣಿಸಿದ್ದೇನಷ್ಟೆ.
I tuðini æe sazidati zidove tvoje, i carevi njihovi služiæe ti; jer u gnjevu svom udarih te, a po milosti svojoj pomilovaæu te.
11 ೧೧ ಜನಾಂಗಗಳ ಐಶ್ವರ್ಯವನ್ನು ನಿನ್ನಲ್ಲಿಗೆ ತರುತ್ತಿರುವರು. ಅವುಗಳ ಅರಸರು ಮೆರವಣಿಗೆಯಾಗಿ ಬರುತ್ತಿರುವರು; ಇದರಿಂದ ನಿನ್ನ ಬಾಗಿಲುಗಳು ಹಗಲಿರುಳೂ ಮುಚ್ಚದೆ ಸದಾ ತೆರೆದಿರುವವು.
I tvoja æe vrata biti svagda otvorena, neæe se zatvoriti ni danju ni noæu, da ti se dovede sila naroda, i carevi njihovi da se dovedu.
12 ೧೨ ನಿನ್ನನ್ನು ಆರಾಧಿಸದ ಜನಾಂಗ ಮತ್ತು ರಾಜ್ಯಗಳು ನಾಶವಾಗುವವು; ಹೌದು, ಆ ಜನಾಂಗಗಳು ಹಾಳಾಗಿ ಹೋಗುವವು.
Jer narod i carstvo, koje ti ne bi služilo, poginuæe, taki æe se narodi sasvijem zatrti.
13 ೧೩ ನನ್ನ ಪವಿತ್ರಾಲಯವನ್ನು ಭೂಷಿಸುವುದಕ್ಕಾಗಿ ತುರಾಯಿ, ತಪಸಿ, ತಿಲಕ ಈ ವೃಕ್ಷರೂಪವಾದ ಲೆಬನೋನಿನ ಮಹಿಮೆಯು ನಿನಗಾಗುವುದು; ನನ್ನ ಪಾದಸನ್ನಿಧಿಯ ಮಂದಿರವನ್ನು ವೈಭವಪಡಿಸುವೆನು.
Slava Livanska tebi æe doæi, jela, brijest i šimšir, da ukrase mjesto svetinje moje da bih proslavio mjesto nogu svojih.
14 ೧೪ ನಿನ್ನನ್ನು ಕುಗ್ಗಿಸಿದವರ ಸಂತಾನದವರು ನಿನ್ನ ಬಳಿಗೆ ತಗ್ಗಿಬಗ್ಗಿ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರೂ ನಿನ್ನ ಕಾಲಕೆಳಗೆ ಅಡ್ಡಬಿದ್ದು ನೀನು ಯೆಹೋವನ ಪಟ್ಟಣ, ಇಸ್ರಾಯೇಲಿನ ಸದಮಲಸ್ವಾಮಿಯ ಚೀಯೋನ್ ಎಂದು ಕೊಂಡಾಡುವರು.
I sinovi onijeh koji su te muèili doæi æe k tebi klanjajuæi se, i svi koji te preziraše padaæe k stopalima nogu tvojih, i zvaæe te gradom Gospodnjim, Sionom sveca Izrailjeva.
15 ೧೫ ನಿವಾಸಿಗಳು ತ್ಯಜಿಸಿದ, ದ್ವೇಷಕ್ಕೀಡಾದ, ಯಾರೂ ಹಾದುಹೋಗದ ನಿನಗೆ ನಾನು, ನಿತ್ಯಶ್ರೇಷ್ಠತೆಯನ್ನು ದಯಪಾಲಿಸಿ ನಿನ್ನನ್ನು ತಲತಲಾಂತರದವರೆಗೆ ಉಲ್ಲಾಸಕರವಾಗುವಂತೆ ಮಾಡುವೆನು.
Što si bio ostavljen i mrzak tako da niko nije prolazio kroza te, mjesto toga æu ti uèiniti vjeènu slavu, i veselje od koljena do koljena.
16 ೧೬ ನೀನು ಜನಾಂಗಗಳ ಮೊಲೆಕೂಸಾಗುವಿ, ರಾಜರು ನಿನಗೆ ಮೊಲೆಯೂಡಿಸುವರು; ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು ಎಂದು ನೀನು ತಿಳಿದುಕೊಳ್ಳುವಿ.
Jer æeš mlijeko naroda sati, i sise carske dojiæeš, i poznaæeš da sam ja Gospod spasitelj tvoj i izbavitelj tvoj, silni Jakovljev.
17 ೧೭ ತಾಮ್ರಕ್ಕೆ ಬದಲಾಗಿ ಚಿನ್ನವನ್ನು, ಕಬ್ಬಿಣಕ್ಕೆ ಪ್ರತಿಯಾಗಿ ಬೆಳ್ಳಿಯನ್ನು, ಮರವಿದ್ದಲ್ಲಿ ತಾಮ್ರವನ್ನು, ಕಲ್ಲುಗಳ ಸ್ಥಾನದಲ್ಲಿ ಕಬ್ಬಿಣವನ್ನು ಒದಗಿಸುವೆನು; ಸಮಾಧಾನವನ್ನು ನಿನಗೆ ಅಧಿಪತಿಯನ್ನಾಗಿ, ಧರ್ಮವನ್ನು ನಿನಗೆ ಅಧಿಕಾರಿಯನ್ನಾಗಿ ನೇಮಿಸುವೆನು.
Mjesto mjedi donijeæu zlata, i mjesto gvožða donijeæu srebra, i mjedi mjesto drva, i gvožða mjesto kamenja, i postaviæu ti za upravitelje mir i za nastojnike pravdu.
18 ೧೮ ನಿನ್ನ ದೇಶದಲ್ಲಿ ಬಲಾತ್ಕಾರದ ಸುದ್ದಿಯೇ ಕಿವಿಗೆ ಬೀಳದು, ನಿನ್ನ ಪ್ರಾಂತ್ಯಗಳೊಳಗೆ ಭಂಗನಾಶನಗಳ ವಾರ್ತೆಯೇ ಕೇಳಿಬರುವುದಿಲ್ಲ; ಆಗ ದೇವರಕ್ಷಣೆಯು ನನ್ನ ಪೌಳಿಗೋಡೆಗಳು, ದೇವಸ್ತೋತ್ರವು ನನ್ನ ಬಾಗಿಲುಗಳು ಎಂದು ಅಂದುಕೊಳ್ಳುವಿ.
Neæe se više èuti nasilje u tvojoj zemlji ni pustošenje i potiranje na meðama tvojim; nego æeš zvati zidove svoje spasenjem i vrata svoja hvalom.
19 ೧೯ ಇನ್ನು ಮೇಲೆ ಹಗಲಿನಲ್ಲಿ ನಿನಗಿರುವ ಪ್ರಕಾಶವು ಸೂರ್ಯನದಲ್ಲ; ಚಂದ್ರನು ನಿನ್ನ ಬೆಳಕಿಗಾಗಿ ಎಂದಿಗೂ ಕಳೆಗುಂದುವುದಿಲ್ಲ; ಯೆಹೋವನೇ ನಿನಗೆ ನಿತ್ಯಪ್ರಕಾಶವು, ನಿನ್ನ ದೇವರೇ ನಿನಗೆ ತೇಜಸ್ಸು.
Neæe ti više biti sunce vidjelo danju, niti æe ti sjajni mjesec svijetliti; nego æe ti Gospod biti vidjelo vjeèno i Bog tvoj biæe ti slava.
20 ೨೦ ನಿನ್ನ ಸೂರ್ಯನು ಇನ್ನು ಮುಳುಗನು, ನಿನ್ನ ಚಂದ್ರನು ತೊಲಗನು; ಯೆಹೋವನೇ ನಿನಗೆ ನಿತ್ಯಪ್ರಕಾಶವಾಗಿರುವನು, ನೀನು ದುಃಖಿಸುವ ದಿನಗಳು ಕೊನೆಯಾಗುವುದು.
Neæe više zalaziti sunce tvoje, niti æe mjesec tvoj pomrèati; jer æe ti Gospod biti vidjelo vjeèno, i dani žalosti tvoje svršiæe se.
21 ೨೧ ನಿನ್ನ ಜನರೆಲ್ಲಾ ಸದ್ಧರ್ಮಿಗಳಾಗಿರುವರು; ನನ್ನ ಪ್ರಭಾವಕ್ಕೋಸ್ಕರ ನಾನು ನೆಟ್ಟ ಸಸಿಯಾಗಿಯೂ, ನನ್ನ ಕೈ ಸೃಷ್ಟಿಸಿದ ಪ್ರಜೆಯಾಗಿಯೂ ದೇಶವನ್ನು ಸದಾ ಅನುಭವಿಸುವರು.
I tvoj æe narod biti sav pravedan, naslijediæe zemlju navijek; mladica koju sam posadio, djelo ruku mojih biæe na moju slavu.
22 ೨೨ ಚಿಕ್ಕವನಿಂದ ಒಂದು ಕುಲವಾಗುವುದು, ಅಲ್ಪನಿಂದ ಬಲವಾದ ಜನಾಂಗವಾಗುವುದು. ಯೆಹೋವನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಲುಬೇಗನೆ ಉಂಟುಮಾಡುವೆನು.
Od maloga æe postati tisuæa i od nejakoga silan narod; ja Gospod brzo æu uèiniti to kad bude vrijeme.

< ಯೆಶಾಯನು 60 >